Subscribe to Updates
Get the latest creative news from FooBar about art, design and business.
- ಎನ್ ಎಂಎಂಎಸ್ ಆ್ಯಪ್ ಅಪ್ ಡೇಟ್ ಕಿರಿಕಿರಿ: ಬೀದರ್ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
- ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
- ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
- ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
- ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
- ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
- ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
- ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
Author: admin
ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ಡಿ.ಕೆ.ಶಿವಕುಮಾರ್ ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ನನಗೆ ಮತ್ತು ನನ್ನ ತಮ್ಮ ಡಿ.ಕೆ. ಸುರೇಶ್ ಗೆ ಇಡಿಯವರು ಮತ್ತೆ ನೋಟಿಸ್ ನೀಡಿದ್ದಾರೆ ಎಂದು ಹೇಳಿದ್ದಾರೆ. 7 ನೇ ತಾರೀಖು ನನಗೆ ಹಾಗೂ ಡಿ.ಕೆ .ಸುರೇಶ್ ಗೆ ನೋಟಿಸ್ ಕೊಟ್ಟಿದ್ದಾರೆ. ರಾಹುಲ್ ಗಾಂಧಿ ಅಂದು ಆದಿಚುಂಚನಗಿರಿಗೆ ಹೋಗುತ್ತಿದ್ದಾರೆ. 7ನೇ ತಾರೀಖು ಬಿಟ್ಟು ಬೇರೆ ದಿನ ಕೊಡಿ ಅಂತ ಇನ್ನೊಮ್ಮೆ ಮನವಿ ಮಾಡಿಕೊಂಡಿರುವುದಾಗಿ ಡಿಕೆಶಿ ಹೇಳಿದ್ದಾರೆ. ಪ್ರಿಯಾಂಕ ಗಾಂಧಿ ಕೂಡ ಭೇಟಿ ನೀಡುವ ಸಾಧ್ಯತೆ ಇದೆ. ನಾನು ಇಲ್ಲದೇ ಹೋದ್ರೆ ತಪ್ಪಾಗುತ್ತದೆ. ಎಲ್ಲಾ ಜವಾಬ್ದಾರಿ ನನ್ನ ತಮ್ಮನೇ ಮಾಡುತ್ತಿದ್ದಾನೆ. ಇಲ್ಲಿಂದ ಅಲ್ಲಿಯವರಗೂ ಬ್ಯಾನರ್ ಕಟ್ಟುತ್ತಿದ್ದಾನೆ. ಆದಿಚುಂಚನಗಿರಿಯಲ್ಲಿ ರಾಹುಲ್ ಗಾಂಧಿ ತಂಗಲಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ನೋಟಿಸ್ ನೀಡಿರುವ…
ಮಧುಗಿರಿ: ಗಾಂಧಿ ಜಯಂತಿ ಹಬ್ಬದ ಪ್ರಯುಕ್ತವಾಗಿ ಮಧುಗಿರಿ ದಂಡಿ ಮಾರಮ್ಮನ ಸನ್ನಿಧಿಯ ಸುತ್ತಮುತ್ತ ಬಿಜೆಪಿ ಜಿಲ್ಲಾ ಮತ್ತು ತಾಲೂಕು ಯುವ ಮೋರ್ಚಾ ಬಳಗದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಮತ್ತು ಸುತ್ತಮುತ್ತ ಕಸವನ್ನು ಹಾಕದೆ, ತಾಯಿ ದಂಡಿ ಮಾರಮ್ಮನ ಸನ್ನಿಧಿಯನ್ನು ಸಾರ್ವಜನಿಕರು ಯಾವಾಗಲೂ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ಬಿಜೆಪಿ ಯುವ ಮೋರ್ಚಾ ಶಿವಕುಮಾರ್ ಸ್ವಾಮಿ ಹೇಳಿದರು. 15 ದಿನಗಳಿಂದ ಆರೋಗ್ಯ ಕ್ಷೇಮ ರಕ್ತದಾನ ಇಂದು ಸ್ವಚ್ಛತಾ ಕಾರ್ಯಕ್ರಮ ಮಾಡಿಕೊಂಡು ಬರುತ್ತಿದ್ದೇವೆ. ಎಲ್ಲರಿಗೂ ಗಾಂಧಿ ಜಯಂತಿ ಹಾಗೂ ಶಾಸ್ತ್ರಿ ಜಯಂತಿಯ ಶುಭಾಶಯಗಳು ಎಂದು ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಾಲಿ ಭರತ್ ಕೋರಿದರು. ಈ ಸಂದರ್ಭದಲ್ಲಿ ಮಾಲಿ ಭರತ್ ಜಿಲ್ಲಾಧ್ಯಕ್ಷರು, ಶಿವಕುಮಾರ ಸ್ವಾಮಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ರುದ್ರೇಶ್ ಟಿ.ಎನ್.ರಾಜ್ಯ ಕಾರ್ಯಕಾರಿ ಸದಸ್ಯರು, ಮಂಡಲ ಅಧ್ಯಕ್ಷರು ಕಾರ್ತಿಕ ಆರಾಧ್ಯ, ಕೊರಟಗೆರೆ ಮಂಡಲ ಅಧ್ಯಕ್ಷ ಅರುಣ್ ಕೆ.ಎಸ್., ಪ್ರಧಾನ ಕಾರ್ಯದರ್ಶಿ ದೀಕ್ಷಿತ್, ತೇಜಸ್ ಗೌಡ ಸುರೇಶ್, ಲಕ್ಷ್ಮಿಪತಿ,…
ಮಧುಗಿರಿ: ಪರಿಸರ ಪ್ರಜ್ಞೆ ಪ್ರತಿಯೊಬ್ಬರಲ್ಲೂ ಇರಬೇಕಾಗಿದೆ ಎಂದು 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಯಾದವ್ ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ , ಕಂದಾಯ ಇಲಾಖೆ , ಉಪವಿಭಾಗಧಿಕಾರಿಗಳ ಕಾರ್ಯಾಲಯ, ತಾಲೂಕು ಪಂಚಾಯತ್, ಪುರಸಭೆ ಇವರ ಸಂಯುಕಾಶ್ರಯದಲ್ಲಿ ” ಐತಿಹಾಸಿಕ ಕಲ್ಯಾಣಿಗಳ ಸ್ವಚ್ಛತಾ ಕಾರ್ಯಕ್ರಮ ” ಅಂಗವಾಗಿ ಛತ್ರತೋಪಿನ ಬಳಿ ಇರುವ ಆಂಜನೇಯ ಸ್ವಾಮಿ ದೇವಸ್ಥಾನ ಬಳಿ ಸ್ವಚ್ಚತಾ ಪ್ರತಿಜ್ಞೆಯನ್ನು ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು. ಪೂರ್ವಿಕರು ನಿರ್ಮಿಸಿರುವ ನೀರಿನ ಸೆಲೆಗಳನ್ನು ಉಳಿಸಿಕೊಂಡು ಹೋಗಬೇಕು. ಹೊಸದು ನಿರ್ಮಾಣ ಮಾಡುವುದರ ಬದಲು ಇರುವುದನ್ನೇ ಮಲಿನಗೊಳಿಸದೆ ಸ್ವಚ್ಛವಾಗಿಟ್ಟುಕೊಂಡು. ಪುರಾತನ ಕಲ್ಯಾಣಿಗಳ ಉಳಿಸಿಕೊಂಡರೆ ಸಾಕು. ಸರ್ಕಾರ ಮತ್ತು ನೌಕರರೇ ಸ್ವಚ್ಛತೆ ಮಾಡಬೇಕೆಂಬುದಲ್ಲ ಜನರು ಕೂಡ ಇದರಲ್ಲಿ ಸ್ವಯಂಪ್ರರಣೆಯಿಂದ ಪಾಲ್ಗೊಳ್ಳಬೇಕೆಂದರು. ಕಲ್ಯಾಣಿಗಳನ್ನು ಮಲಿನಗೊಳಿಸದೆ ಇರುವುದು ಸಾರ್ವಜನಿಕರ ಕರ್ತವ್ಯ. ಅಪವಿತ್ರ ಮಾಡುವುದರ ಬದಲು ಪವಿತ್ರವಾಗಿ ಇರಿಸಿಕೊಳ್ಳಬೇಕು ಕಲ್ಯಾಣಿಗಳ ಬಳಿ ಬಟ್ಟೆ ಒಗೆಯೋದು ಮತ್ತಿತರ ಚಟುವಟಿಕೆಗಳಿಂದ ಸಾರ್ವಜನಿಕರು ದೂರವಿರಬೇಕು…
ಕೊಪ್ಪಳ: ಕೆಲಸದಿಂದ ಗ್ರಾಮಕ್ಕೆ ಮರಳುವಾಗ ಹಳ್ಳದ ನೀರಿನ ರಭಸಕ್ಕೆ ನಾಲ್ವರು ಮಹಿಳೆಯರು ಕೊಚ್ಚಿಹೋದ ದುರ್ಘಟನೆ ಯಲಬುರ್ಗಾ ತಾಲ್ಲೂಕಿನ ಸಂಕನೂರು ಗ್ರಾಮದಲ್ಲಿ ನಡೆದಿದೆ. ಗಿರಿಜಾ ಮಾಲಿಪಾಟೀಲ್(32), ಭುವನೇಶ್ವರಿ ಪೊಲೀಸ್ ಪಾಟೀಲ್(40), ಪವಿತ್ರಾ ಪೊಲೀಸ್ ಪಾಟೀಲ್(45) ಮತ್ತು ವೀಣಾ ಮಾಲಿಪಾಟೀಲ್(19) ಹಳ್ಳದಲ್ಲಿ ಕೊಚ್ಚಿಕೊಂಡು ಹೋದ ದುರ್ದೈವಿಗಳು. ಕೆಲಸ ಮುಗಿಸಿಕೊಂಡು ಗ್ರಾಮಕ್ಕೆ ವಾಪಸಾಗುವಾಗ ಈ ಘಟನೆ ನಡೆದಿದೆ. ಮಹಿಳೆಯರು ನೀರಿನ ರಭಸ ಲೆಕ್ಕಿಸದೆ ಹಳ್ಳಕ್ಕೆ ಇಳಿದಿದ್ದಾರೆ. ಹಳ್ಳದಲ್ಲಿ ಇಳಿಯುತ್ತಲೇ ಪವಿತ್ರಾ ಮತ್ತು ವೀಣಾ ಎಂಬಿಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಬಳಿಕ ಗಿರಿಜಾ ಮತ್ತು ಭುವನೇಶ್ವರಿ ಅವರೂ ಕೂಡ ಕೊಚ್ಚಿಕೊಂಡು ಹೋಗಿದ್ದಾರೆ. ಆದರೆ ಕೆಲಹೊತ್ತು ಗಿರಿಜಾ ಮತ್ತು ಭುವನೇಶ್ವರಿ ಹಳ್ಳದಲ್ಲಿನ ಗಿಡ ಹಿಡಿದುಕೊಂಡಿದ್ದರು. ಗ್ರಾಮಸ್ಥರು ರಕ್ಷಿಸಲು ಮುಂದಾಗುವ ವೇಳೆಗೆ ಕೊಚ್ಚಿಹೋಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದಾರೆ. ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಇಂಡೋನೇಷ್ಯಾ: ಶನಿವಾರ ತಡರಾತ್ರಿ ಫುಟ್ಬಾಲ್ ಪಂದ್ಯದ ವೇಳೆ ನಡೆದ ಹಿಂಸಾಚಾರದಿಂದ ಕನಿಷ್ಠ 127 ಮಂದಿ ಸಾವಿಗೀಡಾದ ಘಟನೆ ಜಕಾರ್ತದ ಪೂರ್ವ ಜಾವದ ಮಲಂಗ್ ನಲ್ಲಿ ನಡೆದಿದೆ. ಪಂದ್ಯದಲ್ಲಿ ಎದುರಾಳಿ ತಂಡ ಗೆಲುವು ಸಾಧಿಸಿದ್ದರಿಂದ ರೊಚ್ಚಿಗೆದ್ದ ಅಭಿಮಾನಿಗಳು ಮೈದಾನಕ್ಕೆ ಇಳಿದು ದಾಂಧಲೆ ನಡೆಸಿದ್ದಾರೆ. ಪ್ರೇಕ್ಷಕರ ನೂಕುನುಗ್ಗಲು ಉಂಟಾಗಿ 129 ಜನರು ಸಾವನ್ನಪ್ಪಿದ್ದಾರೆ ಮತ್ತು 180 ಜನರು ಗಾಯಗೊಂಡಿದ್ದಾರೆ ಎಂದು ಇಂಡೋನೇಷ್ಯಾ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಅರೆಮಾ ಎಫ್ಸಿ ಮತ್ತು ಪರ್ಸೆಬಯಾ ಸುರಬಯಾ ನಡುವಿನ ಪಂದ್ಯ ಮುಗಿದ ನಂತರ, ಸೋತ ತಂಡದ ಬೆಂಬಲಿಗರು ಮೈದಾನಕ್ಕೆ ನುಗ್ಗಿದರು ಮತ್ತು ಪೊಲೀಸರು ಅಶ್ರುವಾಯು ಹಾರಿಸಿದರು, ಕಾಲ್ತುಳಿತ ಮತ್ತು ಉಸಿರುಗಟ್ಟಿ ಹಲವರು ಮೃತಪಟ್ಟಿದ್ದಾರೆ ಎಂದು ಪೂರ್ವ ಜಾವಾ ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಉತ್ತರ ಪ್ರದೇಶ: ಕಾನ್ಪುರದಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರಾಕ್ಟರ್ ಟ್ರಾಲಿ ಪಲ್ಟಿಯಾದ ಪರಿಣಾಮ 26 ಜನ ಸಾವನ್ನಪ್ಪಿದ ದಾರುಣ ಘಟನೆ ಕಾನ್ಪುರ ಜಿಲ್ಲೆಯ ಘಟಂಪುರ ಪ್ರದೇಶದಲ್ಲಿ ನಡೆದಿದೆ. ಭಕ್ತರನ್ನು ಹೊತ್ತ ಟ್ರ್ಯಾಕ್ಟರ್ ಟ್ರಾಲಿ ಉನ್ನಾವೋದಿಂದ ಹಿಂತಿರುಗುತ್ತಿತ್ತು. ಅಪಘಾತದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರೊಂದಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟು 26 ಜನರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ. ಯಾತ್ರಿಕರು ಫತೇಪುರದ ಚಂಡಿಕಾ ದೇವಿ ದೇವಸ್ಥಾನದಿಂದ ಹಿಂತಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದು, ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ನೀಡಲಾಗುವುದು ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಭಾರೀ ಮಳೆಗೆ ಮಹಾದೇವ ಲಕ್ಷ್ಮಪ್ಪ ಬಾಗಿಲದ ಇವರಿಗೆ ಸೇರಿದ ಮನೆ ಕುಸಿದು ತಾಯಿ – ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಯರಗಟ್ಟಿ ಸಮೀಪದ ಮಾಡಮಗೇರಿ ಗ್ರಾಮದಲ್ಲಿ ನಡೆದಿದೆ. ತಾಯಿ ಯಲ್ಲವ್ವ ಮಹಾದೇವ ಬಾಗಿಲದ(40), ಪ್ರಜ್ವಲ್(5) ಮಗು ಹಾಗೂ ಸಾವನಪ್ಪಿದ ದುರ್ದೈವಿಗಳು. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮಹಾಂತೇಶ ಮಠದ, ಸಿಪಿಐ ಮೌನೇಶ್ವರ ಮಾಲಿಪಾಟೀಲ, ಪಿಎಸ್ ಐ ಬಸನಗೌಡ ನಿರ್ಲಿ, ಎಎಸ್ ಐ ವಾಯ್ ಎಂ. ಕಡಕೋಳ, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಯಚೂರು : ಕವಿತಾಳ ಪಟ್ಟಣದ ಸಮೀಪದ ಮಾನ್ವಿ ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಲ್ಕಾಪುರದ ಶಾಲೆಯ ವಿದ್ಯಾರ್ಥಿಗಳು ರಾಯಚೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲಕರ ಥ್ರೋಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಗುಲ್ಬರ್ಗ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ಕುರಿತು ಶಾಲೆಯ ಮುಖ್ಯ ಗುರುಗಳಾದ ಮಲ್ಲಪ್ಪ ಕವಲೂರು ಮಾತನಾಡುತ್ತಾ, ನಮ್ಮ ಶಾಲೆಯಲ್ಲಿ ದೈಹಿಕ ಶಿಕ್ಷಕರು ಇಲ್ಲದಿದ್ದರು ಶಾಲೆಯ ಶಿಕ್ಷಕರ ಮತ್ತು ಹಳೆ ವಿದ್ಯಾರ್ಥಿಗಳು ಮಾರ್ಗದರ್ಶನದಿಂದ ನಮ್ಮ ಶಾಲೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾದದ್ದು ತುಂಬಾ ಹೆಮ್ಮೆಯ ವಿಷಯ. ಕಳೆದ ಎರಡು ವರ್ಷದ ಹಿಂದೆ ಕೊರೊನ ಲಾಕ್ ಡೌನ್ ಮುಂಚೆ ನಮ್ಮ ಶಾಲೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದರು. ನಮ್ಮ ಶಾಲೆಯ ಮಕ್ಕಳು ದೈಹಿಕ ಶಿಕ್ಷಕರ ಕೊರತೆಯಲು ಕ್ರೀಡಾ ಪ್ರೇಮಿಗಳ ಪ್ರೋತ್ಸಾಹದಿಂದ ವಿಭಾಗ ಮಟ್ಟಕ್ಕೆ ಆಯ್ಕೆಯಾಗುತ್ತಿರುವುದು ತುಂಬಾ ಸಂತೋಷದ ವಿಷಯ ಎಂದು ಹೇಳಿದರು. ಶಾಲೆಯ ವಿಧ್ಯಾರ್ಥಿಗಳ ಸಾಧನೆಗೆ ಎಸ್.ಡಿ.ಎಮ್.ಸಿ. ಅಧ್ಯಕ್ಷರು ಮತ್ತು ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರಾದ ರವಿಚಂದ್ರ ,…
ಕೊರಟಗೆರೆ : ಗಾಂಧಿ ಜಯಂತಿ ಅಂಗವಾಗಿ ತಾಲೂಕಿನ ಹೂಲೀಕುಂಟೆ ಗ್ರಾಮದಲ್ಲಿ ಪ್ರಯಾಣಿಕರ ತಂಗುದಾಣವನ್ನು ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಹೂಲೀಕುಂಟೆ ಗ್ರಾಪಂ ಅಧ್ಯಕ್ಷ ಮಲ್ಲಣ್ಣ ಮಾತನಾಡಿ, ತಂಗುದಾಣ ಸ್ವಚ್ಚತೆ ಇಲ್ಲದ ಕಾರಣ ಮಳೆ ಬಂದಾಗ ಪ್ರಯಾಣಿಕರು ರಸ್ತೆಯಲ್ಲಿಯೇ ನಿಂತು ಹೋಗುವಂತಹ ಅನಿವಾರ್ಯತೆ ಎದುರಾಗಿತ್ತು , ಆದ್ದರಿಂದ ಗಾಂಧಿ ಜಯಂತಿ ಅಂಗವಾಗಿ ಗ್ರಾ.ಪಂ.ನ ಸದಸ್ಯರು ಹಾಗೂ ಅಧಿಕಾರಿ ವರ್ಗದೊಂದಿಗೆ ತಂಗುದಾಣವನ್ನು ಸ್ವಚ್ಚತೆ ಮಾಡಿದ್ದೇವೆ ಎಂದರು. ಪ್ರಯಾಣಿಕರು ಪ್ರಯಾಣಿಸುವಾಗ ಉಗುಳುವುದು, ಗಲೀಜು ಮಾಡುವಂತಹ ಕೆಲಸ ಯಾರು ಮಾಡಬಾರದು, ಇದನ್ನು ನಿರ್ಮಿಸಿರುವುದೇ ನಿಮಗಾಗಿ ಆಗಾಗಿ ಗಲೀಜು ಮಾಡದಂತೆ ಗ್ರಾ.ಪಂ.ಯವರ ಜೊತೆ ಕೈಜೋಡಿಸಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಪಿಡಿಓ ಪೃಥ್ವಿಭಾ, ಸದಸ್ಯರಾದ ಪ್ರೇಮಲತಾ, ಜಯಮ್ಮ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ವರದಿ: ಮಂಜುಸ್ವಾಮಿ.ಎಂ.ಎನ್ ., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರನ್ನೇ ಜೋಡಿಸಲು ಸಾಧ್ಯವಿಲ್ಲ: ಭಾರತ್ ಜೋಡೋ ಬಗ್ಗೆ ಸಚಿವ ಎ.ನಾರಾಯಣಸ್ವಾಮಿ ಹೇಳಿಕೆ
ಕೊರಟಗೆರೆ: ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮವು ಅವರ ಪಕ್ಷದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ರವರನ್ನು ಜೋಡಿಸಲು ಸಾಧ್ಯವಿಲ್ಲ ಇನ್ನು ದೇಶವನ್ನು ಜೋಡಿಸಲು ಸಾಧ್ಯವೇ? ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಟೀಕಿಸಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ರವರ ಹುಟ್ಟು ಹುಬ್ಬದ ಅಂಗವಾಗಿ ಕೊರಟಗೆರೆ ವಿಧಾನ ಸಭಾ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿ ಡಾ.ಲಕ್ಷೀಕಾಂತ್ ಹಮ್ಮಿಕೊಂಡಿದ್ದ ವಾಲಿಬಾಲ್ ಪಂದ್ಯವಾಳಿಗಳ ಕಾರ್ಯಕ್ರಮದ ಉದ್ಘಾಟನೆಗೂ ಮುಂಚಿತವಾಗಿ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಡನೆ ಮಾತನಾಡಿದರು. ಭಾರತ್ ಜೋಡೋ ಕಾರ್ಯಕ್ರಮ ರಾಹುಲ್ ಗಾಂಧಿಯವರು ಯಾವ ಕಾರಣಕ್ಕಾಗಿ ಮಾಡುತ್ತಿದ್ದರೂ ತಿಳಿಯುತ್ತಿಲ್ಲ,ಕರ್ನಾಟಕದಲ್ಲೇ ಕಾಂಗ್ರೆಸ್ ಪಕ್ಷನ್ನು ಜೋಡಿಸಲಾಗದ ಸ್ಥಿತಿ ಇದ್ದು ದೇಶ ಜೋಡಿಸಲು ಹೋಗುವುದು ಪ್ರಯೋಜನವಿದೆಯಾ ಎಂದು ಪ್ರಶ್ನಿಸಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನವರು ಬೆಳ್ಳಿಗೆ ಎದ್ದಾಗ ಅವರು ಮೊದಲು ಜಪ ಮಾಡುವುದು ಆರ್.ಎಸ್.ಎಸ್. ಸಂಘಟನೆ ಬಗ್ಗೆಯೇ, ಈ ಸಂಘಟನೆಯನ್ನು ಕಾಂಗ್ರೆಸ್ ಪಕ್ಷ ತಮ್ಮ ಅಧಿಕಾರ ಅವಧಿಗಳಲ್ಲಿ ದುರುದ್ದೇಶ ಪೂರ್ವಕವಾಗಿ…