Author: admin

ತುಮಕೂರು : ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವನ ಭೀಕರ ಕೊಲೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ತುಮಕೂರು ನಗರದ ಜಿಸಿಆರ್ ಕಾಲೋನಿಯ ಮುಬಾರಕ್ ಪಾಷಾ(35)  ಎಂದು ಗುರುತಿಸಲಾಗಿದೆ. ಈತ ಕಳೆದ ರಾತ್ರಿ ನಗರದ ಖಾಸಗಿ ಬಸ್ ನಿಲ್ದಾಣಕ್ಕೆ ಬಂದಿದ್ದನು ಎನ್ನಲಾಗಿದೆ. ಈ ವೇಳೆ ಯಾರೋ ಅಪರಿಚಿತರು ಮಾರಕಾಸ್ತ್ರಗಳಿಂದ ಚುಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾದ ವ್ಯಕ್ತಿ ನಗರದ ಗುಬ್ಬಿ ಗೇಟ್ ಬಳಿ ಹಮಾಲಿ ಕೆಲಸ ಮಾಡಿಕೊಂಡಿದ್ದನು. ಯಾರೊಂದಿಗೋ ಗಲಾಟೆ ಮಾಡಿಕೊಂಡು ಈತ ಕೊಲೆಯಾಗಿರುವ ಶಂಕೆ ಇದ್ದು. ಕೊಲೆಗೆ ನಿಖರ ಕಾರಣ ಪೊಲೀಸ್ ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ವಾಡ್, ಡಿವೈಎಸ್ಪಿ ಶ್ರೀನಿವಾಸ್, ನಗರ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ವರದಿ: ಮಂಜುಸ್ವಾಮಿ.ಎಂ.ಎನ್ .   ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಬೆಂಗಳೂರು: ಸಿದ್ದರಾಮಯ್ಯ ಸುಳ್ಳನ್ನೇ ಮನೆ ದೇವ್ರು ಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅವರಷ್ಟು ಸುಳ್ಳನ್ನು ಕರಗತ ಮಾಡಿಕೊಂಡವರು ಯಾರು ಇಲ್ಲ. ಸುಳ್ಳಿನ ವಿಚಾರದಲ್ಲಿ ಅವರಿಗೆ ಪೈಪೋಟಿ ನೀಡಲು ಅಸಾಧ್ಯವಾಗಿದೆ ಎಂದು ಹೇಳಿದ್ದಾರೆ. ಸತ್ಯದ ತಲೆ ಮೇಲೆ ಹೊಡೆಯುವ ಹಾಗೇ ಸುಳ್ಳು ಹೇಳುತ್ತಾರೆ. ಸುಳ್ಳು ಎಲ್ಲವನ್ನೂ ಎಂಬುದು ಸಿದ್ದರಾಮಯ್ಯನವರ ಸಿದ್ಧಾಂತ ಹೇಳಲಾಗಿದೆ ಎಂದು ಬಿಜೆಪಿ ನಾಯಕ ಸಿ.ಟಿ ರವಿ ಕಿಡಿಕಾರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಫುಡ್ ಪಾಯಿಸನ್ ನಿಂದ ಮೂರು ಅನಾಥ ಮಕ್ಕಳು ಸಾವನ್ನಪ್ಪಿ ಎಂಟು ಮಕ್ಕಳು ಗಂಭೀರವಾಗಿ ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ತಿರಪ್ಪೂರ್ ಅನಾಥಾಶ್ರಮದಲ್ಲಿ ಈ ಘಟನೆ ನಡೆದಿದೆ. ಇದೀಗ ಅನಾಥಾಶ್ರಮ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಾಗಿದ್ದು ಈ ಕುರಿತು ತಿರಪ್ಪೊರ್ ಜಿಲ್ಲಾಧಿಕಾರಿ ವಿನೀತ್ ಮಾಹಿತಿ ನೀಡಿದ್ದಾರೆ. ರಾತ್ರಿ ಆಹಾರ ಸೇವಿಸಿದ ಬಳಿಕ ಕೆಲವರಿಗೆ ವಾಂತಿ ಮತ್ತು ಭೇದಿಯಾಗಿದ್ದು, ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಮಧ್ಯೆ ಆಸ್ಪತ್ರೆಯಲ್ಲಿ ಮೂವರು ಬಾಲಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪುನೀತ್ ರಾಜ್​ಕುಮಾರ್ ಅವರ ಗಂಧದ ಗುಡಿ ಡಾಕ್ಯುಮೆಂಟರಿ ಚಿತ್ರದ ಟೀಜರ್ ಅ.9ರಂದು ರಿಲೀಸ್ ಆಗಲಿದೆ. ಅಕ್ಟೋಬರ್ 9ರಂದು ಬೆಳಗ್ಗೆ 10:19ಕ್ಕೆ ಪಿಆರ್​ಕೆ ಆಡಿಯೋ ಯೂಟ್ಯೂಬ್​ ಚಾನೆಲ್​ನಲ್ಲಿ ‘ಗಂಧದಗುಡಿ’ಯ ಟ್ರೇಲರ್ ರಿಲೀಸ್ ಆಗಲಿದೆ. ಪುನೀತ್​ ರಾಜ್​ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ಆಗಿತ್ತು. ಇದನ್ನು ಜನರ ಮುಂದಿಡುವ ಮೊದಲೇ ಪುನೀತ್ ಅವರು ಇಹಲೋಕ ತ್ಯಜಿಸಿದರು. ಇದೀಗ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಈ ಸಾಕ್ಷ್ಯಚಿತ್ರವನ್ನು ಜನರ ಮುಂದೆ ಇಡುತ್ತಿದ್ದಾರೆ. ಅಕ್ಟೋಬರ್ 29ರಂದು ಪುನೀತ್ ನಿಧನ ಹೊಂದಿ ಒಂದು ವರ್ಷ ಆಗಲಿದೆ. ಅದಕ್ಕೂ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 28ರಂದು ಈ ಡಾಕ್ಯುಮೆಂಟರಿ ಥಿಯೇಟರ್​​ನಲ್ಲೇ ರಿಲೀಸ್ ಆಗಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರಿನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ವಿವೋ ಪ್ರೋ ಕಬಡ್ಡಿ ಲೀಗ್‌ನ 9ನೇ ಆವೃತ್ತಿಗೆ ಚಾಲನೆ ಸಿಕ್ಕಿದೆ. ಹಾಲಿ ಚಾಂಪಿಯನ್ ‌ದಬಾಂಗ್‌ ಡೆಲ್ಲಿ ಕೆಸಿ ತಂಡವು ಎರಡನೇ ಋತುವಿನ ಚಾಂಪಿಯನ್‌ ಯು ಮುಂಬಾ ವಿರುದ್ಧ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಶುಕ್ರವಾರದಂದು ನಡೆಯುವ ಮೊದಲ ಪಂದ್ಯದಲ್ಲಿ ಎದುರಾಗಲಿವೆ. ಈ ಸೀಸನ್ ನ ಪಂದ್ಯಗಳು ಬೆಂಗಳೂರು, ಪುಣೆ ಮತ್ತು ಹೈದರಾಬಾದ್‌ನಲ್ಲಿ ನಡೆಯಲಿದ್ದು, ಮೂರು ವರ್ಷಗಳ ನಂತರ ಕಬಡ್ಡಿ ಪ್ರೇಕ್ಷಕರು ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸುವ ಅವಕಾಶ ಪಡೆಯುವುದು ಸಿಕ್ಕಿದೆ. ವಿವೋ ಪ್ರೋ ಕಬಡ್ಡಿ ಲೀಗ್‌ನ ಸಂಘಟಕರಾದ ಮಷಾಲ್‌ ಸ್ಪೋರ್ಟ್ಸ್‌ ಬೆಂಗಳೂರಿನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ವಿವೋ ಪ್ರೋ ಕಬಡ್ಡಿ ಲೀಗ್‌ನ 9ನೇ ಆವೃತ್ತಿಗೆ ಚಾಲನೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಅರ್ಜೆಂಟೀನಾದ ಸೂಪರ್ ಸ್ಟಾರ್ ಪುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಪುಟ್ಬಾಲ್ ಆಟಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ. 2022 ರ ಕತಾರ್ ವಿಶ್ವಕಪ್ ತಮ್ಮ ಕೊನೆಯ ವಿಶ್ವಕಪ್ ಎಂದು ಲಿಯೋನೆಲ್ ಮೆಸ್ಸಿ ಹೇಳಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ‘ಖಂಡಿತವಾಗಿಯೂ ಇದು ನನ್ನ ಕೊನೆಯ ವಿಶ್ವಕಪ್. ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ’ಎಂದು ಮೆಸ್ಸಿ ಹೇಳಿಕೊಂಡಿದ್ದಾರೆ. ಪಂದ್ಯಾವಳಿಗಾಗಿ ನಾನು ಕಾಯುತ್ತಿದ್ದೇನೆ. ಉತ್ತಮ ಆಟವನ್ನು ಆಡೋದಕ್ಕೆ ಉತ್ಸುಕನಾಗಿದ್ದೇನೆ ಎಂದು ಮೆಸ್ಸಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಅನಾರೋಗ್ಯದಿಂದ ಬಳಲುತ್ತಿದ್ಧಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು‌ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಬ್ಬಾರ್ ಖಾನ್ ಅವರು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿದ್ದ ಕರ್ತವ್ಯ ನಿರ್ವಹಿಸಿದ್ದರು. ಜಬ್ಬಾರ್ ಖಾನ್ ಹೊನ್ನಳ್ಳಿ ಅಗಲಿಕೆಗೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ದಸರಾ ಜಂಬೂ ಸವಾರಿ ಯಶಸ್ವಿಗೆ ಕಾರಣರಾದ ಗಜಪಡೆಯ ಕಾವಾಡಿ ಮತ್ತು ಮಾವುತರಿಗೆ ಅರಮನೆ ಆಡಳಿತ ಮಂಡಳಿ ವತಿಯಿಂದ ಗೌರವ ಧನ ನೀಡಿ ಸನ್ಮಾನಿಸಲಾಯಿತು. ಯಶಸ್ವಿ ದಸರಾ ಮಹೋತ್ಸವದ ಬಳಿಕ ಗಜಪಡೆ ಮತ್ತು ಕಾವಾಡಿ,ಮಾವುತ ಕುಟುಂಬ ತವರಿಗೆ ಹಿಂದಿರುಗುತ್ತಿದ್ದು, ಮಾವುತ ಮತ್ತು ಕಾವಾಡಿಗಳಿಗೆ ತಲಾ 10 ಸಾವಿರ ನೀಡಿ ಜಿಲ್ಲಾಡಳಿತದ ವತಿಯಿಂದ ಸನ್ಮಾನ ಮಾಡಲಾಯಿತು. ಎರಡು ತಿಂಗಳಿಂದ ನಾಡಿಗೆ ಹೊಂದಿಕೊಂಡಿದ್ದ ಮಾವುತ ಕಾವಾಡಿ ಕುಟುಂಬ ಭಾರವಾದ ಮನಸ್ಸಿನಲ್ಲಿ ತವರಿಗೆ ಪಯಣ ಬೆಳೆಸುತ್ತಿದ್ದಾರೆ. ಯಶಸ್ವಿ ದಸರಾ ಆಚರಣೆಗೆ ಕಾರಣರಾದ ಎಲ್ಲರಿಗೂ ಧನ್ಯವಾದ ತಿಳಿಸಿದ ಡಿಸಿಎಫ್ ಕರಿಕಾಳನ್. ಯಶಸ್ವಿ ದಸರಾ ಆಚರಣೆಗೆ ಕಾರಣರಾದ ಎಲ್ಲರಿಗೂ ಡಿಸಿಎಫ್ ಕರಿಕಾಳನ್ ಧನ್ಯವಾದ ತಿಳಿಸಿದರು. ಶ್ರೀ ಚಾಮುಂಡಿ ತಾಯಿಯ ಆಶೀರ್ವಾದದಿಂದ ಈ ಬಾರಿ ಅದ್ದೂರಿ ದಸರಾ ನಡೆಯಿತು. ನಾನು ಆರೇಳು ವರ್ಷಗಳಿಂದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. ಈ ಬಾರಿಯ ದಸರಾ ಮಹೋತ್ಸವದ ಜಂಬೂಸವಾರಿಗೆ ಭಾರಿ ಜನಸ್ತೋಮ ಸೇರಿತ್ತು. ಅದ್ದೂರಿಯಾಗಿ ದಸರಾ ಜಂಬೂಸವಾರಿ ಜರುಗಿತು. ಇದಕ್ಕೆ ಕಾರಣಕರ್ತರಾದ ಎಲ್ಲರಿಗೂ ಧನ್ಯವಾದಗಳು ಎಂದರು.…

Read More

ತುಮಕೂರು: ಕೊರಟಗೆರೆ ಪಿಎಸ್ ಐ ಬಿ.ನಾಗರಾಜುರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ರಾಜ್ಯ ಪೊಲೀಸ್ ಇಲಾಖೆ ಆದೇಶ‌ ಹೊರಡಿಸಿದೆ. ಕೊರಟಗೆರೆ ಕೇಂದ್ರ ವಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಪಿ ಎಸ್ ಐ ಬಿ.ನಾಗರಾಜುರನ್ನು ಸಾರ್ವಜನಿಕ/ಕಾನೂನು ಮತ್ತು ಸುವ್ಯವಸ್ಥೆಯ ಹಿತದೃಷ್ಠಿಯ ಮೇರೆಗೆ ಸ್ಥಳ ನಿಯುಕ್ತಿಗೊಳಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ರಾಜ್ಯ ಪೊಲೀಸ್ ಮಹಾನಿರೀಕ್ಷಕರ ಕಛೇರಿಯಿಂದ ಆದೇಶ ಹೊರಡಿಸಲಾಗಿದೆ. ಪಿಎಸ್ ಐ ನಾಗರಾಜುಗೆ ಯಾವುದೇ ಸ್ಥಳವನ್ನು ಸೂಚಿಸಿದೇ ವರ್ಗಾವಣೆ ಮಾಡಿ ಆದೇಶ‌ ಹೊರಡಿಸಲಾಗಿದೆ. ನೂತನ ಪಿಎಸ್ ಐ ಆಗಿ ಜಿ.‌ಚೇತನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.  ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮುಂಬೈನ ಕುರ್ಲಾ ಪೂರ್ವದ ಬಂದರ್ ಭವನ ಪ್ರದೇಶದಲ್ಲಿ ಚರಂಡಿಯಲ್ಲಿ ದುರ್ವಾಸನೆ ಬರುತ್ತಿತ್ತು. ಅನುಮಾನಗೊಂಡ ನಾಗರಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ಚೀಲವನ್ನು ವಶಕ್ಕೆ ಪಡೆದು ತೆರೆದರು. ಅದರಲ್ಲಿ 25 ವರ್ಷದ ಮಹಿಳೆಯ ಶವ ಕಂಡು ಪೊಲೀಸರೇ ಬೆಚ್ಚಿಬಿದ್ದರು. ಮಹಿಳೆಯ ಕೈ ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು. ಇದರಿಂದ ನಿಗೂಢ ವ್ಯಕ್ತಿಗಳು ಮಹಿಳೆಯನ್ನು ಕೊಂದು ಹಗ್ಗದಿಂದ ಕಟ್ಟಿ ಚರಂಡಿಗೆ ಎಸೆದಿರುವುದು ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಆ ಪ್ರದೇಶದಲ್ಲಿ ನಾಪತ್ತೆಯಾಗಿರುವ ಹಾಗೂ ಅಪಹರಣಕ್ಕೊಳಗಾದ ಮಹಿಳೆಯರ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅಲ್ಲದೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತೀವ್ರ ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More