Author: admin

ವಿಜಯಪುರ: ಅಣ್ಣನನ್ನು ತಮ್ಮ ಬರ್ಬರವಾಗಿ ಹತ್ಯೆಗೈದ ಘಟನೆ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ನಡೆದಿದೆ. ಜಗ್ಗೇಶ್ ವಡ್ಡರ್‌ (30) ಹತ್ಯೆಯಾದ ದುರ್ದೈವಿ. ರಾಹುಲ್ ವಡ್ಡರ್ ಕೊಲೆ ಆರೋಪಿ. ನಿತ್ಯ ಮದ್ಯ ಸೇವಿಸಲು ತಮ್ಮನ ಬಳಿ ಅಣ್ಣ ಜಗ್ಗೇಶ್ ಹಣವನ್ನ ಕೇಳುತ್ತಿದ್ದನಂತೆ. ಅಣ್ಣನ ಕಾಟಕ್ಕೆ ರೋಸಿಹೋಗಿದ್ದ ತಮ್ಮ ರಾಹುಲ್, ನಿನ್ನೆ ರಾತ್ರಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಹಣದ ವಿಚಾರಕ್ಕೆ ರಾತ್ರಿ ಇಬ್ಬರ ಮಧ್ಯೆ ಜಗಳವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ಆಯುಧದಿಂದ ಇರಿದು ಅಣ್ಣನ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಬಿಜೆಪಿ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಕ್ಟೋಬರ್ ನಲ್ಲಿ ನೂತನ ಆಯೋಗ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ವಿಧಾನಸೌಧದದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಕಾರಿ ನೌಕರರಿಗೆ ಕೊಟ್ಟ ಮಾತಿನಂತೆ ಅಕ್ಟೋಬರ್ ನಲ್ಲಿ ನೂತನ ವೇತನ ಆಯೋಗ ರಚನೆ ಮಾಡಲಾಗುವುದು. ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಶಿಫಾರಸು ಹಾಗೂ ವರದಿ ಸಲ್ಲಿಸಲು ಈ ಆಯೋಗ ರಚಿಸಲಿದ್ದು, ನೌಕರರ ಉಳಿದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ. ಆರ್ಥಿಕ ಬಲದ ಆಧಾರದ ಮೇಲೆ ಅಭಿವೃದ್ಧಿ, ಜನರ ಆಶೋತ್ತರಗಳಿಗೆ ಸ್ಪಂದನೆ ಜೊತೆಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಶಕ್ತವಾಗಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮತ್ತೊಂದು ಖಾಸಗಿ ಬ್ಯಾಂಕ್ ಆಗಿರುವ ಫೆಡರಲ್ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್ (Kotak Mahindra Bank) ಜೊತೆ ವಿಲೀನದ ಸುದ್ದಿಯನ್ನು ತಳ್ಳಿಹಾಕಿದೆ. ಇದು ಸೋಮವಾರದ ದೇಶೀಯ ಷೇರು ಮಾರುಕಟ್ಟೆಗಳಲ್ಲಿ ಫೆಡರಲ್ ಬ್ಯಾಂಕ್ ಸ್ಟಾಕ್ ಅನ್ನು 52 ವಾರಗಳ ಗರಿಷ್ಠ ರೂ 129.75 ಕ್ಕೆ ತಳ್ಳಿತು, ಸುಮಾರು 8 ಶೇಕಡಾ ಏರಿಕೆಯಾಗಿದೆ. ಕೋಟಕ್ ಮಹೀಂದ್ರಾ ಬ್ಯಾಂಕ್ ಜೊತೆ ವಿಲೀನದ ಕುರಿತು ಚರ್ಚೆ ನಡೆಯುತ್ತಿದೆ ಎಂಬ ಸುದ್ದಿ ಸಂಪೂರ್ಣ ಸುಳ್ಳು ಎಂದು ಫೆಡರಲ್ ಬ್ಯಾಂಕ್ ಸ್ಪಷ್ಟಪಡಿಸಿದೆ. ಈ ಬಗ್ಗೆ ತಮ್ಮ ಬಳಿ ಯಾವುದೇ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು. ಕಳೆದ ಕೆಲವು ಸೆಷನ್‌ಗಳಲ್ಲಿ ಫೆಡರಲ್ ಬ್ಯಾಂಕ್ ಷೇರುಗಳು 12 ಪ್ರತಿಶತದಷ್ಟು ಗಳಿಸಿವೆ. ವಿಲೀನದ ಕುರಿತು ಚರ್ಚಿಸಲು ಎರಡು ಬ್ಯಾಂಕ್‌ಗಳ ಮಾಲೀಕರು ಇತ್ತೀಚೆಗೆ ಭೇಟಿಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಪ್ರಸಕ್ತ ಹಣಕಾಸು ವರ್ಷದ (2022 23) ಮೊದಲ ತ್ರೈಮಾಸಿಕದಲ್ಲಿ ಬಡ್ಡಿ ಆದಾಯ ಶೇ.8.14ರಷ್ಟು ಏರಿಕೆಯಾಗಿದೆ. ಕಳೆದ ವರ್ಷ ರೂ.3,355.71 ಕೋಟಿ ಗಳಿಸಿದ ಬಡ್ಡಿ…

Read More

ಬೆಳಗಾವಿ : ಪ್ರತಿಯೊಬ್ಬರ ಜೀವನದಲ್ಲೂ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಜೀವನ ಪರ್ಯಂತ ಪೂಜಿಸಲ್ಪಡುವ ಸ್ಥಾನದಲ್ಲಿ ಶಿಕ್ಷಕರು ನಿಲ್ಲುತ್ತಾರೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಜಿಲ್ಲಾ ಪಂಚಾಯತ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಳಗಾವಿ, ಗ್ರಾಮೀಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಖಾಸಬಾಗ ಸಾಯಿ ಭವನದಲ್ಲಿ ಆಯೋಜಿಸಲಾಗಿದ್ದ 61ನೇ ಶಿಕ್ಷಕರ ದಿನಾಚರಣೆ, ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಹಿರಿದು. ಭಾರತ ಇಂದು ವಿಶ್ವಗುರುವಾಗಿ ನಿಲ್ಲುವುದಕ್ಕೆ ಶಿಕ್ಷಕರೇ ಕಾರಣ. ಇಡೀ ಸಮಾಜದ ಗೌರವಕ್ಕೆ ಶಿಕ್ಷಕರು ಪಾತ್ರರು. ನನ್ನ ಜೀವನದಲ್ಲಿ ನಾನು ಈ ಮಟ್ಟಕ್ಕೇರಲು, ಜೀವನದಲ್ಲಿ ಅಲ್ಪವಾದರೂ ಸಾಧನೆ ಮಾಡಿದ್ದೇನೆಂದರೆ ಅದಕ್ಕೆ ಶಿಕ್ಷಕರೇ ಕಾರಣ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಇದೇ ಸಮಯದಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ 2021ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತೀ…

Read More

ಚಿತ್ರದುರ್ಗ: ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾಮಠದ ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ತಮ್ಮ ಕುರಿತು ಸುದ್ದಿಗಳನ್ನು ಪ್ರಕಟಿಸದಂತೆ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆಯನ್ನು ಪಡೆದಿದ್ದಾರೆ. ಈ ಹಿಂದೆ ಕೂಡ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆ ತಂದಿರುವ ಹಲವು ಗಣ್ಯರು, ಶಾಸಕರು, ಅಧಿಕಾರಿಗಳು ತಮ್ಮ ಕುರಿತು ಯಾವುದೇ ಸುದ್ದಿಗಳನ್ನು ಪ್ರಕಟ ಮಾಡುತ್ತಿಲ್ಲ. ಹೀಗಾಗಿ ಇಂದಿನಿಂದ ಮುರುಘಾ ಶರಣರ ಪರ ಅಥವಾ ವಿರುದ್ಧವಾದ ಯಾವುದೇ ಸುದ್ದಿಯನ್ನು ಪ್ರಕಟಿಸದಿರಲು ತೀರ್ಮಾನಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಸಾಕಷ್ಟು ಹಾನಿಯಾಗಿದೆ. ಹೀಗಾಗಿ ನೆರೆಹಾನಿ ಪರಿಹಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ತಕ್ಷಣದ ಪರಿಹಾರವಾಗಿ 300 ಕೋಟಿ ರೂ.ಹಾಗೂ ರಾಜ್ಯದ ಉಳಿದ ಭಾಗಕ್ಕೆ 300 ಕೋಟಿ ರೂ. ಬಿಡುಗಡೆಗೆ ಆದೇಶಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಎಲ್ಲ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾಗಿರುವ ಹಾನಿಯನ್ನು ಸರಿಪಡಿಸಲು ಪ್ರವಾಹ ಪೀಡಿತ ಜಿಲ್ಲೆಗಳಿಗೆ ತುರ್ತಾಗಿ 600 ಕೋಟಿ ರೂ. ಘೋಷಿಸಿದ್ದಾರೆ. ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಆಸ್ತಿ ಹಾನಿಯ ಜೊತೆಗೆ ಬೆಳೆ ಹಾನಿಯಾಗಿದ್ದು, ಪರಿಹಾರ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ ಆಗಮಿಸುತ್ತಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕಾರವಾರ: ಮಾಜಿ ಶಿಕ್ಷಣ ಸಚಿವ ಪ್ರಭಾಕರ ರಾಣೆ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದಂತ ಮಾಜಿ ಶಿಕ್ಷಣ ಸಚಿವ ಪ್ರಭಾಕರ್ ರಾಣೆ ಅವರು, ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. 1983ರಿಂದ ಮೂರು ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಪ್ರಭಾಕರ್ ರಾಣೆ, ಕಾರವಾರ-ಜೊಯಿಡಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 1993ರಲ್ಲಿ ವೀರಪ್ಪ ಮೊಯ್ಲಿ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಶಿಕ್ಷಣ ಸಚಿವರಾಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಲಂಡನ್ : ಬ್ರಿಟನ್ ನೂತನ ಪ್ರಧಾನ ಮಂತ್ರಿಯಾಗಿ ಲಿಜ್ ಟ್ರಸ್ ಆಯ್ಕೆಯಾಗಿದ್ದಾರೆ. ಅವರು ಪ್ರತಿಸ್ಪರ್ಧಿ ಭಾರತದ ಸುಧಾ ಮೂರ್ತಿ ಅವರ ಅಳಿಯ ರಿಷಿ ಸುನಾಕ್ ಅವರನ್ನು ಸೋಲು ಅನುಭವಿಸಿದ್ದಾರೆ. ಬೋರಿಸ್ ಜಾನ್ಸನ್ ಅವರ ಆಪ್ತೆ, ವಿದೇಶಾಂಗ ಸಚಿವೆ ಲಿಜ್ ಟ್ರಸ್ ಆಯ್ಕೆಯಾಗಿದ್ದಾರೆ. ಆರಂಭಿಕ ಹಂತದಲ್ಲಿ ಮುನ್ನಡೆ ಸಾಧಿಸಿದ್ದ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಾಕ್, ಕನ್ಸರ್ವೇಟಿವ್ ಪಕ್ಷದ ಸದಸ್ಯರು ಮತದಾನ ಮಾಡಿದ ವೇಳೆ ಹಿನ್ನಡೆ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಚುನಾವಣೆಯಲ್ಲಿ ಲಿಜ್ ಟ್ರಸ್ 82 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರೆ, ರಿಷಿ ಸುನಕ್ 62 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಲಿಜ್ ಟ್ರಸ್ ಬ್ರಿಟನ್ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಸಂಬಂಧಿಸಿದಂತೆ ಅಕ್ರಮದಲ್ಲಿ ಭಾಗಿಯಾಗಿರುವ ಮತ್ತಿಬ್ಬರನ್ನು ಬೆಳಗಾವಿ ಜಿಲ್ಲಾ ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 15ಕ್ಕೆ ಏರಿದೆ. ಬಂಧಿತ ಆರೋಪಿಗಳು ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲೂಕಿನ ಹನಗಂಡಿ ನಿವಾಸಿ ಬೀರಪ್ಪ ಲಕ್ಷ್ಮಣ ಹನಗಂಡಿ (24) ಹಾಗೂ ಗೋಕಾಕ ತಾಲೂಕಿನ ಅರಭಾವಿಯ ನಿವಾಸಿ ಶಿವಾನಂದ ದುಂಡಪ್ಪ ಹಳ್ಳೂರ. ಎಂದು ಗುರುತಿಸಲಾಗಿದೆ. ಬಂಧಿತರಿಂದ 6 ಮೊಬೈಲ್ ಫೋನ್​, ಲ್ಯಾಪ್​ಟಾಪ್ ಹಾಗೂ ಎಲೆಕ್ಟ್ರಾನಿಕ್ ಡಿವೈಸ್​ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಬೀರಪ್ಪ ಹನಗಂಡಿ ಎಂಬಾತ ಪರೀಕ್ಷೆಯಲ್ಲಿ ಅಕ್ರಮ ಎಸಗಲು ಪ್ರಶ್ನೆ ಪತ್ರಿಕೆಗಳ ಮುದ್ರಣಕ್ಕಾಗಿ ಲ್ಯಾಪ್​ಟಾಪ್ ಹಾಗೂ ಸ್ಮಾರ್ಟ ವಾಚ​ ಖರೀದಿಸಿ ಇನ್ನಿತರ ಆರೋಪಿಗಳಿಗೆ ತಂದು ಕೊಟ್ಟಿದ್ದನು. ಇನ್ನು ಶಿವಾನಂದ ಹಳ್ಳೂರ ಸ್ಮಾರ್ಟ್​​ವಾಚ್​ಗಳಿಗೆ ಕನೆಕ್ಟ್ ಮಾಡುವ ಎಲೆಕ್ಟ್ರಾನಿಕ್ ಡಿವೈಸ್ ಸಮೇತ ಪರೀಕ್ಷೆಗೆ ಹಾಜರಾಗಿದ್ದ ಎನ್ನಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದ್ದು, ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ ಜಿಲ್ಲೆಯ ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ. ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ತಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ. ರೋಗದ ಲಕ್ಷಣಗಳು: ಅತಿಯಾದ ಜ್ವರ (105-180ಈ)ಕಣ್ಣುಗಳಿಂದ ನೀರು ಸೋರುವುದು. ನಿಶಕ್ತಿ, ಕಾಲುಗಳಲ್ಲಿ ಬಾವು ಹಾಗೂ ಕಂಟುವುದು. ಜಾನುವಾರುಗಳ ಚರ್ಮದ ಮೇಲೆ 2-5 ಸೆ.ಮೀ.ನಷ್ಟು ಅಗಲವಿರುವ ಗುಳ್ಳೆ ಕಾಣ ಸಿಕೊಂಡು ನಂತರ ಒಡೆದು ಗಾಯವಾಗಿ ನೋವುಂಟಾಗುತ್ತದೆ. ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ನೊಣಗಳಿಂದ ಹುಳುಗಳು ಬಿದ್ದು ಹುಣ್ಣಾಗುತ್ತದೆ. ಹಾಲಿನ ಇಳುವರಿ ಕಡಿಮೆಯಾಗುವುದು ಕೆಲಸದ ಸಾಮಥ್ರ್ಯ ಕುಂಠಿತವಾಗುತ್ತದೆ. ಕರುಗಳು ತೀವ್ರವಾಗಿ ಬಳಲಿ ಸಾವಿಗೀಡಾಗಬಹುದು. ಮಿಶ್ರತಳಿ ಜರ್ಸಿ,ಹೆಚ್.ಎಫ್. ರಾಸುಗಳು ಹಾಗೂ ಕರುಗಳು ಈ ರೋಗದಿಂದ ಹೆಚ್ಚು ಬಳಲುತ್ತವೆ. ರೋಗ ಹರಡುವಿಕೆ: ಸೊಳ್ಳೆ, ಉಣ್ಣೆ ,…

Read More