Subscribe to Updates
Get the latest creative news from FooBar about art, design and business.
- ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
- ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್ ಐ ತೀರ್ಥೇಶ್
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
- ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
- ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
- ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
- ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
- ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್ ಜಿ ಯೋಜನೆ ಜಾರಿ : ಜಿಪಂ ಸಿಇಒ
Author: admin
ಬೆಳಗಾವಿ : ನಗರದ ಚನ್ನಮ್ಮ ವೃತ್ತದಲ್ಲಿರುವ ರಾಣಿ ಚನ್ನಮ್ಮ ಪುತ್ಥಳಿಯ ಕಟ್ಟೆಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ.ತಡರಾತ್ರಿ 11.15ರ ಸುಮಾರಿಗೆ ಈ ಘಟನೆ ನಡೆದಿದೆ. ಕೊಲ್ಲಾಪುರ ವೃತ್ತದ ಕಡೆಯಿಂದ ವೇಗವಾಗಿ ಬಂದ ಲಾರಿ ಪುತ್ಥಳಿಯ ಕಟ್ಟೆಯ ಸುತ್ತಲಿರುವ ಗ್ರಿಲ್ಸ್ ಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗ್ರಿಲ್ಸ್ ಗಳು ನಜ್ಜುಗುಜ್ಜಾಗಿವೆ. ಚನ್ನಮ್ಮ ಪುತ್ಥಳಿಗೆ ಯಾವುದೇ ಹಾನಿ ಸಂಭವಿಸಿಲ್ಲ. ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಕುಟುಂಬಕ್ಕೆ ಮತ್ತೊಮ್ಮೆ ಬೆದರಿಕೆ ಬಂದಿದೆ. ಗಿರ್ಗಾಂವ್ ನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಅಂಬಾನಿ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಸೋಮವಾರ ಬೆಳಗ್ಗೆ 10.30ರ ಸುಮಾರಿಗೆ ವ್ಯಕ್ತಿ ಮೂರ್ನಾಲ್ಕು ಬಾರಿ ಫೋನ್ ಮಾಡಿ ಅಂಬಾನಿ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾನೆ. ಅದರ ನಂತರ, ಮುಂಬೈ ನಗರ ಪೊಲೀಸರು ಮಧ್ಯಪ್ರವೇಶಿಸಿ ದಹಿಸರ್ ಪ್ರದೇಶದಲ್ಲಿ ಶಂಕಿತನನ್ನು ಬಂಧಿಸಿದರು. ಪ್ರಾಥಮಿಕ ತನಿಖೆಯಿಂದ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ಹೇಳಲಾಗಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಬಾಣಸಂದ್ರದಲ್ಲಿ ಮೊನ್ನೆಯಷ್ಟೇ ಬಸ್ ಡಿಕ್ಕಿಯಾಗಿ ಮೂರು ಎಮ್ಮೆಗಳು ಸಾವನ್ನಪ್ಪಿದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮೊದಲೇ ಇದೀಗ ತುರುವೇಕೆರೆಯಿಂದ ಕೆ.ಬಿ. ಕ್ರಾಸ್ ಗೆ ಹೊರಟಿದ್ದ ತವೇರಾ ಕಾರು ಬಾಣಸಂದ್ರ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯ ಬಲಭಾಗದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಟವೇರಾ ಕಾರು ಗುದ್ದಿದ ರಬಸಕ್ಕೆ ದ್ವಿಚಕ್ರವಾಹನ ಸಂಪೂರ್ಣವಾಗಿ ನುಗ್ಗಿಜ್ಜಾಗಿದೆ ತವೇರಾ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಜಾಗದಲ್ಲಿ ರಸ್ತೆ ಹುಬ್ಬು ಇಲ್ಲದ ಕಾರಣ ವೇಗವಾಗಿ ಬಂದ ವಾಹನಗಳು ಅಪಘಾತಗಳು ನಡೆಯುತ್ತಿವೆ. ಇಂತಹ ದುರ್ಘಟನೆಗಳು ಮತ್ತೆ ಮತ್ತೆ ನಡೆಯುತ್ತಲೇ ಇರುತ್ತವೆ ಎಂದು ಸಾರ್ವಜನಿಕರು ಪಿ ಡಬ್ಲ್ಯೂ ಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತ ಇಲ್ಲಿನ ನಿವಾಸಿಗಳು, ಅಪಘಾತಗಳನ್ನು ಕಂಡು ಸಾಕಾಗಿ ಹೋಗಿದೆ. ನಿಮ್ಮ ಸುದ್ದಿ ವಾಹಿನಿಯ ಮೂಲಕವಾದರೂ ಸಂಬಂಧಪಟ್ಟ ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆಯವರಿಗೆ ಸಮಸ್ಯೆ ಮನವರಿಕೆ ಮಾಡಿ ಎಂದು ಸಾರ್ವಜನಿಕರು ನಮ್ಮತುಮಕೂರು ಪ್ರತಿನಿಧಿಯ…
ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಾಗವಿ (ಸಿದ್ದರಬೆಟ್ಟ)ಗ್ರಾಮ ಪಂಚಾಯಿತಿ ಕಚೇರಿಯ ಆವರಣದಲ್ಲಿರುವ ಧ್ವಜಸ್ಕಂಭದಲ್ಲಿ ದಿನಾಂಕ 13/08/2022 ರ ರಾತ್ರಿ 2 ಗಂಟೆಯವರೆಗೂ ರಾಷ್ಟ್ರಧ್ವಜವನ್ನು ಕೆಳಗಿಳಿಸದೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಘಟನೆ ನಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜು ಮಲ್ಲೇಕಾವು ಮಾತನಾಡಿ, ಸಿದ್ದರಬೆಟ್ಟ ಗ್ರಾಮ ಪಂಚಾಯಿತಿಯ ಕಚೇರಿ ಆವರಣದಲ್ಲಿರುವ ಧ್ವಜಸ್ತಂಭದಲ್ಲಿ ದಿನಾಂಕ 13/08/2022 ರ ಬೆಳಗ್ಗೆ ಹಾರಿಸಿದ ತ್ರಿವರ್ಣ ಧ್ವಜವನ್ನು ರಾತ್ರಿ ಇಡೀ ಕೆಳಗಿಳಿಸದೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿ ಕಾನೂನು ಉಲ್ಲಂಘನೆಯನ್ನು ಮಾಡಿರುವ ಘಟನೆ ನಡೆದಿದೆ. ರಾಷ್ಟ್ರಧ್ವಜ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ವಿಜಯ ಕುಮಾರಿ ಹಾಗೂ ಕಾರ್ಯದರ್ಶಿಗಳಾದ ನರಸಿಂಹಮೂರ್ತಿ ಮತ್ತು ಪಂಚಾಯಿತಿ ಅಧ್ಯಕ್ಷೆ ವಿನೋದ ನವೀನ್ ಕುಮಾರ್ ರವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ತಿಳಿಸಿದರು. ರಾಷ್ಟ್ರಧ್ವಜದ ವಿಚಾರವಾಗಿ ಕೇಂದ್ರ ಸರ್ಕಾರದ ಆದೇಶವನ್ನ ಗಾಳಿಗೆ ತೂರಿದ ಘಟನೆಯು ನಮ್ಮ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವಾಗಿ ಸುದ್ದಿ ಹೊರಬಂದಿತ್ತು…
ಸರಗೂರು ತಾಲ್ಲೂಕಿನ ಪಟ್ಟಣದ ಸ್ವಾಮಿ ವಿವೇಕಾನಂದ ಆಸ್ಪತ್ರೆಯಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಅಂಬೇಡ್ಕರ್ ರವರ ಭಾವಚಿತ್ರ ವನ್ನು ಇಡದೆ ಆಚರಣೆ ಮಾಡಿರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದವು. ಸರಗೂರು ತಾಲೂಕಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಂಗ ಸಂಸ್ಥೆಯಾದ ಸ್ವಾಮಿ ವಿವೇಕಾನಂದ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋ ಹಾಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಂಬೇಡ್ಕರ್ ಫೋಟೋ ಬಳಸದಿರುವ ಬಗ್ಗೆ ವಿವೇಕಾನಂದ ಆಸ್ಪತ್ರೆಯ ಅಧಿಕಾರಿಗಳು ವಿಚಾರಿಸಿದಾಗ ಸ್ವಾತಂತ್ರ್ಯ ದಿನದಂದು ನಾವು ಅಂಬೇಡ್ಕರ್ ಪೋಟೋ ಇಡುವುದಿಲ್ಲ. ಜನವರಿ 26ರಂದು ಇಡುತ್ತೀವಿ ಎಂದರಲ್ಲದೇ ನಿಮ್ಮ ಹತ್ತಿರ ಸರ್ಕಾರದ ಸುತ್ತೋಲೆ ಇದ್ದರೆ ಕೊಡಿ ಎಂದು ಉಡಾಫೆಯ ವರ್ತನೆ ತೋರಿದರು ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ವಾತಂತ್ರ್ಯೋತ್ಸವದಲ್ಲಿ ಅಂಬೇಡ್ಕರ್ ಭಾವ ಚಿತ್ರ ಬಳಸದೇ ನಿರ್ಲಕ್ಷ್ಯತನದಿಂದ ಮಾತನಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂವಿಧಾನ ಸಂರಕ್ಷಣಾ ಸಮಿತಿ ಒತ್ತಾಯಿಸಿದೆ. ಈ ವೇಳೆ ಎಸ್ ಎಲ್ ರಾಜಣ್ಣ ಶಿವಣ್ಣ ಕುಮಾರ್ ಗೊವಿಂದರಾಜು…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಳೇ ಕಡಲೆಕಾಯಿ ಮಂಡಿ, ನೆಹರು ಕ್ರೀಡಾಂಗಣದ ಒಳಗಡೆ ಇರುವ ಸಾರ್ವಜನಿಕ ಶೌಚಾಲಯದ ಹಿಂಭಾಗದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹಿರಿಯೂರು ನಗರ ಪೋಲಿಸ್ ಠಾಣೆಯ ಪಿ ಎಸ್ ಐ ಅನಸೂಯ ಹಾಗೂ ಹೊರಕೇರಪ್ಪ ಸೇರಿದಂತೆ ಸಿಬ್ಬಂದಿ ತನಿಖೆ ನಡೆಸಿ ಮೃತದೇಹವನ್ನು ಸ್ಥಳಾಂತರಿಸಿದ್ದಾರೆ. ಮೃತಪಟ್ಟ ವ್ಯಕ್ತಿ ಯಾರು ಎಂದು ತಿಳಿದು ಬಂದಿಲ್ಲ. ಸದ್ಯ ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆಗಾಗಿ ಮುಂದಿನ ತನಿಖೆ ಆರಂಭಿಸಿದ್ದಾರೆ. ವರದಿ: ಮುರುಳಿಧರನ್ ಆರ್ ಚಿತ್ರದುರ್ಗ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಧುಗಿರಿ: ಪಟ್ಟಣದ 19 ವಾರ್ಡ್ ನಲ್ಲಿ ಶಾಸಕ ಎಂ.ವಿ ವೀರಭದ್ರಯ್ಯ ನವರು ಸುಮಾರು ಎಂಟು ಲಕ್ಷದ ಮೌಲ್ಯದ ಶುದ್ಧ ನೀರಿನ ಘಟಕವನ್ನು ಉದ್ಘಾಟನೆ ಮಾಡಿದ್ದರು. ಆದರೆ ಶುದ್ಧ ನೀರಿನ ಘಟಕ ನೋಡಿಕೊಳ್ಳುವವರು ಯಾರು ಇಲ್ಲದ, ಕಾರಣ ಸುತ್ತಮುತ್ತ ನಿಂತಿರುವ ಕೊಚ್ಚೆ ನೀರು ತೊಟ್ಟಿಗೆ ಬಂದು, ಅದೇ ನೀರು ಶುದ್ಧವಾಗಿ ಬರುತ್ತಿತ್ತು. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹಣ ವೆಚ್ಚ ಮಾಡಿ ಕುಡಿಯುವ ನೀರಿನ ಘಟಕ ತೆರೆದಿದ್ದರೂ, ಕುಡಿಯಲು ನೀರು ಯೋಗ್ಯವಲ್ಲದ ಕಾರಣ ಸಾರ್ವಜನಿಕರು ಯಾರು ನೀರನ್ನೂ ಕುಡಿಯುತ್ತಿರಲಿಲ್ಲ. ಇದನ್ನು ಮನಗಂಡ ಕನ್ನಡ ಜಾಗೃತಿ ವೇದಿಕೆಯ ಪದಾಧಿಕಾರಿಗಳು ಸ್ವತಃ ಸ್ಥಳಕ್ಕೆ ಹೋಗಿ ನೀರನ್ನು ಕುಡಿದು ಪರೀಕ್ಷಿಸಿದಾಗ ನೀರು ಅಶುದ್ಧಿಯಾಗಿ ಬರುತ್ತಿರುವುದು ಕಂಡುಬಂದಿತು. ಕುಡಿಯುವ ನೀರಿನ ಘಟಕದ ದುಸ್ಥಿತಿ ಕಂಡ ಕನ್ನಡ ಜಾಗೃತಿ ವೇದಿಕೆಯ ಪದಾಧಿಕಾರಿಗಳು ನಮ್ಮ ತುಮಕೂರು ನ್ಯೂಸ್ ಗೆ ಮಾಹಿತಿ ತಿಳಿಸಿದ್ದು, ಈ ವಿಚಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸುದ್ದಿ ನಮ್ಮ ತುಮಕೂರು ನ್ಯೂಸ್ ಚಾನಲ್ ನಲ್ಲಿ ವರದಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು…
ತುಮಕೂರು: ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರುವ ಫ್ಲಕ್ಸ್’ನಲ್ಲಿದ್ದ ವೀರ ಸಾವರ್ಕರ್ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿ ವಿಕೃತಿ ಮೆರೆದಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ನಗರದ ಎಂಪ್ರೆಸ್ ಕಾಲೇಜು ಮುಂಭಾಗ ನಗರ ಶಾಸಕ ಜ್ಯೋತಿಗಣೇಶ್ ರವರು ವಿವಿಧ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರುವ ಫ್ಲೆಕ್ಸ್ ಅಳವಡಿಸಿದ್ದು, ಕಿಡಿಗೇಡಿಗಳು ಸಾವರ್ಕರ್ ರವರ ಭಾವಚಿತ್ರವಿರುವ ಫ್ಲೆಕ್ಸನ್ನು ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ. ಕಿಡಿಗೇಡಿಗಳು ಶಿವಮೊಗ್ಗದಲ್ಲಿ ನಡೆದ ಘಟನೆಯಿಂದ ಪ್ರೇರಿತಗೊಂದು ಶಾಂತಿ ಸುವ್ಯವಸ್ಥೆಯಿಂದಿರುವ ತುಮಕೂರು ನಗರದಲ್ಲಿ ವೀರ ಸಾವರ್ಕರ್ ಫೋಟೋ ಹರಿದು ಹಾಕಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮೂರು ದಿನಗಳ ಹಿಂದೆ ಫ್ಲೆಕ್ಸ್ ಹಾಕಲಾಗಿದ್ದು, ಅಂದಿನಿಂದ ಎಲ್ಲ ಫ್ಲೆಕ್ಸ್’ಗಳು ಸುಸ್ಥಿತಿಯಲ್ಲಿದ್ದವು. ಆದರೆ ಸ್ವಾತಂತ್ರ್ಯ ದಿನೋತ್ಸವದ ರಾತ್ರಿ ಕಿಡಿಗೇಡಿಗಳು ವೀರ ಸಾರ್ವಕರ್ ಭಾವಚಿತ್ರ ಇರುವ ಫ್ಲೆಕ್ಸ್ ಅನ್ನು ಮಾತ್ರ ಹರಿದು ಹಾಕಿದ್ದಾರೆ. ಈ ಕುರಿತು ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ನಾಗರೀಕರು ತೀವ್ರ ಬೇಸರ ವ್ಯಕ್ತಪಡಿದ್ದಾರೆ. ತುಮಕೂರು ನಗರ ಪೊಲೀಸ್ ಠಾಣಾ…
ತುಮಕೂರು ನಗರದ ಅಶೋಕ ರಸ್ತೆಯಲ್ಲಿನ ಎಂಪ್ರೆಸ್ ಕಾಲೇಜಿನ ಮುಂಭಾಗ ಅಳವಡಿಸಲಾಗಿದ್ದ ವೀರ ಸಾವರ್ಕರ್ ರವರ ಭಾವಚಿತ್ರವಿರುವ ಫ್ಲೆಕ್ಸ್ ಹರಿದುಹಾಕಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವುದಾಗಿ ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಎಸ್.ಪಿ. ರಾಹುಲ್ ಕುಮಾರ್ ಶಹಪುರ್ವಾಡ ತಿಳಿಸಿದ್ದಾರೆ. ಅವರು ಈ ಸಂಬಂಧ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ನಗರದ ಅಶೋಕ ರಸ್ತೆಯ ಎಂಪ್ರೆಸ್ ಕಾಲೇಜ್ ಮುಂಭಾಗ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರುವ ಫ್ಲೆಕ್ಸ್ ನಲ್ಲಿ ಅಳವಡಿಸಲಾಗಿದ್ದ ವೀರ ಸಾವರ್ಕರ್ ಅವರ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿದ್ದು ಇದು ಜನರನ್ನು ಪ್ರಚೋದನೆಗೊಳಿಸುವ ತಂತ್ರವಾಗಿದೆ. ಈಗಾಗಲೇ ಇದರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ಪ್ರಾರಂಭಿಸಲಾಗಿದೆ. ಈ ರೀತಿಯಾದೆ. ಈ ರೀತಿಯಾದ ಪ್ರಚೋದನಕಾರಿ ಕೃತ್ಯಗಳಿಂದ ಸಾರ್ವಜನಿಕರು ಪ್ರಚೋದನೆಗೊಳಗಾಗದೆ ಶಾಂತಿಯನ್ನು ಕಾಪಾಡಬೇಕು. ಒಂದು ವೇಳೆ ಪ್ರಚೋದನೆಗೊಳಗಾದರೆ ಪ್ರಚೋದಿತ ವ್ಯಕ್ತಿಗಳ ಪ್ರಯತ್ನ ಸಫಲವಾದಂತಾಗುತ್ತದೆ ಆದ್ದರಿಂದ ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿರ್ವಹಿಸುತ್ತದೆ ಹಾಗೂ ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಕೆಲಸವನ್ನು ಮಾಡುತ್ತದೆ ಎಂದು ಅವರು ತಿಳಿಸಿದರು. ಇದೇ…
ಪಾವಗಡ: ತಾಲ್ಲೂಕಿನ ಯ.ನಾ. ಹೊಸಕೋಟೆ ಹೋಬಳಿಯ ತಿಪ್ಪಯ್ಯನದುರ್ಗ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಬಿಜೆಪಿ ಮುಖಂಡ ಕೃಷ್ಣ ನಾಯ್ಕ ಬ್ಯಾಗ್ ವಿತರಣೆ ಮಾಡಿದರು. ಬಳಿಕ ಮಾತನಾಡಿದ ಕೃಷ್ಣ ನಾಯ್ಕ ಅವರು, ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಬಡ ವಿದ್ಯಾರ್ಥಿಗಳು ಆಗಿರುತ್ತಾರೆ ಎಂದು ತಿಳಿದು ಈ ಬ್ಯಾಗ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಉಮೇಶ್, ಬಿಜೆಪಿ ಮಂಡಲ ಅಧ್ಯಕ್ಷ ರವಿಶಂಕರ್ ನಾಯ್ಕ, ಮಂಡಲ ಉಪಾಧ್ಯಕ್ಷ ನಾರಾಯಣಪ್ಪ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಅಶೋಕ್, ರೈತ ಮೋರ್ಚಾ ಅಧ್ಯಕ್ಷ ಕೋಟೆಶ್ವರ್ ರೆಡ್ಡಿ, ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ರವಿ ನಾಯ್ಕ ಮತ್ತು ಪ್ರಸಾದ್ ಬಾಬು, ಯುವ ಮುಖಂಡ ವಸಂತ್ ನಾಯ್ಕ, ಬಿಜೆಪಿ ಕಾರ್ಯಕರ್ತ ಹರೀಶ್ ನಾಯ್ಕ ಹಾಗೂ ಊರಿನ ಗ್ರಾಮಸ್ಥರು ಹಾಜರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…