Subscribe to Updates
Get the latest creative news from FooBar about art, design and business.
- ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
- ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್ ಐ ತೀರ್ಥೇಶ್
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
- ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
- ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
- ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
- ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
- ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್ ಜಿ ಯೋಜನೆ ಜಾರಿ : ಜಿಪಂ ಸಿಇಒ
Author: admin
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಂಟಿಯಾಗಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು. ಬಳಿಕ ತಿರುಮಲದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ರಾಜ್ಯದ ನೂತನ ವಸತಿ ಗೃಹ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದರು. ಯಡಿಯೂರಪ್ಪ ಅವರು ಕೇಂದ್ರ ಬಿಜೆಪಿ ಸಂಸದೀಯ ಮಂಡಳಿಗೆ ಆಯ್ಕೆಯಾದ ಬೆನ್ನಲ್ಲೇ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದರು. ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ ಅವರು ಹಾಲಿ ಮತ್ತು ಮಾಜಿ ಸಿಎಂಗಳಿಗೆ ಶಾಲು ಹೊದಿಸಿ ಗೌರವಿಸಿದರು. ಕಂದಾಯ ಸಚಿವ ಆರ್.ಅಶೋಕ್, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಇತರರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸ್ಯಾಂಡಲ್ ವುಡ್ ನಟಿ ಮೇಘನಾ ರಾಜ್ ಮತ್ತೊಮ್ಮೆ ಮದುವೆ ಯಾಗಲಿದ್ದಾರೆ ಎಂಬ ವದಂತಿಗಳು ದಟ್ಟವಾಗಿದ್ದು ಇದಕ್ಕೆ ಮೇಘನಾ ರಾಜ್ ಅತ್ಯಂತ ಸ್ಪಷ್ಟವಾದ ರಿಯಾಕ್ಷನ್ ನೀಡಿದ್ದಾರೆ. ಪ್ರೀತಿಸಿ ಮದುವೆಯಾದ ಮೇಘನಾ ಮತ್ತು ಚಿರು ಸರ್ಜಾ ಬದುಕು ಇನ್ನೇನು ಸ್ವರ್ಗಕ್ಕೆ ಕಿಚ್ಚು ಹಚ್ಚಬೇಕೇನ್ನುವ ಹಂತದಲ್ಲಿರುವಾಗಲೇ ನಡೆದ ಅವಘಡವೊಂದು ಇಡಿ ಬದುಕಿನ ನೆಮ್ಮದಿಯನ್ನೇ ಕಸಿದುಕೊಂಡಿತು. ಚಿರು ಸರ್ಜಾ ತೀವ್ರ ಹೃದಯಾಘಾತದಿಂದ ನಿಧನರಾದರು. ಈ ವೇಳೆ ನಟಿ ಮೇಘನಾ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು. ಪ್ರೀತಿಸಿದ ಚಿರುವನ್ನು ಕಳೆದುಕೊಂಡು ಕಂಗಾಲಾದ ಮೇಘನಾ ಇದೇ ನೋವಿನಲ್ಲೇ ಮಗನನ್ನು ಹೆತ್ತು ಸಿಂಗಲ್ ಪೇರೇಂಟ್ ರೀತಿಯಲ್ಲಿ ಬೆಳೆಸುತ್ತ ಬರುತ್ತಿದ್ದಾರೆ. ಚಿರು ಹಾಗೂ ಮೇಘನಾ ಪ್ರೀತಿಯ ಪುತ್ರ ರಾಯನ್ ರಾಜ್ ಸರ್ಜಾ ಎರಡನೇ ವರ್ಷದ ಹೊಸ್ತಿಲಿನಲ್ಲಿರುವಾಗಲೇ ಮೇಘನಾ ಸರ್ಜಾ ಬಗ್ಗೆ ಹೊಸ ಬಗೆಯ ಸುದ್ದಿಯೊಂದು ಸದ್ದು ಮಾಡಲಾರಂಭಿಸಿದೆ.ಇತ್ತೀಚಿಗೆ ಮಾಧ್ಯಮದ ಜೊತೆಗೆ ಮಾತನಾಡಿದ ಮೇಘನಾ ರಾಜ್, ನನ್ನ ಸುತ್ತಲೂ ಇರುವ ಹಲವರು ನನಗೆ ಎರಡನೇ ಮದುವೆಯಾಗಲು ಸಲಹೆ ನೀಡುತ್ತಿದ್ದಾರೆ. ಆದರೆ ಒಂಟಿಯಾಗಿರಲು ಮತ್ತು ಒಂಟಿಯಾಗಿಯೇ ಮಗನನ್ನು…
ಬೆಂಗಳೂರು : ಸಿದ್ದರಾಮಯ್ಯ ಸಾವರ್ಕರ್ ಬಗ್ಗೆ ಹೇಳಿಕೆ ನೀಡಿದ ಹಿನ್ನೆಲೆ ಹಿಂದುತ್ವವಾದಿಗಳಿಂದ ನನ್ನ ತಂದೆಗೆ ಜೀವ ಬೆದರಿಕೆ ಇದೆ ಎಂದು ಸಿದ್ದರಾಮಯ್ಯ ಪುತ್ರ ಯತೀಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಸಾವರ್ಕರ್ ಒಬ್ಬ ಮೂಲಭೂತವಾದಿ ದೇಶವನ್ನು ಒಂದುಗೋಡಿಸುವ ಬಗ್ಗೆ ಹೋರಾಡಿದವರಲ್ಲ. ಅವರು ಮುಸ್ಲಿಂ, ಕ್ರಿಶ್ಚಿಯನ್ ಧರ್ಮದ ಬಗ್ಗೆ ದ್ವೇಷ ಇಟ್ಟುಕೊಂಡವರು. ಅವರು ಹೇಳಿಕೆ ನೀಡಿದ್ದು ತಪ್ಪಲ್ಲ. ಹಿಂಸಾತ್ಮಕ ಕೃತ್ಯ ನಡೆಸುವುದು ಆ ಸಂಘಟನೆಗಳಿಗೆ ಗೊತ್ತಿದೆ. ಹಿಂದುತ್ವವಾದಿಗಳಿಂದ ನನ್ನ ತಂದೆಗೆ ಜೀವ ಬೆದರಿಕೆ ಇದೆ. ಹೀಗಾಗಿ ಸರ್ಕಾರ ಸಿದ್ದರಾಮಯ್ಯವರಿಗೆ ಸೂಕ್ತ ಭದ್ರತೆ ನೀಡಬೇಕು ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಸಮ್ಮೇಳನವು ಆಗಸ್ಟ್ 26ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಬೈರೇಗೌಡ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಆರ್ ಪಿ ಐ ರಾಜ್ಯಾಧ್ಯಕ್ಷ ಡಾ. ಎಂ. ವೆಂಕಟಸ್ವಾಮಿ ತಿಳಿಸಿದರು. ಆರ್ ಪಿಐ ಪಕ್ಷದ ವತಿಯಿಂದ ತುಮಕೂರಿನ ಎಂ.ಜಿ. ರಸ್ತೆಯ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದ್ದು, ತುಮಕೂರಿನಿಂದ 2 ಸಾವಿರಕ್ಕೂ ಅಧಿಕ ಜನರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ರಾಮ್ ದಾಸ್ ಅಠವಳೆ ರವರ ಮುಖಂಡತ್ವದಲ್ಲಿ ದೇಶದ 31ರಾಜ್ಯಗಳಲ್ಲಿ ಪಕ್ಷವು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿವೆ. ಇದೀಗ 10 ಲಕ್ಷ ಜನರ ಸದಸ್ಯತ್ವದ ಗುರಿಯ ಅಭಿಯಾನ ತುಮಕೂರು ಜಿಲ್ಲೆಯಲ್ಲಿ ನಡೆಸಲಾಗುತ್ತಿದೆ ಎಂದು ಅವರು ಇದೇ ವೇಳೆ ಮಾಹಿತಿ ನೀಡಿದರು. ರಾಜ್ಯ ಸಮ್ಮೇಳನದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಹಾಗೂ ವಿಧಾನಸಭಾ ಚುನಾವಣೆ ಕುರಿತು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಅವರು…
ತುಮಕೂರು: ಕೃಷಿ ಯಂತ್ರಧಾರೆ ಯೋಜನೆಯಡಿ ಯಂತ್ರೋಪಕರಣಗಳ ಏಜೆನ್ಸಿ ರೈತರಿಗೆ ವಂಚನೆ ಮಾಡುತ್ತಿದೆ ಎಂದು ಭಾರತೀಯ ಕೃಷಿಕ ಸಮಾಜದ ತುಮಕೂರು ಜಿಲ್ಲಾ ಘಟಕ ಆರೋಪಿಸಿದೆ. ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿರುವ ಭಾರತೀಯ ಕೃಷಿಕ ಸಮಾಜದ ಅಧ್ಯಕ್ಷರಾದ ಕೋಡಿಹಳ್ಳಿ ಜಗದೀಶ್, ಕೃಷಿ ಯಂತ್ರಧಾರೆ ಯೋಜನೆಯಡಿ ಜಿಲ್ಲೆಯ ಎಲ್ಲಾ ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಅಧಿಕೃತ ಸಂಸ್ಥೆಗಳು ಯಂತ್ರೋಪಕರಣಗಳ ಏಜೆನ್ಸಿ ರೈತರಿಗೆ ವಂಚನೆ ಮಾಡಿ ಭ್ರಷ್ಟಾಚಾರ ನಡೆಸಿ ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ಸದಸ್ಯರಾದ ಪುಟ್ಟರಾಜು, ಶ್ರೀ ಸಂಧ್ಯಾ, ಪಾಂಡುರಂಗ, ರಾಜಣ್ಣ, ಆನಂದ್ ಮತ್ತಿತರು ಭಾಗವಹಿಸಿದ್ದರು. ವರದಿ: ದಾಸಾಲುಕುಂಟೆ ಸಿದ್ದರಾಜು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊಡಗಿನಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶ ಮತ್ತು ಸಂತ್ರಸ್ತರ ಭೇಟಿಗೆ ತೆರಳಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಪ್ರತಿಭಟನೆಯ ಜೊತೆ ಅವರ ಕಾರ್ ಗೆ ಮೊಟ್ಟೆ ಎಸೆದು ಅತಿರೇಕದ ವರ್ತನೆ ತೋರಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ರಾಜಕೀಯ ವಲಯದಲ್ಲಿ ಪಕ್ಷಾತೀತವಾಗಿ ಆಕ್ರೋಶ ವ್ಯಕ್ತವಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರ್‌ಗೆ ಮೊಟ್ಟೆ ಎಸೆದ ಕೃತ್ಯವನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಖಂಡಿಸಿದ ಬೆನ್ನಲ್ಲೇ ಇದೀಗ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಬಿಜೆಪಿ ಕಾರ್ಯಕರ್ತರ ವರ್ತನೆಯನ್ನು ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಮಾನ್ಯ ಸಿದ್ದರಾಮಯ್ಯ ಅವರು, ವಿರೋಧ ಪಕ್ಷದ ನಾಯಕರಾಗಿದ್ದು, ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ತನ್ನದೇ ಆದ ಗೌರವ ಇರುತ್ತದೆ. ಯಾವುದೇ ವಿಷಯದ ಬಗ್ಗೆ ಬಿನ್ನಾಭಿಪ್ರಾಯವಿದ್ದರೆ ಅದನ್ನು ಬಲವಾದ ಅಭಿಪ್ರಾಯಗಳೊಂದಿಗೆ ವಿರೋಧಿಸಬೇಕು. ಯಾವುದೇ ದೈಹಿಕ ಕಾರ್ಯದಿಂದಲ್ಲ. ಇದನ್ನು ಎಲ್ಲರೂ ಪಾಲಿಸಬೇಕು’ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಡಗಿನಲ್ಲಿ ಮಳೆ ಹಾನಿ ಸಂತ್ರಸ್ತರ ಭೇಟಿಗೆ ತೆರಳಿದ್ದ ವೇಳೆ…
ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರಕ್ಕೆ ಕೇಂದ್ರ ಸಂಸ್ಥೆಗಳಿಂದ ಮತ್ತೊಂದು ಆಘಾತ ಎದುರಾಗಿದೆ. ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ, ದಿಲ್ಲಿ ಮತ್ತು ಸುತ್ತಮುತ್ತಲಿನ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಿಬಿಐ ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ. ದಿಲ್ಲಿ ಅಬಕಾರಿ ನೀತಿಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ದಾಳಿಗಳನ್ನು ನಡೆಸಲಾಗಿದೆ ಎಂದು ವರದಿಯಾಗಿದೆ. ತಮ್ಮ ವಿರುದ್ಧದ ಎಲ್ಲ ಆರೋಪಗಳನ್ನು ನಿರಾಕರಿಸಿರುವ ಮನೀಶ್ ಸಿಸೋಡಿಯಾ, ತನಿಖೆಗೆ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಸಿಬಿಐ ನನ್ನ ಮನೆಗೆ ಬಂದಿದೆ. ನಾವು ತನಿಖೆಗೆ ಸಂಪೂರ್ಣ ಸಹಕಾರ ನೀಡಲಿದ್ದೇವೆ. ಇದರಿಂದ ಸತ್ಯ ಶೀಘ್ರವೇ ಹೊರಬೀಳಲಿದೆ. ಇದುವರೆಗೂ ನನ್ನ ವಿರುದ್ಧ ಅನೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಆದರೆ ಏನೂ ಹೊರಬಂದಿಲ್ಲ. ಅವುಗಳಿಂದ ಯಾವ ಪ್ರಯೋಜನ ಕೂಡ ಆಗಿಲ್ಲ. ದೇಶಕ್ಕೆ ಉತ್ತದಿಲ್ಮಲಿ ಶಿಕ್ಷಣ ನೀಡುವ ನನ್ನ ಕೆಲಸವನ್ನು ತಡೆಯುವುದು ಸಾಧ್ಯವಿಲ್ಲ” ಎಂದು ಮನೀಶ್ ಟ್ವೀಟ್ ಮಾಡಿದ್ದಾರೆ. ದೇಶದಲ್ಲಿ ಒಳ್ಳೆಯ ಕೆಲಸ ಮಾಡಿದವರಿಗೆ ಈ…
ಐಟಿಬಿಪಿ ಯೋಧರಿಗೆ ಸೇರಿದ ಎರಡು ಎಕೆ-47 ರೈಫಲ್ಗಳು ಕಳ್ಳತನವಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹಾಲಬಾವಿಯಲ್ಲಿರುವ ಐಟಿಬಿಪಿ ಶಿಬಿರದಲ್ಲಿ ನಕ್ಸಲ್ ನಿಗ್ರಹ ತರಬೇತಿ ನಡೆಯುತ್ತಿದೆ. ತರಬೇತಿಗೆಂದು ಮಧುರೈನಿಂದ ಬಂದಿರುವ ಐಟಿಬಿಪಿ 45ನೇ ಬೆಟಾಲಿಯನ್ನ ಯೋಧರಾದ ರಾಜೇಶ್ಕುಮಾರ್, ಸಂದೀಪ ಮೀನಾ ಅವರಿಗೆ ಸೇರಿದ ಎಕೆ-47 ರೈಫಲ್ಗಳು ಕಳುವಾಗಿವೆ. ಆಗಸ್ಟ್ 17ರಂದು ರಾತ್ರಿ ಮಲಗುವಾಗ ಎಕೆ-47 ರೈಫಲ್ಗಳನ್ನು ಭದ್ರತೆಯಲ್ಲಿಯೇ ಇರಿಸಲಾಗಿತ್ತು. ಬಿಗಿ ಭದ್ರತೆಯ ನಡುವೆಯೂ ಘಾತಕ ರೈಫಲ್ಗಳು ಯೋಧರ ಸುಪರ್ದಿಯಿಂದ ತಪ್ಪಿಹೋಗಿರುವುದು ಆತಂಕಕ್ಕೆ ಕಾರಣವಾಗಿದೆ. ರೈಫಲ್ ಪತ್ತೆಗಾಗಿ ಅಪರಾಧ ವಿಭಾಗದ ಡಿಸಿಪಿ ಪಿ.ವಿ.ಸ್ನೇಹಾ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯಡಿ ಐಟಿಬಿಪಿ ಅಧಿಕಾರಿಗಳು ಕಾಕತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿಕ್ಕಮಗಳೂರು : ವ್ಯಕ್ತಿಯೊಬ್ಬ ತನ್ನ ಮನೆ ಬಳಿ ಕಟ್ಟಿದ್ದ ರಾಷ್ಟ್ರ ಧ್ವಜವನ್ನು ಸಿಗರೇಟ್ ನಿಂದ ಸುಟ್ಟು ತೂತಾಗಿಸಿದ್ದ ಎನ್ನಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಸ್ಗರ್ (50)ಬಂಧಿತ ಆರೋಪಿ. ಘಟನೆ ಬಳಿಕ ಆರೋಪಿ ಅಸ್ಗರ್ ಪರಾರಿಯಾಗಿದ್ದ. ಇದೀಗ ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆ ನಿವಾಸಿ ಅಸ್ಗರ್ ನನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು : ಬೈಕ್ ನಲ್ಲಿ ನಾಗರಹಾವು ಇದ್ದರೂ ಸವಾರನಿಗೆ ತಿಳಿಯಲೇ ಇಲ್ಲ. ಒಂದೂವರೆ ಕಿಲೋಮೀಟರ್ ಪ್ರಯಾಣಿಸಿದ ಬಳಿಕ ಹಾವು ಇರುವುದು ಬೆಳಕಿಗೆ ಬಂದಿದ್ದು, ಬಳಿಕ ಹಾವನ್ನು ಹೊರ ತೆಗೆದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ನಗರದ ರಂಗಾಪುರ ಬಡಾವಣೆಯಲ್ಲಿ ಶರತ್ ಎಂಬುವವರ ಬೈಕ್ ನಲ್ಲಿ ನಾಗರಹಾವು ಸೇರಿಕೊಂಡಿತ್ತು. ಹಾವನ್ನು ಕಂಡು ಭಯ ಭೀತರಾದ ಶರತ್, ವಾರಂಗಲ್ ವನ್ಯಜೀವಿ ಜಾಗೃತ ಹಾಗೂ ಉರಗ ರಕ್ಷಣೆ ಸಂಸ್ಥೆಗೆ ಕರೆ ಮಾಡಿದರು. ಸಂಸ್ಥೆಯ ಉರಗ ತಜ್ಞ ದಿಲೀಪ್ ಸ್ಥಳಕ್ಕೆ ಭೇಟಿ ನೀಡಿ ದ್ವಿಚಕ್ರ ವಾಹನವನ್ನು ಪರಿಶೀಲನೆ ಮಾಡಿದರು. ನಂತರ ಬೈಕ್ ಅನ್ನು ಒಂದು ಕಿಲೋಮೀಟರ್ ದೂರದಲ್ಲಿ ಇರುವ ಬೈಕ್ ಗ್ಯಾರೇಜ್ ಗೆ ಕೊಂಡೊಯ್ದುರು. ಬೈಕ್ ಪಾರ್ಟ್ಸ್ ಗಳನ್ನು ಬಿಚ್ಚಿ ಅರ್ಧಗಂಟೆಗಳ ಕಾಲ ಕಾರ್ಯಚರಣೆ ನಡೆಸಿ ಸೇರಿಕೊಂಡಿದ್ದ ಹಾವನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿ ದೇವರಾಯನ ದುರ್ಗ ಅರಣ್ಯಕ್ಕೆ ರವಾನಿಸಿದರು. ವರದಿ : ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…