Subscribe to Updates
Get the latest creative news from FooBar about art, design and business.
- ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ
- ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ
- ರುಡ್ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ
- ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ
- ಪದವೀಧರರ ಕ್ಷೇತ್ರ: ಕರಡು ಮತದಾರರ ಪಟ್ಟಿ ಸಿದ್ಧ | ಚಿರತೆ ಬಗ್ಗೆ ಸುಳ್ಳು ಮಾಹಿತಿಗೆ ಕಾನೂನು ಕ್ರಮ
- ಬುದ್ಧ, ಬಸವ, ಅಂಬೇಡ್ಕರ್ ಜಗತ್ತಿನ ಬೆಳಕು: ಶ್ರೀ ರುದ್ರಮುನಿ ಸ್ವಾಮೀಜಿ
- ತುಮಕೂರು | ಅಂಬೇಡ್ಕರ್ ಯುವ ಸೇನೆಯಿಂದ 208ನೇ ಭೀಮ-ಕೋರೆಗಾಂವ್ ವಿಜಯ ದಿನಾಚರಣೆ
- ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ
Author: admin
ತುಮಕೂರು: ಪೂರ್ವ–ಮುಂಗಾರು ಹಂಗಾಮಿನಲ್ಲಿ ಪ್ರಸ್ತುತ ನಿರಂತರ ಮೋಡ ಕವಿದ ವಾತಾವರಣ ಮತ್ತು ಭಾರೀ ಗಾಳಿ, ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದ್ದು, ಭಾರಿ ಮಳೆಯಿಂದ ಉಂಟಾಗಬಹುದಾದ ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರ ರಕ್ಷಣೆಗಾಗಿ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ತೆರೆಯಲಾಗಿದೆ. ಸಹಾಯವಾಣಿ ಸಂಖ್ಯೆಯು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ. ಜಿಲ್ಲೆಯ ಸಾರ್ವಜನಿಕರು ಮಳೆಯಿಂದ ಉಂಟಾಗುವ ಯಾವುದೇ ತುರ್ತು ಪರಿಸ್ಥಿತಿ ಕುರಿತು ಸಹಾಯವಾಣಿ ಸಂಖ್ಯೆ: 0816–2213400, 0816–155304, 7304975519(ವಾಟ್ಸಪ್)ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ವರನಟ, ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರು ತಮ್ಮ ಅಮೋಘ ನಟನೆ, ಗಾಯನದ ಮೂಲಕ ಕನ್ನಡ ಸಾಂಸ್ಕೃತಿಕ ಲೋಕದ ರಾಯಭಾರಿಯಾಗಿದ್ದರೆಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಬಣ್ಣಿಸಿದರು. ನಗರದ ಕನ್ನಡ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು, ಡಾ.ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಡಾ: ರಾಜ್ ಕುಮಾರ್ ಜಯಂತಿ ಅಂಗವಾಗಿ ಏರ್ಪಡಿಸಿದ್ದ “ರಾಜರಸ” ಸಂಗೀತ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಡಾ: ರಾಜ್ ಅವರು ಅಭಿನಯಿಸದ ಪಾತ್ರಗಳಿಲ್ಲ. ಕರ್ನಾಟಕದಲ್ಲಿ ಡಾ.ರಾಜ್‌ಕುಮಾರ್ ಎಂದರೆ ಅಣ್ಣಾವ್ರು ಎಂದೇ ಪ್ರಸಿದ್ಧಿ. ಅವರ ಚಿತ್ರಗಳು ಇಡೀ ಕುಟುಂಬ ಒಟ್ಟಿಗೇ ಕುಳಿತು ವೀಕ್ಷಿಸುವಂತಹದಾಗಿದ್ದವು. ಅವರು ನಟಿಸಿರುವ ಚಿತ್ರದ ಗೀತೆಗಳ ಸಾಹಿತ್ಯ ಅರ್ಥಪೂರ್ಣವಾಗಿರುತ್ತಿದ್ದವು. ಅಣ್ಣಾವ್ರ ನಟನೆ ಹಾಗೂ ಗಾಯನಕ್ಕೆ ಅವರೇ ಸಾಟಿಯಾಗಿದ್ದರು ಎಂದು ತಿಳಿಸಿದರು. ರಾಜ್‌ಕುಮಾರ್ ಅವರು ಗೋಕಾಕ್ ಚಳುವಳಿಯ ನೇತೃತ್ವವಹಿಸುವ ಮೂಲಕ ಕನ್ನಡ ನಾಡು–ನುಡಿಯ…
ತುಮಕೂರು: ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದ ಮಧ್ಯಂತರ ವರದಿಯನ್ವಯ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾಗಿ ಸಮೀಕ್ಷೆ ನಡೆಸಿ ದತ್ತಾಂಶ ಸಂಗ್ರಹಿಸಲು ಸರ್ಕಾರ ನಿರ್ದೇಶನ ನೀಡಿದ್ದು, ದತ್ತಾಂಶ ಸಂಗ್ರಹಕ್ಕಾಗಿ ಜಿಲ್ಲೆಯಲ್ಲಿ ಮೇ 5 ರಿಂದ ಮನೆ-ಮನೆ ಸಮೀಕ್ಷೆ ಕಾರ್ಯವನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಬುಧವಾರ ವಿಕಾಸ ಸೌಧದಿಂದ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕುರಿತು ನಡೆಸಿದ ವಿಡಿಯೋ ಸಂವಾದದ ಸಭೆಯ ನಂತರ ಜಿಲ್ಲೆಯ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ, ಮನೆ–ಮನೆ ಭೇಟಿ ನೀಡಿ ಸಮೀಕ್ಷೆ ನಡೆಸಿ ದತ್ತಾಂಶ ಸಂಗ್ರಹಿಸಲು ಗಣತಿದಾರರನ್ನಾಗಿ ಶಿಕ್ಷಕರನ್ನು ಮಾತ್ರ ನೇಮಕ ಮಾಡಲಾಗುವುದು. ಆಶಾ…
ತುಮಕೂರು: ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ 39 ಮಂದಿ ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಿಗರಿಗೆ ಉಚಿತವಾಗಿ ಲ್ಯಾಪ್ ಟಾಪ್, ಬುಕ್ಕಾಪಟ್ಟಣ ವ್ಯಾಪ್ತಿಯ ಹತ್ತು ಮಂದಿಗೆ ಸ್ಮಾರ್ಟ್ ಪೋನ್ ಗಳನ್ನು ವಿತರಿಸಿದರು. ತಾಲ್ಲೂಕು ಕಚೇರಿಯಲ್ಲಿರುವ ಶಾಸಕರ ಭವನದಲ್ಲಿ ಗುರುವಾರ ಆಯೋಜಿಸಿದ್ದ ಲ್ಯಾಪ್ ಟಾಪ್ ವಿತರಣಾ ಕಾರ್ಯಕ್ರಮದಲ್ಲಿ ವಿತರಿಸಿ ಮಾತನಾಡಿದ ಅವರು, ರಾಜ್ಯದಲ್ಲಿಯೇ ಪ್ರಪ್ರಥಮವಾಗಿ ಎಸ್.ಬಿ. ಚಾರಿಟಬಲ್ ಟ್ರಸ್ಟ್ ವತಿಯಿಂದ ಲ್ಯಾಪ್ ಟಾಪ್, ಸ್ಮಾರ್ಟ್ ಫೋನ್ ಗಳನ್ನು ವಿತರಿಸಲಾಗುತ್ತಿದೆ. ಗ್ರಾಮ ಲೆಕ್ಕಿಗರು ತಮ್ಮ ಕಚೇರಿಯಲ್ಲೇ ಇದ್ದು ಎಲ್ಲಾ ಕೆಲಸಗಳನ್ನು ಮಾಡಲು ಮತ್ತು ಪ್ರತಿನಿತ್ಯ ತಾಲ್ಲೂಕು ಕಚೇರಿಗೆ ಹೋಗುವುದನ್ನು ತಪ್ಪಿಸಲು ಈ ಲ್ಯಾಪ್ ಟಾಪ್ ವಿತರಿಸಲಾಗಿದೆ. ಜನರಿಗೆ ಉತ್ತಮ ಸೇವೆ ನೀಡಲು ಲ್ಯಾಪ್ ಟಾಪ್ ಅನ್ನು ಬಳಸಿಕೊಳ್ಳಬೇಕು. ಗ್ರಾಮೀಣ ಜನರ ಜತೆ ನೇರ ಸಂಪರ್ಕ ಇರುವ, ಅವರ ಅಹವಾಲುಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವತ್ತ ಕಂದಾಯ ಇಲಾಖೆಯು ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳುವ ಸಲುವಾಗಿ ಎಸ್.ಬಿ. ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರು ಹಾಗೂ ಶಾಸಕ ಸುರೇಶ್…
