Subscribe to Updates
Get the latest creative news from FooBar about art, design and business.
- ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ
- ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ
- ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ
- ನವೆಂಬರ್ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಮಕೂರು ಜಿಲ್ಲಾ ಪ್ರವಾಸ
- ತುಮಕೂರು | SSLC ಫಲಿತಾಂಶ ಸೇರಿದಂತೆ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿತು ಜಿಲ್ಲೆಯ ಹಲವು ಸಮಸ್ಯೆಗಳು!
- ಜಮೀನಿನ ಖಾತೆ ಬದಲಾವಣೆಗೆ ಲಂಚಕ್ಕೆ ಬೇಡಿಕೆ: ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಲೋಕಾಯುಕ್ತ ಬಲೆಗೆ
- ಬೀದರ್ | ದೇವರ ದರ್ಶನ ಮುಗಿಸಿ ಬರುತ್ತಿದ್ದ ವೇಳೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು
- ತಿಪ್ಪಯನದುರ್ಗ ಗ್ರಾಮದಲ್ಲಿ ಮಣ್ಣು ಹಗರಣ: ಪ್ರಶ್ನಿಸಿದಾಗ ಸ್ಥಳೀಯ ಶಾಸಕರ ಹೆಸರು ದುರ್ಬಳಕೆ!
Author: admin
ಹೆಣ್ಣು ಮಕ್ಕಳ ಚಟಕ್ಕೆ ಬಿದ್ದು ಕಳ್ಳತನ ಮಾಡುತ್ತಿದ್ದ ವೃದ್ಧನನ್ನ ಸುದ್ದುಗುಂಟೆ ಪೊಲೀಸರು ಬಂಧಿಸಿದ್ದಾರೆ. 70 ವರ್ಷದ ರಮೇಶ್ ಬಂಧಿತ ಆರೋಪಿ ಎಂದು ಆಗ್ನೇಯ ವಿಭಾಗ ಡಿಸಿಪಿ ಶ್ರೀನಾಥ್ ಜೋಶಿ ತಿಳಿಸಿದ್ದಾರೆ. ಸಿಸಿಟಿವಿ ಆಧರಿಸಿ ಮನೆಗಳ್ಳತನ ಪ್ರಕರಣಗಳ ಸಂಬಂಧಗಳ ತನಿಖೆಯ ವಿಚಾರಣೆ ವೇಳೆ ಆರೋಪಿ ರಮೇಶ್ ಗೆ ಹೆಣ್ಣು ಮಕ್ಕಳ ಚಟ ಇರುವ ಬಗ್ಗೆ ಬಯಲಿಗೆ ಬಂದಿದೆ. ಆರೋಪಿ ರಮೇಶ್(Ramesh) ಎರಡು ಮದುವೆ, ಮೂರು ಮಕ್ಕಳಾಗಿದ್ದರು ಆಸೆ ಕಡಿಮೆಯಾಗಿಲ್ಲ. ಆರೋಪಿ ಮೂಲತಃ ಚಿಕ್ಕಮಗಳೂರಿನವ, ತನ್ನ ಚಟಕ್ಕೆ ಮನೆಯಲ್ಲಿ ಹಣ ಕೊಡಲಿಲ್ಲ ಎಂದು ಮನೆ ಕಳ್ಳತನ ಮಾಡಲು ಆರಂಭಿಸಿದ್ದ. ಆರೋಪಿ ರಮೇಶ್ ಕಳೆದ 12 ವರ್ಷಗಳ ಹಿಂದೆ ಮನೆ ತೊರೆದು ತಮಿಳುನಾಡಿಗೆ(Tamilunadu) ತೆರಳಿದ್ದ. ಅಲ್ಲಿ ಸಣ್ಣಪುಟ್ಟ ಕಳ್ಳತನ ಮಾಡಿಕೊಂಡು ಬಂದ ಹಣದಲ್ಲಿ ವ್ಯಾಮೊಹ ತೀರಿಸಿಕೊಳ್ಳುತಿದ್ದ. ಆದ್ರೆ ಯಾವಾಗ ತಮಿಳುನಾಡು ಪೊಲೀಸರು ಬಂಧಿಸಿದ್ರೊ ಬಿಡುಗಡೆಯಾದ ಬಳಿಕ ಬೆಂಗಳೂರಿಗೆ ಶಿಫ್ಟ್ ಆಗಿದ್ದ. ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಮನೆಗಳ್ಳತನ ಮಾಡಲು ಆರಂಭಿಸಿದ್ದ. ಸಧ್ಯ ಸುದ್ದುಗುಂಟೆ ಪಾಳ್ಯ…
ಪ್ರತಿ ವರ್ಷದಂದು ಮಂಡನೆಯಾಗಲಿರುವ ಬಜೆಟ್ ಗೆ ಜನ ಸಾಮಾನ್ಯರಿಂದ ಹಿಡಿದು ಬೃಹತ್ ಕೈಗಾರಿಕೋದ್ಯಮಿಗಳವರೆಗೆ ಎಲ್ಲರೂ ಕಾತುರದಿಂದ ಕಾಯ್ದು ಕುಳಿತಿರುತ್ತಾರೆ. ಬಜೆಟ್ ಆಧಾರದ ಮೇಲೆ ದೇಶದ, ರಾಜ್ಯದ, ಜಿಲ್ಲೆ, ತಾಲೂಕುಗಳ ಆಯವ್ಯಯ ನಿರ್ಧರಿತವಾಗುತ್ತದೆ ಅಷ್ಟೇ ಅಲ್ಲದೆ ಇದು ಆರ್ಥಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ. ಈ ಹಿನ್ನಲೆಯಲ್ಲಿ ಇಂದು ಸಿಎಂ ಬೊಮ್ಮಾಯಿ ಮಂಡಿಸುತ್ತಿರುವ ಬಜೆಟ್ ಮೇಲೆ ಸಹಜವಾಗಿ ಹೆಚ್ಚಿನ ನಿರೀಕ್ಷೆ ಇದೆ. ಈ ಹಿನ್ನಲೆಯಲ್ಲಿ ಈಗ ನಾವು ಬಜೆಟ್ ಪರಿಕಲ್ಪನೆ ಬಗ್ಗೆ ಸಂಕ್ಷಿಪ್ತವಾಗಿ ತಿಳಿದುಕೊಳ್ಳಬೇಕಾಗಿದೆ.ಭಾರತದಲ್ಲಿ ಬಜೆಟ್ ಪರಿಕಲ್ಪನೆ ಬೆಳೆದು ಬಂದ ಬಗೆ.. ಪ್ರತಿ ವರ್ಷದ ಆಯವ್ಯಯದ ಲೆಕ್ಕವನ್ನು ಮಂಡಿಸಲಿರುವ ಬಜೆಟ್ ಭವಿಷ್ಯದ ಬೆಳವಣಿಗೆಗೆ ಸಂಬಂಧಿಸಿದಂತೆ ಹೊಸ ದೃಷ್ಟಿಕೋನವನ್ನು ನೀಡುತ್ತದೆ. ಇಂತಹ ಬಜೆಟ್ ಪರಿಕಲ್ಪನೆ ಭಾರತದಲ್ಲಿ ಮೊದಲ ಬಾರಿಗೆ ಈಸ್ಟ್ ಇಂಡಿಯಾ ಕಂಪನಿಯ ಸ್ಕಾಟಿಷ್ ಅರ್ಥಶಾಸ್ತ್ರಜ್ಞ ಮತ್ತು ರಾಜಕಾರಣಿ ಜೇಮ್ಸ್ ವಿಲ್ಸನ್ ಅದನ್ನು ಬ್ರಿಟಿಷ್ ರಾಣಿಗೆ ಏಪ್ರಿಲ್ 7, 1860 ರಂದು ಬಜೆಟ್ ಮಂಡಿಸುವ ಮೂಲಕ ಚಾಲನೆಗೆ ಬಂದಿತು. ಇದಾದ ನಂತರ ಸ್ವತಂತ್ರ ಭಾರತದ…
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸುವ ಗುರಿ ಹೊಂದಿರುವ ಮೇಕೆದಾಟು ಯೋಜನೆಯ ಕಾಮಗಾರಿಯನ್ನು ಪ್ರಾರಂಭಿಸಲು ಒತ್ತಾಯಿಸಿ ಪ್ರತಿಪಕ್ಷ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಕರ್ನಾಟಕ ಹೈಕೋರ್ಟ್ ಗುರುವಾರದಂದು ಆಕ್ಷೇಪ ವ್ಯಕ್ತಪಡಿಸಿದೆ. ಇನ್ನು ಮುಂದೆ ಬೆಂಗಳೂರಿನಲ್ಲಿ ಯಾವುದೇ ಪ್ರತಿಭಟನೆ ನಡೆಸದಂತೆ ಕಾಂಗ್ರೆಸ್ಗೆ ನ್ಯಾಯಾಲಯ ಆದೇಶಿಸಿದೆ.ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಪ್ರತಿಭಟನೆಗಳು ಮತ್ತು ಆಂದೋಲನಗಳು ಬೆಂಗಳೂರಿನ ಫ್ರೀಡಂ ಪಾರ್ಕ್ ಆವರಣಕ್ಕೆ ಸೀಮಿತವಾಗಿದ್ದು, ವಾಹನ ಸವಾರರು ಮತ್ತು ಸಾಮಾನ್ಯ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಪೀಠವು ಸರ್ಕಾರಕ್ಕೆ ತಿಳಿಸಿದೆ “ನಾವು ಹೈಕೋರ್ಟ್ (Karnataka High Court) ತಲುಪಲು ಒಂದು ಗಂಟೆ ತೆಗೆದುಕೊಂಡಿದ್ದೇವೆ.ಸಾಮಾನ್ಯ ಜನರು ಹೇಗೆ ಪ್ರಯಾಣಿಸಬೇಕು ಹೇಳಿ ? ಸರ್ಕಾರ ಈ ಬಗ್ಗೆ ನಿರ್ಬಂಧಗಳನ್ನು ಹೊರಡಿಸಬೇಕು,”ಎಂದು ಪೀಠ ಹೇಳಿದೆ.ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಸೇವಕರು ಘೋಷಿಸಿದ ಆದೇಶಕ್ಕೆ ಅಸಹಕಾರ) ಮತ್ತು ಕರ್ನಾಟಕ ಪೊಲೀಸ್ ಕಾಯಿದೆ, 1963 ರ ಅಡಿಯಲ್ಲಿ ಕಾನೂನು…
ಚಾಮರಾಜನಗರ: ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಗುಡ್ಡ ಕುಸಿದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದ ಸಮೀಪವಿರುವ ಬಿಳಿಕಲ್ಲು ಕ್ವಾರಿಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಸಾವಿನ ಬಗ್ಗೆ ನಿಖರ ಮಾಹಿತಿ ಇನ್ನೂ ಅಧಿಕಾರಿಗಳು ತಿಳಿಸಿಲ್ಲ, ಸದ್ಯಕ್ಕೆ, ಇಬ್ಬರು ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.ಈ ಕುರಿತು ಎಸ್ಪಿ ಟಿ.ಪಿ.ಶಿವಕುಮಾರ್ ಮಾಹಿತಿ ನೀಡಿದ್ದು, ಮಹೇಂದ್ರಪ್ಪ ಎಂಬವರ ಹೆಸರಿನಲ್ಲಿ ಗಣಿಗಾರಿಕೆ ಪರವಾನಗಿ ಇದೆ, ಅದು ಕಾನೂನುಬದ್ಧವಾಗಿ ನಡೆಯುತ್ತಿದೆ.ಕ್ವಾರಿ ಸಿಬ್ಬಂದಿ ಹೇಳಿದ ಪ್ರಕಾರ ಆರು ಜನರು ಗುಡ್ಡದಡಿ ಸಿಲುಕಿದ್ದರು.ನಾವು ಈಗಾಗಲೇ ಅಶ್ರಫ್, ಪ್ರಾನ್ಸಿಸ್ ಎಂಬಿಬ್ಬರನ್ನು ರಕ್ಷಿಸಿದ್ದೇವೆ.ಮಹಾರಾಷ್ಟ್ರ (Maharashtra) ಮೂಲದ ಕಾರ್ಮಿಕರಾದ ಇಮ್ರಾನ್ ಮತ್ತು ಬಬ್ಲು ಎಂಬವರು ಗುಡ್ಡದಡಿ ನಾಪತ್ತೆಯಾಗಿದ್ದಾರೆ.ಸದ್ಯ, ಕ್ವಾರಿಯ ಮ್ಯಾನೇಜರ್ ನವೀದ್ ಎಂಬಾತನನ್ನು ಬಂಧಿಸಿದ್ದೇವೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಬಿಳಿಕಲ್ಲುಗಳನ್ನು ತೆಗೆಯಲು ಬ್ಲಾಸ್ಟ್ ಮಾಡಿದ ವೇಳೆ ಹಂತಹಂತವಾಗಿ ಗುಡ್ಡ ಕುಸಿಯಲು ಪ್ರಾರಂಭಿಸಿದ್ದರಿಂದ ಎಲ್ಲರೂ ಓಡಿಹೋಗಿದ್ದಾರೆ ಎನ್ನಲಾಗಿದ್ದು ನಾಲ್ಕು ಟಿಪ್ಪರ್, ಮೂರು ಹಿಟಾಚಿ, ಮೂರು ಕಂಪ್ರೆಸ್ಸರ್,ಎರಡು ಟ್ರಾಕ್ಟರ್ ಗಳು ಗುಡ್ಡದ ಕೆಳಗೆ ಸಿಲುಕಿವೆ. ಜೊತೆಗೆ, ಘಟನೆಯಲ್ಲಿ 8 ಕ್ಕೂ…
ಮಾಜಿ ಸಚಿವ ಜನಾರ್ದನ ರೆಡ್ಡಿ (Janardan Reddy) ಸುಪುತ್ರ ಕಿರೀಟಿ ಅದ್ಧೂರಿಯಾಗಿ ಗಾಂಧಿನಗರದ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಾಹುಬಲಿ ಸೂತ್ರಧಾರ ಎಸ್.ಎಸ್ ರಾಜಮೌಳಿಯ ಅಭಯ ಹಸ್ತದಿಂದ ಕಿರೀಟಿ (Kirity) ಚೊಚ್ಚಲ ಚಿತ್ರಕ್ಕೆ ಆರಂಭ ಸಿಕ್ಕಿದೆ. ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್, ಶ್ರೀಲೀಲಾ ಸೇರಿದಂತೆ ದೊಡ್ಡ ತಾರಾಬಳಗವೇ ನಟಿಸಲಿರುವ ಈ ಸಿನಿಮಾದ ಮುಹೂರ್ತ ಇವತ್ತು ಅದ್ಧೂರಿಯಾಗಿ ನೆರವೇರಿದೆ.ಕಿರೀಟಿ ಸ್ಟಂಟ್, ಡ್ಯಾನ್ಸ್ ಮೆಚ್ಚಿದ ಮೌಳಿ..! ಕಿರೀಟಿ ಚೊಚ್ಚನ ಸಿನಿಮಾಗೆ ಕ್ಲ್ಯಾಪ್ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ ರಾಜಮೌಳಿ (Rajamouli) ಹೀರೋ ಇಂಟ್ರೂಡಕ್ಷನ್ ಟೀಸರ್ ನೋಡಿ ಕಿರೀಟಿ ಬೆನ್ನುತಟ್ಟಿದರು. “ನನಗೆ ಪ್ರಾಮಿಸಿಂಗ್ ಆಗಿರುವ ಯುವ ಪ್ರತಿಭೆಯನ್ನು ಲಾಂಚ್ ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಇವರು ನಟನೆ ಮಾಡಬಹುದು, ಡ್ಯಾನ್ಸ್ ಮಾಡಬಹುದು, ಇವರು ಸ್ಟಂಟ್ಸ್ ಅನ್ನೂ ಮಾಡಬಹುದು. ಇದೇ ಸಂದರ್ಭದಲ್ಲಿ ಯುವ ಪ್ರತಿಭೆಗೆ ಒಳ್ಳೆ ಲಾಂಚ್ ಕೂಡಬೇಕು. ಈ ಪ್ರತಿಭೆ ಈಗ ಅದ್ಭುತ ಕೈಗಳ ಜೊತೆ ಸೇರಿಕೊಂಡಿದೆ. ಅದಕ್ಕೆ ಖುಷಿಯಾಗುತ್ತಿದೆ. ಎಂದು ರಾಜಮೌಳಿ ಹೇಳಿದ್ದಾರೆ. ಕಿರೀಟಿ ಬಗ್ಗೆ…
ಧಾರವಾಡ : ಇತ್ತೀಚೆಗೆ ಧಾರವಾಡ ಜಿಲ್ಲಾ ಅಧಿಕಾರಿಗಳ ಮನೆ ಆವರಣದಲ್ಲಿದ್ದ ಒಂದು ಶ್ರೀಗಂಧದ ಮರ ಕಳ್ಳತನ ಮಾಡಿದ್ದ ಆರೋಪಿ ನವಲಗುಂದ ತಾಲೂಕಿನ ತಿರ್ಲಾಪುರ ಗ್ರಾಮದ ಮಾರುತಿ ತಂದೆ ಯಮನಪ್ಪ ಕಟ್ಟಿಮನಿ(31) ಆಗಿದ್ದು, ಆರೋಪಿಯನ್ನು ನಿನ್ನೆಯ ದಿನ ಮಾಲು ಸಮೇತ ಧಾರವಾಡ ವಲಯದ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿ, ಇಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಧಾರವಾಡ ಶಹರದಲ್ಲಿರುವ ಜಿಲ್ಲಾಧಿಕಾರಿಗಳ ವಸತಿಗೃಹ ಆವರಣದಲ್ಲಿನ ಒಂದು ಶ್ರೀಗಂಧದ ಮರ ಮತ್ತು ಗುಂಗರಗಟ್ಟಿ ಶ್ರೀಗಂಧದ ನೇಡುತೋಪಿನಲ್ಲಿರುವ ಬೆಲೆಬಾಳುವ ಶ್ರೀಗಂಧದ ಮರಗಳನ್ನು ಅಕ್ರಮವಾಗಿ ಕಡಿದು ತುಂಡುಗಳನ್ನಾಗಿ ಪರಿವರ್ತಿಸಿ, ಸುಮಾರು ಒಂದು ಲಕ್ಷ ಮೌಲ್ಯದ ಶ್ರೀಗಂಧದ ತುಂಡುಗಳನ್ನು ಸಾಗಾಟ ಮಾಡುವ ಸಮಯದಲ್ಲಿ ಮಾಲು ಸಮೇತ ಆರೋಪಿಯನ್ನು ಬಂಧಿಸಲಾಗಿದೆ.ಮತ್ತು ಇಂದು ಬೆಳಿಗ್ಗೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.ಮತ್ತು ಕಳ್ಳತನದಲ್ಲಿ ಭಾಗಿಯಾಗಿರುವ ಉಳಿದ ಆರೋಪಿಗಳ ಬಂಧನಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. ಸದರಿ ದಾಳಿಯನ್ನು ಧಾರವಾಡ (Dharwad) ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ, ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್…
ಬೆಂಗಳೂರು: ರೇವಾ ಕಾಲೇಜಿ(Reva College)ನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಇಂಜನಿಯರಿಂಗ್ ಸೀಟ್(Engineering Seat) ಕೊಡಿಸುವುದಾಗಿ ಯುವತಿಗೆ ವಂಚಿಸಿದ್ದ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಬೆಂಗಳೂರಿನ ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ವಂಚಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹರ್ಷ(24) ಮತ್ತು ಚೇತನ್(27) ಬಂಧಿತ ಆರೋಪಿ(Cheating Case)ಗಳಾಗಿದ್ದಾರೆ. ಜನವರಿ 28ರಂದು ರಾಜೇಶ್ವರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಇದೇ ಪ್ರಕರಣಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳನ್ನೂ ಅರೆಸ್ಟ್ ಮಾಡಲಾಗಿದೆ. ರೇವಾ ಕಾಲೇಜಿ(Engineering College)ನಲ್ಲಿ ಕಂಪ್ಯೂಟರ್ ಸೈನ್ಸ್ ಸೀಟ್ ಕೊಡಿಸುವುದಾಗಿ ಯುವತಿಯೊಬ್ಬರಿಗೆ ಆರೋಪಿಗಳು 1.27 ಲಕ್ಷ ರೂ. ಹಣ ಪಡೆದು ವಂಚಿಸಿದ್ದರು.ಯುವತಿಯಿಂದ ಹಣ ಪಡೆದ ಬಳಿಕ ವಂಚಕರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಎಸ್ಕೇಪ್ ಆಗಿದ್ದರು. ಸದ್ಯ ಬಂಧಿತರಿಂದ 7 ಲಕ್ಷ ರೂ. ನಗದು, 120 ಗ್ರಾಂ ಒಡವೆಗಳನ್ನು ಖಾಕಿಪಡೆ ವಶಕ್ಕೆ ಪಡೆದುಕೊಂಡಿದೆ. ಹರ್ಷ ಮತ್ತು ಚೇತನ್(Fraud) ಇಬ್ಬರೂ ಏರ್ಟೆಲ್ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದರು. ಸಿಮ್ ಖರೀದಿಸಲು ಬರುವರ…
ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಜಲ್ ಜೀವನ್ ಮಿಷನ್ ಯೋಜನೆಯು ಆಯಾ ಗ್ರಾಮಗಳಲ್ಲಿ ಅನುಷ್ಠಾನವಾಗಬೇಕಾದರೆ ಸಮುದಾಯವು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತುರುವೇಕೆರೆ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಹಾಗೂ ಸ್ನೇಹ ಜೀವನ ಫೌಂಡೇಶನ್(ರಿ) ಗುಬ್ಬಿ ಇವರ ಸಂಯುಕ್ತಾಶ್ರಯದಲ್ಲಿಂದು ತುರುವೇಕೆರೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿ ನೀರು ಮತ್ತು ನೈರ್ಮಲ್ಯ ಕುರಿತು ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಪ್ರತಿ ಮನೆಗೂ ನಳ ಸಂಪರ್ಕ ಒದಗಿಸಿ ಪ್ರತಿ ವ್ಯಕ್ತಿಗೆ 55 ಲೀಟರ್ ಶುದ್ಧವಾದ ನೀರನ್ನು ಒದಗಿಸುವುದು ಜಲ ಜೀವನ್ ಮಿಷನ್ ಯೋಜನೆಯ ಪ್ರಮುಖ ಉದ್ದೇಶ. ಅಲ್ಲದೇ ಸರ್ಕಾರದ ಹಲವಾರು ಯೋಜನೆಗಳು ನೀರು ಮತ್ತು ನೈರ್ಮಲ್ಯದ ವಿಚಾರವಾಗಿ ಕಾರ್ಯನಿರ್ವಹಿಸುತ್ತಿವೆ. ನೀರು ಅತ್ಯಮೂಲ್ಯವಾದುದ್ದು, ಪ್ರತಿಯೊಂದು ಹನಿ ನೀರನ್ನು ನಾವು ಶೇಖರಣೆ ಮಾಡಬೇಕು. ಅದಕ್ಕಾಗಿಯೇ ಪ್ರತಿಯೊಂದು ಮನೆಯಲ್ಲಿ ಮಳೆ ನೀರು ಕೊಯ್ಲು…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಕಣಜನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಕಣಜನಹಳ್ಳಿ ಗ್ರಾಮದಲ್ಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ SR ತಿಪ್ಪೇಸ್ವಾಮಿ, ನಗರ ಸಭಾ ಸದಸ್ಯರು ಈರಲಿಂಗೆಗೌಡ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಗೀತಾ ನಂದಿನಿ ಗೌಡ, ಯತೀಶ್ , ಬಿ.ಎಸ್. ಸದಾನಂದ,ಡಿಸಿಸಿ ST ವಿಭಾಗದ ಪ್ರಧಾನ ಕಾರ್ಯದರ್ಶಿ ಚಿದಾನಂದ ಸ್ವಾಮಿ ಆರ್,ಜಿಲ್ಲಾ ಆಸಂಘಟಿತ ಕಾರ್ಮಿಕ ವಿಭಾಗ ಸಂಘಟನ ಕಾರ್ಯದರ್ಶಿ ಜೆ ವಿದ್ಯಾಧರ,ಕೃಷ್ಣಾಪುರ ಹನುಮಂತರಾಯ, SC ತಿಪ್ಪೇಸ್ವಾಮಿ, ಅರಳಿಕೆರೆ ಬಸವರಾಜ್, ಮಂಜುನಾಥ್, ಗ್ರಾ. ಪಂ. ಸದಸ್ಯರು ಗೋವಿಂದ ರಾಜು,ಶ್ರೀನಿವಾಸ್,ಇನ್ನು ಹಲವಾರು ಪಕ್ಷದ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು . ವರದಿ: ಮುರುಳಿಧರನ್ ಆರ್., ಹಿರಿಯೂರು . ( ಚಿತ್ರದುರ್ಗ – ದಾವಣಗೆರೆ )
ಮಧುಗಿರಿ ತಾಲ್ಲೂಕು ಕೊಂಡವಾಡಿ ಗ್ರಾಮದಲ್ಲಿ ಅಂದಿನಿಂದಲೂ ನೆಲೆಗೊಂಡಿರುವ ಶ್ರೀ ಉಧ್ಬವ ಬಂಗಾರು ಕಾಟುಮ ಲಿಂಗೇಶ್ವರ ಸ್ವಾಮಿ ಜಾತ್ರೆಯು,ಪ್ರತೀ ವರ್ಷ ಶಿವರಾತ್ರಿ ಹಬ್ಬದ ಪ್ರಯುಕ್ತ ಬಹಳ ವಿಜೃಂಭಣೆಯಿಂದ ನಡೆಯುತ್ತದೆ. ವಾಡಿಕೆಯಂತೆ ,ಈ ಬಾರಿಯೂ ದೇವಸ್ಥಾನದ ಟ್ರಸ್ಟ್ ,ಭಕ್ತ ಮಹಾಶಯರು,ಮತ್ತು ಸಾರ್ವಜನಿಕರ ಸಹಕಾರದಿಂದ ಈ ಬಾರಿಯೂ ಜಾತ್ರೆ ಪ್ರಯುಕ್ತ ಎಲ್ಲ ವಿಧಿ ವಿಧಾನಗಳನ್ನು ಆಚರಿಸಲಾಯಿತು. ಅದರಲ್ಲಿಯೂ ವಿಶೇಷವಾಗಿ ಗುರುವಾರದಂದು ದೇವಾಲಯದ ಪ್ರಾಂಗಣದಲ್ಲಿ “ನೂರಾ ಒಂದು ಎಡೆ ” ಪೂಜೆಯನ್ನು ವಿದ್ಯುಕ್ತವಾಗಿ ಶ್ರದ್ದೆ ಮತ್ತು ಭಕ್ತಿ ಗಳಿಂದ ಆಚರಿಸಲಾಯಿತು. ಈ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಸಾವಿರಾರು ಜನ ದೂರ ದೂರುಗಳಿಂದಲೂ ಆಗಮಿಸಿ ಸ್ವಾಮಿ ಕೃಪೆಗೆ ಪಾತ್ರರಾದರು.. ಎಂತಹ ಬರಗಾಲದಲ್ಲೂ ಸಹ ಜಾತ್ರೆಯ ಆಚರಣೆಗಳು ನಿಲ್ಲದೆ ನಡೆದುಕೊಂಡು ಬಂದಿರುವುದು ಈ ಜಾತ್ರೆಯ ವಿಶೇಷ. ಗ್ರಾಮದ ಪ್ರತಿ ಮನೆಗಳಲ್ಲೂ ಹಬ್ಬದ ವಾತಾವರಣ,ಮನೆಗಳನ್ನೆಲ್ಲ ಸುಣ್ಣ ಬಣ್ಣ ಮಾಡಿ ಸಿಂಗರಿಸಿಕೊಂಡು ಊರಿಗೆ ಊರೇ ಜಾತ್ರೆಯ ಸಡಗರದಲ್ಲಿ ಮುಳುಗಿತ್ತು. ಈ ದೇವಸ್ಥಾನದ ಒಕ್ಕಲು ,ಮತ್ತು ಸಕಾಲ ಕರ್ನಾಟಕ ಸರ್ಕಾರ ದ ಆಡಳಿತಾಧಿಕಾರಿಗಳೂ ಆದ…