Author: admin

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಾಂಗ್ರೆಸ್ ಕಛೇರಿಯಲ್ಲಿ  ಮಾಜಿ ಸಚಿವರಾದ ಡಿ.ಸುಧಾಕರ್ ನೇತೃತ್ವದಲ್ಲಿ ಹಿರಿಯೂರು ತಾಲ್ಲೂಕು ಮಹಿಳಾ ಕಾಂಗ್ರೆಸ್ ಸಭೆಯನ್ನು ಏರ್ಪಡಿಸಲಾಗಿತ್ತು.  ಸಭೆಯನ್ನುದ್ದೇಶಿಸಿ ಮಾತನಾಡಿದ  ಡಿ.ಸುಧಾಕರ್,  ಮಹಿಳೆಯರಿಗೆ ಹೆಚ್ಚಿನ ರಾಜಕೀಯ ಸ್ಥಾನವನ್ನು ನೀಡುವ ಏಕೈಕ ಪಕ್ಷ ಕಾಂಗ್ರೆಸ್ ಆಗಿದೆ. ಮಾಜಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಮೊಟ್ಟಮ್ಮ ನವರು ಸ್ತ್ರೀ ಶಕ್ತಿ ಸಂಘಗಳಿಗೆ ಅನುದಾನವನ್ನು ಕೊಟ್ಟು ಮಹಿಳೆಯರ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಾದರು. ನನ್ನ ಆಡಳಿತ ಅವಧಿಯಲ್ಲಿ ಸ್ತ್ರೀ ಶಕ್ತಿ ಭವನಗಳನ್ನು ಹಾಗೂ ಸ್ವ ಸಹಾಯ ಸಂಘಗಳಿಗೆ ಡಿ.ಸಿ.ಸಿ. ಬ್ಯಾಂಕ್ ವತಿಯಿಂದ ಸಹಾಯ ಧನವನ್ನ ನೀಡಿದ್ದೆ ಎಂದು ಅವರು ತಿಳಿಸಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಗೀತಾ ನಂದಿನಿ ಗೌಡ  ಮಾತನಾಡಿ,  ಹೆಣ್ಣು ಮಕ್ಕಳು ರಾಜಕೀಯದಲ್ಲಿ ಗುರುತಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ತಿಳಿಸಿದರು.  ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ  ಶಶಿಕಲಾ ಮಾತನಾಡಿ, ಹೆಣ್ಣು ಸಮಾಜದ ಕಣ್ಣು. ನಿಮ್ಮ ಕೆಲಸದ ನಡುವೆಯೂ ರಾಜಕೀಯವಾಗಿ ಮುಂದೆ ಬರಬೇಕು,. ಮುಂದೆ ಶೈಕ್ಷಣಿಕವಾಗಿ ನಡೆಯುವಂತಹ ಜಿಲ್ಲಾ…

