Subscribe to Updates
Get the latest creative news from FooBar about art, design and business.
- ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
- ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
- ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
- ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
- ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
- ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
- ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
- ಖ್ಯಾತ ಖಳನಟ ಹರೀಶ್ ರಾಯ್ ನಿಧನ
Author: admin
ಪಾವಗಡ: ತಾಲೂಕು ಟೌನ್ ರೋಪ್ಪ ಪ್ರೀಮಿಯರ್ ಲೀಗ್(ಆರ್.ಪಿ.ಎಲ್. ) ಮೊಟ್ಟ ಮೊದಲ ಬಾರಿಗೆ ಲೈವ್ ಮಾಡುತ್ತಿದ್ದು, ಇದು ತುಂಬಾ ಸಂತೋಷದ ವಿಚಾರ ಎಂದು ಕಣ್ಮಣಿ ಸಮಾಜ ಸೇವಕರಾದ ನೇರಳೆ ಕುಂಟ್ಟೆ ನಾಗೇಂದ್ರ ಕುಮಾರ್ ಹೇಳಿದರು. ಕ್ರಿಕೆಟ್ ಒಂದು ಜನಪ್ರಿಯ ಆಟ. ಇಡೀ ಪ್ರಪಂಚದಲ್ಲಿಯೇ ಕ್ರಿಕೆಟ್ ಪ್ರೇಮಿಗಳಿದ್ದಾರೆ. ಇಂತ ಕ್ರೀಡೆಯನ್ನು ತಾಲೂಕಿನಲ್ಲಿಯೂ ನಡೆಸುತ್ತಾ, ಯುವಕರನ್ನು ಪ್ರೋತ್ಸಾಹಿಸುತ್ತಿರುವ ಎಲ್ಲರಿಗೂ ಶುಭ ಹಾರೈಸುತ್ತೇನೆ ಎಂದು ಅವರು ಹೇಳಿದರು. ಇಂತಹ ನೂರಾರು ಕ್ರೀಡೆಗಳು ನಮ್ಮ ಪಾವಗಡ ತಾಲ್ಲೂಕಿನಲ್ಲಿ ಹುಟ್ಟಿ ಬೆಳೆದು, ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ನಮ್ಮ ಒಂದು ಪಾವಗಡದ ಕೀರ್ತಿ ಪತಾಕೆ ಹಾರಬೇಕು. ಕ್ರೀಡೆ ಎಂಬುವುದು ಮಾನಸಿಕ ಮತ್ತು ದೈಹಿಕ ಆರೋಗ್ಯದ ಜೊತೆಗೆ ಸ್ನೇಹ ಬಾಂಧವ್ಯಗಳನ್ನು ಬೆಳೆಸಿ ನಮ್ಮ ತಾಲ್ಲೂಕು ಎಲ್ಲರಂಗದಲ್ಲಿಯೂ ಉನ್ನತ ಮಟ್ಟಕೆ ಹೋಗಬೇಕೆಂದು ಹಾರೈಸಿದರು. ವರದಿ: ರಾಮಪ್ಪ ಸಿ.ಕೆ.ಪುರ. ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ತುಮಕೂರು: ವಿವೇಕಾನಂದ ಸ್ಟಡಿ ಸೆಂಟರ್ ಹಾಗೂ ವಿವೇಕಾ ಹಂಸ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಮಹೇಶ್ ಪಿಯು ಸಂಸ್ಥೆಯ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದರ 160ನೇ ಜನ್ಮದಿನಾಚರಣೆಯ ಅಂಗವಾಗಿ “ವಿವೇಕ ಸಂಚಲನ 2022” ರ ಕಾರ್ಯಕ್ರಮವನ್ನು ಅಶೋಕನಗರ ದಲ್ಲಿರುವ ಮಹೇಶ್ ಪಿಯು ಕಾಲೇಜಿನಲ್ಲಿ ಸರಳವಾಗಿ ಸಂಭ್ರಮದಿಂದ ಕಾಲೇಜು ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳೊಂದಿಗೆ ಆಚರಿಸಲಾಯಿತು. ರಾಮಕೃಷ್ಣ ಮಠದ ಸಂಪನ್ಮೂಲ ವ್ಯಕ್ತಿಗಳಾದ ಸಂದೀಪ್ ವಶಿಷ್ಠರವರು ಮತ್ತು ಕಾಲೇಜಿನ ಪ್ರಾಂಶುಪಾಲರಾದ ವಿದ್ಯಾ ಪಟೇಲ್ ಕಾಲೇಜಿನ ಆಡಳಿತ ಮಂಡಳಿಯೊಂದಿಗೆ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ, ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂದೀಪ್ ವಸಿಷ್ಠರವರು ಸ್ವಾಮಿ ವಿವೇಕಾನಂದರ ಆದರ್ಶ, ಆಶಯ, ಮತ್ತು ಅವರ ಜೀವನ ಚರಿತ್ರೆ ಕುರಿತಾದ ಹಲವಾರು ವಿಚಾರಧಾರೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಂಬರುವ ಪರೀಕ್ಷೆ ಎದುರಿಸುವ ಕುರಿತಾಗಿ ಉಪಯುಕ್ತ ಸಲಹೆಗಳನ್ನು ನೀಡಿದರು. ಮಹೇಶ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಮುಂದಿನ ಶಿಕ್ಷಣ ಭವಿಷ್ಯ ಉತ್ತಮವಾಗಿರಲಿ ಎಂದು ಹಾರೈಸಿದರು. ಜಿಲ್ಲೆಯಲ್ಲೇ…
ಐಪಿಎಲ್ ಮೆಗಾಹರಾಜಿಗೆ ಕ್ಷಣಗಣನೆ ಶುರುವಾಗಿದ್ದು ಫೆ. 12 ಮತ್ತು 13 ರಂದು ಬೆಂಗಳೂರಿನಲ್ಲಿ ಹರಾಜು ನಡೆಯಲಿದೆ. ಈಗಾಗಲೇ ತಂಡಗಳ ಫ್ರಾಂಚೈಸಿಗಳು ಸಿಲಿಕಾನ್ ಸಿಟಿಗೆ ತಲುಪಿದ್ದು ತಮ್ಮ ತಂಡಕ್ಕೆ ಯಾವ ಯಾವ ಆಟಗಾರರನ್ನು ತೆಗೆದುಕೊಳ್ಳಬೇಕೆಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.ಈಗಾಗಲೇ ಐಪಿಎಲ್ನ ಬಿಡ್ ನಿಂದ ಸ್ಟಾರ್ ಆಟಗಾರರಾದ ಕ್ರಿಸ್ಗೇಲ್, ಮಿಚೆಲ್ ಸ್ಟ್ರಾಕ್, ಕೇಲ್ ಜೆಮ್ಮಿಸನ್, ಬೆನ್ ಸ್ಟ್ರೋಕ್ ಅವರು ಹೊರಗುಳಿದಿದ್ದರೆ, ಇನ್ನು ಬಿಡ್ ಅಖಾಡದಲ್ಲಿರುವ ಕೆಲವು ಸ್ಟಾರ್ ಆಟಗಾರರನ್ನು ಬಿಕರಿ ಮಾಡದೆ ಇರಲು ಕೂಡ ಫ್ರಾಂಚೈಸಿಗಳು ನಿರ್ಧರಿಸಿದ್ದರೆ. ಮೊದಲ ಸುತ್ತಿನಲ್ಲಿ ಸ್ಟಾರ್ ಆಟಗಾರರನ್ನು ಯಾವ ತಂಡಗಳ ಫ್ರಾಂಚೈಸಿಗಳು ಬಿಕರಿ ಮಾಡಿಕೊಳ್ಳದೆ ಎರಡನೇ ಸುತ್ತಿನಲ್ಲಿ ಕಡಿಮೆ ಬೆಲೆಗೆ ತಮ್ಮ ತಂಡದ ಪಾಲು ಮಾಡಿಕೊಳ್ಳುವ ಲೆಕ್ಕಾಚಾರಗಳನ್ನು ಕೂಡ ಹಾಕಿಕೊಂಡಿದ್ದಾರೆ.ಕಳೆದ ಬಾರಿಯ ಐಪಿಎಲ್ ಬಿಡ್ಡಿಂಗ್ನಲ್ಲೂ ಕೆರಿಬಿಯನ್ನ ಸ್ಟಾರ್ ಆಟಗಾರ ಕ್ರಿಸ್ ಗೇಲ್ ಅವರನ್ನು ಮೂಲ ಬೆಲೆ 2 ಕೋಟಿಗೆ ಪ್ರೀತಿ ಜಿಂಟಾ ಮಾಲೀಕತ್ವದ ಕಿಂಗ್ಸ್ ಪಂಜಾಬ್ ಕೊಂಡೊಕೊಂಡ ಜಾಣ್ಮೆಯನ್ನು ಈ ಬಾರಿಯು ಫ್ರಾಂಚೈಸಿಗಳು ತೊಡಗಿದ್ದು, ಭಾರತ ಹಾಗೂ ವಿದೇಶಿ ಸ್ಟಾರ್…
ಪಾವಗಡ: ತಾಲ್ಲೂಕು, ನಿಡಿಗಲ್ ಹೋಬಳಿ ಮಂಗಳವಾಡ ಗ್ರಾಮದಲ್ಲಿ ಅಂಬೇಡ್ಕರ್ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಪಂದ್ಯಾಕೂಟದಲ್ಲಿ ಕ್ರೀಡಾ ಅಭಿಮಾನಿಗಳಿಗೆ ಬೆಂಗಳೂರಿನ ಮಹಾಲಕ್ಷ್ಮಿಪುರಂನ ಶ್ರೀ ಸಾಯಿ ಲಾ ಚೇಂಬರ್ಸ್ ವತಿಯಿಂದ ಟ್ರೋಫಿ ನೀಡಿ ಪ್ರೋತ್ಸಾಹಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಜನಪ್ರಿಯ ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ, ಮಂಜುನಾಥ್, ಮಂಗಳವಾಡ ಗ್ರಾಮದ ಮುಖಂಡರಾದ ಧನಂಜಯ್, ಕಾಂತರಾಜ್, ನರಸೇಗೌಡ, ಮಂಜುನಾಥ್, ಬೆಟ್ಟದ ತಿಮ್ಮಣ್ಣ, ಹನುಮಂತರಾಯ, ರಾಮಣ್ಣ, ಭೂತಣ್ಣ, ಮದ್ದೆ ಮಲ್ಲಿಕಾರ್ಜುನ್, ರಾಜಣ್ಣ, ದೇವಲಕೆರೆ ಅಜಯ್ ಗೌಡ ಇನ್ನೂ ಅನೇಕ ಮುಖಂಡರು ಹಾಜರಿದ್ದರು. ವರದಿ: ನಂದೀಶ್, ಕೊಟ್ಟೂರು ಹೋಬಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ದಾವಣಗೆರೆ: ಕನ್ನಡದ ಕಬೀರ್ ಎಂದೇ ಹೆಸರಾಗಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರರು ಮನಸ್ಸುಗಳನ್ನು ಬೆಸೆಯುವ ಸೌಹಾರ್ದದ ಕನಸುಗಾರರಾಗಿದ್ದರು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಅವರು ಕಂಬನಿ ಮಿಡಿದರು. ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕುವೆಂಪು ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ಪದ್ಮಶ್ರೀ ಇಬ್ರಾಹಿಂ ಸುತಾರ ಹಾಗೂ ಭಾರತ ರತ್ನ ಲತಾ ಮಂಗೇಶ್ಕರ್ ಅವರ ನಿಧನದ ಗೌರವಾರ್ಥ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡುತ್ತಿದ್ದ ಅವರು , ನೀ ಎಂತಾದರೂ ಇರು, ನೀ ಹೇಗಾದರೂ ಇರು. ಆದರೆ ನೀತಿವಂತನಾಗಿ ಬಾಳು. ನಿನ್ನ ಬದುಕಿನಲ್ಲಿ, ವ್ಯವಹಾರದಲ್ಲಿ ನೀತಿ ತಪ್ಪಿ ಬದುಕಬೇಡ ಎಂದು ತಮ್ಮ ಪ್ರವಚನದಲ್ಲಿ ಸದಾ ಹೇಳುತ್ತಿದ್ದರು ಎಂದು ವಾಮದೇವಪ್ಪ ಅವರು ಇಬ್ರಾಹಿಂ ಸುತಾರ ಅವರ ವ್ಯಕ್ತಿತ್ವವನ್ನು ಶ್ಲಾಘಿಸಿದರು. ಹಿರಿಯ ಪತ್ರಕರ್ತ, ರಂಗಕರ್ಮಿ ಭಾ.ಮ.ಬಸವರಾಜಯ್ಯ ಮಾತನಾಡಿ ಇಬ್ರಾಹಿಂ ಎನ್. ಸುತಾರ ಅವರು ದಿನಾಂಕ 10-05-1940 ರಲ್ಲಿ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಬಡಕುಟುಂಬದಲ್ಲಿ ಜನಿಸಿದರು. 1970 ರಲ್ಲಿ “ಭಾವೈಕ್ಯ ಜನಪದ…
ಗುಬ್ಬಿ: ತಾಲ್ಲೂಕಿನ ಎಂ.ಎನ್.ಕೋಟೆ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನವಜೀವನ ಸಮಿತಿ ಸಭೆ ಆಯೋಜಿಸಲಾಗಿತ್ತು. ಕಾರ್ಯಕ್ರಮ ವನ್ನು ಬೆಂಗಳೂರು ಪ್ರದೇಶಿಕ ಕೇಂದ್ರದ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಗಣೇಶ್ ಆಚಾರ್ಯ ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಂ.ಎನ್.ಕೋಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ನವ ಜೀವನ ಸಮಿತಿ ಸದಸ್ಯರು ಮಾತನಾಡಿ, ನವಜೀವನ ಸಮಿತಿ ಸದಸ್ಯರಾದ ನಂತರದಲ್ಲಿ ನಾವುಗಳು ಅನೇಕ ದುಷ್ಚಟಗಳಿಂದ ಮುಕ್ತ ರಾಗಿ ಉತ್ತಮ ಜೀವನ ವ್ಯವಹಾರ ನೆಡೆಸುತ್ತಿದ್ದೇವೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ಮಧ್ಯವ್ಯಸನಿಗಳಿಗೆ ಕಾರ್ಯಾಗಾರ ನೆಡೆಸಿ ದುಷ್ಚಟಗಳಿಂದ ಹೊರಬರುವ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ನಾವು ನಮ್ಮ ಜೀವನ ಶೈಲಿಯನ್ನು ಬದಲಾವಣೆ ಮಾಡಿಕೊಳ್ಳಲು ಸಾಧ್ಯವಾಯಿತು ಎಂದು ತಮ್ಮ ಅಭಿಪ್ರಾಯಗಳನ್ನು ಸಭೆಯಲ್ಲಿ ಹಂಚಿಕೊಂಡರು. ಕಾರ್ಯ ಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಗಳು, ಪ್ರಗತಿ ಬಂಧುಗಳು ಹಾಜರಿದ್ದರು. ವರದಿ: ಮಂಜುನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಮಧುಗಿರಿ: ಗ್ರಾಮೀಣ ಭಾಗದ ಜನರ ಬೇಡಿಕೆಗಳನ್ನು ಈಡೇರಿಸಲು ಮೊದಲ ಆದ್ಯತೆ ನೀಡಲಾಗುವುದು ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು. ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ವೀರಪುರ ಗ್ರಾಮದಲ್ಲಿ ಸುಮಾರು 3 ಕೋಟಿ 40 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಭಾಗದ ಜನರ ಬಹು ದಿನದ ಬೇಡಿಕೆಯಂತೆ ಉತ್ತಮ ರಸ್ತೆ ನಿರ್ಮಾಣವಾಗುತ್ತಿದ್ದು, ಈ ಪಂಚಾಯಿತಿ ವ್ಯಾಪ್ತಿಯಲ್ಲಿ ಅವಶ್ಯಕತೆಗೆ ಅನುಗುಣವಾಗಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಗುತ್ತಿಗೆದಾರರು ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಬೇಕು ಹಾಗೂ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು. ವೀರಾಪುರ ಗ್ರಾಮದಲ್ಲಿ ಏಪ್ರಿಲ್ ನಂತರ ಶುದ್ದ ನೀರಿನ ಘಟಕ ಸ್ಥಾಪನೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ವಿರಭದ್ರಪ್ಪ, ಪಿಡಿಒ ಆನಂದ್, ಇಇ ಗಂಗಾಧರ್, ಗುತ್ತಿಗೆದಾರ ರಾಜೇಂದ್ರ, ಲೋಕೇಶ್ ರೆಡ್ಡಿ, ಸಿದ್ದಾರೆಡ್ಡಿ, ಜಯದೇವಪ್ಪ ಹಾಗೂ ಮುಂತಾದವರು ಇದ್ದರು. ವರದಿ: ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಕೊರೊನಾ ಸೋಂಕಿನಿಂದಾಗಿ ಕಳೆದ ಎರಡು ವರ್ಷಗಳಿಂದ ನಿರ್ಬಂಧ ವಿಧಿಸಲಾಗಿದ್ದ ವಿಶ್ವ ವಿಖ್ಯಾತ ಬೆಂಗಳೂರು ಕರಗ ಈ ಬಾರಿ ಅದ್ದೂರಿಯಾಗಿ ನೆರವೇರುವ ಸಾಧ್ಯತೆಗಳಿವೆ. ಬರುವ ಮಾ.8 ರಂದು ಕರಗ ಉತ್ಸವ ನಡೆಯಲಿದ್ದು, ಕರಗ ಸಮಿತಿಯವರು ಈಗಾಗಲೆ ಸಕಲ ಸಿದ್ದತೆಗಳನ್ನು ಕೈಗೊಂಡಿದ್ದಾರೆ. ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಕರಗ ಉತ್ಸವ ಇಂದಿಗೂ ತನ್ನ ಆಕರ್ಷಣೆಯನ್ನು ಕಳೆದುಕೊಂಡಿಲ್ಲ. ಬೆಂಗಳೂರು ನಿರ್ಮಾಪಕ ಕೆಂಪೇಗೌಡರ ಕಾಲದಿಂದಲೂ ಕರಗ ಉತ್ಸವ ನಡೆದುಕೊಂಡು ಬರುತ್ತಿದೆ. ಉತ್ಸವ ಅರಂಭದ ದಿನದಿಂದಲೂ ಇಲ್ಲಿಯವರೆಗೆ ದೇಶ ವಿದೇಶಗಳ ಸಾವಿರಾರು ಮಂದಿಯನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.ಇಂದಿಗೂ ಕರಗ ಉತ್ಸವಕ್ಕೆ ರಾಜ್ಯ, ಹೊರ ರಾಜ್ಯ ಹಾಗೂ ವಿದೇಶಗಳ 50 ಸಾವಿರಕ್ಕೂ ಹೆಚ್ಚು ಮಂದಿ ಭೇಟಿ ನೀಡಿ ದೇವರ ದರ್ಶನ ಪಡೆದು ಪುನಿತರಾಗುತ್ತಾರೆ. ಇಂತಹ ಜನಾಕರ್ಷಣೆಯ ಉತ್ಸವದ ಮೇಲೂ ಕೊರೊನಾ ಕರಿನೆರಳು ಬಿದ್ದ ಹಿನ್ನಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಕರಗ ಉತ್ಸವವನ್ನು ಸಾಧಾರಣವಾಗಿ ನಡೆಸಲಾಗಿತ್ತು. ಆದರೆ, ಈ ಬಾರಿ ಕೊರೊನಾ ಸೋಂಕು ಕ್ಷೀಣಿಸಿರುವುದರಿಂದ ಮಾರ್ಚ್ನಲ್ಲಿ ನಡೆಯಲಿರುವ ಕರಗದ ಅದ್ಧೂರಿ ಆಚರಣೆಗೆ…
ಅಂತಾರಾಷ್ಟ್ರೀಯ ವೃತ್ತಿಪರ ಕುಸ್ತಿಪಟು ಖಲಿ ಎಂದೇ ಗುರುತಿಸಲ್ಪಡುವ ದಿಲೀಪ್ ಸಿಂಗ್ ರಾಣಾ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇಂದು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸದಸ್ಯತ್ವ ಸ್ವೀಕರಿಸಿದ ಅವರು, ಬಿಜೆಪಿ ಸೇರ್ಪಡೆಯಾಗುತ್ತಿರುವುದಕ್ಕೆ ತುಂಬ ಸಂತೋಷವಾಗುತ್ತಿದೆ.ದೇಶಕ್ಕಾಗಿ ಕೆಲಸ ಮಾಡಲು ನರೇಂದ್ರ ಮೋದಿ ಅವರು ಸೂಕ್ತ ಪ್ರಧಾನಿ ನನಗೆ ಅನಿಸುತ್ತದೆ. ಹಾಗಾಗಿ ಸರ್ಕಾರದ ಅಭಿವೃದ್ದಿ ಕಾರ್ಯಗಳ ಜೊತೆ ಕೈ ಜೋಡಿಸಲು ನಾನು ಬಿಜೆಪಿ ಸೇರಿದ್ದೇನೆ ಎಂದು ಅಭಿಪ್ರಾಯಪಟ್ಟಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ವಿಜಾಪುರ ಜಿಲ್ಲೆ : ಬಸವನಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮ ಪಂಚಾಯಿತಿ ವತಿಯಿಂದ ನೂತನವಾಗಿ ನಿರ್ಮಾಣವಾಗುತ್ತಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುದ್ದಲಿಪೂಜೆ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರವ್ವ ಮೂರಮನ, ನೈರ್ಮಲ್ಯ ಮುಕ್ತ ಗ್ರಾಮ ಪಂಚಾಯತಿಯನ್ನಾಗಿ ಮಾಡುವ ಪರಿಕಲ್ಪನೆಯಲ್ಲಿ ಸುಮಾರು 12 ಲಕ್ಷ ರೂಪಾಯಿ ವೆಚ್ಚದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಮುಂದಾಗಿದ್ದೇವೆ ಎಂದು ಹೇಳಿದರು ಕಾರ್ಯಕ್ರಮದಲ್ಲಿ ಮಸಬಿನಾಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಅಪ್ಪಾಸಾಬ ಮಡಗೊಂಡ ಮಾಡುವ ಗ್ರಾಮ ಪಂಚಾಯತಿ ಸದಸ್ಯರಾದ ಶಿವಯ್ಯ ಹಿರೇಮಠ, ಬಸಲಿಂಗಯ್ಯ ಕೂಡಿಗೆಮಠ, ಶಂಕರ್ ಹಾರಿವಾಳ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಜಿ ಬೀ ಕಲ್ಯಾಣಿ, ಭೀಮ್ ಭೈರವಾಡಗಿ, ಉಪಸ್ಥಿತರಿದ್ದರು ವರದಿ: ಎ.ಎನ್. ಪೀರ್ , ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB