Subscribe to Updates
Get the latest creative news from FooBar about art, design and business.
- ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
- ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
- ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ
- ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ
- ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ
- ನವೆಂಬರ್ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಮಕೂರು ಜಿಲ್ಲಾ ಪ್ರವಾಸ
- ತುಮಕೂರು | SSLC ಫಲಿತಾಂಶ ಸೇರಿದಂತೆ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿತು ಜಿಲ್ಲೆಯ ಹಲವು ಸಮಸ್ಯೆಗಳು!
- ಜಮೀನಿನ ಖಾತೆ ಬದಲಾವಣೆಗೆ ಲಂಚಕ್ಕೆ ಬೇಡಿಕೆ: ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಲೋಕಾಯುಕ್ತ ಬಲೆಗೆ
Author: admin
ವೈದ್ಯಶಿಕ್ಷಣದ ಕನಸು ಕಾಣುವ ಬಡ, ಮಧ್ಯಮ ವರ್ಗದ ಬದುಕನ್ನು ಛಿದ್ರಗೊಳಿಸುತ್ತಿರುವ ನೀಟ್ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- ನೀಟ್, ವಿದ್ಯಾರ್ಥಿಗಳು ಮತ್ತು ಪೋಷಕರ ಪಾಲಿಗೆ ಮರಣಶಾಸನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಮೀಸಲಿಟ್ಟು ಉಳಿದವರಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ ಟೀಕಿಸಿದ್ದಾರೆ. ಉಕ್ರೇನ್ʼಗೆ ಮೆಡಿಕಲ್ ಓದಲು ಹೋಗಿ ರಷ್ಯಾ ದಾಳಿಗೆ ತುತ್ತಾದ ವಿದ್ಯಾರ್ಥಿ ನವೀನ್ ದುರಂತ ಸಾವು ನೀಟ್ ವ್ಯವಸ್ಥೆಯ ನಿರ್ಲಜ್ಜ ಮುಖವನ್ನು ಇಡೀ ದೇಶಕ್ಕೆ ದರ್ಶನ ಮಾಡಿಸಿದೆ. ಅರ್ಹತೆ ನೆಪದಲ್ಲಿ ಪ್ರತಿಭಾವಂತ ಆರ್ಥಿಕ ದುರ್ಬಲ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾಡಲಾಗುತ್ತಿರುವ ಅನ್ಯಾಯಕ್ಕೆ ಅಂತ್ಯ ಹಾಡಬೇಕಿದೆ ಎಂದಿದ್ದಾರೆ. 10ನೇ ತರಗತಿಯಲ್ಲಿ ಶೇ.96, 2ನೇ ಪಿಯುಸಿಯಲ್ಲಿ ಶೇ. 