Author: admin

ಗುಂಡ್ಲುಪೇಟೆ: ತಾಲೂಕಿನ ಗೋಪಾಲಪುರ ಗ್ರಾಮದ ಕಬ್ಬಿಣ ಕೋಲೇಶ್ವರ ಮಠದ ಕಿರಿಯ ಮಠಾಧೀಶ ಇಮ್ಮಡಿ ಗುರುಮಲ್ಲಸ್ವಾಮೀಜಿ ಅವರು ಹಾವು ಕಚ್ಚಿ ಸಾವನ್ನಪ್ಪಿದ ಘಟನೆ ನಡೆದಿದೆ. ಮಠದ ಜಮೀನಿನಲ್ಲಿ ಕೃಷಿ ಕಾರ್ಮಿಕರೊಂದಿಗೆ ಕಳೆ ಕೀಳುತ್ತಿದ್ದಾಗ ಹಾವು ಶ್ರೀಗಳ ಪಾದದ ಬಳಿ ಕಚ್ಚಿದೆ. ಚಿಕಿತ್ಸೆ ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲು ಮಾಡಿದ ಬಳಿಕ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸ್ವಾಮೀಜಿಗಳ ನಿಧನಕ್ಕೆ ಶಾಸಕ ಸಿ.ಎಸ್.ನಿರಂಜನಕುಮಾರ್, ಕಾಂಗ್ರೆಸ್ ಮುಖಂಡ ಹೆಚ್.ಎಂ.ಗಣೇಶಪ್ರಸಾದ್, ಚಾಮುಲ್ ಅಧ್ಯಕ್ಷ ನಂಜುಂಡಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ಹೆಚ್.ಎಸ್.ನಂಜಪ್ಪ ಸೇರಿದಂತೆ ಇನ್ನಿತರ ಸಂತಾಪ ಸೂಚಿಸಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಬೆಳಗಾವಿ: ಡಿಸೆಂಬರ್ 13ರಿಂದ(ನಾಳೆ) ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು,  ಈ ಸಂಬಂಧ ಎಲ್ಲ ಸಿದ್ಧತೆಗಳನ್ನು ನಡೆಸಲಾಗಿದೆ ಎಂದು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಕೋವಿಡ್ ಮಾರ್ಗಸೂಚಿಯಂತೆ ಅಧಿವೇಶನ ನಡೆಯಲಿದೆ. ಸುಗಮವಾಗಿ ಕಲಾಪ ನಡೆಯುವ ವಿಶ್ವಾಸವಿದ್ದು, ಎಲ್ಲಾ ಶಾಸಕರು ಕಲಾಪದಲ್ಲಿ ಭಾಗವಹಿಸಲು ಎಂದು ಹೇಳಿದ್ದಾರೆ. ನಿಯಮಾನುಸಾರ ಎಲ್ಲರಿಗೂ ಮಾತನಾಡಲು ಅವಕಾಶ ನೀಡಲಾಗುತ್ತದೆ. ಎಲ್ಲ ಶಾಸಕರು ಅಧಿವೇಶನದಲ್ಲಿ ಭಾಗಿಯಾಗಬೇಕೆಂದು ಎಲ್ಲ ಪಕ್ಷಗಳ ಶಾಸಕರಿಗೆ ಸ್ಪೀಕರ್ ಮನವಿ ಮಾಡಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಗುಬ್ಬಿ:  ತಾಲೂಕಿನ ಜಿಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೆರೆ ಗ್ರಾಮದ ಎ.ಕೆ.ಕಾಲೋನಿಯಲ್ಲಿ ಇರುವ ವಿದ್ಯುತ್ ಪರಿವರ್ತಕವನ್ನು ಬೇರೆಡೆಗೆ ವರ್ಗಾಯಿಸುವಂತೆ ಇಲ್ಲಿನ ನಿವಾಸಿಗಳು ಆಗ್ರಹಿಸಿದ್ದಾರೆ. ಸುಮಾರು 15 ವರ್ಷಗಳಿಂದ ಬಹಳಷ್ಟು ಸಾರಿ ಈ ಬಗ್ಗೆ ಮನವಿ ಮಾಡಿದರೂ, ಯಾವುದೇ ಪ್ರಯೋಜನವಾಗಿಲ್ಲ. ಈ ಪರಿವರ್ತಕ ಜನ ವಸತಿ ಪ್ರದೇಶದಲ್ಲಿಯೇ ಇದ್ದು, ಇದಕ್ಕೆ  ಯಾವುದೇ ತಡೆಗೋಡೆ ಇಲ್ಲ. ಇದೇ ಪ್ರದೇಶದಲ್ಲಿ ಸ್ಥಳೀಯ ಮಕ್ಕಳು ಆಟವಾಡುತ್ತಿರುತ್ತಾರೆ. ಜನರು ಇದೇ ಪ್ರದೇಶದಲ್ಲಿ ಸುತ್ತಾಡುತ್ತಿರುತ್ತಾರೆ. ನಾಳೆ ಯಾವುದಾದರೂ ಪ್ರಾಣ ಹಾನಿಯಾದರೆ ಯಾರು ಜವಾಬ್ದಾರಿ ಎಂದು ಇಲ್ಲಿನ ನಿವಾಸಿಗಳು ಪ್ರಶ್ನಿಸುತ್ತಿದ್ದಾರೆ. ಈ ವಿದ್ಯುತ್ ಪರಿವರ್ತಕವನ್ನು ಬೇರೆಡೆಗೆ ವರ್ಗಾಯಿಸುವಂತೆ ಬೆಸ್ಕಾಮ್ ಅಧಿಕಾರಿಗಳಿಗೆ ಸುಮಾರು 15 ವರ್ಷಗಳಿಂದ ಬಹಳಷ್ಟು ಸಾರಿ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ಈ ಪರಿವರ್ತಕಕ್ಕೇ ಯಾವುದೇ ತಡೆಗೋಡೆ ಇಲ್ಲದೆ ಬಲಿಗಾಗಿ ಕಾಯುತ್ತಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಈ ಪರಿವರ್ತಕ ಬದಲಾಯಿಸದೆ ಇದ್ದರೆ,  ಗ್ರಾಮಸ್ಥರ ಜೊತೆಗೂಡಿ ಬೆಸ್ಕಾಂ ಕಚೇರಿ ಮುಂದೆ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಗ್ರಾಮ ಪಂಚಾಯಿತಿ…

Read More

ಬೆಳಗಾವಿ: ಕಳೆದ ಎರಡು ವರ್ಷಗಳ‌ ನಂತರ ನಡೆಯುತ್ತಿರುವ ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಬರದ ಸಿದ್ದತೆ ನಡೆದಿದ್ದು, ನಗರ ಸ್ವಚ್ಚತೆಗೆ ಮಹಾನಗರ ಪಾಲಿಕೆ ತೊಡಗಿಸಿಕೊಂಡಿದೆ. ಜೊತೆಗೆ ಪೊಲೀಸ್ ಇಲಾಖೆ ಕೂಡಾ ಸಕಲ ಸಿದ್ದತೆ ಮಾಡಿಕೊಂಡಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದೆ. ನಗರದ ಸುವರ್ಣಸೌಧದಲ್ಲಿ ನಡೆಯಲಿರುವ ಅಧಿವೇಶನಕ್ಕೆ ಈಗಾಗಲೇ ಬೆಂಗಳೂರಿನ ಸಚಿವಾಲಯಗಳು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಬೆಳಗಾವಿಗೆ ಸ್ಥಳಾಂತರವಾಗುತ್ತಿದ್ದು ಜಿಲ್ಲಾ ಮಟ್ಟದಲ್ಲಿಯೂ ಹಲವು ಏರ್ಪಾಡು ಮಾಡಿಕೊಳ್ಳಲಾಗುತ್ತಿದೆ. ಸಂಪೂರ್ಣ ಅಧಿವೇಶನಕ್ಕೆಂದು ರಾಜ್ಯದ ವಿವಿಧ ಭಾಗಗಳಿಂದ ಮೂರು ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಎಲ್ಲಾ ಅಧಿಕಾರಿಗಳಿಗೆ ಉಳಿದುಕೊಳ್ಳಲು ಟೆಂಟ್ ಹಾಕಲಾಗಿದೆ. ಜೊತೆಗೆ ಪೊಲೀಸರಿಗೆ ಊಟ, ವಸತಿ ಹಾಗೂ ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ. ಅಧಿವೇಶನ ಹಿನ್ನಲೆಯಲ್ಲಿ ಈಗಾಗಲೇ ನಗರದ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಗುತ್ತಿದ್ದು ವಿವಿಧ ವೃತ್ತಗಳಿವೆ ಬಣ್ಣ ಬಳಿಯುವ ಕಾರ್ಯ ನಡೆಯುತ್ತಿದೆ. ರಾಜ್ಯದ ನಾನಾ ಭಾಗಗಳಿಂದ ಜನರು ಬೆಳಗಾವಿಗೆ ಆಗಮಿಸಲಿರುವ ಹಿನ್ನಲೆಯಲ್ಲಿ ನಗರವನ್ನು ಸ್ವಚ್ಚವಾಗಿಡಲು ಮಹಾನಗರ ಪಾಲಿಕೆ ಶ್ರಮಿಸುತ್ತಿದೆ.  ಅಷ್ಟೇ ಅಲ್ಲದೇ ಅಧಿವೇಶನಕ್ಕೆ ಆಗಮಿಸುವ ಸಚಿವರು,…

Read More

ತಿಪಟೂರು: ನಗರದ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿಣಿ ಸಮಿತಿಯ ಚುನಾವಣೆ ಇಂದು ಸರ್ಕಾರಿ ಗರ್ಲ್ಸ್ ಕಾಲೇಜು ನಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ ಐದರವರೆಗೆ ನಡೆಯುತ್ತಿದೆ. ಒಕ್ಕಲಿಗರ ಸಂಘದ ಚುನಾವಣೆಯಲ್ಲಿ  ಪ್ರಮುಖ ವ್ಯಕ್ತಿಗಳು ಸ್ಪರ್ಧೆ ಮಾಡಿದ್ದು, ಮತದಾರರು ಬೆಳಗ್ಗಿನಿಂದಲೇ ಮತವನ್ನು ಹಾಕಲು ಕಾಲೇಜು ಕಡೆಗೆ ಬಂದಿದ್ದಾರೆ. ಬುಧವಾರ ಅಂತಿಮವಾಗಿ ಮತ ಎಣಿಕೆ ನಡೆಯಲಿದ್ದು, ಒಕ್ಕಲಿಗರ ಸಂಘದ ಸಾರಥಿಯನು ಕಾದುನೋಡಬೇಕಾಗಿದೆ. ವರದಿ: ಮಂಜು ಗುರುಗದಹಳ್ಳಿ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಕೊಪ್ಪಳ: ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವುದರ ಬಗ್ಗೆ ಕೆಲವು ಸ್ವಾಮೀಜಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಇದೀಗ ಮೊಟ್ಟೆ ಕೊಡಬೇಕೋ? ಬೇಡವೋ ಎನ್ನುವ ಗೊಂದಲ ಸೃಷ್ಟಿಯಾಗಿದೆ. ಈ ನಡುವೆ ವಿದ್ಯಾರ್ಥಿನಿಯೋರ್ವಳು ಸ್ವಾಮೀಜಿಗಳನ್ನು ತರಾಟೆಗೆತ್ತಿಕೊಂಡಿದ್ದಾಳೆ. ನಮಗೆ ಸರ್ಕಾರ ಮೊಟ್ಟೆ ಮತ್ತು ಬಾಳೆ ಹಣ್ಣು ಕೊಡಬೇಕು. ಮೊಟ್ಟೆಗೆ ನೀವು ವಿರೋಧ ಮಾಡುವುದಾದರೆ, ನಾವು ಮಠಕ್ಕೆ ಬಂದು ಮೊಟ್ಟೆ ತಿನ್ನುತ್ತೇವೆ ಎಂದು ಎಚ್ಚರಿಕೆ ನೀಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಲ ವೈರಲ್ ಆಗಿದೆ. ವಿದ್ಯಾರ್ಥಿ ಸಂಘಟನೆ ಎಸ್ ಎಫ್ ಐ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿ ಮಾತನಾಡಿದ್ದು,  ಮೊಟ್ಟೆ ನೀಡುವುದಕ್ಕೆ ನೀವ್ಯಾಕೆ ವಿರೋಧ ಮಾಡ್ತೀರಿ? ನಾವು ಒಂದಲ್ಲ ಎರಡು ಮೊಟ್ಟೆ ತಿನ್ನುತ್ತೇವೆ. ನೀವ್ಯಾರು ಕೇಳೋದಕ್ಕೆ ಎಂದು ತರಾಟೆಗೆತ್ತಿಕೊಂಡಿದ್ದಾಳೆ.  ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ತಿಪಟೂರು: ನಗರದ ಕಲ್ಪತರು ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಪುರುಷರ ಮತ್ತು ಮಹಿಳೆಯರ ಖೋ ಖೋ ಪಂದ್ಯಾವಳಿ ನಡೆಯಿತು. ಈ ಪಂದ್ಯದಲ್ಲಿ 45  ಪುರುಷರ ತಂಡ ಹಾಗೂ  25 ಮಹಿಳಾ ತಂಡ ಭಾಗವಹಿಸಿದ್ದು, ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲಾ ತಾಲೂಕುಗಳಿಂದ  ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಆಗಮಿಸಿದ್ದಾರೆ. ನೂರು ಜನ ಕ್ರೀಡಾ ಅಧಿಕಾರಿಗಳು ಕೂಡ ಭಾಗವಹಿಸಿದ್ದಾರೆ. ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ಮೂರೂವರೆ ಲಕ್ಷ ರೂ.ಗಳ ನಗದು ಮತ್ತು ಪಾರಿತೋಷಕಗಳನ್ನು ನೀಡಲಾಗುವುದು. ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಕ್ರೀಡಾಅಧಿಕಾರಿಗಳಿಗೆ ಊಟ ವಸತಿ ಸೌಲಭ್ಯ ಮಾಡಲಾಗಿದೆ. ಈ ಕ್ರೀಡಾಂಗಣದಲ್ಲಿ ನಾಲ್ಕು ಅಂಕಗಳನ್ನು ಮಾಡಲಾಗಿದ್ದು, ಒಂದು ಕ್ರೀಡಾಂಗಣಕ್ಕೆ ಸುತ್ತ ಮ್ಯಾಟ್ ಗಳನ್ನು ಹಾಕಿ  ಗ್ಯಾಲರಿ ನಿರ್ಮಿಸಿ ದೀಪಾಲಂಕಾರ ಗಳನ್ನು ಮಾಡಲಾಗಿದೆ. ಹೊನಲು ಬೆಳಕಿನ ಕೋಕೋ ಪಂದ್ಯಾವಳಿಗೆ ಸುತ್ತಮುತ್ತ ಕಲ್ಪತರು ಕ್ರೀಡಾಂಗಣ ಪೂರ್ತಿ ವಿಜೃಂಭಣೆಯಿಂದ ಕಂಗೊಳಿಸುತ್ತಿದೆ.  ಈ ಪಂದ್ಯಾಟದಲ್ಲಿ ಆಯ್ಕೆಯಾಗುವ ತಂಡಗಳನ್ನು ಮಧ್ಯಪ್ರದೇಶದ ಜಬಲ್ ಪುರದಲ್ಲಿ ನಡೆಯುವ ರಾಷ್ಟ್ರೀಯ ಸೀನಿಯರ್ ಕೋಕೋ ಪಂದ್ಯಕ್ಕೆ ಆಯ್ಕೆ ಮಾಡಲಾಗುವುದು. ಬಹುಮಾನ ವಿತರಣೆ…

Read More

ಗುಬ್ಬಿ: ನೆಲ ಮತ್ತು ಜಲವನ್ನು ನಾವು ಸಂರಕ್ಷಣೆ ಮಾಡಿದರೆ,  ನಮ್ಮನ್ನು ಈ ಪ್ರಕೃತಿ ಸಂರಕ್ಷಣೆ ಮಾಡುತ್ತದೆ.  ನೀರನ್ನು ಮಿತವಾಗಿ ಬಳಸಿ ಅಂತರ್ಜಲವನ್ನು ಕಾಪಾಡುವ ಪ್ರಯತ್ನ ಮಾಡಬೇಕಾದ ಅನಿವಾರ್ಯತೆ ನಮ್ಮ ಮುಂದಿದೆ.  ನೀರನ್ನು ಕೃತಕವಾಗಿ ತಯಾರಿಸಲು ಆಗುವುದಿಲ್ಲ ಎಂದು ಸಚಿವ ಮಾಧುಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು. ತಾಲ್ಲೂಕಿನ ಸಿ.ಎಸ್.ಪುರ ಕೆರೆ ಹೇಮೆಯಿಂದ ತುಂಬಿ ಹರಿದ ಹಿನ್ನಲೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿ ನಂತರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿರಿಯ ಮುತ್ಸದ್ಧಿ ದೇವೇಗೌಡರ ನಿರೀಕ್ಷೆಯಂತೆ ನೀರು ಈ ಜಿಲ್ಲೆಗೆ ಸಿಗಲಿಲ್ಲ. ಇದಕ್ಕೆ ತಕ್ಕ ಉತ್ತರ ಜನರು ನೀಡಿದ್ದರು. ಆದರೆ ನೀರು ಹರಿಸುವ ಜವಾಬ್ದಾರಿ ನನ್ನ ಹೆಗಲಿಗೆ ಬಿತ್ತು. ಈ ನಿಟ್ಟಿನಲ್ಲಿ ಜವಾಬ್ದಾರಿ ಅರಿತು ಜಿಲ್ಲೆಗೆ ನೀರು ಹರಿಸುವ ಕೆಲಸ ನಿಯಾಮಾನುಸಾರ ನಡೆಸಿ ಮೂರು ಜಿಲ್ಲೆಗೆ ನ್ಯಾಯ ಒದಗಿಸಿದೆ. ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಹಾಸನದಿಂದ ತುಮಕೂರಿನತ್ತ ಹೇಮೆ ಹರಿಯುವ ವೇಳೆ ಸಾಕಷ್ಟು ಭಾಗದಲ್ಲಿ ನೀರು ವ್ಯರ್ಥವಾಗುವುದು. ಈ ನಿಟ್ಟಿನಲ್ಲಿ ಪೋಲಾಗುವ…

Read More

ಮಂಡ್ಯ: ಕೆಲವೇ ದಿನಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಆದೇಶ ಹೊರಡಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಮಂಡ್ಯದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಅನೇಕ ವರ್ಷಗಳಿಂದ ರಾಜ್ಯದಲ್ಲಿ ಶಿಕ್ಷಕರ ಕೊರತೆ ಇದೆ‌. 15 ಸಾವಿರ ಪೋಸ್ಟ್ ಪೂರ್ಣ ಮಾಡಲಾಗುತ್ತದೆ. ಕೆಲವೆ ದಿನಗಳ ನೋಟಿಫಿಕೇಷನ್ ಮಾಡಲಾಗುತ್ತದೆ. ಶಾಲಾ ಕೊಠಡಿಗಳ ಕೊರತೆ ಇದೆ, ಸರಿಪಡಿಸುತ್ತೇವೆ ಎಂದರು. ಮುಂದಿನ ವರ್ಷ ಅಕಾಡೆಮಿ ಕೇರ್ ಒಳಗಡೆ NET ಅನುಷ್ಠಾನಕ್ಕೆ ತರುವ ಕೆಲಸ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಶಾಲೆಗಳನ್ನ ಮುಚ್ಚಲ್ಲ. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬಿ.ಸಿ.ನಾಗೇಶ್ ಹೇಳಿಕೆ ನೀಡಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಮಯಸಂದ್ರ ಹೋಬಳಿಯ ಸೊರವಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ, ಹೊಣಕೆರೆ ಗ್ರಾಮದಲ್ಲಿ ನಿರ್ಮಿಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದವರ ಅಂತ್ಯಸಂಸ್ಕಾರ ನೀರಿನಲ್ಲೋ? ಅಥವಾ ಮಣ್ಣಿನಲ್ಲೋ!! . ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹೌದು…! ಈ ಚರ್ಚೆಗೆ ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ಸೊರವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಹೊಣಕೆರೆ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ನಿರ್ಮಿತಿ ಕೇಂದ್ರ ತುಮಕೂರು ಇವರು ನಿರ್ಮಿಸಿರುವ. ಈ ಸ್ಮಶಾನವೇ ಸಾಕ್ಷಿಯಾಗಿದೆ . ಹೊಣಕೆರೆ ಗ್ರಾಮದಲ್ಲಿ .2015 – 16 ನೇ ಸಾಲಿನಲ್ಲಿ ನಿರ್ಮಿತಿ ಕೇಂದ್ರ ತುಮಕೂರು .ಇವರು ಈ ಸ್ಮಶಾಣದ ಕಾಮಗಾರಿಯನ್ನು ಕೈಗೆತ್ತಿಕೊಂಡು .ಈ ಜಾಗದಲ್ಲಿ ಕಾಂಪೌಂಡ್ ಮಾತ್ರ ಉತ್ತಮವಾಗಿ ನಿರ್ಮಾಣ ಮಾಡಿದ್ದಾರೆ. ಆದರೆ ಈ ಕಾಮಗಾರಿಯನ್ನು. ಕೈಗೆತ್ತಿಕೊಳ್ಳುವ ಮುನ್ನ ಈ ಸ್ಥಳ ಸ್ಮಶಾನಕ್ಕೆ ಯೋಗ್ಯವಾಗಿದೆಯೇ ಎಂದು ಸಂಬಂಧಪಟ್ಟ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾಗಲಿ ಮತ್ತು  ಕಂದಾಯ ಇಲಾಖೆಯ ಅಧಿಕಾರಿಗಳಾಗಲೀ ಹಗಲಿನ ಸಮಯದಲ್ಲಿ…

Read More