Subscribe to Updates
Get the latest creative news from FooBar about art, design and business.
- ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
- ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
- ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ
- ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ
- ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ
- ನವೆಂಬರ್ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಮಕೂರು ಜಿಲ್ಲಾ ಪ್ರವಾಸ
- ತುಮಕೂರು | SSLC ಫಲಿತಾಂಶ ಸೇರಿದಂತೆ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿತು ಜಿಲ್ಲೆಯ ಹಲವು ಸಮಸ್ಯೆಗಳು!
- ಜಮೀನಿನ ಖಾತೆ ಬದಲಾವಣೆಗೆ ಲಂಚಕ್ಕೆ ಬೇಡಿಕೆ: ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಲೋಕಾಯುಕ್ತ ಬಲೆಗೆ
Author: admin
ಜಿರಳೆ ಭಾರತದ ಪ್ರತಿಯೊಂದು ಮನೆಯಲ್ಲೂ ಕಂಡುಬರುವ ಅನಗತ್ಯ ಜೀವಿ. ಇದು ಕೊಳಚೆಯಲ್ಲಿ ವಾಸಿಸುತ್ತದೆ. ಈ ಜಿರಳೆಗಳು (Cockroach)ಅನೇಕ ರೋಗಗಳ ಅಪಾಯವನ್ನು ತಂದೊಡ್ಡುತ್ತದೆ. ಮನೆಯ ಅಡಿಗೆ ಮನೆ ಮತ್ತು ಸಿಂಕ್ ಜಿರಳೆಗಳ ನೆಚ್ಚಿನ ಸ್ಥಳಗಳಾಗಿರುತ್ತವೆ. ಅವು ಆಹಾರ ಪದಾರ್ಥಗಳನ್ನು ಕಲುಷಿತಗೊಳಿಸುತ್ತವೆ. ಜಿರಳೆಗಳನ್ನು ತೊಡೆದುಹಾಕಲು 5 ಸುಲಭ ಮಾರ್ಗಗಳು : ಜಿರಳೆಗಳ (Cockroach)ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಅವುಗಳನ್ನು ಸಮಯಕ್ಕೆ ಸರಿಯಾಗಿ ನಿಯಂತ್ರಿಸುವುದು ಅವಶ್ಯಕ. ಇಲ್ಲದಿದ್ದರೆ ಫುಡ್ ಪಾಯಿಸನ್ (Food Poisoning)ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. 1. ಲವಂಗ ಲವಂಗವು (Clove) ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಇದು ಬಾಯಿಯ ದುರ್ವಾಸನೆ, ಶೀತಗಳನ್ನು ಗುಣಪಡಿಸಲು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಜಿರಳೆಯನ್ನು (Cockroach) ಸಹ ಅದರಿಂದ ಓಡಿಸಬಹುದು ಎನ್ನುವುದು ಬಹುಶಃ ಬಹಳಷ್ಟು ಮಂದಿಗೆ ತಿಳಿದಿರಲಿಕ್ಕಿಲ್ಲ. ಲವಂಗದ ಕೆಲವು ತುಂಡುಗಳನ್ನು ಮನೆಯ ಮೂಲೆಗಳಲ್ಲಿ ಇರಿಸಿದರೆ ಜಿರಳೆಗಳು ಓಡಿಹೋಗುತ್ತವೆ. 2. ಸೀಮೆ ಎಣ್ಣೆ ಜಿರಳೆಗಳೂ ಸೀಮೆ ಎಣ್ಣೆಯ (Kerosene Oil) ವಾಸನೆಯನ್ನು ಇಷ್ಟಪಡುವುದಿಲ್ಲ ಮತ್ತು ಅವು ಅದರಿಂದ ಓಡಿಹೋಗುತ್ತವೆ. ಮನೆಯಲ್ಲಿ…
ತರಗತಿಗೆ ಹಾಜರಾಗುವ ಮುನ್ನ ವಿದ್ಯಾರ್ಥಿನಿಯರು ಹಿಜಾಬ್ ತೆಗೆಯಲು ಸ್ಥಳ ಕಲ್ಪಿಸುವಂತೆ ಶಾಲಾ-ಕಾಲೇಜುಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಉಡುಪಿಯಲ್ಲಿ ಶುರುವಾದ ಹಿಜಾಬ್-ಕೇಸರಿ ಶಾಲು ಕಿಡಿ ದೇಶಾದ್ಯಂತ ಹಬ್ಬಿ ಸದ್ಯ ಕೋರ್ಟ್ ಅಂಗಳದಲ್ಲಿ ವಾದ ಮಂಡನೆ ನಡೆಯುತ್ತಿದೆ. ಇತ್ತ ಹೈಕೋರ್ಟ್ ಮಧ್ಯಂತರ ಆದೇಶದ ಅನ್ವಯ ಹಿಜಾಬ್ ಧರಿಸಿ ಶಾಲಾ-ಕಾಲೇಜಿಗೆ ಬರುತ್ತಿರುವ ವಿದ್ಯಾರ್ಥಿಗಳು ತರಗತಿಗಳಿಗೆ ಹಿಜಾಬ್ ಧರಿಸಿ ಪ್ರವೇಶಿಸದಂತೆ ಸರ್ಕಾರ ಸೂಚಿಸಿದೆ.ಹಿಜಾಬ್ ತೆಗೆದು ತರಗತಿಗಳಿಗೆ ಪ್ರವೇಶಿಸಲು ಅನುಕೂಲವಾಗುವಂತೆ ಮಹಿಳಾ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಆವೃತ ಸ್ಥಳ ಕಲ್ಪಿಸುವಂತೆ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ. ಕರ್ನಾಟಕದಲ್ಲಿನ ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಫೆ.10ರಂದು ಮಧ್ಯಂತರ ಆದೇಶ ನೀಡಿತ್ತು. ಈ ಆದೇಶದಲ್ಲಿ ಶಾಲೆ, ಕಾಲೇಜುಗಳನ್ನು ಮುಚ್ಚುವುದು ಬೇಡ. ತಕ್ಷಣವಾಗಿ ಶಾಲೆ ಕಾಲೇಜು ಆರಂಭಿಸಿ ಎಂದು ಸರ್ಕಾರಕ್ಕೆ ಸೂಚನೆ ನೀಡಿತ್ತು.ಹೈಕೋರ್ಟ್ ಮಧ್ಯಂತರ ಆದೇಶದನ್ವಯ ಹಿಜಾಬ್ ಧರಿಸಿ ಶಾಲಾ ಕಾಲೇಜಿಗೆ ಬರುತ್ತಿರುವ ವಿದ್ಯಾರ್ಥಿಗಳು ತರಗತಿಗಳಿಗೆ ಹಿಜಾಬ್ ಧರಿಸಿದಂತೆ ಸೂಚಿಸಿರುವ ಹಿನ್ನೆಲೆಯಲ್ಲಿ, ಹಿಜಾಬ್ ತೆಗೆದು ತರಗತಿಗೆ ಆಗಮಿಸಲು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ…
ಶಿವಮೊಗ್ಗದಲ್ಲಿ ಬಜರಂಗ ದಳದ ಕಾರ್ಯಕರ್ತ ಹರ್ಷನ ಕೊಲೆ ಮಾಡಲು ಹಲವು ರೀತಿಯ ತಯಾರಿಗಳನ್ನು ಮಾಡಿಕೊಂಡಿದ್ದ ದುಷ್ಕರ್ಮಿಗಳು, ಸಹಾಯ ಕೇಳುವ ನೆಪದಲ್ಲಿ ಹೆಣ್ಣುಮಕ್ಕಳಿಂದ ಕರೆ ಮಾಡಿಸಿದ್ದರೆ ಎಂಬ ಅನುಮಾನಗಳು ಚರ್ಚೆಗೆ ಗ್ರಾಸವಾಗುತ್ತಿವೆ. ತನಿಖೆ ಆರಂಭಿಸಿರುವ ಪೊಲೀಸರು ಎಲ್ಲಾ ರೀತಿಯಿಂದಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆಯಾದ ದಿನ ಹರ್ಷ ಬೈಕ್‍ನಲ್ಲಿ ಹೋಗದೆ, ಮೂವರು ಸ್ನೇಹಿತರ ಜತೆ ನಡೆದುಕೊಂಡು ಹೋಗುತ್ತಿದ್ದ. ಅಮ್ಮಾ ಕಾಂಟೀನ್ ವರೆಗೂ ಸ್ನೇಹಿತರು ಜತೆಯಲ್ಲೇ ಇದ್ದರು, ಅಲ್ಲಿ ಸ್ನೇಹಿತರಿಗೆ ಬೈಕ್ ಕೀ ಕೊಟ್ಟ ಹರ್ಷ ಯಾಕೋ ಪರಿಸ್ಥಿತಿ ಸರಿ ಹೋಗುತ್ತಿಲ್ಲ ಬೈಕ್ ತನ್ನಿ ಎಂದು ಹೇಳಿದ್ದಾನೆ. ಇದಕ್ಕೂ ಮೊದಲು ಹರ್ಷನ ಮೊಬೈಲ್ ಗೆ ಇಬ್ಬರು ಯುವತಿಯರು ಪದೇ ಪದೇ ವಿಡಿಯೋ ಕಾಲ್ ಮಾಡುತ್ತಿದ್ದರು. ಅದನ್ನು ರಿಸೀವ್ ಮಾಡಿದ್ದ ಆತ ಯಾರು ಎಂದು ಕೇಳಿದ. ಆಗ ಅವರು, ನಿಮ್ಮ ಸ್ನೇಹಿತೆಯರು ಎಂದು ಹೇಳಿದ್ದಾರೆ. ನನಗೆ ನಿಮ್ಮ ಪರಿಚಯ ಇಲ್ಲ ಎಂದು ಕಾಲ್ ಕಟ್ ಮಾಡಿದ್ದರೂ ಕೂಡ ಪದೇ ಪದೇ ಕರೆ ಮಾಡುತ್ತಲೇ ಇದ್ದರು ಎಂದು…
ಜಮೀನಿನಲ್ಲಿ ಹುಲುಸಾಗಿ ಬೆಳೆದಿದ್ದ 170ಕ್ಕೂ ಹೆಚ್ಚಿನ ಅಡಿಕೆ ಗಿಡಗಳನ್ನು ಯಾರೋ ಕಿಡಿಗೇಡಿಗಳು ಕಡಿದು ಹಾಕಿ, ಪೈಪ್‍ಗಳನ್ನು ನಾಶಪಡಿಸಿರುವ ಘಟನೆ ತಾಲೂಕಿನ ಶಂಭುಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ರೈತ ಸಂತೋಷ್ ಎಂಬುವವರು ಕಳೆದ ಎರಡು ವರ್ಷಗಳಿಂದ ಎಲ್ಲ ಗಿಡಗಳಿಗೂ ಹನಿ ನೀರಾವರಿ ವ್ಯವಸ್ಥೆ ಮಾಡಿ ಅಡಿಕೆ ಗಿಡಗಳನ್ನು ಬೆಳೆಸಿದ್ದರು. ಆದರೆ ಸುಮಾರು 170ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಕಡಿದು ನಾಶ ಮಾಡಿದ್ದಾರೆ. ಅಡಿಕೆ ಗಿಡಗಳನ್ನು ಕಡಿದು ಹಾಕಿರುವುದನ್ನು ಕಂಡ ರೈತ ಸಂತೋಷ್ ಆತಂಕ ವ್ಯಕ್ತಪಡಿಸಿದ್ದಲ್ಲದೆ, ಕಣ್ಣೀರಿಟ್ಟು ಈ ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೇಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರೈತ ಸಂತೋಷ್ ಮಾತನಾಡಿ, ಶಂಭುಗನಹಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂ.138 ರಲ್ಲಿ 2 ರಿಂದ 17 ಎಕರೆ ಜಮೀನನ್ನು ಐದು ವರ್ಷಗಳ ಹಿಂದೆ ತೆಗೆದುಕೊಂಡು ವ್ಯವಸಾಯ ಪ್ರಾರಂಭಿಸಲು ಕೊಳವೆ ಬಾವಿ ತೆಗೆಸಿ, ಒಂದೂವರೆ ವರ್ಷದಿಂದ ಜಮೀನಿನಲ್ಲಿ ಅಡಿಕೆ ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದೆವು. ನಾನು ಬೇಲೂರು ಪಟ್ಟಣದಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಮಾರಾಟ…
ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಗಂಗಾ ಕ್ಷೇತ್ರದ ಆರಾಧ್ಯ ದೈವ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರೆ ಮಹೋತ್ಸವದ ಅಂಗವಾಗಿ ಹಿರಿಯ ಶ್ರೀಗಳ ಮಾದರಿಯಲ್ಲೆ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರು ನಗರದಾದ್ಯಂತ ಸಂಚರಿಸಿ ಭಿಕ್ಷಾಟನೆ ನಡೆಸಿದರು. ಶ್ರೀಮಠದ ಪರಂಪರೆಯನ್ನು ಮುನ್ನಡೆಸುತ್ತಿರುವ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರು ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಸುಸಂದರ್ಭದಲ್ಲಿ ಹಿರಿಯ ಶ್ರೀಗಳಂತೆ ನಗರದ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ವಿವಿಧ ಅಂಗಡಿಗಳು, ವರ್ತಕರನ್ನು ಭೇಟಿ ಮಾಡಿ ಭಿಕ್ಷಾಟನೆ ನಡೆಸಿದರು.ನಗರದ ಅಶೋಕ ರಸ್ತೆಯಲ್ಲಿರುವ ಶ್ರೀ ಬಸವೇಶ್ವರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ರೆಡ್‍ಕ್ರಾಸ್ ಬಿಲ್ಡಿಂಗ್, ಮಂಡಿಪೇಟೆಯ ವಿವಿಧ ಅಂಗಡಿಗಳು ಸೇರಿದಂತೆ ನಗರದಾದ್ಯಂತ ಶ್ರೀಗಳು ಸಂಚರಿಸಿ ಭಕ್ತರಿಂದ ಕಾಣಿಕೆ, ದವಸ-ಧಾನ್ಯಗಳನ್ನು ಸ್ವೀಕರಿಸಿದರು. ಭಿಕ್ಷಾಟನೆಗೆ ಬಂದ ಶ್ರೀಗಳನ್ನು ಭಕ್ತಿಪೂರ್ವಕವಾಗಿ ಬರ ಮಾಡಿಕೊಂಡ ವರ್ತಕರು, ಜನಸಾಮಾನ್ಯರು ಕಾಣಿಕೆ, ದವಸ-ಧಾನ್ಯಗಳನ್ನು ನೀಡಿ ಆಶೀರ್ವಾದ ಪಡೆದರು.ಈ ವೇಳೆ ಮಾತನಾಡಿದ ಶ್ರೀಗಳು, ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ನಿರ್ಬಂಧಗಳನ್ನು ಸಡಿಲಗೊಳಿಸಿದೆ. ಹಾಗಾಗಿ ಶ್ರೀಕ್ಷೇತ್ರದಲ್ಲಿ ಜಾತ್ರೆ ನಡೆಯುತ್ತಿದೆ. ಸೋಂಕು ಕಡಿಮೆಯಾಗಿದ್ದರೂ…
ಚಿತ್ರದುರ್ಗ: ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿರುವ ಸಚಿವ ಈಶ್ವರಪ್ಪನವರ ಹೇಳಿಕೆಯನ್ನು ಖಂಡಿಸಿ,ಈ ಕೂಡಲೇ ಸಚಿವ ಸಂಪುಟದಿಂದ ಈಶ್ವರಪ್ಪ ನವರನ್ನು ವಜಾಗೊಳಿಸಿ, ಅವರ ವಿರುದ್ಧ ಸೂಕ್ತ ಪ್ರಕರಣವನ್ನು ದಾಖಲಿಸುವಂತೆ ಆಗ್ರಹಿಸಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು. ತಾಲ್ಲೂಕಿನ ಕಾಂಗ್ರೆಸ್ ಕಛೇರಿಯಿಂದ ಪ್ರಮುಖ ರಸ್ತೆಗಳಲ್ಲಿ, ಈಶ್ವರಪ್ಪ ಒಬ್ಬ ಹುಚ್ಚ ಎಂದು ಘೋಷಣೆಯನ್ನು ಕೂಗುತ್ತ, ಹಿರಿಯೂರು ತಹಶಿಲ್ದಾರರ ಕಛೇರಿಯವರೆಗೆ ತೆರಳಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಸಚಿವರಾಗಿರುವ ಕೆ.ಎಸ್.ಈಶ್ವರಪ್ಪನವರು ಇತ್ತೀಚೆಗೆ ತ್ರಿವರ್ಣ ಧ್ವಜದ ಸ್ಥಾನದಲ್ಲಿ ಕೇಸರಿ ಧ್ವಜವನ್ನು ಹಾರಿಸುವ ಹೇಳಿಕೆಯನ್ನು ಕೊಟ್ಟಿರುವುದು ದೇಶದ್ರೋಹದ ಹೇಳಿಕೆಯಾಗಿದೆ, ತ್ರಿವರ್ಣ ಧ್ವಜವು ನಮ್ಮ ರಾಷ್ಟ್ರದ ಸ್ವಾತಂತ್ರ್ಯ, ಅಖಂಡತೆ, ಸಾರ್ವಭೌಮತೆಯ ಸಂಕೇತವಾಗಿದೆ ಎಂದರು. ಈಶ್ವರಪ್ಪನವರ ಹೇಳಿಕೆಯಿಂದ ದೇಶದ ಪ್ರತಿಯೊಬ್ಬ ಪ್ರಜೆಗಳಿಗೆ ದಿಗ್ಭ್ರಮೆಯಾಗಿದೆ. ಇದನ್ನು ವಿರೋಧಿಸಿ, ಈಶ್ವರಪ್ಪನವರನ್ನು ತಕ್ಷಣವೇ ಸಚಿವ ಸಂಪುಟದಿಂದ ಕೈಬಿಟ್ಟು ಅವರ ವಿರುದ್ಧ ದೇಶದ್ರೋಹದ…
ಮಧುಗಿರಿ: ಮಧುಗಿರಿಯನ್ನು ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಮಧು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಧು ಜಿ.ಡಿ.ಪಾಳ್ಯ ಅವರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳು ಮಧುಗಿರಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು ಈ ವೇಳೆ ಮಾತನಾಡಿದ ಮಧು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಧು ಜಿ.ಡಿ.ಪಾಳ್ಯ, ನಂಜುಂಡಪ್ಪ ವರದಿ ಪ್ರಕಾರ ಮಧುಗಿರಿ ಅತ್ಯಂತ ಹಿಂದುಳಿದ ಪ್ರದೇಶವಾಗಿದೆ, ಮಧುಗಿರಿ, ಪಾವಗಡ, ಶಿರಾ ತಾಲ್ಲೂಕುಗಳನ್ನು ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿದ್ದು, ರಾಜಕೀಯ ಶಿಕ್ಷಣ, ಕಲೆ, ಸಾಹಿತ್ಯ, ರಂಗಭೂಮಿ, ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ತನ್ನದೇ ಆದ ಹೆಸರು ಮಾಡಿದ್ದು, ಇನ್ನೂ ಹೆಚ್ಚಿನ ಬೆಳವಣಿಗೆ ಆಗಬೇಕಾದ ಅನಿವಾರ್ಯತೆ ಇದೆ. ಪಾವಗಡ, ಮಧುಗಿರಿ, ಶಿರ, ಕೊರಟಗೆರೆ ಕ್ಷೇತ್ರಗಳಲ್ಲಿ ಈಗಾಗಲೇ ಹಲವಾರು ಸರ್ಕಾರಿ ಮತ್ತು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್, ಉನ್ನತ ಶಿಕ್ಷಣ ನೀಡುವ ಸಂಸ್ಥೆಗಳಿದ್ದು, ಮಧುಗಿರಿಯನ್ನು ಈಗಾಗಲೇ ಶೈಕ್ಷಣಿಕ ಜಿಲ್ಲೆಯಾಗಿ ಸರ್ಕಾರ ಘೋಷಿಸಿ ಶಿಕ್ಷಣ ಕ್ಷೇತ್ರದ ಬೆಳವಣಿಗೆ ಸಹಕಾರ ನೀಡಿದೆ. ಮುಂದಿನ ದಿನಗಳಲ್ಲಿ ತಾಂತ್ರಿಕ ಶಿಕ್ಷಣದ ಜೊತೆಗೆ ವೈದ್ಯಕೀಯ ಶಿಕ್ಷಣ ನೀಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ…
ಶಿವಮೊಗ್ಗದಲ್ಲಿ ಸಮಾಜಘಾತುಕ ಶಕ್ತಿಗಳ ಮೇಲೆ ನಿಗಾ ಇಡಲು ನಗರದಲ್ಲಿ ಈಗ ಡ್ರೋಣ್ ಗಳನ್ನು ಬಳಸಲಾಗುತ್ತಿದೆ. ಇದಕ್ಕಾಗಿ ನುರಿತ ತಂಡವೊಂದು ನಗರಕ್ಕೆ ಆಗಮಿಸಿದ್ದು ಕಾರ್ಯಾಚರಣೆ ಆರಂಭಿಸಿದೆ. ನಕ್ಸಲ್ ನಿಗ್ರಹ ಪಡೆ, ಕರಾವಳಿ ಕಾವಲು ಪಡೆ, ಉತ್ತರಕನ್ನಡ ಹಾಗೂ ಮಂಡ್ಯ ಜಿಲ್ಲೆಗಳಿಂದ ಪೊಲೀಸರ ತಂಡ ಇಲ್ಲಿಗೆ ಆಗಮಿಸಿವೆ. ಬೆಳಗ್ಗೆಯಿಂದಲೇ ಡ್ರೋಣ್ ಗೆ ಕ್ಯಾಮೆರಾಗಳನ್ನು ಅಳವಡಿಸಿ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ನಡೆಯುತ್ತಿರುವ ಘಟನೆಗಳನ್ನು ಚಿತ್ರೀಕರಿಸಲಾಗುತ್ತಿದೆ. ಕರ್ಫ್ಯೂ ನಡುವೆಯೂ ನಿನ್ನೆ ಕೆಲವು ದುಷ್ಕøತ್ಯಗಳು ನಡೆದಿರುವ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ಪತ್ತೆಗೆ ತಂತ್ರಜ್ಞಾನವನ್ನು ಕೂಡ ಬಳಸಿಕೊಳ್ಳಲಾಗುತ್ತಿದೆ. ಸುಮಾರು 5 ಕಿ.ಮೀವರೆಗೂ ಈ ಕ್ಯಾಮೆರಾಗಳು ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದು, ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸಲು ವಿಶೇಷ ಕೇಂದ್ರವನ್ನು ಕೂಡ ತೆರೆಯಲಾಗಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರನ್ನು ಪ್ರತಿಭಟನೆಗೆ ಕಳುಹಿಸಿದ ಪ್ರಾಂಶುಪಾಲ ಜಿ.ಮನೋಹರ ವಿರುದ್ಧ ಸೂಕ್ತ ಕ್ರಮಕ್ಕೆ ಹಿರಿಯೂರು ಕಾಂಗ್ರೆಸ್ ಪಕ್ಷದಿಂದ ಚಿತ್ರದುರ್ಗ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಜಿಲ್ಲಾಧಿಕಾರಿ ಗಳಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿರಮೇಶ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಹಿರಿಯೂರು ನಗರದಲ್ಲಿ ಮಂಗಳವಾರದಂದು ನಡೆದ ಭಜರಂಗ ದಳದ ಕಾರ್ಯಕರ್ತ ಹರ್ಷಾ ಕೊಲೆಗೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳ ಪ್ರತಿಭಟನೆಗೆ ಹಿರಿಯೂರು ಬಾಲಕಿಯರ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರಾದ ಜಿ ಮನೋಹರ ಕಳುಹಿಸಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್, ಪ್ರಾಂಶುಪಾಲರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಒತ್ತಾಯಿಸಿದರು. ಕಳೆದ ಎರಡು ವರ್ಷಗಳಿಂದ ಕೊರೊಣ ಎಂಬ ಮಹಾಮಾರಿಯಿಂದ ವಿದ್ಯಾರ್ಥಿಗಳ ಭವಿಷ್ಯ ನೆಲಕಚ್ಚಿದೆ . ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕಾಗ ಬೇಕಿರುವ ಪ್ರಾಂಶುಪಾಲರು, ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಸಂಘ ಪರಿವಾರಕ್ಕೆ ಕಳುಹಿಸಿ ಕೊಡುವುದು ಎಷ್ಟರ ಮಟ್ಟಿಗೆ ಸರಿ ಎಂಬುದೇ ಕಾಣುತ್ತಿಲ್ಲ , ಮಕ್ಕಳ ಭವಿಷ್ಯವನ್ನು ಕಲ್ಪಿಸಿಕೊಂಡು ದಿನನಿತ್ಯ…
ಗುಬ್ಬಿ: ತಾಲ್ಲೂಕಿನ ಹಾಗಲವಾಡಿ ಗ್ರಾ.ಪಂ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜ್ಯೋತಿಲಕ್ಷ್ಮೀ ,ಮಹೇಶ್ ಉಪಾಧ್ಯಕ್ಷರಾಗಿ ನಿರ್ಮಲ ಅವಿರೋಧವಾಗಿ ಆಯ್ಕೆಯಾದರು. ಹಾಗಲವಾಡಿ ಪಂಚಾಯಿತಿ ಕಚೇರಿಯಲ್ಲಿ ಶಿರಸ್ತೇದಾರ್ ರವೀಶ್ ಹಾಗೂ ಕಂದಾಯ ನಿರೀಕ್ಷಕ ಗುರುಪ್ರಸಾದ್ ಎಲ್ಲಾ ಪ್ರಕ್ರಿಯೆ ನಡೆಸಿಕೊಟ್ಟರು. ನಡೆದ ಹಿಂದುಳಿದ ವರ್ಗ(ಅ) ಮೀಸಲಿನ ಅಧ್ಯಕ್ಷ ಸ್ಥಾನಕ್ಕೆ ಈ ಹಿಂದೆ ಗಂಗಮ್ಮ ಉಪಾಧ್ಯಕ್ಷ ಸ್ಥಾನಕ್ಕೆ ವನಿತಾ ರಾಜೀನಾಮೆ ಸಲ್ಲಿಸಿದ ಹಿನ್ನಲೆ ತೆರವಾಗಿದ್ದ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಹಾಗಲವಾಡಿ ಕ್ಷೇತ್ರದ ಜ್ಯೋತಿಲಕ್ಷ್ಮೀ ಮಹೇಶ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಾಗಲವಾಡಿ ಕ್ಷೇತ್ರದ ನಿರ್ಮಲ ನಾಮಪತ್ರ ಸಲ್ಲಿಸಿದ್ದರು. ಏಕೈಕ ನಾಮಪತ್ರ ಹಿನ್ನಲೆ ಎರಡೂ ಸ್ಥಾನವನ್ನು ಅವಿರೋಧ ಆಯ್ಕೆ ಎಂದು ಬುಧವಾರ ಘೋಷಿಸಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಅಧ್ಯಕ್ಷೆ ಜ್ಯೋತಿಲಕ್ಷ್ಮೀ, ತಾಲ್ಲೂಕಿನ ಗಡಿಭಾಗದ ಹಾಗಲವಾಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸರ್ವ ಸದಸ್ಯರ ಸಹಕಾರ ಪಡೆಯಲಾಗುವುದು. ಈ ಜತೆಗೆ ಶಾಸಕ ಎಸ್.ಆರ್.ಶ್ರೀನಿವಾಸ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಮೂಲಕ ಸರ್ಕಾರದಿಂದ ವಿಶೇಷ ಅನುದಾನ ತಂದು…