Author: admin

ತಿಪಟೂರು : ನಿರಾಕಾರವಾಗಿರುವ ಚೈತನ್ಯ ಶಕ್ತಿಯಲ್ಲಿ ನಂಬಿಕೆ ಇರಿಸಿ ಶ್ರದ್ಧಾ ಭಕ್ತಿಯಿಂದ ನಡೆದಾಗ ಮಾತ್ರವೇ ಜ್ಞಾನ ಮತ್ತು ಮುಕ್ತಿಯ ಪ್ರಾಪ್ತಿ ಸಾಧ್ಯವಾಗುತ್ತದೆ ಎಂದು ಆದಿಚುಂಚನಗಿರಿ ಶಾಖಾಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ಧಾರ್ಮಿಕ ಕ್ಷೇತ್ರವಾದ ಆದಿಚುಂಚನಗಿರಿ ಶಾಖಾಮಠದ ದಸರೀಘಟ್ಟದ ಚೌಡೇಶ್ವರಿ ದೇವಾಲಯದಲ್ಲಿ ಭಾನುವಾರ ಚೌಡೇಶ್ವರಿ ದೇವಿಯ ನೂತನ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ‘ನವಚಂಡಿಯಾಗ’ದಲ್ಲಿ ಭಾಗವಹಿಸಿ ಪೂರ್ಣಾಹುತಿ ನೀಡಿ ಮಾತನಾಡಿದರು. ಅಗೋಚರ ಹಾಗೂ ಅವ್ಯಕ್ತವಾದ ಶಕ್ತಿಯಲ್ಲಿ ವಿಜೃಂಭಿಸುವ ದೇವಿಯೂ ಜಗತ್ತನ್ನು ಕಾಪಾಡುತ್ತಿದ್ದಾಳೆ. ಇಂತಹ ದೇವಿಯ ಮಹಿಮೆಯನ್ನು ಅರಿಯಬೇಕಾದರೆ ಪಂಚೇಂದ್ರಿಯಗಳ ನಿಗ್ರಹ ಅತ್ಯವಶ್ಯಕ. ಪಂಚಭೂತಗಳಲ್ಲಿ ಅಪಾರ ನಂಬಿಕೆಯನ್ನು ಇರಿಸಿಕೊಂಡು ಬಹುನಿಷ್ಠೆಯಿಂದ ಶಕ್ತಿಯ ಆರಾಧನೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು. ಕಳೆದ 63 ವರ್ಷಗಳಿಂದ ಭಕ್ತರನ್ನು ಪೋಷಿಸಿಕೊಂಡು ಬರುತ್ತಿದ್ದ ಈ ದೇವಿಗೆ 353 ದಿನಗಳ ನಂತರ ಮತ್ತೇ ಪುನರ್ ಶಕ್ತಿಯನ್ನು ತುಂಬಿ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಪ್ರತಿಯೊಬ್ಬ ಮನುಷ್ಯನು ತಾಯಿಯ ಮೂಲಕವೇ ಇನ್ನುಳಿದ ದೇವಾನುದೇವತೆಗಳ ದರ್ಶನವನ್ನು ಮಾಡಬೇಕು. ಅವ್ಯಕ್ತವಾದ ಹಾಗೂ ಅಗೋಚರವಾದ…

