Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ಬಾಗಲಕೋಟೆ: ಪಂಪ್ ಸೆಟ್ ತರಲು ಹೋಗಿದ್ದ ಯುವಕ ನದಿಯಲ್ಲಿ ಮುಳುಗಿ ಸಾವನ್ನಪ್ಪಿರೋ ಘಟನೆ ಮುಧೋಳ ತಾಲ್ಲೂಕಿನ ಒಂಟಗೋಡಿ ಗ್ರಾಮದಲ್ಲಿ ನಡೆದಿದೆ. ವಿಜಯ್ ಬಿರಾದಾರ (19) ಮೃತ ದುರ್ದೈವಿ. ಯುವಕ ದೊಡ್ಡಪ್ಪನ ಜೊತೆ ಪಂಪ್ಸೆಟ್ ತರಲು ಹೋಗಿದ್ದಾಗ ಘಟಪ್ರಭಾ ನದಿ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಪೊಲೀಸ್ ಅಧಿಕಾರಿಗಳು ಹಾಗೂ ಮುಧೋಳ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಶವವನ್ನು ಹೊರ ತೆಗೆದಿದ್ದಾರೆ. ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಪೂರ್ಣ ಪ್ರಮಾಣ ಮನೆ ಬಿದ್ದವರಿಗೆ 24 ಗಂಟೆ ಒಳಗೆ ಪರಿಹಾರ ಕೊಡ್ತಾ ಇದೀವಿ. ಇಷ್ಟೊಂದು ಪ್ರಮಾಣದಲ್ಲಿ ಯಾರು ಹಣವನ್ನು ಕೊಟ್ಟಿಲ್ಲ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು. ವಿಧಾನಸಭೆಯಲ್ಲಿ ಮಾತನಾಡಿದ ಅವರು, ನಾವು 2019ರಲ್ಲಿ 46,959 ಮನೆಗಳಿಗೆ 828.67 ರೂ. ಪರಿಹಾರ ಕೊಟ್ಟಿದ್ದೇವೆ. 2019ರಲ್ಲೇ ಬೆಳಗಾವಿಗೆ 120.05 ಕೋಟಿ ರೂ. ಕೊಟ್ಟಿದ್ದೇವೆ. ಇಷ್ಟು ಪ್ರಮಾಣದಲ್ಲಿ ಪರಿಹಾರವನ್ನು 75 ವರ್ಷದಲ್ಲಿ ಯಾರು ಒಂದೇ ಜಿಲ್ಲೆಗೆ ಕೊಟ್ಟಿಲ್ಲ. ಮೂರು ವರ್ಷದಲ್ಲೇ ಬೆಳಗಾವಿಗೆ 1726 ಕೋಟಿ ರೂಪಾಯಿ ನೀಡಿದ್ದೇವೆ ಎಂದರು. ಬೆಳೆ ಪರಿಹಾರದಲ್ಲಿ ನಮಗೆ ಹೊಲಕ್ಕೆ ಹೋಗಲು ಆಗ್ತಾ ಇಲ್ಲ. ಸರ್ವೇ ಮಾಡಲು ಆಗ್ತಾ ಇಲ್ಲ.ಹನಿಶ್ಚಿತವಾಗಿ ಸರ್ವೇ ಮಾಡ್ಬೇಕು ಅಂದ್ರೆ ಭೂಮಿ ಒಣಗಬೇಕು ಎಂದು ಹೇಳಿದರು. ಈ ವೇಳೆ ಶಾಸಕ ಶಿವಾನಂದ್ ಮಾತನಾಡಿ , ಮೊದಲನೇ ಕಂತಿನ ಹಣ ಬಿಡುಗಡೆ ಆಗಿದೆ. ಆದರೆ, ಎರಡು ಮತ್ತು ಮೂರನೇ ಕಂತಿನ ಹಣ ಆದಷ್ಟು ಬೇಗ ಬಿಡುಗಡೆ ಮಾಡ್ಬೇಕು ಎಂದು ಮನವಿ…
ಬೆಳಗಾವಿ : ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಉಂಟಾಗಿದ್ದ ಬೆಳೆಹಾನಿಯ ಕುರಿತು ತಕ್ಷಣವೇ ಜಂಟಿ ಸಮೀಕ್ಷೆ ಕೈಗೊಂಡು 11,234 ರೈತರಿಗೆ ಒಟ್ಟಾರೆ 17.01 ಕೋಟಿ ರೂಪಾಯಿ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜುಲೈ ಹಾಗೂ ಆಗಸ್ಟ್ ಮಾಹೆ ಸೇರಿದಂತೆ ಪ್ರಸಕ್ತ ಸಾಲಿನಲ್ಲಿ ಅತಿವೃಷ್ಟಿಯಿಂದ ಬೆಳೆಹಾನಿಯಾಗಿತ್ತು.ತಕ್ಷಣವೇ ಕಾರ್ಯಪ್ರವೃತ್ತಗೊಂಡ ಜಿಲ್ಲಾಡಳಿತವು ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಂದ ಜಂಟಿ ಸಮೀಕ್ಷೆಯನ್ನು ಕೈಗೊಂಡು ಅತ್ಯಂತ ತ್ವರಿತವಾಗಿ ರೈತರಿಗೆ ಪರಿಹಾರ ಒದಗಿಸಿದೆ. ಜಿಲ್ಲೆಯಲ್ಲಿ ಹೆಸರು, ಮೆಕ್ಕೆಜೋಳ, ಹತ್ತಿ, ಸೂರ್ಯಕಾಂತಿ, ಸೋಯಾಬಿನ್ ಮತ್ತಿತರ ಬೆಳೆಹಾನಿಯಾಗಿತ್ತು.