Read More

ಕೊರಟಗೆರೆ: ಮಹಾ ಶಿವರಾತ್ರಿ ಪ್ರಯುಕ್ತ ಡಾ.ಜಿ.ಪರಮೇಶ್ವರ ಕಪ್ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿಗಳನ್ನು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿ ಬಿ.ಎಸ್.ದಿನೇಶ್ ತಿಳಿಸಿದರು. ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗ್ರಾಮೀಣ ಕ್ರೀಡೆ ಉಳಿಸಲು ಮತ್ತು ಯುವ ಪ್ರತಿಭೆಗಳನ್ನು ಉತ್ತೇಜಿಸಲು ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಕ್ಷೇತ್ರದ ಎಲ್ಲಾ 36 ಗ್ರಾಮ ಪಂಚಾಯಿತಿ ಮಟ್ಟದ ಯುವಕರಿಗೆ ಈ ಕ್ರೀಡೆ ನಡೆಯುತ್ತಿದ್ದು, ಯುವ ಮತ್ತು ವಿದ್ಯಾರ್ಥಿ ಕಾಂಗ್ರೆಸ್ ಘಟಕವು ಈ ಪಂದ್ಯಾವಳಿಗಳನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರರವರ ಮಾರ್ಗದರ್ಶನದಲ್ಲಿ ಹಾಗೂ ಪ್ರೋತ್ಸಾಹದಲ್ಲಿ ನಡೆಸಲಿದ್ದು ಸಾರ್ವಜನಿಕರು ಆಗಮಿಸುವಂತೆ ಕೋರಿದರು. ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಎಸ್.ವಿನಯ್ಕುಮಾರ್ ಮಾತನಾಡಿ, ಈ ಪಂದ್ಯವಳಿಗಳು ಹಿಂದೆ ಮಳೆಯ ಕಾರಣ ರದ್ದಾಗಿತ್ತು, ಮಾರ್ಚ್ 1 ಶಿವರಾತ್ರಿಯೊಂದು ಈ ಪಂದ್ಯಾವಳಿಗಳು ಆರಂಭವಾಗಿ ಮೂರು ದಿನಗಳ ಕಾಲ ನಡೆಯಲಿದೆ. ಇದರಲ್ಲಿ 17 ತಂಡಗಳು ಭಾಗವಹಿಸಲಿವೆ. ಈಗಾಗಲೇ ಕ್ಷೇತ್ರದ 165 ತಂಡಗಳು ಆಯಾ ಹೋಬಳಿಗಳಲ್ಲಿ ಲೀಗ್ ಪಂದ್ಯಗಳನ್ನು…

Read More

ನೆಲಮಂಗಲ: ಮಣ್ಣೆಯ ಗ್ರಾಮದಲ್ಲಿರುವ ಪುರಾತನ ದೇವಾಲಯ ದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆಲಮಂಗಲ ತಾಲ್ಲೂಕು ಜಯಕರ್ನಾಟಕ ಸಂಘಟನೆಯ ಮಹಿಳಾ ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಮಹಿಳಾ ಘಟಕದ ಅಧ್ಯಕ್ಷರಾದ ವರ್ಷರವರ ನೇತೃತ್ವದಲ್ಲಿ ಅವರ ನೇತೃತ್ವದಲ್ಲಿ ಈ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಸುತ್ತಮುತ್ತ ಬೆಳೆದಿರುವ ಗಿಡಗಂಟಿಗಳನ್ನು ತೆರವುಗೊಳಿಸುವ ಮೂಲಕ ಶ್ರಮದಾನ ನಡೆಸಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಶಶಿದಾಸ್, ತಾಲ್ಲೂಕು ಮಹಿಳಾ ಘಟಕದ ಉಪಾಧ್ಯಕ್ಷರಾದ ಮಾಲಾ, ಸಂಘಟನೆಯ ಪದಾಧಿಕಾರಿಗಳಾದ ಆಕಾಶ್, ಚಂದುರಾವ್, ನಿಕೇಶ್, ನವೀನ್, ಸಿದ್ದರಾಮು, ಲೀವಿಂಗ್ ಸಾಪ್ ಹಾಟ್ಸ್ ಸಂಸ್ಥೆ, ಕೆರೇಕತಿಗನುರು ಗಂಗಣ್ಣ, ಗೋವೆನ ಹಳ್ಳಿ ಪುನೀತ್, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸ್ವಯಂ ಸೇವಕರು, ಗ್ರಾಮ ಪಂಚಾಯ್ತಿ ಸದಸ್ಯರಾದ ಶಂಕರ್, ವಿಜಯ್, ವೀಣಾ, ರಜಿನಿ, ಸ್ವಯಂ ಸೇವಕರು ಹಾಗೂ ಊರಿನ ಎಲ್ಲಾ ಗ್ರಾಮಸ್ಥರು ಮತ್ತು ಮುಖಂಡರು ಉಪಸ್ಥಿತರಿದ್ದರು. ವರದಿ: ಮಂಜುಸ್ವಾಮಿ.ಎಂ.ಎನ್. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಯಲದಬಾಗಿ: ಶಾಸಕರಾದ ಡಾ.ಸಿ.ಎಂ.ರಾಜೇಶ್ ಗೌಡ ರವರು ಇಂದು ಯಲದಬಾಗಿ ಗ್ರಾಮ ಪಂಚಾಯತಿಯ ಯಲದಬಾಗಿ ಗ್ರಾಮದಲ್ಲಿ ಸುಮಾರು 40 ಲಕ್ಷವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಗ್ರಾಮ ಪಂಚಾಯಿತಿ ಕಟ್ಟಡದ ಶಂಕುಸ್ಥಾಪನಾ ಕಾರ್ಯಕ್ರಮವನ್ನು ನೆರವೇರಿಸಿದರು.   ಈ ಸಂದರ್ಭದಲ್ಲಿ ರೇಷ್ಮೆ ನಿಗಮ ಮಂಡಳಿ ಅಧ್ಯಕ್ಷರು ಎಸ್. ಆರ್.ಗೌಡ, ಕಾರ್ಯನಿರ್ವಹಣಧಿಕಾರಿಗಳು ಅನಂತರಾಜು , ಸಹಾಯಕ ಕಾರ್ಯಪಾಲಕರು ಗಂಗಾಧರ್,  ಕಟ್ಟಡದ ನಿವೇಶನದ ದಾನಿಗಳು ಆನಂದ ಗೌಡ, ಯಲದಬಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರು ಜಯರಾಮಯ್ಯ,  ಉಪಾಧ್ಯಕ್ಷ  ಅಂಬಿಕಾ ನಾಗರಾಜ್,  ಎಲ್ಲ ಗ್ರಾಮ ಪಂಚಾಯತ್ ಸದಸ್ಯರು ಮುಖಂಡರಾದ ರಂಗನಾಥ ಗೌಡ, ಹೊನ್ನೇಶ್ ಗೌಡ, ಬಗರ್ ಹುಕುಂ ಸದಸ್ಯ ಅಣ್ಣಪ್ಪ , ಬಾದೆಗೌಡ, ರಂಗನಾಥ್, ವದ್ದೆಗೌಡ, ಶಂಬಣ್ಣ,ವೈ ಟಿ ರಾಜ್, ತರೂರ್ ಬಸವರಾಜ್, ಬಿಜೆಪಿ ಮುಖಂಡರು ಗ್ರಾಮಸ್ಥರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಬೆಂಗಳೂರು: ಕ್ರೇಜಿಸ್ಟಾರ್​ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ಸೋಮವಾರ ನಿಧನರಾದರು. ಪಟ್ಟಮ್ಮಾಳ್ ಅವರಿಗೆ 83 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಪಟ್ಟಮ್ಮಾಳ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ​ ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದರು. ಬೆಳಗ್ಗೆ 10.30ರ ವೇಳೆಗೆ ರವಿಚಂದ್ರನ್​ ಅವರ ಮನೆಗೆ ಪಾರ್ಥೀವ ಶರೀರವನ್ನು ತರಲಾಗುತ್ತದೆ. ಸಂಜೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಚಿತ್ರದುರ್ಗ : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಕನ್ಯಾಡಿ ಗ್ರಾಮದ ನಿವಾಸಿಯಾದ ದಿನೇಶ್ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಚಿತ್ರದುರ್ಗ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು. ಫೆ.25ರಂದು ಧರ್ಮಸ್ಥಳದ ಕನ್ಯಾಡಿ ಗ್ರಾಮದ ವಾಸಿ ಕೂಲಿ ಕಾರ್ಮಿಕ, ದಲಿತ ಸಮುದಾಯದ ದಿನೇಶ್ ಎಂಬ ವ್ಯಕ್ತಿಯನ್ನು ಮನಬಂದಂತೆ ಥಳಿಸಿ, ಆತನನ್ನು ಹತ್ಯೆ ಮಾಡಲಾಗಿದೆ. ಆರೋಪಿಗಳು ಪ್ರಭಾವಿಗಳಾಗಿದ್ದು, ಬಜರಂಗದಳದ, ಆರ್.ಎಸ್.ಎಸ್ . , ಶ್ರೀರಾಮ ಸೇನೆ ಹಾಗೂ ಮುಂತಾದ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ಆರೋಪಿ ಕೃಷ್ಣ ಅಲಿಯಾಸ್ ಕಿಟ್ಟಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ದಿನೇಶ್ ಅವರನ್ನು ಥಳಿಸಿ ಅಮಾನವೀಯವಾಗಿ ಹತ್ಯೆಗೈದಿರುವ ಆರೋಪಿಗೆ ಮರಣದಂಡನೆ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ ಅಂಬೇಡ್ಕರ್ ಸ್ವಾಭಿಮಾನಿ ಸೇನೆ, ಮೃತರ ಕುಟುಂಬಕ್ಕೆ ರೂ.25,00,000 ಪರಿಹಾರ ನೀಡಬೇಕು. ಮೃತನ ಕುಟುಂಬಕ್ಕೆ 5 ಎಕರೆ ಜಮೀನನ್ನು ಮಂಜೂರು ಮಾಡಬೇಕು ಎಂದು ಇದೇ ವೇಳೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾಧಿಕಾರಿ ಗಳ ಮುಖಾಂತರ ರಾಜ್ಯಪಾಲರಿಗೆ ಮನವಿ…

Read More

ಹಿರಿಯೂರು: ಅಭಿಮತ ವಾರಪತ್ರಿಕೆ ಯ ಹದಿನಾರನೇಯ ವರ್ಷದ ಪತ್ರಿಕೆ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾಜಿ ಸಚಿವ  ಜಿ.ಎಸ್.ಮಂಜುನಾಥ್ ಕೊರೊನಾ ವಾರಿಯರ್ಸ್ ಗೆ ಸನ್ಮಾನಿಸಿ ಗೌರವಿಸಿದರು. ಬಳಿಕ ಮಾತನಾಡಿದ ಅವರು,  ಪೌರಕಾರ್ಮಿಕರು  ಹಗಲಿರುಳು  ಸ್ವಚ್ಚತೆಗಾಗಿ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು,  ಕಳೆದ 2019 ರಲ್ಲಿ ಪ್ರಥಮವಾಗಿ ಕೊರೊನಾ ಎಂಬ ಮಹಾಮಾರಿಯು ಅಪ್ಪಳಿಸಿದಾಗ ಎರಡೂವರೆ ತಿಂಗಳು , ಮೂರು ತಿಂಗಳು ನಾವು ಯಾರು ಸಹ ಮನೆಯಿಂದ ಹೊರಗಡೆ ಬರಲು ಸಹ ಭಯ ಪಡುತ್ತಿದ್ದೆವು . ಆ ಸಮಯದಲ್ಲಿಯೂ ಪೌರಕಾರ್ಮಿಕರು ಹಗಲಿರುಳು ಕಾರ್ಯನಿರ್ವಹಿಸಿದ್ದರು. ಆ ಸಂದರ್ಭದಲ್ಲಿ ಡಾಕ್ಟರ್ ಗಳು , ನರ್ಸ್ ಗಳು , ರಾಜಕೀಯ ವ್ಯಕ್ತಿಗಳು, ಬಿಟ್ಟರೆ ಯಾರು ಸಹ ಅಂತಹ ಸಂದರ್ಭದಲ್ಲಿ ಹೊರಗಡೆ ಬರಲು ಸಾಧ್ಯವೆ ಇಲ್ಲ.  ಐದು ಮೀಟರ್ , ಹತ್ತು ಮೀಟರ್ ದೂರ ಇರುವಂತಹ ಪರಿಸ್ಥಿತಿ ಉಂಟಾಗಿತ್ತು.  ಅಂತಹ ಸಂದರ್ಭದಲ್ಲಿ ಪೌರಕಾರ್ಮಿಕರು ದಿನನಿತ್ಯ ಕೆಲಸಗಳನ್ನು ನಿರ್ವಹಿಸಿದ್ದಾರೆ ಎಂದು ಶ್ಲಾಘಿಸಿದರು. ಯಾವುದೇ ಸರ್ಕಾರಗಳು ಬಂದರೂ, ಪೌರಕಾರ್ಮಿಕರ ಸಮಸ್ಯೆಗಳು ಪರಿಹಾರವಾಗದೇ ಬೆಟ್ಟದಂತೆ ನಿಂತಿದೆ. …

Read More

ತುಮಕೂರು: ಬಿಸಿಯೂಟ ನೌಕರರ ಕಡಗಣನೆ ಖಂಡಿಸಿ , ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಶನ್  ವತಿಯಿಂದ ಮಾರ್ಚ್ 4 ರಂದು ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತುಮಕೂರು ಜಿಲ್ಲಾ ಬಿಸಿಯೂಟ ತಯಾರಕರ ಫೆಡರೇಶನ್ ನ  ಜಿಲ್ಲಾ ಸಂಚಾಲಕರಾದ ಕಾಂತರಾಜು ರವರು ತಿಳಿಸಿದ್ದಾರೆ. 2003 ನೇ ಇಸವಿಯಿಂದ ಇಲ್ಲಿಯವರೆಗೂ ಸತತ 19 ವರ್ಷಗಳಿಂದ ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಯಲ್ಲಿ ತೊಡಗಿರುವ ನೌಕರರನ್ನು ಸರ್ಕಾರ ಕಡೆಗಣಿಸುತ್ತಿದೆ. ಅಂದಿನಿಂದ ಇಲ್ಲಿಯವರೆಗೂ ₹200 ಹಾಗೂ 300 ರೂಗಳ ಗೌರವದೊಂದಿಗೆ ಕೆಲಸ ನಿರ್ವಹಿಸಲು ಶುರುಮಾಡಿದ ನೌಕರರಿಗೆ ಇದುವರೆಗೂ ಸರ್ಕಾರ ಕೇವಲ 2,600 ಹಾಗೂ 2,700 ರೂಗಳ ಸಂಬಳ ನೀಡಿ ಸರ್ಕಾರ ಕೆಲಸ ಮಾಡಿಸಿಕೊಳ್ಳುತ್ತಿದೆ ಎಂದು ಅವರು ಹೇಳಿದರು. ಆದರೆ ಸರ್ಕಾರದ ನಿಯಮದ ಪ್ರಕಾರ ನಿಗದಿಮಾಡಿರುವ ಕನಿಷ್ಠ ವೇತನಕ್ಕೆ ಆಗ್ರಹಿಸಿ ಇದುವರೆಗೂ ಹಲವು ಬಾರಿ ಮನವಿ ಮಾಡಿದರೂ ಸಹ ಸರ್ಕಾರ ನಮ್ಮ ಮನವಿಗೆ ಸ್ಪಂದಿಸದ ಕಾರಣ ಮಾರ್ಚ್ 4 ರಂದು ಬೆಂಗಳೂರು ಚಲೋ ಕಾರ್ಯಕ್ರಮವನ್ನು…

Read More

ಪಾವಗಡ: ರಾಜವಂತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರ್. ಹೊಸಕೋಟೆ ಗ್ರಾಮದ ಯುವಕ ಸಾವಿನಲ್ಲೂ ಸಹ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದು, ಈ ತ್ಯಾಗಿ ಯುವಕನ ಮನೆಗೆ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಭೇಟಿ ನೀಡಿ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಕೆಲ ದಿನಗಳ ಹಿಂದೆ ಪಾವಗಡ ಪಟ್ಟಣದ ಹೊರವಲಯದಲ್ಲಿ ಆರ್. ಹೊಸಕೋಟೆ ಗ್ರಾಮದ 39 ವರ್ಷದ ಯುವಕ ಹನುಮಂತರಾಯಪ್ಪ ಅಪಘಾತಕ್ಕಿಡಾಗಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿ ಪಡೆಯುವಾಗ ಚಿಕಿತ್ಸೆ  ಫಲಕಾ ರಿಯಾಗದೆ ಸಾವನ್ನಪ್ಪಿದ್ದು, ಸಾವಿನಲ್ಲೂ ಸಹ ಪೋಷಕರು ಯುವಕನ ಮೂತ್ರಪಿಂಡ ಹಾಗೂ ಅಂಗಾಂಗಗಳನ್ನು 4 ರೋಗಿಗಳಿಗೆ ದಾನ ಮಾಡಿ, ಅಮೂಲ್ಯ ಜೀವಗಳನ್ನು ಉಳಿಸಿ ಸಾರ್ಥಕತೆ ಮೆರೆದಿದ್ದಾರೆ. ಸಾರ್ಥಕತೆ ಮೆರೆದ ಯುವಕನ ಕುಟುಂಬಕ್ಕೆ ಇಂದು ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ, ಧೈರ್ಯ ತುಂಬಿ ಆರ್ಥಿಕ ಸಹಾಯ ನೀಡಿ, ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಕೈ ಜೋಡಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಸದಸ್ಯರಾದ…

Read More

ಸಿರಾ: ಆರೋಗ್ಯ ಇಲಾಖೆ ತಾಲ್ಲೂಕಿನಾದ್ಯಂತ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಅಭಿಯಾನಕ್ಕೆ ಸಿರಾ ತಾಲ್ಲೂಕು ಶಾಸಕ ಡಾ.ರಾಜೇಶ್ ಗೌಡ ಚಾಲನೆ ನೀಡಿದರು. ಸಿರಾ ನಗರದ ಸಪ್ತಗಿರಿ ಬಡಾವಣೆಯಲ್ಲಿ ಐದು ವರ್ಷದ ಒಳಗಿನ ಮಗುವಿಗೆ ಪೊಲಿಯೋ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಮಮತ, ತಾಲೂಕು ವೈದ್ಯಾಧಿಕಾರಿಗಳು ಡಾ.ಮೋಹನ್, ಡಾ. ಡಿ.ಎಂ.ಗೌಡ,ಡಾ ರಾಮಕೃಷ್ಣ ಅರೋಗ್ಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಆರೋಗ್ಯ ಇಲಾಖೆಯು ತಾಲ್ಲೂಕಿನಾದ್ಯಂತ 5 ವರ್ಷದೊಳಗಿನ ಮಕ್ಕಳಿಗೆ ಪೊಲಿಯೋ ಹನಿ ಹಾಕುವ ಗುರಿಯನ್ನು ಹೊಂದಿದೆ. ಕೊರೋನಾ ಮೂರನೇ ಅಲೆಯಿಂದಾಗಿ ಕಳೆದ ಜನವರಿ ತಿಂಗಳಿನಲ್ಲಿ ನಡೆಯಬೇಕಾದ ಪೊಲಿಯೋ ಅಭಿಯಾನವನ್ನು ಮುಂದೂಡಲಾಗಿತ್ತು. ಅಭಿಯಾನದಲ್ಲಿ ಐದು ವರ್ಷದೊಳಗಿನ ಎಲ್ಲಾ ಮಕ್ಕಳೂ ಲಸಿಕೆ ಪಡೆದುಕೊಳ್ಳಬೇಕು. ಆರೋಗ್ಯ ಇಲಾಖೆಯು ಕಾರ್ಯಕರ್ತರನ್ನು ಬಳಸಿಕೊಂಡು ಅಗತ್ಯ ವ್ಯವಸ್ಥೆ ಮಾಡಿಕೊಂಡಿದೆ. ತಾಲ್ಲೂಕಿನ ಎಲ್ಲಾ ಆಸ್ಪತ್ರೆಗಳು, ಗ್ರಾಮೀಣ ಪ್ರದೇಶ, ಗುಡ್ಡಗಾಡು ಪ್ರದೇಶ ಸೇರಿದಂತೆ ವಿವಿಧೆಡೆ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ ಎಂದರು. ವರದಿ: ಎ.ಎನ್. ಪೀರ್ ,…

Read More