Subscribe to Updates
Get the latest creative news from FooBar about art, design and business.
- ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!
- ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು
- ಪತಿಯಿಂದಲೇ ಮಹಿಳಾ ಕೌನ್ಸಿಲರ್ ಬರ್ಬರ ಹತ್ಯೆ!
- ತಿಪಟೂರು: ಆರ್ಥಿಕ ಸಂಕಷ್ಟದಲ್ಲಿದ್ದ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳ ವಿತರಣೆ
- ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ
- ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ
- ತುಮಕೂರು: ಬುಕ್ಕಪಟ್ಟಣ ಅಭಯಾರಣ್ಯದಲ್ಲಿ ಅತಿಕ್ರಮಣಗೊಂಡಿದ್ದ 300 ಎಕರೆ ಭೂಮಿ ವಶಕ್ಕೆ
- ಜು.7ರಂದು ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಬ್ರಹ್ಮರಥೋತ್ಸವ
Author: admin
ತಿಪಟೂರು: ರೈತ ದಿನದಂದು ವಿಜಯ ಕರ್ನಾಟಕ ಪತ್ರಿಕೆಯವರು ಆಯೋಜಿಸಿದ್ದ ಸೂಪರ್ ಸ್ಟಾರ್ ರೈತ ಕಾರ್ಯಕ್ರಮವನ್ನು ತುಮಕೂರು ರಾಮಕೃಷ್ಣ ಮಠದ ಪೂಜ್ಯ ಶ್ರೀ ವಿರೇಶಾನಂದ ಸರಸ್ವತಿ ಸ್ವಾಮೀಜಿ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಸಿ ಇ ಓ ಡಾ.ವಿದ್ಯಾಕುಮಾರಿ, ತಿಪಟೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಕೆ.ಟಿ.ಶಾಂತಕುಮಾರ್, ಗುಬ್ಬಿ ದಿಲೀಪ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುರುವೇಕೆರೆ: ವೈ.ಟಿ.ರಸ್ತೆಯಲ್ಲಿರುವ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕಚೇರಿಯಲ್ಲಿ ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಜಿಲ್ಲಾ ನಿರ್ದೇಶಕ, ಈ ಡಿಜಿಟಲ್ ಸೇವಾ ಕೇಂದ್ರಗಳನ್ನು ಮುಂದಿನ ದಿನಗಳಲ್ಲಿ ನಮ್ಮ ಎಲ್ಲಾ ಗ್ರಾಮಾಭಿವೃದ್ಧಿ ಸಂಘದ ಕಚೇರಿಗಳಲ್ಲಿ ತೆರೆಯಲು ನಮ್ಮ ಸಂಸ್ಥೆ ಚಿಂತನೆ ನಡೆಸಿದೆ ಎಂದು ಹೇಳಿದರು ಈ ಕಾರ್ಯಕ್ರಮದಲ್ಲಿ ತುರುವೇಕೆರೆ ಗ್ರಾಮಾಂತರ ಯೋಜನಾಧಿಕಾರಿ ಅನಿತಾ, ಅಧ್ಯಕ್ಷರಾದ ಶಾಂತಕುಮಾರ್, ಒಕ್ಕೂಟದ ಅಧ್ಯಕ್ಷರಾದ ನಾಗರಾಜು, ಜೊತೆಗೆ ಎಲ್ಲಾ ವಲಯಗಳ ಮೇಲ್ವಿಚಾರಕರು ಸೇವಾ ಪ್ರತಿನಿಧಿ ಗಳು ಹಾಗೂ ಫಲಾನುಭವಿಗಲು ಹಾಜರಿದ್ದರು. ವರದಿ: ಸುರೇಶ್ ಬಾಬು. ಎಂ.ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಿಪಟೂರು: ತಾಲೂಕಿನ ಹೊನ್ನವಳ್ಳಿ ಹೋಬಳಿಯ ಮಣಿಕಿಕೆರೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ ಭವನಕ್ಕೆ ಎಂದು ಮೀಸಲಿಟ್ಟ ಜಾಗದಲ್ಲಿ ಹಾಕಲಾಗಿದ್ದ ನಾಮಫಲಕವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಇಂದು ಏಕಾಏಕಿ ಬಂದ ಕಿಡಿಗೇಡಿಗಳ ತಂಡ, ಅಂಬೇಡ್ಕರ್ ನಾಮಫಲಕವನ್ನು ಕಿತ್ತು ಹಾಕಿ ಧ್ವಂಸಗೊಳಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಘಟನೆ ಸಂಬಂಧ ಪೊಲೀಸರು ತಕ್ಷಣವೇ ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ವರದಿ: ಮಂಜು ಗುರುಗದಹಳ್ಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಗುಬ್ಬಿ: ತಾಲ್ಲೂಕಿನ ಕಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಲ್.ರವಿಕುಮಾರ್ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಆರೋಪ ಬಗ್ಗೆ ಸ್ಪಷ್ಟಿಕರಣ ನೀಡಿದರು. ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕಿನ ದಲಿತ ಸಂಘರ್ಷ ಸಮಿತಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರಾಗಿರುವ ದಲಿತ ಸಮುದಾಯದ ಕೆ.ಎಲ್.ರವಿಕುಮಾರ್ ಅವರು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಂತರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಗ್ರಾಮ ಅಭಿವೃದ್ಧಿ ಹೆಚ್ಚು ಒತ್ತು ನೀಡುತ್ತಿದ್ದಾರೆ. ಇದನ್ನು ಸಹಿಸದೇ ಗ್ರಾಮ ಪಂಚಾಯಿತಿ ಸದಸ್ಯರಾದ ನಾಗರಾಜ್, ಶಿವನಂದಯ್ಯ, ಸಿದ್ದರಾಜು ಇತರರು ಉದ್ದೇಶ ಪೂರ್ವಕವಾಗಿ ಪಂಚಾಯಿತಿ ಮುಂಭಾಗದಲ್ಲಿ ಅಂಗಡಿ ಮಳಿಗೆ ನಿರ್ಮಾಣಕ್ಕೆ ಮುಂದಾಗಿರುವುದನ್ನು ಸಹಿಸಲಾಗದೇ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ ಈ ಆರೋಪದಲ್ಲಿ ಹುರುಳಿಲ್ಲ ಎಂದರು. ತಾಲೂಕು ಸಂಚಾಲಕ ಚೇಳೂರು ಶಿವನಂಜಪ್ಪ ಮಾತನಾಡಿ, ಗ್ರಾಮ ಪಂಚಾಯಿತಿ ಗೆ ಒಳಪಡುವ ಮಾಂಸದ ಅಂಗಡಿ ಶಿಧಿಲವಾಗಿದ್ದು ಪರ್ಯಾಯವಾಗಿ ಅಂಗಡಿ ಮಳಿಗೆ…
ತುಮಕೂರು: ತಮ್ಮ ವಿರುದ್ಧ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ರವರು ಏಕಾಏಕಿ ನಿಂದಿಸಿ ಅವಮಾನಗೊಳಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಂಡು ನಮಗೆ ರಕ್ಷಣೆ ನೀಡಬೇಕೆಂದು ಅಲೆಮಾರಿ ಜನಾಂಗದ ಕುಟುಂಬಸ್ಥರು ಎಸ್.ಪಿ.ರವರಿಗೆ ದೂರು ನೀಡಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಕಳೆದ ತಿಂಗಳು ಸುರಿದ ಕುಂಭದ್ರೋಣ ಮಳೆಯಿಂದಾಗಿ ಚಿ.ನಾ.ಹಳ್ಳಿ ತಾಲ್ಲೋಕಿನ ಕಡೆಗೆಹಳ್ಳಿ ಗ್ರಾಮದ ಗುಂಡು ತೋಪಿನಲ್ಲಿ ಅಲೆಮಾರಿ ಜನಾಂಗದವರು ವಾಸಿಸುತ್ತಿದ್ದ ಗುಡಿಸಲುಗಳು ಜಲಾವೃತವಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ಪಟ್ಟಣದ ಸ್ತ್ರೀಶಕ್ತಿ ಭವನದಲ್ಲಿ ಸೂರು ಕಲ್ಪಿಸಲಾಗಿತ್ತು. ನಂತರ ಕೆಲ ದಿನಗಳ ನಂತರ ಪುರಸಭೆ ಮುಖ್ಯಾಧಿಕಾರಿ ಹಾಗೂ ತಹಶೀಲ್ದಾರ್ ಬಂದು ಕೂಡಲೇ ತಮ್ಮ ಗುಡಿಸಲುಗಳಿಗೆ ತೆರಳುವಂತೆ ಒತ್ತಡ ಹೇರಿದ್ದಾರೆ. ಇದಕ್ಕೂ ಮುನ್ನ ಅಲೆಮಾರಿ ಜನಾಂಗದ ಪರಮೇಶ್ ಎಂಬಾತ ತಹಶೀಲ್ದಾರ್ ರವರಿಗೆ ಮಳೆಯಿಂದಾಗಿ ಗುಡಿಸಲು ನಾಶವಾಗಿದೆ, ಈಗ ಗುಡಿಸಲಿಗೆ ಹೋಗಲು ಸಾಧ್ಯವಾಗುವುದಿಲ್ಲ, ಕನಿಷ್ಠ ಅದಕ್ಕೆ ಪರಿಹಾರ ನೀಡಿದರೆ ಗುಡಿಸಲು ಮರು ನಿರ್ಮಾಣ ಮಾಡಿಕೊಂಡು ಬದುಕುತ್ತೇವೆಂದು ಮನವಿ ಸಲ್ಲಿಸಿರುತ್ತಾರೆ. ಅದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಕಚೇರಿಗೆ ಬಂದು ಪರಿಹಾರದ ಚೆಕ್ ಪಡೆದುಕೊಂಡು…
ತಿಪಟೂರು: ನಗರ ಪೊಲೀಸ್ ಠಾಣಾ ವತಿಯಿಂದ ತಿಪಟೂರು ನಗರದ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಶ್ರೀಶೈಲಮೂರ್ತಿ, ಸಬ್ ಇನ್ಸ್ ಪೆಕ್ಟರ್ ದಾಕ್ಷಾಯಿಣಿ ಹಾಗೂ ಕಾಲೇಜಿನ ಪ್ರಾಂಶುಪಾಲರು ಸಿಬ್ಬಂದಿ ವರ್ಗದವರು ಹಾಜರಿದ್ದರು. ಈ ಕಾರ್ಯಕ್ರಮದಲ್ಲಿ ಅಪರಾಧಗಳನ್ನು ತಡೆಗಟ್ಟಲು ಹಾಗೂ ಅಪರಾಧಗಳು ನಡೆಯದಂತೆ ಮುನ್ಸೂಚನಾ ಕ್ರಮಗಳನ್ನು ಅನುಸರಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಯಿತು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ದಾವಣಗೆರೆ: ಎದುರಿಗೆ ಬಂದ ಬೈಕ್ ಗೆ ದಾರಿ ಬಿಡಲು ಹೋಗಿ, ಖಾಸಗಿ ಬಸ್ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ತಾಲೂಕಿನ ಎಲೆಬೇತೂರ ಗ್ರಾಮದ ಬಳಿ ಘಟನೆ ನಡೆದಿದೆ. ಅಪಘಾತವಾದ ಬೆನ್ನಲ್ಲೇ ಬಸ್ ರಸ್ತೆ ಪಕ್ಕದ ಅಡಕೆ ತೋಟದಲ್ಲಿ ಪಲ್ಟಿಯಾಗಿದ್ದು, ವಿದ್ಯುತ್ ಇಲ್ಲದ ಕಾರಣ ಭಾರಿ ದುರಂತ ತಪ್ಪಿದೆ. 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ವಿನಾಯಕ ಹೆಸರಿನ ಖಾಸಗಿ ಬಸ್ ದಾವಣಗೆರೆಯಿಂದ ಜಗಳೂರು ಕಡೆ ಸಂಚರಿಸುತ್ತಿದ್ದಾಗ, ಎಲೆಬೇತೂರು ಕ್ರಾಸ್ ಬಳಿ ಅನಿರೀಕ್ಷಿತ ವಾಗಿ ಅಡ್ಡ ಬಂದ ಬೈಕ್ ಸವಾರನಿಗೆ ದಾರಿ ಬಿಡಲು ಹೋಗಿ ಈ ಘಟನೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಬಹುತೇಕರಿಗೆ ಸಣ್ಣ ಪುಟ್ಟಗಾಯಗಳಾಗಿವೆ. ಗಾಯಳುಗಳನ್ನು ಹತ್ತಿರದ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು, ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದ್ದು, ಪೋಲಿಸರು ಘಟನ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ವರದಿ: ಆನಂದ್…
ಬೆಳಗಾವಿ: ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಬಿಲ್ ನ್ನು ಸಂಪೂರ್ಣವಾಗಿ ವಿರೋಧಿಸಲು ನಿರ್ಧರಿಸಿದೆ. ಎರಡೂ ಸದನಗಳಲ್ಲಿಯೂ ಮತಾಂತರ ನಿಷೇಧ ಕಾಯ್ದೆಯನ್ನು ವಿರೋಧಿಸಲು ಜೆಡಿಎಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಸೂಚನೆ ನೀಡಲಾಗಿದೆ. ಎಲ್ಲ ಶಾಸಕರು ಸದನದಲ್ಲಿ ಕಡ್ಡಾಯ ಹಾಜರಿಗೆ ವಿಪ್ ಜಾರಿ ಮಾಡಲಾಗಿದೆ. ಇದೊಂದು ಅನಗತ್ಯವಾದ ಬಿಲ್ ಆಗಿದ್ದು, ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಚರ್ಚೆಯಾಗಬೇಕಿತ್ತು. ರಾಜ್ಯ ಎದುರಿಸುತ್ತಿರುವ ಅನೇಕ ಸಮಸ್ಯೆಗಳನ್ನು ಬಿಟ್ಟು, ಬಿಜೆಪಿ ಮತಾಂತರ ನಿಷೇಧ ಬಿಲ್ ತರುವ ಮೂಲಕ ಸದನವನ್ನು ಡೈವರ್ಟ್ ಮಾಡಲು ಯತ್ನಿಸಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಮತಾಂತರ ನಿಷೇಧ ಬದಲು ಪಕ್ಷಾಂತರ ನಿಷೇಧ ಮಸೂದೆ ತನ್ನಿ ಎಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ ಹೇಳಿಕೆ ನೀಡಿದ್ದಾರೆ. ಮತಾಂತರ ನಿಷೇಧ ಕಾಯ್ದೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮುಸಲ್ಮಾನರಾದರೂ ಅವರು ಭಾರತೀಯರಲ್ಲವೇ ಎಂದು ಪ್ರಶ್ನಿಸಿದ ಅವರು, ‘‘ಮುಸಲ್ಮಾನರಾದ ಮಾತ್ರಕ್ಕೆ ಪಾಕಿಸ್ತಾನಕ್ಕೆ ಹೋಗಬೇಕೆ?” ಎಂದು ಪ್ರಶ್ನಿಸಿದರು. ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸಾಕಷ್ಟು ಕಾಯ್ದೆ ವಾಪಸ್ ಪಡೆಯುತ್ತೇವೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಎಂಇಎಸ್ ಪುಂಡಾಟಿಕೆ ವಿರೋಧಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ಕರೆ ನೀಡಿದ್ದು, ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಆಗಲಿದ್ದು, ತುರ್ತು ಸೇವೆಗಳು ಮಾತ್ರವೇ ಲಭ್ಯವಿರುತ್ತವೆ. ಕರ್ನಾಟಕ ಬಂದ್ ಗೆ ಸುಮಾರು 35 ಸಂಘಟನೆಗಳು ಸದ್ಯ ಬೆಂಬಲ ನೀಡಿವೆ ಇದರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳಿವೆ. ಕನ್ನಡ ಚಿತ್ರರಂಗ ಮೌನವಾಗಿದ್ದು, ಈ ಹೋರಾಟಕ್ಕೆ ಬೆಂಬಲ ನೀಡಲು ಮೀನಾಮೇಷ ಎಣಿಸುತ್ತಿದೆ. ಲಾರಿ ಮಾಲೀಕರ ಸಂಘ, ಆಟೋ ಚಾಲಕರು, ಟ್ಯಾಕ್ಸಿ ಮಾಲೀಕರು, ಹೋಟೆಲ್ ಮಾಲೀಕರು, ಶಿಕ್ಷಣ ಸಂಸ್ಥೆ, ದಲಿತ ಸಂಘರ್ಷ ಸಮಿತಿ, ಕೈಗಾರಿಕಾ, ಬೀದಿಬದಿ ವ್ಯಾಪರಿಗಳು, ಸಾರಿಗೆ ನೌಕರರು, ಸಿನಿಮಾ, ಅಂಗಡಿ ಮಾಲೀಕರು, ಗಾರ್ಮೆಂಟ್ಸ್ ನೌಕರರು, ಸರ್ಕಾರಿ ನೌಕರರು, ಅಖಿಲ ಭಾರತ ಚಾಲಕರ ಸಂಘ, ಕಟ್ಟಡ ಕಾರ್ಮಿಕರ ಸಂಘ ಬೆಂಬಲಕ್ಕೆ ಸಾಥ್ ನೀಡಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಕರ್ನಾಟಕ ಬಂದ್ ಗೆ ಬೀದಿ ಬದಿ ವ್ಯಾಪಾರಿಗಳ ಸಂಘ, ಓಲಾ, ಉಬರ್ ಬೆಂಬಲ ನೀಡಿದೆ. ಓಲಾ, ಉಬರ್ ಅಸೋಸಿಯೇಷನ್ ತನ್ವೀರ್, ಬಂದ್…