Subscribe to Updates
Get the latest creative news from FooBar about art, design and business.
- ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್ ನಿಧನ
- ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
- ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ
- ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
- ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
- ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
- ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
- ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
Author: admin
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾರ್ಡ್ ನಂ 16ರಲ್ಲಿನ ಹೆಸರುವಾಸಿಯಾಗಿರುವ ಊರ ಆಂಜನೇಯ ಸ್ವಾಮಿಗೆ ಇಂದು ಮಕರ ಸಂಕ್ರಾಂತಿ ಹಬ್ಬ ಹಾಗೂ ಶ್ರೀ ಆಂಜನೇಯ ಸ್ವಾಮಿಗೆ ವಾರದ ಪೂಜೆಯ ಪ್ರಯುಕ್ತ ಹೂವಿನ ಅಲಂಕಾರ , ಮಹಾಮಂಗಳಾರತಿ ಹಾಗೂ ಭಕ್ತಾಧಿಗಳಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ನೆರವೇರಿಸಲ್ಪಟ್ಟಿತ್ತು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಅರ್ಚಕರ ಕುಟುಂಬಸ್ಥರು ಹಾಗೂ ಶ್ರೀ ಆಂಜನೇಯ ಸ್ವಾಮಿಯ ಭಕ್ತಾದಿಗಳು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು . ವರದಿ: ಮುರುಳಿಧರನ್ ಆರ್. ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧುಗಿರಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪದವಿ ಪೂರ್ವ ಕಾಲೇಜು, ಯುಕ್ತ ಕೌಶಲ್ಯ ತರಬೇತಿ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಐಡಿಹಳ್ಳಿ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ತರಬೇತಿ ಕುರಿತು ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸ್ವಾಮಿ ವಿವೇಕಾನಂದ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಕೌಶಲ್ಯ ತರಬೇತಿ ಕೇಂದ್ರ ವ್ಯವಸ್ಥಾಪಕ ನಿರ್ದೇಶಕರಾದ ಮಧುಗಿರಿ ದಿಲೀಪ್ ಮಾತನಾಡಿ, ವಿದ್ಯಾರ್ಥಿಗಳು, ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ತರಬೇತಿಯನ್ನು ಪಡೆದುಕೊಳ್ಳುವ ಮೂಲಕ ವಿವೇಕಾನಂದರ, ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಮಾತನ್ನು ಅನುಸರಿಸಬೇಕಿದೆ ಎಂದರು. ವಿದ್ಯಾಭ್ಯಾಸದ ನಂತರ ಉನ್ನತ ಶಿಕ್ಷಣ, ಉದ್ಯೋಗ ಹಾಗೂ ಸ್ವಯಂ ಉದ್ಯೋಗಕ್ಕೆ ವಿವಿಧ ಕೌಶಲ್ಯಗಳು ಪ್ರಾಮುಖ್ಯ ವಾಗಿದೆ. ಆದ್ದರಿಂದ ಆಶಯದಂತೆ ವಿದ್ಯಾರ್ಥಿಗಳು ಈ ತರಬೇತಿಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಮಂಜುನಾಥ್, ಐಡಿ ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನರಸಿಂಹ ರೆಡ್ಡಿ,ದೀಪಿಕಾ ವೆಂಕಟೇಶ್, ಸಿಬ್ಬಂದಿಗಳಾದ ತನುಜಾ, ಪೂಜಾ, ಮಾನಸ, ಕಾವ್ಯ, ಚೇತನ್, ಅಂಜಿನಪ್ಪ ಮತ್ತು ಸ್ಥಳೀಯ ಮುಖಂಡರುಗಳು…
ತುಮಕೂರು: ಪಟ್ಟಣದ ಅಶೋಕ ನಗರದಲ್ಲಿರುವ ಮಹೇಶ್ ಪಿಯು ಕಾಲೇಜಿನ ಸಭಾಂಗಣದಲ್ಲಿ ಜೆ.ಸಿ.ಐ. ತುಮಕೂರು ಮೆಟ್ರೋ, ರೋಟರಿ ತುಮಕೂರು ಪ್ರೇರಣಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಮಹೇಶ್ ಪಿ.ಯು. ಸಂಸ್ಥೆ ತುಮಕೂರು ಸಹಯೋಗದೊಂದಿಗೆ, ಜಿಲ್ಲೆಯ ಖ್ಯಾತ ಮನಶಾಸ್ತ್ರಜ್ಞೆ ಡಾ.ಪದ್ಮಾಕ್ಷಿ ಲೋಕೇಶ್ ರವರಿಂದ ಕಾಲೇಜಿನ ವಿದ್ಯಾರ್ಥಿಗಳಿಗೆ ತಮ್ಮ ಜೀವನ ಶೈಲಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ರಾಜ್ಯ ಸರ್ಕಾರದ ಅನ್ವಯ ಕೋವಿಡ್ 19 ರ, ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ ನಗರದ ಸ್ನೇಹ ಮನೋ ವಿಕಾಸ ಕೇಂದ್ರದ ಮನಃಶಾಸ್ತ್ರಜ್ಞರು ಹಾಗೂ ಮನಶಾಸ್ತ್ರ ಶಿಕ್ಷಣ ತಜ್ಞರಾದ ಡಾ.ಪದ್ಮಾಕ್ಷಿ ಲೋಕೇಶ್ ಅವರು, ರಾಜ್ಯಾದ್ಯಂತ ಮಹೇಶ್ ಪಿಯು ಶಿಕ್ಷಣ ಸಂಸ್ಥೆಯು ಉತ್ತಮ ಶಿಕ್ಷಣ ನೀಡುತ್ತಿರುವ ಸಂಸ್ಥೆಯಾಗಿದೆ. ನಮ್ಮ ಜಿಲ್ಲೆಯಲ್ಲಿ ಸಹ ಉತ್ತಮ ಶಿಕ್ಷಣ ಸಂಸ್ಥೆ ಎಂದು ಹೆಸರಾಗಿದೆ. ಈ ದಿನ ಇಂತಹ ಉತ್ತಮ ಶಿಕ್ಷಣ ಸಂಸ್ಥೆಯಲ್ಲಿ,ಈ ಕಾರ್ಯಕ್ರಮವನ್ನು ಆಯೋಜನೆಗೊಂಡಿರುವುದೂ ಸಂತಸದ ವಿಷಯವಾಗಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಕಾಲೇಜು ವಿದ್ಯಾರ್ಥಿಗಳು ಮೊಬೈಲ್ ಹಾಗೂ ಇಂಟರ್ನೆಟ್ ಇನ್ನಿತರ…
ಕನ್ನಡ ಕಿರುತೆರೆ ಪಾಲಿಗೆ ಮಕರ ಸಂಕ್ರಾಂತಿಗೆ ಸೂತಕದ ಛಾಯೆ ಆವರಿಸಿ ಬಾಲ ಕಲಾವಿದೆ ಸಮನ್ವಿ (6) ನಿಧನಕ್ಕೆ ಎಲ್ಲರೂ ಕಣ್ಣೀರು ಹಾಕುತ್ತಿದ್ದಾರೆ. ಸಂಜೆ 5 ಗಂಟೆ ಸುಮಾರಿನಲ್ಲಿ ಕಿರುತೆರೆ ಕಲಾವಿದರಾದ ಅಮೃತಾ ನಾಯ್ಡು ಅವರು ಮಗಳು ಸಮನ್ವಿ ಯನ್ನು ಕರೆದುಕೊಂಡು ದ್ವಿಚಕ್ರ ವಾಹನದಲ್ಲಿ ವಾಜರಹಳ್ಳಿಯಿಂದ ಮೆಟ್ರೋ ನಿಲ್ದಾಣದ ಕಡೆಗೆ ಹೋಗುತ್ತಿದ್ದಾಗ ಕನಕಪುರ ಮುಖ್ಯರಸ್ತೆಯ ಕೋಣನಕುಂಟೆ ಕ್ರಾಸ್ ಬಳಿ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಟಿಪ್ಪರ್ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ತಾಯಿ-ಮಗಳು ಇಬ್ಬರೂ ಕೆಳಗೆ ಬಿದ್ದಾಗ ಮಗಳಿಗೆ ಲಾರಿಯ ಬಂಪರ್ ಹೊಡೆದಿದ್ದರಿಂದ ಗಂಭೀರ ಪೆಟ್ಟಾಗಿ ರಕ್ತಸ್ರಾವವಾಗಿದೆ. ತಕ್ಷಣ ಸಾರ್ವಜನಿಕರ ಸಹಾಯದಿಂದ ಮಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮಗಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಅಮೃತಾ ಕುಟುಂಬ ಆಘಾತಕ್ಕೊಳಗಾಗಿದೆ. ಕಿರುತೆರೆ ರಿಯಾಲಿಟಿ ಶೋ ನನ್ನಮ್ಮ ಸೂಪರ್ ಸ್ಟಾರ್ ಮೂಲಕ ಸಮನ್ವಿ ಎಲ್ಲರ ಮನೆ ಮಾತಾಗಿದ್ದಳು. ಮನರಂಜನಾ ಲೋಕದಲ್ಲಿ ಸಾಧನೆ ಮಾಡಬೇಕಾಗಿದ್ದ ಸಮನ್ವಿ ಚಿಕ್ಕ ವಯಸ್ಸಿನಲ್ಲೇ ಸಾವನ್ನಪ್ಪಿರುವುದು ನೋವಿನ…
ಹೆಚ್.ಡಿ.ಕೋಟೆ: ಇಲ್ಲಿನ ಗುಂಡ್ರೆ ಅರಣ್ಯ ಪ್ರದೇಶದಲ್ಲಿ ಗಂಡು ಹುಲಿಯೊಂದರ ಮೃತದೇಹ ಪತ್ತೆಯಾಗಿದ್ದು, ಕಬಿನಿ ಹಿನ್ನೀರಿನ ನಾಯಳ್ಳ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. 7ರಿಂದ 8ವರ್ಷ ವಯಸ್ಸಿನ ಹುಲಿ ಇದಾಗಿದ್ದು, ಹುಲಿಗಳ ನಡುವಿನ ಕಾಳಗದಲ್ಲಿ ಸಾವನ್ನಪ್ಪಿರಬಹುದು ಎಂದು ಹೇಳಲಾಗಿದೆ. ಹುಲಿಯ ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹಕ್ಕೆ ಅಗ್ನಿ ಸ್ಪರ್ಶ ಮಾಡಲಾಗಿದೆ. ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿಗೆ ಹುಲಿಯ ಮೃತದೇಹ ಕಂಡು ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿ.ಎಫ್. ಕರಿಕಾಳನ್ ಸಹಿತ ಹಲವು ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ ಅಂಡರ್ 19 ಬ್ಯಾಡ್ಮಿಂಟನ್ ಆಟಗಾರರ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು ಭಾರತದ ತಸ್ಮಿನ್ ಮಿರ್ ನಂಬರ್ 1 ಸ್ಥಾನವನ್ನು ಅಲಂಕರಿಸುವ ಮೂಲಕ ಈ ಸಾಧನೆ ಮಾಡಿದ ದೇಶದ ಮೊದಲ ಆಟಗಾರ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. 16 ವರ್ಷದ ತಸ್ಮಿನ್ ಮೀರ್ ಒಟ್ಟು 10,810 ಪಾಯಿಂಟ್ಸ್ಗಳನ್ನು ಕಲೆ ಹಾಕುವ ಮೂಲಕ ಈ ಸಾಧನೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ತಸ್ಮಿನ್, ನಾನು ಪಂದ್ಯಗಳನ್ನು ಸೋತಾಗ ತುಂಬಾ ಅತ್ತಿದ್ದೇನೆ, ಆದರೆ ಕಠಿಣ ಪರಿಶ್ರಮದಿಂದಾಗಿ ನಾನು ಇಂದು ಈ ಸಾಧನೆ ಮಾಡಿದ್ದೇನೆ, ಬ್ಯಾಡ್ಮಿಂಟನ್ ಲೋಕದ ಮಹಾತಾರೆಗಳಾದ ಸೈನಾ ನೆಹ್ವಾಲ್ ಹಾಗೂ ಒಲಂಪಿಕ್ಸ್ ಪದಕ ವಿಜೇತೆ ಪಿ.ವಿ.ಸಿಂಧು ಅವರು ನನಗೆ ರೋಲ್ ಮಾಡೆಲ್ ಗಳಾಗಿದ್ದಾರೆ, ನನ್ನ ಈ ಪರಿಶ್ರಮಕ್ಕೆ ನನ್ನ ತಂದೆ ಹಾಗೂ ಸಹೋದರ ತ್ಯಾಗಭಾವವೂ ಕಾರಣವಾಗಿದೆ ಎಂದು ಅವರು ತಿಳಿಸಿದರು. ಹಿರಿಯ ಬ್ಯಾಡ್ಮಿಂಟನ್ ನಲ್ಲಿ ಯಾವ ರೀತಿ ಪ್ರದರ್ಶನ ನೀಡಬೇಕೆಂಬುದು ನನಗೆ ಗೊತ್ತಿಲ್ಲವಾದರೂ, ಮುಂದೊಂದು ದಿನ ಆ ವಿಭಾಗದಲ್ಲೂ ಉತ್ತಮ ಪ್ರದರ್ಶನ ತೋರುವ ಮೂಲಕ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ T. ನಾಗೇನಳ್ಳಿ ಗ್ರಾಮದ ವಾಲ್ಮೀಕಿ ಸಮಾಜದ ಮುಖಂಡರು, ಹಿರಿಯ ಕಾಂಗ್ರೆಸ್ ಮುಖಂಡ ನಾಗಣ್ಣ ಅವರು, ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಗಣ್ಣರವರು ರಂಗನಾಥಪುರ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದರು. ರಂಗನಾಥಪುರ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರು ಕೂಡ ಆಗಿದ್ದರು. ನಾಗಣ್ಣ ಅವರ ನಿಧನಕ್ಕೆ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕ, ಮಾಜಿ ಸಚಿವರಾದ ಡಿ. ಸುಧಾಕರ್ ರವರು ಸಂತಾಪ ಸೂಚಿಸಿದ್ದಾರೆ. ನಾಗಣ್ಣ ಅವರ ಅಂತಿಮ ಸಂಸ್ಕಾರ ಅವರ ಸ್ವಗ್ರಾಮದಲ್ಲಿ ಇಂದು ನೆರವೇರಿದೆ. ವರದಿ: ಮುರುಳಿಧರನ್ ಆರ್., ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಕ್ರೀಡಾಳುಗಳಿಗೆ ವೈಜ್ಞಾನಿಕ ವಾಗಿ ಮಾರ್ಗದರ್ಶನ ನೀಡುವ ಕೆಲಸವನ್ನು ತರಬೇತುಗೊಂಡಿರುವ ಕೋಚ್ ಗಳು ಮಾಡಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಮನ್ ವೆಲ್ತ್ ಕ್ರೀಡಾಕೂಟದ ಬ್ಯಾಟನ್ ವಿನಿಮಯ ಕಾರ್ಯಕ್ರಮದಲ್ಲಿಂದು ಆನ್ ಲೈನ್ ಮೂಲಕ ಪಾಲ್ಗೊಂಡು ಮಾತನಾಡಿದ ಅವರು, ಅತ್ಯುತ್ತಮ ಕೋಚ್ ಗಳ ಮೂಲಕ ಕ್ರೀಡಾಪಟುಗಳಿಗೆ ತರಬೇತಿ ನೀಡುವುದು ಅತ್ಯಗತ್ಯ. ಅವರಿಗೆ ಪಠ್ಯಕ್ರಮ ರೂಪಿಸಿ ಅದರಂತೆ ಸೂಕ್ತ ಮಾರ್ಗದರ್ಶನ ನೀಡುವ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ಅಮೃತ ಕ್ರೀಡಾ ಯೋಜನೆಯ ಗುರಿ ಈಡೇರಿಸಲು ಸರ್ಕಾರ ಅಗತ್ಯ ನೆರವು ನೀಡಲು ಬದ್ಧವಾಗಿದೆ ಎಂದು ಹೇಳಿದರು. 72 ದೇಶಗಳ ಒಕ್ಕೂಟ ರಚನೆಯಾಗಿ ಹಲವಾರು ವಿಚಾರಗಳ ವಿನಿಮಯಕ್ಕೆ ಕಾಮನ್ವೆಲ್ತï ಒಕ್ಕೂಟ ವೇದಿಕೆಯಾಗಿದೆ. ಸಮಾನ ಚಿಂತನೆ ಇರುವ ರಾಷ್ಟ್ರಗಳ ಬಾಂಧವ್ಯ ಗಟ್ಟಿಗೊಳ್ಳಲು, ಅದರಲ್ಲೂ ಯುವಪೀಳಿಗೆಯಲ್ಲಿ ಬಾಂಧವ್ಯ ಮುಂದುವರೆಯಬೇಕೆಂಬ ಉದ್ದೇಶದಿಂದ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದೆ ಎಂದರು. ನಾಲ್ಕು ವರ್ಷಕ್ಕೊಮ್ಮೆ ನಡೆಯುವ ಈ ಕ್ರೀಡಾಕೂಟದಲ್ಲಿ ಸುಮಾರು 6 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುತ್ತಾರೆ. ಕ್ರೀಡಾಕೂಟದ ಬ್ಯಾಟನ್ ಇಂದು 9000…
