Author: admin

ಮಧುಗಿರಿ: ಯುವಕರು ರಾಜಕೀಯದಲ್ಲಿ ಸಕ್ರಿಯರಾಗಿರಬೇಕು ಎಂದು ವಿಧಾನ ಪರಿಷತ್ ಸದಸ್ಯೆ ರಾಜೇಂದ್ರ ರಾಜಣ್ಣ ಕರೆ ನೀಡಿದರು. ಪಟ್ಟಣದ ಎಂ.ಎನ್.ಕೆ. ಸಮುದಾಯಭವನದಲ್ಲಿ ಬ್ಲಾಕ್ ಕಾಂಗ್ರೇಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಡಿಜಿಟಲ್ ಸದಸ್ಯತ್ವ ನೋಂದಣಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಇಂದು ಮಾಹಿತಿ ತಂತ್ರಜ್ಞಾನ ಪ್ರಗತಿಯಲ್ಲಿದ್ದು, ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಮಾಹಿತಿ ತಕ್ಷಣ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಡಿಜಿಟಲ್ ನೋಂದಣಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಜಿಲ್ಲೆಯಲ್ಲಿಯೇ ಪ್ರಥಮವಾಗಿ ಮಧುಗಿರಿಯಲ್ಲಿ ಪ್ರಾರಂಭಿಸಲಾಗಿದ್ದು, 252 ಬೂತ್‍ಗಳಿಂದ 70 ಸಾವಿರ ಸದಸ್ಯರನ್ನು ನೋಂದಣಿ ಮಾಡಿಸುವ ಗುರಿ ಹೊಂದಲಾಗಿದೆ ಎಂದರು. ಬಿ.ಜೆ.ಪಿ ಪಕ್ಷದ ಜನ ವಿರೋಧಿ ನೀತಿಯಿಂದಾಗಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವದಿಸಲಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೆ.ಎನ್.ರಾಜಣ್ಣ ಅವರನ್ನು ಗೆಲ್ಲಿಸುವ ಜವಾಬ್ದಾರಿ ಪ್ರತಿಯೊಬ್ಬ ಕಾರ್ಯಕರ್ತನ ಮೇಲಿದೆ. ಕೆ.ಎನ್.ರಾಜಣ್ಣ ಸಚಿವರಾಗಲಿದ್ದಾರೆ ಎಂದ ಅವರು, ನನ್ನನ್ನು ವಿಧಾನಪರಿಷತ್ ಸದಸ್ಯನ್ನನ್ನಾಗಿ ಮಾಡಲು ಕ್ಷೇತ್ರದ ಎಲ್ಲಾ ಮುಖಂಡರು ಕಾರ್ಯಕರ್ತರು ಶ್ರಮಿಸಿದ್ದು, ನಾನು ಅವರೆಲ್ಲರಿಗೂ ಆಭಾರಿಯಾಗಿದ್ದೇನೆ ಎಂದರು. ಹಿಜಾಬ್ ವಿಚಾರದಲ್ಲಿ ಬಿಜೆಪಿ ಪಕ್ಷದವರು ಯುವ ಜನತೆಯನ್ನು…

Read More

ಬೆಂಗಳೂರು : ನಗರದ ಅರಕೆರೆ ವಾರ್ಡಿನ ಮಾಜಿ ಬಿಬಿಎಂಪಿ ಸದಸ್ಯರಾದ ಮುರಳಿ ಅವರ ಹುಟ್ಟುಹಬ್ಬದ ಪ್ರಯುಕ್ತ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಬಡಬಗ್ಗರಿಗೆ ಸಹಾಯವನ್ನು ಹಾಗೂ ಅವರಿಗೆ ಬೇಕಾದ ಆಹಾರದ ಸಾಮಗ್ರಿಗಳನ್ನು ಹಂಚಲಾಯಿತು. ಬೆಂಗಳೂರು ಡಿ ಎಸ್ ಎಸ್ ಅಲ್ಪಸಂಖ್ಯಾತ ಅಧ್ಯಕ್ಷರಾದ ಬೇಗೂರು ಅಬ್ದುಲ್, ರಮೇಶ್ ಬಾಬು  ( ಹುಳಿಮಾವು ಬಿಜೆಪಿ ಮುಖಂಡರು) ಹಾಗೂ ಸ್ನೇಹಿತರಾದ ಉಪೇಂದ್ರ, ರಾಮಕೃಷ್ಣ ರೆಡ್ಡಿ, ರಘು, ಶಾಜಿರ್, ಅನ್ಸರ್, ಶ್ರೀಧರ್ ಇನ್ನಿತರ  ಶುಭಾಶಯಗಳನ್ನು ಕೋರಿದರು. ಡಿ ಎಸ್ ಎಸ್ ನಾಯಕರಾದ ಅಲ್ಪಸಂಖ್ಯಾತ ಅಧ್ಯಕ್ಷರು ಬೇಗೂರು ಅಬ್ದುಲ್ ಮಾತನಾಡಿ,  ಮಾಜಿ ಬಿಬಿಎಂಪಿ ಸದಸ್ಯರಾದ ಮುರಳಿ ಅನೇಕ ರೀತಿಯಲ್ಲಿ ಜನರಿಗೆ ನೆರವಾಗುತ್ತಿದ್ದಾರೆ, ಇವರ ಜೊತೆ ಹುಳಿಮಾವು ಬಿಜೆಪಿ ಮುಖಂಡರಾದ ರಮೇಶ್ ಬಾಬು ರವರು ಸಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರ ಪರ ಕಾರ್ಯಕ್ರಮಗಳನ್ನು ಅವರಿಗೆ ಅನುಕೂಲವಾಗುವಂತೆ ಸಹಾಯವನ್ನು ಮಾಡುತ್ತಿದ್ದಾರೆ. ಮುರಳಿ ಅವರಿಗೆ ಇನ್ನಷ್ಟು ಜನರ ಸೇವೆಯನ್ನು ಮಾಡಲು ಅವರಿಗೆ ಬೇಕಾದ ಎಲ್ಲಾ ರೀತಿಯ ಬೆಂಬಲವನ್ನು ವ್ಯಕ್ತಪಡಿಸುವುದಾಗಿ ಹೇಳಿದ…

Read More

ಪಾವಗಡ: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರ ಕನಸಿನ ಯೋಜನೆ ಡಿಜಿಟಲ್ ಸದಸ್ಯತ್ವ ನೋಂದಣಿ ಕಾರ್ಯಕ್ರಮದ ಅಂಗವಾಗಿ ಇಂದು ಅದರ ತರಬೇತಿ ಕಾರ್ಯಾಗಾರವನ್ನು ಮಧುಗಿರಿ ಬ್ಲಾಕ್ ಕಾಂಗ್ರೆಸ್ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ನೂತನ ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ರಾಜಣ್ಣ, ಪಾವಗಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ವಿ.ವೆಂಕಟೇಶ್, ನಗರ ಘಟಕದ ಅಧ್ಯಕ್ಷ ಸುದೇಶ್ ಬಾಬು, ಕೆಪಿಸಿಸಿ ವತಿಯಿಂದ ಆಗಮಿಸಿದ್ದ ತರಬೇತುದಾರ ಅನಿಲ್ ಕುಮಾರ್, ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಸುಜಿತ್, ನಗರ ಘಟಕದ ಅಧ್ಯಕ್ಷ ಮಹೇಶ್, ಉಪಾಧ್ಯಕ್ಷ ಮಣಿ ಪಿ.ಎಲ್., ಈಶ್ವರ್, ಭಾಸ್ಕರ್ ನಾಯ್ಡು, ಪಾಪಣ್ಣ ವಿ.ಹೆಚ್.ಪಾಳ್ಯ,ಹರೀಶ್ ಗೋವಿಂದ್ ಯಾದವ್, ಮದನ್ ರೆಡ್ಡಿ, ತಿಪ್ಪೇಸ್ವಾಮಿ, ಅನಿಲ್, ರಾಮಾಂಜಿ, ಹನುಮೇಶ ಸೇರಿದಂತೆ ಇನ್ನು ಹಲವಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು. ವರದಿ: ರಾಮಪ್ಪ  ಸಿ.ಕೆ.ಪುರ., ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ರಸ್ತೆಯಲ್ಲಿ ಮಚ್ಚು ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುತ್ತಿದ್ದ ವಿದೇಶಿ ಪ್ರಜೆಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಠಾಣೆ ಮುಂಭಾಗದ ಮುಖ್ಯರಸ್ತೆಯಲ್ಲಿ ನಿನ್ನೆ ಸಂಜೆ 4.30ರ ಸುಮಾರಿನಲ್ಲಿ ಐವರಿ ಕೋಸ್ಟ್ ಪ್ರಜೆ ಮಚ್ಚು ಹಿಡಿದು ಓಡಾಡುತ್ತಾ ಶಾಂತಿ-ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುತ್ತಾ ಸಾರ್ವಜನಿಕರನ್ನು ಬೆದರಿಸುತ್ತಿದ್ದನು. ವಿಷಯ ತಿಳಿದು ಎಎಸ್‍ ಐ ಆತನನ್ನು ಹಿಡಿಯಲು ಮುಂದಾಗುತ್ತಿದ್ದಂತೆ ಅವರ ಮೇಲೆ ಕೈನಿಂದ ಹಲ್ಲೆ ಮಾಡಿದ್ದಾನೆ. ಆದರೂ ಪ್ರಾಣವನ್ನು ಲೆಕ್ಕಿಸದೆ ಪೊಲೀಸರು ಆತನನ್ನು ಹಿಡಿದು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಯಾವ ವೀಸಾದಲ್ಲಿ ಆತ ಭಾರತಕ್ಕೆ ಬಂದಿದ್ದಾನೆ. ಬೆಂಗಳೂರಿಗೆ ಯಾವಾಗ ಬಂದ, ಎಲ್ಲಿ ವಾಸವಾಗಿದ್ದಾನೆ, ವೃತ್ತಿ ಏನು ಎಂಬಿತ್ಯಾದಿ ವಿಷಯಗಳನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ವಿಚ್ಛೇದಿತ ಮಹಿಳೆಯನ್ನು ಪುಸಲಾಯಿಸಿ ಪ್ರೀತಿಸುವ ನಾಟಕವಾಡಿ ಆಕೆಯೊಂದಿಗೆ ಸಂಪರ್ಕ ಬೆಳೆಸಿ ಕೊಂಡು ಮೋಸ ಮಾಡಿರುವ ವ್ಯಕ್ತಿ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಂದಿರಾನಗರದ 30 ವರ್ಷದ ನೊಂದ ಮಹಿಳೆ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕೌಟುಂಬಿಕ ಕಲಹದಿಂದಾಗಿ ಪತಿಗೆ ವಿಚ್ಛೇಧನ ನೀಡಿದ್ದ ಮಹಿಳೆ ಇಬ್ಬರು, ಮಕ್ಕಳೊಂದಿಗೆ ಇಂದಿರಾನಗರದಲ್ಲಿ ಪ್ರತ್ಯೇಕ ವಾಸವಾಗಿದ್ದಾರೆ. ಜೀವನ ನಿರ್ವಹಣೆಗಾಗಿ ಆ ಮಹಿಳೆ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಅದೇ ಕಂಪನಿಯಲ್ಲಿ ಕೆಲಸ ಮಾಡುವ ವ್ಯಕ್ತಿಯ ಪರಿಚಯವಾಗಿದೆ.ಈ ವ್ಯಕ್ತಿ ಆ ಮಹಿಳೆಯೊಂದಿಗೆ ಸಲುಗೆ ಬೆಳೆಸಿಕೊಂಡು ಪ್ರೀತಿಸುವ ನಾಟಕವಾಡಿ ವಿವಾಹವಾಗುವುದಾಗಿ ನಂಬಿಸಿ ಸಂಪರ್ಕ ಬೆಳೆಸಿದ್ದಾನೆ. ತದನಂತರ ಮದುವೆ ವಿಚಾರ ಬಂದಾಗಲೆಲ್ಲ ಒಂದೊಂದು ಸಬೂಬು ಹೇಳುತ್ತಾ ನುಣುಚಿಕೊಳ್ಳುತ್ತಿದ್ದ.2020, ಡಿಸೆಂಬರ್ 10ರಂದು ಸಬ್‍ರಿಜಿಸ್ಟಾರ್ ಕಚೇರಿಯಲ್ಲಿ ವಿವಾಹಕ್ಕೆ ಸಿದ್ದತೆ ಮಾಡಿಕೊಂಡಾಗಲೂ ನೆಪ ಹೇಳಿ ದಿನಾಂಕ ಮುಂದೂಡಿದ್ದ. ತದನಂತರವೂ ಸಂಪರ್ಕ ಬೆಳೆಸಿಕೊಂಡಿದ್ದ ವ್ಯಕ್ತಿ ತನಗೆ ವಂಚಿಸಿದ್ದಾನೆ ಎಂದು ನೊಂದ ಮಹಿಳೆ ನ್ಯಾಯಕ್ಕಾಗಿ ಪೊಲೀಸ್ ಠಾಣೆ…

Read More

ಕೆಪಿಎಸ್ ಶಾಲೆಗಳಲ್ಲಿ ಆ ಕ್ಷೇತ್ರದ ಶಾಸಕರನ್ನು ಅಧ್ಯಕ್ಷರನ್ನಾಗಿಸಿರುವ ತಿದ್ದುಪಡಿ ಆದೇಶ ನಿಯಮ ಬಾಹಿರವಾಗಿದ್ದು, ಕೂಡಲೇ ಅದನ್ನು ಹಿಂಪಡೆಯಬೇಕು ಎಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಮಹಾಪೋಷಕರಾದ ಪಿ.ನಿರಂಜನಾರಾಧ್ಯ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪೂರ್ವ ಪ್ರಾಥಮಿಕದಿಂದ 12 ನೇ ತರಗತಿಯವರೆಗೆ ಗುಣಾತ್ಮಕ ಶಿಕ್ಷಣ ಒದಗಿಸಲು ಪ್ರಾರಂಭಿಸಿರುವ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ (ಕೆಪಿಎಸ್) ಈ ಹಿಂದೆ ಶಿಕ್ಷಣ ಹಕ್ಕು ಕಾಯಿದೆ ಹಾಗು ನಿಯಮಗಳ ಅನ್ವಯ ಪಾಲಕರಿಂದ ಆಯ್ಕೆಯಾದ ಪೋಷಕ ಪ್ರತಿನಿಯೊಬ್ಬರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡುವಂತೆ 2021 ಅಕ್ಟೋಬರ್ 26ರ ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿತ್ತು.ಈ ತೀರ್ಮಾನ ನಿಯಮ ಮತ್ತು ಸುತ್ತೋಲೆಗಳ ಅನ್ವಯ ಕ್ರಮಬದ್ಧವಾಗಿತ್ತು. ಅಧ್ಯಕ್ಷರ ಜೊತೆಗೆ ಕ್ಷೇತ್ರದ ಶಾಸಕರು ಸಮಿತಿಯಲ್ಲಿ ಗೌರವಾಧ್ಯಕ್ಷರಾಗಿ ಇರುವಂತೆ ತಿಳಿಸಲಾಗಿತ್ತು. ಶಾಲೆಗಳ ಅಭಿವೃದ್ಧಿಗೆ 2 ಕೋಟಿ ರೂ. ಹಣ ಮಂಜೂರಾದ ಸುದ್ದಿ ಕೇಳಿದಾಕ್ಷಣ ಶಾಸಕರು ತಮ್ಮ ಅಧಿಕಾರ ದುರಪಯೋಗ ಪಡಿಸಿಕೊಂಡು ಸರಕಾರದ ಮೇಲೆ ಒತ್ತಡ ಹಾಕಿ, ಕ್ರಮಬದ್ಧವಾದ ಹಿಂದಿನ ತೀರ್ಮಾನವನ್ನು ಅಸಿಂಧುಗೊಳಿಸಿದ್ದಾರೆ.2022ರ ಜನವರಿ…

Read More

ಬಾಲ್ಯದಿಂದಲೂ ಅವರು ನನಗೆ ಸ್ನೇಹಿತರು. ಅವರ ಜೊತೆ ಸಂಪರ್ಕ ಇಟ್ಟುಕೊಂಡಿದ್ದರಿಂದಲೇ ನನಗೆ ಮಗುವಾಗಿದೆ. ಈ ಮಗು ಅವರದಲ್ಲವೆಂಬುದಾದರೆ ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಲಿ ಎಂದು ಸಂತ್ರಸ್ತ ಮಹಿಳೆಯು ಶಾಸಕ ರಾಜ್‍ ಕುಮಾರ್ ಪಾಟೀಲ್ ತೇಲ್ಕೂರ್‍ಗೆ ಸವಾಲು ಹಾಕಿದ್ದಾರೆ.ನಗರದ ಖಾಸಗಿ ಹೋಟೆಲ್‍ನಲ್ಲಿ ವಕೀಲ ಜಗದೀಶ್ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ನನ್ನ ಜೊತೆ ಹಲವು ವರ್ಷಗಳಿಂದ ಅವರು ಒಡನಾಟ ಇಟ್ಟುಕೊಂಡಿದ್ದರು. ಅದರ ಪರಿಣಾಮವೇ ನನಗೆ ಮಗು ಜನಿಸಿದೆ. ಈಗ ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಹೇಳುತ್ತಿದ್ದಾರೆ. ಅವರ ಮನೆ ದೇವರಾದ ವೀರಭದ್ರಸ್ವಾಮಿಯ ಮೇಲೆ ಆಣೆ ಮಾಡಿ ಹೇಳಲಿ ಎಂದು ಒತ್ತಾಯಿಸಿದರು. ನನಗೆ ಮಹಿಳೆ ಗೊತ್ತೇ ಇಲ್ಲ ಎಂದು ಹೇಳುವ ಶಾಸಕರು ಬೆಂಗಳೂರಿನ ಶಾಂಗ್ರೀಲಾ ಹೋಟೆಲ್‍ಗೆ ತಮ್ಮ ಪತ್ನಿಯನ್ನು ಕರೆದುಕೊಂಡು ಮಾತುಕತೆಗೆ ಬಂದಿದ್ದಾದರೂ ಏಕೆ? ಪರಿಚಯವಿಲ್ಲ ಎಂದ ಮೇಲೆ ಬರುವ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದರು. ನಾನು ಶಾಸಕರಿಗೆ ಯಾವುದೇ ರೀತಿಯಲ್ಲೂ ಬ್ಲಾಕ್‍ಮೇಲ್ ಮಾಡುತ್ತಿಲ್ಲ. ಪ್ರಸ್ತುತ ನಾನು ಬ್ಯೂಟಿಪಾರ್ಲರ್ ನಡೆಸುತ್ತಿದ್ದೇನೆ.…

Read More

ತುಮಕೂರು: ತುಮಕೂರು ಜಿಲ್ಲಾ ಪಂಚಾಯತ್ ತುಮಕೂರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಶಾಂತಾರಾಮ ಕೆ.ಜಿ ನಿವೃತ್ತ ಐ.ಎ.ಎಸ್. ಅಧಿಕಾರಿ ಇಂದು ಬೆಳಗ್ಗೆ  ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಾಂತಾರಾಮ ಕೆ.ಜಿ. ಅವರ ನಿಧನದ ಹಿನ್ನೆಲೆಯಲ್ಲಿ, ಸಾರ್ವಜನಿಕರು ತೀವ್ರ ನೋವು ವ್ಯಕ್ತಪಡಿಸಿದ್ದು, ಅವರ ಆತ್ಮಕ್ಕೆ ಶಾಂತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಪಾವಗಡ:  ತಾಲೂಕಿನ ವೈ.ಎನ್. ಹೊಸಕೋಟೆ  ನಾಡ ಕಚೇರಿಯಲ್ಲಿ ಸಾರ್ವಜನಿಕರಿಗೆ ಸರಿಯಾದ ಮೂಲಭೂತ ವ್ಯವಸ್ಥೆಗಳನ್ನೂ ಕಲ್ಪಿಸಲಾಗಿಲ್ಲ. ಸಾರ್ವಜನಿಕರು ದಾಖಲೆಗಳನ್ನು ಪಡೆದುಕೊಳ್ಳಲು ಕಟ್ಟಡ ಸೈಡಿನ ಕಿಟಕಿಯಲ್ಲಿ ರಣ ಬಿಸಿಲಿನಲ್ಲಿ ಕ್ಯೂ ನಿಲ್ಲುವಂತಹ ಸ್ಥಿತಿ ಎದುರಾಗಿದೆ. ಈ ಸಂಬಂಧ ಕೂಡಲೇ ಇದಕ್ಕೆ ಸಂಬಂಧ ಪಟ್ಟವರು ಸೂಕ್ತ ವ್ಯವಸ್ಥೆಯನ್ನು ಮಾಡಿಕೊಡಬೇಕು. ನಾಡ ಕಚೇರಿಯಲ್ಲೇ ಸಾರ್ವಜನಿಕರಿಗೆ ಸರಿಯಾದ ವ್ಯವಸ್ಥೆ ಮಾಡಿಕೊಡಲು ಸಾಧ್ಯವಾಗದವರು ಇನ್ನು ಜನರಿಗೆ ಏನು ಸೇವೆ ನೀಡುತ್ತಾರೆ ಎನ್ನುವ ಪ್ರಶ್ನೆಗಳನ್ನು ಇದೀಗ ಸಾರ್ವಜನಿಕರು ಕೇಳುವಂತಾಗಿದೆ. ಒಂದೋ ಕಚೇರಿಯೊಗೆ ಕರೆದು ದಾಖಲೆಗಳನ್ನು ಕೊಡಬೇಕು. ಸಾರ್ವಜನಿಕರನ್ನು ಬಿಸಿಲಲ್ಲಿ ನಿಲ್ಲಿಸಿ ಅಧಿಕಾರಿಗಳು ನೆರಳಲ್ಲಿ ಕುಳಿತು ನಡೆಸುತ್ತಿರುವ ದರ್ಬಾರ್ ಮೊದಲು ನಿಲ್ಲಿಸಬೇಕು. ನೀವು ಜನರ ಸೇವಕರೇ ಹೊರತು, ಆಳುವ ದೊರೆಗಳಲ್ಲ ಎನ್ನುವುದನ್ನು ಮೊದಲು ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು. ಇದೊಂದು ದುರಾಹಂಕಾರದ ಪರಮಾವಧಿ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಡಾ.ರೆಡ್ಡೀಸ್ ಫೌಂಡೇಶನ್ ತುಮಕೂರು ಸಂಸ್ಥೆಯ ಸಹಭಾಗಿತ್ವದಲ್ಲಿ  ಉದ್ಯೋಗ ನೀಡುವ ಸಂಬಂಧ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಯಲಿದ್ದು, ಪಿಯುಸಿ ಅಥವಾ ಯಾವುದೇ ಪದವಿ ಉತ್ತೀರ್ಣರಾದ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಫೆಬ್ರವರಿ 10ರಂದು ಬೆಳಗ್ಗೆ 10:30ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿಸಿಸಿ ಬ್ಯಾಂಕ್ ಎದುರು, ಚರ್ಚ್ ಸರ್ಕಲ್ ಹತ್ತಿರ, ತುಮಕೂರು ಇಲ್ಲಿ ತಮ್ಮ ಬಯೋಡೇಟಾಗೊಂಡಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಳಿಗಾಗಿ ದೂರವಾಣಿ ಸಂಖ್ಯೆ 0816-2278488 ಇವರನ್ನು ಸಂಪರ್ಕಿಸಬಹುದಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More