Subscribe to Updates
Get the latest creative news from FooBar about art, design and business.
- ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
- ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
- ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
- ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
- ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
- ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
- ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
- ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್.ಕೃಷ್ಣಮೂರ್ತಿ
Author: admin
ಸರಗೂರು: ವಿದ್ಯಾರ್ಥಿಗಳು ಮೊಬೈಲ್ ನಿಂದ ದೂರ ಇದ್ದು ಶಿಕ್ಷಣಕ್ಕೆ ಹೆಚ್ಚಿನ ಗಮನ ನೀಡಬೇಕು ಎಂದು ರಕ್ಷಣಾ ಸೇವಾ ಟ್ರಸ್ಟ್ ಅಧ್ಯಕ್ಷೆ ಚಂದ್ರಿಕಾ ದೊರೆಸ್ವಾಮಿ ತಿಳಿಸಿದರು. ಸರಗೂರು ತಾಲ್ಲೂಕಿನ ಅಗತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಪೆನ್ನು ಪೆನ್ಸಿಲ್ ವಿತರಣೆ ಮಾಡಿ ಮಾತನಾಡಿದ ಅವರು, ನಮ್ಮ ಟ್ರಸ್ಟ್ ವತಿಯಿಂದ ಕೋವಿಡ್ ಸಂದರ್ಭದಲ್ಲಿ ಕಿಟ್ ಗಳನ್ನು ವಿತರಣೆ ಮಾಡಲಾಗಿತ್ತು. ಈಗ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಅನುಕೂಲವಾಗಲು ನೋಟ್ ಗಳನ್ನು ನೀಡುತ್ತಿದ್ದೇವೆ. ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿದರೆ.ಮುಂದಿನ ಪೀಳಿಗೆಗೆ ಹಸನಾಗುತ್ತದೆ ಎಂದು ತಿಳಿಸಿದರು. ನಿವೃತ್ತ ಎಎಸ್ ಐ ದೊರೆಸ್ವಾಮಿ ಮಾತನಾಡಿ, ಹೆಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನ ಸೇವೆ ಮಾಡಲು ನಿವೃತ್ತ ಪಡೆದು ಕೊಂಡಿದ್ದೇನೆ. ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಇದ್ದಾಗ ಸಮಾಜ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಕೊರೊನಾ ವಾರಿಯರ್ಸ್ ಎಂದು ಸನ್ಮಾನಿಸಿದರು. ತಾಲ್ಲೂಕಿನ ಬಿದರಹಳ್ಳಿ, ಅಗತ್ತೂರು ಶಾಲೆಗಳಿಗೆ ನೋಟ್ ಪುಸ್ತಕಗಳನ್ನು ನೀಡಲಾಗುತ್ತದೆ. ಮುಳ್ಳೂರು ಸಾಗರೆ ಸರ್ಕಾರಿ ಶಾಲೆಗಳಿಗೂ ನೊಟ್…
ತುಮಕೂರು: ಪಠ್ಯಪುಸ್ತಕ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆ ಮುಂದೆ ಆರೆಸ್ಸೆಸ್ ನ ಚಡ್ಡಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಎನ್ ಎಸ್ ಯುಐ ಕಾರ್ಯಕರ್ತರಿಗೆ ಶೀಘ್ರವೇ ಜಾಮೀನು ದೊರೆಯುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದರು. ತುಮಕೂರು ಜಿಲ್ಲಾ ಕಾರಾಗೃಹ ಕೇಂದ್ರಕ್ಕೆ ಭೇಟಿ ನೀಡಿ, ಬಂಧಿತ ಎನ್ ಎಸ್ ಯುಐ ಮುಖಂಡ ಕೀರ್ತಿ ಗಣೇಶ್ ಹಾಗೂ ಸದಸ್ಯರ ಜೊತೆಗೆ ಮಾತನಾಡಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಉತ್ತರಿಸುತ್ತಿದ್ದರು. ವಿದ್ಯಾರ್ಥಿಗಳನ್ನು ಅರೆಸ್ಟ್ ಮಾಡಿದ ದಿನವೇ ನಾನು ತುಮಕೂರಿನ ಎಸ್ ಪಿಯವರಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾತನಾಡಿದ್ದೇನೆ. ಕಾನೂನಾತ್ಮಕವಾಗಿ ಏನಿದೆಯೋ ಅದನ್ನು ನೀವು ಮಾಡಿ, ಬೇರೆ ಯಾರೋ ಹೇಳಿದ್ರು, ಒತ್ತಡಕ್ಕೆ ಮಣಿದು ನೀವು ಮಾಡ್ಬಾರ್ದು ಎನ್ನುವಂತಹ ಮಾತುಗಳನ್ನು ನಾನು ಹೇಳಿದ್ದೇನೆ ಎಂದು ಅವರು ಹೇಳಿದರು. ನಾವು ಯಾರು ಕೂಡ ಅವರನ್ನಷ್ಟೇ ಮುಂದೆ ಬಿಟ್ಟು ತಮಾಷೆ ನೋಡುವುದಿಲ್ಲ. ನಮ್ಮ ವಿದ್ಯಾರ್ಥಿಗಳು ನಮ್ಮ ಪಕ್ಷದ ಸಿದ್ದಾಂತಗಳನ್ನು ನಂಬಿರುವ ವಿದ್ಯಾರ್ಥಿಗಳು ಅವರನ್ನು…
ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಸಮಸ್ಯೆಗಳ ಸುಳಿಯಲ್ಲಿ ಸಿಕ್ಕು ಒದ್ದಾಡುತ್ತಿದ್ದಾರೆ. ಇದೀಗ ಮುಂಬೈ ಪೊಲೀಸರು ನೂಪುರ್ ಶರ್ಮಾಗೆ ಸಮನ್ಸ್ ನೀಡಿದ್ದಾರೆ. ಜೂನ್ 22 ರಂದು ಮುಂಬೈ ಪೊಲೀಸರ ಮುಂದೆ ಹಾಜರಾಗಬೇಕು ಎಂದು ತಿಳಿಸಿದ್ದಾರೆ. ಇದಕ್ಕೂ ಮುನ್ನ ಮಾತನಾಡಿದ ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, ‘ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಬಗ್ಗೆ ವಾಗ್ದಾಳಿ ನಡೆಸಿದ ರೀತಿಗೆ ಸಂಬಂಧಿಸಿದಂತೆ ಮುಂಬೈನಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಈ ಎಂದು ತಿಳಿಸಿದ್ದರು. ಇತ್ತೀಚಿಗೆ ಮೊಹಮ್ಮದ್ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಪಕ್ಷದಿಂದ ಅಮಾನತುಗೊಳಿಸಿದೆ. ಟಿವಿ ಚರ್ಚೆಯೊಂದರಲ್ಲಿ ನೂಪುರ್ ಶರ್ಮಾ ಅವರು ಮೊಹಮ್ಮದ್ ಪೈಗಂಬರ್ ಗೆ ಮಾಡಿದ ಅವಮಾನಕರ ಹೇಳಿಕೆ ಗೆ ಮುಸ್ಲಿಂ ಸಮುದಾಯಗಳಿಂದ ತುಂಬಾ ವಿರೋಧ ವ್ಯಕ್ತವಾಗಿದೆ. ವರದಿ: ಆಂಟೋನಿ ಬೇಗೂರು…
ಖ್ಯಾತ ನಟ, ಮಾಜಿ ವಿಧಾನ ಪರಿಷತ್ ಸದಸ್ಯ ಮುಖ್ಯಮಂತ್ರಿ ಚಂದ್ರುರವರು ಆಮ್ ಆದ್ಮಿ ಪಾರ್ಟಿ ಅಧಿಕೃತವಾಗಿ ಮಂಗಳವಾರ ಸೇರ್ಪಡೆಯಾದರು. ಬೆಂಗಳೂರಿನ ಹೋಟೆಲ್ ಪರಾಗ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಚಂದ್ರುರವರನ್ನು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಪಕ್ಷಕ್ಕೆ ಬರಮಾಡಿಕೊಂಡರು. ಆ ಬಳಿಕ ಮಾತನಾಡಿದ ಪೃಥ್ವಿ ರೆಡ್ಡಿ “ಮುಖ್ಯಮಂತ್ರಿ ಚಂದ್ರುರವರು ನಾಡು, ನುಡಿ, ಜಲಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಇವುಗಳ ರಕ್ಷಣೆಯು ನಮ್ಮ ಪಕ್ಷದ ಮೂಲ ಸಿದ್ಧಾಂತ ಕೂಡ ಆಗಿದೆ. ಭಾರತವು ರಾಜ್ಯಗಳ ಒಕ್ಕೂಟವಾಗಿದ್ದು, ಆಯಾ ರಾಜ್ಯಗಳಲ್ಲಿ ಆಯಾ ಭಾಷೆಗಳನ್ನು ಪ್ರೋತ್ಸಾಹಿಸುವ ಮೂಲಕ ಪ್ರಾದೇಶಿಕತೆಗೆ ಒತ್ತು ನೀಡಿ ರಾಷ್ಟ್ರದ ಸಮಗ್ರತೆ ಮತ್ತು ಐಕ್ಯತೆಯನ್ನು ಕಾಪಾಡುವುದೇ ಎಎಪಿಯ ಸ್ಪಷ್ಟ ನಿಲುವು. ಸತತ ನಲವತ್ತಕ್ಕೂ ಹೆಚ್ಚು ವರ್ಷಗಳ ಕಾಲ ಮುಖ್ಯಮಂತ್ರಿ ನಾಟಕದ ಮೂಲಕ ರಾಜಕೀಯ ಕ್ಷೇತ್ರವನ್ನು ಶುದ್ಧೀಕರಣ ಮಾಡುವ ದಿಶೆಯಲ್ಲಿ ಚಂದ್ರುರವರು ಸಾಕಷ್ಟು ಶ್ರಮಿಸಿದ್ದಾರೆ ” ಎಂದು ಹೇಳಿದರು. “ಮುಖ್ಯಮಂತ್ರಿ ಚಂದ್ರುರವರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದವರು. ಗೌರಿಬಿದನೂರು ಕ್ಷೇತ್ರದ ಶಾಸಕರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ…
IBPS (ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ) ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಅಸಿಸ್ಟಂಟ್, ಆಫೀಸರ್ ಸ್ಕೇಲ್(ವಿವಿಧ ಹಂತ) ಹುದ್ದೆಗಳ ಭರ್ತಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8,106 ಹುದ್ದೆಗಳಿದ್ದು, ಜೂನ್ 27 ರವರೆಗೆ ಆನ್‌ಲೈನ್ ಅಪ್ಲಿಕೇಶನ್ ಹಾಕಬಹುದು. ಸಿಎ, ಬ್ಯಾಚುಲರ್ ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಈ ಕೆಳಗಿದೆ ನೋಡಿ.. ಹುದ್ದೆಗಳ ವಿವರ: ಆಫೀಸ್ ಅಸಿಸ್ಟಂಟ್ (ಮಲ್ಟಿಪರ್ಪಸ್ ) : 4483 ಆಫೀಸರ್ ಸ್ಕೇಲ್-1: 2676 ಆಫೀಸರ್ ಸ್ಕೇಲ್-2 (ಅಗ್ರಿಕಲ್ಚರ್ ಆಫೀಸರ್): 12 ಆಫೀಸರ್ ಸ್ಕೇಲ್-2 (ಮಾರ್ಕೆಟಿಂಗ್ ಮ್ಯಾನೇಜರ್) :06 ಆಫೀಸರ್ ಸ್ಕೇಲ್-2(ಟ್ರೆಸರಿ ಮ್ಯಾನೇಜರ್): 10 ಆಫೀಸರ್ ಸ್ಕೇಲ್-2 (Law): 18 ಆಫೀಸರ್ ಸ್ಕೇಲ್-2 (CA) :19 ಆಫೀಸರ್ ಸ್ಕೇಲ್-2 (IT): 57 ಆಫೀಸರ್ ಸ್ಕೇಲ್-2 (ಜೆನೆರಲ್ ಬ್ಯಾಂಕಿಂಗ್ ಆಫೀಸರ್) – 745 ಆಫೀಸರ್ ಸ್ಕೇಲ್-3 : 80 ವಿದ್ಯಾರ್ಹತೆ: ಐಬಿಪಿಎಸ್ ಆರ್‌ಆರ್‌ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ…
ನನ್ನ ದೇಹದಲ್ಲಿ ರಕ್ತ ಇರುವವರೆಗೆ ಬಂಗಾಳವನ್ನು ವಿಭಜಿಸಲು ನಾನು ಬಿಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಂಗಾಳ ವಿಭಜನೆಯ ಬಗ್ಗೆ ಗುಡುಗಿದ್ದಾರೆ. ಉತ್ತರ ಬಂಗಾಳದ ಅಲಿಪುರ್‌ದೌರ್‌ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ ಬ್ಯಾನರ್ಜಿ, ಕಳೆದ 10 ವರ್ಷಗಳಲ್ಲಿ ಉತ್ತರ ಬಂಗಾಳದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ, ಈಗ ಉತ್ತರ ಬಂಗಾಳದ ಜನರು ದಕ್ಷಿಣ ಬಂಗಾಳಕ್ಕೆ ಹೋಗಬೇಕಾಗಿಲ್ಲ ಎಂದರು. ಜಾನ್ ಬರ್ಲಾ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಪ್ರತ್ಯೇಕ ಉತ್ತರ ಬಂಗಾಳದ ವಿಷಯವನ್ನು ಪ್ರಸ್ತಾಪಿಸಿದರು, ಆಗ ದೀದಿ ನನ್ನ ದೇಹದಲ್ಲಿ ರಕ್ತ ಇರುವವರೆಗೂ ಬಂಗಾಳ ಇಬ್ಭಾಗವಾಗಲು ಬಿಡುವುದಿಲ್ಲ. ಬಿಜೆಪಿಯವರು ವಿಭಜನೆಯ ರಾಜಕಾರಣ ಮಾಡುತ್ತಾರೆ. ನಾವು ವಿಭಜಿಸುವುದಿಲ್ಲ, ನಾವು ಒಟ್ಟಿಗೆ ಬೆಳೆಯುತ್ತೇವೆ, ಬದುಕುತ್ತವೆ ಎಂದು ಹೇಳಿದರು. ಈ ಮಧ್ಯೆ, ಕಮ್ತಾಪುರ್ ಲಿಬರೇಶನ್ ಆರ್ಗನೈಸೇಶನ್ (KLO) ಮುಖ್ಯಸ್ಥ ಜಿಬೋನ್ ಸಿಂಗ್, ನಾನು ಮಮತಾ ಬ್ಯಾನರ್ಜಿ ಅವರಿಗೆ ಹೇಳುತ್ತಿದ್ದೇನೆ, ಕೋಚ್ ಕಮ್ತಾಪುರಕ್ಕೆ ಕಾಲಿಡಲು ಧೈರ್ಯ ಮಾಡಬೇಡಿ. ನೀವು ಕೋಚ್ ಕಮ್ತಾಪುರ ರಚನೆಗೆ ಮಧ್ಯಪ್ರವೇಶಿಸಲು ಅಥವಾ ವಿರೋಧಿಸಲು ಸಾಧ್ಯವಿಲ್ಲ”…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೂತನವಾಗಿ ಮರು ವಿಂಗಡಣೆ ಆಗಿರುವ ವಾರ್ಡ್ ಒಂದಕ್ಕೆ ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ರವರ ಹೆಸರನ್ನು ಇಡಬೇಕೆಂದು ಬೆಂಗಳೂರಿನ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಭಾಗ್ಯವತಿ ಅಮರೇಶ್ ಎಂಬುವವರು ಸಿಎಂ ಬೊಮ್ಮಾಯಿಗೆ ಮನವಿ ಸಲ್ಲಿಸಿದ್ದಾರೆ. ಪುನೀತ್ ರಾಜ್‌ಕುಮಾರ್ ರವರು ನಟನೆ ಮತ್ತು ಸಾಮಾಜಿಕ ಕಾರ್ಯದಿಂದ ಅತ್ಯಂತ ಜನಪ್ರಿಯರಾಗಿದ್ದರು. ಇವರ ಅಕಾಲಿಕ ಮರಣದಿಂದ ಕರ್ನಾಟಕ ಮತ್ತು ದೇಶದ ಇತರೆ ರಾಜ್ಯದ ಜನತೆ ನೋವು ಅನುಭವಿಸುವಂತೆ ಮಾಡಿದೆ. ಹೀಗಾಗಿ ಬಿಬಿಎಂಪಿಯ 198 ರಿಂದ 243ಕ್ಕೆ ಮರು ವಿಂಗಡಣಿ ಆಗುತ್ತಿದ್ದು, ಹೊಸದಾಗಿ ಸೇರ್ಪಡೆಯಾಗುತ್ತಿರುವ ವಾರ್ಡ್‌ಗಳಿಗೆ ನಾಮಕರಣ ಮಾಡುವಾಗ ಯಾವುದಾದರು ಒಂದು ವಾರ್ಡ್‌ಗೆ ಅಥವಾ ಪುನೀತ್ ರಾಜ್‌ಕುಮಾರ್ ರವರು ವಾಸವಿದ್ದ ಮನೆಯ ವಾರ್ಡ್‌ಗೆ ಅವರ ಹೆಸರನ್ನು ಇಟ್ಟು ಶಾಶ್ವತವಾಗಿ ಅವರ ಹೆಸರು ಉಳಿಯುವಂತೆ ಮಾಡಬೇಕಿದೆ ಎಂದು ಮನವಿ ಪತ್ರದಲ್ಲಿ ಕೋರಿಕೊಳ್ಳಲಾಗಿದೆ. ಒಂದು ಬೀದಿಗೆ, ಒಂದು ವೃತ್ತಕ್ಕೆ ಅಥವಾ ರಸ್ತೆಗೆ ಅವರ ಹೆಸರನ್ನ ಇಡುವುದಕ್ಕಿಂತ ಸಂಪೂರ್ಣ ಒಂದು ವಾರ್ಡ್‌ಗೆ ಅವರ ಹೆಸರನ್ನು ಇಟ್ಟರೆ…
ದೆಹಲಿ ಸಚಿವ ಸತ್ಯೇಂದ್ರ ಜೈನ್ ಮತ್ತು ಅವರ ಸಹಚರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಅವರ ಮನೆ ಮೇಲೆ ಇಂದು ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿ ವೇಳೆ 2.85 ಕೋಟಿ ರೂಪಾಯಿ ಅನಾಮದೇಯ ನಗದು ಮತ್ತು 133 ಚಿನ್ನದ ನಾಣ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಇಡಿ ಹಿಂದಿನ ದಿನ 7 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಪ್ರಕಾಶ್ ಜ್ಯುವೆಲರ್‌ನಿಂದ 2.23 ಕೋಟಿ ನಗದು, 41.5 ಲಕ್ಷ ನಗದು ಮತ್ತು 133 ಚಿನ್ನದ ನಾಣ್ಯಗಳು ವೈಭವ್ ಜೈನ್ ಅವರ ಮನೆಯಲ್ಲಿ ಪತ್ತೆಯಾಗಿದೆ. ಹಾಗೆ, ವೈಭವ್ ಮತ್ತೊಬ್ಬ ಆಪ್ತ ಸ್ನೇಹಿತ ಜಿ.ಎಸ್.ಮಥಾರು ಅವರಿಂದ 20 ಲಕ್ಷ ರೂ. ಅನ್ನು ಇಡಿ ವಶ ಪಡಿಸಿಕೊಂಡಿದೆ. ಸಚಿವ ಜೈನ್ ಅವರನ್ನು ಮೇ 30 ರಂದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿದೆ ಮತ್ತು ಜೂನ್ 9 ರವರೆಗೆ ಇಡಿ ಕಸ್ಟಡಿಯಲ್ಲಿದ್ದಾರೆ. ಇಡಿ ಆಭರಣ ವ್ಯಾಪಾರಿ ಸೇರಿದಂತೆ ಸುಮಾರು 7 ಸ್ಥಳಗಳಲ್ಲಿ…
ತುರುವೇಕೆರೆ: ಈ ಸಮಾಜ ನನಗೇನು ನೀಡಿದೆ ಅನ್ನುವುದಕ್ಕಿಂತ ಸಮಾಜಕ್ಕೆ ನಾನೇನು ಕೊಡುಗೆ ನೀಡಿದ್ದೇನೆ ಎಂದು ನಾವೆಲ್ಲಾ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹುಲ್ಲೇಕೆರೆ ಸಮಾಜ ಸೇವಕ ಎಚ್.ಬಿ.ಗಂಗಾಧರಯ್ಯ ಹೇಳಿದರು. ತಾಲ್ಲೂಕಿನ ದಂಡಿನಶಿವರ ಹೋಬಳಿಯ ದೊಂಬರನಹಳ್ಳಿ ಗ್ರಾಮದ ಶ್ರೀ ಸೋಮೇಶ್ವರ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ನೋಟ್ ಬುಕ್, ಲೇಖನ ಸಾಮಗ್ರಿಗಳ ವಿತರಣೆ ಹಾಗೂ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದ ಹಳ್ಳಿಗಳಲ್ಲಿ ಸಾಕಷ್ಟು ಪ್ರತಿಭಾವಂತ ಮಕ್ಕಳಿದ್ದಾರೆ ಅವರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಆರ್ಥಿಕ ನೆರವಿನ ಕೊರತೆಯಿಂದಾಗಿ ಎಷ್ಟೋ ಪ್ರತಿಭೆಗಳು ಉನ್ನತ ಮಟ್ಟದ ವ್ಯಾಸಂಗ ಮಾಡಲು ಸಾಧ್ಯವಾಗದ ಸ್ಥಿತಿ ಇದೆ. ನಾವು ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ಪೂರಕವಾದ ಪ್ರೋತ್ಸಾಹವಿಲ್ಲದ ಕಷ್ಟದ ದಿನಗಳನ್ನು ಕಂಡಿದ್ದೇನೆ. ಸಮಾಜದಲ್ಲಿ ಬಹಳ ಮಂದಿ ಸ್ಥಿತಿವಂತರಿದ್ದಾರೆ. ಅವರೆಲ್ಲಾ ಬಡಬಗ್ಗರಿಗೆ ತಮ್ಮ ಕೈಲಾದ ಸಹಾಯ ಮಾಡಿದರೆ ನಿರ್ಗತಿಕರೂ ಸಮಾಜದಲ್ಲಿ ಕೊಂಚ ಮುಂದೆ ಬರಲು ಸಾಧ್ಯವಿದೆ ಆದರೆ ಇಂತಹ ಮೌಲ್ಯಯುತ ಆಲೋಚನೆಗಳನ್ನು ಇಂದು ಕಾಣಲು ಸಾಧ್ಯವಿಲ್ಲ. ಬಲಗೈಯಲ್ಲಿ ಮಾಡಿದ ದಾನವು ಎಡಗೈಯಿಗೆ ತಿಳಿಯಬಾರದು…
ಮೈಸೂರು: ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ವಿರೋಧಿಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ. ಮೈಸೂರು: ವಿಶ್ವವಿದ್ಯಾನಿಲಯದ ಸಂಶೋಧಕರ ನೂತನ ವಿದ್ಯಾರ್ಥಿ ನಿಲಯವು ಉದ್ಘಾಟನೆಗೊಂಡು ಒಂದೂವರೆ ವರ್ಷ ಕಳೆದರೂ ವಿಶ್ವವಿದ್ಯಾನಿಲಯವು ಇನ್ನೂ ಸಹ ಪ್ರವೇಶಾತಿಯನ್ನು ನೀಡದೆ ವಿಳಂಬ ಮಾಡುತ್ತಿರುವುದರಿಂದ ಹಲವಾರು ಸಂಶೋಧನಾ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ತೊಂದರೆ ಉಂಟಾಗಿದ್ದು, ಇದನ್ನು ಪ್ರಶ್ನಿಸಿ ಮೈಸೂರು ವಿಶ್ವವಿದ್ಯಾನಿಯದಲ್ಲಿ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿದರು. ಕುಲಪತಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ ಪ್ರತಿಭಟನಾಕಾರರು, ಸಂಶೋಧಕರ ವಿದ್ಯಾರ್ಥಿನಿಲಯದ ಪ್ರವೇಶಾತಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಮತ್ತು ಪರೀಕ್ಷಾ ಶುಲ್ಕ ಕೂಡಲೇ ಕಟ್ಟಬೇಕೆಂದು ಮೈಸೂರು ವಿವಿ ಆದೇಶ ಹೊರಡಿಸಿರುವ ಆದೇಶವನ್ನು ರದ್ದುಪಡಿಸಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಬಂದನಂತರ ಶುಲ್ಕಗಳನ್ನು ಕಡಿತಗೊಳಿಸಬೇಕೆಂದು ಒತ್ತಾಯಿಸಿ ದರು. ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಇದೆ. ಅದೇ ದಿನ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಪರೀಕ್ಷೆಯನ್ನು ಮುಂದೂಡಬೇಕು ಎಂದು ಇದೇ ವೇಳೆ…