Author: admin

ನಗರದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ‌ ಮಾಡುತ್ತಿದ್ದ ಯುವತಿಯೊಬ್ಬರನ್ನು ಆಕೆಯದಲ್ಲದ ತಪ್ಪಿಗೆ ಕೋಮು ವಿವಾದಕ್ಕೆ ಎಳೆದು ಸುಖಾಸುಮ್ಮನೆ ಆರೋಪಿಸಿ ಅನಗತ್ಯ ಗೊಂದಲ ಎಬ್ಬಿಸಿದ ಕಾರಣ, ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಆಕೆಯ ಮನೆಗೆ ನೆನ್ನೆ ತಡರಾತ್ರಿ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ ಸಾಂತ್ವನಿಸಿ ಧೈರ್ಯ ತುಂಬಿದ್ದಾರೆ. ಕೆಳಮಧ್ಯಮ ಕುಟುಂಬದ, ಮನೆಯ ಆಧಾರ ಸ್ಥಂಭವಾದ ಯುವತಿ ಹೊಂದಿದ್ದ ಭವಿಷ್ಯದ ಕುರಿತಾದ ಆತಂಕ, ತನ್ನದಲ್ಲದ ತಪ್ಪಿಗೆ ಎದುರಿಸಬೇಕಾದ‌ ಪರಿಣಾಮಗಳ ಬಗೆಗಿನ‌ ಭಯದ ಕುರಿತು ಆಕೆಗೆ ಧೈರ್ಯ ತುಂಬಿದ ಸುರೇಶ್ ಕುಮಾರ್, ಆಕೆಯೊಂದಿಗೆ ತಾವಿದ್ದೇವೆಂಬ ಭರವಸೆ ತುಂಬಿದ್ದಾರೆ. ಸಂಬಂಧಪಟ್ಟವರೊಂದಿಗೆ ಸ್ಥಳದಲ್ಲೇ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಆಕೆಗೆ ಅನ್ಯಾಯ ಆಗಬಾರದು ಎಂದು ತಿಳಿಹೇಳಿ, ಆಕೆಗೆ ತಮ್ಮ ಸಂಪೂರ್ಣ ಸಹಕಾರದ ಮಾರ್ಗದರ್ಶನವನ್ನೂ ನೀಡಿದ್ದಾರೆ. “ತಪ್ಪು ಗ್ರಹಿಕೆ ಹಾಗೂ ಸಮೂಹಸನ್ನಿಯಿಂದ ಅಮಾಯಕರ ಜೀವನ ಹೇಗೆ ಸಂಪೂರ್ಣ ನಲುಗಿ  ಹೋಗುತ್ತದೆ ಎಂಬುದಕ್ಕೆ ಈ ಶಿಕ್ಷಕಿಯ ಕುಟುಂಬವೇ ಸಾಕ್ಷಿ” ಎಂದು ಸುರೇಶ್ ಕುಮಾರ್ ವಿಷಾದ ವ್ಯಕ್ತ‌ಪಡಿಸಿದ್ದಾರೆ. ಸಾಮಾಜಿಕ‌ ಜಾಲತಾಣದಲ್ಲಿನ…

Read More

ಹಿಜಾಬ್ ಸಂಬಂಧ ಹೈಕೋರ್ಟ್ ಆದೇಶ ಪಾಲಿಸಿ ಇಲ್ಲವೆ ಶಿಸ್ತುಕ್ರಮ ಎದುಸಬೇಕಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಖಡಕ್ ಸಂದೇಶ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ಆದೇಶ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಯಾರದೋ ಚಿತಾವಣೆಯಿಂದ ವಿದ್ಯಾರ್ಥಿನಿಯರು ವಿವಾದ ಮಾಡುತ್ತಿದ್ದಾರೆ. ಘಟನೆ ಸಂಬಂಧ ಇದುವರೆಗೂ ಮೃದುಧೋರಣೆ ತಳೆಯಲಾಗಿತ್ತು. ಇನ್ನು ಮುಂದೆ ಮುಲಾಜಿಲ್ಲದೆ ಕಾನೂನು ರೀತಿ ಕ್ರಮ ಜರುಗಿಸುತ್ತೇವೆ ಎಂದು ಗೃಹ ಸಚಿವರು ಕಠಿಣ ಎಚ್ಚರಿಕೆ ನೀಡಿದರು. ಕೋರ್ಟ್ ಆದೇಶ ಮತ್ತು ಸಂವಿಧಾನವನ್ನು ಮಾನ್ಯ ಮಾಡುವುದು ದೇಶದ ಎಲ್ಲ ನಾಗರಿಕರ ಕರ್ತವ್ಯ. ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಲೇಬೇಕು. ಯಾವುದೇ ಕಾರಣಕ್ಕೂ ಆದೇಶ ಉಲ್ಲಂಘನೆ ಸಹಿಸುವುದಿಲ್ಲ. ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆಯಿಂದ ಶಾಲಾ-ಕಾಲೇಜು ಆರಂಭವಾಗಿವೆ. ಎಲ್ಲೂ ಗೊಂದಲ ಇಲ್ಲ ಎಂದು ಹೇಳಿದ ಅವರು, ಇಂದು ಬೆಳಗ್ಗೆ ಮೂರ್ನಾಲ್ಕು ಕಡೆ ಗೊಂದಲವಾಗಿತ್ತು. ಸ್ಥಳೀಯ ಆಡಳಿತ, ಜಿಲ್ಲಾಡಳಿತ, ಕಾಲೇಜು ಆಡಳಿತ ಮಂಡಳಿ ಮನವರಿಕೆ ಮಾಡಿಕೊಟ್ಟು…

Read More

ಇಂದು ಬೆಳಗ್ಗೆ ಕಾಶ್‍ಮೀರ ಕಣಿವೆಯಲ್ಲಿ ಲಘು ಭೂಕಂಪ ಸಂಭವಿಸಿದೆ. ಆದರೆ, ಯಾವುದೇ ಹಾನಿ ಉಂಟಾದ ಬಗ್ಗೆ ವರದಿಯಾಗಿಲ್ಲ. ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆ ದಾಖಲಾಗಿದ್ದ ಭೂಕಂಪ ಇಂದು ಬೆಳಗ್ಗೆ ಸುಮಾರು 5.43ರಲ್ಲಿ ಸಂಭವಿಸಿತು ಎಂದು ವಿಪತ್ತು (ವಿಕೋಪ) ನಿರ್ವಹಣಾ ಪ್ರಾಕಾರದ ಅಕಾರಿಯೊಬ್ಬರು ತಿಳಿಸಿದರು. ಜಮ್ಮು-ಕಾಶ್ಮೀರದ ಪಹಲ್ಗಾಂನ ದಕ್ಷಿಣ-ನೈಋತ್ಯಕ್ಕೆ 15ಕಿ.ಮೀ.ಗಳಷ್ಟು ದೂರದಲ್ಲಿ ಭೂಕಂಪ ಕೇಂದ್ರ ಇತ್ತು. 16 ಕಿ.ಮೀ.ಗಳಷ್ಟು ಆಳದಲ್ಲಿ ಭೂಮಿ ಕಂಪಿಸಿದೆ ಎಂದು ಅವರು ನುಡಿದರು. ಪಹಲ್ಗಾಮ್ ಅಮರನಾಥ ಯಾತ್ರೆಯ ಮೂಲ ಶಿಬಿರವಾಗಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ರಾಜಧಾನಿಯಿಂದ ಹಲವು ಜಿಲ್ಲೆ ಹಾಗೂ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಫ್ಲೈ ಓವರ್ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಇಂದು ಲಘು ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. ತುಮಕೂರು ರಸ್ತೆಯ ಫ್ಲೈ ಓವರ್‍ನಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ವಾಹನಗಳ ಸಂಚಾರ ನಿಷೇಧಿಸಲಾಗಿತ್ತು.ದುರಸ್ತಿ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದಿನಿಂದ ಲಘು ವಾಹನಗಳಾದ ದ್ವಿಚಕ್ರ ವಾಹನಗಳು, ಆಟೊ, ಕಾರುಗಳು ಫ್ಲೈ ಓವರ್ ಮೇಲೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಭಾರೀ ವಾಹನಗಳ ಸಂಚಾರವನ್ನು ನಿರ್ಬಂಸಲಾಗಿದೆ. ಲಾರಿ, ಬಸ್, ಟಿಪ್ಪರ್ ಸೇರಿದಂತೆ ಇತರೆ ಭಾರೀ ವಾಹನಗಳು ಪಕ್ಕದ ಸರ್ವೀಸ್ ರಸ್ತೆಯಲ್ಲೇ ಸಾಗಬೇಕು.ಭಾರೀ ವಾಹನಗಳ ಸಂಚಾರಕ್ಕೆ ಫ್ಲೈ ಓವರ್ ಸುರಕ್ಷಿತವಲ್ಲ ಎಂದು ತಜ್ಞರು ವರದಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಹೆವಿ ವೆಹಿಕಲ್ಸ್‍ಗಳ ಸಂಚಾರ ಹೊರತುಪಡಿಸಿ ಲಘು ವಾಹನಗಳ ಓಡಾಟಕ್ಕೆ ಮಾತ್ರ ಅನುವು ಮಾಡಿಕೊಡಬಹುದು ಎಂದು ತಿಳಿಸಲಾಗಿತ್ತು. ದುರಸ್ತಿ ಕಾರ್ಯದಿಂದ ಕೆಲ ದಿನಗಳಿಂದ ಈ ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರು ಹಾಗೂ ವಾಹನ ಸವಾರರು ಟ್ರಾಫಿಕ್ ಜಾಮ್‍ನಿಂದಾಗಿ ತೊಂದರೆಗೊಳಗಾಗಿದ್ದರು.…

Read More

ತಿಪಟೂರು: ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿಗಳು ನಾಡಿನ ಕಾಯಕ ಯೋಗಿಗಳು ತಮ್ಮ ಅವಿರತ ಕಾಯಕ ತಪಸ್ಸಿನ ಮೂಲಕ ತರಳಬಾಳು ಮಠದ ಅಭಿವೃದ್ದಿಗೆ ಅವಿರತವಾಗಿ ಶ್ರಮಿಸಿದ್ದಾರೆ ಎಂದು ಸಾಧು ವೀರಶೈವ ಸಮಾಜದ ಕಾರ್ಯದರ್ಶಿ ವೀರಭದ್ರಪ್ಪ ತಿಳಿಸಿದರು  ತಾಲ್ಲೂಕಿ ಹಾಲ್ಕುರಿಕೆ ಗ್ರಾಮದ  ತರಳಬಾಳು  ಹಾಲ್ಕುರಿಕೆ ಸಂಸ್ಥಾನ  ಮಠದ ಆವರಣದಲ್ಲಿ  ಶ್ರೀ ತರಳಬಾಳು ಬೃಹನ್ಮಠದ ಚರಪಟ್ಟಾಧ್ಯಕ್ಷರಾದ ಲಿಂಗೈಕ್ಯ ಶ್ರೀ  ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ಅವರ 14ನೇ ವರ್ಷದ ಪುಣ್ಯಸ್ಮರಣೆ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ  ಮಾತನಾಡಿದ ಅವರು,  ಕಾಯಕ ಯೋಗಿ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ಹಾಲ್ಕುರಿಕೆ ತರಳಬಾಳು ಶಾಖಾಮಠದ ಅಭಿವೃದ್ದಿಯಲ್ಲಿ ಶ್ರಮಿಸಿ ವಿದ್ಯಾದಾನ ಮಾಡುವ ಮೂಲಕ ಈ ಭಾಗದ ಜ್ಞಾನಗಂಗೆಯಾಗಿದ್ದಾರೆ ಎಂದರು. ರಾಜ್ಯದ ಮೂಲೆ ಮೂಲೆಗಳಿಗೆ ಸಂಚರಿಸಿ ಮಠದ ಬೆಳವಣಿಗೆಗೆ ಕಾರಣೀಭೂತರಾಗಿದ್ದಾರೆ ಬರದ ನಾಡಾಗಿದ ಹಾಲ್ಕುರಿಕೆಯಲ್ಲಿ ಶಾಲಾ ಕಾಲೇಜುಗಳನ್ನ ತೆರೆಯುವ ಮೂಲಕ ವಿಧ್ಯಾರ್ಥಿಗಳ ಬಾಳಿನಲ್ಲಿ ಬೆಳಕಾಗಿದ್ದಾರೆ ಅವರ ಚಿಂತನೆಯ ಸದಾಚಾರದಲ್ಲಿ ಭಕ್ತರು ಬದುಕ ಬೇಕು  ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಗಂಗಾಧರಪ್ಪ. ಸಾಧು ವೀರಶೈವ ಸಮಾಜ …

Read More

ಮಾಯಸಂದ್ರ: ಕನ್ನಡದ ಸಮನ್ವಯಗಳ ಕವಿ, ಸುನೀತಗಳ ಸಾಮ್ರಾಟ್ ಎಂದೇ ಹೆಸರುವಾಸಿಯಾಗಿದ್ದ ನಾಡೋಜ ಡಾ. ಚೆನ್ನವೀರಕಣವಿಯವರ ನಿಧನ, ಕರ್ನಾಟಕ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.ಇಂದು ಮಾಯಸಂದ್ರದ ಕನ್ನಡ ಭವನದಲ್ಲಿ ಚೆನ್ನವೀರ ಕಣವಿಯವರ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಜೂನ್ 28, 1928ರಂದು ( 93 ವರ್ಷಗಳು ) ಗದಗ ಜಿಲ್ಲೆಯ ಹೊಂಬಳದಲ್ಲಿ ಜನಿಸಿದ ಕಣವಿಯವರು, ಜೀವಧ್ವನಿ, ಭೂಮಿ ಬದುಕು ಸೇರಿದಂತೆ ಅನೇಕ ಪುಸ್ತಕಗಳನ್ನು ರಚಿಸಿದ್ದರು. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ,ಪಂಪ ಪ್ರಶಸ್ತಿ , ನಾಡೋಜ ಪ್ರಶಸ್ತಿ , ಕರ್ನಾಟಕ ಕವಿರತ್ನ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳ ಸರಮಾಲೆಯೇ ಲಭಿಸಿದೆ ಎಂದು ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು. ಶ್ರದ್ಧಾಂಜಲಿ ಸಭೆಯಲ್ಲಿ ಕ.ಸಾ.ಪ ತುರುವೇಕೆರೆ ಘಟಕದ ಮಹಾಪೋಷಕರಾದ ಎನ್.ಆರ್.ಜಯರಾಮ್,  ಕ.ಸಾ.ಪ ಮಾಯಸಂದ್ರ ಘಟಕದ ನೂತನ ಅಧ್ಯಕ್ಷರಾದ ಜವರೇಗೌಡ, , ಶಿಕ್ಷಕರಾದ ಶ್ರೀಧರ ಮೂರ್ತಿ, CP ಪ್ರಕಾಶ್, ಶಿವಲಿಂಗಯ್ಯ, P.ಹನುಮಂತಯ್ಯ, ರಾಧಾಕೃಷ್ಣ , ಮುನಿರಾಜು ಮತ್ತಿತರರು ಭಾಗವಹಿಸಿದ್ದರು.  ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ಮಧುಗಿರಿ: ಕಸಬಾ ಹೋಬಳಿ ಡಿ.ವಿ ಹಳ್ಳಿ ಪಂಚಾಯಿತಿಯ ಅಧ್ಯಕ್ಷರಾಗಿದ್ದ ಗಂಗಮ್ಮ ಎಂ.ಜಿ ಗೋಪಾಲಯ್ಯ ಮತ್ತು ಉಪಾಧ್ಯಕ್ಷರಾದ ಶಿವಕುಮಾರಸ್ವಾಮಿ ಅವರ ತೆರವುಗೊಂಡ  ಸ್ಥಾನಕ್ಕೆ ಉಳಿದ ಅವಧಿಗೆ ಪಂಚಾಯಿತಿಗೆ ಅಧ್ಯಕ್ಷ ಸ್ಥಾನಕ್ಕೆ ಅಧ್ಯಕ್ಷ ಉಪಾಧ್ಯಕ್ಷರನ್ನು  ಅವಿರೋಧವಾಗಿ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ರವಿಕುಮಾರ್ ಹಾಗೂ ಉಪಾಧ್ಯಕ್ಷರಾಗಿ ವೇಣುಗೋಪಾಲ್ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ಕಮಲಮ್ಮ ನೂತನ ಅಧ್ಯಕ್ಷರ ಹೆಸರುಗಳನ್ನು ಘೋಷಣೆ ಮಾಡಿದರು. ವರದಿ: ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ತುಮಕೂರು: ಕರ್ನಾಟಕ ಲಲಿತಕಲಾ ಅಕಾಡೆಮಿ ಬೆಂಗಳೂರು ಹಾಗೂ ತುಮಕೂರಿನ ರವೀಂದ್ರ ಕಲಾನಿಕೇತನ ಚಿತ್ರಕಲಾ ಮಹಾವಿದ್ಯಾಲಯ ತುಮಕೂರು ಇವರ ವತಿಯಿಂದ ಗಿರಿಜನ ಉಪಯೋಜನೆಯಡಿ ರಾಜ್ಯಮಟ್ಟದ ಕಲಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕಲಾವಿದ ಕಿಶೋರ್,  ಇವತ್ತು ನಮ್ಮ ದೇಶದಲ್ಲಿ ಹಾಗೂ ಕರ್ನಾಟಕದಲ್ಲಿ ಜನಪದ ಕಲೆ ನಶಿಸಿಹೋಗುತ್ತಿವೆ. ಆದ್ದರಿಂದ ನಾವು ಕಲೆಯನ್ನು ಗೌರವಿಸಬೇಕು ಅದನ್ನು ಬೆಳೆಸಬೇಕು. ಯಾಕೆ ಕಲಾ ಅಕಾಡೆಮಿಗಳು ಒಂದು ಕಾಮಧೇನು ತರ ಕೆಲಸ ಮಾಡಬಾರದು? ಎಂದು ಅವರು ಪ್ರಶ್ನಿಸಿದರು. ಸರ್ಕಾರದಿಂದ ಬರುತ್ತಿರುವ ಅನುದಾನಗಳನ್ನು ಫಲಾನುಭವಿಗಳಿಲ್ಲ ಎಂದು ಸರ್ಕಾರಕ್ಕೆ ವಾಪಸ್ ಕಳಿಸಬಾರದು. ಇಂದು ಅರ್ಹ ಜನಾಂಗಗಳಿಗೆ ಸರ್ಕಾರದ ಅನುದಾನಗಳು ಸಿಗುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು. ತುಮಕೂರು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಟಿ.ಎಲ್.ಎಸ್. ಪ್ರೇಮ ಶಿಬಿರವನ್ನು ಉದ್ಘಾಟಿಸಿದರು. ಇದೇ ವೇಳೆ ಎಂ.ಟಿ.ಬಿ. ಆಚಾರ್ಯ ರವರ ಜನ್ಮಶತಾಬ್ದಿ ಅಂಗವಾಗಿ 38 ಕಲಾಕೃತಿಗಳನ್ನು ರವೀಂದ್ರ ಕಲಾನಿಕೇತನ ಹಾರ್ಟ್ ಗ್ಯಾಲರಿಯಲ್ಲಿ ಬಿಡುಗಡೆ ಮಾಡಲಾಯಿತು ಈ ಸಂದರ್ಭದಲ್ಲಿ ಕಲಾವಿದ ಕಿಶೋರ್ ಕುಮಾರ್ ಅಶೋಕ್ ಪ್ರಭು ವಾಸು…

Read More

ಗುಬ್ಬಿ: ತಾಲೂಕಿನ  ಕೊಪ್ಪ ವಲಯದ, ಚಂಗಾವಿ ಕಾರ್ಯಕ್ಷೇತ್ರದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ , ಕೊಪ್ಪ ವಲಯದ  ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮತ್ತು ಕೊಪ್ಪ ವಲಯದ ನಾಗರಿಕ ಸಹಯೋಗದಲ್ಲಿ ಇಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆಯನ್ನು ನೆರವೇರಿಸಲಾಯಿತು. ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ  ಕೃಷ್ಣಪ್ಪ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಚಂಗಾವಿ ಗ್ರಾಮದ  ಮುಖಂಡರಾದ  ಕೇಶವ ದೀಪ ಪ್ರಜ್ವಲನೆ ಮೂಲಕ ನಡೆಸಿಕೊಟ್ಟರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀ ಕ್ಷೇತ್ರ  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗುಬ್ಬಿ ತಾಲೂಕಿನ ಯೋಜನಾಧಿಕಾರಿ ಹರೀಶ್ ಆರ್ .ಎಸ್. ,ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಸರಳವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶಾಂತಮ್ಮ, ಲತಾ, ಚಂಗಾವಿ ಒಕ್ಕೂಟದ ಅಧ್ಯಕ್ಷರಾದ ಯಶೋಧ  ಕೊಡಿಗೆಹಳ್ಳಿ, ಒಕ್ಕೂಟದ ಅಧ್ಯಕ್ಷರಾದ ಯಶೋಧ, ವಲಯದ ಮೇಲ್ವಿಚಾರಕರಾದ ಚಂದ್ರಶೇಖರ್, ಸೇವಾಪ್ರತಿನಿಧಿಗಳಾದ ಕರಿಯಮ್ಮ, ಮಂಜುಳ, ಕಾಳಯ್ಯ, ಚಿಕ್ಕಣ್ಣ,ಶಿವರಾಜ್  ಹಾಗೂ ಕೊಪ್ಪ ವಲಯದ…

Read More

ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ ಚಂಬೆಳಕಿನ ಕವಿ ನಾಡೋಜ ಡಾ.ಚನ್ನವೀರ ಕಣವಿ(93) ವಿಧಿವಶರಾಗಿದ್ದಾರೆ. ಕೋವಿಡ್ ಸೋಂಕಿನಿಂದ ಸಂಪೂರ್ಣ ಚೇತರಿಕೆ ಕಂಡಿದ್ದ ಕಣವಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಜ.14ರಂದು ಎಸ್‍ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಕಣವಿ ಅವರ ಅಂತ್ಯಕ್ರಿಯೆ ಸೃಷ್ಟಿ ಫಾರ್ಮ್‍ಹೌಸ್‍ನಲ್ಲಿ ಇಂದು ಸಂಜೆ ನೆರವೇರಲಿದೆ. ಇದಕ್ಕೂ ಮುನ್ನ ಕರ್ನಾಟಕದ ಕಲಾ ಮಹಾವಿದ್ಯಾಲಯದಲ್ಲಿ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಇಲ್ಲಿಗೆ ಆಗಮಿಸಿದ ಬಂಧುಮಿತ್ರರು, ಸಾಹಿತ್ಯ ಬಳಗ, ರಾಜಕಾರಣಿಗಳು, ಬರಹಗಾರರು, ವಿದ್ಯಾರ್ಥಿಗಳು ಅಂತಿಮ ದರ್ಶನ ಪಡೆದು ಕಣವಿ ಅವರ ಆತ್ಮಕ್ಕೆ ಶಾಂತಿ ಕೋರಿದರು.ಕಣವಿ ನಡೆದು ಬಂದ ದಾರಿ: ಜೂನ್ 28, 1928ರಂದು ಧಾರವಾಡ ಜಿಲ್ಲೆಯ ಹೊಂಬಳದಲ್ಲಿ ಚನ್ನವೀರ ಕಣವಿ ಜನಿಸಿದರು. ಶಿರುಂಡ, ಗರಗಗಳಲ್ಲಿ 1940-46ರಲ್ಲಿ ಪ್ರಾಥಮಿಕ ಅಭ್ಯಾಸ ಮುಗಿಸಿದ ಮೇಲೆ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ 1950ರಲ್ಲಿ ಬಿ.ಎ ಪದವಿ, 1952ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ ಪದವಿಯನ್ನೂ ಗಳಿಸಿದರು. 1952ರಲ್ಲಿ ಕರ್ನಾಟಕದ ವಿಶ್ವವಿದ್ಯಾನಿಲಯದ ಪ್ರಸಾರಾಂಗದಲ್ಲಿ ಕಾರ್ಯದರ್ಶಿಯಾಗಿ ಸೇವೆ…

Read More