Author: admin

ಹಾವೊಂದಕ್ಕೆ ಆಪರೇಷನ್‌ ಮಾಡಿ ಪ್ರಾಣ ಉಳಿಸಿರುವ ವಿಶೇಷ ಘಟನೆ ನಗರದ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ  ನಡೆದಿದ್ದು, ಮೂರು‌ ದಿನದ ಆರೈಕೆ ನಂತರ ನಾಗಪ್ಪನನ್ನು ಕಾಡಿಗೆ ಬಿಟ್ಟಿದ್ದಾರೆ.ಹೌದು., ಚಾಮರಾಜನಗರದ   ಸೋಮವಾರಪೇಟೆಯಲ್ಲಿ  4 ದಿನಗಳ ಹಿಂದೆ ಜಮೀನೊಂದರಲ್ಲಿ ಉಳುಮೆ ಮಾಡುವಾಗ ಸಿಲುಕಿ ಗಾಯಗೊಂಡಿದ್ದ ನಾಗರಹಾವೊಂದನ್ನು ಉರಗ ಪ್ರೇಮಿ ಸ್ನೇಕ್ ಅಶೋಕ್ ಪಶು ಆಸ್ಪತ್ರೆಯಲ್ಲಿ ಡಾ.ಮೂರ್ತಿ ಎಂಬವರಿಂದ ಚಿಕಿತ್ಸೆ ಕೊಡಿಸಲಾಗಿದೆ. ಹಾವಿನ  ದೇಹದ ಎರಡು ಕಡೆ ತುಂಡಾಗಿದ್ದನ್ನು ಹೊಲಿದು ಸೇರಿಸಲಾಗಿದ್ದು ಜೊತೆಗೆ ಮೂಳೆ ಮುರಿತವನ್ನು ಕಿರು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸಲಾಗಿದೆ. ಮೂರು ದಿನ ಸ್ನೇಕ್ ಅಶೋಕ್ ಆರೈಕೆಯಲ್ಲೇ ಇದ್ದ ನಾಗರಹಾವನ್ನು ಇಂದು ನಗರದ ಕರಿವರದರಾಜಸ್ವಾಮಿ ಬೆಟ್ಟಕ್ಕೆ ಬಿಟ್ಟು ಬರಲಾಗಿದೆ ಎಂದು ಸ್ನೇಕ್ ಅಶೋಕ್ ಮಾಹಿತಿ ಕೊಟ್ಟಿದ್ದಾರೆ. ಇನ್ನು, ಸ್ನೇಕ್ ಅಶೋಕ್ ಹಾವು ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿದ್ದು ಇಲ್ಲಿಯವರೆಗೆ 17-18 ಸಾವಿರದಷ್ಟು ಹಾವುಗಳನ್ನು ಹಿಡಿದು ಕಾಡಿಗೆ ಬಿಟ್ಟು ಬಂದಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

2023 ರಲ್ಲಿ ಜೆಡಿಎಸ್ ಸರ್ಕಾರ ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ‘2023 ರಲ್ಲಿ ಜೆಡಿಎಸ್ ಸರ್ಕಾರ ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆ. ನಾವು ನೀಟ್ ವಿರೋಧಿಸುತ್ತೇವೆ. ಮಕ್ಕಳ ಜೀವಕ್ಕೆ ಕುಣಿಕೆ ಬಿಗಿದು ಕಂಡವರ ಜೇಬು ಭರ್ತಿ ಮಾಡುವ ಈ ದಂಧೆ ಬೇಕಿಲ್ಲ. ಅದಕ್ಕೆ ಚರಮಗೀತೆ ಹಾಡುತ್ತವೆ’ ಅಂತಾ ಹೇಳಿದ್ದಾರೆ.‘ಪ್ರಶ್ನೆ ಮಾಡಿದರೆ ದ್ರೋಹವೇ? ಧನದಾಹವೇ? ಕರ್ನಾಟಕದ ಉನ್ನತ ಶಿಕ್ಷಣ ಸಚಿವರು ಕಟ್ಟಿರುವ ಈ ಹಣಿಪಟ್ಟಿ ಬಗ್ಗೆ ಏನೂ ಹೇಳಬೇಕೋ ಕಾಣೆ. ನೀಟ್  ವಿರೋಧಿಸುವವರು ಧನಧಾಹಿಗಳು, ದ್ರೋಹಿಗಳು ಎಂದು ಅವರು ಯಾರನ್ನು ಉದ್ದೇಶಿಸಿ ಹೇಳಿದ್ದು ಎನ್ನುವುದನ್ನು ಅವರೇ ತಿಳಿಸಬೇಕು’ ಅಂತಾ ತಿರುಗೇಟು ನೀಡಿದ್ದಾರೆ.‘ನಾನು ಮೆಡಿಕಲ್ ಕಾಲೇಜು ನಡೆಸುತ್ತಿಲ್ಲ. ಎಂಜಿನಿಯರಿಂಗ್ ಕಾಲೇಜನ್ನೂ ನಡೆಸುತ್ತಿಲ್ಲ. ಕೊನೆಪಕ್ಷ ಒಂದು ಸಣ್ಣ ಕೈಗಾರಿಕೆಯೂ ಇಲ್ಲ. ಬಿಡದಿಯ ತೋಟ ಬಿಟ್ಟರೆ ನನ್ನದೂ ಎನ್ನುವಂಥದ್ದು ಏನೂ ಇಲ್ಲ. ಆದರೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ದ್ರೋಹಿಗಳು, ಧನಧಾಹಿಗಳು ಎಂದು…

Read More

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಚೊಚ್ಚಲ ಬಜೆಟ್ ಸಿದ್ಧತೆಗಳು ಮುಗಿದಿದ್ದು, ನಾಳೆ ರಾಜ್ಯ ಸರ್ಕಾರದ ಆರ್ಥಿಕ ವರ್ಷ 2022-23 ರ ಬಜೆಟ್ ಮಂಡನೆ ಮಾಡಲಿದ್ದಾರೆ. ಆದರೆ ಆರ್ಥಿಕ ಇಲಾಖೆ ಹೇಳುವ ಪ್ರಕಾರ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಜಿ ಎಸ್ ಟಿ ಪರಿಹಾರ ಮತ್ತು ಕೇಂದ್ರ ಅನುದಾನ ಸಾವಿರಾರು ಕೋಟಿ ಬಾಕಿ ಇರಿಸಿಕೊಂಡಿದೆ. ಜಿಎಸ್ ಟಿ ಪರಿಹಾರ ಪಾವತಿ ಬಾಕಿ ₹ 7000 ಕೋಟಿ: GST ಜಾರಿ ಆದ ಸಂದರ್ಭದಿಂದಲೂ ರಾಜ್ಯ ಸರ್ಕಾರ ಕೇಂದ್ರ ಹಣಕಾಸು ಇಲಾಖೆಯ ಕದ  ತಟ್ಟುತ್ತಲೇ ಇದೆ ಹೊರತು ಈವರೆಗೆ ಸಮಾಧಾನಕರವಾದ ಪರಿಹಾರ ರಾಜ್ಯಕ್ಕೆ ಸಿಕ್ಕಿಲ್ಲ. ಈ ನಡುವೆ ರಾಜ್ಯ ಸರ್ಕಾರ ಕಳೆದ ಎರಡು ವರ್ಷದಿಂದ  ಜಿಎಸ್ ಟಿ ಪರಿಹಾರವಾಗಿ ಸಾಲ ಪಡೆಯುವ ವಿಶೇಷ ಅವಕಾಶವನ್ನು ಬಳಸಿಕೊಂಡಿದೆ.ವಾಣಿಜ್ಯ ಇಲಾಖೆ ಮಾಹಿತಿ ಪ್ರಕಾರ 2021-22ರಲ್ಲಿ ಜಿಎಸ್ ಟಿ ಪರಿಹಾರ ಹಾಗೂ ಸಾಲದ ರೂಪದಲ್ಲಿ 18,000 ಕೋಟಿ ಸ್ವೀಕರಿಸಿದೆ. ಇನ್ನೂ 7,000 ಕೋಟಿ ಪಾವತಿಯಾಗದೇ ಬಾಕಿ ಉಳಿದುಕೊಂಡಿದೆ. ಒಟ್ಟು 11,000 ಕೋಟಿ…

Read More

ಸಿರಾ: ಯುದ್ಧ ಪೀಡಿತ ಉಕ್ರೇನ್‌ ನಲ್ಲಿ ಕರ್ನಾಟಕದ ಹಲವಾರು ವಿದ್ಯಾರ್ಥಿಗಳು ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರುವ ಪ್ರಯತ್ನ ನಡೆಯುತ್ತಿದೆ. ಶಿರಾ ತಾಲ್ಲೂಕಿನ ವಿದ್ಯಾರ್ಥಿ ಕೂಡ ಉಕ್ರೇನ್ ನಲ್ಲಿ ಸಿಲುಕಿದ್ದು, ವಿದ್ಯಾರ್ಥಿಗಳ ಮನೆಗೆ ತಾಲ್ಲೂಕು ಜೆಡಿಎಸ್ ಅದ್ಯಕ್ಷ ಆರ್.ಉಗ್ರೇಶ್ ಭೇಟಿ ನೀಡಿ, ವಿದ್ಯಾರ್ಥಿಯನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವ ಭರವಸೆಯನ್ನು ನೀಡಿದರು. ತಾಲ್ಲೂಕಿನ ವೈದ್ಯಕೀಯ ವಿದ್ಯಾರ್ಥಿ ಸ್ವಾಮಿ ಜೊತೆ ವಿಡಿಯೋ ಕರೆ ಮೂಲಕ ಮಾತನಾಡಿ ಧೈರ್ಯ ತುಂಬಿದರು. ನಮ್ಮ ಪಕ್ಷದಿಂದ ಬೇಕಾಗಿರುವ ಸಹಾಯ ಮಾಡುವುದಾಗಿ ಭರವಸೆ ನೀಡಿದರು. ಜೊತೆಗೆ ಕುಟುಂಬಸ್ಥರು ಕೂಡ ಧೈರ್ಯದಿಂದ ಇರುವಂತೆ ಹೇಳಿದರು. ವರದಿ: ಎ.ಎನ್.ಪೀರ್, ತುಮಕೂರು

Read More

ಪಾವಗಡ: ತಾಲೂಕು ನಿಡಗಲ್ ಹೋಬಳಿ ವ್ಯಾಪ್ತಿಯಲ್ಲಿರುವ ಗುಜ್ಜನಡು ಗ್ರಾಮ ಪಂಚಾಯಿತಿ ಸಮಾಜಸೇವಕರಾದ ಸಾಯಿಸುಮನ ಹನುಮಂತರಾಯಪ್ಪ ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ದೇವಲಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಪುಸ್ತಕಗಳನ್ನು, ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಶಾಲೆಯ SDMC ಅಧ್ಯಕ್ಷರು ಈರಣ್ಣ, ನರಸಿಂಹನಾಯಕ, ರಾಮಚಂದ್ರಪ್ಪ, ಅಶ್ವತಪ್ಪ, ದೇವರಾಜ್, k p ಲಿಂಗಣ್ಣ, ಅಜಯ್ ಗೌಡ , ಗೌತಮ್ ಶಾಲಾ ಮುಖ್ಯೋಪಾಧ್ಯಾಯರು ಭಾರತಿ H, ಹಾಗೂ ಅತಿಥಿ ಶಿಕ್ಷಕರಾದ ಲೋಕೇಶ್ ಉಪಸ್ಥಿತರಿದ್ದರು. ವರದಿ: ನಂದೀಶ್ ಕೊತ್ತೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಜ್ಯ ಬಿಜೆಪಿಯಲ್ಲಿನ ಅನಿಶ್ಚಿತತೆ, ಪ್ರತಿಪಕ್ಷ ಕಾಂಗ್ರೆಸಿನ ಪ್ರಖರತೆ ಹಾಗೂ ಮುಂದಿನ ವರ್ಷ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಗಳನ್ನು‌ (Assembly Elections) ದೃಷ್ಟಿಯಲ್ಲಿ ಇಟ್ಟುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಸಮತೋಲನದ ಬಜೆಟ್ (Balancing Budget) ಮಂಡಿಸುವುದು ಸವಾಲಿನ ಕೆಲಸವಾಗಿದೆ. ಇದರ ನಡುವೆ ಕೋವಿಡ್, ಆರ್ಥಿಕ ಹಿಂಜರಿತ, ವ್ಯಾಪರ-ವಹಿವಾಟುಗಳ ಕುಂಠಿತ, ಬೆಲೆ ಏರಿಕೆ ಮತ್ತಿತರ ಸಮಸ್ಯೆಗಳನ್ನು ಎದುರಿಸುತ್ತಿರುವ ರಾಜ್ಯದ ಜನ ಬಸವರಾಜ ಬೊಮ್ಮಾಯಿ‌ ಅವರ ಚೊಚ್ಚಲ ಬಜೆಟ್ ಅಪಾರ ನಿರೀಕ್ಷೆಯನ್ನೂ ಇಟ್ಟುಕೊಂಡಿದ್ದಾರೆ. ಉತ್ತರ ಕರ್ನಾಟಕಕ್ಕೆ ಹಲವು ಕೊಡುಗೆ ಸಾಧ್ಯತೆ: ಬಿ.ಎಸ್. ಯಡಿಯೂರಪ್ಪ (BS Yediyurappa) ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಳಿಸಿ ಬಸವರಾಜ ಬೊಮ್ಮಾಯಿ‌ (Basavaraja Bommai) ಅವರಿಗೆ ಸಿಎಂ ಸ್ಥಾನ ನೀಡುವಾಗ ಅವರು ಉತ್ತರ ಕರ್ನಾಟಕದವರು ಎಂಬುದನ್ನೂ ಪರಿಗಣಿಸಲಾಗಿತ್ತು. ಈ ಹಿನ್ನಲೆಯಲ್ಲಿ ಬಸವರಾಜ ಬೊಮ್ಮಾಯಿ‌ ಮಂಡಿಸುವ ಬಜೆಟ್‌ನಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಹಲವು ಕೊಡುಗೆಗಳನ್ನು ನೀಡುವ ನಿರೀಕ್ಷೆಯಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಹಲವು ಯೋಜನೆಗಳು ನಡೆಯುತ್ತಿದ್ದು ಅವುಗಳಿಗೆ ಬಜೆಟ್‌ನಲ್ಲಿ…

Read More

ತುಮಕೂರು: ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಪತ್ನಿಯನ್ನು  ಸ್ಕ್ರೂಡ್ರೈವರ್  ನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ತುಮಕೂರು ತಾಲೂಕಿನ ಕೆಂಬಳಲು ಗ್ರಾಮದಲ್ಲಿ ನಡೆದಿದೆ.  ಗಾರೆ ಕೆಲಸ ಮಾಡುತ್ತಿದ್ದ ಪತಿ ನಾಗರಾಜು ಎಂಬಾತ ಕುಡಿದ ಮತ್ತಿನಲ್ಲಿ ಪತ್ನಿಗೆ ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಕೊಲೆ ಮಾಡಿ ನಂತರ ಮೃತಾದೇಹವನ್ನು ಬಾತ್ರೂಮ್ ಪಿಟ್ ಗುಂಡಿಯಲ್ಲಿ ಎಸೆದಿದ್ದಾನೆ ಎನ್ನಲಾಗಿದೆ. ಜಯಮ್ಮ (52) ಹತ್ಯೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಬುಧವಾರ ರಾತ್ರಿ ಪ್ರಕರಣ ಬಯಲಿಗೆ ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ  ಪತಿ ನಾಗರಾಜುನನ್ನು ವಶಕ್ಕೆ ಪಡೆದಿದ್ದಾರೆ. ಮೃತಪಟ್ಟ ಮಹಿಳೆಯ ಮೃತ ದೇಹವನ್ನು ಫಿಟ್ ಗುಂಡಿಯಿಂದ  ಹೊರತೆಗೆಯಲಾಗಿದ್ದು ತುಮಕೂರು ಜಿಲ್ಲಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.  ವರದಿ: ಮಾರುತಿ ಪ್ರಸಾದ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಬಜೆಟ್ ಎಂದಾಕ್ಷಣ ಜನ ಸಾಮಾನ್ಯರಿಂದ ಹಿಡಿದು ಉದ್ಯಮಿಗಳ ತನಕ ಹತ್ತು ಹಲವು ನಿರೀಕ್ಷೆಗಳು ಗರಿಗೆದ ರುವುದು ಸಹಜ. ಇಂಥದ್ದೆ ನಿರೀಕ್ಷೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಲಿರುವ ಬಜೆಟ್ ಮೇಲೂ ಇದೆ.  ಮೊದಲಿಂದಲೂ ರೈತ ಸಮುದಾಯಕ್ಕೆ ಬಜೆಟ್​ನಲ್ಲಿ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಬಂಗಾರಪ್ಪ, ಎಸ್.ಎಂ.ಕೃಷ್ಣ ಮತ್ತು ಸಿದ್ದರಾಮಯ್ಯ, ಜೆಡಿಎಸ್ ಅಧಿಕಾರದಲ್ಲಿದ್ದಾಗ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ಸರ್ಕಾರದಲ್ಲಿ ಬಿ.ಎಸ್.ಯಡಿಯೂರಪ್ಪ ವಿಶೇಷ ಕಾಳಜಿ ವಹಿಸಿದ್ದಾರೆ. ಉಚಿತ ವಿದ್ಯುತ್, ಗ್ರಾಮೀಣ ಕೃಪಾಂಕ, ಸಬ್ಸಿಡಿ ನೀಡುವ ಕಾರ್ಯಕ್ರಮ, ಸಾಲಮನ್ನಾ ಯೋಜನೆಗಳು ಆಯಾ ಕಾಲಘಟ್ಟಕ್ಕೆ ಸರ್ಕಾರದ ಜನಪ್ರಿಯತೆ ಹೆಚ್ಚಿಸಲು ಕಾರಣವಾಗಿವೆ. ವಿದ್ಯಾರ್ಥಿಗಳಿಗಾಗಿ ತಂದ ಯೋಜನೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ, ಸೈಕಲ್, ಲ್ಯಾಪ್​ಟಾಪ್ ಉಚಿತ ವಿತರಣೆ ಯೋಜನೆಗಳು ಪ್ರಮುಖ ವಾದವು. ತಳ ಸಮುದಾಯಗಳು, ಹಿಂದುಳಿದ ವರ್ಗಗಳು, ಎಸ್ಸಿ,ಎಸ್ಟಿ, ನಾನಾ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿಯೂ ಹಲವು ಯೋಜನೆಗಳು ರೂಪು ಗೊಂಡಿದ್ದು ಬಜೆಟ್​ನಲ್ಲಿ ಘೋಷಣೆ ಮಾಡಿ, ಅದನ್ನು ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡ ನಿದರ್ಶನಗಳು ಇವೆ. ಆಯಾ ಸಂದ ರ್ಭಕ್ಕೆ…

Read More

2020-21ರಲ್ಲಿ ರಾಜ್ಯ ಸರ್ಕಾರ ಒಟ್ಟು ಋಣ ಭಾರ 3,98,219 ಕೋಟಿ ರೂ. ತಲುಪಿತ್ತು. ಇನ್ನು ಪ್ರಸಕ್ತ 2021-22 ಸಾಲಿನಲ್ಲಿ ರಾಜ್ಯ ಸರ್ಕಾರ 71,332 ಕೋಟಿ ರೂ. ಸಾಲ ಮಾಡಲು ನಿರ್ಧರಿಸಿದೆ.ರಾಜ್ಯದ ಒಟ್ಟು ಸಾಲ ಹಾಗೂ ಋಣಭಾರ ಮಾರ್ಚ್ ಅಂತ್ಯಕ್ಕೆ 4,57,899 ಕೋಟಿ ರೂ‌.ಗೆ ಏರಿಕೆಯಾಗಲಿದೆ. ಇಂತಹ ಸಾಲದ ಮಧ್ಯೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬಜೆಟ್ ಮಂಡನೆಗೆ ಅಂತಿಮ ಸಭೆಗಳನ್ನ ನಡೆಸುತ್ತಿದ್ದಾರೆ.ಸಂಪನ್ಮೂಲ ಕೊರತೆಯ ಮಧ್ಯೆ ಬಜೆಟ್ ಮಂಡನೆ ಮಾಡಬೇಕಾಗಿದ್ದು, ಈ ಬಾರಿ ಬಜೆಟ್ ನಿರ್ವಹಣೆಗಾಗಿ ಇನ್ನಷ್ಟು ಸಾಲದ ಮೊರೆ ಹೋಗುವುದು ಅನಿವಾರ್ಯವಾಗಿದೆ.ಮಾರ್ಚ್ 4ಕ್ಕೆ ಸಿಎಂ ಬೊಮ್ಮಾಯಿ ಮದ್ಯಾಹ್ನ 12:30ಕ್ಕೆ ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದಾರೆ.ಈ ಬಾರಿಯೂ ಬಂಡವಾಳ ವೆಚ್ಚವನ್ನು ಭರಿಸಲು ಸಾಲದ ಮೊರೆಹೋಗುವ ಪರಿಸ್ಥಿತಿ ಎದುರಾಗಿದೆ.ಕಳೆದ ಎರಡು ವರ್ಷದಿಂದ ಕೋವಿಡ್ ಲಾಕ್‌ಡೌನ್ ಹೇರಿದ ಆರ್ಥಿಕ ಸಂಕಷ್ಟಕ್ಕೆ ಆದಾಯ ಮೂಲ ಕುಗ್ಗಿದೆ.ಕೇಂದ್ರ ಸರ್ಕಾರವೂ ರಾಜ್ಯಗಳಿಗೆ ಕಳೆದ ವರ್ಷದಿಂದ ಹೆಚ್ಚುವರಿ ಸಾಲ ಪಡೆಯಲು ಅನುಮತಿ ನೀಡಿದೆ. 2022-23 ಸಾಲಿನಲ್ಲಿ ರಾಜ್ಯದ ಒಟ್ಟು ಸಾಲ…

Read More

ಯುಕ್ರೇನ್ ಮೇಲೆ ರಷ್ಯಾ ನಡೆಸಿರುವ ಯುದ್ದದಿಂದ ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮುಂದುವರೆದಿರುವ ನಡುವೆ ಕಚ್ಚಾ ತೈಲ ಬೆಲೆಗಳು ಪ್ರತಿ ಬ್ಯಾರೆಲ್‍ಗೆ ಇಂದು 5 ಡಾಲರ್ ಏರಿಕೆಯಾಗಿದೆ. ನ್ಯೂಯಾರ್ಕ್ ಮಾರ್ಕೆಟ್ ಆಯಿಲ್ ಎಕ್ಸೆಚೇಂಜ್‍ನ ಎಲೆಕ್ಟ್ರಾನಿಕ್ ವಹಿವಾಟಿನಲ್ಲಿ ಬೆಂಚ್ಮಾರ್ಕ್ ಕಚ್ಚಾ ತೈಲ ಪ್ರತಿ ಬ್ಯಾರೆಲ್ 5.24 ಡಾಲರ್ ಏರಿಕೆಯಾಗಿ 108.60 ಕ್ಕೆ ಮುಟ್ಟಿದೆ. ಬ್ರೆಂಟ್ ಕಚ್ಚಾ ತೈಲ ಅಂತರಾಷ್ಟ್ರೀಯ ಬೆಲೆ ಮಾನದಂಡವು ಲಂಡನ್‍ನಲ್ಲಿ ಪ್ರತಿ ಬ್ಯಾರೆಲ್ 110.40 ಡಾಲರ್‍ಗೆ ಏರಿದೆ.ಪ್ರಮುಖ ತೈಲ ಗ್ರಾಹಕರ ಕ್ಲಬ್ ಇಂಟನ್ಯಾಷನಲ್ ಎನರ್ಜಿ ಏಜೆನ್ಸಿಯ 31 ಸದಸ್ಯರು ನಿನ್ನೆ 60 ಮಿಲಿಯನ್ ಬ್ಯಾರೆಲ್‍ಗಳ ಕಚ್ಚಾ ತೈಲವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಒಪ್ಪಿಕೊಂಡರು. ಪರಿಸ್ಥಿತಿ ಶಾಂತಗೊಳಿಸುವ ಕಸರತ್ತು ನಡೆಯಿತು.ಎರಡನೇ ಅತಿ ದೊಡ್ಡ ತೈಲ ರಫ್ತುದಾರರಾದ ಸೌದಿ ಅರೇಬಿಯಾದ ನಂತರ ರಷ್ಯಾದಿಂದ ಪೂರೈಕೆಯಲ್ಲಿನ ಅಡಚಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More