Subscribe to Updates
Get the latest creative news from FooBar about art, design and business.
- ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
- ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
- ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
- ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
- ಭೂಕಂಪನದ ಅನುಭವ: ಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ
- ರಾಹುಲ್ ಗಾಂಧಿ ಅವರಿಗೆ ಕಾಮನ್ ಸೆನ್ಸ್ ಇಲ್ಲ: ಆರ್.ಅಶೋಕ್ ವಾಗ್ದಾಳಿ
- ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
- ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
Author: admin
ಭಾರತದಲ್ಲಿ ಹೊಸದಾಗಿ 3,47,254 ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 3,85,66,027ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಗ್ಗೆ ತಾಜಾ ಮಾಹಿತಿ ನೀಡಿದೆ. ಈ ಪೈಕಿ 9,692 ಓಮಿಕ್ರಾನ್ ರೂಪಾಂತರಿ ಪ್ರಕರಣಗಳು ಸೇರಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 20,18,825ಕ್ಕೇರಿದೆ. ಇದು 235 ದಿನಗಳಲ್ಲೇ ಅತ್ಯಕ ಪ್ರಮಾಣವಾಗಿದೆ. ಕಳೆದ 24 ಗಂಟೆಗಳಲ್ಲಿ 703 ಮಂದಿ ಕೋವಿಡ್ಗೆ ಬಲಿಯಾಗುವುದರೊಂದಿಗೆ ಒಟ್ಟಾರೆ ಕೋವಿಡ್ ಮರಣಗಳ ಪ್ರಮಾಣ 4,88,396ಕ್ಕೆ ತಲುಪಿದೆ. ಗುರುವಾರದಿಂದೀಚೆಗೆ ಓಮಿಕ್ರಾನ್ ಪ್ರಕರಣಗಳಲ್ಲಿ ಶೇ.4.36ರಷ್ಟು ಹೆಚ್ಚಳವಾಗಿದೆ ಎಂದು ಸಚಿವಾಲಯ ತಿಳಿಸಿದೆ. ಒಟ್ಟಾರೆ ಸೋಂಕಿನ ಪ್ರಕರಣಗಳಲ್ಲಿ ಶೇ.5.23ರಷ್ಟು ಸಕ್ರಿಯ ಪ್ರಕರಣಗಳಿವೆ.ರಾಷ್ಟ್ರೀಯ ಕೋವಿಡ್-19 ಚೇತರಿಕೆ ಪ್ರಮಾಣ ಶೇ.93.50ಕ್ಕೆ ಇಳಿದಿದೆ ಎಂದು ಸಚಿವಾಲಯ ಹೇಳಿದೆ. ಕಳೆದ ಒಂದು ದಿನದಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ 94,774ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವಿವರಿಸಿದೆ. ವರದಿ : ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು, ಮಾಜಿ ಸಚಿವ ಡಿ.ಸುಧಾಕರ್ ಅವರು ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಈ ವೇಳೆ ಪಕ್ಷ ಸಂಘಟನೆ ಹಾಗೂ ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆ ಮತ್ತು ಸದಸ್ಯತ್ವ ನೋಂದಾವಣೆ ಕಾರ್ಯಕ್ರಮದ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಸಂಸದರು ಹಾಗೂ ಕೆ.ಪಿ.ಸಿ.ಸಿ. ಕಾರ್ಯಧ್ಯಕ್ಷರಾದ ದೃವನಾರಾಯಣ್ ಹಾಗೂ ಹಿರಿಯೂರು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಖಾದಿ ರಮೇಶ್ ರವರು ಉಪಸ್ಥಿತರಿದ್ದರು. ವರದಿ: ಮುರುಳಿಧರನ್ ಆರ್. ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರು ನಿರ್ವಾಣ ಹೊಂದಿ ಇವತ್ತಿಗೆ ಮೂರು ವರ್ಷಗಳು ತುಂಬಿದವು. ಮೂರು ವರ್ಷಗಳ ಹಿಂದೆ ಅವರು ನಿರ್ವಾಣ ಹೊಂದಿದ ದಿನದಂದು ನಾನು ಬರೆದಿದ್ದ ಹಳೆಯ ಲೇಖನವನ್ನು ಮತ್ತೊಮ್ಮೆ ಹಂಚಿಕೊಳ್ಳುತ್ತಿದ್ದೇನೆ. ನಾನು ತುಮಕೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಆಂಗ್ಲ ಸಾಹಿತ್ಯದ ವಿದ್ಯಾರ್ಥಿಯಾಗಿ ಬಿಎ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ದಿನಗಳು. ಸಿದ್ಧಗಂಗಾ ಮಠದಲ್ಲಿ ಆಗಾಗ ನಡೆಯುತ್ತಿದ್ದ ಶಿವಾನುಭವ ಗೋಷ್ಠಿಗಳಲ್ಲಿ ಪಾಲ್ಗೊಂಡು ಶ್ರೀ ಶಿವಕುಮಾರ ಸ್ವಾಮೀಜಿಯವರನ್ನು ತುಂಬಾ ಹತ್ತಿರದಿಂದ ಕಂಡುಂಡ ಕೆಲವು ಅನುಭವಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿಚ್ಚಿಸುತ್ತೇನೆ. ಶ್ರೀಮಠದ ಹಳೆಯ ಕಲ್ಯಾಣಿ ದಂಡೆಯ ರೂಮಿನಲ್ಲಿ ನನ್ನ ಆತ್ಮೀಯ ಗೆಳೆಯರಾದ ಎಚ್.ಎನ್.ವೆಂಕಟೇಶ್, ಡಿಸ್ಕೋ ಮಲ್ಲಿಕಾರ್ಜುನ, ಶಂಭುಲಿಂಗಯ್ಯ, ಶಿವಶಂಕರ್, ಶಾಂತರಾಜು ಮುಂತಾದ ಮಠದ ವಿದ್ಯಾರ್ಥಿಗಳ ಸಹವಾಸದಿಂದಾಗಿ ನನಗೂ ಶ್ರೀಮಠಕ್ಕೂ ತುಂಬಾ ನಿಕಟ ಬಾಂಧವ್ಯ ಏರ್ಪಟ್ಟಿತು. ಸರ್ಕಾರಿ ಕಲಾ ಕಾಲೇಜಿನ, ಬೆಂಗಳೂರು ಗೇಟಿನ ಸೆಕೆಂಡ್ ಹಾಸ್ಟೆಲಿನಲ್ಲಿ ನಿಲಯಾರ್ಥಿಯಾಗಿದ್ದ ನಾನು, ದಲಿತ ವಿದ್ಯಾರ್ಥಿ ಒಕ್ಕೂಟದ ನಾಯಕನಾಗಿದ್ದೆ. ನಮಗಾಗ ಬೇಸಿಗೆ ರಜೆ ಬಂತೆಂದರೆ ಹಾಸ್ಟೆಲ್ ನಿಲ್ಲಿಸಿಬಿಡುತ್ತಿದ್ದರು. ಹಾಸ್ಟೆಲ್ ನಿಲ್ಲಿಸಿದರೆಂದರೆ ನಿಲಯಾರ್ಥಿಗಳಿಗೆ…
ತಿಪಟೂರು: ಶುಂಠಿ ಸಾಗಿಸುತ್ತಿದ್ದ ಲಾರಿಯೊಂದು ಮಗುಚಿ ಬಿದ್ದ ಘಟನೆ ಗುರುವಾರ ತಡರಾತ್ರಿ 10 ಗಂಟೆಯ ವೇಳೆಗೆ ಇಲ್ಲಿನ ತಡಸೂರು ಗೇಟ್ ಬಳಿ ನಡೆದಿದೆ. ಹಾಸನ ಮಾರ್ಗವಾಗಿ ಬರುತ್ತಿದ್ದ ಲಾರಿ ತಡಸೂರು ಗೇಟ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಲಾರಿ ನೆಲಕ್ಕುಳಿದ ಪರಿಣಾಮ ಲಾರಿಯಲ್ಲಿದ್ದ ಶುಂಠಿ ನೆಲಕ್ಕೆ ಉರುಳಿದೆ. ಅಕ್ಕಪಕ್ಕದಲ್ಲಿ ಯಾವುದೇ ವಾಹನಗಳು ಇಲ್ಲದ ಕಾರಣ ಸಂಭವಿಸಬಹುದಾಗಿದ್ದ ಅಪಾಯ ತಪ್ಪಿದಂತಾಗಿದೆ. ವರದಿ: ಮಂಜು ಗುರುಗದಹಳ್ಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧುಗಿರಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ತಾಲೂಕಿನ ಅಲೆಮಾರಿ ಅರೆ ಅಲೆಮಾರಿ ಸಮುದಾಯದವರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಮಧುಗಿರಿಯಲ್ಲಿ ನಡೆಯಿತು. ಹೊಸಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ ಶ್ರೀ ರಂಗನಾಥ ಡಿ., ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಕುಮಾರ್ ಹಾಗೂ ಹೊಸಕೆರೆ ಗ್ರಾ. ಪಂ.ನ ಎಲ್ಲಾ ಸದಸ್ಯರು ಮತ್ತು ಮಾಜಿ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿಗಳಾದ ಕೆ.ಎಂ.ಜಯರಾಮ್, ಸಿಬ್ಬಂದಿಗಳಾದ ಓಬಳೇಶ ಎನ್., ರಾಮಮೋಹನ್ ಎಂ.ಎನ್. ನವೀನ್ ಕುಮಾರ್ ಹೆಚ್.ಬಿ., ಸಣ್ಣಪ್ಪ ಲಕ್ಷ್ಮೀ ರಂಗನಾಥ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹೇಶ್ (ACDPO) ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಸಾರ್ಥವಳ್ಳಿ ಪ್ರಾಥಮಿಕ ಕೃಷಿ ಸಹಕಾರಿ ನಿಯಮಿತದಲ್ಲಿ ಕೋಟ್ಯಂತರ ರೂ.ಗಳ ದುರ್ಬಳಕೆಯಾಗಿದೆ ಎಂದು ಆಡಳಿತ ಮಂಡಳಿಯ ನಿರ್ದೇಶಕ ನಾಗರಾಜ್, ಪ್ರಕಾಶ್ ಯಾದವ್ ಉಪಾಧ್ಯಕ್ಷ ವಿನಯ್ ಅವರ ಆರೋಪವು ಸತ್ಯಕ್ಕೆ ದೂರವಾದದ್ದು ಎಂದು ನಿಯಮಿತದ ಅಧ್ಯಕ್ಷ ಅಮರ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಸಭೆಯನ್ನು ಆಡಳಿತ ಮಂಡಳಿಯ ಆದೇಶದಂತೆ ಮತ್ತು ಸಹಕಾರ ಇಲಾಖೆಯ ಅನುಮತಿ ಕೋರಿ ಕಲ್ಕೆರೆಯಲ್ಲಿ ಮಹಾಸಭೆಯನ್ನು ಆಯೋಜಿಸಿದ್ದು, ನಿಯಮ ಉಲ್ಲಂಘನೆ ಮಾಡಿಲ್ಲ. ಕೋಟ್ಯಂತರ ಹಗರಣದ ಬಗ್ಗೆ ಮಾತನಾಡಿರುವ ನಿರ್ದೇಶಕರುಗಳು ದಾಖಲೆ ಸಮೇತ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು. ಹಿಂದಿನ ಕಾರ್ಯದರ್ಶಿಗಳ ಅವಧಿಯಲ್ಲಿ ನಡೆದ ವಿಚಾರವಾಗಿ ತನಿಖೆ ನಡೆಯುತ್ತಿದೆ. ಸಿಇಓ ಒಬ್ಬ ಮಹಿಳೆಯಾಗಿದ್ದು,ನಿರಂತರ ದಬ್ಬಾಳಿಕೆ ಮತ್ತು ದೌರ್ಜನ್ಯ ಎಸಗುತ್ತಿದ್ದಾರೆ ಹಾಗೂ ಮುಂದಿನ ಸಭೆಯಲ್ಲಿ ಚರ್ಚಿಸಿ, ಇವರುಗಳ ಮೇಲೆ ಕ್ರಮ ಜರುಗಿಸಲು ಕಾನೂನು ಹೋರಾಟ ಮತ್ತು ಸಹಕಾರ ಇಲಾಖೆಗೆ ಪತ್ರ ಬರೆಯುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕರಾದ…
ತುಮಕೂರು: ಬಂಜಾರ ಭವನದಲ್ಲಿ ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ವಲಯ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಕಲಾ ಮೇಳ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಡಾ.ರಮೇಶ್ ನಾಯ್ಕ್, ಬಂಜಾರ ಸಮುದಾಯದ ಆಚಾರ-ವಿಚಾರ ನಡೆ-ನುಡಿ ಉಡುಗೆ-ತೊಡುಗೆಗಳು ಬೇರೊಂದು ಸಮಾಜಕ್ಕಿಂತ ಯಾವುದಕ್ಕೂ ಕಡಿಮೆಯಿಲ್ಲ ಹೇಳಿದರು. ಕಾರ್ಯಕ್ರಮದಲ್ಲಿ ಲೋಹಿತಬಾಯಿ ಗುರುನಾಥ್ ನಾಯ್ಕ್, ಮೋಹನ್ ಕುಮಾರ್ ಸೇರಿದಂತೆ ಬೇರೆ ಜಿಲ್ಲೆಯ ತೀರ್ಪುಗಾರರು, ಹಲವಾರು ತಾಲ್ಲೂಕು ಮಟ್ಟದ ಕಲಾವಿದರು ಹಾಜರಿದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿತ್ರದುರ್ಗ: ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಹಾಗೂ ಚಿತ್ರದುರ್ಗ ತಾಲ್ಲೂಕು ಅಲ್ಪಸಂಖ್ಯಾತರ ಘಟಕದ ವತಿಯಿಂದ ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರ ರಸ್ತೆಯ ಸಿದ್ಧಾಪುರ ಗ್ರಾಮದಲ್ಲಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಊಟದ ತಟ್ಟೆ ಮತ್ತು ನೀರಿನ ಲೋಟ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಚಿತ್ರದುರ್ಗ ಜಿಲ್ಲೆಯ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯಾಧ್ಯಕ್ಷ ಡಾ.ಆರ್.ಕೋದಂಡರಾಮ್.M.B.A. ಅವರ ಮಾರ್ಗದರ್ಶನದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಪದಾಧಿಕಾರಿಗಳು ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಅಧ್ಯಕ್ಷರಾದ ರಾಮಚಂದ್ರ ಕೆ., ಜಿಲ್ಲಾ ಗೌರವ ಅಧ್ಯಕ್ಷರಾದ ತಿಪ್ಪೇಸ್ವಾಮಿ ಪಿ.ಎಮ್., ಜಿಲ್ಲಾ ಕಾರ್ಯದರ್ಶಿ ಟಿ.ಸಿ.ಚಂದ್ರಣ್ಣ, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷರಾದ ಮೊಹಮ್ಮದ್ ರಫಿ, ಚಿತ್ರದುರ್ಗ ತಾಲ್ಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ದಾದಾಪೀರ್.ಎಸ್., ತಾಲ್ಲೂಕು ಉಪಾಧ್ಯಕ್ಷರಾದ ದುರ್ಗೇಶ್ ಮತ್ತಿತರರು ಉಪಸ್ಥಿತರಿದ್ದರು. ವರದಿ: ಮುರುಳಿಧರನ್ ಆರ್., ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಗುಬ್ಬಿ: ಸಿ.ಎಸ್.ಪುರ ನಾಡ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಜರುಗಿತು. ಕಾರ್ಯ ಕ್ರಮದ ಕುರಿತು ಪ್ರತಿಕ್ರಿಯೆ ನೀಡಿದ ನಾಡ ಕಛೇರಿಯ ಉಪತಹಶೀಲ್ದಾರ್ ಮುತ್ತುರಾಜ್ , ಕಂದಾಯ ಇಲಾಖೆ ಹಾಗೂ ಪಿಂಚಣಿ ನಿರ್ದೇಶನಾಲಯದ ಆದೇಶದಂತೆ ಜನತೆಯ ಮನೆ ಬಾಗಿಲಿಗೆ ಸೇವೆ ನೀಡುವ ಉದ್ದೇಶದಿಂದ ಪಿಂಚಣಿ ಅದಾಲತ್ ಕಾರ್ಯಕ್ರಮ ಮಾಡಲಾಗುತ್ತಿದ್ದು, ನಮ್ಮ ಕಂದಾಯ ಇಲಾಖೆಯ ಅಧಿಕಾರಿಗಳೇ ವಯೋವೃದ್ದರ ಮನೆ ಬಾಗಿಲಿಗೆ ತೆರಳಿ ಸಂಬಂಧ ಪಟ್ಟ ವಯಸ್ಸಿನ ದೃಢೀಕರಣ ಪಡೆದು ಮೊಬೈಲ್ ಆಪ್ ಮೂಲಕ ದಾಖಲೆ ಕ್ರೋಢೀಕರಿಸಿ ಅರ್ಹ ಫಲಾನುಭವಿಗಳಿಗೆ ಸ್ಥಳದಲ್ಲಿ ಪಿಂಚಣಿ ಮಂಜೂರಾತಿ ಪತ್ರಗಳನ್ನು ವಿತರಣೆ ಮಾಡುತ್ತಾರೆ ಎಂದರು. ಸಾರ್ವಜನಿಕ ಮತ್ತು ವಯೋವೃದ್ದರು ಇನ್ನೂ ಮುಂದೆ ಕಛೇರಿಗಳಿಗೆ ಭೇಟಿ ನೀಡುವ ಮತ್ತು ದಾಖಲೆ ಒದಗಿಸುವ ತೊಂದರೆ ತಪ್ಪಲಿದ್ದು, ನಮ್ಮ ಹೋಬಳಿಯ ಕಂದಾಯ ಇಲಾಖೆ ಗ್ರಾಮಲೆಕ್ಕಾಧಿಕಾರಿಗಳು ಆಯಾ ವೃತ್ತಗಳಿಗೆ ಭೇಟಿ ನೀಡಿ ಸರ್ಕಾರದ ಈ ಯೋಜನೆಯನ್ನು ಅನುಷ್ಠಾನಗೊಳಿಸಲಿದ್ದಾರೆ ಎಂದು ತಿಳಿಸಿದರು. ಈ ವೇಳೆಯಲ್ಲಿ ಕೆಲ ಹೋಬಳಿಯ ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಆದೇಶ ಪತ್ರವನ್ನು ವಿತರಣೆ ಮಾಡಿದರು.…
ಮಾಯಸಂದ್ರ: 2022ನೇ ವರ್ಷದ ಮೊದಲ ಮಾಯಸಂದ್ರ ಗ್ರಾಮ ಸಭೆಯನ್ನು ಮಾಯಸಂದ್ರ ಗ್ರಾ.ಪಂ. ಆವರಣದಲ್ಲಿ ನಡೆಸಲಾಯಿತು. ಸಭೆಯಲ್ಲಿ ಗ್ರಾಮ ನೈರ್ಮಲ್ಯ, ನೀರು ಸರಬರಾಜು ಮತ್ತು ಮೀಟರ್ ಅಳವಡಿಕೆ, ವಿದ್ಯುತ್ ಸಂಪರ್ಕ ಹಾಗೂ ಇತರೆ ಮೂಲಭೂತ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಮಂಗಳ ಗೌರಮ್ಮ ಹೊನ್ನಪ್ಪ ವಹಿಸಿದ್ದರು. ಸಭೆಯಲ್ಲಿ ಗ್ರಾಮ ಪಂಚಾಯತ್ ನ PDO ಶ್ರೀನಿವಾಸ ಮೂರ್ತಿ, ಸೆಕ್ರೆಟರಿ ಸುರೇಶ್’, ಗ್ರಾ.ಪಂ. ಸದಸ್ಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು. ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy