Author: admin

ಮಾಯಸಂದ್ರ: ಕಳೆದ ಕೆಲವು ದಿನಗಳಿಂದ ಖಾಲಿ ಇದ್ದ ಮಾಯಸಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ “ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ” ( SDMC )ಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸರ್ವ ಸದಸ್ಯರು ಸರ್ವಾನುಮತದಿಂದ ಅವಿರೋಧವಾಗಿ ಕರಿಬಸವಪ್ಪನವರನ್ನು ನೂತನ ಅಧ್ಯಕ್ಷರಾಗಿ ಆಯ್ಕೆಮಾಡಿದ್ದಾರೆ. ಉಪಾಧ್ಯಕ್ಷರಾಗಿ ಕಲಾವತಿಯವರು ಆಯ್ಕೆಯಾಗಿದ್ದಾರೆ. ಈ ವೇಳೆ ಮುಖ್ಯೋಪಾಧ್ಯಾಯರಾದ ಶಿವಲಿಂಗೇಗೌಡರು ಮತ್ತಿತರರು ಉಪಸ್ಥಿತರಿದ್ದರು. ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹಿರಿಯೂರು: ಭಾರತದಾದ್ಯಂತ ನಿರ್ಗತಿಕರನ್ನು ಸಂಕಷ್ಟಕ್ಕೆ ಸಿಲುಕುತ್ತಿರುವ ಮಾರಕ ಕೊರೊನಾ ರೋಗದ ಸಂಕಷ್ಟ ಪರಿಸ್ಥಿತಿಯ ಎರಡೂ ಅಲೆಗಳ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ್ದು, ಕೊರೊನಾ 3ನೇ ಅಲೆಯು ಮಕ್ಕಳ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂಬುದು ತಜ್ಞರ ಅಭಿಪ್ರಾಯವಾಗಿದ್ದು ಈ ಬಾರಿ ತಾಲ್ಲೂಕಿನ ಮಕ್ಕಳ ಕಡೆ ಹೆಚ್ಚು ಗಮನ ಕೊಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗಭೂಷಣ್ ಹೇಳಿದರು. ಹಿರಿಯೂರು ನಗರದ ರೋಟರಿ ಸಭಾಭವನದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ರೋಟರಿ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ 48 ಅಂಗನವಾಡಿ ಕೇಂದ್ರಗಳ ಕಾರ್ಯಕರ್ತರಿಗೆ ಹಮ್ಮಿಕೊಳ್ಳಲಾಗಿದ್ದ ಪ್ರಥಮ ಚಿಕಿತ್ಸೆ ಕಿಟ್ ಗಳ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರೋಟರಿ, ರೆಡ್ ಕ್ರಾಸ್ ಸಂಸ್ಥೆಗಳು ಸಮನ್ವಯ ಸಾಧಿಸಿ, ಜನತೆಗೆ ಎಲ್ಲಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ಪ್ರಶಂಸನೀಯ ಕಾರ್ಯವಾಗಿದ್ದು, ರೆಡ್ ಕ್ರಾಸ್ ಸಂಸ್ಥೆಗೆ ತಾಲ್ಲೂಕು ಆಡಳಿತದಿಂದ ನಿವೇಶನಕ್ಕೆ ಶಿಫಾರಸ್ಸು ಮಾಡಲಾಗಿದ್ದು, ನಮ್ಮ ಇಲಾಖೆಯಿಂದ ಎಲ್ಲಾ ತರಹದ ಸಹಕಾರ ನೀಡಲಾಗುವುದು ಎಂಬುದಾಗಿ ಹೇಳಿದರು. ತಾಲ್ಲೂಕು…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ವಾಣಿವಿಲಾಸಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಆರೋಗ್ಯ ಸುರಕ್ಷಿತೆಗಾಗಿ ಕೋವಿಡ್ ಲಸಿಕೆಯನ್ನು ಪಡೆಯುವ ಜೊತೆಗೆ ಕೊರೊನಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ವಾಣಿವಿಲಾಸಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಚಂದ್ರಮೌಳಿ ಹೇಳಿದರು. ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ  ವಾಣಿವಿಲಾಸಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮ ಹಾಗೂ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಯ ವೈದ್ಯಾಧಿಕಾರಿ ಸಿಬ್ಬಂದಿವರ್ಗದ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ವಾಣಿವಿಲಾಸಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾಕ್ಟರ್ ಚಂದ್ರಮೌಳಿ, ಸುರಕ್ಷಾ ಅಧಿಕಾರಿಗಳಾದ ಮೋಹನ್, ಶೀಲ, ನಿರೀಕ್ಷಣ ಅಧಿಕಾರಿ ಚಂದ್ರಶೇಖರ್, ವಿವೇಕ್, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಇತರರು ಉಪಸ್ಥಿತರಿದ್ದರು. ವರದಿ: ಮುರುಳಿಧರನ್ ಆರ್., ಹಿರಿಯೂರು.

Read More

ಮಧುಗಿರಿ : ಜಿಲ್ಲೆಯ ಎಲ್ಲಾ ಹಿರಿಯ ಸಹಕಾರಿಗಳ ಸಹಕಾರದಿಂದ ವಿಧಾನಪರಿಷತ್ ಚುನಾವಣೆಯಲ್ಲಿ ನನ್ನ ಗೆಲುವು ಸಾಧ್ಯವಾಯಿತು ಎಂದು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ತಿಳಿಸಿದರು. ಪಟ್ಟಣದ ತುಮುಲ್ ಉಪ ಕೇಂದ್ರದ ಕ್ಷೀರಭವನದಲ್ಲಿ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನ ಪರಿಷತ್ ಗೆ ಆಯ್ಕೆಯಾದ ಆರ್.ರಾಜೇಂದ್ರ ರವರಿಗೆ ಅಭಿನಂದನಾ ಕಾರ್ಯಕ್ರಮ, ಡೈರಿ-ಕ್ಯಾಲೆಂಡರ್ ಬಿಡುಗಡೆ ಹಾಗೂ ಫಲಾನುಭವಿಗಳಿಗೆ ಪರಿಹಾರ ಚೆಕ್ ವಿತರಣೆಯ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರಿಗಳ ಮೂಲಕ ಯುವ ಸಹಕಾರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿರುವುದು ಖುಷಿ ತಂದಿದೆ ಎಂದರು. ನಮ್ಮ ತಾಲೂಕು ಉಪವಿಭಾಗವಾಗಿದ್ದು, ತುಮುಲ್ ವತಿಯಿಂದ ವಿದ್ಯಾರ್ಥಿನಿಯರ ಹಾಸ್ಟೆಲ್ ನ್ನು ಮಧುಗಿರಿಯಲ್ಲಿ ನಿರ್ಮಿಸಿ ವಿದ್ಯಾಭ್ಯಾಸಕ್ಕೆ ಅನೂಕೂಲ ಮಾಡಿಕೊಡಬೇಕಾಗಿದೆ ಎಂದ ಅವರು, ತಾಲ್ಲೂಕಿನ ಸಮಗ್ರ ಅಭಿವೃದ್ದಿಗೆ ಬದ್ಧವಾಗಿದ್ದೇನೆ. ಜಿಲ್ಲಾ ಬ್ಯಾಂಕ್ ನ ವತಿಯಿಂದ ಹಸು ಸಾಕಾಣಿಕೆಗಾಗಿ 32 ಜನರಿಗೆ 1ಕೋಟಿ 75 ಲಕ್ಷ ರೂ. ಗಳ ಸಾಲ ಮಂಜೂರು ಮಾಡಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಡಿಸಿಸಿ ಬ್ಯಾಂಕ್ ನಲ್ಲಿ ಸಾಲ ಪಡೆದು ಮೃತಪಟ್ಟವರಿಗೆ ನೀಡಲಾಗುತ್ತಿದ್ದ…

Read More

ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು  ನಗರದ ತಾಲ್ಲೂಕು ತಹಶೀಲ್ದಾರರ ಕಚೇರಿಯಲ್ಲಿ ಜ. 11 ರಂದು ಬೆಳಗ್ಗೆ ಶಾಸಕರ ಉಪಸ್ಥಿತಿಯಲ್ಲಿ 73ನೇ ಗಣರಾಜ್ಯೋತ್ಸವ ಆಚರಿಸುವ ಕುರಿತಂತೆ ಪೂರ್ವಭಾವಿ ಸಭೆಯನ್ನು ಕರೆಯಲಾಗಿದ್ದು, ತಾಲ್ಲೂಕು ಮಟ್ಟದ ಅಧಿಕಾರಿಗಳು ತಪ್ಪದೇ ಅಧೀನ ಸಿಬ್ಬಂದಿಯನ್ನು ನಿಯೋಜಿಸದೇ ತಾವುಗಳು ಖುದ್ದು, ಈ ಸಭೆಗೆ ಆಗಮಿಸಿ, ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಬೇಕು ಎಂಬುದಾಗಿ ತಾಲ್ಲೂಕು ತಹಶೀಲ್ದಾರರಾದ ಶಿವಕುಮಾರ್ ಸೂಚಿಸಿದ್ದಾರೆ. ರಾಷ್ಟ್ರೀಯ ಹಬ್ಬಗಳ ಕಾರ್ಯಕ್ರಮಗಳಲ್ಲಿ ಹಾಗೂ ಪೂರ್ವಭಾವಿ ಸಭೆಗಳಿಗೆ ಹಲವಾರು ಅಧಿಕಾರಿಗಳು ಭಾಗವಹಿಸದಿರುವುದು ಕಂಡು ಬಂದಿದ್ದು, ಜನಪ್ರತಿನಿಧಿಗಳು, ಮುಖಂಡರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಈ ಅಧಿಕಾರಿಗಳ ಗೈರು ಹಾಜರಿ ಬಗ್ಗೆ ತುಂಬಾ ಆಕ್ರೋಶ ವ್ಯಕ್ತಪಡಿಸುತ್ತಿರುವುದರಿಂದ ಇನ್ನು ಮುಂದೆ ಇಂತಹ ಪ್ರಸಂಗಗಳಿಗೆ ಅವಕಾಶ ನೀಡದೇ ಅಧಿಕಾರಿಗಳೇ ಖುದ್ದಾಗಿ ಪೂರ್ವಭಾವಿ ಸಭೆಯಲ್ಲಿ ಬಾಗವಹಿಸಬೇಕು ಎಂಬುದಾಗಿ ತಾಲ್ಲೂಕು ತಹಶೀಲ್ದಾರರಾದ ಶಿವಕುಮಾರ್ ತಿಳಿಸಿದ್ದಾರೆ. ಇದಕ್ಕೆ ತಪ್ಪಿದಲ್ಲಿ ಗೈರು ಹಾಜರಾಗುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮಕ್ಕೆ ಅನಿವಾರ್ಯವಾಗಿ ಮಾನ್ಯ ಜಿಲ್ಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು. ಹಾಗೆಯೇ ಈ ಪೂರ್ವಭಾವಿ…

Read More

ಚಿತ್ರದುರ್ಗ:ಐತಿಹಾಸಿಕ ಮೇಕೆದಾಟು ಪಾದಯಾತ್ರೆಯ ಎರಡನೇಯ ದಿನದ ಪಾದಯಾತ್ರೆಯಲ್ಲಿ ಕಾಂಗ್ರೆಸ್ ವಕ್ತರಾರು ಹಾಗೂ ಚಿತ್ರದುರ್ಗ ಜಿಲ್ಲೆಯ ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ ಭಾಗವಹಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಚಳ್ಳಕೆರೆ ತಾಲೂಕಿನ ಶಾಸಕರಾದ  ಟಿ. ರಘುಮೂರ್ತಿ,  ವೆಂಕಟರಮಣಪ್ಪ, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡರು. ವರದಿ: ಮುರುಳಿಧರನ್ ಆರ್.,  ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹಾವೇರಿ: ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ (ಚಂಪಾ) ಅವರು ನಿಧನರಾಗಿದ್ದಾರೆ. ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನವರಾದ ಚಂಪಾ ಅವರು,  ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ. ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಾಗಿ ನಿಂತವರು. ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮದ ಕಲಿಕೆಗೆ  ಬಹಳಷ್ಟು ಒತ್ತು ನೀಡಿದರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಅವರು ಪ್ರಾಧ್ಯಾಪಕರಾಗಿ ಚೇರ್ಮನ್ ಆಗಿ ಸೇವೆ ಸಲ್ಲಿಸಿದ್ದಾರೆ. ಸಂಕ್ರಮಣ ಎಂಬ ಸಾಹಿತ್ಯ ಪತ್ರಿಕೆಯ ಸಂಪಾದಕತ್ವದ ಸಾರಥ್ಯವನ್ನು ಅವರು ವಹಿಸಿದ್ದರು. ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.  ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ವರದಿ:  ಮುರುಳಿಧರನ್ ಆರ್.,  ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಚಿತ್ರದುರ್ಗ: ಹೊಂಡಗುಂಡಿಯ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್ ಆಗಿ ದಂಪತಿ ರಸ್ತೆಗೆಸೆಯಲ್ಪಟ್ಟ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮೈಸೂರು ಪ್ರಧಾನ ರಸ್ತೆಯಲ್ಲಿ ನಡೆದಿದ್ದು, ಅದೃಷ್ಟವಶಾತ್ ದಂಪತಿ ಅಪಾಯದಿಂದ ಪಾರಾಗಿದ್ದಾರೆ. ಮೈಸೂರು ಹಾಗೂಬಳ್ಳಾರಿ , ಬಾಂಬೆಗೆಹೋಗುವ ಮುಖ್ಯರಸ್ತೆ ಇದಾಗಿದ್ದು, ಈ ರಸ್ತೆ ದುರಸ್ತಿಗೊಂಡು ಸುಮಾರು ವರ್ಷಗಳೇ ಕಳೆದಿದ್ದು, ಹೊಂಡಹೊಂಡಿಗಳಿಂದ ತುಂಬಿದೆ. ಈ ಬಗ್ಗೆ ಸಾಕಷ್ಟು ಬಾರಿ ಸಾರ್ವಜನಿಕರು ದೂರು ನೀಡಿದರೂ ಸಂಬಂಧ ಪಟ್ಟ ಇಲಾಖೆಯಅಧಿಕಾರಿಗಳು ನಮಗೂಇದಕ್ಕೂ ಯಾವುದೇ ತರಹದ ಸಂಬಂಧವೇ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ ಎಂದು ಹಿರಿಯೂರು ತಾಲ್ಲೂಕಿನ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರಸ್ತೆಯು ಬಹಳ ಕಿರಿದಾಗಿದ್ದು, ಈ ರಸ್ತೆಯ ಮುಖಾಂತರವೇದಿನನಿತ್ಯ ಓಡಾಡುವ ವಾಹನಗಳ ಸಂಖ್ಯೆಯು ಸಹ ಹೆಚ್ಚಾಗುತ್ತಿದ್ದು ಹಾಗೂಶಾಲಾ- ಕಾಲೇಜುಗಳಿಗೆ ಹೋಗುವಂತಹವಿದ್ಯಾರ್ಥಿ/ ವಿದ್ಯಾರ್ಥಿನಿಯರೂ ಸಹ ವಾಹನಗಳ ಓಡಾಡುವಿಕೆಯಿಂದ ರಸ್ತೆಗಳನ್ನು ದಾಟಲು ತುಂಬಾ ಹರಸಾಹಸ ಪಡುವಂತಹ ಪರಸ್ಥಿತಿಗಳು, ಉಂಟಾಗಿದೆ,. ಒಂದಿನಲ್ಲ ಎರಡು ದಿನ ಅಲ್ಲಾ ಪ್ರತಿದಿನ ಬೆಳಿಗ್ಗೆಯಿಂದ ರಾತ್ರಿಯ ವರೆಗೂ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಹ ತೀವ್ರ ಹೆಚ್ಚುತ್ತಿದ್ದು ಈ ಟ್ರಾಫಿಕ್…

Read More

ತಿಪಟೂರು: ನಗರದ ಹಾಸನ ವೃತ್ತದ ನಂದಿನಿ ಹಾಲಿನ ಮಳಿಗೆಯ ಆವರಣದಲ್ಲಿ ತಾಲೂಕು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಕನ್ನಡ ನಾಡಿನ ಕವಿಗಳು, ನಾಟಕಕಾರರು, ಪ್ರಗತಿಪರ ಹೋರಾಟಗಾರರಾದ ಚಂದ್ರಶೇಖರ್ ಪಾಟೀಲ್ ( ಚಂಪಾ ) ರವರಿಗೆ ನುಡಿನಮನ ಮತ್ತು ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಗರಸಭಾ ಸದಸ್ಯ ಮಹೇಶ್,  ಜಯಕರ್ನಾಟಕ ಜನಪರ ವೇದಿಕೆ ನಗರ ಗೌರವಾಧ್ಯಕ್ಷ ಡಾ.ಭಾಸ್ಕರ್ ಮತ್ತು ತಾಲ್ಲೂಕು ಅಧ್ಯಕ್ಷ ಬಿ.ಟಿ.ಕುಮಾರ್ ಮಾತನಾಡಿದರು. ಕಸಾಪ ಕಾರ್ಯದರ್ಶಿ ಮಂಜುನಾಥ್, ಹಿರಿಯ ಮುಖಂಡ ರಾಜಣ್ಣ, ವಿಶ್ವನಾಥ್ ನಿವೃತ್ತ ನೌಕರ ಜಯದೇವಪ್ಪ ಮತ್ತು ತುರುವೇಕೆರೆ ಪತ್ರಕರ್ತ ಪಾರ್ಥಸಾರಥಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು: ಬಹುದಿನಗಳಿಂದ ಅಭಿವೃದ್ಧಿ ಕಾಣದೆ ಹಾಗೆಯೇ ಉಳಿದಿದ್ದ ಸುರಂಗ ಮಾರ್ಗ,  ನಗರದ ಉಪ್ಪಾರಹಳ್ಳಿ ಗೇಟ್ ರೈಲ್ವೇ ಅಂಡರ್ ಪಾಸ್ ಇದೀಗ ಉದ್ಘಾಟನೆಗೊಂಡಿತು. ಶಾಸಕ ಜ್ಯೋತಿ ಗಣೇಶ್ ಅವರು ಉಪ್ಪಾರಹಳ್ಳಿ ಗೇಟ್ ರೈಲ್ವೇ ಅಂಡರ್ ಪಾಸ್ ಉದ್ಘಾಟನೆ ನೆರವೇರಿಸಿದರು.  ಮೇಯರ್ ಬಿ.ಜಿ.ಕೃಷ್ಣಪ್ಪ ಉಪಸ್ಥಿತರಿದ್ದರು. ಪಾಲಿಕೆ ಸದಸ್ಯರಾದ ಗಿರಿಜಾ ಧನಿಯಾಕುಮಾರ್ ರವರ ಅವಿರತ ಶ್ರಮದ ಫಲವಾಗಿ ಅಂಡರ್ ಪಾಸ್ ಸಾರ್ವಜನಿಕ ಸೇವೆ ಮುಕ್ತವಾಗಿದೆ. ಈ ಅಂಡರ್ ಪಾಸ್ ನಿಂದ  ಎಸ್.ಎಸ್.ಪುರಂ, ಉಪ್ಪಾರಹಳ್ಳಿ, ವಿಜಯನಗರ ಶಿವಮೂಕಾಂಬಿಕಾ ನಗರ,  ಮೊದಲಾದ ಬಡಾವಣೆಗಳ ನಾಗರಿಕರಿಗೆ ಅನುಕೂಲವಾಗಲಿದೆ. ವರದಿ: ರಾಜೇಶ್ ರಂಗನಾಥ್, ವಿಶೇಷ ಪ್ರತಿನಿಧಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More