Read More

ಉಡುಪಿ: ಜಿಲ್ಲೆ ಕುಂದಾಪುರದ ಸರಕಾರಿ ಪಿಯು ಕಾಲೇಜು ಬಳಿ ಮಾರಕಾಸ್ತ್ರಗಳನ್ನು ಹೊಂದಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕುಂದಾಪುರ ಸಮೀಪದ ಗಂಗೊಳ್ಳಿ ಗ್ರಾಮ ಅಬ್ದುಲ್ ಮಜೀದ್ (32) ಮತ್ತು ರಜಬ್ (41) ಎಂದು ಗುರುತಿಸಲಾಗಿದೆ. ಹಿಜಾಬ್ ಅನ್ನು ನಿಷೇಧಿಸುವ ಅಧಿಕಾರಿಗಳ ನಿರ್ಧಾರದ ವಿರುದ್ಧ ನಡೆದ ಪ್ರತಿಭಟನೆ ಪ್ರತಿಭಟನೆಯಲ್ಲಿ ಬಂಧಿತರನ್ನು ಭಾಗಿಯಾಗಿದ್ದರು ಎಂದು ಹೇಳಲಾಗಿದೆ. ಐವರು ಮಾರಕಾಸ್ತ್ರಗಳನ್ನು ಹೊತ್ತೊಯ್ಯುತ್ತಿದ್ದರು ಮತ್ತು ಅವರಲ್ಲಿ ಮೂವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಹಾಸನ: ನವಜಾತ ಶಿಶುವನ್ನು ಶ್ವಾನಗಳು ತಿಂದುಹಾಕಿರುವ ಹೃದಯ ವಿದ್ರಾವಕ ಘಟನೆ ನಗರದಲ್ಲಿ ನಡೆದಿದೆ. ನಗರದ ಹೊಸ ಬಸ್ ನಿಲ್ದಾಣದ ಬಳಿ ಯಾರೋ ನವಜಾತ ಶಿಶುವನ್ನು ಎಸೆದು ಹೋಗಿದ್ದು, ನಾಯಿಗಳು ಶಿಶುವನ್ನು ಎಳೆದುಕೊಂಡು ಹೋಗುತ್ತಿದ್ದು, ಇದನ್ನು ನೋಡಿದ ಸ್ಥಳೀಯರು ನಾಯಿಗಳನ್ನು ಓಡಿಸಿದ್ದಾರೆ. ಅಷ್ಟರಲ್ಲಾಗಲೇ ಶಿಶುವನ್ನು ನಾಯಿಗಳು ಅರ್ಧಂಬರ್ಧ ತಿಂದು ಹಾಕಿವೆ.ಕರುಣೆ ಇಲ್ಲದ ಕ್ರೂರಿ ತಾಯಿ ಅಕ್ರಮ ಸಂಬಂಧದಿಂದ ಮಗುವಿಗೆ ಜನ್ಮ ನೀಡಿ ಬಳಿಕ ಮಗುವನ್ನು ರಸ್ತೆ ಬದಿ ಎಸೆದು ಹೋಗಿದ್ದು, ಕಣ್ಣು ಬಿಡದ ಕಂದಮ್ಮ ನಾಯಿಗಳಿಗೆ ಆಹಾರವಾಗಿದೆ. ಈ ದೃಶ್ಯಕಂಡ ಸ್ಥಳೀಯರು ಮರುಕಪಟ್ಟಿದ್ದಾರೆ. ಮೃತಪಟ್ಟ ನವಜಾತ ಶಿಶುವಿನ ಶವವನ್ನು ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣ ತಾಲ್ಲೂಕಿನ ಕೆಆರ್‍ಎಸ್‍ನ ಬಜಾರ್ ಲೈನ್‍ ನಲ್ಲಿ ನಡೆದಿದೆ. ಗುಜರಾತ್ ಮೂಲದ ಲಕ್ಷ್ಮೀ (26), ರಾಜ್ (12), ಕೋಮಲ್ (7), ಕುನಾಲ್ (4), ಗೋವಿಂದ (8) ಕೊಲೆಯಾಗಿದ್ದಾರೆ. ಬಜಾರ್ ಲೈನ್‍ನಲ್ಲಿ ವಾಸವಿದ್ದ ಈ ಕುಟುಂಬದವರ ಮನೆಗೆ ನಿನ್ನೆ ತಡ ರಾತ್ರಿ ನುಗ್ಗಿರುವ ದುಷ್ಕರ್ಮಿಗಳು, ಐವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ವ್ಯಾಪಾರಿ ಸಮುದಾಯವಾದ ಬೈಯಾದ್ ಜನಾಂಗಕ್ಕೆ ಸೇರಿರುವ ಗಂಗರಾಮ್ ಅವರ ಪತ್ನಿ ಲಕ್ಷ್ಮಿ ಮತ್ತು ಅವರ ಮಕ್ಕಳಾದ ರಾಜ್, ಕೋಮಲ್, ಕುನಾಲ್ ಮತ್ತು ಗಂಗರಾಮ್ ಅವರ ಅಣ್ಣನ ಮಗ ಗೋವಿಂದ ಕೊಲೆಯಾದವರು. ಗಂಗರಾಮ್ ಮತ್ತು ಆತನ ಅಣ್ಣ ಇಬ್ಬರು ಬಟ್ಟೆ ವ್ಯಾಪಾರಕ್ಕೆಂದು ಕಳೆದ ಹತ್ತು ದಿನಗಳ ಹಿಂದೆ ಹೊರ ಹೋಗಿದ್ದರು. ಲಕ್ಷ್ಮೀ ಮಕ್ಕಳನ್ನು ನೋಡಿಕೊಂಡು ಮನೆಯಲ್ಲಿದ್ದರು. ನಿನ್ನೆ ತಡ ರಾತ್ರಿ ಈ ದುರ್ಘಟನೆ ನಡೆದಿದೆ. ಹತ್ಯೆ ಮಾಡಿರುವ ಹಂತಕರು ಮನೆಯ ಬಾಗಿಲು ಹಾಕಿಕೊಂಡು…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿರಮೇಶ್ ನೇತೃತ್ವದಲ್ಲಿ ವಾರ್ಡ್ ನಂ.8ರ ವಾರ್ಡ್ ಕಮಿಟಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಮಾಜಿ ಸಚಿವರಾದ ಡಿ.ಸುಧಾಕರ್ ನೇಮಕಾತಿ ಪತ್ರ ನೀಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಅಮ್ಮತೇಶ್ವ್ ಸ್ವಾಮಿ,  ನಗರ ಸಭೆಯ ಅಧ್ಯಕ್ಷರಾದ ಶಂಶುನ್ನಿಸಾ,  ಗೌರವಾಧ್ಯಕ್ಷರಾದ ಅಬ್ದುಲ್ ನಭಿ ವಾರ್ಡ್ ನ ಅಧ್ಯಕ್ಷರಾದ ಅಬೀಬ್ ಪುರು ರಹಮಾನ್,  ಉಪಾಧ್ಯಕ್ಷರಾದ ಹೆಚ್.ಬಾಬು,  ಎಸ್.ಪಾಪಣ್ಣ , ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ ಸೈಫುಲ್ಲಾ,  ಮಹಾಂತೇಶ್, ಮಹ್ಮದ್ ಇಸ್ಮಾಯಿಲ್ , ಇತಿಯಾಜ್ ನಯಾಜ್ಠ, ಖಚಾಂಚಿ ಹೈದರ್ ಅಲಿ,  ವಾರ್ಡ್ ನ ಕಾರ್ಯಕರ್ತರು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು. ವರದಿ:  ಮುರುಳಿಧರನ್ ಆರ್.,  ಹಿರಿಯೂರು ( ಚಿತ್ರದುರ್ಗ ). ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ತುಮಕೂರು: ಕಲ್ಪತರು ನಾಡು ತುಮಕೂರು ಕಲೆಗಳ ತವರೂರು ಎಂದು ಹೆಸರುವಾಸಿಯಾಗಿದೆ ಇನ್ನೂ ತುಮಕೂರು ಜಿಲ್ಲೆಯಲ್ಲಿ ಸಾಕಷ್ಟು ಕಲಾವಿದರು ಹಾಗೂ ಕಲಾ ತಂಡಗಳು ಜಿಲ್ಲೆಯ ಹೆಸರನ್ನು ರಾಜ್ಯ, ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ತುಮಕೂರಿನ ಹೆಸರನ್ನ ಹಸಿರಾಗಿ ಉಳಿಸುವಲ್ಲಿ ಸಾಕಷ್ಟು ಕಲಾವಿದರು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಈ ಮೂಲಕ ತುಮಕೂರು ಸಾಕಷ್ಟು ಕಲಾತಂಡಗಳು, ವಿವಿಧ ಕಲೆಗಳು ಸೇರಿದಂತೆ ಸಾವಿರಾರು ಕಲಾವಿದರಿಗೆ ತವರುರಂತೆ ಇರುವ ತುಮಕೂರಿನಲ್ಲಿ ಆರ್ಕೆಸ್ಟ್ರಾ ಮಾಲೀಕರೊಬ್ಬರು ಆರ್ಕೆಸ್ಟ್ರಾದಲ್ಲಿ ಕೆಲಸ ಮಾಡುವ ಯುವತಿಯರನ್ನು ಫೋನ್ ಮೂಲಕ ಪುಸಲಾಯಿಸಿ ವೇಶ್ಯಾವಾಟಿಕೆಗೆ ಪ್ರಚೋದಿಸುವ ಮೂಲಕ ಯುವತಿಯರ ಬಾಳಲ್ಲಿ ಆಟವಾಡುವ ಮೂಲಕ ಜಿಲ್ಲೆಯ ಕಲಾವಿದರ ಹೆಸರಿಗೆ ಮಸಿ ಬಳಿಯುವಂತಹ ಕೆಲಸವನ್ನು ತುಮಕೂರಿನ  ಆರ್ಕೆಸ್ಟ್ರಾ ಮಾಲೀಕ ನಾಣಿ ಹಂದ್ರಾಳ (ಸಂಜಯ್ ಮೆಲೋಡಿಸ್)ಎಂಬುವವರು ಮಾಡುತ್ತಿದ್ದಾರೆ ಎಂದು ಕಲ್ಪತರು ನಾಡು ತುಮಕೂರು ಆರ್ಕೆಸ್ಟ್ರಾ ಮಾಲೀಕರು ಹಾಗೂ ಕಲಾವಿದರ ಸಂಘದ ಸದಸ್ಯರು ಇಂದು ಗಂಭೀರ ಆರೋಪವನ್ನು ಮಾಡಿದ್ದಾರೆ. ತುಮಕೂರಿನಲ್ಲಿ ಈ ಬಗ್ಗೆ ಪತ್ರಿಕಾಗೋಷ್ಠಿಯನ್ನು ನಡೆಸಿದ ಸಂಘದ ಪದಾಧಿಕಾರಿಗಳು ಕೊರೊನಾ ಸಂಕಷ್ಟ ಕಾಲದಿಂದಲೂ ಕಲಾವಿದರ ಬದುಕು…

Read More

ತುಮಕೂರು: ಶ್ರಮ ಜೀವಿಗಳಾದ ಸ್ಲಂ ಜನರನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನಿರ್ಲಕ್ಷಿಸುತ್ತಲೇ ಬಂದಿದ್ದು, ನಮ್ಮ ಅಸ್ತಿತ್ವವನ್ನು ನಾವು ಉಳಿಸಿಕೊಳ್ಳಬೇಕಾದರೆ ಸಂಘಟಿತರಾಗಬೇಕು ಎಂದು ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ  ಹೇಳಿದರು. ತುಮಕೂರಿನ ಕ್ಯಾತ್ಸಂದ್ರ ಎಳ್ಳರಬಂಡೆ 34 ನೇ ವಾರ್ಡ್ ನಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಸ್ಲಂ ಶಾಖಾ ಸಮಿತಿಯ ನಾಮಫಲಕವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಕಳೆದ 20 ವರ್ಷಗಳಿಂದ ಸಮಿತಿಯು ಜಿಲ್ಲೆಯಲ್ಲಿ ಹೋರಾಟ  ಮಾಡುವ ಮೂಲಕ ಸ್ಲಂ ನಿವಾಸಿಗಳಿಗೆ ನ್ಯಾಯ ದೊರಕಿಸುತ್ತಿದೆ.ಸರ್ಕಾರದ  ಸೌಲಭ್ಯ ಪಡೆದುಕೊಳ್ಳುವ ಮೂಲಕ ಸ್ಲಂ ಪ್ರದೇಶಗಳನ್ನು ಉತ್ತಮೀಕರಣ ಮಾಡಬೇಕಿದೆ ಎಂದು ಅವರು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಾರ್ಮಿಕ ಮುಖಂಡರಾದ ಸೈಯದ್ ಮುಜೀಬ್, ಅಭಿವೃದ್ಧಿ ಹೆಸರಿನಲ್ಲಿ ಸರ್ಕಾರ ನಡೆಸುತ್ತಿರುವ ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳು ಬಡವರು ವಾಸಿಸುವ ಪ್ರದೇಶದಿಂದಲೇ ಹಾದುಹೋಗುತ್ತದೆ. ಶ್ರೀಮಂತರ ಪ್ರದೇಶದಲ್ಲಿ ರಸ್ತೆ ಹೋಗುವುದಿದ್ದರೆ, ರಸ್ತೆಯನ್ನು ತುಂಡರಿಸಿ ಬಡವರ ಪ್ರದೇಶದ ಕಡೆಗೆ ತಿರುಗಿಸುತ್ತಾರೆ.…

Read More

ಗುಬ್ಬಿ:  ತಾಲೂಕು ಅಭಿವೃದ್ಧಿ ಮಾಡುವಲ್ಲಿ ಗುಬ್ಬಿ ಶಾಸಕ ಎಸ್.ಆರ್.ಶ್ರೀ ನಿವಾಸ್ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗುಬ್ಬಿ ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜ್  ಅವರು  ಶಾಸಕ ಎಸ್.ಆರ್.ಶ್ರೀನಿವಾಸ್ ವಿರುದ್ಧ ಆರೋಪಿಸಿದ್ದಾರೆ. ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ಕೋಣೆಮಾದೇನಹಳ್ಳಿ ಗ್ರಾಮದಲ್ಲಿ ಜೆ ಡಿಎಸ್ ಪಕ್ಷ ಸೇರ್ಪಡೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ  ಭಾಗವಹಿಸಿ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ಈ ತಾಲ್ಲೂಕಿನ ಶಾಸಕರಿಗೆ ತಾಲ್ಲೂಕಿನ ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲವಾಗಿದೆ. ಇನ್ನೂ ಸಹ ಗಡಿ ಭಾಗದ ಪ್ರದೇಶದಲ್ಲಿ ಮೂಲ ಭೂತ ಸೌಲಭ್ಯ ಗಳ ಕೊರತೆ ಕಾಣಬಹುದಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಭಿವೃದ್ಧಿ ಕಾಣದ ಗ್ರಾಮಗಳಲ್ಲಿ ಜನತೆ ಹಿಡಿಶಾಪ ಹಾಕುವಂತಾಗಿದೆ.  ಮತಕೇಳಲು ಬರುವ ಜನಪ್ರತಿನಿಧಿಗಳು ಗ್ರಾಮಗಳ ಅಭಿವೃದ್ಧಿ ಬಗ್ಗೆ ಗಮನಹರಿಸುತ್ತಿಲ್ಲ ಎಂಬ ಆರೋಪಗಳನ್ನು ವ್ಯಕ್ತಪಡಿಸುತ್ತಾರೆ ಎಂದರು. ನನ್ನ ಶ್ರೀ ಮತಿಯವರು ಸಿ.ಎಸ್. ಪುರ ಜಿಲ್ಲಾ ಪಂಚಾಯತ್ ಸದಸ್ಯರಾದ ಅವಧಿಯಲ್ಲಿ ಹೋಬಳಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಮೂಲ ಭೂತ ಸೌಲಭ್ಯಗಳನ್ನು…

Read More

ತುಮಕೂರು:  ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ತುಮಕೂರು ನಗರದ 34ನೇ ವಾರ್ಡ್ ನ ಎಳ್ಳರಬಂಡೆ ಸ್ಲಂನಲ್ಲಿ ನೂತನ ಶಾಖಾಸಮಿತಿಯ ನಾಮಫಲಕ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿ ನೆರವೇರಿಸಿದರು.  ಮುಖ್ಯ ಅತಿಥಿಗಳಾಗಿ ಸೈಯದ್ ಮುಜೀಬ್, ದೀಪಿಕಾ, ರಮೇಶ್,  ಯಾಸ್ಮಿನ್ ತಾಜ್  ಹಾಗೂ ನೂತನ ಶಾಖಾ ಸಮಿತಿಯ ಅಧ್ಯಕ್ಷರಾದ ಜಾಬಿರ್ ಖಾನ್, ಕಾರ್ಯದರ್ಶಿ ನರಸಮ್ಮ, ಮುನೀರ್ ಅಹ್ಮದ್, ರಫೀಕ್, ಕೃಷ್ಣಪ್ಪ, ಗೌರಮ್ಮ, ಮೊಹಮದ್ ಅತಿಕ್, ಮುಬಿನ್ ತಾಜ್, ನಗೀನ ಹಾಗೂ ತುಮಕೂರು ಸ್ಲಂ ಸಮಿತಿಯ ಪದಾಧಿಕಾರಿಗಳಾದ ಅರುಣ್, ತಿರುಮಲಯ್ಯ, ಶಂಕ್ರಯ್ಯ, ಹಯಾತ್ ಸಾಬ್ ಮುಂತಾದವರು. ವರದಿ: ಉದಯ್ ಕುಮಾರ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ತುಮಕೂರು: ಗಣರಾಜ್ಯೋತ್ಸವದ ವೇಳೆ  ಅಂಬೇಡ್ಕರ್ ಫೋಟೋ ತೆಗೆಸಿ, ಉದ್ಧಟತನದ ವರ್ತನೆ ತೋರಿದ ರಾಯಚೂರು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಲು ಒತ್ತಾಯಿಸಿ ಸೋಮವಾರ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ.  ಫೆ.7ರಂದು ಬೆಳಗ್ಗೆ 10:30ಕ್ಕೆ  ತುಮಕೂರು ನಗರದ ಟೌನ್ ಹಾಲ್ ವೃತ್ತದಿಂದ ಎಂ.ಜಿ. ರಸ್ತೆಯ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಸಂವಿಧಾನ ಪರ ಸಂಘಟನೆಗಳ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಬೃಹತ್ ಪ್ರತಿಭಟನೆಯಲ್ಲಿ ಸಂವಿಧಾನ ಆಶಯಗಳನ್ನು ಒಪ್ಪಿರುವ ಭವಿಷ್ಯದ ಪ್ರಜೆಗಳಾಗಿ ರೊಪುಗೂಳ್ಳುತ್ತಿರುವ  ವಿದ್ಯಾರ್ಥಿಗಳು, ಸಾರ್ವಜನಿಕರು  ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು  ಮುಖಂಡರು ಇದೇ ವೇಳೆ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More