ತುಮಕೂರು: ವಿವಿಧ ಪ್ರಯೋಜಕರೊಂದಿಗೆ ಬಿಸಿಸಿಐ ದೇಶದ 50 ಕಡೆ ಐಪಿಎಲ್ ಫ್ಯಾನ್ ಪಾಕ್ ಅನ್ನು ಆಯೋಜನೆ ಮಾಡುತ್ತಿದೆ. ಕರ್ನಾಟದಲ್ಲಿ 4 ನಾಲ್ಕು ನಗರಗಳಲ್ಲಿ ಫ್ಯಾನ್ ಪಾಕ್ ವ್ಯವಸ್ಥೆ ಮಾಡಿದೆ. ಮೈಸೂರು, ತುಮಕೂರು, ಬೆಳಗಾವಿ ಮತ್ತು ಮಂಗಳೂರು ನಗರದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಬಿಸಿಸಿಐ ಪ್ರತಿನಿಧಿ ಅಮಿತ್ ಸಿದ್ದೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಐಪಿಎಲ್ ಪಂದ್ಯಗಳನ್ನು ವೀಕ್ಷಿಸಲು ಫ್ಯಾನ್ ಪಾಕ್ ಗಳಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಸ್ಟೇಡಿಯಂ ರೀತಿಯ ವಾತಾವರಣ ನಿಮಿಸುವ ಉದ್ದೇಶ ಹೊಂದಲಾಗಿದೆ. ಪೈನಲ್ ಪಂದ್ಯಗಳನ್ನು ವೀಕ್ಷಿಸಲು ಸ್ಟೇಡಿಯಂಗಳಿಗೆ ಹೋಗಲು ಟಿಕೆಟ್ ಖರೀದಿಸಬೇಕಿದೆ. ಆದ್ರೆ ಫ್ಯಾನ್ ಪಾಕ್ ಗಳಲ್ಲಿ ಉಚಿತ ಪ್ರವೇಶವಿರುತ್ತದೆ ಎಂದರು. ಮುಖ್ಯವಾಗಿ ತುಮಕೂರಿನಲ್ಲಿ ಆರ್ ಸಿ ಬಿ ಫ್ಯಾನ್ಸ್ ಗಳು ಬಂದು ಫ್ಯಾನ್ ಪಾಕ್ ನಲ್ಲಿ ತಮ್ಮ ತಂಡವನ್ನು ಬೆಂಬಲಿಸಬಹುದಾಗಿದೆ. ಕುಡಿಯುವ ನೀರು, ರಕ್ಷಣೆ ದೃಷ್ಟಿಯಿಂದ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ವಿವಿಧೆಡೆ ಫ್ಯಾನ್ ಪಾಕ್ ಅನ್ನು ಯೋಜನೆ ಮಾಡುತ್ತಿದೆ. ತುಮಕೂರು ನಗರದಲ್ಲಿ ಈ ಬಾರಿ ನಾಲ್ಕನೇ…
ತುಮಕೂರು: ಜೀನಿ ಕಂಪನಿ ಮಾಲೀಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಜೀನಿ ಕಂಪನಿ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಎಫ್ ಐಆರ್. ದಾಖಲಾಗಿದೆ. ಸಂತ್ರಸ್ತ ಯುವತಿ ನೀಡಿದ ದೂರಿನ ಮೇರೆಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಜೀನಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕಿರುಕುಳ ನೀಡಿರೋ ಆರೋಪ ಕೇಳಿ ಬಂದಿದೆ. ಕಳೆದ 10 ತಿಂಗಳಿಂದ ಸಂತ್ರಸ್ತ ಯುವತಿ ಜೀನಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದಳು. ಯುವತಿ ಜೊತೆ ಅಸಭ್ಯವಾಗಿ ವರ್ತಿಸಿ ಖಾಸಗಿ ಅಂಗಾಂಗಗಳನ್ನ ಮುಟ್ಟಿ ಲೈಂಗಿಕ ಕಿರುಕುಳ ನೀಡಿ, ಇದರ ಬಗ್ಗೆ ಯಾರಿಗಾದರು ವಿಚಾರ ತಿಳಿಸಿದರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿರುವುದಾಗಿ ಜೀನಿ ಕಂಪನಿಯ ಮಾಲೀಕನ ವಿರುದ್ಧ ದೂರು ನೀಡಿದ ಯುವತಿ ಆರೋಪಿಸಿದ್ದಾಳೆ. ಸಂತ್ರಸ್ತ ಯುವತಿ ಕೊಟ್ಟ ದೂರಿನ ಮೇರೆಗೆ ಎಫ್ ಐಆರ್ ದಾಖಲಿಸಿಕೊಂಡ ಕಳ್ಳಂಬೆಳ್ಳ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ತುಮಕೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಆಕೆಯನ್ನು ಗರ್ಭಾವತಿ ಮಾಡಿರುವ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ (POCSO) 25 ವರ್ಷಗಳ ಜೈಲು ಶಿಕ್ಷೆ ಹಾಗೂ 2.50 ಲಕ್ಷ ರೂ. ದಂಡ ವಿಧಿಸಿದೆ. ಕೊರಟಗೆರೆ ಠಾಣಾ ಸರಹದ್ದಿನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ರಾಜಶೇಖರ ಮೊಬೈಲ್ ಅಂಗಡಿಯನ್ನು ಹೊಂದಿದ್ದು, ನೊಂದ ಬಾಲಕಿ ಮೊಬೈಲ್ ರಿಪೇರಿ ಮಾಡಿಸಲು ಅಂಗಡಿಗೆ ಹೋಗಿದ್ದ ವೇಳೆ, ಆಕೆಯನ್ನು ಪರಿಚಯ ಮಾಡಿಕೊಂಡು, ಆಕೆಯನ್ನು ಪುಸಲಾಯಿಸಿ, ತನ್ನ ಅಂಗಡಿಯಲ್ಲಿ ಯಾರೂ ಇಲ್ಲದ ವೇಳೆ ಬಲವಂತವಾಗಿ ಆಕೆಯ ಮೇಲೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದಳು. ಈ ಬಗ್ಗೆ ನೊಂದ ಬಾಲಕಿಯ ತಂದೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರಕರಣ ತನಿಖೆಯನ್ನು ತನಿಖಾಧಿಕಾರಿ ಸುರೇಶ್ ಕೆ. ಅವರು ನಡೆಸಿ, ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಈ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆ ನಡೆಸಲಾದ…
ಬೆಂಗಳೂರು: ಕೇಂದ್ರ ಸರ್ಕಾರದ ಜೊತೆ ನಾವಿದ್ದೇವೆ, ಉಗ್ರರ ಎಲ್ಲಾ ತಾಣಗಳನ್ನು ನಾಶಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉಗ್ರರ ಗುಂಡೇಟಿಗೆ ಬಲಿಯಾದ ಮತ್ತಿಕೆರೆಯ ಭರತ್ ಭೂಷಣ್ ಅವರ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ನಾನು ಸರ್ಕಾರದ ಪರವಾಗಿ ಕನ್ನಡ ನಾಡಿನ ಏಳು ಕೋಟಿ ಜನರ ಪರವಾಗಿ ಭರತ್ ಭೂಷಣ್‌ಗೆ ಶ್ರದ್ದಾಂಜಲಿ ಸಲ್ಲಿಸಿದ್ದೇನೆ. ಇನ್ನೂ ಚಿಕ್ಕ ವಯಸ್ಸು. ಭರತ್ ಭೂಷಣ್ ಬಿಇ ಎಂಬಿಎ ಮಾಡಿದ್ದಾರೆ. ಉಗ್ರರು ಅಮಾನವೀಯವಾಗಿ ಕೃತ್ಯ ಎಸಗಿದ್ದಾರೆ ಎಂದರು. ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದೇನೆ. ಉಗ್ರ ಚಟುವಟಿಕೆಗಳು ಈ ದೇಶದಿಂದ ಹೋಗಬೇಕು. ಯಾವುದೇ ಕಾರಣಕ್ಕೂ ಸರ್ಕಾರ ಕನಿಕರ ತೋರಬಾರದು ಎಂದು ಮನವಿ ಮಾಡಿದರು. ಹಾಡಹಗಲೇ ಹೆಂಡತಿ, ಮಗು ಇದ್ದಾಗಲೆ ಶೂಟ್ ಮಾಡೋದಕ್ಕಿಂತ ಹೇಯಕೃತ್ಯ ಇನ್ನೊಂದಿಲ್ಲ. ಮನುಷ್ಯತ್ವ ಇಲ್ಲದವರು ಅವರು. ಇದನ್ನು ಖಂಡಿಸುತ್ತೇನೆ ಎಂದರು. ಇದೇ ಜಿಲ್ಲೆಯಲ್ಲಿ ಪುಲ್ವಾಮ ಅಟ್ಯಾಕ್ ಆಯಿತು. ಘಟನೆಯಲ್ಲಿ 40 ಸೈನಿಕರು ಸಾವನ್ನಪ್ಪಿದ್ದರು. ಅಲ್ಲೇ ಇದೀಗ ಮತ್ತೆ ಮರುಕಳಿಸಿದೆ. ಅವರು ಎಲ್ಲೇ ಇದ್ದರೂ ಪತ್ತೆ…
ಕಲಬುರಗಿ: ನಾಯಿ ಜೀವ ಉಳಿಸುವ ಪ್ರಯತ್ನದಲ್ಲಿ ನಡೆದ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಅಫಜಲಪುರ ತಾಲೂಕಿನ ಗೊಬ್ಬೂರು ಗ್ರಾಮದ ಬಳಿ ನಡೆದಿದೆ. ಕಲಬುರಗಿಯ ಮಿಲ್ಲತ್ ನಗರದ ಆಯೇಷಾ(70), ಅಜ್ಮೇರಾ(30), ಜೈನಬ್(2) ಮೃತಪಟ್ಟವರು ಎಂದು ತಿಳಿದು ಬಂದಿದೆ. ಇವರು ಸಂಬಂಧಿಕರ ಮಗಳ ಜಾವಳ ಕಾರ್ಯಕ್ರಮಕ್ಕೆಂದು ಟವೆರಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರ ಗಡಿಭಾಗದ ಹೈದ್ರಾ ದರ್ಗಾದಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಹೀಗಾಗಿ ಸಂಭ್ರಮದಲ್ಲಿ ಕುಟುಂಬ ಸಮೇತರಾಗಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಕಾರು ಗೊಬ್ಬೂರು ಬಳಿ ಬರುತ್ತಿದ್ದಂತೆಯೇ ನಾಯಿಯೊಂದು ಅಡ್ಡ ಬಂದಿದೆ. ನಾಯಿಯ ಪ್ರಾಣ ಉಳಿಸಲು ಕಾರು ಚಾಲಕ ರಸ್ತೆ ಬದಿಗೆ ಕಾರು ಇಳಿಸಿದ್ದಾನೆ. ಚಾಲಕ ತೆಗೆದುಕೊಂಡ ತಪ್ಪು ನಿರ್ಧಾರದಿಂದಾಗಿ ಕೆಲವೇ ಕ್ಷಣಗಳಲ್ಲಿ ಕಾರು ರಸ್ತೆ ಬದಿಯ ಕಲ್ಲಿನ ಕಂಬಕ್ಕೆ ಅಪ್ಪಳಿಸಿದ್ದು, ಮೂವರು ಕೊನೆಯುಸಿರೆಳೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಅಗತ್ಯ ಬಿದ್ದರೆ ಭಾರತದೊಂದಿಗೆ ನಾವು ನಿಲ್ಲುತ್ತೇವೆ ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯದ ವಕ್ತಾರ ಓರೆನ್ ಮಾರ್ಮೊರ್ ಸ್ಟೈನ್ ಹೇಳಿದ್ದಾರೆ. ಪತ್ರಕರ್ತರೊಂದಿಗಿನ ಸಂವಾದದ ವೇಳೆ, ಭಾರತ ಮತ್ತು ಇಸ್ರೇಲ್ ನಡುವಿನ ಸಂಬಂಧದ ಬಗ್ಗೆ ಅವರು ಮಾತಾಡಿದರು. ಇಸ್ರೇಲ್ ಭಾರತದ ಸ್ನೇಹಿತ, ಸ್ನೇಹಿತರು ಅಗತ್ಯದ ಸಮಯದಲ್ಲಿ ಪರಸ್ಪರ ಜೊತೆಗೆ ನಿಲ್ಲಲಿವೆ ಎಂದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಅವರು ಭಾರತವನ್ನು ಬೆಂಬಲಿಸಿದರು. ಇಸ್ರೇಲ್ ವಿದೇಶಾಂಗ ಸಚಿವ ಗಿಡಿಯಾನ್ ಸಾರ್, ಉಗ್ರರ ದಾಳಿಯ ಬಗ್ಗೆ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿದ್ದು, ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯಿಂದ ತೀವ್ರ ದುಃಖಿತನಾಗಿದ್ದೇನೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಇಸ್ರೇಲ್ ಭಾರತದೊಂದಿಗೆ ಜೊತೆಗಿರುತ್ತದೆ ಎಂದು ಬರೆದುಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW