Subscribe to Updates
Get the latest creative news from FooBar about art, design and business.
- ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
- ಜುಲೈ 1: ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
- ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
- ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
- ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
- DIGITAL ARREST ಬಗ್ಗೆ ಎಚ್ಚರವಿರಲಿ!
- ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
- ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
Author: admin
ಯಾದಗರಿ: ಉಪ್ಪಿಟ್ಟು ಸೇವಿಸಿ 50 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಯಾದಗರಿ ಜಿಲ್ಲೆಯ ಅಬ್ಬೆತುಮಕೂರಿನ ವಿಶ್ವರಾದ್ಯ ವರ್ಧಕ ಹಾಸ್ಟೆಲ್ ನಡೆದಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಸದ್ಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆ ಸಲುವಾಗಿ ದಾಖಲು ಮಾಡಲಾಗಿದ್ದು, ಹಿರಿಯ ಅಧಿಕಾರಿಗಳು ಘಟನ ಸ್ಥಳಕ್ಕೆ ಆಗಮಿಸಿದ್ದು, ಉಪಾಹಾರದಲ್ಲಿ ಹಾವಿನ ಮರಿ ಇತ್ತು ಎನ್ನುವ ಆರೋಪ ಕೂಡ ಕೇಳಿ ಬಂದಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಕೊರಟಗೆರೆ: ತಾಲೂಕಿನಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 2022 ಕ್ಕೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿ ಪ್ರಕಟಿಸಿದ್ದು ಮತದಾರರು ತಮ್ಮ ಹಕ್ಕು ಮತ್ತು ಅಕ್ಷೇಪಣೆಗಳನ್ನು ತಿದ್ದುಪಡಿ ಸೇರ್ಪಡೆ ಮಾಡಲು ಆಥವಾ ತೆಗೆದುಹಾಕಲು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಲು ಅವಕಾಶವಿರುವುದಾಗಿ ಗ್ರೇಡ್ 2 ತಹಶೀಲ್ದಾರ್ ತಿಳಿಸಿದ್ದಾರೆ. ಪತ್ರಿಕಾ ತಾಲೂಕು ಕಛೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ದಿನಾಂಕ 21-11-2021 ಮತ್ತು 28-11-2021 ರಂದು ವಿಶೇಷ ಅಭಿಯಾನ ಹಮ್ಮಿಕೊಂಡಿದ್ದು, ಸಾರ್ವಜನಿಕರು ತಮ್ಮ ಹತ್ತಿರದ ಮತದಾರರ ನೋಂದಾಣಾಧಿಕಾರಿ, ವಾರ್ಡ್ ಕಛೇರಿ ಮತ್ತು ಹತ್ತಿರದ ಮತಗಟ್ಟೆಗಳಿಗೆ ಬೇಟಿ ನೀಡಿ ತಮ್ಮ ಹಕ್ಕು ಮತ್ತು ಅಕ್ಷೇಪಣೆಗಳನ್ನು ತಿದ್ದುಪಡಿ, ಸೇರ್ಪಡೆ ಮಾಡಲು ಅಥವಾ ತೆಗೆದುಹಾಕಲು ಅಗತ್ಯ ದಾಖಲಾತಿಗಳೊಂದಿಗೆ ನೀಡಬಹುದಾಗಿದೆ ಹಾಗೂ ತಮ್ಮ ಹೆಸರು ಇರುವುದನ್ನು ಪರಿಶೀಲಿಸಬಹುದಾಗಿದೆ ಎಂದರು. ದಿನಾಂಕ 13-1-2022 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗುವುದು, ಸಾರ್ವಜನಿಕರು ಆನ್ ಲೈನ್ ನಲ್ಲೂ ಸಹ ತಮ್ಮ ಹಕ್ಕು ಮತ್ತು ಅಕ್ಷೇಪಣೆಗಳನ್ನು ಅಗತ್ಯ ದಾಖಲಾಗಿಗಳೊಂದಿಗೆ ಸಲ್ಲಿಸಬಹುದಾಗಿದೆ, ದಿನಾಂಕ 01-01-2004ಕ್ಕೆ ಮುಂಚೆ…
ತುಮಕೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮಧುಗಿರಿ ಬೆಟ್ಟದ ಮೇಲಿನಿಂದ ಬೃಹತ್ ಬಂಡೆಯೊಂದು ಉರುಳಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ತುಮಕೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಮಧುಗಿರಿ ಏಕಾಶಿಲಾ ಬೆಟ್ಟದ ಮೇಲಿನಿಂದ ದೊಡ್ಡ ಬಂಡೆಯೊಂದು ಉರುಳಿ ಬಿದ್ದಿದೆ. ಬೃಹತ್ ಬಂಡೆ ಉರುಳಿ ಬಿದ್ದಿರುವುದನ್ನು ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ. ಇಷ್ಟೊಂದು ದೊಡ್ಡ ಬಂಡೆ ಉರುಳಿದರೂ ಯಾರಿಗೂ ಅಪಾಯವಾಗದಿರುವುದಕ್ಕೆ ಮಧುಗಿರಿ ಶ್ರೀ ದಂಡಿನ ಮಾರಮ್ಮನ ಕೃಪೆಯೇ ಕಾರಣ ಎಂದು ಇಲ್ಲಿನ ಜನರು ಆತಂಕದಿಂದ ಮಾತನಾಡುತ್ತಿರುವ ದೃಶ್ಯ ಕಂಡು ಬಂತು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ನವದೆಹಲಿ: ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 11,919 ಪ್ರಕರಣಗಳು ದೃಢಪಟ್ಟಿವೆ. ಈ ಅವಧಿಯಲ್ಲಿ 470 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆ ತಿಳಿಸಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,44,78,517 ಏರಿಕೆಯಾಗಿದ್ದರೆ, ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 4,64,623ಕ್ಕೆ ಏರಿದೆ. ಪ್ರಸ್ತುತ 1,35,918 ಪ್ರಕರಣಗಳು ಸಕ್ರಿಯವಾಗಿವೆ. ದೇಶದಲ್ಲಿ ಇದುವರೆಗೂ 114.46 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಬೆಂಗಳೂರು: ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯು ಭಾರತದ ಆನ್‌ಲೈನ್ ಪಾವತಿ ಪೋರ್ಟಲ್‌ಗಳ ಮೇಲೆಯೂ ಕಣ್ಣು ಹಾಕಿದ್ದ. ಕ್ರಿಪ್ಟೊಕರೆನ್ಸಿ ಎಕ್ಸ್‌ಚೇಂಜ್ ಮತ್ತು ಆಹಾರ ವಿತರಣೆ ಸಂಸ್ಥೆ ‘ಜೊಮ್ಯಾಟೊ’ವನ್ನೂ ಹ್ಯಾಕ್ ಮಾಡಲು.ಶ್ರೀಕಿ ಮತ್ತು ಆತನ ಗೆಳೆಯ ರಾಬಿನ್ ಖಂಡೇಲ್ ವಾಲ್ ಯೋಜನೆ ರೂಪಿಸಿದ್ದರು ಎನ್ನಲಾಗಿದೆ. ಇವರಿಂದ ವಶಪಡಿಸಿಕೊಳ್ಳಲಾದ ಒಂದು ಹಾರ್ಡ್‌ಡಿಸ್ಕ್‌ನಲ್ಲಿ ಇಂತಹ ಮಾಹಿತಿ ಸಿಕ್ಕಿದೆ. 16 ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡುವುದಕ್ಕೆ ಸಂಬಂಧಿಸಿದ ಮಾಹಿತಿಯು ಈ ಹಾರ್ಡ್‌ಡಿಸ್ಕ್‌ನಲ್ಲಿ ಇದೆ ಎಂಬುದು ಸೈಬರ್ ವಿಧಿವಿಜ್ಞಾನ ಸಂಸ್ಥೆಯು ನಡೆಸಿದ ವಿಶ್ಲೇಷಣೆಯಲ್ಲಿ ತಿಳಿದು ಬಂದಿದೆ. ಆನ್‌ಲೈನ್ ಪಾವತಿ ಪೋರ್ಟಲ್‌ಗಳಾದ ಕ್ಯಾಷ್‌ಫ್ರೀ, ಪೇಯುಮನಿ, ಪೋಕರ್ ಸೈಟ್‌ಗಳಾದ ಪಿಪಿಪೋಕರ್ ಕ್ಲಬ್, ಕಾಲಿಂಗ್‌ಸ್ಟೇಷನ್, ಕ್ರಿಪ್ಟೊಕರೆನ್ಸಿ ಎಕ್ಸ್‌ಚೇಂಜ್ ಎಫ್‌ಸಿಸಿಇ.ಜೆಪಿ ಈ ಪಟ್ಟಿಯಲ್ಲಿ ಇವೆ. ತನ್ನ ವೆಬ್‌ಸೈಟ್‌ಗೆ ಕನ್ನ ಹಾಕಿ 1.7 ಕೋಟಿ ಬಳಕೆದಾರರ ಮಾಹಿತಿ ಕಳ್ಳತನ ಮಾಡಲಾಗಿದೆ ಎಂದು ಜೊಮ್ಯಾಟೊ ಸಂಸ್ಥೆಯು 2017ರ ಮೇಯಲ್ಲಿ ಹೇಳಿತ್ತು. ಶ್ರೀಕಿಯ ಪಟ್ಟಿಯಲ್ಲಿ ಜೊಮ್ಯಾಟೊ ಕೂಡ ಇತ್ತು ಎಂಬ ಬಗ್ಗೆ ಜೊಮ್ಯಾಟೊ ಸಂಸ್ಥೆಯಿಂದ ಪ್ರತಿಕ್ರಿಯೆ ಪಡೆದುಕೊಳ್ಳುವುದು ಸಾಧ್ಯವಾಗಿಲ್ಲ ಎನ್ನಲಾಗಿದೆ. ನಿಮ್ಮ…
ಪ್ರತಿ ವರ್ಷ ಲಕ್ಷಾಂತರ ಮಂದಿ ಯುಪಿಎಸ್ ಸಿ ನಾಗರಿಕ ಸೇವಾ ಪರೀಕ್ಷೆಗೆ ಹಾಜರಾಗುತ್ತಾರೆ. ಯುಪಿಎಸ್ ಸಿ ಪರೀಕ್ಷೆಯನ್ನು ಅತಿ ಕಠಿಣ ಪರೀಕ್ಷೆಗಳಲ್ಲಿ ಒಂದು ಎಂದು ಕರೆಯಲಾಗುತ್ತದೆ. ಈ ಪರೀಕ್ಷೆಗೆ ಹಲವು ಮಂದಿ ಕೋಚಿಂಗ್ ಪಡೆದುಕೊಳ್ಳುತ್ತಾರೆ, ಕೆಲವೇ ಕೆಲವರು ಮಾತ್ರ ಸ್ವಯಂ ಕಲಿಕೆಯಿಂದ ಯುಪಿಎಸ್ಸಿ ಪರೀಕ್ಷೆ ಬರೆದು ಉತ್ತೀರ್ಣರಾಗುತ್ತಾರೆ, ಕೆಲವರಿಗೆ ಪರೀಕ್ಷೆ ಪಾಸ್ ಆಗಲು ವರ್ಷಗಳೇ ತಾಗುವುದು ಇದೆ ಕೆಲವೇ ಕೆಲವು ಅಭ್ಯರ್ಥಿಗಳು ಯುಪಿಎಸ್ಸಿ ಪರೀಕ್ಷೆಯನ್ನು ಮೊದಲನೇ ಬಾರಿಗೆ ಪಾಸ್ ಆಗುತ್ತಾರೆ. ಇಂತಹದೇ ಸಾಧನೆ ಮಾಡಿದವರು ಅನನ್ಯಾ ಸಿಂಗ್. ಐಎಎಸ್ ಪರೀಕ್ಷೆಯಲ್ಲಿ ಮೊದಲನೇ ಬಾರಿಗೆ ತೇರ್ಗಡೆ ಹೊಂದಿರುವ 22 ವರ್ಷದ ಈಕೆಯ ಹೆಸರು ಅನನ್ಯಾ ಸಿಂಗ್. ಪ್ರಯಾಗ್ ರಾಜ್ ನಿವಾಸಿ. ಯುಪಿಎಸ್ಸಿ ಪರೀಕ್ಷೆ ಬರೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ ಈಕೆ ಒಂದು ಉತ್ತಮ ಉದಾಹರಣೆ. ಯುಪಿಎಸ್ಸಿ ಪರೀಕ್ಷೆಯನ್ನು ಅತಿ ಕಠಿಣ ಪರೀಕ್ಷೆಗಳಲ್ಲಿ ಒಂದು ಎಂದು ಕರೆಯಲಾಗುತ್ತದೆ. ಈ ಪರೀಕ್ಷೆಗೆ ಹಲವು ಮಂದಿ ಕೋಚಿಂಗ್ ಪಡೆದುಕೊಳ್ಳುತ್ತಾರೆ, ಕೆಲವೇ ಕೆಲವರು ಮಾತ್ರ ಸ್ವಯಂ ಕಲಿಕೆಯಿಂದ ಯುಪಿಎಸ್ಸಿ ಪರೀಕ್ಷೆ…
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರಿನಲ್ಲಿ ಇನ್ನೂ 5 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದ ಮೀನುಗಾರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ನಗರದಲ್ಲಿ ಮೋಡ ಕವಿದ ವಾತಾವರಣ ವಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆಯಿಂದ ತಿಳಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಈ ಬಾರಿ ಅನಿರೀಕ್ಷಿತ ಮಳೆಯಾಗುತ್ತಿದೆ. ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮಳೆಯಾಗಲಿದೆ. ಮಳೆಯಿಂದ ಹಲವು ಜಿಲ್ಲೆಗಳ ಮೇಲೆ ಪರಿಣಾಮ ಬೀರಿದೆ. ಈ ಬಗ್ಗೆ ಈಗಾಗಲೇ ಸಭೆ ನಡೆಸಿ ಸೂಚನೆ ನೀಡಿದ್ದೇನೆ. ಮಳೆ ನಿಂತ ತಕ್ಷಣ ಕೆಲಸ ಮಾಡಲು ಸೂಚನೆ ಕೊಟ್ಟಿದ್ದೇನೆ. ತಗ್ಗು ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗೆ ಸೂಚನೆ ನೀಡಲಾಗಿದೆ. ಎನ್ ಡಿಆರ್ಎಫ್ ತಂಡಕ್ಕೂ ಸೂಚನೆ…
ಕೊರಟಗೆರೆ: ತಾಲ್ಲೂಕು ಥರಟಿ ಗ್ರಾಮದ ಕೆರೆಯಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದ್ದು, ಸ್ಥಳೀಯರ ನೆರವಿನೊಂದಿಗೆ ಕೆರೆಯಲ್ಲಿದ್ದ ಮೃತದೇಹವನ್ನು ಮೇಲೆತ್ತಲಾಗಿದೆ. ಇಲ್ಲಿನ ನಿವಾಸಿ ಧರ್ಮಯ್ಯ ಎಂಬವರ ಪುತ್ರ ನಾಗರಾಜು ಎಂಬವರು ಮೃತಪಟ್ಟವರು ಎಂದು ತಿಳಿದು ಬಂದಿದೆ. ಆದರೆ ಈ ಸಾವು ಹೇಗೆ ಸಂಭವಿಸಿತು ಎನ್ನುವುದು ಇನ್ನೂ ತಿಳಿದು ಬಂದಿಲ್ಲ ಸಂಬಂಧ ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಕೊರಟಗೆರೆ ಪೋಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ನಾಗರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಬೆಂಗಳೂರು: ದ್ವಿತೀಯ ಪಿಯುಸಿ ತರಗತಿಯ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನವೆಂಬರ್ 29ರಂದು ನಡೆಸಲು ಉದ್ದೇಶಿಸಲಾಗಿದ್ದ ರಾಜ್ಯಮಟ್ಟದ ಮಧ್ಯ ವಾರ್ಷಿಕ ಪರೀಕ್ಷೆಯನ್ನು ಮುಂದೂಡುವ ಸಾಧ್ಯತೆ ಇದೆ ಎನ್ನಲಾಗಿದೆ. ವರದಿಗಳ ಪ್ರಕಾರ, ಪರೀಕ್ಷೆಯನ್ನು ಆತುರದಲ್ಲಿ ನಡೆಸಲಾಗುತ್ತಿದೆ, ಯಾವುದೇ ಪೂರ್ವಭಾವಿ ಸಿದ್ಧತೆಗಳನ್ನು ಕೈಗೊಳ್ಳದೆ ಅವೈಜ್ಞಾನಿಕವಾಗಿ ನಡೆಸಲಾಗುತ್ತಿದೆ ಎಂದು ವಿಧಾನ ಪರಿಷತ್ ನ ಬಿಜೆಪಿ ಸದಸ್ಯರು ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಪರೀಕ್ಷೆ ಮುಂದೂಡುವ ಬಗ್ಗೆ ಚರ್ಚೆಗಳಾಗಿವೆ. ಮುಂದೂಡುವ ಸಾಧ್ಯತೆಗಳಿವೆ. ಈ ಬಗ್ಗೆ ಗುರುವಾರ ಸ್ಪಷ್ಟವಾದ ನಿರ್ಧಾರ ಕೈಗೊಂಡು ಸುತ್ತೋಲೆ ಹೊರಡಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಆರ್.ಸ್ನೇಹಲ್ ತಿಳಿಸಿದ್ದಾರೆ ಎಂದು ವರದಿಯಾಗಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಹುಣಸೆಹಳ್ಳಿ: ಶಾಸಕ ಡಾ.ಸಿ.ಎಂ.ರಾಜೇಶ್ ಗೌಡರವರು ಇಂದು ಹುಣಸೆಹಳ್ಳಿ ಪಂಚಾಯತ್ ನಾರಾಯಣ ಪುರ ಚೆಕ್ ಡ್ಯಾಮ್ ತುಂಬಿದ್ದು ಗಂಗಾಪೂಜೆ ಮಾಡಿ ಭಾಗಿನ ಅರ್ಪಿಸಿದರು. ಇದೇ ವೇಳೆ ಗ್ರಾಮಸ್ಥರು ಅದ್ದೂರಿ ಸ್ವಾಗತದೊಂದಿಗೆ ಮಹಿಳೆಯರು ಆರತಿ ಬೆಳಗುವ ಮುಖಾಂತರ ಶಾಸಕರಿಗೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಗ್ರಾ. ಪಂ. ಅಧ್ಯಕ್ಷರು ಹನುಮಂತರಾಯಪ್ಪ, ಗ್ರಾ.ಪಂ.ಸದಸ್ಯರು ಆನಂದಪ್ಪ, ಹರೀಶ್, ಮೋಹನ್ ಗೌಡ, ಶಶಿದರ್, ನಾಗರಾಜ್, ಹುಣಸೆಹಳ್ಳಿ ಮಾಜಿ ಗ್ರಾ.ಪಂ. ಅಧ್ಯಕ್ಷರು ನಾಗರಾಜ್, ಟ್ರಜರಿ ನಾಗರಾಜ್,ಪ್ರಕಾಶ್ ಗೌಡ, ಮದ್ದೇವಳ್ಳಿ ನಾಗರಾಜ್, ಚಂಗಾವರ ಮಾರಣ್ಣ, ಹೊಸೂರು ಗ್ರಾ.ಪಂ.ಸದಸ್ಯ ಪ್ರಕಾಶ್, ಹೊಸೂರು ಕರಿಯಣ್ಣ ಹಾಗೂ ಅನೇಕ ಮುಖಂಡರು ಕಾರ್ಯಕರ್ತರು ಗ್ರಾಮಸ್ಥರು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700