Author: admin

ತುರುವೇಕೆರೆ: ನಲಿ ಕಲಿ ಎಂಬ ನುಡಿಯನ್ನು ಪ್ರತಿಯೊಂದು ಶಾಲೆಗಳ ಮೇಲೂ ಬರೆದಿರುವುದನ್ನು ನಾವೆಲ್ಲರೂ ನೋಡಿರುತ್ತೇವೆ. ವಿಷಯ ಏನಪ್ಪ ಅಂದರೆ,  ಇಂದಿನ ಈ ವ್ಯವಸ್ಥೆಯಲ್ಲಿ ಕಲಿಯಲು ಸರಿಯಾದ ಕಟ್ಟಡಗಳಿಲ್ಲ ಮತ್ತು ನಲಿಯಲು ಇರುವ ಆಟದ ಮೈದಾನವನ್ನು ಉಳಿಸಿಕೊಂಡು ಸುಸಜ್ಜಿತವಾಗಿ ಇಟ್ಟುಕೊಳ್ಳುವ ಬಗ್ಗೆ ಯಾವೊಬ್ಬ ಜನಪ್ರತಿನಿದಿಯೂ ತಲೆಕೆಡಿಸಿಕೊಂಡಿಲ್ಲ. ತುರುವೇಕೆರೆ ತಾಲ್ಲೂಕಿನ ಮಾಯಸಂದ್ರದ ಸರ್ಕಾರಿ ಶಾಲಾ ಮೈದಾನವು ಸರಿಯಾದ ವ್ಯವಸ್ಥೆ ಇಲ್ಲದೇ ಮಕ್ಕಳ ಆಟೋಟಗಳಿಗೆ ತಡೆಯಾಗಿದೆ. ಕಾಲಕಾಲಕ್ಕೆ ಸರಿಯಾದ ನಿರ್ವಹಣೆ ಇಲ್ಲದೇ ಮೈದಾನದ ತುಂಬಾ ಗಿಡಗಂಟೆಗಳು ಬೆಳೆದುಕೊಂಡ ಕಾರಣ ಮೈದಾನವು ಆಡಲು ಯೋಗ್ಯವಲ್ಲದಂತಾಗಿದೆ. ಕಳೆದ ವರ್ಷ ಜನವರಿಯಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಗೆ ಆಗಮಿಸಿದ್ದ ಇಲ್ಲಿನ ಸ್ಥಳೀಯ ಶಾಸಕರಾದ ಮಸಾಲ ಜಯರಾಮ್’ರವರು ಈ ಕ್ರೀಡಾಂಗಣಕ್ಕೆ ಇನ್ನು 6 ತಿಂಗಳಿನಲ್ಲಿ ಈ ಮೈದಾನಕ್ಕೆ ಫೆಡ್ ಲೈಟ್ ವ್ಯವಸ್ಥೆ ಮಾಡಿಸಿಕೊಡುವ ಆಶ್ವಾಸನೆ ನೀಡಿದ್ದರು. ಆದರೆ,  ಒಂದು ವರ್ಷ ಕಳೆದರೂ ಆ ಮಾತು ಕೇವಲ ಆಶ್ವಾಸನೆಯಾಗಿಯೇ ಉಳಿದುಕೊಂಡಿದೆ. ಇನ್ನಾದರೂ ಜನಪ್ರತಿನಿದಿಗಳು ಎಚ್ಚೆತ್ತುಕೊಂಡು ಈ ಕ್ರೀಡಾಂಗಣವನ್ನು ದುರಸ್ತಿಗೊಳಿಸಿ ಮಕ್ಕಳಿಗೆ ಆಡಲು ಅನುವು ಮಾಡಿಕೊಡಬೇಕಾಗಿದೆ…

Read More

ಬೆಂಗಳೂರು: ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಪಾದಯಾತ್ರೆ ನಡೆಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ 30 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆ್ಯಕ್ಟ್ (ವಿಪತ್ತು ನಿರ್ವಹಣಾ ಕಾಯ್ದೆ) 2005ರ ಐಪಿಸಿ ಸೆಕ್ಷನ್ 141, 143, 290, 336ರ ಅಡಿ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಾಗಲಕೋಟೆ: ರಾಜ್ಯದಲ್ಲಿ ಕೊರೊನಾ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಈ ವೇಳೆ ಕಾಂಗ್ರೆಸ್‌ ನವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಬಾಗಲಕೋಟೆಯಲ್ಲಿ ಸಚಿವ ಗೋವಿಂದ ಕಾರಜೋಳ ಗರಂ ಆಗಿದ್ದಾರೆ. ಬಾಗಲಕೋಟೆಯಲ್ಲಿ ಈ ಸಂಬಂಧ ಹೇಳಿಕೆ ನೀಡಿದ ಸಚಿವ ಗೋವಿಂದ ಕಾರಜೋಳ, ಜನರ ಹಿತದೃಷ್ಟಿಯಿಂದ ನಡೆಯುತ್ತಿರುವ ಪಾದಯಾತ್ರೆ ಅಲ್ಲ. ಪಾದಯಾತ್ರೆಯಲ್ಲಿ ದೈಹಿಕ ಅಂತರವನ್ನು ಕಾಯ್ದುಕೊಳ್ಳಲಿ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಎಲ್ಲರ ಹಕ್ಕು. ಅದನ್ನು ಮೊಟಕುಗೊಳಿಸಬಾರದೆಂದು ತೊಂದರೆ ಕೊಟ್ಟಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಕೊವಿಡ್ 19 ನಡುವೆಯೇ ಸರ್ಕಾರದ ತೀವ್ರ ವಿರೋಧದ ನಡುವೆಯೇ ಮೇಕೆದಾಟು ಪಾದಯಾತ್ರೆ ಆರಂಭಗೊಂಡಿದೆ. ನಿನ್ನೆ ಸಾಗರೋಪಾದಿಯಲ್ಲಿ ಜನರು ಆಗಮಿಸಿ ಮೇಕೆದಾಟು ಪಾದಯಾತ್ರೆಗೆ ಬೆಂಬಲ ನೀಡಿದ್ದಾರೆ. ಮೇಕೆದಾಟು ಸಂದರ್ಭದಲ್ಲಿಯೇ ಇದೀಗ ಡಿ.ಕೆ.ಶಿವಕುಮಾರ್ ಅವರಿಗೆ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಅಧಿಕಾರಿಗಳು ಹೇಳಿದ್ದು, ಅಧಿಕಾರಿಗಳಿಗೆ ಡಿ.ಕೆ.ಶಿವಕುಮಾರ್ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ. ಎಡಿಸಿ ಜವರೇಗೌಡ, ಡಿಹೆಚ್ ​​ಒ ನಿರಂಜನ್ ​​, ಡಿ.ಕೆ.ಶಿವಕುಮಾರ್ ಗೆ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಸಲಹೆ ನೀಡಿದ್ದು, ಆದರೆ, ಡಿಕೆಶಿ ಕ್ಲಾಸ್​​ ತೆಗೆದುಕೊಂಡಿದ್ದಾರೆ. “ಐ ಆ್ಯಮ್​ ಫಿಟ್​ ಆ್ಯಂಡ್​ ಫೈನ್”​ ನನಗೇ ಸಲಹೆ ಕೊಡಲು ಬಂದಿದ್ದೀರಾ?  ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ನಾನೊಬ್ಬ ಜನಪ್ರತಿನಿಧಿ ನನಗೇ ಬ್ಲ್ಯಾಕ್​​ಮೇಲ್​ ಮಾಡ್ತಿದ್ದೀರಾ? ನೀವು ನಿಮ್ಮ ಆರೋಗ್ಯ ಇಲಾಖೆ ಸಚಿವರಿಗೆ ಹೋಗಿ ಹೇಳಿ. ಬಚ್ಚಾಗಳ ಹತ್ತಿರ ಆಟ ಆಡಲು ಹೋಗಿ ಹೇಳಿ ಅಂತ ಡಿಕೆಶಿ ಹೇಳಿದ್ದಾರೆ. ನನಗೆ ಏನಾಗಿದೆ ಎಂದು ಟೆಸ್ಟ್​ ಮಾಡಲು ಬಂದಿದ್ದೀರಾ. ಅಧಿಕಾರಿಗಳಿಗೆ ನಿಮ್ಮ ಹುದ್ದೆ ಯಾವುದು ಎಂದು ಪ್ರಶ್ನಿಸಿದ ಅವರು,…

Read More

ತುಮಕೂರು: ಕನ್ನಡ ಸಾಹಿತ್ಯ ಪರಿಷತ್ತಿಗೆ ಬಂಡಾಯ ಸಾಹಿತ್ಯ ಎಂದು ಪರಿಚಯವಾದ ರಂಗಾರೆಡ್ಡಿ ಕೋಡಿರಾಂಪುರ ಅವರ ಹೆಸರನ್ನು ನಾಮಕರಣ ಮಾಡಬೇಕೆಂದು ತುಮಕೂರು ಡಿಸಿಸಿ ಬ್ಯಾಂಕ್ ನಿರ್ದಶಕ ಬಿ ನಾಗೇಶ್ ಬಾಬು ಮತ್ತು ಪುಲಮ ಘಟ್ಟದ ಕರುನಾಡ ಬೆಳಕು ಫೌಂಡೇಶನ್ ಒತ್ತಾಯಿಸಿದೆ. ಹೆಸರಿನಲ್ಲಿ ಸ್ಮಾರಕ ಸ್ಮಾರಕ ನಿರ್ಮಿಸಬೇಕು ಅದೇ ರೀತಿ ಕೈಮರ ದೊಡ್ಡೇರಿ ರಂಟವಳಲು ರಸ್ತೆಗೆ ರಂಗಾರೆಡ್ಡಿ ಕೋಡಿರಾಂಪುರ ಹೆಸರನ್ನು ನಾಮಕರಣ ಮಾಡಬೇಕೆಂದು ಎಂದು ಒತ್ತಾಯಿಸಿದೆ. ಈ ಸಂದರ್ಭದಲ್ಲಿ ಪುನಾ ಭರತ್ ತೆಗ್ಗಿನಮನೆ ರಂಗನಾಥ ಬಾಬು ಕವಿತಾ ಗೌಡ ಗುಟ್ಟೇ ರವಿ ಮತ್ತಿತರರು ಹಾಜರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪಾವಗಡ : ಮಕರ ಸಂಕ್ರಾಂತಿ ಅಂಗವಾಗಿ ಹೆಲ್ಪ್ ಸೊಸೈಟಿ ವತಿಯಿಂದ ಇಂದು ಆರ್.ಎಂ.ಸಿ. ಯಾರ್ಡ್ ಆವರಣದಲ್ಲಿ ಪಟ್ಟಣದ ಗುಟ್ಟಹಳ್ಳಿ ಬಡ ಕುಟುಂಬಗಳಿಗೆ ದಿನಸಿ ಪದಾರ್ಥಗಳ ಕಿಟ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಕೊವಿಡ್ ಹಿನ್ನೆಲೆಯಲ್ಲಿ ಮಕರ ಸಂಕ್ರಾಂತಿಯಂದು ಎಳ್ಳು ಬೆಲ್ಲದ ಜೊತೆಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಲು ಬಡ ಜನತೆಗೆ ಕಷ್ಟಸಾಧ್ಯವಾಗುವುದರಿಂದ ಹೆಲ್ಪ್ ಸೊಸೈಟಿ ವತಿಯಿಂದ ನಮ್ಮ ಸಂಸ್ಥೆ ಕೈಲಾದಷ್ಟು ಮಟ್ಟಿಗೆ ಬಡ ಕುಟುಂಬಗಳಿಗೆ ಸಂಕ್ರಾಂತಿ ಹಬ್ಬವನ್ನು ಆಚರಿಸಲು ದಿನಸಿ ಪದಾರ್ಥಗಳ ಕಿಟ್ ಗಳನ್ನು ವಿತರಿಸುತ್ತಿದ್ದೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವೀರಮ್ಮನಹಳ್ಳಿ ಲೋಕೇಶ್, ಬೇಕರಿ ನಾಗರಾಜ, ಗೋವಿಂದ್, ಗೌತಮ್,ಆದಿಕೇಶವ, ಹೆಲ್ಪ್ ಸೊಸೈಟಿ ಸಕ್ರಿಯ ಪದಾಧಿಕಾರಿಯಾದ ಸಾಯಿ ಹಾಜರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಫಾತಿಮಾ ಶೇಖ್ (ಜನನ 9 ಜನವರಿ 1831) ಒಬ್ಬ ಭಾರತೀಯ ಶಿಕ್ಷಣತಜ್ಞ ಮತ್ತು ಸಮಾಜ ಸುಧಾರಕರಾಗಿದ್ದರು. ಅವರು ಸಮಾಜ ಸುಧಾರಕರಾದ ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆಯವರ ಸಹೋದ್ಯೋಗಿಯಾಗಿದ್ದರು. ಫಾತಿಮಾ ಶೇಖ್ ಮಿಯಾನ್ ಉಸ್ಮಾನ್ ಶೇಖ್ ಅವರ ಸಹೋದರಿ, ಅವರ ಮನೆಯಲ್ಲಿ ಜ್ಯೋತಿಬಾ ಮತ್ತು ಸಾವಿತ್ರಿಬಾಯಿ ಫುಲೆ ವಾಸವಾಗಿದ್ದರು. ಆಧುನಿಕ ಭಾರತದ ಮೊದಲ ಮುಸ್ಲಿಂ ಮಹಿಳಾ ಶಿಕ್ಷಕರಲ್ಲಿ ಒಬ್ಬರಾದ ಅವರು ಫುಲೆಸ್ ಶಾಲೆಯಲ್ಲಿ ದಲಿತ ಮಕ್ಕಳಿಗೆ ಶಿಕ್ಷಣ ನೀಡಲು ಪ್ರಾರಂಭಿಸಿದರು. ಜ್ಯೋತಿಬಾ ಮತ್ತು ಸಾವಿತ್ರಿಬಾಯಿ ಫುಲೆ ಅವರು ಫಾತಿಮಾ ಶೇಖ್ ಅವರೊಂದಿಗೆ ದೀನದಲಿತ ಸಮುದಾಯಗಳಲ್ಲಿ ಶಿಕ್ಷಣವನ್ನು ಹರಡುವ ಜವಾಬ್ದಾರಿಯನ್ನು ವಹಿಸಿಕೊಂಡರು. ಶೇಖ್ ಸಾವಿತ್ರಿಬಾಯಿ ಫುಲೆಯನ್ನು ಭೇಟಿಯಾದಾಗ ಇಬ್ಬರೂ ಅಮೇರಿಕನ್ ಮಿಷನರಿ ಸಿಂಥಿಯಾ ಫರಾರ್ ನಡೆಸುತ್ತಿದ್ದ ಶಿಕ್ಷಕ ತರಬೇತಿ ಸಂಸ್ಥೆಗೆ ದಾಖಲಾದರು. ಅವರು ಫುಲೆಗಳು ಸ್ಥಾಪಿಸಲು ಹೋದ ಎಲ್ಲಾ ಐದು ಶಾಲೆಗಳಲ್ಲಿ ಕಲಿಸಿದರು ಮತ್ತು ಅವರು ಎಲ್ಲಾ ಧರ್ಮ ಮತ್ತು ಜಾತಿಗಳ ಮಕ್ಕಳಿಗೆ ಕಲಿಸಿದರು. ಶೇಖ್ 1851 ರಲ್ಲಿ ಬಾಂಬೆಯಲ್ಲಿ ಎರಡು ಶಾಲೆಗಳ…

Read More

ತುಮಕೂರು:  ಜಿಲ್ಲೆಯಲ್ಲಿ ಕೊವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಭಾನುವಾರ ಜಿಲ್ಲೆಯಲ್ಲಿ 190 ಜನರಿಗೆ ಕೊವಿಡ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಸದ್ಯ 441 ಸಕ್ರಿಯ ಕೊವಿಡ್ ಪ್ರಕರಣಗಳಿದ್ದು, ತುಮಕೂರು ತಾಲೂಕಿನಲ್ಲಿ ಅತ್ಯಧಿಕ ಪ್ರಕರಣ ದಾಖಲಾಗಿದ್ದು, ಇಲ್ಲಿ 103 ಪ್ರಕರಣ ದಾಖಲಾಗಿದೆ. ಉಳಿದಂತೆ ಚಿಕ್ಕನಾಯಕನಹಳ್ಳಿ 6, ಕೊರಟಗೆರೆ 34 , ಕುಣಿಗಲ್ 7 ,  ಮಧುಗಿರಿ 8,  ಪಾವಗಡ 10, ಶಿರಾ  3, ತಿಪಟೂರು 14, ತುರುವೇಕೆರೆ 4 ಕೊವಿಡ್ ಪ್ರಕರಣಗಳು ದಾಖಲಾಗಿವೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಮನಗರ: ಕನಕಪುರ ತಾಲ್ಲೂಕಿನ ಸಂಗಮದಲ್ಲಿ ಭಾನುವಾರ ಬೆಳಿಗ್ಗೆ ಆರಂಭಗೊಂಡ ಮೇಕೆದಾಟು ಪಾದಯಾತ್ರೆಗೆ ಜನಸಾಗರವೇ ಹರಿದು ಬಂದಿದ್ದು, ಬೆಳಿಗ್ಗೆ 9: 30ರ ವೇಳೆಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಹಸಿರು ನಿಶಾನೆ ತೋರಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ನ ಘಟಾನುಘಟಿ ನಾಯಕರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಕೋವಿಡ್‌ ಕರ್ಫ್ಯೂ ಹಿನ್ನೆಲೆಯಲ್ಲಿ ಪಾದಯಾತ್ರೆಗೆ ಜಿಲ್ಲಾಡಳಿತ ಹಾಗೂ ಪೊಲೀಸರು ತಡೆ ಒಡ್ಡಬಹುದು ಎನ್ನಲಾಗಿತ್ತು. ಆದರೆ ಸದ್ಯ ಅಂತಹ ಯಾವ ಘಟನೆಗಳೂ ನಡೆದಿಲ್ಲ. ಕಾಂಗ್ರೆಸ್ ನೇತೃತ್ವದ ಪಾದಯಾತ್ರೆ ಸುಗಮವಾಗಿ ನಡೆದಿದ್ದು, ಈಗಾಗಲೇ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಸಂಗಮದತ್ತ ಬಂದಿದ್ದಾರೆ. ಕನಕಪುರ-ಮೇಕೆದಾಟು ರಸ್ತೆ ತುಂಬೆಲ್ಲ ವಾಹನಗಳೇ ತುಂಬಿಕೊಂಡಿದ್ದು, ಸಂಚಾರ ದಟ್ಟಣೆ ಉಂಟಾಗಿದೆ. ಪಾದಯಾತ್ರೆಗೆ ಬರುವವರಿಗೆ ಮಾಸ್ಕ್‌, ಸ್ಯಾನಿಟೈಸರ್, ಟೀ ಶರ್ಟ್‌ಗಳನ್ನು ವಿತರಿಸಲಾಗುತ್ತಿದೆ. ಊಟೋಪಚಾರದ ಜೊತೆಗೆ ಆಯೋಜಕರು ಕೋವಿಡ್ ನಿಯಮಗಳನ್ನು ಪಾಲನೆ ಮಾಡುವಂತೆ ಮನವಿ ಮಾಡಿದ್ದಾರೆ. ಇನ್ನೂ ಪಾದಯಾತ್ರೆಗೆ ಮುನ್ನ ಕೆಪಿಸಿಸಿ ಡಿ.ಕೆ. ಶಿವಕುಮಾರ್‌ ಕಾವೇರಿ…

Read More

ಪಾವಗಡ: ರಾಷ್ಟ್ರೀಯ ಸ್ವಯಂಸೇವಕ ಸಂಘ(RSS) ಪಾವಗಡ ತಾಲ್ಲೂಕು ವತಿಯಿಂದ  ಭಾನುವಾರ ವದನಕಲ್ ನ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ, ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಮತ್ತು ದೇವಸ್ಥಾನಗಳ ಆವರಣ ಸ್ವಚ್ಛಗೊಳಿಸಲಾಯಿತು. ದೇವಸ್ಥಾನಗಳ ಆವರಣ ಹಾಗೂ ಅರಳಿಕಟ್ಟೆ ಮತ್ತು ಬೇವಿನಮರ ಕಟ್ಟೆಗಳ ಸ್ವಚ್ಚತಾ ಕಾರ್ಯ ಮಾಡುವ ಮೂಲಕ ‘ಸೇವಾ ದಿನ’ವನ್ನು ಸಂಘವು ಆಚರಿಸಿತು. ಕಾರ್ಯಕ್ರಮದಲ್ಲಿ ಸ್ವಯಂಸೇವಕರಾದ ತಾಲ್ಲೂಕು ಕಾರ್ಯವಾಹಕ ಸಾಸಲಕುಂಟೆ ನಾಗೇಂದ್ರಪ್ರತಾಪ್, ತಾಲ್ಲೂಕು ಸಂಪರ್ಕ ಪ್ರಮುಖ್ ಆರ್ಲಹಳ್ಳಿ ಗೋಪಾಲಕೃಷ್ಣ ಡಿ., ನಿಡಗಲ್ ಹೋಬಳಿ ಪ್ರಮುಖ್ ಮಲ್ಲಮ್ಮನಹಳ್ಳಿ ದಿನೇಶ್, ಕಲಿಕಾ ಕೇಂದ್ರ ಪ್ರಮುಖ್ ಕ್ಯಾತಗಾನಹಳ್ಳಿ ರಾಮಚಂದ್ರ, ಮಲ್ಲಮ್ಮನಹಳ್ಳಿ ಶಾಖಾ ಮುಖ್ಯಶಿಕ್ಷಕ್ ಲಿಖೀತ್ ಕುಮಾರ್, ವದನಕಲ್ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ವದನಕಲ್  ಲೋಕೇಶ್ ರವರು ಸ್ವಚ್ಚತಾ ಭಾಗವಹಿಸಿದ್ದರು. ವರದಿ: ನಂದೀಶ್ ನಾಯ್ಕ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More