ಡಾಬಾ ನೌಕರನ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರ ಪೈಕಿ ಇಬ್ಬರು ಆರೋಪಿಗಳ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಗಳ್ಳತನ, ಸುಲಿಗೆ, ದರೋಡೆಗೆ ಸಂಚು, ಅಪಹರಣ ಮತ್ತು ಗಲಾಟೆ ಪ್ರಕರಣಗಳಲ್ಲಿ ಬಾಗಿಯಾಗಿರುವುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. ನಗರದ ಯೂಟರ್ನ್ ಡಾಬಾದಲ್ಲಿ ಕಳೆದ ಮೂರು ವರ್ಷಗಳಿಂದ ಹಾಸನ ಮೂಲದ ಮನೋಜ್(19) ಕೆಲಸ ಮಾಡಿಕೊಂಡಿದ್ದನು. ಡಿ.23ರಂದು ಈ ಡಾಬಾಗೆ ಬಂದಿದ್ದ ಆರೋಪಿಗಳು ಊಟ ಮಾಡಿದ ಬಳಿಕವೂ ತುಂಬಾ ಹೊತ್ತು ಕುಳಿತು ಮಾತನಾಡುತ್ತ್ರಿವುದನ್ನು ಗಮನಿಸಿದ ಸಿಬ್ಬಂದಿ ತಡವಾಯ್ತು ಬಾಗಿಲು ಹಾಕಬೇಕು. ಬಿಲ್ ನೀಡುವಂತೆ ಕೇಳಿದಾಗ ಸಿಬ್ಬಂದಿ ಜೊತೆ ಜಗಳವಾಗಿ ಹೋಗಿದ್ದಾರೆ. ರಾತ್ರಿ 12 ಗಂಟೆ ಸುಮಾರಿನಲ್ಲಿ ಮತ್ತೆ ಈ ಡಾಬಾ ಬಳಿ ಬಂದ ಆರೋಪಿಗಳು ಡಾಬಾದ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದಾರೆ. ಆ ವೇಳೆ ನೌಕರ ಮನೋಜ್ ಶಾರ್ಟ್‍ಸಕ್ರ್ಯೂಟ್ ಆಗಿರಬಹುಹದೆಂದು ತಿಳಿದು ಬಾಗಿಲು ತೆಗೆಯುತ್ತಿದ್ದಂತೆ ಆರೋಪಿಗಳು ಈತನ…
ಪಾವಗಡ: ಪಾವಗಡ ಪಟ್ಟಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಹೆಲ್ಪ್ ಸೊಸೈಟಿ ಕಚೇರಿಯಲ್ಲಿ ಇಂದು ಸಂಕ್ರಾಂತಿ ಹಬ್ಬದ ಉಡುಗೊರೆಯಾಗಿ ಕಡು ಬಡ ಕುಟುಂಬದ ಸುಮಾರು 50 ಮಹಿಳೆಯರಿಗೆ ದಿನಸಿ ಕಿಟ್ ಗಳನ್ನು ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ವಿತರಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವ ಮುಖಂಡ ಎಂ. ಕೆ.ನಾರಾಯಣಪ್ಪ ಹಾಗೂ ದಲಿತ ಮುಖಂಡ ಹನುಮಂತರಯಪ್ಪ, ಹೆಲ್ಪ್ ಸೊಸೈಟಿ ಕಚೇರಿ ಪ್ರಾರಂಭಗೊಂಡ ಮೊದಲನೇ ದಿನವೇ ಸಮಾಜ ಮುಖಿ ಸೇವಾ ಕಾರ್ಯ ಪ್ರಾರಂಭಿಸಿ, ಇಂದು ಸಂಕ್ರಾಂತಿ ಕೊಡುಗೆಯಾಗಿ ಪಟ್ಟಣದ ಕಡು ಬಡ ಕುಟುಂಬದ ಮಹಿಳೆಯರಿಗೆ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ರವರು ದಿನಸಿ ಕಿಟ್ ಗಳನ್ನು ವಿತರಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಶ್ಲಾಘಿಸಿದರು. ಡಿ.ಸಿ.ಸಿ.ಬ್ಯಾಂಕ್ ಮೇಲ್ವಿಚಾರಕ ಶ್ರೀನಿವಾಸ್ ಮಾತನಾಡಿ, ಸದಾ ಜನ ಸೇವೆಯಲ್ಲಿ ಮಗ್ನರಾಗಿರುವ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಹಾಗೂ ತಂಡಕ್ಕೆ ಭಗವಂತ ಮತ್ತಷ್ಟು ಸೇವೆಯನ್ನು ಮಾಡುವ ಶಕ್ತಿ ನೀಡಲಿ ಎಂದು ಶುಭ ಹಾರೈಸಿದರು. ಬಳಿಕ ಹೆಲ್ಪ್ ಸೊಸೈಟಿ ತಂಡಕ್ಕೆ 2022ರ ದಿನದರ್ಶಿ…