Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ಕೊರಟಗೆರೆ: ಪ್ರತಿ ತಿಂಗಳ 3ನೇ ಶನಿವಾರದಂದು ಸರ್ಕಾರದ ಅದೇಶದಂತೆ ಆಯ್ದ ಗ್ರಾಮದಲ್ಲಿ ಗ್ರಾಮ ಸಭೆ ನಡೆಸಿ ಗ್ರಾಮಸ್ಥರಿಗೆ ಎಲ್ಲಾ ಇಲಾಖಾ ಅಧಿಕಾರಿಗಳ ಸಮ್ಮುಖದಲ್ಲಿ ವಿವಿಧ ಸವಲತ್ತು ಮತ್ತು ಜಾಗೃತಿಯನ್ನು ಮೂಡಿಸಲಾಗುತ್ತದೆ ಎಂದು ತಹಶೀಲ್ದಾರ್ ನಾಹಿದಾ ಜಮ್ ಜಮ್ ತಿಳಿಸಿದರು. ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ನವಿಲುಕುರಿಕೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡಿದ ಅವರು, ನವಿಲುಕುರಿಕೆ ಗ್ರಾಮ ವಾಸ್ತವ್ಯದಲ್ಲಿ ತಾಲೂಕಿನ ಎಲ್ಲಾ ಇಲಾಖಾ ಅಧಿಕಾರಿಗಳು ಹಾಜರಾಗಿ, ಇಲಾಖೆಯ ವಿವಿಧ ಮಾಹಿತಿಗಳನ್ನು ಹಂಚಿಕೊಂಡು, ಜನರ ಸಮಸ್ಯೆಗಳು ಅಧಿಕಾರಿಗಳ ಮಟ್ಟದಲ್ಲೇ ಪರಿಹರಿಸಲು ಸಾಧ್ಯ ಇದ್ದರೆ ಇಲ್ಲೇ ಪರಿಹರಿಸಿಕೊಳ್ಳಬಹುದು. ದೊಡ್ಡ ಸಮಸ್ಯೆಗಳನ್ನು ಸಂಬಂಧ ಪಟ್ಟ ಹಿರಿಯ ಅಧಿಕಾರಿಗಳಿಗೆ, ಶಾಸಕರಿಗೆ , ಸರ್ಕಾರಕ್ಕೆ ಕಳುಹಿಸಲಾಗುವುದು ಎಂದರು. ಚುನಾವಣೆಯಲ್ಲಿ ಮತ ಹಕ್ಕು ಪಡೆದಿರುವ ಜನರು ಈಗ ತಮ್ಮ ಅಧಾರ್ ಕಾರ್ಡ್ ಗೆ ಚುನಾವಣೆ ಗುರುತಿನ ಚೀಟಿಯನ್ನು ಲಿಂಕ್ ಮಾಡಲೇಬೇಕಿದೆ ಹಾಗೂ ಸರ್ಕಾರದ ಪಿಂಚಣಿದಾರರು ತಮ್ಮ ಪಿಂಚಣಿ ಆದೇಶ ಪತ್ರ, ಆಧಾರ್ ಮತ್ತು ಬ್ಯಾಂಕ್…
ಕೊರಟಗೆರೆ : ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶ್ರೀ ಗೌತಮ ಬುದ್ಧ ಸಾಮಾಜಿಕ-ಶೈಕ್ಷಣಿಕ-ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಕನ್ನಡ ಭಾಷಾ ಕಲಿಕಾ ಶಿಬಿರವನ್ನು ಆಯೋಜಿಸಲಾಗಿತ್ತು. ಕೊಡಗೆ ತಾಲೂಕಿನ ಕಸ್ಬಾ ಹೋಬಳಿ ಮತ್ತು ಚೆನ್ನರಾಯನದುರ್ಗ ಹೋಬಳಿಯ ವ್ಯಾಪ್ತಿಯಲ್ಲಿ ಬರುವ ಪ್ರೌಢಶಾಲೆಗಳಲ್ಲಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಕಲಿಕಾ ಉತ್ತೇಜನದ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.. ಈ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ವ್ಯವಸ್ಥಾಪಕರು ಮತ್ತು ಪ್ರಧಾನ ಕಾರ್ಯದರ್ಶಿಗಳು ಕನ್ನಡ ಭಾಷಾ ಕಲಿಕಾ ಶಿಬಿರದ ನೇತೃತ್ವ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎನ್.ಆರ್.ನಾಗರಾಜು , ಉಪನ್ಯಾಸಕರಾದ ನಂಜುಂಡಪ್ಪ ಸುಗ್ಗಯ್ಯ, ಡಾ. ರವಿಕುಮಾರ್, ವೀಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶ್ರೀ ಗೌತಮ ಬುದ್ಧ ಸಾಮಾಜಿಕ ಶೈಕ್ಷಣಿಕ ಸಾಂಸ್ಕೃತಿಕ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಡಾ.ನಾಗರಾಜು ಎನ್. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಕನ್ನಡ ಕೆಲವೊಂದಷ್ಟು ಪಾಠಗಳನ್ನು ಮಾಡುವುದರ ಮೂಲಕ ಕನ್ನಡ ಭಾಷೆಯ ಬಗ್ಗೆ ಅಭಿಮಾನ ತುಂಬುವ ಕೆಲಸ ಮಾಡಿದರು. ಈ ಸಂದರ್ಭದಲ್ಲಿ ಟ್ರಸ್ಟ್ ನ…
ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ಮದರ್ ಡ್ರೀಮ್ಸ್ ರೂರಲ್ ಮತ್ತು ಅರ್ಬನ್ ಎಜುಕೇಶನ್ ಡೆವಲಮೆಂಟ್ ಸೊಸೈಟಿ ವತಿಯಿಂದ ಸರಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಉಚಿತ ಸಂಜೆ ಪಾಠ ಶಾಲೆ ಕಾರ್ಯಕ್ರಮವನ್ನು ಸುಳ್ಯ ತಾಲೂಕಿನ ಐವರ್ನಾಡಿನ ದೇವಕಾನ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ದೇವರಕಾನದಲ್ಲಿ ಆಯೋಜಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ನವೀನ್ ಸಾರಕೇರೆ ಮಾತನಾಡಿ, ಸಂಸ್ಥೆಯ ಉದ್ದೇಶ ಮಕ್ಕಳ ಜೀವನವನ್ನು ರೂಪಿಸುವಲ್ಲಿ ಬಹಳ ಯಶಸ್ವಿಯಾಗಲಿ ಎಂದು ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾರಾದ ಪ್ರಮೀಳಾ ಮಾತನಾಡಿ, ಈ ಸಂಸ್ಥೆಯ ಯೋಜನೆಗೆ ಪೂರ್ಣ ಬೆಂಬಲ ವ್ಯಕ್ತಪಡಿಸಿದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾದ ಮಹಾಂತೇಶ್ ಡಿ. ಮಾತನಾಡಿ ಎಪಿಜೆ ಅಬ್ದುಲ್ ಕಲಾಂ, ಕುವೆಂಪು, ಸ್ವಾಮಿ ವಿವೇಕಾನಂದರ ರೀತಿ ಮಕ್ಕಳು ಬೆಳೆಯಲಿ ಎಂದು ಹಾರೈಸಿದರು. ಶಾಲಾ ಮಕ್ಕಳಾದ ಸುಪ್ರಿತಾ ಮತ್ತು ತಂಡದವರು ಓದುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಥೆಯ ಪದಾಧಿಕಾರಿಗಳು ಮತ್ತು ಸದಸ್ಯರಾದ ಸೋಮಪ್ರಸಾದ್ ರೈ ಗೂಡಂಬೆ ಮರ್ಕಂಜ, ಚಂದ್ರಶೇಖರ ಕೆ.ಪಲ್ಲತ್ತಡ್ಕ, ಮಧುಸೂದನ…
ತಿಪಟೂರು: ತಾಲ್ಲೂಕಿನ ಹಾಲೇನಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾಧಿಕಾರಿ ಡಾ.ವೈ.ಎಸ್ ಪಾಟೀಲ್ ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಮಾತನಾಡಿ, ಸರ್ಕಾರಿ ಕೆಲಸಕ್ಕಿಂತ ಸ್ವಯಂ ಉದ್ಯೋಗ ಉತ್ತಮ. ಜ್ಞಾನಕ್ಕಾಗಿ ನಾವು ಓದಬೇಕು, ಸರ್ಕಾರಿ ಕೆಲಸ ಸಿಗುತ್ತದೆಂದು ಓದಿ ನಿರಾಶರಾಗದೇ ಸ್ವಂತ ಉದ್ಯಮ, ಕೃಷಿಯಲ್ಲಿ ತೊಡಗಿಸಿಕೊಂಡು ಸಮೃದ್ಧಿಹೊಂದಿ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಕರೆನೀಡಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಮಕ್ಕಳು ಅಭಿನಯ ಗೀತೆ ಹಾಡಿದ್ದು, ಎಲ್ಲರ ಕಣ್ಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರ್ವಹಣಾಧಿಕಾರಿ ವಿದ್ಯಾಕುಮಾರಿ ತಾಲ್ಲೂಕು ಉಪ ವಿಭಾಗಾಧಿಕಾರಿ ಕಲ್ಪಶ್ರೀ ತಹಶೀಲ್ದಾರ್ ಚಂದ್ರಶೇಖರ್ ನಗರಸಭೆ ಪೌರಾಯುಕ್ತ ಉಮಾಕಾಂತ್ ಸಮಾಜ ಕಲ್ಯಾಣ ಇಲಾಖೆ ತಾಲ್ಲೂಕು ಅಧಿಕಾರಿ ದಿನೇಶ್ ಮತ್ತಿತರರು ಭಾಗಿಯಾಗಿದ್ದರು . ವರದಿ: ಆನಂದ್, ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಶುರುವಾಗಿದ್ದು, ಬಿಎಸ್ ವೈ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದ ಮೇರೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ, ಶಶಿಧರ ಮರಡಿ, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ವಿರುಪಾಕ್ಷಪ್ಪ, ಕೆ.ರವಿ ಅವರ ವಿರುದ್ಧ ಎಫ್ಐಆರ್ ದಾಖಲಾಗಲಿದೆ. ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆಗಳನ್ನು ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿಯಿಂದ ಕೋಟ್ಯಾಂತರ ರೂಪಾಯಿ ನಗದು ಪಡೆದಿದ್ದಾರೆ. ಜೊತೆಗೆ ಶೆಲ್ ಕಂಪನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಆರ್ ಟಿಐ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ಖಾಸಗಿ ದೂರು ದಾಖಲಿಸಿದ್ದರು. ಆದರೆ ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ಜನಪ್ರತಿನಿಧಗಳ ವಿಶೇಷ ನ್ಯಾಯಾಲಯ ದೂರನ್ನ ವಜಾಗೊಳಿಸಿತ್ತು. ಬಳಿಕ ಟಿ.ಜೆ.ಅಬ್ರಾಹಂ ಇದನ್ನ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ಎಫ್ಐಆರ್ ದಾಖಲಿಸಲು ಹೈಕೋರ್ಟ್ ಸೂಚಿಸಿತ್ತು.…
ಮೇಕೆದಾಟು ಪಾದಯಾತ್ರೆ ಇದೀಗ ಭಾರತ್ ಜೋಡೋ ಯಾತ್ರೆ ಮೂಲಕ ಕಾಂಗ್ರೆಸ್ ನಾಯಕರು ಪಕ್ಷವನ್ನ ಸಂಘಟಿಸುತ್ತಿದ್ದು ಈ ಮಧ್ಯೆ ಕೆಲಸ ಮಾಡದ ಶಾಸರಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಶಾಸಕರು ಏನು ಮಾಡಬೇಕೆಂದು ಟಾರ್ಗೆಟ್ ನೀಡಲಾಗಿದೆ. ರಣದೀಪ್ ಸುರ್ಜೇವಾಲ ಟಾರ್ಗೆಟ್ ನೀಡಿದ್ದಾರೆ. ಕೆಲಸ ಮಾಡಿದವರಿಗೆ ಯಾಕ್ರಿ ಟಿಕೆಟ್..? ನನಗೆ ನಂಬರ್ ಬೇಕು ನಮ್ಮ ಸರ್ಕಾರ ಬರಬೇಕು. ಶಾಸಕರು ಕೇವಲ ಮದುವೆಗೆ ಅಟೆಂಡ್ ಆಗೋದಲ್ಲ. ಟೇಪ್ ಕಟ್ ಮಾಡಿಕೊಂಡು ಹೋದರೆ ಆಗಲ್ಲ. ಬೂತ್ ಮಟ್ಟದಲ್ಲಿ ಹೋಗ ಕೆಲಸ ಮಾಡಬೇಕು ಹಾಗೆಯೇ ಕೆಲಸ ಮಾಡಿದರೇ ಮಾತ್ರ ಪಕ್ಷ ಸಂಘಟನೆ ಆಗುತ್ತದೆ ಎಂದು ಡಿ.ಕೆ ಶಿವಕುಮಾರ್ ಶಾಸಕರಿಗೆ ಸಲಹೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಾಂಡವಪುರ ಚಂದ್ರೆ ಗ್ರಾಮದಲ್ಲಿ 35 ಅಡಿ ಆಳದ ನೀರಿಲ್ಲದ ತೆರದ ಬಾವಿಯಲ್ಲಿ ನವಜಾತ ಶಿಶು ಪತ್ತೆಯಾಗಿತ್ತು. ಗಂಡು ಮಗು ಜೀವಂತವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನವಜಾತ ಶಿಶುಗೆ ಪಾಂಡವಪುರ ತಾಲ್ಲೂಕಿನ ವೈದ್ಯಾಧಿಕಾರಿಗಳ ತಂಡ ಪ್ರಥಮ ಚಿಕಿತ್ಸೆ ನೀಡಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಿಮ್ಸ್‌ಗೆ ಕಳುಹಿಸಿಕೊಟ್ಟಿದೆ. ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಮಿಮ್ಸ್ ಐಸಿಯುನಲ್ಲಿರುವ ಮಗುವಿನ ಆರೋಗ್ಯದ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಮಂಡ್ಯ ಜಿಲ್ಲಾಧಿಕಾರಿ ಎಸ್. ಅಶ್ವತಿ ಸಹ ಸಚಿವರ ಜೊತೆ ಆಸ್ಪತ್ರೆಗೆ ಭೇಟಿ ನೀಡಿದ್ದು, ಜಿಲ್ಲಾಡಳಿತದ ವತಿಯಿಂದ ಮಗುವಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಅಧಿಕಾರಿಗಳು ಸ್ಥಳೀಯ ವ್ಯಕ್ತಿಯೊಬ್ಬನನ್ನು ಬಾವಿಗೆ ಇಳಿಸಿ ಮಗು ರಕ್ಷಣೆ ಮಾಡಿದ್ದರು. ಆಗ ಮಗುವಿನ ಪಕ್ಕದಲ್ಲಿ ಹಾವು ಸಹ ಇತ್ತು. ಗ್ರಾಮದ ಮಹಿಳೆಯೊಬ್ಬರು ಮಗುವಿಗೆ ಎದೆಹಾಲು ಉಣಿಸಿ ಮಾನವೀಯತೆ ಮೆರೆದಿದ್ದದ್ದರು. ಬಳಿಕ ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳಿಸಲಾಗಿತ್ತು.…
ತುಮಕೂರು: ಚಲಿಸುತ್ತಿದ್ದ ಕಾರಿನ ಟಯರ್ ಒಡೆದು 6 ಜನರು ಪ್ರಯಾಣಿಸುತ್ತಿದ್ದ ಫಾರ್ಚುನರ್ ಕಾರು ಮಗುಚಿ ಬಿದ್ದ ಘಟನೆ ಯಡಿಯೂರು ಬ್ರಿಡ್ಜ್ ಸಮೀಪ ಭಾನುವಾರ ನಡೆದಿದೆ. ಮೈಸೂರಿನಿಂದ ಯಡಿಯೂರಿಗೆ ಬರುತ್ತಿದ್ದ ಕಾರಿನ ಟಯರ್ ಬ್ಲಾಸ್ಟ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದ್ದು, ಸುಮಾರು 50 ಮೀಟರ್ ಗಳವರೆಗೆ ಕಾರು ರಸ್ತೆಯಲ್ಲಿ ಉಜ್ಜಿಕೊಂಡು ಹೋಗಿದೆ. ಅಪಘಾತಕ್ಕೀಡಾದ ಕಾರಿನಲ್ಲಿ 2 ವರ್ಷದ ಮಗು ಸೇರಿದಂತೆ ಒಟ್ಟು 6 ಮಂದಿ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಕಾರಿನಲ್ಲಿದ್ದ ಯಾರಿಗೂ ಯಾವುದೇ ಗಾಯಗಳಾಗದೇ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ವರದಿ: ಶಿವಕುಮಾರ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಕಲಬುರ್ಗಿ ಹಳೆ ಜೇವರ್ಗಿ ರಸ್ತೆಯಲ್ಲಿ ನಡೆದಿದೆ. 23 ವರ್ಷದ ಜಮೀರ್ ಕೊಲೆಯಾದ ಯುವಕ. ಕಲಬುರ್ಗಿಯ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿಯಾಗಿರುವ ಜಮೀರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಳೆವೈಷಮ್ಯದದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿಕ್ಕಬಳ್ಳಾಪುರ : ಮಕ್ಕಳಿಲ್ಲ ಎಂಬ ಕೊರಗಿನಿಂದ ಮನನೊಂದು ದಂಪತಿಯ ಒಂದೇ ಸೀರೆಯಲ್ಲಿ ನೇಣಿಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೂಲಕುಂಟೆ ಗ್ರಾಮದಲ್ಲಿ ನಡೆದಿದೆ. ಎರಡು ವರ್ಷಗಳಿಂದ ಮಕ್ಕಳಾಗಿಲ್ಲವೆಂದು ನೋಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರನ್ನು ಚಂದ್ರು (32), ಶಶಿಕಲಾ (25) ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy