Subscribe to Updates
Get the latest creative news from FooBar about art, design and business.
- ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ
- ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ
- ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ
- ತೆರೆ ಮೇಲೆ ರಾಜ್ ಕುಮಾರ್, ಅಂತರಂಗದಲ್ಲಿ ಮುತ್ತುರಾಜ್ ಇದ್ದರು: ಆರ್. ಮಂಜುನಾಥ್ ಚವಾಣ್, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ
- ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ
- ಧಾರವಾಡ: ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚನೆ
- ಕೊರಟಗೆರೆ: ವಡೇರಹಳ್ಳಿ ಬಳಿ ಬಫರ್ ಡ್ಯಾಂ ನಿರ್ಮಾಣಕ್ಕೆ ರೈತರ ವಿರೋಧ
- ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ
Author: admin
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಡಿ.ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ವಿಜೃಂಭಣೆಯಿಂದ 75 ನೇಯ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ. ರಮೇಶ್ ಬಳಿಕ ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿ, ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ನಗರದಲ್ಲಿ ಅಮೃತ ಮಹೋತ್ಸವ ಪಾದಯಾತ್ರೆಗೆ ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿ ನಡೆಸಿದೆ. ಹಿರಿಯೂರು ತಾಲ್ಲೂಕಿನಲ್ಲಿ ಸಹ ನೂರು ಕಿಲೋಮೀಟರ್ ಗಳ ಪಾದಯಾತ್ರೆ ಯನ್ನು ಮುಕ್ತಾಯಗೊಳಿಸಿದ್ದೇವೆ . ಈ ದಿನ ಭಾರತವು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯವನ್ನು ಪಡೆಯಿತು. ಪ್ಲಾಸಿಯ ಕದನದಲ್ಲಿ ಬ್ರಿಟಿಷರ ವಿಜಯದ ನಂತರ, ಈಸ್ಟ್ ಇಂಡಿಯಾ ಕಂಪನಿಯು 1757ರಲ್ಲಿ ಭಾರತದಲ್ಲಿ ತನ್ನ ಆಡಳಿತವನ್ನು ಆರಂಭಿಸಿತು. ಭಾರತೀಯ ಸ್ವಾತಂತ್ರ್ಯ ಚಳುವಳಿಯು ಮೊದಲನೆಯ ಮಹಾಯುದ್ಧದ ಸಮಯದಲ್ಲಿ ಪ್ರಾರಂಭವಾಯಿತು ಮತ್ತು ಮೋಹನ್ ದಾಸ್ ಕರಮದಾಸ್ ಗಾಂಧಿ ನೇತೃತ್ವದಲ್ಲಿ ನಡೆಯಿತು. ಆಗಸ್ಟ್ 15, 1947…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕರ್ನಾಟಕ ಸಮೃದ್ಧಿ ಜನಸೇವಾ ವೇದಿಕೆಯ ಯುವ ಕಣ್ಮಣಿ , ಯುವ ಘಟಕದ ಅಧ್ಯಕ್ಷರಾಗಿದ್ದ ಸಿ.ಟಿ.ವಸಂತ್ ಕುಮಾರ್ ನಾಯಕ ಅವರ ಸವಿ ನೆನಪಿಗಾಗಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಕುರಿತು ನಮ್ಮ ತುಮಕೂರು ಜೊತೆಗೆ ಮಾತನಾಡಿದ ತಾಲ್ಲೂಕು ನಗರದ ಘಟಕದ ಅಧ್ಯಕ್ಷರಾದ ಅಪ್ಸರ್ ಪಾಷಾ ಅವರು, ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಕೋರಿದರು. ಕರ್ನಾಟಕ ಸಮೃದ್ದಿ ಜನಸೇವಾ ವೇದಿಕೆಯ ಯುವ ಘಟಕದ ಅಧ್ಯಕ್ಷರಾದ ಸಿ.ಟಿ.ವಸಂತ್ ಕುಮಾರ್ ಅವರನ್ನು ಕಳೆದುಕೊಂಡಿರುವುದು ನಮ್ಮೆಲ್ಲರ ದೌರ್ಬಲ್ಯದ ಸಂಗತಿಯಾಗಿದೆ. ಸಿ.ಟಿ.ವಸಂತ್ ಕುಮಾರ್ ನಾಯಕ ರವರು ಪ್ರತಿಯೊಂದು ಸ್ಪರ್ಧೆಯಲ್ಲೂ ಮುಂದಿದ್ದರು. ಇಂತಹ ಯುವ ಪ್ರತಿಭೆಗಳು ಇಂದು ನಮ್ಮೆಲ್ಲರನ್ನು ಅಗಳಿರುವುದು ನಿಜಕ್ಕೂ ಸಹ ದುರ್ದೈವದ ವಿಷಯವಾಗಿದೆ ಎಂಬುದಾಗಿ ಬೇಸರ ವ್ಯಕ್ತಪಡಿಸಿದರು. ಸಿ.ಟಿ.ವಸಂತ್ ಕುಮಾರ್ ನಾಯಕ ಅವರು, ಕಳೆದ ತಿಂಗಳುಗಳ ಹಿಂದೆಯಷ್ಟೇ ಬೈಕ್ ಅಪಘಾತದಲ್ಲಿ ನಿಧನ ಹೊಂದಿದ್ದು, ಅವರ ಸವಿ ನೆನಪಿಗಾಗಿಯೇ ಈ 75ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಈ ಕ್ರಿಕೆಟ್ ಪಂದ್ಯಾವಳಿಯನ್ನು…
ತುರುವೇಕೆರೆ: ತಾಲ್ಲೂಕು ಆಡಳಿತದ ವತಿಯಿಂದ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿಗಳಾದ ರೇಣು ಕುಮಾರ್ ರವರು ಧ್ವಜಾರೋಹಣ ನೆರವೇರಿಸಿ ತಾಲೂಕಿನ ಜನತೆಗೆ ಸ್ವಾತಂತ್ರೋತ್ಸವದ ಶುಭಾಶಯ ಕೋರಿದರು. ಇದೇ ವೇಳೆ ವಿವಿಧ ಶಾಲಾ ಮಕ್ಕಳಿಂದ ಪಥಸಂಚಲನ, ಪೋಲಿಸ್ ಇಲಾಖೆಯಿಂದ ಕವಾಯತು, ಗೃಹರಕ್ಷಕ ದಳದಿಂದ ಪಥಸಂಚಲನ ನಡೆಯಿತು. ತುರುವೇಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಸಾಲ ಜಯರಾಮ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಪಥ ಸಂಚಲ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ತಹಸಿಲ್ದಾರರು ವಂದನೆ ಸ್ವೀಕರಿಸಿದರು.ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ರಾಜಕೀಯದ ಗಣ್ಯರು ಶಿಕ್ಷಕರು ಮಕ್ಕಳು ಪಾಲ್ಗೊಂಡಿದ್ದರು. ವರದಿ: ಸುರೇಶ್ ಬಾಬು, ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಿಪಟೂರು: ಕಲ್ಪತರು ಕ್ರೀಡಾಂಗಣದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆಯನ್ನ ಅದ್ದೂರಿಯಾಗಿ ಆಚರಿಸಲಾಯಿತು.ತಿಪಟೂರು ಉಪವಿಭಾಗಾಧಿಕಾರಿ ಕಲ್ಪಶ್ರೀ ಧ್ವಜಾರೋಹಣ ನೆರವೇರಿಸಿ ಪೋಲಿಸ್ ತುಕಡಿ, ಗೃಹರಕ್ಷಕದಳ ಎನ್.ಸಿ.ಸಿ ತುಕ್ಕಡಿ , ಸ್ಕೌಟ್ಸ್ ತುಕ್ಕಡಿ ಸೇರಿದಂತೆ ವಿವಿಧ ಶಾಲಾ ತಂಡಗಳಿಂದ ಧ್ವಜವಂದನೆ ಸ್ವೀಕರಿಸಿದರು. ಇದೇ ವೇಳೆ ಮಾತನಾಡಿದ ಅವರು, ದೇಶದ ಲಕ್ಷಾಂತರ ಜನರಲ್ಲಿ ದೇಶ ಪ್ರೇಮದ ಕಿಚ್ಚನ್ನು ಹೊತ್ತಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಚಳುವಳಿ, ದಂಡಿಯಾತ್ರೆ, ಅಸಹಕಾರ ಚಳುವಳಿ , ಕ್ವಿಟ್ ಇಂಡಿಯಾ ಸತ್ಯಾಗ್ರಹದಂತಹ ಸಾವಿರಾರು ಹೋರಾಟಗಳು ಬ್ರಿಟಿಷ್ ಸರ್ವಾಧಿಕಾರಿ ಆಡಳಿತವನ್ನು 1947 ರ ಆಗಸ್ಟ್ 15 ರಂದು ಕೊನೆಗಾಣಿಸಿತು. ಲಕ್ಷಾಂತರ ಜನ ಧೀಮಂತ ನಾಯಕರು ತ್ಯಾಗ ಬಲಿದಾನದ ಮೂಲಕ ಅಪರಿಮಿತ ಶ್ರಮದ ಮೂಲಕ ಈ ಸುದಿನವನ್ನು ನಮ್ಮ ಪಾಲಿಗೆ ಬಿಟ್ಟುಹೋಗಿದ್ದಾರೆ . ಸ್ವಾಮಿ ವಿವೇಕಾನಂದರು ‘ ಏಳಿ , ಎದ್ದೇಳಿ , ಗುರಿ ಮುಟ್ಟುವ ತನಕ ನಿಲ್ಲದಿರಿ ‘ ಎಂಬ ಘೋಷಣೆಯೊಂದಿಗೆ ಯುವ ಸಮುದಾಯವನ್ನು ಹುರಿದುಂಬಿಸಿದರು ಎಂದರು. ಅಹಿಂಸಾ ಮಾರ್ಗದ ಮೂಲಕ ದೇಶಕ್ಕೆ…
ತುರುವೇಕೆರೆ: ತಾಲೂಕಿನ ಸೊರವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಜಾಬಿರ್ ಉಸೇನ್ ಹಾಗೂ ಸದಸ್ಯರಾದ ಸಂದೇಶ್ ರವರು , ಸ್ವಾತಂತ್ರ್ಯ ಎಂಬುದು ನಮ್ಮ ಭಾರತ ದೇಶ ಹೆಮ್ಮೆಪಡುವ ವಿಷಯ. ದೇಶಕ್ಕಾಗಿ ಹೋರಾಟ ಮಾಡಿದ ಹೋರಾಟಗಾರರನ್ನು ಸ್ಮರಿಸಿ ಗೌರವಿಸಿ ಅವರ ಧ್ಯೇಯ ಪಾಲಿಸುವ ಮೂಲಕ ಆತ್ಮ ನಿರ್ಭರ ಭಾರತ ನಿರ್ಮಾಣ ಆಗಬೇಕು ಎಂದರು. ಹಾಲಿ ಅಧ್ಯಕ್ಷರಾದ ಜಾಬಿರ್ ಹುಸೇನ್ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಾಸು, ಕರವಸೂಲಿಗಾರ ಬಾಲ ಕುಮಾರ್ , ಕಾರ್ಯದರ್ಶಿ ಸಿ .ಡಿ.ವೆಂಕಟಾಚಲ ಮೊದಲಾದವರು ಈ ವೇಳೆ ಇದ್ದರು. ವರದಿ: ಸುರೇಶ್ ಬಾಬು, ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧುಗಿರಿ: ಮಧುಗಿರಿ ತಾಲೂಕು ಆಡಳಿತದ ವತಿಯಿಂದ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ನಡೆಯಿತು. ತಾಲೂಕು ದಂಡಾಧಿಕಾರಿಗಳಾದ ಸೋಮಪ್ಪ ಕಡಕೋಳ ಧ್ವಜಾರೋಹಣ ನಡೆಸಿ ತಾಲೂಕಿನ ಜನತೆಗೆ ಸ್ವಾತಂತ್ರೋತ್ಸವದ ಶುಭಾಶಯಗಳನ್ನು ಕೋರಿದರು. ವಿವಿಧ ಶಾಲಾ ಮಕ್ಕಳಿಂದ ಪಥಸಂಚಲನ ಹಾಗೂ ಪೋಲಿಸ್ ಇಲಾಖೆ ವತಿಯಿಂದ ಕವಾಯತು, ಗೃಹರಕ್ಷಕ ದಳದಿಂದಲೂ ಪಥಸಂಚಲನ ನಡೆಯಿತು. ಮಧುಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ವಿ.ವೀರಭದ್ರಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪಥ ಸಂಚಲ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ತಹಶೀಲ್ದಾರರು ವಂದನೆಯನ್ನು ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ರಾಜಕೀಯದ ಗಣ್ಯರು, ಶಿಕ್ಷಕರು ಮಕ್ಕಳು ಪಾಲ್ಗೊಂಡಿದ್ದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಸರಗೂರು: ತಾಲ್ಲೂಕಿನ ರಾಷ್ಟ್ರೀಯ ಹಬ್ಬದ ಆಡಳಿತ ವತಿಯಿಂದ ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ 75 ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕಾಲ್ನಡಿಗೆ ಜಾಥಾ ನಡೆಯಿತು. ತಹಸೀಲ್ದಾರ್ ಚೆಲುವರಾಜು ಮತ್ತು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿದರು. ಬಳಿಕ ತಹಸೀಲ್ದಾರ್ ಚೆಲುವರಾಜು ಮಾತನಾಡಿ, ಸರ್ಕಾರದ ಆದೇಶದ ಮೇರೆಗೆ ಮೂರು ದಿನಗಳ ಕಾಲ ಪ್ರತಿ ಮನೆ ಮನೆಗೂ ತ್ರಿವರ್ಣ ಧ್ವಜವನ್ನು ಹಾರಿಸಬೇಕು ಎಂದರು. ಜಾಥಾದಲ್ಲಿ ತಾಲ್ಲೂಕಿನ ಅಧಿಕಾರಿಗಳು, ಪಟ್ಟಣದ ಎಲ್ಲಾ ಶಾಲೆಯ ಮಕ್ಕಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ತಹಸೀಲ್ದಾರ್ ಚೆಲುವರಾಜು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್.ಕಬಿನಿ ಉಪಾವಿಭಾಗ ನೀರಾವರಿ ಇಲಾಖೆ ಅಧಿಕಾರಿ ಉಷಾ.ಪಪಂ ಮುಖ್ಯಾಧಿಕಾರಿ ಬಿ.ಜಿ. ಸತೀಶ್, ಕೃಷಿ ಇಲಾಖೆ ಅಧಿಕಾರಿ ಮಹೇಶ್ ಕುಮಾರ್, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರು ಮಲ್ಲೇಶ್, ಪಪಂ ಸದಸ್ಯರು ಎಸ್ ಎಲ್ ರಾಜಣ್ಣ, ಶ್ರೀನಿವಾಸ್, ಹೇಮವತಿರಮೇಶ್, ವಿರೇಶ್, ದಿವ್ಯನವೀನ್, ಚೈತ್ರಸ್ವಾಮಿ, ಉಮಾರಾಮಚಂದ್ರ, ಚಲುವಕೃಷ್ಣ, ಉಪತಹಸೀಲ್ದಾರ್…
ಮಧುಗಿರಿ: ಇತಿಹಾಸ ಪ್ರಸಿದ್ಧ ಏಷ್ಯಾದ ಪ್ರಥಮ ಏಕಶಿಲಾ ಬೆಟ್ಟದಲ್ಲಿ 12 ಬೆಟಾಲಿಯನ್ ಕೆ ಎಸ್ ಆರ್ ಪಿ ತಂಡ ಮತ್ತು ಮಧುಗಿರಿಯ ತಾಲೂಕು ಆಡಳಿತ ಅಧಿಕಾರಿಗಳ ತಂಡ ಇಂದು ಮಧುಗಿರಿ ಬೆಟ್ಟದ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ರಾಷ್ಟ್ರೀಯತೆಯ ಭಕ್ತಿಯನ್ನು ತೋರಿದ್ದಾರೆ. 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆಯ ಪ್ರಯುಕ್ತ ತ್ರಿವರ್ಣ ಧ್ವಜವನ್ನು ಎತ್ತರದ ಪ್ರದೇಶದಲ್ಲಿ ಹಾರಿಸುವುದು ದೇಶದ ಹೆಮ್ಮೆ ಮತ್ತು ತಿರಂಗ ಧ್ವಜದ ಗೌರವ ಮತ್ತಷ್ಟು ಎತ್ತರಕ್ಕೆ ಬೆಳೆಯುತ್ತದೆ. ಈ ಬಗ್ಗೆ ಮಾತನಾಡಿದ ಕೆ ಎಸ್ ಆರ್ ಪಿ 12ನೇ ಬೆಟಾಲಿಯನ್ ಇನ್ಸ್ಪೆಕ್ಟರ್ ಹರೀಶ್, ನಮ್ಮ 12ನೇ ಬೆಟಾಲಿಯನ್ ಪ್ರತಿವಾರವೂ ಒಂದೊಂದು ಟ್ರಕ್ಕಿಂಗ್ ಪ್ರದೇಶಗಳಿಗೆ ಹೋಗುತ್ತೇವೆ. ಅದರಂತೆ ಇಂದು ಸ್ವತಂತ್ರ ಮಹೋತ್ಸವದ ಅಂಗವಾಗಿ ಮಧುಗಿರಿ ಏಕಶಿಲಾ ಬೆಟ್ಟಕ್ಕೆ ಏರಿ ತಿರಂಗ ಧ್ವಜವನ್ನು ಕೇಂದ್ರ ಸರ್ಕಾರದ ಆಗ್ನೇಯದ ಅತಿ ಎತ್ತರದಲ್ಲಿ ಹಾರಿಸಿದ್ದು ಖುಶಿ ತಂದಿದೆ. ಇದರ ಸಾರಥ್ಯವನ್ನು ವಹಿಸಿದ್ದ ಹಾಗೂ ನಮ್ಮೆಲ್ಲರಿಗೂ ಇಂತಹ ಅವಕಾಶವನ್ನು ಕೊಟ್ಟಿದ್ದಕ್ಕೆ ಅಸಿಸ್ಟೆಂಟ್ ಕಮಂಡೆಂಟ್ ಪಟೇಲ್ ಬಿಸಿ…
ಅಪಾರ್ಟ್ ವೊಂದರ ಹತ್ತನೇ ಮಹಡಿಯಿಂದ ಸಾಫ್ಟ್ವೇರ್ ಕಂಪನಿ ಉದ್ಯೋಗಿ ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ತ್ರಿದೀಪ್(30) ಮೃತಪಟ್ಟ ಸಾಫ್ಟ್ವೇರ್ ಕಂಪನಿ ಉದ್ಯೋಗಿ. ಬೆಳ್ಳಂದೂರಿನ ಗ್ರೀನ್ ಶೋಭಾ ಡೈಸಿ ಅಪಾರ್ಟ್ಮೆಂಟ್ನಲ್ಲಿ ತ್ರಿದೀಪ್ ವಾಸವಾಗಿದ್ದರು. ಇಂದು ಬೆಳಗಿನ ಜಾವ 3 ಗಂಟೆ ಸುಮಾರಿನಲ್ಲಿ ತ್ರಿದೀಪ್ 10ನೇ ಮಹಡಿಯಿದ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಬೆಳ್ಳಂದೂರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy