Subscribe to Updates
Get the latest creative news from FooBar about art, design and business.
- ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ
- ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು
- ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!
- ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು
- ಪತಿಯಿಂದಲೇ ಮಹಿಳಾ ಕೌನ್ಸಿಲರ್ ಬರ್ಬರ ಹತ್ಯೆ!
- ತಿಪಟೂರು: ಆರ್ಥಿಕ ಸಂಕಷ್ಟದಲ್ಲಿದ್ದ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳ ವಿತರಣೆ
- ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ
- ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ
Author: admin
ತುರುವೇಕರೆ: ತುರುವೇಕೆರೆ ತಾಲ್ಲೂಕಿನ ಕಸಬಾ ಹೋಬಳಿ ಕೊಡಗಿಹಳ್ಳಿ ಗ್ರಾಮದ ಜೆ.ಶಂಕರ್(50) ಇವರು ನಾಪತ್ತೆಯಾಗಿದ್ದು, ಇವರ ಸುಳಿವು ದೊರೆತರೆ ತಕ್ಷಣವೇ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಲಾಗಿದೆ. ಡಿಸೆಂಬರ್ 12ರಂದು ಒಕ್ಕಲಿಗರ ಸಂಘದ ಚುನಾವಣೆ ಇದೆ. ಮತದಾನ ಮಾಡಿ ಬರುತ್ತೇನೆ ಎಂದು ಬೈಕ್ ನಲ್ಲಿ ಹೊರಟಿದ್ದ ಶಂಕರ್ ಅವರು, ವಾಪಸ್ ಮನೆಗೆ ಬಂದಿಲ್ಲ ಎನ್ನಲಾಗಿದೆ. ಮನೆಯಿಂದ ತೆರಳುವ ವೇಳೆ ಅವರು ಆರೆಂಜ್ ಬಣ್ಣದ ಶರ್ಟ್, ಕಪ್ಪು ಪ್ಯಾಂಟ್ ಧರಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಶಂಕರ್ ಅವರನ್ನು ಸಂಬಂಧಿಕರ ಮನೆ ಸೇರಿದಂತೆ ವಿವಿಧೆಡೆಗಳಲ್ಲಿ ಹುಡುಕಾಡಿದರೂ ಅವರು ಪತ್ತೆಯಾಗದ ಹಿನ್ನೆಲೆಯಲ್ಲಿ ಅವರ ಪತ್ನಿ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಶಂಕರ್ ಅವರ ಬಗ್ಗೆ ಯಾವುದೇ ಮಾಹಿತಿಗಳು ದೊರೆತಲ್ಲಿ ಸಾರ್ವಜನಿಕರು ತಕ್ಷಣವೇ ತುರುವೇಕೆರೆ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 08139- 287334 ಮತ್ತು ಸಬ್ ಇನ್ಸ್ ಪೆಕ್ಟರ್ ಮೊಬೈಲ್ ನಂಬರ್ 9480802965ಗೆ ಮಾಹಿತಿ ನೀಡುವಂತೆ ಕೋರಲಾಗಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: …
ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಕಾಮಗಾರಿಗಳ ಗುತ್ತಿಗೆಯ ಟೆಂಡರ್ ಪ್ರಕ್ರಿಯೆಯಲ್ಲಿ ಶೇ.40 ಲಂಚ ಪಡೆಯಲಾಗುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ ಮಾಡಿರುವ ಆರೋಪದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ. ಸಮಸ್ತ ಲಿಂಗಾಯತ ಹೋರಾಟ ವೇದಿಕೆ ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ಸಲ್ಲಿಸಿದ್ದು, 2013ರಿಂದ ಈವರೆಗೆ ನಡೆದಿರುವ ಎಲ್ಲ ಕಾಮಗಾರಿಗಳಿಗೆ ಸಂಬಂಧಿಸಿದಂತೆಯೂ ತನಿಖೆ ನಡೆಸಬೇಕು ಎಂದು ವೇದಿಕೆಯ ಅಧ್ಯಕ್ಷ ಬಿ.ಎಂ.ಚಿಕ್ಕನಗೌಡರ ಒತ್ತಾಯಿಸಿದ್ದಾರೆ. ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮೇಲೆ ಗುರುತರವಾದ ಆರೋಪ ಕೇಳಿಬಂದಿದೆ. ಈ ವಿಚಾರದಲ್ಲಿ ಅತ್ಯಂತ ಪಾರದರ್ಶಕ ರೀತಿಯಲ್ಲಿ ತನಿಖೆ ನಡೆಸಬೇಕು. ಲಂಚ ಪ್ರಮಾಣ ಹೆಚ್ಚುತ್ತಿರುವುದರಿಂದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಲು ಸಾಧ್ಯವಾಗುತ್ತಿಲ್ಲ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಹೇಳಿದ್ದಾರೆ. ಇದು ಅತ್ಯಂತ ಗಂಭೀರವಾದ ಸಮಸ್ಯೆ ಎಂದು ಅವರು ಹೇಳಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com…
ಶಹಜಾನ್ಪುರ: ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲೆಯಲ್ಲಿ 594 ಕಿ.ಮೀ. ಉದ್ದದ ಸುಮಾರು ₹ 36,230 ಕೋಟಿ ರೂ. ವೆಚ್ಚದ ಗಂಗಾ ಎಕ್ಸ್ಪ್ರೆಸ್ವೇಗೆ ಪ್ರಧಾನಿ ನರೇಂದ್ರ ಮೋದಿ ಇಂದು ಶಿಲಾನ್ಯಾಸ ನೆರವೇರಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಗಂಗಾ ಎಕ್ಸ್ಪ್ರೆಸ್ ಹೈವೇ ಉತ್ತರ ಪ್ರದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಯುವಕರಿಗೆ ಉದ್ಯೋಗ ಪಡೆಯಲು ಇದು ಸಹಕಾರಿಯಾಗಿದೆ. ಜತೆಗೆ ಗಂಗಾ ಎಕ್ಸ್ಪ್ರೆಸ್ ಹೈವೇ ಕೆಲಸ ಇಂದಿನಿಂದಲೇ ಪ್ರಾರಂಭವಾಗಲಿದೆ ಎಂದರು. ಮೀರತ್, ಹಾಪುರ್, ಬುಲಂದ್ಶಹರ್, ಅಮ್ರೋಹಾ, ಸಂಭಾಲ್, ಬದೌನ್, ಶಹಜಹಾನ್ಪುರ್, ಹರ್ದೋಯಿ, ಉನ್ನಾವೋ, ರಾಯ್ಬರೇಲಿ, ಪ್ರತಾಪ್ಗಢ್ ಮತ್ತು ಪ್ರಯಾಗ್ರಾಜ್ನಲ್ಲಿರುವ ಪ್ರತಿಯೊಬ್ಬರನ್ನು ನಾನು ಅಭಿನಂದಿಸುತ್ತೇನೆ. ಸುಮಾರು 600 ಕಿ.ಮೀ. ಉದ್ದದ ಈ ಎಕ್ಸ್ಪ್ರೆಸ್ವೇಗೆ 36,000 ಕೋಟಿ ರೂ.ಗೂ ಹೆಚ್ಚು ವೆಚ್ಚವಾಗಲಿದೆ. ಗಂಗಾ ಎಕ್ಸ್ ಪ್ರೆಸ್ವೇ ಈ ಪ್ರದೇಶದಲ್ಲಿ ಹೊಸ ಕೈಗಾರಿಕೆಗಳನ್ನು ತರುತ್ತದೆ ಎಂದಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಬೆಂಗಳೂರು: ಬೆಳಗಾವಿಯಲ್ಲಿ ಕನ್ನಡ ಧ್ವಜ ಸುಟ್ಟು, ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನ ಧ್ವಂಸಗೊಳಿಸಿ ಎಂಇಎಸ್ ಸಂಘಟನೆ ಪುಂಡಾಟಿಕೆ ಮೆರೆಯುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ನಾಳೆ ಬೆಳಗಾವಿ ಚಲೋ ನಡೆಸಲು ನಿರ್ಧರಿಸಿವೆ. ಕರ್ನಾಟಕ ರಕ್ಷಣಾ ವೇದಿಕೆಯ ಒಂದು ಬಣದ ಅಧ್ಯಕ್ಷ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಇಂದು ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಕನ್ನಡಪರ ಹೋರಾಟಗಾರರು ಸಭೆ ನಡೆಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಭಾನುವಾರ ಬೆಳಗ್ಗೆ 11 ಗಂಟೆಗೆ ಮೈಸೂರು ಬ್ಯಾಂಕ್ ಸರ್ಕಲ್ನಿಂದ ಬೆಳಗಾವಿ ಚಲೋ ಕಾರ್ಯಕ್ರಮ ಆರಂಭವಾಗಲಿದೆ. ಸೋಮವಾರ ಬೆಳಗ್ಗೆ ರ್ಯಾಲಿಗಳು ಬೆಳಗಾವಿಯ ಸುವರ್ಣ ಸೌಧ ತಲುಪುವ ನಿರೀಕ್ಷೆ ಇದೆ ಎನ್ನಲಾಗಿದೆ. ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಬೆಂಬಲಿಗರು ಕಾರು, ಬೈಕು, ಬಸ್, ರೈಲುಗಳ ಮೂಲಕ ಹೊರಟು ಸೋಮವಾರ ಬೆಳಗ್ಗೆ ಬೆಳಗಾವಿ ತಲುಪಲು ಸೂಚನೆ ನೀಡಲಾಗಿದೆ. ನೆಲಮಂಗಲದ ಹಾದಿಯಲ್ಲಿ ಪುಣೆ ಹೆದ್ದಾರಿಯಲ್ಲಿ ರ್ಯಾಲಿಗಳು ಸಾಗಲಿವೆ. ಕನ್ನಡಪರ ಹೋರಾಟ ಮತ್ತು ಪ್ರತಿಭಟನೆಗೆ ದಲಿತ ಸಂಘಟನೆಗಳು, ರೈತ ಸಂಘಟನೆಗಳು, ರಾಯಣ್ಣ ಅಭಿಮಾನಿ ಸಂಘಟನೆಗಳು ಕೂಡ ಈ ರ್ಯಾಲಿಗೆ ಕೈಜೋಡಿಸಲಿದೆ…
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 335 ಹೊಸ ಕೊವಿಡ್ ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ ಸಂಖ್ಯೆ 30,02,127ಕ್ಕೆ ಏರಿಕೆಯಾಗಿದೆ. ಕೊವಿಡ್ ನಿಂದಾಗಿ ಇಂದಯ 5 ಮಂದಿ ಮೃತಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಕೊವಿಡ್ ನಿಂದ ಮೃತಪಟ್ಟವರ ಸಂಖ್ಯೆ 30,02,127ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು 225 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,59,963ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ. ರಾಜ್ಯದಲ್ಲಿ ಇಂದು 286 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,56,691ಕ್ಕೆ ಏರಿಕೆಯಾಗಿದೆ. ಇನ್ನು 7,120 ಸಕ್ರಿಯ ಪ್ರಕರಣಗಳಿವೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಬೆಂಗಳೂರು: ಸ್ಯಾಂಕಿ ರಸ್ತೆಯ ಭಾಷ್ಯಂ ವೃತ್ತದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ ಸ್ಮಾರಕದ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಬಳಿದ ಘಟನೆಗೆ ಸಂಬಂಧಿಸಿದಂತೆ ಸದಾಶಿವನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಸ್ಯಾಂಕಿ ಕೆರೆಗೆ ಹೊಂದಿಕೊಂಡಿರುವ ಉದ್ಯಾನದಲ್ಲಿ ಶಿವಾಜಿ ಪ್ರತಿಮೆ ಇದೆ. ಗುರುವಾರ ರಾತ್ರಿ ಯಾರೋ ಕಿಡಿಗೇಡಿಗಳು ಉದ್ಯಾನದೊಳಗೆ ನುಗ್ಗಿ ಪ್ರತಿಮೆಗೆ ಮಸಿ ಬಳಿದಿದ್ದಾರೆ ಎಂದು ಸದ್ಯ ಹೇಳಲಾಗಿದೆ. ಘಟನೆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಗಸ್ತು ವಾಹನದ ಸಿಬ್ಬಂದಿ ಸ್ಥಳಕ್ಕೆ ಹೋಗಿ ಪರಿಶೀಲಿಸಿದ್ದರು. ಇನ್ನೂ ಘಟನೆಗೆ ಸಂಬಂಧಿಸಿದಂತೆ ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ಹೇಳಿದ್ದಾರೆ. ಸ್ಥಳದಲ್ಲಿ ಬಿಗಿ ಭದ್ರತೆ ಇದೆ. ಸಾರ್ವಜನಿಕರು ಯಾವುದೇ ಗಾಳಿ ಸುದ್ದಿಗಳಿಗೆ ಕಿವಿಗೂಡಬಾರದು ಎಂದು ಅವರು ಹೇಳಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತಿಪಟೂರು: ನೊಣವಿನಕೆರೆ ಹೋಬಳಿಯ ಬಜಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬಳ್ಳೇಕೆರೆ ಗ್ರಾಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಡಾ.ಎನ್.ಮೂರ್ತಿ ಸ್ಥಾಪಿತ ಸಂಘಟನೆಯನ್ನು ಬಳ್ಳೇಕೆರೆ ಗ್ರಾಮದಲ್ಲಿ ಇಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಟ್ಟಸ್ವಾಮಿ ಯವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ಅಶೋಕ್ ಗೌಡನಕಟ್ಟೆ ಮಾತನಾಡಿ, ಡಾ.ಎನ್.ಮೂರ್ತಿ ಬಣ. ಬಳ್ಳೇಕೆರೆ ಗ್ರಾಮದಲ್ಲಿ ಗ್ರಾಮ ಶಾಖೆ ಉದ್ಘಾಟನೆ ಮಾಡಿದ್ದು ತುಂಬಾ ಸಂತೋಷದ ವಿಷಯ, ಡಾಕ್ಟರ್ ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚನೆಯಿಂದ ಹಿಡಿದು ಹಲವಾರು ಕಾನೂನುಗಳ ರಚನೆಯ ಮೂಲಕ ಭಾರತದ ಮೊದಲ ಕಾನೂನು ಮಂತ್ರಿಯಾಗಿ ಅವರು ನೀಡಿದ ಕೊಡುಗೆಗಳು ಸಾಮಾಜಿಕ ವ್ಯವಸ್ಥೆಯ ವಿರುದ್ಧ ಮಾಡಿದ ಹೋರಾಟ ಅವರ ವಿದ್ಯೆಯಲ್ಲಿ ಅವಿತುಕೊಂಡ ಸಾಧನೆಗಳು. ನಮ್ಮವರೆಲ್ಲರಿಗೂ ತಿಳಿದು ಬರುತ್ತಿದೆ. ಹಾಗೆಯೇ ನಮ್ಮ ಎಲ್ಲ ಯುವಕರು ಪ್ರಜ್ಞಾವಂತರಾಗಿ ಸಂಘಟಿತರಾಗಿ ಶಿಕ್ಷಣ ಪಡೆದು ಹೋರಾಟದ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕಾಗಿದೆ ಎಂದು ತಿಳಿಸಿದರು ತಾಲೂಕು ಉಪಾಧ್ಯಕ್ಷರಾದ ಮತ್ತಿಘಟ್ಟ ಶಿವಕುಮಾರ್ ಮಾತನಾಡಿ, ಸಮುದಾಯದ ಏಳಿಗೆಗೆ ಮತ್ತು ತಳ ಸಮುದಾಯದ ಬದುಕಿನ…
ಚಿಕ್ಕಬಳ್ಳಾಪುರ: ಪ್ರೀತಿಸಿ ಮದುವೆಯಾಗಿದ್ದ ಯುವತಿಯೊಬ್ಬರು ನಾಲ್ಕೇ ದಿನದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯಲ್ಲಿ ನಡೆದಿದೆ. ವರದಿಗಳ ಪ್ರಕಾರ ಯುವತಿ ಬಾಗೆಪಲ್ಲಿಯ ಲಾಡ್ಜ್ ವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಯುವತಿಯ ಆತ್ಮಹತ್ಯೆಗೆ ಕಾರಣಗಳೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಅಟ್ಟಹಳ್ಳಿ ನಿವಾಸಿಯಾಗಿರುವ 25 ವರ್ಷದ ಯುವತಿ ಯಲಹಂಕದ ಬಾಗಲೂರು ಕ್ರಾಸ್ ನಿವಾಸಿಯಾಗಿರುವ ಯುವಕನನ್ನು ಪ್ರೀತಿಸಿ ನಾಲ್ಕು ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದಳು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತಿಪಟೂರು: ತಾಲ್ಲೂಕು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ತಿಪಟೂರಿನ ಶ್ರೀ ಸತ್ಯಗಣಪತಿ ಪೆಂಡಾಲ್ ಮುಂಭಾಗದಲ್ಲಿರುವ ಅರಳೀಕಟ್ಟೆ ವೃತ್ತವನ್ನು ಪುನೀತ್ ರಾಜ್ ಕುಮಾರ್ ವೃತ್ತವೆಂದು ಹಾಗೂ ಕೆ.ಆರ್.ಬಡಾವಣೆಯ ನಾಲ್ಕನೇ ಮುಖ್ಯರಸ್ತೆಯಲ್ಲಿ ವಾಸ ಇರುವ ಡಾ.ರಾಜ್ ಕುಮಾರ್ ಬಾಲ್ಯ ಸ್ನೇಹಿತರಾದ ಶ್ರೀರಾಮಸ್ವಾಮಿಯವರ ರಸ್ತೆಯನ್ನು ಯುವರತ್ನ, ಪುನೀತ್ ರಾಜ್ ಕುಮಾರ್ ರಸ್ತೆ ಎಂದು ನಾಮಕರಣ ಮಾಡುವಂತೆ ನಗರಸಭೆ ಪೌರಾಯುಕ್ತರಾದ ಉಮಾಕಾಂತ್ ರವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಸಂಘಟನೆಯ ತಾಲ್ಲೂಕು ಅಧ್ಯಕ್ಷ ಬಿ.ಟಿ.ಕುಮಾರ್, ನಗರಸಭಾ ಸದಸ್ಯ ಮಹೇಶ್, ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಬಿ.ಬಿ.ಬಸವರಾಜ್ ಮಾತನಾಡಿ, ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಮನವಿ ಮಾಡಿದರು. ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ನಗರಸಭೆ ಆಯುಕ್ತರಾದ ಉಮಾಕಾಂತ್, ಮುಂದಿನ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಚರ್ಚಿಸಿ, ಸೂಕ್ತ ನಿರ್ಣಯವನ್ನು ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಬೆನ್ನಾಯಕನಹಳ್ಳಿ ಗ್ರಾ.ಪಂ. ಸದಸ್ಯ ನರಸಿಂಹಯ್ಯ, ನಗರ ಗೌರವಾಧ್ಯಕ್ಷ ಡಾ.ಭಾಸ್ಕರ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹಿದ್, ಕಾರ್ಯಾಧ್ಯಕ್ಷ ಅನ್ವರ್ ಪಾಷಾ, ದಲಿತ ಮುಖಂಡ…
ಸರಗೂರು: ಹೆಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯ ನೂತನ ಆಡಳಿತ ವೈದ್ಯಾಧಿಕಾರಿ ಇಟ್ನ ಗ್ರಾಮದ ಡಾ.ಸೋಮಣ್ಣ ಅವರನ್ನು ಕಾಂಗ್ರೆಸ್ ಮುಖಂಡರು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಡಾ.ರವಿಕುಮಾರ್, ಪುರಸಭಾ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಹೆಚ್.ಸಿ.ನರಸಿಂಹಮೂರ್ತಿ, ಮೈಮೂಲ್ ನಿರ್ದೇಶಕರಾದ ಹೀರೆಗೌಡ, ಕಾಂಗ್ರೆಸ್ ಹಿರಿಯ ಮುಖಂಡ ಡಿ.ಸುರೇಂದ್ರ ಗೌಡ, ಡಿಸಿಸಿ ಸದಸ್ಯ ಪರಶಿವಮೂರ್ತಿ, ಕ್ಯಾತನಹಳ್ಳಿ ನಾಗರಾಜು, ಪುರಸಭಾ ಸದಸ್ಯರಾದ ಮಧುಕುಮಾರ್, ಸಾಮಾಜಿಕ ಜಾಲತಾಣದ ಉಪಾಧ್ಯಕ್ಷ ವೆಂಕಿ ಕೋಟೆ, ಉಮೇಶ್ ವನಸಿರಿ ಮತ್ತಿತರರು ಭಾಗವಹಿಸಿದ್ದರು. ವರದಿ: ಚಂದ್ರ ಹಾದನೂರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700