Author: admin

ಬೆಂಗಳೂರು: ಮತ್ತೊಮ್ಮೆ ದೇಶಕ್ಕೆ ಮಹಾಮಾರಿಯ ಕಂಟವೆದುರಾಗಿದೆ.. ಕೋವಿಡ್ 3 ನೇ ಅಲೆ ಜೊತೆಗೆ ಒಮಿಕ್ರಾನ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗ್ತಲೇ ಇದೆ.. ಹೀಗಿರೋವಾಗ್ಲೇ ಮತ್ತೆ ಲಾಕ್ ಡೌನ್ ಮಾಡಲಾಗುತ್ತದೆ ಎನ್ನಲಾಗ್ತಿದೆ.. ಜೊತೆಗೆ ನೈಟ್ ಕರ್ಫ್ಯೂ , ವೀಕೆಂಡ್ ಕರ್ಫ್ಯೂಗಳು ಸಹ ಜಾರಿಯಾಗ್ತಿರೋದು ಗೊತ್ತೇ ಇದೆ.. ಇದೀಗ ನಿರೀಕ್ಷೆ ಮಾಡಿದ್ದಂತೆಯೇ ಥಿಯೇಟರ್ ಗಳಲ್ಲಿ ಶೇ.50  ಸೀಟಿಂಗ್ ಆದೇಶ ಹೊರಡಿಸಲಾಗಿದೆ.. ಈಗಾಗಲೇ RRR ನಂತಹ ದೊಡ್ಡ ದೊಡ್ಡ ಸಿನಿಮಾಗಳು ರಿಲೀಸ್ ಡೇಟ್ ಗಳನ್ನ ಮುಂದೂಡಿಕೆ ಮಾಡಿವೆ. ಈ ನಡುವೆ ಕೆಲ ಸಿನಿಮಾಗಳು RRR ಹಿಂದೆ ಸರಿದ ಖುಷಿಯಲ್ಲಿ ರಿಲೀಸ್ ಗೆ ರೆಡಿಯಾಗಿರೋವಾಗಲೇ   ಸಿನಿಮಾಮಂದಿರಗಳಲ್ಲಿ ಶೇ.50  ಸೀಟಿಂಗ್ ವಿಧಿಸಲಾಗಿದೆ. ಅಷ್ಟೇ ಅಲ್ಲ ಶನಿವಾರ, ಭಾನುವಾರ ಥಿಯೇಟರ್ ಗಳು ಸಂಪೂರ್ಣವಾಗಿ ಬಂದ್  ಆಗಿರಲಿವೆ. ಇದ್ರಿಂದಾಗಿ ಸಿನಿಮಾರಂಗಕ್ಕೆ ಮತ್ತೆ ಆಘಾತ ಎದುರಾಗಿದೆ.   ಇದ್ರಿಂದಾಗಿ ಜನವರಿ 14 ಕ್ಕೆ ರಿಲೀಸ್ ಆಗಬೇಕಿದ್ದ ರಾಧೆ ಶ್ಯಾಮ್ ನಂತಹ ಸಿನಿಮಾಗಳು ಕೂಡ ಪೋಸ್ಟ್ ಪೋನ್ ಮಾಡಲಾಗಿದೆ. ಇನ್ನೂ ಫೆಬ್ರವರಿಯಲ್ಲಿ ರಿಲೀಸ್ ಆಗಬೇಕಿರುವ ಕಿಚ್ಚ…

Read More

ಚಿತ್ರದುರ್ಗ:  ಜಿಲ್ಲೆಯಹಿರಿಯೂರು ತಾಲ್ಲೂಕಿನ ಹಿರಿಯೂರು ನಗರದಲ್ಲಿನ  ನಗರಸಭೆ ಜಾಗಗಳನ್ನು ಗುರುತಿಸಿ, ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಿರುವಂತಹ  ಅನೇಕ ಉತ್ತಮ ಕೆಲಸ ಕೈಗೊಳ್ಳಲಾಗಿದ್ದು, ಈ ಬಗ್ಗೆ ಮೊನ್ನೆ ಚಿತ್ರದುರ್ಗದಲ್ಲಿ ನಡೆದ ಮೀಟಿಂಗ್ ನಲ್ಲಿ ಜಿಲ್ಲಾಧಿಕಾರಿಗಳು, ಹಿರಿಯೂರು ನಗರಸಭೆ ಉತ್ತಮ ಕೆಲಸ-ಕಾರ್ಯಗಳನ್ನು ಮಾಡುತ್ತಿದೆ, ಎಂಬುದಾಗಿ ಸರ್ಟಿಫಿಕೇಟ್ ಸಹ ನೀಡಿದ್ದಾರೆ ಆದರೆ ಕ್ಷೇತ್ರದ ಶಾಸಕರು ನಗರಸಭೆ ಆಡಳಿತ ಮಂಡಳಿ ಮೇಲೆ ಭ್ರಷ್ಟಾಚಾರದ ಆರೋಪ  ಮಾಡಿರುವುದು ನಿಜಕ್ಕೂ ಸತ್ಯಕ್ಕೆ ದೂರವಾದ ಮಾತು ಎಂಬುದಾಗಿ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಶಂಷುನ್ನೀಸಾ ಹೇಳಿದರು. ಹಿರಿಯೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ  ನಗರಸಭೆ ವತಿಯಿಂದ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಂಷುನ್ನೀಸಾ, ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರು ಮಾಧ್ಯಮಗಳಲ್ಲಿ ಮಾಡಿರುವ ಭ್ರಷ್ಟಾಚಾರದ  ಆರೋಪಗಳ ಕುರಿತಂತೆ ಸ್ಪಷ್ಟೀಕರಣ ನೀಡಿದರು. ನಗರಸಭೆ ಉಪಾಧ್ಯಕ್ಷರಾದ ಬಿ.ಎನ್.ಪ್ರಕಾಶ್ ಮಾತನಾಡಿ, ನಗರಸಭೆ ವತಿಯಿಂದ ಸ್ಯಾನಿಟೈಸರ್ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಶಾಸಕರ ಆರೋಪಕ್ಕೆ ಉತ್ತರಿಸಿ, ನಾವು ನಗರಸಭೆಗೆ ಬರುವುದಕ್ಕಿಂತ ಮುಂಚಿತವಾಗಿ ಅಂದಿನ ಜಿಲ್ಲಾಧಿಕಾರಿಗಳೇ ಈ ಟೆಂಡರ್ ಕರೆದಿದ್ದು, ಅವರ ಕಾಲದಲ್ಲಿಯೇ ಅದರ…

Read More

ತುಮಕೂರು:  ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಹಾಗೂ ಸೇವೆ ವಿಲೀನಗೊಳಿಸುವ ‌ಸಲುವಾಗಿ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಶಾಸಕ ಡಿ.ಸಿ. ಗೌರಿಶಂಕರ್ ಭಾಗಿಯಾದರು. ಈ ವೇಳೆ ಮಾತನಾಡಿದ ಶಾಸಕರು, ದೇಶದಲ್ಲಿ ಮನುಷ್ಯನಿಗೆ ಗಾಳಿ, ನೀರು, ಆಹಾರ ಎಷ್ಟು ಮುಖ್ಯವೋ ಅಷ್ಟೇ ಮುಖ್ಯವಾದ ವಿಷಯ ಎಂದರೆ ಅದುವೇ ಶಿಕ್ಷಣ.    ಅಂತಹ ಶಿಕ್ಷಣ ವ್ಯವಸ್ಥೆಯನ್ನು ನಾಶ ಮಾಡಲು ಕರ್ನಾಟಕ ಸರ್ಕಾರ  ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಿಕ್ಷಕರನ್ನು ಬೀದಿಗೆ ಬರುವಂತೆ ಮಾಡಿದ ಸರ್ಕಾರಕ್ಕೆ ನಾಚಿಕೆಯಾಗಬೇಕು . ಶಿಕ್ಷಣ ಶಿಕ್ಷಣ ಎಂದು ಅಬ್ಬರಿಸುವ  ಸರ್ಕಾರ ಶಿಕ್ಷಕರನ್ನೆ ಕಡೆಗಣಿಸಿ  ಶಿಕ್ಷಣ ವ್ಯವಸ್ಥೆಯನ್ನು  ಹಾಳು ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಶಾಸಕ ಡಿ.ಸಿ.ಗೌರಿಶಂಕರ್ ವಾಗ್ದಾಳಿ ನಡೆಸಿದರು. ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ  ಜೆಡಿಎಸ್ ಪಕ್ಷದ ವತಿಯಿಂದ ನಿರಂತರವಾಗಿ ನಮ್ಮ ಬೆಂಬಲವಿದೆ. ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಮುಂದಾಗಬೇಕಿದೆ  ಎಂದು ಅವರು ಇದೇ ವೇಳೆ ಸರ್ಕಾರವನ್ನು ಒತ್ತಾಯಿಸಿದರು. ಪ್ರಾದೇಶಿಕ…

Read More

ತುಮಕೂರು: ಸುರೇಶ್ ಗೌಡ ರಾಜೀನಾಮೆ ನೀಡಿದ ನಂತರ ಖಾಲಿಯಿದ್ದ ಸ್ಥಾನಕ್ಕೆ ತಿಗಳ ಸಮುದಾಯದ ಲಕ್ಷ್ಮೀಶ್, ಕುರುಬ ಸಮುದಾಯದ ಬಿ.ಕೆ.ಮಂಜುನಾಥ್ ಅವರನ್ನು  ಜಿಲ್ಲಾಧ್ಯಕ್ಷರಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇಮಕ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಒಂದು ಜಿಲ್ಲೆಗೆ ಇಬ್ಬರು ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಇದು ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರಲ್ಲಿ ಹಲವು ಗೊಂದಲಗಳಿಗೆ ಕಾರಣವಾಗಿದೆ. ಲಕ್ಷ್ಮೀಶ್ ಅವರಿಗೆ 7 ತಾಲೂಕುಗಳು: ತುಮಕೂರು ನಗರ, ಗ್ರಾಮಾಂತರ, ಕುಣಿಗಲ್, ತುರುವೇಕೆರೆ, ತಿಪಟೂರು, ಚಿಕ್ಕನಾಯಕನಹಳ್ಳಿ, ಗುಬ್ಬಿ ತಾಲೂಕಿನ ಜವಾಬ್ದಾರಿ ವಹಿಸಲಾಗಿದೆ. ಬಿ ಕೆ ಮಂಜುನಾಥ್ ರವರಿಗೆ ಮಧುಗಿರಿ, ಕೊರಟಗೆರೆ, ಶಿರಾ, ಪಾವಗಡ 4 ತಾಲೂಕಿನ ಉಸ್ತುವಾರಿಯನ್ನು ನೀಡಲಾಗಿದೆ. ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿರುವ ಲಕ್ಷ್ಮೀಶ್ ಅವರು ಅಧ್ಯಕ್ಷ ಸ್ಥಾನದ ಮೇಲೆ ಬಹಳ ದಿನಗಳಿಂದ ಕಣ್ಣಿಟ್ಟಿದ್ದರು. ಶಿರಾ ಭಾಗದಲ್ಲಿ ಬಿಜೆಪಿಯನ್ನು ಸಂಘಟಿಸುತ್ತಿರುವ ಮಂಜುನಾಥ್ ಅವರಿಗೆ ಬಯಸದೆ ಬಂದ ಭಾಗ್ಯ  ಎಂಬಂತೆ ಅಧ್ಯಕ್ಷ ಹುದ್ದೆ ಒಲಿದು ಬಂದಿದೆ. ಮಧುಗಿರಿ ಜಿಲ್ಲೆ ಯಾವಾಗ ಆಯ್ತು? ಒಂದು ಪಕ್ಷಕ್ಕೆ ಒಂದು ಜಿಲ್ಲೆಗೆ…

Read More

ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಡಿ.ಸಿ.ಗೌರಿಶಂಕರ್ ಅವರು ಇಂದು ಹೆಬ್ಬೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಗಂಗೋನಹಳ್ಳಿ ಪಂಚಾಯಿತಿಯ ಕೆಂಬಳಲು ಗ್ರಾಮದಲ್ಲಿ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಇದೇ ವೇಳೆ ಸಾರ್ವಜನಿಕರ ಅನೇಕ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಿದರು. ಈ ವೇಳೆ ಮಾತನಾಡಿದ ಅವರು,  ರಾಜ್ಯದಲ್ಲಿ ಹೆಚ್ಚುತ್ತಿರುವ ಒಮಿಕ್ರಾನ್ ವೈರಸ್ ಬಗ್ಗೆ ಎಚ್ಚರದಿಂದಿರಲು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಹೆಬ್ಬೂರು ಜಿಲ್ಲಾ ಪಂಚಾಯತಿ ಜೆಡಿಎಸ್ ಮುಖಂಡರಾದ ಸೀರಾಕ್ ರವೀಶ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾದ ರಾಮಚಂದ್ರಪ್ಪ, ಕೋಡಿಮುದ್ದನಹಳ್ಳಿ ಪ್ರಕಾಶ್, ಪಾಂಡುರಂಗ ಹಾಗೂ ಅನೇಕ ಜೆಡಿಎಸ್ ಕಾರ್ಯಕರ್ತರುಗಳು ಹಾಜರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು:  ಕೊರೊನಾ ರೂಪಾಂತರ ತಳಿ ಓಮಿಕ್ರಾನ್ ಅತಿ ವೇಗವಾಗಿ ಹರಡುತ್ತಿರುವುದು ಆತಂಕಕಾರಿಯಾಗಿದ್ದು, ಜನವರಿ ಕೊನೆಯ ಅಥವಾ ಫೆಬ್ರವರಿ ಮೂರನೇ ಅಲೆ ಅಪ್ಪಳಿಸುವ ಬಗ್ಗೆ ಈಗಾಗಲೇ ಕಾನ್ಪುರದ ಐಐಟಿ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನಗರದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಇಕ್ಬಾಲ್ ಅಹಮದ್ ಮನವಿ ಮಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಕೊರೊನಾ ಎರಡನೇ ಅಲೆಯ ಬಗ್ಗೆ ತಜ್ಞರ ವರದಿಯನ್ನು ಕಡೆಗಣಿಸಿತ್ತು. ಅದರ ಪರಿಣಾಮ ಲಕ್ಷಾಂತರ ಜನ ಜೀವ ಕಳೆದುಕೊಳ್ಳುವಂತಾಗಿದ್ದು ದುರಂತ ಇತಿಹಾಸ ಎಂದರು. ಓಮಿಕ್ರಾನ್ ಕೊರೊನಾ ರೂಪಾಂತರ ತಳಿಗಳಲ್ಲೇ ಅತಿ ಕ್ಷಿಪ್ರವಾಗಿ ಹರಡುವ ಗುಣ ಹೊಂದಿದೆ. ಭಾರತದಂತಹ ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಸೋಂಕು ಹರಡುವ ಸಾಧ್ಯತೆ ಇನ್ನೂ ಹೆಚ್ಚು. ಹಾಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೋಂಕು ತಡೆಗೆ ಈಗಾಗಲೇ ಮುಂದಾಗಬೇಕು. ಆಕ್ಸಿಜನ್ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳಿಗೆ ಈಗಿನಿಂದಲೇ ಆದ್ಯತೆ ನೀಡಬೇಕು ಎಂದಿ…

Read More

ಮಧುಗಿರಿ:  ತಾಲೂಕು ಪಂಚಾಯಿತಿ ಕಚೇರಿ ಆವರಣ   ಸುತ್ತ ಮುತ್ತ ಹಲವು ವರ್ಷಗಳಿಂದ  ಬೆಳೆದು ನಿಂತ ಗಿಡ ಗಂಟೆಗಳನ್ನು ನೂತನ  ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ್  ಸ್ವಚ್ಛ ಪಡಿಸಿದರು. ಈ ಸಂದರ್ಭ ಮಾತನಾಡಿದ ಅವರು,  ವಿಜ್ಞಾನ,  ತಂತ್ರಜ್ಞಾನಗಳ ಮುಖಾಂತರ ದೇಶ ಅಭಿವೃದ್ಧಿ ಹೊಂದುತ್ತಿರುವಾಗ ಮಾನವನು ಆರೋಗ್ಯವಂತನಾಗಿ ಉಳಿಯಬೇಕಾದರೆ ಸ್ವಚ್ಛ ಸುಂದರ ಪರಿಸರವನ್ನು ಉಳಿಸಿ, ಬೆಳೆಸಬೇಕಾದದ್ದು ಅತ್ಯಗತ್ಯ. ಆದ್ದರಿಂದ ಈ ದಿನ ನಮ್ಮ ಕಚೇರಿಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,  ಸ್ವಚ್ಛ ಪರಿಸರ ನಿರ್ಮಾಣಕ್ಕೆ  ಈ ಸ್ವಚ್ಛ ಕಾರ್ಯ ಅಗತ್ಯವಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪಂಚಾಯಿತಿ ಅಧಿಕಾರಿಗಳಾದ ಮಧುಸೂದನ್,  ವಸಂತ್, ಅರ್ಷಾದ್ ಹುಸೇನ್ ,  ಅಲ್ಪಸಂಖ್ಯಾತರ ಅಧ್ಯಕ್ಷರಾದ ಸಯ್ಯದ್ ಅಲಾವುದ್ದೀನ್ , ದಾದಾಪೀರ್ ಹಾಜರಿದ್ದರು. ವರದಿ: ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತಿಪಟೂರು: ಕಿಬನಹಳ್ಳಿ ಹೋಬಳಿಯ ಯಗಚಿ ಗಟ್ಟಿ ಗ್ರಾಮದಲ್ಲಿ ಭಾರತದ ದೇಶದ ಪ್ರಥಮ ಮಹಿಳಾ ಶಿಕ್ಷಕಿ ಅಕ್ಷರ ಮಾತೆ ಸಾವಿತ್ರಿ ಬಾಫುಲೆ ಅವರ ಜಯಂತಿಯನ್ನು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಆಚರಣೆ ಮಾಡಲಾಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ದಲಿತ ಯುವ ಮುಖಂಡ ಹರೀಶ್,  ಭಾರತ ದೇಶದಲ್ಲಿ ಶೂದ್ರರಿಗೆ ಮತ್ತು ತಳಸಮುದಾಯದವರಿಗೆ ವಿದ್ಯೆಯನ್ನು ಕಲಿಸುವುದಕ್ಕೆ ಯಾವ ಗುರುಕುಲಗಳು ಮುಂದೆ ಬರದ ದಿನಗಳಲ್ಲಿ ಆ ದಿನದ ಕಾಲಘಟ್ಟದಲ್ಲಿ   ಸಾವಿತ್ರಿ ಬಾಪುಲೆ ಹಾಗೂ ಜ್ಯೋತಿಬಾಪುಲೆಯವರ ಕೊಡುಗೆ ದೇಶದ ಜನತೆಗೆ ಅಪಾರವಾಗಿದೆ  ತಳ ಸಮುದಾಯಗಳ ಮೇಲೆ ಅನೇಕ ಕಟ್ಟುಪಾಡುಗಳನ್ನು ಏರಿದ ಮನುವಾದಿಗಳ ಮಧ್ಯೆ ತಳಸಮುದಾಯಗಳಿಗೆ ಶಿಕ್ಷಣ ನೀಡುವಲ್ಲಿ ಅವರು ಮಾಡಿರುವ ಹೋರಾಟಗಳು ಕಾರ್ಯಗಳು ತುಂಬಾ ಕೊಡುಗೆ ಇದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ  ಗ್ರಾಮ ಪಂಚಾಯಿತಿ ಸದಸ್ಯ ನರಸಿಂಹಯ್ಯ ಶಾಲಾ ಶಿಕ್ಷಕಿ ಉಮಾ  ಶಿಕ್ಷಕಿ ಶೈಲಜಾ ಅವರು ವಿದ್ಯಾರ್ಥಿಗಳು ಸೇರಿದಂತೆ ಪ್ರಮುಖ ಮುಖಂಡರುಗಳು ಹಾಜರಿದ್ದರು. ವರದಿ:  ಮಂಜು ಗುರುಗದಹಳ್ಳಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಹಿರಿಯೂರು:   ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಇದುವರೆಗೂ ಕೋವಿಡ್ ಲಸಿಕೆಯ ಅಭಿಯಾನ ಯಾವುದೇ ಲೋಪವಾಗದಂತೆ ಯಶಸ್ವಿಯಾಗಿದ್ದು, 15 ರಿಂದ 18 ವರ್ಷದ ಒಳಗಿನ ಮಕ್ಕಳಿಗೆ ಹಮ್ಮಿಕೊಳ್ಳಲಾಗಿರುವ ಈ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು  ಪೋಷಕರು ಹಾಗೂ ವಿದ್ಯಾರ್ಥಿಗಳು ಸಹಕರಿಸಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಜಿ.ವೆಂಕಟೇಶ್ ಮನವಿ ಮಾಡಿದರು. ಹಿರಿಯೂರು ನಗರದ ಪ್ರಧಾನ ರಸ್ತೆಯಲ್ಲಿರುವ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಚಿತ್ರದುರ್ಗ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಿರಿಯೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಗರಸಭೆ ಅಧ್ಯಕ್ಷರಾದ ಶಂಷುನ್ನೀಸಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರವು ಲಸಿಕಾ ಕಾರ್ಯಕ್ರಮವನ್ನು ವಯಸ್ಸಿಗನುಸಾರವಾಗಿ ಹಂತಹಂತವಾಗಿ ಜಾರಿಗೊಳಿಸುತ್ತಿದ್ದು, ಇದೀಗ 15 ರಿಂದ 18 ವರ್ಷದ ಮಕ್ಕಳಿಗೆ ಅವಕಾಶ ಕಲ್ಪಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂಬುದಾಗಿ ತಿಳಿಸಿ  ಮನವರಿಕೆ ಆಗುವಂತೆ ವಿವರಿಸಿದರು . ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತಾಲ್ಲೂಕು ತಹಶೀಲ್ದಾರ್ ಎನ್ .…

Read More

ಮಹಾರಾಷ್ಟ:  ಇಲ್ಲಿನ ಥಾಣೆ ಜಿಲ್ಲೆಯ  ಅಂಬರನಾಥದಲ್ಲಿ 21 ವರ್ಷದ ಯುವತಿ ಮೇಲೆ ಸ್ನೇಹಿತರೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.  ಪ್ರಕರಣದ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಶಿವಾಜಿನಗರ ಪೊಲೀಸರು ತಕ್ಷಣ ಕೈಕೋಳ ಹಾಕಿದ್ದಾರೆ. ಭಾನುವಾರ ಮಧ್ಯಾಹ್ನ ಥಾಣೆ ಜಿಲ್ಲೆಯ ಅಂಬರನಾಥ್ನ ಜಿಐಪಿ ಅಣೆಕಟ್ಟು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆ ಅಂಬರನಾಥದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಆಕೆಯ ಸ್ನೇಹಿತ ಹನುಮಾನ್ ಹಿಲಮ್ ತನ್ನ ಸ್ನೇಹಿತರಾದ ವಿಶ್ವಾಸ್ ಮಾಧವಿ ಮತ್ತು ಜಾವೇದ್ ಅನ್ಸಾರಿ ಅವರೊಂದಿಗೆ ಭಾನುವಾರ ಜಿಐಪಿ ಅಣೆಕಟ್ಟು ಪ್ರದೇಶದಲ್ಲಿ ಕುಡಿದು ಪಾರ್ಟಿ ಮಾಡುತ್ತಿದ್ದರು.  ಇದೇ ವೇಳೆ ಹನುಮಂತ, ಜಿಐಪಿ ಅಣೆಕಟ್ಟೆ ಪ್ರದೇಶದಲ್ಲಿ ಸ್ನೇಹಿತೆಯನ್ನ ಅಲ್ಲಿಗೆ ಬರುವಂತೆ ಕರೆದಿದ್ದಾನೆ.  ಕುಡಿದ ಮತ್ತಿನಲ್ಲಿ ಹನುಮಂತ ಆಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯ ಸ್ನೇಹಿತರಾದ ವಿಶ್ವಾಸ್ ಮತ್ತು ಜಾವೇದ್ ರ ಸಹ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಾರೆ.  ಘಟನೆಯ ನಂತರ ಯುವತಿ ಶಿವಾಜಿನಗರ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಆಕೆಯ ದೂರಿನ ಮೇರೆಗೆ…

Read More