Subscribe to Updates
Get the latest creative news from FooBar about art, design and business.
- ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
- ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
- ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ
- ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ
- ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ
- ನವೆಂಬರ್ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಮಕೂರು ಜಿಲ್ಲಾ ಪ್ರವಾಸ
- ತುಮಕೂರು | SSLC ಫಲಿತಾಂಶ ಸೇರಿದಂತೆ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿತು ಜಿಲ್ಲೆಯ ಹಲವು ಸಮಸ್ಯೆಗಳು!
- ಜಮೀನಿನ ಖಾತೆ ಬದಲಾವಣೆಗೆ ಲಂಚಕ್ಕೆ ಬೇಡಿಕೆ: ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಲೋಕಾಯುಕ್ತ ಬಲೆಗೆ
Author: admin
ಹಲವಾರು ದಿನಗಳ ನಿರಂತರ ಸಂಘರ್ಷದ ನಂತರ, ರಷ್ಯಾ ಗುರುವಾರ ಉಕ್ರೇನ್ (ರಷ್ಯಾ-ಉಕ್ರೇನ್ ಘರ್ಷಣೆ) ಮೇಲೆ ದಾಳಿ ಮಾಡಿತು. ರಷ್ಯಾದ ಸೇನೆ ಮತ್ತು ಉಕ್ರೇನಿಯನ್ ಸೈನಿಕರ ನಡುವಿನ ಸಂಘರ್ಷ ಮುಂದುವರಿದಿದೆ. ಇದೆಲ್ಲದರ ಮಧ್ಯೆ ಉಕ್ರೇನ್ ಬಿಕ್ಕಟ್ಟಿನ ಕುರಿತು ಗುರುವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ ನಂತರ, ಪಿಎಂಒ ಈ ಮಾಹಿತಿಯನ್ನು ನೀಡಿದೆ. ‘ಉಕ್ರೇನ್‌ಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Russian President Vladimir Putin) ಪ್ರಧಾನಮಂತ್ರಿ ನರೇಂದ್ರ ಮೋದಿಗೆ ವಿವರಿಸಿದರು. ಈ ವೇಳೆ ರಷ್ಯಾ ಮತ್ತು ನ್ಯಾಟೋ (NATO) ನಡುವಿನ ಭಿನ್ನಾಭಿಪ್ರಾಯಗಳನ್ನು ಪ್ರಾಮಾಣಿಕ ಸಂವಾದದ ಮೂಲಕ ಮಾತ್ರ ಪರಿಹರಿಸಬಹುದು ಎಂಬ ತಮ್ಮ ದೀರ್ಘಕಾಲದ ನಂಬಿಕೆಯನ್ನು ಪ್ರಧಾನಿ ಪುನರುಚ್ಚರಿಸಿದರು ಎಂದು ಪಿಎಂಒ ತಿಳಿಸಿದೆ. ಪಿಎಂಒ ಹೊರಡಿಸಿದ ಅಧಿಕೃತ ಹೇಳಿಕೆಯ ಪ್ರಕಾರ, ಹಿಂಸಾಚಾರವನ್ನು ತಕ್ಷಣವೇ…
ಗೂಳೂರಿನ ಶ್ರೀ ಮಹಾಗಣಪತಿ ದೇವಾಲಯದ ನೂತನ ಪ್ರವೇಶದ್ವಾರ ಕಾಮಗಾರಿಗೆ ಶಾಸಕ ಡಿ.ಸಿ.ಗೌರಿಶಂಕರ್ ಭೂಮಿ ಪೂಜೆ ಸಲ್ಲಿಸಿದರು. ಸುಮಾರು 25 ಲಕ್ಷ ರೂ ವೆಚ್ಚದಲ್ಲಿ ಪ್ರವೇಶದ್ವಾರ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ . ಗ್ರಾಮಸ್ಥರ ಮನವಿಯಂತೆ ಶಾಸಕ ಗೌರಿಶಂಕರ್ ತಮ್ಮ ವೈಯಕ್ತಿಕ 25 ಲಕ್ಷ ರೂ.ಗಳ ವೆಚ್ಚದಲ್ಲಿ ಈ ಪ್ರವೇಶ ದ್ವಾರ ನಿರ್ಮಾಣ ಮಾಡಲು ಮುಂದಾಗಿದ್ದು ಅದರ ಭೂಮಿ ಪೂಜೆ ನೆರವೇರಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಮಹಾರಾಷ್ಟ್ರದಲ್ಲಿ ಮಹಾಗಣಪತಿ ಪೂಜೆಯನ್ನು ಹೇಗೆ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆಯೋ ಹಾಗೆಯೇ ಕರ್ನಾಟಕದಲ್ಲಿ ಆಚರಿಸುತ್ತಿರುವ ಏಕೈಕ ಸ್ಥಳ ಗೂಳೂರಿನಲ್ಲಿ ಮಾತ್ರ. ಮಹಾಗಣಪತಿ ಜಾತ್ರೆ ಮಹೋತ್ಸವ ಹಾಗೂ ಪೂಜಾ ಮಹೋತ್ಸವವನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಆದಕಾರಣ ಗ್ರಾಮಸ್ಥರ ಮನವಿಯಂತೆ ಮಹಾಗಣಪತಿ ದೇವಾಲಯದ ನೂತನ ಪ್ರವೇಶದ್ವಾರ ನಿರ್ಮಾಣ ಮಾಡಲು ಯೋಜನೆ ರೂಪಿಸಿದ್ದು, ಅಂತೆಯೇ ಇಂದು ಭೂಮಿ ಪೂಜೆ ನೆರವೇರಿಸಿ ರುವುದಾಗಿ ತಿಳಿಸಿದರು. ನಾನು ಧರ್ಮ ಜಾತಿಯನ್ನು ಮುಂದಿಟ್ಟುಕೊಂಡು ಎಂದಿಗೂ ರಾಜಕಾರಣ ಮಾಡಿಲ್ಲ . ಮಾಡುವುದೂ ಇಲ್ಲ. ಅಂತಹ ಸಂದರ್ಭ ಒದಗಿ…
ರಾತ್ರಿ ಕಳೆದು ಬೆಳಗಾಗೊವಷ್ಟರಲ್ಲಿ ಇಡೀ ಕುಟುಂಬವೆ ಪ್ರಾಣ ಬಿಟ್ಟ ಘಟನೆ ಹಾಸನದಲ್ಲಿ (Hasan) ನಡೆದಿದೆ. ನಿನ್ನೆ ರಾತ್ರಿ ಕೂಡ ಸಂಬಂಧಿಕರೊಂದಿಗೆ ಚೆನ್ನಾಗಿ ಫೋನ್ ನಲ್ಲಿ ಮಾತಾಡಿದ್ದ ತಂದೆ, ತಾಯಿ ಮತ್ತು ಮಗ ಸಾವನ್ನಪ್ಪಿದ್ದಾರೆ. ಮೊನ್ನೆಯಷ್ಟೆ ನೂರಾರು ಜನರ ಜೊತೆ ಸಂಭ್ರಮದಿಂದ ಕಾರ್ಯಕ್ರಮ ಮಾಡಿದ್ದ ಈ ಕುಟುಂಬಕ್ಕೆ ಅದೇನಾಗಿತ್ತೋ? ಮಗನ ಉಪನಯನ ಕಾರ್ಯಕ್ರಮ ಮಾಡಿ ಖುಷಿಯಾಗಿದ್ದವರು ಸಾವಿನೂರಿಗೆ ಪಯಣಿಸಿದ್ದಾರೆ. ಹಾಸನದ ಹೇಮಾವತಿ ನಗರದಲ್ಲಿರೋ ಮನೆಯೊಂದರಲ್ಲಿ ಇಂತಹ ಘಟನೆ ನಡೆದಿದೆ. ಮನೆಯ ಮಾಲೀಕ ಸತ್ಯಪ್ರಕಾಶ್, ಹಂಡತಿ ಅನ್ನಪೂರ್ಣ, ಮಗ ಗೌರವ್ ಮತ್ತು ತಾಯಿ ಎಲ್ಲರೂ ಊಟ ಮಾಡಿ ಮಲಗಿದ್ದಾರೆ. ಸತ್ಯಪ್ರಕಾಶ್ ತಾಯಿ ಪ್ರತಿನಿತ್ಯದಂತೆ ಮನೆಯ ಮೊದಲ ಮಹಡಿಯಲ್ಲಿ ಮಲಗಿದ್ದಾರೆ. ಬೆಳಗ್ಗೆ 9 ಗಂಟೆಗೆ ಎದ್ದ ಆಕೆ ಪ್ರತಿ ದಿನ ನಾನು ಏಳೋ ಮುಂಚೆಯೇ ಕಾಫಿ ತರ್ತಿದ್ರಲ್ಲಾ ಇವತ್ತು ಇನ್ನೂ ಏಕೆ ತಂದಿಲ್ಲ ಎಂದು ಕೆಳಗಿಳಿದು ಬಂದು ರೂಂ ನಲ್ಲಿ ನೋಡಿದ್ದಾರೆ. ಆಗ ಮೂವರೂ ಕೂಡ ಒಂದೇ ಮಂಚದ ಮೇಲೆ ಮಲಗಿರುವಂತೆ ಕಂಡಿದ್ದಾರೆ. ಎಬ್ಬಿಸಲು ಪ್ರಯತ್ನಿಸಿದ್ದಾರೆ,…
ತಿಪಟೂರು: ರಾಜ್ಯದ ವೃತ್ತಿಪರ ನೇಕಾರರ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ, ತಿಪಟೂರು ತಾಲ್ಲೂಕು ಜಯಕರ್ನಾಟಕ ಜನಪರ ವೇದಿಕೆ ಕಾರ್ಮಿಕ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು. ತಿಪಟೂರಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಹೊರಟು, ಉಪವಿಭಾಗಾಧಿಕಾರಿಗಳ ಕಚೇರಿಯ ತಹಶೀಲ್ದಾರ್ ಕೆ. ಎಲ್.ಪರಮೇಶ್ವರಯ್ಯ ರವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ತಾಲ್ಲೂಕು ಕಾರ್ಯದರ್ಶಿ ರವಿ ಹಿಂಡಿಸ್ಕೆರೆ, ಕಾರ್ಮಿಕ ಘಟಕದ ಉಪಾಧ್ಯಕ್ಷ ಉಮಾಶಂಕರ್ ಮತ್ತು ಹಿಂದುಳಿದ ವರ್ಗಗಳ ರಾಜ್ಯ ಸಂಘಟನ ಕಾರ್ಯದರ್ಶಿ ಲೋಕೇಶ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಅಧ್ಯಕ್ಷ ಬಿ.ಟಿ.ಕುಮಾರ್, ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಬಿ.ಬಿ.ಬಸವರಾಜ್, ಮಾಜಿ ತಾ.ಪಂ.ಅಧ್ಯಕ್ಷ ವಿರುಪಾಕ್ಷಯ್ಯ, ಗ್ರಾ.ಪಂ. ಸದಸ್ಯ ಜಗನ್ನಾಥ್, ತಾಲ್ಲೂಕು ಉಪಾಧ್ಯಕ್ಷ ಸಿದ್ದೇಶ್, ನಗರ ಕಾರ್ಯದರ್ಶಿ ಲೋಕೇಶ್, ಮುಖಂಡರಾದ ದಸರೀಘಟ್ಟ ಬಾಬು, ಲೋಕೇಶ್, ಧನ್ ಪಾಲ್ ತಿಮ್ಮರಾಜು, ವಿದ್ಯಾರ್ಥಿ ಘಟಕದ ರಾಖಿ, ರಾಹುಲ್ ಕಾರ್ಮಿಕ ಘಟಕದ ಗುರುಮೂರ್ತಿ, ರಾಮಚಂದ್ರ, ಸತೀಶ್ಚಂದ್ರ, ನಾಗೇಶ್, ರಘು ಸತೀಶ್ ಬಾಬು ದರ್ಶನ್, ಮಧು ಮತ್ತು ರಾಜಣ್ಣ ಸೇರಿದಂತೆ ಕಾರ್ಮಿಕ, ವಿದ್ಯಾರ್ಥಿ ಘಟಕ ಮತ್ತು ನೇಕಾರರ ಹೋರಾಟ ಹಾಗೂ ಒಕ್ಕೂಟದ …
ಮಧುಗಿರಿ : ಹೆರಿಗೆಗೆ ಬಂದಿದ್ದ ಗರ್ಭಿಣಿ ಮಹಿಳೆ ವೈದ್ಯರಿಲ್ಲದ ಕಾರಣ ಸರಿಯಾದ ಸಮಯದಲ್ಲಿ ಚಿಕಿತ್ಸೆ ದೊರೆಯದೇ ಸಾವಿಗೀಡಾಗಿರುವ ಘಟನೆ ನಡೆದಿದ್ದು, ತಾಯಿ ಮಗು ಇಬ್ಬರೂ ಬಲಿಯಾಗಿದ್ದಾರೆ. ಮಿಡಿಗೇಶಿ ಹೋಬಳಿ ಬ್ರಹ್ಮದೇವರಹಳ್ಳಿ ಗ್ರಾಮದ ವಾಸಿ ಕಮಲಮ್ಮ ಮೃತ ಮಹಿಳೆ ಎಂದು ಗುರುತಿಸಲಾಗಿದ್ದು, ಹೊಸಕೆರೆ ಆಸ್ಪತ್ರೆಗೆ ಹೆರಿಗೆಗೆ ಬಂದಿದ್ದ ವೇಳೆ ಆಸ್ಪತ್ರೆಯಲ್ಲಿ ವೈದ್ಯರಿರಲಿಲ್ಲ ಎನ್ನಲಾಗಿದೆ. ವೈದ್ಯರಿಲ್ಲದ ಕಾರಣ ನರ್ಸ್ ಗಳೇ ಚಿಕಿತ್ಸೆ ನೀಡಿದ್ದಾರೆ. ಪರಿಸ್ಥಿತಿ ಬಿಗಡಾಯಿಸಿದಾಗ ತಾಲೂಕು ಆಸ್ಪತ್ರೆಗೆ ಸಾಗಿಸಲು ಯತ್ನಿಸಲಾಗಿದೆ. ಆದರೆ, ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಕೂಡ ಲಭ್ಯವಾಗಲಿಲ್ಲ ಎನ್ನಲಾಗಿದೆ. ಬಹಳಷ್ಟು ಸಮಯಗಳ ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ದಾರಿ ಮಧ್ಯೆ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ವೈದ್ಯರಿಲ್ಲದ ಕಾರಣ ತಾಯಿ ಹಾಗೂ ಮಗು ಸಾವನ್ನಪ್ಪಿದೆ. ಸೂಕ್ತ ಸಮಯಕ್ಕೆ ವೈದ್ಯರು ಲಭ್ಯವಾಗದ ಕಾರಣದಿಂದಾಗಿ ತಾಯಿ ಮಗು ಇಬ್ಬರೂ ಸಾವಿಗೀಡಾಗುವಂತಾಯಿತು ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದು, ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರನ್ನು ಪ್ರತಿಭಟನೆಗೆ ಕಳುಹಿಸಿದ ಪ್ರಾಂಶುಪಾಲರ ವಿರುದ್ಧ ಕ್ರಮ ಕೈಗೊಳ್ಳಲು ತಾಲ್ಲೂಕಿನ ಜನಪರ ಸಂಘಟನೆಗಳ ಒಕ್ಕೂಟದ ಆಗ್ರಹಿಸಿದೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ತಾಲ್ಲೂಕು ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಈ ಒತ್ತಾಯ ಮಾಡಲಾಗಿದೆ. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷರಾದ ಕೆ.ರಾಮಚಂದ್ರ, ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರನ್ನು ಪೋಷಕರ ಅನುಮತಿಯಿಲ್ಲದೆ ಒತ್ತಾಯಪೂರ್ವಕವಾಗಿ ಹೋರಾಟಕ್ಕೆ ಕಳುಹಿಸುವುದರಿಂದ ಎಳೆಯ ವಯಸ್ಸಿನಲ್ಲಿ ಮಕ್ಕಳ ಮನಸ್ಸಿನಲ್ಲಿ ಜಾತಿ-ಧರ್ಮಗಳ ವಿಷಬೀಜ ಬಿತ್ತುವ ಹುನ್ನಾರ ನಡೆಸುತ್ತಿರುವುದು ನೋವಿನಸಂಗತಿಯಾಗಿದೆ ಎಂಬುದಾಗಿ ಹೇಳಿದರು. ತಾಲ್ಲೂಕಿನಲ್ಲಿ ಕೋಮು, ಸೌಹಾರ್ದ, ಶಾಂತಿ, ಸಹಬಾಳ್ವೆ ನಡೆಸಲು ಸಹಕಾರ ಮಾಡಿಕೊಡಬೇಕು ಎಂಬುದಾಗಿ ಜಿಲ್ಲಾಧಿಕಾರಿಗಳ ಮೂಲಕ ಶಿಕ್ಷಣ ಸಚಿವರು, ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ರೈತಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ, ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾ ಯುವಘಟಕದ ಅಧ್ಯಕ್ಷ ಬಿ.ರೇವಣಸಿದ್ಧಪ್ಪ, ಅಂಬೇಡ್ಕರ್ ಸ್ವಾಭಿಮಾನಿ ಸೇನೆ…
ತುಮಕೂರು: ಚೇತನ್ ಅಹಿಂಸಾ ರವರು ಸಾರ್ವಜನಿಕ ಸೇವೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿದ್ದು, ನೊಂದವರ ಪರ ಹೋರಾಟ ನಡೆಸಿ ಅವರಿಗೆ ನ್ಯಾಯ ಒದಗಿಸಿಕೊಡುವ ವ್ಯಕ್ತಿತ್ವ ಹೊಂದಿದ್ದಾರೆ. ಚೇತನ್ ಅಹಿಂಸಾ ಅವರ ಜೊತೆಗೆ ಪೊಲೀಸರು ದುರ್ವರ್ತನೆ ತೋರಿದ್ದು, ಅಕ್ರಮವಾಗಿ ಅಪಹರಿಸಿಕೊಂಡು ಹೋಗಿ ಅವರ ಮೊಬೈಲ್ ಸ್ವಿಚ್ ಆಫ್ ಮಾಡಿಸಿ, ಪೊಲೀಸ್ ಗಿರಿಯನ್ನು ಪ್ರದರ್ಶಿಸಿರುವುದು ಖಂಡನೀಯ ಎಂದು ವಿವಿಧ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ವಿವಿಧ ಸಂವಿಧಾನ ಪರ ಸಂಘಟನೆಗಳು ಸರ್ಕಾರದ ವಿರುದ್ಧ ಘೋಷಣೆ ಗಳನ್ನು ಕೂಗಿ ಕೂಡಲೇ ನಟ ಅಹಿಂಸಾ ಚೇತನ್ ಅವರನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿದವು. ರಾಜ್ಯ ಎಡ-ಬಲ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ದಲಿತ ಮುಖಂಡ ಪಿ.ಎನ್ . ರಾಮಯ್ಯ ಮಾತನಾಡಿ, ಸಾರ್ವಜನಿಕರ ಬಗ್ಗೆ ಕಾಳಜಿ ಇಲ್ಲದ ಸರ್ಕಾರ ನಟ ಚೇತನ್ ಅವರನ್ನು ನಿಗೂಢವಾಗಿ ಅರೆಸ್ಟ್ ಮಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಕಾನೂನು ಸಂವಿಧಾನದ ಬಗ್ಗೆ ಕಾಳಜಿ ಇಲ್ಲ. ಇದು ಕೊಲೆಗಡುಕರ ಸರ್ಕಾರ. ಕದ್ದು ಆಡಳಿತ…
ಕೊರಟಗೆರೆ : ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಆಗತಾನೆ ಜನಿಸಿರುವ ಹೆಣ್ಣು ಮಗುವಿನ ಶವ ಪತ್ತೆಯಾಗಿರುವ ಘಟನೆ ನಡೆದಿದ್ದು, ಹೆಣ್ಣು ಮಗು ಎನ್ನುವ ಕಾರಣಕ್ಕೋ ಅಥವಾ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಜನಿಸಿದ ಮಗು ಎಂಬ ಕಾರಣಕ್ಕೋ ಮಗುವನ್ನು ಶೌಚಾಲಯ ಹಾಕಿರುವ ಸಾಧ್ಯತೆಗಳಿವೆ ಎನ್ನಲಾಗಿದೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದ್ದು, ರಾತ್ರಿ ವೇಳೆ ವೈದ್ಯರು ಹಾಗೂ ಸಿಬ್ಬಂದಿ ಕಡಿಮೆ ಇರುವ ಸಂದರ್ಭದಲ್ಲಿ ಈ ಕೃತ್ಯ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಸಿಸಿ ಕ್ಯಾಮಾರ ದೃಶ್ಯಾವಳಿಗಳಿಂದ ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿಗಳು ದೊರೆಯುವ ಸಾಧ್ಯತೆಗಳಿವೆ. ಘಟನೆ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ಕೊರಟಗೆರೆ ಪೊಲೀಸ್ ಠಾಣೆ ಪಿಎಸ್ ಐ ಮಂಜುಳ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿ ಕೊಂಡಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಹಿಜಾಬ್ ಪ್ರಕರಣದ (Hijab Row) ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ ಬುಧವಾರ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI) ಪಾತ್ರವನ್ನು ರಾಜ್ಯ ಸರ್ಕಾರದಿಂದ ಕೇಳಿದೆ. ಜನವರಿ 1 ರಂದು ಉಡುಪಿಯ ಕಾಲೇಜೊಂದರ ಹಿಜಾಬ್ (Hijab) ಧರಿಸಿ ತರಗತಿಗೆ ಪ್ರವೇಶ ನಿರಾಕರಿಸಲಾಯಿತು. ಇದಾದ ಬಳಿಕ ಕಾಲೇಜು ಅಧಿಕಾರಿಗಳನ್ನು ವಿರೋಧಿಸಿ ಕರಾವಳಿ ಪಟ್ಟಣದಲ್ಲಿ ಸಿಎಫ್‌ಐ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಆರು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.ಬಾಲಕಿಯರ ಸರ್ಕಾರಿ ಪಿಯು ಕಾಲೇಜು, ಅದರ ಪ್ರಾಂಶುಪಾಲರು ಮತ್ತು ಶಿಕ್ಷಕರನ್ನು ಪ್ರತಿನಿಧಿಸುವ ಹಿರಿಯ ವಕೀಲ ಎಸ್‌ಎಸ್ ನಾಗಾನಂದ್ ಅವರು ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಜೆಎಂ ಖಾಜಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ಪೂರ್ಣ ಪೀಠಕ್ಕೆ, “ಹಿಜಾಬ್ ಪ್ರಕರಣವನ್ನು ಕೆಲವು CFI ಗೆ ನಿಷ್ಠರಾಗಿರುವ ವಿದ್ಯಾರ್ಥಿಗಳು ಪ್ರಾರಂಭಿಸಿದರು” ಎಂದು ಹೇಳಿದರು. ಇದಕ್ಕೆ ಮುಖ್ಯ ನ್ಯಾಯಮೂರ್ತಿಗಳು CFI ಏನನ್ನು ಪ್ರತಿನಿಧಿಸುತ್ತದೆ ಮತ್ತು ಅದರ ಪಾತ್ರವೇನು ಎಂದು ತಿಳಿಯಲು ಪ್ರಯತ್ನಿಸಿದರು. ಸಂಘಟನೆಯು ರಾಜ್ಯದಲ್ಲಿ ಪ್ರತಿಭಟನೆಗಳನ್ನು ಸಂಘಟಿಸುತ್ತಿದೆ ಎಂದು ಹಿರಿಯ ವಕೀಲರು…
10 ಮತ್ತು 12ನೇ ತರಗತಿ ಪರೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರ ಮಹತ್ತರ ತೀರ್ಪು ನೀಡಿದೆ. . 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE Exam Latest Update) ನಡೆಸಲಿರುವ 10 ಮತ್ತು 12 ನೇ ತರಗತಿಯ ‘ಆಫ್‌ಲೈನ್’ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಕೋರ್ಟ್ ತಿರಸ್ಕರಿಸಿದೆ. ಇದರೊಂದಿಗೆ ಐಸಿಎಸ್‌ಇ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (NIOS) ನಡೆಸುವ ಆಫ್‌ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೂಡಾ ನ್ಯಾಯಾಲಯ ವಜಾಗೊಳಿಸಿದೆ. ಆನ್‌ಲೈನ್ ಪರೀಕ್ಷೆ ನಡೆಸುವಂತೆ ಅರ್ಜಿಗಳನ್ನು ಸಲ್ಲಿಸಲಾಗಿತ್ತು: 10 ಮತ್ತು 12ನೇ ತರಗತಿಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ (Supreme court)ಅರ್ಜಿ ಸಲ್ಲಿಸಲಾಗಿದ್ದು, ಆನ್‌ಲೈನ್‌ನಲ್ಲಿ ಪರೀಕ್ಷೆಗಳನ್ನು ನಡೆಸುವಂತೆ ಒತ್ತಾಯಿಸಲಾಗಿತ್ತು. ಕಳೆದ ವರ್ಷದಂತೆ ಪರೀಕ್ಷೆ ನಡೆಸಲು ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು (CBSE Exam Latest Update).…