97 ಅಂಕ ಗಳಿಸಿದ್ದರೂ ನವೀನ್ʼಗೆ ಜಗತ್ತಿನ ಶಿಕ್ಷಣ ಕಾಶಿ ಭಾರತದಲ್ಲಿ ವೈದ್ಯಸೀಟು ಸಿಗಲ್ಲ. ಗ್ರಾಮೀಣ ವಿದ್ಯಾರ್ಥಿಯೊಬ್ಬ ಇಷ್ಟು ಉತ್ತಮ ಅಂಕ ಗಳಿಸುವುದು ಸುಲಭವಲ್ಲ. ಆದರೂ, ಆತನಿಗೆ ನಮ್ಮ ದೇಶದಲ್ಲಿ ವೈದ್ಯಶಿಕ್ಷಣವನ್ನು ನಿರಾಕರಿಸಲಾಗಿದೆ.ಭಾರತದಲ್ಲಿ…
ಕಳೆದ 24 ಗಂಟೆ ಗಳಲ್ಲಿ ಭಾರತ 1,377 ನಾಗರಿಕರನ್ನು ಯುದ್ಧಪೀಡಿತ ಉಕ್ರೇನ್ನಿಂದ ಸ್ಥಳಾಂತರಿಸಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಇಂದು ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಪೋಲೆಂಡ್ನಿಂದ ಮೊದಲ ವಿಮಾನಗಳು ಸೇರಿದಂತೆ ಆರು ವಿಮಾನಗಳು ಈಗ ಭಾರತಕ್ಕೆ ಹೊರಟಿವೆ. ಉಕ್ರೇನಿಂದ 1377 ಭಾರತೀಯ ಪ್ರಜೆಗಳನ್ನು ವಾಪಸ್ ಕರೆದೊಯ್ದಿದ್ದಾರೆ ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ. ಉಕ್ರೇನ್ನಲ್ಲಿರುವ ಭಾರತೀಯರನ್ನು ಸ್ಥಳಾಂತರಿಸಲು ಪ್ರಾರಂಭಿಸಲಾದ ಆಪರೇಷನ್ ಗಂಗಾ ಅಡಿಯಲ್ಲಿ, ಭಾರತವು ಮುಂದಿನ ಮೂರು ದಿನಗಳಲ್ಲಿ 26 ಕ್ಕೂ ಹೆಚ್ಚು ವಿಮಾನಗಳನ್ನು ಕಾರ್ಯ ನಿರ್ವಹಿಸಲಿದೆ. ಉಕ್ರೇನ್ ವಾಯುಪ್ರದೇಶವನ್ನು ಮುಚ್ಚಿರುವುದರಿಂದ, ರೊಮೇನಿಯಾ, ಹಂಗೇರಿ, ಪೋಲೆಂಡ್ ಮತ್ತು ಸ್ಲೋವಾಕ್ ರಿಪಬ್ಲಿಕ್ ವಿಮಾನ ನಿಲ್ದಾಣಗಳನ್ನು ಬಳಸಲಾಗುತ್ತಿದೆ. ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಉಕ್ರೇನ್ ರಾಜಧಾನಿ ಕ್ವಿವ್ ನಲ್ಲಿ ಯಾವುದೇ ಭಾರತೀಯ ಉಳಿದಿಲ್ಲ ಎಂದಿದ್ದಾರೆ. ರಷ್ಯಾ ಹಲವಾರು ನಗರಗಳಲ್ಲಿ ನಾಗರಿಕ ಪ್ರದೇಶಗಳ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದೆ ಉಕ್ರೇನ್ನಲ್ಲಿ ಸುಮಾರು 16,000 ಭಾರತೀಯ ವಿದ್ಯಾರ್ಥಿಗಳು ಇನ್ನೂ ಸಿಲುಕಿಕೊಂಡಿದ್ದಾರೆ. ರಷ್ಯಾದ ಪಡೆಗಳು ಗುರುವಾರ…
ಉಕ್ರೇನ್ ನ ಕರ್ಕೀವ್ ಪಟ್ಟಣದಲ್ಲಿ ರಕ್ಷಾ ಕ್ಷಿಪಣಿಗೆ ಸಾವನ್ನಪ್ಪಿರುವ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಕುಟುಂಬಕ್ಕೆ ಸರ್ಕಾರದ ವತಿಯಿಂದ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೀನ್ ಗ್ಯಾನಗೌಡರ್ ಕುಟುಂಬಕ್ಕೆ ಖಂಡಿತವಾಗಿಯೂ ಸರ್ಕಾರ ಪರಿಹಾರವನ್ನು ನೀಡಲಿದೆ. ಇದರ ಬಗ್ಗೆ ಯಾರಿಗೂ ಕೂಡ ಅನುಮಾನ ಬೇಡ. ಆದರೆ ನಮಗೆ ಮೊದಲು ಆತನ ಮೃತದೇಹವನ್ನು ಸ್ವದೇಶಕ್ಕೆ ತರುವುದು ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು. ಪರಿಹಾರ ಕೊಡುವುದು ಸರ್ಕಾರದ ಕೈಯಲ್ಲಿದೆ. ಅದು ಕೂಡ ನನ್ನ ಗಮನದಲ್ಲೇ ಇದೆ. ಕುಟುಂಬಸ್ಥರ ಒತ್ತಾಸೆಯಂತೆ ಮೃತದೇಹವನ್ನು ತರಲು ನಮ್ಮ ಪ್ರಯತ್ನಗಳು ಮುಂದುವರೆದಿದೆ ಎಂದರು. ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್, ವಿದೇಶಾಂಗ ವ್ಯವಹಾಗಳ ಇಲಾಖೆ ಕಾರ್ಯದರ್ಶಿ, ಉಕ್ರೇನ್ ಮತ್ತು ರಷ್ಯಾದಲ್ಲಿರುವ ರಾಯಭಾರ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಮೃತದೇಹವನ್ನು ಭಾರತಕ್ಕೆ ತರಲು ನಾವು ಶಕ್ತಿಮೀರಿ ಪ್ರಯತ್ನವನ್ನು ಮಾಡುತ್ತಿದ್ದೇವೆ. ಉಕ್ರೇನ್ನಲ್ಲಿ ಪರಿಸ್ಥಿತಿ ಕೈ ಮೀರುತ್ತಿರುವುದರಿಂದ ವಿಳಂಬವಾಗಿದೆ. ಆದರೂ ನಮ್ಮ ಪ್ರಯತ್ನ ನಿಂತಿಲ್ಲ ಎಂದು ಸ್ಪಷ್ಟಪಡಿಸಿದರು.…
ಹಿರಿಯೂರು: ಹಿರಿಯೂರು ನಗರ ಪೋಲಿಸ್ ಠಾಣೆಯಲ್ಲಿ ವಯೋನಿವೃತ್ತಿ ಹೊಂದಿದ್ದ ಪೋಲಿಸ್ ಎಎಸ್ ಐ ನಿರಂಜನಮೂರ್ತಿ ಹಾಗೂ ಪ್ರಭಾಕರರೆಡ್ಡಿ ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಪೊಲೀಸರ ಕರ್ತವ್ಯದ ನಿಷ್ಠೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರೂ ಶಾಂತಿಯುತ ಮತ್ತು ನೆಮ್ಮದಿ ಜೀವನ ನಡೆಸಲು ಸಾಧ್ಯವಾಗಿದೆ. ಹಬ್ಬಗಳನ್ನು ಸಂಭ್ರಮದಿಂದ ಯಾವ ರೀತಿ ಆಚರಿಸಬೇಕು? ಹಬ್ಬಕ್ಕೆ ಏನು ಸಿಹಿ ಮಾಡಬೇಕು? ಎಂದು ಎಲ್ಲರು ಯೋಚಿಸುವ ನಮ್ಮಗಳ ಮಧ್ಯೆಯೂ ಸಹ ಪೋಲಿಸ್ ಅಧಿಕಾರಿಗಳು ಹಬ್ಬ ಹರಿದಿನಗಳನ್ನು ಸಹ ಲೆಕ್ಕಿಸದೆ ಹಬ್ಬಗಳಲ್ಲಿಅಹಿತಕರ ಘಟನೆ ನಡೆಯದಂತೆ ಯಾವ ರೀತಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು? ಯಾವ ಸ್ಥಳದಲ್ಲಿಕರ್ತವ್ಯ ನಿರ್ವಹಿಸಬೇಕು? ಎಂಬುದಾಗಿ ಪೊಲೀಸರು ಯೋಚಿಸುತ್ತಾರೆ. ಇಂತಹ ಕರ್ತವ್ಯ ನಿಷ್ಠೆಯಿಂದ ಕಾರ್ಯನಿರ್ವಹಿಸುತ್ತಿರುವುದರಿಂದಲೇ ಸಮಾಜದಲ್ಲಿ ಪ್ರತಿಯೊಬ್ಬ ನಾಗರಿಕರು ಸಹ ನೆಮ್ಮದಿಯ ಜೀವನ ಸಾಗಿಸುತ್ತಿದ್ದೆವೆ . ಸಾರ್ವಜನಿಕರು ಸಹ ಕಾನೂನು ಪಾಲಿಸುತ್ತಾ ಪೊಲೀಸರಿಗೆ ಅಗತ್ಯ ಸಹಕಾರ ನೀಡಬೇಕಾಗುರುವುದು ಪ್ರತಿಯೊಬ್ಬ ಭಾರತೀಯ ಆದ್ಯ ಕರ್ತವ್ಯವಾಗಿದೆ . ಇಂತಹ ಕರ್ತವ್ಯವನ್ನು ನಿರ್ವಹಿಸಿ ನಿವೃತ್ತಿ ಹೊಂದಿದ್ದಂತಹ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರಪೋಲಿಸ್ ಠಾಣೆಯ ASI ಸಿಬ್ಬಂದಿಗಳಾದ ನಿರಂಜಮೂರ್ತಿ…
ನುಪಾಡಾ(ಒಡಿಶಾ): ಮಹಾಶಿವರಾತ್ರಿ ಅಂಗವಾಗಿ ಶಿವನ ದರ್ಶನ ಪಡೆದುಕೊಂಡು ವಾಪಸ್ ಬರುತ್ತಿದ್ದ ವೇಳೆ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು ಆರು ಮಂದಿ ಭಕ್ತರು ದುರ್ಮರಣಕ್ಕೀಡಾಗಿದ್ದಾರೆ. ಒಡಿಶಾದ ನುಪಾಡಾದಲ್ಲಿ ಈ ದುರ್ಘಟನೆ ನಡೆದಿದೆ. ಇಂದು ಮಧ್ಯಾಹ್ನ ನುಪಾಡಾದ ನೃಸಿಂಹನಾಥ ದೇವಸ್ಥಾನದಿಂದ ವಾಪಸ್ ಬರುತ್ತಿದ್ದಾಗ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ, ಛತ್ತೀಸ್ಗಢದವರಾಗಿರುವ ಇವರು ಶಿವರಾತ್ರಿ ಅಂಗವಾಗಿ ಪಕ್ಕದ ರಾಜ್ಯದ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್ ಬರುತ್ತಿದ್ದಾಗ ಕಾರು ನಿಯಂತ್ರಣ ಕಳೆದುಕೊಂಡಿದ್ದು, ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಚಿಕಿತ್ಸೆಗೋಸ್ಕರ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ) ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಹೆಚ್ ಡಿ ಕೋಟೆ ಮತ್ತುಸರಗೂರು ಮಾಜಿ ಶಾಸಕರಾದ ಬೀಚನಹಳ್ಳಿ ಚಿಕ್ಕಣ್ಣ ಅವರ 78ನೇ ವರ್ಷದ ಹುಟ್ಟುಹಬ್ಬವನ್ನು ಜೈಪ್ರಕಾಶ್ ಅಭಿಮಾನಿಗಳ ಬಳಗದವತಿಯಿಂದ ಆಚರಣೆ ಮಾಡಲಾಯಿತು. ತಾಲ್ಲೂಕಿನ ನಾಡದೇವತೆ ಚಿಕ್ಕಮ್ಮತಾಯಿಯ ಆರ್ಶೀವಾದ ಪಡೆದು. ನಂತರ ಪಟ್ಟಣದ ಶ್ರೀ ಗಣಪತಿ ದೇವಾಲಯ ಕ್ಕೆ ಬೇಟಿ ನೀಡಿ ಪೂಜೆ ಸಲ್ಲಿಸಿ. ಪಟ್ಟಣ ಪಂಚಾಯ್ತಿ ಆವರಣದಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ನಂತರ ಹುಟ್ಟು ಹಬ್ಬದ ಪ್ರಯುಕ್ತ ಚಿಕ್ಕಣ ಅವರ ಪುತ್ರ ಜೈಪ್ರಕಾಶ್ ಸೇರಿದಂತೆ ಹಲಾವಾರು ಮಂದಿ ರಕ್ತದಾನ ಮಾಡಿದರು. ಹ್ಯಾಂಡ್ ಪೋಸ್ಟ್ ಸರ್ಕಲ್ ಬಳಿ ಸೇಬಿನ ಹಾರವನ್ನು ಹಾಕಿ ಜೆಡಿಎಸ್ ಪಕ್ಕದ ಕಾರ್ಯಕರ್ತರು ಹಾಗೂ ಮುಖಂಡರು ಸೇರಿ ಹಾರವನ್ನು ಹಾಕಿದರು. ಹಾಗೂ ಹ್ಯಾಂಡ್ ಪೋಸ್ಟ್ ಅಲ್ಲಿಂದ ಕೋಟೆ ಅಂಬೇಡ್ಕರ್ ಭವನವರಗೆ ಮೆರವಣಿಗೆ ಮೂಲಕ ಚಿಕ್ಕಣ್ಣನವರಿಗೆ ಹೂವಿವನ್ನು ವಾದ್ಯಗಳ ಮೂಲಕ ಮೆರವಣಿಗೆ ಮಾಡಿಕೊಂಡು ಬಂದರು . ತಾಲ್ಲೂಕಿನ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮದಲ್ಲಿ ಹಮ್ಮಿಕೊಂಡಿದ್ದು. ಮುಖಂಡರು ಮಾತನಾಡಿ, ಮಾಜಿ ಶಾಸಕ ಚಿಕ್ಕಣ್ಣವವರು ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು…
ಇಲ್ಲ ಸಾರ್ ನಾವು ಜೀವಂತವಾಗಿ ಹಿಂತಿರುಗುತ್ತೇವೆ ಎಂಬ ಆಸೆಯನ್ನೇ ಬಿಟ್ಟಿದ್ದೇವೆ. ಯಾವ ಸಂದರ್ಭದಲ್ಲಾದರೂ ನಮ್ಮ ಮೇಲೆ ಶೆಲ್ ದಾಳಿ ನಡೆಯಬಹುದು. ಒಂದು ವೇಳೆ ನಾವು ಗುಂಡೇಟಿನಿಂದ ಸಾಯದಿದ್ದರೂ ಹೊಟ್ಟೆಗೆ ಊಟ ಇಲ್ಲದೆ ಸಾಯೋದಂತೂ ಗ್ಯಾರಂಟಿ. ಇದು ನಿನ್ನೆಯಷ್ಟೆ ಉಕ್ರೇನ್ನಲ್ಲಿ ಶೆಲ್ ದಾಳಿಗೆ ಬಲಿಯಾದ ಹಾವೇರಿಯ ನವೀನ್ ಸ್ನೇಹಿತ ಶ್ರೀಕಾಂತ್ ಅವರ ಆಕ್ರಂದನ. ಬೆಂಗಳೂರಿನ ಬಿಎಂಟಿಸಿಯಲ್ಲಿ ಕಾರ್ಮಿಕರಾಗಿ ದುಡಿಯುತ್ತಿರುವ ಹರೀಶ್ ಅವರ ಸಹೋದರರಾಗಿರುವ ಶ್ರೀಕಾಂತ್ ದೂರದ ಉಕ್ರೇನ್ನಲ್ಲಿ ಎಂಬಿಬಿಎಸ್ ಮಾಡುತ್ತಿದ್ದಾರೆ. ಉಕ್ರೇನಿನ ಬಂಕರ್ನಲ್ಲಿ ಜೀವ ಕೈಯಲ್ಲಿಡಿದುಕೊಂಡು ತಮ್ಮ ಮನೆಯವರೊಂದಿಗೆ ಮಾತನಾಡಿದ ಶ್ರಿಕಾಂತ್ ಅವರು, ಅದೃಷ್ಟವಿದ್ದರೆ ಬದುಕಿ ಬರುತ್ತೇವೆ. ನನ್ನಂತೆ ಇಲ್ಲಿ ಸಿಕ್ಕಿಹಾಕಿಕೊಂಡಿರುವ ಸಾವಿರರು ಕನ್ನಡಿಗರು ಹಾಗೂ ಭಾರತೀಯರಿಗಾಗಿ ನೀವು ಅಲ್ಲಿಂದಲ್ಲೇ ಪ್ರಾರ್ಥಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ನನ್ನ ಸ್ನೇಹಿತ ನವೀನ್ ಬಲಿಯಾದ ನಂತರ ನಮಗೆ ಕ್ಷಣ ಕ್ಷಣಕ್ಕೂ ಸಾವಿಗೆ ಹತ್ತಿರವಾಗುತ್ತಿದ್ದೇವೆ ಎನಿಸುತ್ತಿದೆ. ನಮ್ಮನ್ನ ರಕ್ಷಿಸೋಕೆ ಯಾರು ಬರುತ್ತಿಲ್ಲ. ಹೊರಜಗತ್ತಿನ ಸಂಪರ್ಕವೇ ಕಡಿದುಹೋಗುತ್ತಿದೆ. ಬರೀ ಶೆಲ್ ಹಾಗೂ ಬಾಂಬ್ ದಾಳಿಯ ಶಬ್ದ ಮಾತ್ರ ಕೇಳಿಸುತ್ತಿದೆ.…
ತುಮಕೂರು: ತುಮಕೂರು ಜಿಲ್ಲೆಯಿಂದ ವಿದ್ಯಾಭ್ಯಾಸಕ್ಕೆಂದು ಉಕ್ರೇನ್ ಗೆ ತೆರಳಿರುವ ವಿದ್ಯಾರ್ಥಿಗಳು ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಸಿಲುಕಿಕೊಂಡಿದ್ದು, ಅಂತಹ ವಿದ್ಯಾರ್ಥಿಗಳನ್ನು ತುಮಕೂರು ಜಿಲ್ಲೆಗೆ ಕರೆತರಲು ತುಮಕೂರು ಜಿಲ್ಲಾಡಳಿತ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜೊತೆ ನಿರಂತರ ಪ್ರಯತ್ನ ಮುಂದುವರೆದಿದೆ ಎಂದು ತುಮಕೂರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ತಿಳಿಸಿದ್ದಾರೆ. ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳ ಪೋಷಕರು ಹಾಗೂ ಮುಖಂಡ ಮುರಳೀಧರ್ ಹಾಲಪ್ಪ ನೇತೃತ್ವದ ತಂಡದ ಜೊತೆ ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿಗಳು, ಇದುವರೆಗೂ ತುಮಕೂರು ಜಿಲ್ಲೆಯಿಂದ 27 ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆಂದು ಯುಕ್ರೇನ್ ಗೆ ತೆರಳಿದ್ದು, ಒಬ್ಬ ವಿದ್ಯಾರ್ಥಿನಿ ಈಗಾಗಲೇ ತುಮಕೂರು ಜಿಲ್ಲೆಗೆ ಆಗಮಿಸಿದ್ದಾಳೆ. ಇಂದು ಇಬ್ಬರು ವಿದ್ಯಾರ್ಥಿಗಳು ಜಿಲ್ಲೆಗೆ ಆಗಮಿಸಲಿದ್ದಾರೆ. ಉಳಿದ 24 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ತುಮಕೂರು ಜಿಲ್ಲಾಡಳಿತ ಸಂಬಂಧಪಟ್ಟ ಇಲಾಖೆಗಳ ಜೊತೆ ನಿರಂತರ ಸಂಪರ್ಕದಲ್ಲಿ ಇರುವ ಬಗ್ಗೆ ಮಾಹಿತಿಯನ್ನು ನೀಡಿದರು. ಸರ್ಕಾರದ ನಿರ್ದೇಶನದಂತೆ ಎಲ್ಲ ಕುಟುಂಬಗಳ ಜೊತೆ ತುಮಕೂರು ಜಿಲ್ಲಾಡಳಿತ ನಿರಂತರ ಸಂಪರ್ಕದಲ್ಲಿದ್ದು, ಈಗಾಗಲೇ ಇದಕ್ಕೆ…
ಕೊರಟಗೆರೆ : ಪಟ್ಟಣದ ಶ್ರೀ ಗಂಗಾಧರೇಶ್ವರ ರಥೋತ್ಸವಕ್ಕೆ ತಹಸೀಲ್ದಾರ್ ನಹೀದಾ ಜಮ್.ಜಮ್ ಚಾಲನೆ ನೀಡಿದರು . ಪ್ರತಿವರ್ಷ ನಡೆಯುವಂತೆ ಶಿವರಾತ್ರಿ ಹಬ್ಬದ ಮಾರನೇ ದಿನ ಶ್ರೀ ಗಂಗಾಧರೇಶ್ವರಸ್ವಾಮಿ ರಥೋತ್ಸವವು ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಿಂದ ನೆರವೇರಿಸಲಾಗುತ್ತದೆ . ಪ್ರತಿವರ್ಷವೂ ಶಿವರಾತ್ರಿ ಹಬ್ಬದಂದು ಭಕ್ತಾದಿಗಳು ಉಪವಾಸದಿಂದ ಜಾಗರಣೆ ಮಾಡುತ್ತಾರೆ. ಮರುದಿನ ಬೆಳಿಗ್ಗೆ ಶ್ರೀ ಗಂಗಾಧರೇಶ್ವರಸ್ವಾಮಿ ರಥೋತ್ಸವ ನಡೆದ ಮೇಲೆ ಉಪವಾಸವನ್ನು ಕೈ ಬಿಟ್ಟು ಭೋಜನ ಸವಿಯುತ್ತಾರೆ. ಕೊರೊನಾ ಮಹಾಮಾರಿಯಿಂದ ಜಾತ್ರೆ ಇನ್ನಿತರ ಶುಭ ಸಮಾರಂಭಗಳು ನಿಂತು ಹೋಗಿದ್ದವು. ಇದೀಗ ಕೊವಿಡ್ ಪ್ರಮಾಣ ಕೊಂಚ ಕಡಿಮೆಯಾಗಿರುವುದರಿಂದ ಎಲ್ಲ ಶುಭ ಸಮಾರಂಭಗಳು ಜಾತ್ರೆಗಳು ಹಿಂದಿನಂತೆ ನಡೆಯುತ್ತಿದೆ ಎಂದು ಮಾಜಿ ಪಟ್ಟಣ ಪಂಚಾಯತ್ ಸದಸ್ಯ ಪವನ್ ಕುಮಾರ್ ತಿಳಿಸಿದರು. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಚಿತ್ರದುರ್ಗ: ಶಿವರಾತ್ರಿಯ ಪ್ರಯುಕ್ತ ಜಿಲ್ಲೆಯ ಹಿರಿಯೂರು ನಗರದ ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷವಾದ ಪೂಜೆ ನಡೆಯಿತು. ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ ಭಕ್ತರು ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಹಾಶಿವರಾತ್ರಿಯ ವಿಶೇಷತೆಗಳೆಂದರೆ, ಈ ದಿನ ಮಹಾದೇವ ಶಿವನು ದೇವಿ ಪಾರ್ವತಿಯನ್ನು ವಿವಾಹವಾದರು ಎಂದು ಪೌರಾಣಿಕ ಕತೆಯಲ್ಲಿ ಹೇಳಲಾಗಿದೆ. ಶಿವರಾತ್ರಿಯ ದಿನ ಜಾಗರಣೆ ಇದ್ದು ಶಿವ-ಪಾರ್ವತಿಯನ್ನು ಪೂಜಿಸುವುದರಿಂದ ಬದುಕಿನ ಎಲ್ಲಾ ಕಷ್ಟಗಳು ದೂರಾಗುವುದು ಎನ್ನುವ ನಂಬಿಕೆಗಳಿವೆ. ಶಿವರಾತ್ರಿ ದಿನದಂದು ಪತಿ-ಪತ್ನಿ ಇಬ್ಬರೂ ಜಾಗರಣೆ ಇದ್ದು ಶಿವನನ್ನು ಪೂಜಿಸಬೇಕು, ಅವನ ಮಂತ್ರಗಳನ್ನು ಪಠಿಸಬೇಕು ಎಂದು ಜನರು ನಂಬುತ್ತಾರೆ. ಶಿವರಾತ್ರಿಯ ದಿನ ಶಿವನ ದೇವಾಲಯಗಳಲ್ಲಿ ಭಕ್ತರು ಶಿವನ ದರ್ಶನ ಮಾಡಿ ಶಿವನ ಕೃಪೆಗೆ ಪಾತ್ರರಾಗುತ್ತಿದ್ದಾರೆ. ಶಿವರಾತ್ರಿಯ ದಿನದಂದು ಶಿವನ ಮೂರ್ತಿ ಹಾಗೂ ಶಿವನ ಲಿಂಗವನ್ನು ಪೂಜಿಸಲಾಗುತ್ತದೆ. ಶಿವಲಿಂಗವು ಶಿವನ ಸಂಕೇತವಾಗಿದೆ. ಶಿವ ಎಂದರೆ ಕಲ್ಯಾಣ ಮತ್ತು ಲಿಂಗ ಎಂದರೆ ಸೃಷ್ಟಿ ಎಂದರ್ಥ. ಪೌರಾಣಿಕ ಗ್ರಂಥಗಳ ಪ್ರಕಾರ, ಭಗವಾನ್ ಶಿವನು ಭೂಮಿಯ ಮೇಲೆ ಜೀವನವನ್ನು…