ಜಂಟಿ ಸಮೀಕ್ಷೆ ಆಧರಿಸಿ ಸರಕಾರದ ಮಾರ್ಗಸೂಚಿ ಪ್ರಕಾರ ಆಯಾ ರೈತರ ಬ್ಯಾಂಕ್ ಖಾತೆಗಳಿಗೆ ಬೆಳೆಹಾನಿ ಪರಿಹಾರವನ್ನು ಬಿಡುಗಡೆಗೊಳಿಸಲಾಗಿದ್ದು, ನಾಳೆಯೇ ರೈತರ ಖಾತೆಗೆ ಹಣ ಜಮೆಯಾಗಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಜಿಲ್ಲೆಯ ಒಟ್ಟು 11,234 ರೈತರ ಖಾತೆಗೆ ಒಟ್ಟಾರೆ 17,01,01,195 ರೂಪಾಯಿ ಜಮೆಯಾಗಲಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ರಣಮಳೆಯಾಗುತ್ತಿದ್ದು, ಮಹಾರಾಷ್ಟ್ರ ಹಾಗೂ ಕರ್ನಾಟಕದ ಗಡಿ ಭಾಗ, ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯುಂತಾಗಿದೆ. ಭಾರಿ ಮಳೆಯಿಂದಾಗಿ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ಜಿಲ್ಲೆಯಲ್ಲಿ 17 ಸೇತುವೆಗಳು ಮುಳುಗಡೆಯಾಗಿವೆ. ಕಳೆದ ಎರಡು ದಿನಗಳಿಂದ ಬೆಳಗಾವಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಿಡಕಲ್ ಜಲಾಶಯ ತುಂಬಿ ಹರಿಯುತ್ತಿದೆ. ಪರಿಣಾಮ ಜಲಾಶಯದಿಂದ 27,000 ಕ್ಯೂಸೆಕ್ ನೀರನ್ನು ಘಟಪ್ರಭಾ ನದಿಗೆ ಬಿಡಲಾಗಿದ್ದು, ಗೋಕಾಕ್, ನಿಪ್ಪಾಣಿ ಸೇರಿದಂತೆ ಬೆಳಗಾವಿಯ ಹಲವೆಡೆಗಳಲ್ಲಿ ಪ್ರವಾಹವುಂಟಾಗಿದೆ. ಗೋಕಾಕ್ ತಾಲೂಕಿನಲ್ಲಿ ಘಟಪ್ರಭಾ ನದಿ ಉಕ್ಕಿ ಹರಿದ ಪರಿಣಾಮ ಮಾರ್ಕೆಟ್ ಗಳು ಮುಳುಗಡೆಯಾಗಿದ್ದು, ಉಪ್ಪಾರ ಓಣಿ, ಹಳೆ ದನದ ಪೇಟೆ ಹಾಗೂ ತಾಲೂಕಿನಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಬಹಳ ದಿನಗಳ ನಂತರ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ತಮ್ಮ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಅವರು ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಸಹ ಶಿಕ್ಷಕರು – 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು – 200 ಹುದ್ದೆಗಳು. ವಿಶೇಷ ಶಿಕ್ಷಕರು – 100 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಣಜಿ: ಬಿಜೆಪಿ ನಾಯಕಿ ಸೋನಾಲಿ ಪೋಗಟ್ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಗೋವಾ ಸರ್ಕಾರ ಕೇಂದ್ರವನ್ನು ಕೋರಿದೆ. ಸೋನಾಲಿ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಸೋನಾಲಿ ಕುಟುಂಬ ಸದಸ್ಯರು ಹರಿಯಾಣ ಸಿಎಂ ಕಟ್ಟರ್ ಅವರಿಗೆ ಮನವಿ ಮಾಡಿದ್ದಾರೆ. ಗೋವಾ ಸರ್ಕಾರದ ತನಿಖೆಯಿಂದ ನಮಗೆ ತೃಪ್ತಿ ಇಲ್ಲ ಎಂದು ಸೋನಾಲಿ ಕುಟುಂಬ ಹೇಳಿದೆ. ಗೋವಾ ಪೊಲೀಸರ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ, ಆದರೆ ಸೋನಾಲಿ ಮಗಳ ಬೇಡಿಕೆಯಂತೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಾಗಿ ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ. ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಹಲವರು ಪತ್ರವನ್ನೂ ಬರೆದಿದ್ದು, ಹೀಗಾಗಿಯೇ ಕೇಂದ್ರ ತನಿಖಾ ಸಂಸ್ಥೆಗೆ ಪ್ರಕರಣವನ್ನು ಹಸ್ತಾಂತರಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಮಾಡುತ್ತಿದ್ದೇವೆ ಎಂದು ಸಿಎಂ ಬಹಿರಂಗಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು (Bengaluru): ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ದೊಡ್ಡದಾಗಿದೆ. ಇದರಿಂದ ವಾಹನಗಳು ಗಂಟೆಗಟ್ಟಲೆ ಟ್ರಾಫಿಕ್‌ನಲ್ಲಿ ಸಿಲುಕಿಕೊಳ್ಳಬೇಕಾಗಿದೆ. ನಿಗದಿತ ಸಮಯದೊಂದಿಗೆ ಕೆಲಸಕ್ಕೆ ಹೋಗುವವರಿಗೆ ಕಷ್ಟಗಳು ಅನಿವಾರ್ಯ. ಆದರೆ ಇತ್ತೀಚಿಗೆ ಬೆಂಗಳೂರಿನ ವೈದ್ಯರೊಬ್ಬರು ತಮ್ಮ ಕಾರನ್ನು ಟ್ರಾಫಿಕ್‌ನಲ್ಲಿ ಬಿಟ್ಟು ಆಸ್ಪತ್ರೆಗೆ ಧಾವಿಸಿದ್ದಾರೆ. ಆ ಒಂದು ವಿಡಿಯೋ ಈಗ ವೈರಲ್ ಆಗಿದೆ. ಸರ್ಜಾಪುರದ ಮಣಿಪಾಲ್ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿ ಶಸ್ತ್ರಚಿಕಿತ್ಸಕ ಡಾ.ಗೋವಿಂದ್ ನಂದಕುಮಾರ್ ಅವರು ಆಗಸ್ಟ್ 30 ರಂದು ಬೆಳಿಗ್ಗೆ 10 ಗಂಟೆಗೆ ಮಹಿಳೆಯೊಬ್ಬರಿಗೆ ಪಿತ್ತಕೋಶದ ಶಸ್ತ್ರಚಿಕಿತ್ಸೆ ಮಾಡಬೇಕಾಗಿತ್ತು. ಆದರೆ ವೈದ್ಯರು ಮನೆಯಿಂದ ಹೊರಬಂದು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡರು. ಶಸ್ತ್ರಚಿಕಿತ್ಸೆಗೆ ತಡವಾಗಬಹುದೆಂಬ ಭಯದಿಂದ ವೈದ್ಯರು ಮೂರು ಕಿಲೋಮೀಟರ್ ಓಡಿದರು. ಕಾರು ಚಾಲಕನಿಗೆ ಬಿಟ್ಟುಕೊಟ್ಟ ವೈದ್ಯರು ಆಸ್ಪತ್ರೆಗೆ ಧಾವಿಸಿ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿದರು. ರೋಗಿಯು ಆರೋಗ್ಯವಾಗಿದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದ ಜಿಲ್ಲಾ ಆಸ್ಪತ್ರೆಯೊಂದರಲ್ಲಿ ವಿದ್ಯುತ್ ಕಡಿತದಿಂದ ವೈದ್ಯರು ಹಾಗೂ ರೋಗಿಗಳು ಪರದಾಡಿದರು. ಒಂದು ಗಂಟೆಗೂ ಹೆಚ್ಚು ಕಾಲ ವಿದ್ಯುತ್ ಬಂದಿಲ್ಲ. ಇದರೊಂದಿಗೆ ವೈದ್ಯರು ತಮ್ಮ ಮೊಬೈಲ್ ಫೋನ್‌ಗಳ ಟಾರ್ಚ್‌ಲೈಟ್‌ನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿದರು. ಬಲ್ಲಿಯಾ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಶನಿವಾರ ಸುರಿದ ಭಾರಿ ಮಳೆಯಿಂದಾಗಿ ಈ ಪ್ರದೇಶದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಸರಕಾರಿ ಆಸ್ಪತ್ರೆಯ ವೈದ್ಯರು ಹಾಗೂ ರೋಗಿಗಳು ಪರದಾಡಿದರು. ಒಂದು ಗಂಟೆಗೂ ಹೆಚ್ಚು ಕಾಲ ವಿದ್ಯುತ್ ಬಂದಿಲ್ಲ. ಆಸ್ಪತ್ರೆಯಲ್ಲಿ ಜನರೇಟರ್ ಕೆಲಸ ಮಾಡಿಲ್ಲ. ತುರ್ತು ದೀಪಗಳೂ ಇಲ್ಲ. ವೈದ್ಯರು ತಮ್ಮ ಮೊಬೈಲ್ ಫೋನ್‌ಗಳ ಟಾರ್ಚ್‌ಲೈಟ್‌ನ ಸಹಾಯದಿಂದ ವೈದ್ಯಕೀಯ ಸೇವೆಗಳನ್ನು ಒದಗಿಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಕತ್ತಲು ಆವರಿಸಿತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಏತನ್ಮಧ್ಯೆ, ಈ ಘಟನೆಯ ಕುರಿತು ಬಲ್ಲಿಯಾ ಜಿಲ್ಲಾ ಆಸ್ಪತ್ರೆಯ ಪ್ರಭಾರಿ ಡಾ.ಆರ್.ಡಿ.ರಾಮ್ ಸೋಮವಾರ ವಿವರಣೆ ನೀಡಿದರು.…
ವಿಜಯನಗರ : ನೇಣು ಹಾಕಿಕೊಳ್ಳುತ್ತಿದ್ದ ವ್ಯಕ್ತಿಯನ್ನು ತಡೆಯುವುದು ಬಿಟ್ಟು, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಘಟನೆ ಹೊಸಪೇಟೆ ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ. ಹನುಮನಹಳ್ಳಿಯ ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್ ಮೇಲೆ ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಳ್ಳತ್ತಿದ್ದನ್ನು ತಡೆಯುದು ಬಿಟ್ಟು ಕೆಲವರು ವಿಡಿಯೋ ಮಾಡಿದ್ದಾರೆ. ಮೃತ ಯುವಕನನ್ನು ಮಂಜುನಾಥ್ (25) ಎಂದು ಗುರುತಿಸಲಾಗಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಮಂಜುನಾಥ್ ನೇಣಿಗೆ ಶರಣಾಗಿದ್ದಾರೆ. ಆದರೆ ಅವನು ತಡೆಯುವ ಪ್ರಯತ್ನ ಮಾಡದೇ ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಈಗ ರಾಮದುರ್ಗಕ್ಕೂ ನೀರು ನುಗ್ಗಿದೆ ಎಂದು ತಿಳಿದುಬಂದಿದೆ. ಪಟ್ಟಣದ ಹೊರವಲಯದ ತೇರ ಬಜಾರ್ ನ ನಾಲ್ಕಕ್ಕೂ ಅಧಿಕ ಮನೆಗಳು ಜಲಾವೃತವಾಗಿದ್ದು, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊದಲಿನಿಂದಲೂ ನದಿ ತೀರದ ಜನತೆಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂಬ ಒತ್ತಾಯ ಕೇಳಿ ಬಂದಿದ್ದು, ಜನ ಪ್ರತಿನಿಧಿಗಳು, ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy