Author: admin

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲೂ ಪಿಎಸ್‌ ಐ ನೇಮಕಾತಿ ಪರೀಕ್ಷೆ ಹಗರಣ ನಡೆದಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಯುವ ಕಾಂಗ್ರೆಸ್ ಮುಖಂಡನನ್ನು ಬಂಧಿಸಲಾಗಿದೆ. ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶರತ್ ಅವರನ್ನು ಬಂಧಿಸಲಾಗಿದೆ. ಪಿಎಸ್‌ ಐ ಅಭ್ಯರ್ಥಿ ಪರ ಡೀಲ್ ಕುದುರಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಶರತ್ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಸರಗೂರು:  ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ  ಕೇಂದ್ರ ಸರ್ಕಾರ ನೀಡುವ ವಿಶಿಷ್ಟ ಗುರುತಿನ ಚೀಟಿ UDID Card ಆಸೆಸ್ ಮೆಂಟ್ ಕ್ಯಾಂಪ್ ಮೈಸೂರು  KR ಆಸ್ಪತ್ರೆ ವೈದ್ಯಾಧಿಕಾರಿ ರವರು ತಪಾಸಣೆ ಮಾಡಿ, ಒಟ್ಟು 87 ವಿಕಲಚೇತನರಲ್ಲಿ 75 ಜನ ವಿಕಲಚೇತನರಿಗೆ UDID Card ಆಸೆಸ್ ಮೆಂಟ್ ಮಾಡಿದರು. ಈ ಸಂದರ್ಭದಲ್ಲಿ ಸರಗೂರು ತಾಲೂಕು ಸಂಯೋಜಕರಾದ S.H.ದೇವರಾಜ್  ಎಲ್ಲಾ ರೀತಿಯ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಿದರು ತಮ್ಮ ಸ್ವಂತ ಖರ್ಚಿನಿಂದ ಬಂದ  ವೈದ್ಯಾಧಿಕಾರಿಗಳಿಗೆ ಚಹಾ ಹಾಗೂ ಉಪಹಾರ ವ್ಯವಸ್ಥೆ ಮಾಡಿದರು. ಇದೇ ವೇಳೆ ವಿಕಲಚೇತನರ ಸಮಸ್ಯೆಯನ್ನು ಆಲಿಸಿ  ಪರಿಹಾರ ಸೂಚಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹಾಜರಿದ್ದರು. ಸರಗೂರು ತಾಲೂಕು ಸಂಯೋಜಕರಾದ S.H. ದೇವರಾಜ್,  ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಬಸವರಾಜು, ಸ್ವಮೇಶ್, ಸಂತೋಷ,  ಮೋಹನ್ ಕುಮಾರ, ಕೆಂಡಗಣ, ರಂಜಿತ, ಮಹಾದೇವಮೂರ್ತಿ ಹಾಗೂ ಮೈಸೂರಿನ ವೈದ್ಯಾಧಿಕಾರಿ ಸರಗೂರು ಆಸ್ಪತ್ರೆ ಸಿಬ್ಬಂದಿ  ಹಾಜರಿದ್ದರು. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಗುಬ್ಬಿ:  ತುಮಕೂರು ಜಿಲ್ಲೆಯ ಪೆದ್ದನಹಳ್ಳಿಯಲ್ಲಿ ಎಸ್ ಸಿ ಹಾಗೂ ಎಸ್ ಟಿ ಯುವಕರ ಜೋಡಿ ಕೊಲೆಯನ್ನು ಖಂಡಿಸಿ, ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯಿಸಿ ಪಾವಗಡ ಪಟ್ಟಣದ ತಹಸೀಲ್ದಾರ್ ಕಚೇರಿ ಮುಂದೆ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನುದ್ದೇಶಿಸಿ ದಲಿತ ಮುಖಂಡ ಡಿ.ಜೆ.ಎಸ್. ನಾರಾಯಣಪ್ಪ  ಮಾತನಾಡಿ,  ಕೊಲೆಗಡುಕರನ್ನು ಕೂಡಲೇ ಸರ್ಕಾರ ಪೊಲೀಸ್ ಇಲಾಖೆ ಬಂಧಿಸಬೇಕು. ತನಿಖೆಯನ್ನು ಸಿಐಡಿಗೆ ನೀಡಬೇಕು ಹಾಗೂ ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ 25 ಲಕ್ಷ ರೂಪಾಯಿಗಳನ್ನು ಪರಿಹಾರ ನೀಡಿ. ಕುಟುಂಬದ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಮತ್ತು ಮಕ್ಕಳ ಉನ್ನತ ಶಿಕ್ಷಣ ನೀಡಲು ಸರ್ಕಾರ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. ದಲಿತ ಮುಖಂಡ ಕಡಲಕೆರೆ ಹನುಮಂತರಾಯಪ್ಪ ಮಾತನಾಡಿ, ಮೃತರ ಕುಟುಂಬಕ್ಕೆ 5 ಎಕರೆ ಜಮೀನು ನೀಡಬೇಕು. ಗಂಗಾ ಕಲ್ಯಾಣ ಯೋಜನೆಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಬೇಕು. ಕುಟುಂಬಕ್ಕೆ ವಸತಿ ಯೋಜನೆಯಲ್ಲಿ ಮನೆ…

Read More

ತುಮಕೂರು: ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಕರಿಶೆಟ್ಟಿಹಳ್ಳಿಯ ರಸ್ತೆಬದಿ ಮಂಗಳವಾರ ಬೆಳ್ಳಂಬೆಳಗ್ಗೆ ಪತ್ತೆಯಾದ ವ್ಯಕ್ತಿಯ ಮೃತದೇಹ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲವು ವಿಚಾರಗಳು ಬಯಲಾಗಿದೆ. ಐಯ್ಯಣ್ಣ ಎಂಬುವವರು ತನ್ನ ಪುತ್ರಿ ಸುಮಿತ್ರಾಳನ್ನು 6 ವರ್ಷದ ಹಿಂದೆ ಮೂಡ್ಲಯ್ಯಗೆ ಕೊಟ್ಟು ಮದುವೆ ಮಾಡಿದ್ದರು. ಪತ್ನಿ ಇದ್ದರೂ ಮೂಡ್ಲಯ್ಯಗೆ ಪರಸ್ತ್ರೀಯ ಚಟ ಹೊಂದಿದ್ದನು. ಈ ವಿಚಾರವಾಗಿ ಮೂಡ್ಲಯ್ಯಗೆ ಬುದ್ಧಿಮಾತು ಹೇಳಿದ್ದ ಮಾವ ಐಯ್ಯಣ್ಣ, ಮಗಳ ಜೀವನ ಬೀದಿ ಪಾಲು ಮಾಡಬೇಡ. ಪರಸ್ತ್ರೀ ಜತೆಗಿನ ಸಂಬಂಧವನ್ನು ನಿಲ್ಲಿಸುವಂತೆ ಬುದ್ದಿ ಹೇಳಿದ್ದಾರೆ. ಆದರೆ ಮೂಡ್ಲಯ್ಯ ಅವರ ಮಾತಿಗೆ ಬೆಲೆ ಕೊಡದೆ ತನ್ನ ಕೆಟ್ಟ ಚಾಳಿ ಮುಂದುವರಿಸಿದ್ದ ಇದರಿಂದ ಬೆಸತ್ತ ಅಪ್ಪ-ಮಗ ಇಬ್ಬರೂ ಮೂಡ್ಲಯ್ಯನ ಮುಗಿಸಲು ಸಂಚು ರೂಪಿಸಿದ್ದು, ಸೋಮವಾರ ತಡರಾತ್ರಿ ಬೈಕ್ ನಲ್ಲಿ ಬರುತ್ತಿದ್ದ ಮೂಡ್ಲಯ್ಯನನ್ನು ಕರಿಶೆಟ್ಟಿಹಳ್ಳಿ ಬಳಿ ಅಡ್ಡಗಟ್ಟಿದ ಮಾವ-ಬಾಮೈದುನ ಇಬ್ಬರೂ ಆತನ ಮರ್ಮಾಂಗಕ್ಕೆ ಒದ್ದು ಸಾಯಿಸಿದ್ದಾರೆ. ಬಳಿಕ ರಸ್ತೆಬದಿ ನಗ್ನ ಸ್ಥಿತಿಯಲ್ಲಿ ಮೃತದೇಹ ಎಸೆದು, ನಡುರಸ್ತೆಯಲ್ಲಿ ಬೈಕ್ ಬಿಸಾಡಿ ಪರಾರಿಯಾಗಿದ್ದರು. ಮಂಗಳವಾರ ಬೆಳಗ್ಗೆ ಮ್ರತದೇಹ ಮತ್ತು…

Read More

ಉತ್ತರಪ್ರದೇಶ: ಮದುವೆ ಆಮಂತ್ರಣ ಪತ್ರಿಕೆ ಹಂಚಲು ಹೋಗುತ್ತಿದ್ದ ವೇಳೆ 18 ವರ್ಷ ವಯಸ್ಸಿನ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಮಾರಾಟ ಮಾಡಿದ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಆರೋಪಿಗಳು ತನ್ನನ್ನು ರಾಜಕೀಯ ಪಕ್ಷದ ನಾಯಕರೊಬ್ಬರ ಬಳಿಗೆ ಕರೆದೊಯ್ದರು. ನಂತರ ಮಧ್ಯಪ್ರದೇಶದ ಪಕ್ಕದ ದಾತಿಯಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಬೇರೊಬ್ಬರೊಂದಿಗೆ ಇರುವಂತೆ ಒತ್ತಾಯಿಸಿದರು ಎಂದು ಯುವತಿ  ಹೇಳಿಕೆ ನೀಡಿರುವುದಾಗಿ  ಝಾನ್ಸಿ ಜಿಲ್ಲೆಯ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಎಪ್ರಿಲ್ 21 ರಂದು ನಡೆಯಲಿರುವ ತನ್ನ ಮದುವೆಯ ಕಾರ್ಡ್‌ಗಳನ್ನು ವಿತರಿಸಲು ಹೋದಾಗ ಗ್ರಾಮದ ಮೂವರು ಯುವಕರು ಎಪ್ರಿಲ್ 18 ರಂದು ತನ್ನನ್ನು ಅಪಹರಿಸಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಬೆಳಗಾವಿ: ಅಪೆಕ್ಸ್ ಬ್ಯಾಂಕ್ ನಿಂದ ಶಾಸಕ ರಮೇಶ್ ಜಾರಕಿಹೊಳಿ,  ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಬಂಡೆಪ್ಪ ಕಾಶಂಪುರ ಸಹಿತ ಹಲವರು ಸಾಲ ಪಡೆದಿದ್ದು, ಸಾಲ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,  ರಾಜ್ಯದ ಸುಮಾರು 24 ಜನ ಅಪೆಕ್ಸ್ ಬ್ಯಾಂಕಿನಿಂದ ಸುಮಾರು ಆರು ಸಾವಿರ ಕೋಟಿ ರೂ. ವರೆಗೆ ಸಾಲ ಪಡೆದಿದ್ದಾರೆ. ಸಕ್ಕರೆ ಕಾರ್ಖಾನೆ ಹೆಸರಿನಲ್ಲಿ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹಾಗೂ ಬಂಡೆಪ್ಪ ಕಾಶೆಂಪುರ್ ಸೇರಿದಂತೆ ಅನೇಕರು ಸಾಲ ಪಡೆದಿದ್ದಾರೆ. ಸಾಲ ಪಡೆದವರಿಗೆ ನೋಟಿಸ್ ನೀಡಲಾಗಿದೆ ಎಂದರು. ರಮೇಶ ಜಾರಕಿಹೊಳಿ ಒಡೆತನದ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆಯ ಸಾಲ ಬಾಕಿ ಉಳಿದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಾಲ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ನೀಡಲಾಗಿದೆ. ಸಾಲ ಕಟ್ಟದವರ ಆಸ್ತಿ ಜಪ್ತಿ ಹೇಗೆ ಮಾಡಿಕೊಳ್ಳುತ್ತದೆಯೋ ಹಾಗೆಯೇ ಅಪೆಕ್ಸ್ ಬ್ಯಾಂಕ್ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂಧು ಇದೇ ವೇಳೆ…

Read More

ಬೆಂಗಳೂರು: ನಾಪತ್ತೆಯಾಗಿದ್ದ ಪಿಯುಸಿ ವಿದ್ಯಾರ್ಥಿಯೋರ್ವ ಎರಡು ದಿನದ ಬಳಿಕ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿಯಲ್ಲಿ ನಡೆದಿದೆ. 19 ವರ್ಷ ವಯಸ್ಸಿನ ಸೋಮನಾಥ್ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು,   ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಸೋಮನಾಥ್ 5ನೇ ತಾರೀಕಿನಂದು ಸ್ನೇಹಿತರು ನನ್ನ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅವರಿಗಿಂತ ಮೊದಲು ನಾನೇ ಸಾಯ್ತೀನಿ ಎಂದು ಡೆತ್ ನೋಟ್ ಬರೆದಿಟ್ಟು, ಮನೆಯಿಂದ ನಾಪತ್ತೆಯಾಗಿದ್ದ ಎನ್ನಲಾಗಿದೆ. ಈ ಬಗ್ಗೆ ಆತನ ಪೋಷಕರು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು. ಇದಾದ ಬಳಿಕ ಮಾರತ ಹಳ್ಳಿ ಬಳಿ ಎಮ್ ಸ್ಯಾಂಡ್ ಅನ್ ಲೋಡ್ ಮಾಡುವ ಲಾರಿಯಲ್ಲಿ ಸೋಮನಾಥ್ ನ ಮೃತದೇಹ ಪತ್ತೆಯಾಗಿತ್ತು. ತಮಿಳುನಾಡಿನಿಂದ ಮರಳು ತುಂಬಿಕೊಂಡು ಬಂದಿದ್ದ ಟಿಪ್ಪರ್ ಲಾರಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಅಪರಿಚಿತ ಶವ ಯಾವುದೆಂದು ತಿಳಿಯಲು ತಮಿಳುನಾಡು ಕ್ವಾರಿ ಮತ್ತು ಕೆ.ಆರ್ .ಪುರಂ ಸ್ಟಾಂಡ್ ನಲ್ಲೆ ಪೊಲೀಸರು ವಿಚಾರಣೆ ಮಾಡಿದ್ದಾರೆ.ಈ  ವೇಳೆ ಹೊಸಕೋಟೆ ನಿವಾಸಿ ಎನ್ನುವುದು ತಿಳಿದು ಬಂದಿದೆ.…

Read More

ರಾಜಸ್ಥಾನ: ಮದುವೆ ಸಮಾರಂಭದಲ್ಲಿ ಕರೆಂಟ್ ಹೋದ ಕಾರಣ ವಧುಗಳಿಬ್ಬರು ಅದಲು-ಬದಲು ಆದ ಘಟನೆ ರಾಜಸ್ಥಾನದ ಉಜ್ಜೈನಿಯಲ್ಲಿ ನಡೆದಿದೆ. ರಾಜಸ್ಥಾನದ ಅಸ್ಲಾನಾ ಗ್ರಾಮದಲ್ಲಿ‌ ಮದುವೆ ಸಮಾರಂಭದಲ್ಲಿ ವಿದ್ಯುತ್ ಕೈಕೊಟ್ಟಿದೆ. ಪೂಜೆ ಪ್ರಾರಂಭಿಸಿ ಸಪ್ತಪದಿ ತುಳಿಯುವ ವೇಳೆ ಎರಡು ಜೋಡಿಗಳಿದ್ದ ಕಾರಣ ವಧುಗಳು ಅದಲು-ಬದಲಾಗಿದ್ದಾರೆ. ನಿಕಿತಾ‌ ಎಂಬ ವಧು ತಮ್ಮ ಭಾವಿ ಪತಿ ಗಣೇಶ್​ ಬದಲಿಗೆ ಭೋಲಾ ಕೈಹಿಡಿದಿದ್ದು, ಗಣೇಶ್​ನೊಂದಿಗೆ ಕರಿಷ್ಮಾ ಕೈಹಿಡಿದು ಕುಳಿತುಕೊಂಡಿದ್ದಾರೆ. ಮದುವೆಯ ಕೆಲ‌ಕಾರ್ಯ ನಡೆದ ಬಳಿಕ ಜೋಡಿ ಅದಲು- ಬದಲು ಆಗಿರುವುದು ತಿಳಿದು ಬಂದಿದೆ. ಬಳಿಕ ತುರಾತುರಿಯಲ್ಲಿ ಜೋಡಿಯನ್ನು‌ ಸರಿಪಡಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತುಮಕೂರು: ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಕರಿಶೆಟ್ಟಿಹಳ್ಳಿ ಬಳಿ ತಡರಾತ್ರಿ ನಡೆದಿದೆ. ಇಲ್ಲಿನ ಚೌಕೇನಹಳ್ಳಿ ಗ್ರಾಮದ ನಿವಾಸಿ 40 ವರ್ಷ ವಯಸ್ಸಿನ ಮೂಡ್ಲಯ್ಯ ಹತ್ಯೆಯಾಗಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ತಡ ರಾತ್ರಿ ತೋಟದಿಂದ ಮನೆಯ ಕಡೆಗೆ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆನ್ನಲಾಗಿದೆ. ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹತ್ಯೆಗೆ ಕಾರಣಗಳೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಹತ್ಯೆಯ ಬಳಿಕ ರಸ್ತೆ ಬದಿಯ ಕಾಲುವೆಗೆ ಮೃತದೇಹವನ್ನು  ಎಸೆದು ಹೋಗಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಗುಬ್ಬಿ ಸಿಪಿಐ ನಧಾಫ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗುಬ್ಬಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ವ್ಯಕ್ತವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ನಾಯಕನಹಟ್ಟಿ: ಸಂವಿಧಾನ ಹಾಗೂ ಸಂಸ್ಕೃತಿ ಬದಲಾವಣೆಯ ನಡೆಗಳಿಂದ ದೇಶಕ್ಕೆ ಹೆಚ್ಚಿನ ಅಪಾಯವಿದೆ ಎಂದು ಮಾಜಿ ಸಚಿವ ಹೆಚ್. ಆಂಜನೇಯ ಹೇಳಿದರು. ಪಟ್ಟಣದ ತೇರುಬೀದಿಯಲ್ಲಿ ದಲಿತ ಸಂಘರ್ಷ ಸಮಿತಿ ಸೋಮವಾರ ಹಮ್ಮಿಕೊಂಡಿದ್ದ ಅಂಬೇಡ್ಕರ್ ಮತ್ತು ಬಾಬು ಜಗಜೀವನ್‍ರಾಂ ಜಯಂತ್ಯುತ್ಸವವನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಎಲ್ಲೆಡೆ ಸಂವಿಧಾನ ಬದಲಾವಣೆ ಮಾಡುತ್ತೇವೆ. ಹೊಸ ಸಂಸ್ಕೃತಿಯನ್ನು ಸೃಷ್ಟಿಸುತ್ತೇವೆ ಎಂಬ ಭ್ರಮೆಯಲ್ಲಿ ಕೆಲವು ರಾಜಕೀಯ ಪಕ್ಷಗಳಿವೆ. ಇದರಿಂದಾಗಿ ದೇಶದಲ್ಲಿ ಆತಂಕದ ವಾತಾವರಣ ಇದೆ ಎಂದರು. ಅಂಬೇಡ್ಕರ್ ಜಯಂತಿ ಇದೀಗ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಮುದಾಯಕ್ಕೆ ಸೇರಿದ 18 ಶಾಸಕರಿದ್ದರು. ಇದೀಗ 6ಕ್ಕೆ ಇಳಿದಿದೆ. ಸಮುದಾಯದ ಶಾಸಕರ ಸಂಖ್ಯೆ ಇಳಿಮುಖಕ್ಕೆ ಒಗ್ಗಟ್ಟಿನ ಕೊರತೆ ಕಾರಣವಾಗಿದೆ ಎಂದು ಅವರು ಇದೇ ವೇಳೆ ಬೇಸರ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರವಿದ್ದಾಗ ಎಸ್ ಸಿಪಿ, ಟಿಎಎಸ್ ಪಿ ಯೋಜನೆ ಜಾರಿಗೊಳಿಸಿದೆ. ಈಗ ಈ ಹಣ ಅನ್ಯ ಕಾರ್ಯಗಳಿಗೆ ಬಳಕೆಯಾಗುತ್ತಿದೆ. ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಲಂಬಾಣಿ, ಭೋವಿ ಸೇರಿ ಇತರೆ ಜಾತಿಗಳು ಮೀಸಲಾತಿಯನ್ನು…

Read More