Subscribe to Updates
Get the latest creative news from FooBar about art, design and business.
- ಚಿಕ್ಕಬಳ್ಳಾಪುರ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ; ನವವಿವಾಹಿತೆ ದುರ್ಮರಣ, ಪತಿಗೆ ಗಂಭೀರ ಗಾಯ
- ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ
- ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!
- ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ
- ಮೇಲನಹಳ್ಳಿ ತ್ಯಾಜ್ಯ ಘಟಕಕ್ಕೆ ಗ್ರಾಮಸ್ಥರ ತೀವ್ರ ವಿರೋಧ: ತಹಶೀಲ್ದಾರ್ ಭೇಟಿ
- ಕರ್ನಾಟಕ ಒಲಂಪಿಕ್ 2025: ಕ್ರೀಡಾಪಟುಗಳ ಬೆನ್ನಿಗೆ ನಿಂತ ಸರ್ಕಾರ; ಪದಕ ಗೆದ್ದರೆ ಕೋಟಿ ಕೋಟಿ ನಗದು ಸಂಭಾವನೆ
- ಪಾವಗಡ ತಾಲ್ಲೂಕಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನ: 17 ಸಾವಿರ ಮಕ್ಕಳಿಗೆ ಲಸಿಕೆ ಗುರಿ
- ಸಂತಪುರದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
Author: admin
ತುರುವೇಕೆರೆ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಪ್ರತಿ ಹಳ್ಳಿಗಳಲ್ಲಿಯೂ ಮೂಲಭೂತ ಸೌಕರ್ಯ ಒದಗಿಸುವ ಮೂಲಕ ಗ್ರಾಮಗಳನ್ನು ಅಭಿವೃದ್ಧಿಪಡಿಸುವುದೇ ನಮ್ಮ ಗುರಿಯಾಗಿದೆ ಎಂದು ಮುತ್ತುಗದಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ.ಆರ್.ಗಿರೀಶ್ ತಿಳಿಸಿದರು. ತಾಲೂಕಿನ ಮದ್ದನಹಳ್ಳಿ ಗೇಟ್ ಬಳಿ ಗ್ರಾಮ ಪಂಚಾಯಿತಿ ವತಿಯಿಂದ ಅಳವಡಿಸಿರುವ ಮಾರ್ಗಸೂಚಿ ಸೂಚನಾ ನಾಮಫಲಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಮುತ್ತುಗದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಪ್ರತಿ ಹಳ್ಳಿಗಳಿಗೂ ಮೂಲಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಹಲವು ಕಾರ್ಯಗಳನ್ನು ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ನಡೆಸಲಾಗಿದೆ. ಕೊಟ್ಟ ಮಾತಿನಂತೆ ಮುಂದೆಯೂ ಸಹ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೆರವೇರಿಸಲಿದ್ದು, ಮುಂದೆಯೂ ಸಹಾಯ ಎಲ್ಲರ ಸಹಕಾರ ಹೀಗೆ ಇರಲಿ ಎಂದು ಮನವಿ ಮಾಡಿದರು. ಮುಖಂಡರಾದ ಬಿ.ಎಂ.ಎಸ್.ಉಮೇಶ್ ಮಾತನಾಡಿ, ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದು ಸಂತಸವಾಗಿದೆ. ಮುಂದೆಯೂ ಸಹ ಪಕ್ಷಾತೀತವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ಜರುಗಬೇಕು ಎಂದರು. ಈ…
ತುರುವೇಕೆರೆ: ಏ.1ರಂದು ನಡೆಯಲಿರುವ, ಶ್ರೀ ಸಿದ್ದಗಂಗಾ ಕ್ಷೇತ್ರದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಗಳ 115ನೇ ಜಯಂತೋತ್ಸವಕ್ಕೆ, ತುರುವೇಕೆರೆ ತಾಲೂಕಿನ ಬಿಜೆಪಿ ಪಕ್ಷದ ಸುಮಾರು 5,000 ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಮಸಾಲ ಜಯರಾಮ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಪಟ್ಟಣ ಸಮೀಪದ ತಮ್ಮ ಸ್ವಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಲಿಂಗೈಕ್ಯ ಸಿದ್ದಗಂಗಾ ಶ್ರೀಗಳ 115ನೇ ಜಯಂತೋತ್ಸವ ಕಾರ್ಯಕ್ರಮವು ತುಮಕೂರಿನಲ್ಲಿ ನೆರವೇರಲಿದ್ದು, ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ಆಗಮಿಸಲಿದ್ದಾರೆ. ಇದರ ಹಿನ್ನೆಲೆಯಲ್ಲಿ ಕ್ಷೇತ್ರದಿಂದ 5,000 ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಕ್ಷೇತ್ರ ವ್ಯಾಪ್ತಿಯಲ್ಲಿರುವ ಬಿ.ಜೆ.ಪಿ ಪಕ್ಷದ ಕಾರ್ಯಕರ್ತರುಗಳು ತೆರಳಲು ಸೂಕ್ತ ವಾಹನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕಾರ್ಯಕರ್ತರನ್ನು ಕರೆತರಲು ಗ್ರಾಮ ಪಂಚಾಯಿತಿ ಮಟ್ಟದ ಬಿಜೆಪಿ ಪಕ್ಷದ ಮುಖಂಡರುಗಳಿಗೆ ಹಾಗೂ ಪದಾಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ ಎಂದರು. ಅಲ್ಲದೆ ಅಂದು ಬೆಳಗ್ಗೆ 8 ಗಂಟೆಗೆ ಆಯಾ ಗ್ರಾಮ ಪಂಚಾಯಿತಿ ಪ್ರದೇಶಗಳಿಂದ ವಾಹನಗಳು ತುಮಕೂರಿನ ಶ್ರಮಕ್ಕೆ ತೆರಳಲಿವೆ. ಕ್ಷೇತ್ರದ ಸರ್ವರು ಸಹಾ ಕಾರ್ಯಕ್ರಮದ ಯಶಸ್ಸಿಗಾಗಿ…
ಸರಗೂರು: ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಪಟ್ಟಣ ಪಂಚಾಯಿತಿಯ 2022-2023 ನೇ ಸಾಲಿನ ಬಜೆಟ್ 1,145.26 ಲಕ್ಷಗಳು ಮಂಡನೆಯಲ್ಲಿ, ಉಳಿತಾಯ 7.77 ಲಕ್ಷಗಳು ಅಯವ್ಯಯ ಮಂಡನೆಯನ್ನು ಪ.ಪಂ. ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಮಾಡಿದ್ದರು. ಸರಗೂರು ಪಟ್ಟಣವನ್ನು ಅಭಿವೃದ್ಧಿ ಮಾಡಲು 2022 2023 ರ ಸಾಲಿನ ಉಳಿತಾಯ 7.77 ಲಕ್ಷವನ್ನು ಬಿಡುಗಡೆ ಮಾಡಿದ್ದಿವಿ. ಅನುದಾನವನ್ನು ಸರ್ಕಾರ ನೀಡಿದೆ ಪಟ್ಟಣವನ್ನು ಅಭಿವೃದ್ಧಿ ಪಡಿಸಲು ಇನ್ನೂ ಹೆಚ್ಚು ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸರಗೂರುಅಭಿವೃದ್ಧಿಗೆ ಮಾತುಕತೆ ನಡೆಸಿದ್ದೇವೆ ಎಂದು ಅಧ್ಯಕ್ಷೆ ರಾಧಿಕಾ ಶ್ರೀನಾಥ್ ತಿಳಿಸಿದರು. ನಂತರ ಪ.ಪಂ. ಸದಸ್ಯ ಶ್ರೀ ನಿವಾಸ್ ಮಾತನಾಡಿ, ಸರಗೂರು ಪಟ್ಟಣವನ್ನು ಅಭಿವೃದ್ಧಿ ಹೊಂದಲು ಶಾಸಕರು ಅನೀಲ್ ಚಿಕ್ಕಮಾದು ಕೈಜೋಡಿಸಿದ್ದಾರೆ. ಎಲ್ಲಾ ಸಚಿವರು ಹಾಗೂ ಮಂತ್ರಿಗಳು ಭೇಟಿ ಮಾಡಿ ಪಟ್ಟಣವನ್ನು ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಸರಗೂರು ತುಂಬುಸೋಗೆ ಗ್ರಾಮದ ಸರಗೂರಿಗೆ ಬರುವ ಸೇತುವೆ ಬಳಿ ಹಾಗೂ ಎರಡು ಕಡೆ ಕಮನ್ ಗೇಟ್ ಯನ್ನು ಅಳವಡಿಸಿದ್ದೇವೆ ಎಂದು…
ಸರಗೂರು: ತಾಲ್ಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿಯ ಲಂಕೆ ಗ್ರಾಮದಲ್ಲಿ ಮಳೆಯ ಪರಿಣಾಮ ಮನೆಗಳಿಗೆ ಚರಂಡಿ ನೀರು ನುಗ್ಗಿರುವ ಘಟನೆ ನಡೆದಿದ್ದು, ಚರಂಡಿಯನ್ನು ಸ್ವಚ್ಛತೆಗೊಳಿಸದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಇಲ್ಲಿನ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಂಕೆ ಎರಡನೇ ಬ್ಲಾಕ್ ನ ಗ್ರಾಮ ಪಂಚಾಯತ್ ಚರಂಡಿ ಸ್ವಚ್ಛಗೊಳಿಸದೇ ಹಾಗೆಯೇ ಬಿಟ್ಟಿದ್ದು, ಚರಂಡಿಯಲ್ಲಿ ತುಂಬಿದ್ದ ಕಸಗಳಿಂದಾಗಿ ಸುಗಮವಾಗಿ ನೀರು ಹರಿಯದೇ, ಮನೆಗಳಿಗೆ ನುಗ್ಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚರಂಡಿಯನ್ನು ಸ್ವಚ್ಛಗೊಳಿಸದೇ ಗ್ರಾಮ ಪಂಚಾಯತ್ ನಿರ್ಲಕ್ಷ್ಯವಹಿಸುತ್ತಿದೆ ಎಂದು ಗ್ರಾಮದ ಯುವ ಮುಖಂಡ ಶಿವರಾಜ್ ಆಕ್ರೋಶ ವ್ಯಕ್ತಪಡಿಸಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೂ ಹಾಗೂ ಸದಸ್ಯರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಚರಂಡಿ ನೀರು ಮನೆಗಳಿಗೆ ನುಗ್ಗುತ್ತಿರುವುದರಿಂದ ಜನರು ಸಂಕಷ್ಟಕ್ಕೊಳಗಾಗುತ್ತಿದ್ದಾರೆ. ಕೊಳಚೆ ನೀರಿನಿಂದಾಗಿ ಇಲ್ಲಿನ ನಿವಾಸಿಗಳು ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿದ್ದಾರೆ. ತಕ್ಷಣವೇ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಇಲ್ಲವಾದರೆ, ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟಿಸಬೇಕಾಗುತ್ತದೆ ಎಂದು ಗ್ರಾಮಸ್ಥರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ವರದಿ: ಚಂದ್ರ ಹಾದನೂರು.…
ತುಮಕೂರು: ಜಿಲ್ಲೆ ಮತ್ತು ತುಮಕೂರು ನಗರದ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಚಿತ ಮಧುಮೇಹ ಮತ್ತು ಬಿ.ಪಿ. ವೈದ್ಯಕೀಯ ತಪಾಸಣಾ ಶಿಬಿರ ಮತ್ತು ಮಹಿಳೆಯರಿಗೆ ಆಟೋಟ ಸ್ಪರ್ಧೆಯನ್ನು ಕೂಡ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಲೀಲಾದೇವಿ ಆರ್ ಪ್ರಸಾದ್, ಜಿಲ್ಲಾಧ್ಯಕ್ಷೆ ತಾಹೆರಾ ಕುಲ್ಸುಮ್, ನಗರ ಅಧ್ಯಕ್ಷೆ ಸಿ.ಡಿ. ಜಯಶ್ರೀ ಉದ್ಘಾಟಿಸಿದರು. ಕಾರ್ಯಕ್ರಮವನ್ನುದ್ದೇಶಿಸಿ ಲೀಲಾದೇವಿ ಆರ್.ಪ್ರಸಾದ್ ಮಾತನಾಡಿ, ನಾವು ಮಹಿಳಾ ದಿನಾಚರಣೆ ಕೇವಲ ವರ್ಷದಲ್ಲಿ ಒಂದು ದಿವಸಕ್ಕೆ ಸೀಮಿತವಾಗಬಾರದು. ನಾವು ಏನಾದರೂ ಬದಲಾವಣೆ ತರಬೇಕು. ವರ್ಷಕ್ಕೆ ಒಂದು ದಿವಸ ಆಚರಣೆ ಮಾಡಿದರೆ, ಯಾವುದೇ ಬದಲಾವಣೆ ಆಗದು. ಹೆಣ್ಣುಮಕ್ಕಳಿಗೆ ಕೆಲಸಗಳಲ್ಲಿ ಕೂಲಿ ತಾರತಮ್ಯ ಮಾಡಲಾಗುತ್ತದೆ. ಇದು ನ್ಯಾಯಾನಾ? ಇದಕ್ಕೆ ನಾವು ಹೋರಾಟ ಮಾಡುವುದಿಲ್ಲ. ಆದ್ದರಿಂದ ಹೆಣ್ಣುಮಕ್ಕಳಿಗೆ ಹೆಚ್ಚಿನ ಆದ್ಯತೆ ಕೊಡಬೇಕು ಎಂದರು. ನಂತರ ಮಾತನಾಡಿದ ತಾಹೆರಾ ಕುಲ್ಸುಮ್, ಹೆಣ್ಣುಮಕ್ಕಳಿಗೆ ಉತ್ತಮ ಆದ್ಯತೆ ಕೊಡಬೇಕು ಹಾಗೂ ಪುರುಷರ ಸಹಕಾರದಿಂದ ನಾವು ಮುಂದುವರಿಯಬೇಕು. ಮಹಿಳೆಯರು ಧೈರ್ಯದಿಂದ ಇರಬೇಕು.…
ತುಮಕೂರು: ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಮತ್ತು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ತುಮಕೂರು ಜಿಲ್ಲಾ ಘಟಕದ ನೇತೃತ್ವದಲ್ಲಿ ಭೂಮಿ ವಸತಿಗಾಗಿ ಅನಿರ್ದಿಷ್ಟಾವದಿ ಆಹೋರಾತ್ರಿ ಧರಣಿ ಮಾರ್ಚ್ 21 ರಿಂದ ಸತತವಾಗಿ ನಡೆಸಿಕೊಂಡು ಬರುತ್ತಿದ್ದು, ಇಂದು 10ನೇ ದಿನಕ್ಕೆ ಕಾಲಿಟ್ಟಿದೆ. ಈ ದಿನ ಮಧುಗಿರಿ AC ರವರು ಸ್ಥಳಕ್ಕೆ ಆಗಮಿಸಿ ಒಂದು ತಿಂಗಳಲ್ಲಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಡಲಾಗುವುದು ಧರಣಿ ಕೈಬಿಡಿ ಎಂದು ಮನವಿ ಮಾಡಿದರು. ಈ ವೇಳೆ ಧರಣಿ ನಿರತರು, ಸ್ಥಳದಲ್ಲೇ ನಮ್ಮ ಸಮಸ್ಯೆಗಳನ್ನು ಬಗೆಹರಿಸಿ ಕೊಡಿ. ನಾವು ಧರಣಿ ಕೈಬಿಡುತ್ತೇವೆ ಎಂದು ತಿಳಿಸಲಾಗಿದೆ ಎಂದು ಹಂದ್ರಾಳ್ ನಾಗಭೂಷಣ್ ಹೇಳಿದರು. ಧರಣಿಯ ಹಕ್ಕೊತ್ತಾಯಗಳು: *ತುರ್ತಾಗಿ ಜಿಲ್ಲಾಧಿಕಾರಿಗಳು ಹಾಗು ಜಿಲ್ಲಾ ಪಂಚಾಯತ್ CEO ರವರು ಗಳು, ಈಗಾಗಲೆ ಜಿಲ್ಲಾಧಿಕಾರಿಗಳಿಗೆ ಮೂರು ಬಾರಿ ನೀಡಿರುವ ಸಮಸ್ಯೆಗಳ ಪಟ್ಟಿಯನ್ನು ಪರಿಶೀಲಿಸಿ, ಬಗೆಹರಿಸಬೇಕು. *MLA ಗಳ ಅದ್ಯಕ್ಷತೆಯಲ್ಲಿನ ಬಗರ್ ಹುಕ್ಕು ಸಮಿತಿಯು ಏಪ್ರಿಲ್ 20 ಕ್ಕೆ ಮುಗಿಯುವುದರಿಂದ ಪ್ರಸ್ತುತ ಧರಣಿಯಲ್ಲಿರುವ ಫಲಾನುಭವಿಗಳ ಸುಮಾರು…
ದಾವಣಗೆರೆ: 2022-23ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನಿಶ್ಚಿತ ಗೌರವಧನದಲ್ಲಿ ಹೆಚ್ಚಳ ಮಾಡಿರುವುದನ್ನು ಹೊರತುಪಡಿಸಿ , ಇತರ ಎಲ್ಲಾ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಕಡೆಗಣಿಸಿದ್ದು, ಇದರ ವಿರುದ್ಧ ಎ.ಐ.ಯು.ಟಿ.ಯು.ಸಿ. ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಹಾಗೂ ಜಿಲ್ಲಾ ಸಮಿತಿಯು ತೀವ್ರ ಪ್ರತಿಭಟನೆ ನಡೆಸಿದೆ. ನಗರದ ಜಯದೇವ ವೃತ್ತದಲ್ಲಿ ಆಶಾಕಾರ್ಯಕರ್ತೆಯರು ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ಮುಖ್ಯಮಂತ್ರಿಗಳಿಗೆ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯ ಸರ್ಕಾರದ ಮಾಸಿಕ ನಿಶ್ಚಿತ ಗೌರವಧನವನ್ನು ಕನಿಷ್ಠ ರೂ. 2,000 ಹೆಚ್ಚಳ ಮಾಡುತ್ತೇವೆ ಎಂದು ಭರವಸೆ ನೀಡಿದ್ದರೂ , ಕಡೆಗೆ 1000 ರೂ.ಗಳಾದರೂ ಹೆಚ್ಚಳ ಮಾಡಿರುವುದನ್ನು ಸಂಘದಿಂದ ಸ್ವಾಗತಿಸುತ್ತೇವೆ. ಆದರೆ ಸಂಘದ ರಾಜ್ಯ ಸಮಿತಿಯಿಂದ ಸರ್ಕಾರ ಮತ್ತು ಇಲಾಖೆಗೆ ಸಲ್ಲಿಸಿರುವ ಪ್ರಮುಖ ಬೇಡಿಕೆಗಳಿಗೆ ಪರಿಹಾರ ಕ್ರಮಗಳನ್ನು ಘೋಷಣೆ ಮಾಡದೆ ಕಡೆಗಣಿಸಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ಹೊರ ಹಾಕಿದರು.…
ತುಮಕೂರು: ನಡೆದಾಡುವ ದೇವರು ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಅವರ 115 ನೇ ವರ್ಧಂತಿ ಕಾರ್ಯಕ್ರಮಕ್ಕೆ ಏಪ್ರಿಲ್ 1 ರಂದು ತುಮಕೂರಿಗೆ ಆಗಮಿಸುವ ಕೇಂದ್ರ ಗೃಹಸಚಿವ ಅಮಿತ್ ಷಾ ಅವರಿಗೆ ಭವ್ಯ ಸ್ವಾಗತ ಕೋರಲು ಜಿಲ್ಲೆಯ ಎಲ್ಲಾ ಬಿಜೆಪಿ ಕಾರ್ಯಕರ್ತರು ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದ್ದಾರೆ ಎಂದು ಗುಬ್ಬಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಬಿ.ಎಸ್.ಪಂಚಾಕ್ಷರಿ ತಿಳಿಸಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಶಿವಕುಮಾರ ಸ್ವಾಮೀಜಿ ಅವರ 115 ನೇ ವರ್ಧಂತಿ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರ ಆಗಮನಕ್ಕೆ ಬಿಜೆಪಿ ಸನ್ನದ್ಧವಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕಿನ ಬಿಜೆಪಿ ಕಾರ್ಯಕರ್ತರು ಒಗ್ಗೂಡಿ ಅಮಿತ್ ಷಾ ಅವರನ್ನು ಹಾಗೂ ಸಿಎಂ ಬೊಮ್ಮಾಯಿ ಅವರನ್ನು ಸ್ವಾಗತಿಸಲಿದ್ದಾರೆ ಎಂದರು.ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ. ಮಾಜಿ ಸಿ.ಎಂ.ಯಡಿಯೂರಪ್ಪ ಹಾಗೂ ರಾಜ್ಯ ದ ಸಚಿವರು, ಶಾಸಕರು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ಉಸ್ತುವಾರಿಯನ್ನು ಯುವ ನಾಯಕ ವಿ.ವೈ.ವಿಜಯೇಂದ್ರ ವಹಿಸುತ್ತಿದ್ದು ಬಹಳ ಅದ್ದೂರಿಯಾಗಿ ಕೇಂದ್ರ ಗೃಹ ಅಮಿತ್ ಷಾ ರವರನ್ನು ಸ್ವಾಗತಿಸಲು ಸಜ್ಜಾಗಿದ್ದೇವೆ ಎಂದರು.…
ಮಧುಗಿರಿ: ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾದ ಮೊದಲ ಜಿಲ್ಲಾ ಪದಾಧಿಕಾರಿಗಳ ಸಭೆಯನ್ನು ಮಧುಗಿರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿರುವ ರಾಜ್ಯ ಬಿಜೆಪಿ ದಾವಣಗೆರೆ ವಿಭಾಗ ಪ್ರಭಾರಿ ಆಸೀಫ್ ಸೇಟ್ ರವರು ಮಧುಗಿರಿಯ ಪಾವಗಡ ಸರ್ಕಲ್ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ಬಳಿಕ ಐತಿಹಾಸಿಕ ಸಯ್ಯದ್ ಇಬ್ರಾಹಿಂ ಖಾಲಿಲುಲ್ಲಾ ಶಾ ಅವ್ವ್ ಳಿಯಾ ಅಲ್ಲ ದರ್ಗಾ ಷರೀಫ್ ಗೆ ಹೂವಿನ ಜಾದರ್ ಸಮರ್ಪಿಸಿ, ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವು ಬಲಿಷ್ಠವಾಗಿ ಬೆಳೆಯಲಿ ಹಾಗೂ ಜಿಲ್ಲೆಯ ನಾಲ್ಕು ವಿಧಾನ ಸಭ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಲಿ ಎಂದು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನಕಾರ್ಯದರ್ಶಿಗಳಾದ ಹಫೀಜ್ ರಾಹ್ಮನ್, ಮುಬಾರಕ್ ಸಹ ಪ್ರಭಾರಿ ದಾವಣಗೆರೆ, ಮೊಹಮ್ಮದ್ ಊರೂಜ್ ಪಾಶ ಸಹ ಪ್ರಭಾರಿ, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷರಾದ ಇಂತ್ಯಾಜ್ ಪಾಷ, ಮಧುಗಿರಿ ಮಂಡಲ ಬಿಜೆಪಿ ಅಧ್ಯಕ್ಷರಾದ ನರಸಿಂಹಮೂರ್ತಿ,ಜಿಲ್ಲಾ ವಕ್ಫ್ ಬೋರ್ಡ್ ವೈಸ್ ಚೇರ್ಮೆನ್ ಯಾಸ್ಮಿನ್ …
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಿರಿಯೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಮಾಜಿ ಸಚಿವ ಡಿ.ಸುಧಾಕರ್ ಅವರ ಹುಟ್ಟುಹಬ್ಬವನ್ನು ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು. ಹಿರಿಯೂರು ತಾಲೂಕಿನ ಸಮಗ್ರ ಅಭಿವೃದ್ಧಿ ಹರಿಕಾರರಾದ ಡಿ.ಸುಧಾಕರ್ ರವರು ಮತ್ತೊಮ್ಮೆ ಜಯಶಾಲಿಯಾಗಲಿ ಎಂದು ಇದೇ ವೇಳೆ ಕಾರ್ಯಕರ್ತರು ಶುಭ ಹಾರೈಸಿ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ಡಿ ಸುಧಾಕರ್, ಈ ಕ್ಷೇತ್ರದ ಜನತೆ ನನ್ನ ಮೇಲೆ ಇಟ್ಟ ಅಭಿಮಾನ ಇಂದಿಗೂ ಸಹ ಕಡಿಮೆಯಾಗಿಲ್ಲ. ಅವರ ಆಶಯಗಳು ಹುಸಿಯಾಗದಂತೆ ಈವರೆಗೆ ನಾನು ನಡೆದುಕೊಂಡು ಬಂದಿದ್ದೇನೆ. ಮುಂದೆಯೂ ಅದೇ ರೀತಿಯಾಗಿ ಇರುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಹಿರಿಯೂರು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ಜೆ.ರಮೇಶ್ , ಕೆಪಿಸಿಸಿ ಸದಸ್ಯ ಎ.ಎಂ.ಅಮೃತೇ ಶ್ವರ ಸ್ವಾಮಿ , ನಗರ ಮಹಿಳಾ ಘಟಕದ ಬ್ಲಾಕ್ ಕಾಂಗ್ರೆಸ್ ಅಧ್ಯಕರಾದ ಸುರೇಖಾಮಣಿ, ಮಹಿಳಾ ಘಟಕದ ಅಧ್ಯಕ್ಷರಾದ ಎಂ.ಎಸ್.ಗೌರಿ, ಮುರುಳಿಧರನ್ ಹಿರಿಯೂರು , ಅಭಿಮತ ಕನ್ನಡ ವಾರಪತ್ರಿಕೆಯ ಸಂಪಾದಕರಾದ ಜಿ.ಎಲ್.ಮೂರ್ತಿ, ಕಂದಿಕೆರೆ ಸುರೇಶ ಬಾಬು, ಜಿಲ್ಲಾ…