Author: admin

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಶ್ರೀಶೈಲ ಸರ್ಕಲ್ ಮತ್ತು ಚರ್ಚ್ ರಸ್ತೆಯಲ್ಲಿರುವ ವಿವಿಧ ಅಂಗಡಿಗಳಲ್ಲಿ ನಿಷೇಧಿತ ಪ್ಲಾಸ್ಟಿಕ್  ಕವರ್ ಮತ್ತು ಪ್ಲಾಸ್ಟಿಕ್ ಲೋಟ ಮಾರಾಟಗಾರರ ಮೇಲೆ ಪೌರಾಯುಕ್ತರಾದ ಡಿ.ಉಮೇಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಮಾಲಿಕರಿಂದ 7000 ರೂ. ದಂಡ ವಸೂಲಿ ಮಾಡಲಾಯಿತು. ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾದ ಸುನಿಲ್ ಕುಮಾರ್, ಅಂಜಿನಪ್ಪ, ಕಿರಿಯ ಆರೋಗ್ಯ ನಿರೀಕ್ಷಕರಾದ  ಅಶೋಕ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ ). ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಪ್ರವಚನ, ಸಂವಾದಗಳ ಮೂಲಕ ಭಾವೈಕ್ಯತೆ ಸಂದೇಶಗಳನ್ನು ಸಾರುತ್ತಿದ್ದ ಕನ್ನಡದ ಕಬೀರ ಎಂದೇ ಪ್ರಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್(76) ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದು, ಇಂದು ಬೆಳಗ್ಗೆ ಹೃದಯಘಾತವಾಗಿದ್ದು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದವರಾದ ಇಬ್ರಾಹಿಂ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇಬ್ರಾಹಿಂ ಅವರ ಅಂತ್ಯಕ್ರಿಯೆ ಇಂದು ಮಹಾಲಿಂಗಪುರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಇಬ್ರಾಹಿಂ ಸುತಾರ್ ಅವರು ನಾಡಿನ ಎಲ್ಲೆಡೆ ತಮ್ಮ ಪ್ರವಚನಗಳ ಮೂಲಕ ಭಾವೈಕ್ಯತೆಯ ಸಂದೇಶ ಸಾರಿ ಪ್ರಸಿದ್ದಿಯಾಗಿದ್ದರು. ಧರ್ಮ, ಸೂಫಿ ಪರಂಪರೆಗಳ ಪ್ರವಚನಗಳ ಮೂಲಕ ಸಾಮರಸ್ಯಕ್ಕಾಗಿ ಅವರು ಶ್ರಮಿಸಿದ್ದರು.ಹಿಂದು, ಮುಸ್ಲಿಂ ಭಾವೈಕತಾ ಶ್ರೇಷ್ಠ ಪ್ರವಚಕ, ಸೂಫಿ ಸಂತರಾಗಿದ್ದ ಸುತಾರ್‍ಗೆ ಕಳೆದ ನಾಲ್ಕು ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ರಾಜ್ಯೋತ್ಸವ ಪ್ರಶಸ್ತಿ, ಅಸಮಾನ್ಯ ಕನ್ನಡಿಗ ಪ್ರಶಸ್ತಿ ಸೇರಿದಂತೆ…

Read More

ಬಾಗಲಕೋಟೆ: ಕನ್ನಡದ ಕಬೀರ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಎನ್‌ ಸುತಾರ್ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರ ಪಟ್ಟಣದಲ್ಲಿ ಇಂದು ಬೆಳಗ್ಗೆ 6:30ಕ್ಕೆ ಇಬ್ರಾಹಿಂ ಸುತಾರ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಕಳೆದ 3-4 ದಿನಗಳಿಂದ ಇಬ್ರಾಹಿಂ ಸುತಾರ್ ಹೃದಯದ ನೋವಿಗೆ ಚಿಕಿತ್ಸೆ ಪಡೆದಿದ್ದರು. ಇಂದು ಬೆಳಿಗ್ಗೆ ಮತ್ತೆ ಲಘು ಹೃದಯಾಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ಇಬ್ರಾಹಿಂ ಸುತಾರ್ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಇಬ್ರಾಹಿಂ ಸುತಾರ್ ಕೊನೆಯುಸಿರೆಳೆದಿದ್ದಾರೆ. ಸುತಾರ್ ಅವರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಮುಖ್ಯಮಂತ್ರಿ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ. ಇಬ್ರಾಹಿಂ ಸುತಾರ್ ವೈದಿಕ, ವಚನ ಹಾಗೂ ಸೂಫಿ ಪರಂಪರೆ ಆಶಯಗಳ ಹದ ಪಾಕವನ್ನು ಭಜನೆ, ಪ್ರವಚನ, ಸಂವಾದಗಳ ಮೂಲಕ ಉಣಬಡಿಸಿ ಹಿಂದೂ–ಮುಸ್ಲಿಮರ ನಡುವೆ ಭಾವೈಕ್ಯತೆಯ ಕಂಪು ಪಸರಿಸಿದ್ದ ಕೃಷ್ಣೆಯ ನಾಡಿನ ಕಬೀರ ಆಗಿದ್ದರು. ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪುರಸ್ಕೃತರು…

Read More

ತುಮಕೂರು: ಅತಿಥಿ ಉಪನ್ಯಾಸಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ಎಲ್ಲರನ್ನೂ ಸೇವೆಯಲ್ಲಿ ಮುಂದುವರಿಸುವಂತೆ  ಎಸ್. ವರಲಕ್ಷ್ಮಿ ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು. ರಾಜ್ಯದಲ್ಲಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿದ್ದು,  1.80 ಲಕ್ಷ ವಿದ್ಯಾರ್ಥಿಗಳು ಪ್ರಸ್ತುತ ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರದ ಆದೇಶದಂತೆ ಅನ್ ಲೈನ್ ಅಪ್ಲಿಕೇಷನ್ ಐಡಿ ಪ್ರಕಾರ 14,106 ಅತಿಥಿ ಉಪನ್ಯಾಸಕರು ಇದ್ದಾರೆ . ಇನ್ನೂ ಹೆಚ್ಚಾಗಿರುವ ಕಾಲೇಜುಗಳಲ್ಲಿ  ಹೊಸಬರನ್ನು ಆಯ್ಕೆ ಮಾಡಿಕೊಳ್ಳುವ ಸರ್ಕಾರದ  ಸೂಚನೆ ಪ್ರಕಾರ ಅಂದಾಜು 3,000 ಜನ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಒಟ್ಟು 17.106 ಅತಿಥಿ ಉಪನ್ಯಾಸಕರಾಗುತ್ತಾರೆ ಎಂದು ತಿಳಿಸಿದರು. ಶಿಕ್ಷಣ ತಜ್ಞರು ಅತಿಥಿ ಉಪನ್ಯಾಸಕ ಸಂಘದ  ಪ್ರತಿನಿಧಿಗಳನ್ನು ಯೋಜನಾ ಇಲಾಖೆ ಮತ್ತು ಉಪನ್ಯಾಸಕರ ಸಂಘಟನೆಗಳ ಪ್ರತಿನಿಧಿಗಳನ್ನೂಳಗೊಂಡ  ಸಮಿತಿ ರಚಿಸುವ ಬದಲಿಗೆ ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ಮಂಡಳಿ ಮತ್ತು ಹಣಕಾಸು ಇಲಾಖೆಯ ಅಧಿಕಾರಿಗಳನ್ನು ಮಾತ್ರ ಬಳಸಿಕೊಂಡು ರಚಿಸಿದ ಸಮಿತಿ ನಿರೀಕ್ಷೆ ಪ್ರಾಕಾರ  ಸಂಪೂರ್ಣ ಅತಿಥಿ ಉಪನ್ಯಾಸಕರನ್ನು ರಕ್ಷಣೆ ಮಾಡುವ ಬದಲಿಗೆ ಆತುರವಾಗಿ ಶಿಫಾರಸ್ಸು…

Read More

ಅಹಮದಾಬಾದ್: ಕುಟುಂಬ ಗಿಫ್ಟ್ ಆಗಿ ನೀಡಿದ ಹೆಲಿಕಾಪ್ಟರ್‌ನ್ನು ವೈದ್ಯಕೀಯ ತುರ್ತುಸ್ಥಿತಿಗಾಗಿ ದಾನ ಮಾಡಿ ಮೆಚ್ಚುಗೆಗೆ ಪಾತ್ರರಾದ ಪದ್ಮಶ್ರೀ ಪುರಸ್ಕೃತರು. 59 ವರ್ಷದ ಸೂರತ್ ನಿವಾಸಿಯಾಗಿರುವ ಸಾವ್ಜಿ ಧೋಲಾಕಿಯಾ ಅವರು ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪಡೆದಿದ್ದಾರೆ. ಈ ಕಾರದಿಂದ ಕುಟುಂಬ ಸದಸ್ಯರು ಹೆಲಿಕಾಪ್ಟರ್ ಅನ್ನು ಉಡುಗೊರೆಯಾಗಿ ನೀಡಿದ್ದರು. 50 ಕೋಟಿ ರೂ.ಬೆಲೆಯ ಹೊಚ್ಚಹೊಸ ಹೆಲಿಕಾಪ್ಟರ್‌ನ್ನು ಅವರು, ಸೂರತ್‍ನ ವೈದ್ಯಕೀಯ ಮತ್ತು ಇತರ ತುರ್ತು ಪರಿಸ್ಥಿತಿಗಳಿಗಾಗಿ ಕೊಡುಗೆಯಾಗಿ ನೀಡುವ ಮೂಲಕ ಎಲ್ಲಡೆ ಮೆಚ್ಚುಗೆ ಪಡೆದಿದ್ದಾರೆ. ಧೋಲಾಕಿಯಾ ಅವರು ಹರಿಕೃಷ್ಣ ಡೈಮಂಡ್ ಕಂಪನಿಯ ಮಾಲೀಕರಾಗಿದ್ದಾರೆ. ಇವರು ಕೆಲವು ದಿನಗಳಿಂದ ಸೂರತ್‍ನ ಜನರಿಗೆ ಹೆಲಿಕಾಪ್ಟರ್ ಉಡುಗೊರೆಯಾಗಿ ನೀಡಲು ಯೋಜಿಸಿದ್ದರು. ಆದರೆ ಆಶ್ಚರ್ಯಕರ ರೀತಿಯಲ್ಲಿ ಹೆಲಿಕಾಪ್ಟರ್‌ನ್ನೇ ಉಡುಗೊರೆಯನ್ನು ಸ್ವೀಕರಿಸಿದ ನಂತರ ಅವರು ಅದನ್ನೇ ಸೂರತ್ ಜನತೆಗೆ ಕೊಡುಗೆಯಾಗಿ ನೀಡಿದ್ದಾರೆ. ಈ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೂರತ್ ಗುಜರಾತ್‍ನ ಆರ್ಥಿಕ ರಾಜಧಾನಿಯಾಗಿದೆ. ಆದರೆ ತನ್ನದೇ ಆದ ಹೆಲಿಕಾಪ್ಟರ್ ಹೊಂದಿಲ್ಲ. ಹೀಗಾಗಿ, ನಾನು ಈ ಉಡುಗೊರೆಯನ್ನು…

Read More

ತಿಪಟೂರು: ನಗರದ   ಸಾರ್ವಜನಿಕ ಆಸ್ಪತ್ರೆ ಹಾಗೂ ಎನ್ಸಿಡಿ (NCD) ಕ್ಲಿನಿಕ್ ಇವರ ವತಿಯಿಂದ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ವಿಶ್ವ ಕ್ಯಾನ್ಸರ್ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಮುಖ್ಯ ವೈದ್ಯಾಧಿಕಾರಿ ಡಾ.ಪ್ರಹ್ಲಾದ್,  ಕ್ಯಾನ್ಸರ್ ಕಾಯಿಲೆ ಇಂದು ಪ್ರಪಂಚದಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕಾಯಿಲೆಯಾಗಿದ್ದು, ಸಾರ್ವಜನಿಕರು ಇದರ ಬಗ್ಗೆ ಅರಿವು ಮುಂಜಾಗ್ರತೆ ಪಡೆದುಕೊಳ್ಳುವುದು ಉತ್ತಮ,  ಕ್ಯಾನ್ಸರ್ ತಪಾಸಣೆ ಮಧುಮೇಹ ಅಧಿಕ ರಕ್ತದೊತ್ತಡ ತಪಾಸಣೆಗಳು ಒಂದು ವಾರಗಳ ಕಾಲ ನಮ್ಮ ಆಸ್ಪತ್ರೆಯಲ್ಲಿ (ಸಪ್ತಾಹ) ಏರ್ಪಡಿಸಿದ್ದು, ಸಾರ್ವಜನಿಕರು ತಪಾಸಣೆ  ಮಾಡಿಸಿಕೊಳ್ಳುವುದರ ಮೂಲಕ,ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.  ಆಸ್ಪತ್ರೆಯ ವೈದ್ಯರುಗಳಾದ ಡಾ.ಸುರೇಶ್, ಡಾ.ರಕ್ಷಿತ್, ಡಾ. ಸ್ವಾಮಿ ಮತ್ತು  ಡಾ.ವಿಜಯಕುಮಾರ್, ಸಿಬ್ಬಂದಿಗಳಾದ ರಾಘವ್, ಉಮೇಶ್ ಮತ್ತು ಆಪ್ತ ಸಮಾಲೋಚಕ ಶ್ರೀನಿವಾಸ್ ಸೇರಿದಂತೆ ಎನ್.ಸಿ.ಡಿ.  ಸಿಬ್ಬಂದಿ ಮತ್ತು  ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ತಿಪಟೂರು : ತಾಲ್ಲೂಕಿನ ಧಾರ್ಮಿಕ ಕ್ಷೇತ್ರವಾದ ಆದಿಚುಂಚನಗಿರಿ ಶಾಖಾಮಠದ ದಸರೀಘಟ್ಟದ ಚೌಡೇಶ್ವರಿ ದೇವಾಲಯದಲ್ಲಿ ಫೆ.6 ರಂದು ಭಾನುವಾರ ಮಧ್ಯಾಹ್ನ 12 ಗಂಟೆಗೆ ಚೌಡೇಶ್ವರಿ ದೇವಿಯ ನೂತನ ವಿಗ್ರಹ ಪ್ರತಿಷ್ಠಾಪನಾ ಪೂಜಾ ಮಹೋತ್ಸವವು ನೆರವೇರಲಿದೆ. ಈ ಸಂದರ್ಭದಲ್ಲಿ ಆದಿಚುಂಚನಗಿರಿಯ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯಸಾನಿಧ್ಯವನ್ನು ವಹಿಸಲಿದ್ದು, ಅಧ್ಯಕ್ಷತೆಯನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ, ಮಾಜಿ ಶಾಸಕ ಕೆ.ಷಡಕ್ಷರಿ, ಮಾಜಿ ವಿಧಾನಪರಿಷತ್ ಸದಸ್ಯ ಡಿ.ಎಲ್.ಜಗದೀಶ್, ಬೆಂಗಳೂರಿನ ರಾಮಕೃಷ್ಣಪ್ಪ, ಚಲನಚಿತ್ರ ನಿರ್ಮಾಪಕ ಚನ್ನೇಗೌಡ ಭಾಗವಹಿಸಲಿದ್ದಾರೆ ಎಂದು ಮಠದ ಕಾರ್ಯದರ್ಶಿ ಚಂದ್ರಶೇಖರನಾಥ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ತುಮಕೂರು:  ಬಿಸಿಯೂಟ ತಯಾರಿಕಾ ಸಿಬ್ಬಂದಿಯ ವೇತನವನ್ನು ಹೆಚ್ಚಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಿಕರ ಫೆಡರೇಷನ್(ಎಐಟಿಯುಸಿ) ವತಿಯಿಂದ  ಒತ್ತಾಯಿಸಲಾಯಿತು. 2022ರ ಬಜೆಟ್ ನಲ್ಲಿ ಬಿಸಿಯೂಟ ತಯಾರಿಕರ ವೇತನ ಹೆಚ್ಚಿಸುವಂತೆ  ಒತ್ತಾಯಿಸಲಾಗಿತ್ತು.  ಆದರೆ, ಬಜೆಟ್ ನಿಂದ ನಿರಾಸೆಯಾಗಿದೆ ಎಂದ ಎಐಟಿಯುಸಿ ಮುಖಂಡರು,  ಸರ್ಕಾರದ ನಿರ್ಧಾರದಿಂದ ಶಾಲೆಗಳಲ್ಲಿ ಅಡುಗೆ ಸಹಾಯಕರಾಗಿ ದುಡಿಯುತ್ತಿರುವ ಬಿಸಿಯೂಟ ತಯಾರಕರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯ ಅಡುಗೆಯವರಿಗೆ ತಿಂಗಳಿಗೆ ಕೇವಲ 2,700 ರೂಪಾಯಿ, ಸಹಾಯಕ ಅಡುಗೆಯವರಿಗೆ ತಿಂಗಳಿಗೆ ಕೇವಲ 2,600 ರೂಪಾಯಿಗಳನ್ನು ನೀಡಲಾಗುತ್ತಿದೆ. ಇದರಿಂದ ಜೀವನ ನಿರ್ವಹಿಸಲು ಸಾಧ್ಯವಿಲ್ಲ ಎಂದರು. ನಮ್ಮ ಮನವಿಯನ್ನು ಪುನರ್ ಪರಿಶೀಲನೆ ಮಾಡಿ 2022ರ ಬಜೆಟ್ ನಲ್ಲಿಯೇ ಕನಿಷ್ಠ ವೇತನ ಜಾರಿ ಮಾಡಬೇಕು ಎಂದು ಪ್ರತಿಭಟನಾಕಾರರು  ಒತ್ತಾಯಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಪಾವಗಡ:  ತಾಲೂಕು ನಿಡಿಗಲ್ ಹೋಬಳಿ ಸಿ.ಕೆ.ಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಜಿ.ಎಲ್.ಪಿ.ಎಸ್.  ದೇವರಹಟ್ಟಿ ಶಾಲೆಯ  ಹೆಂಚುಗಳು ಒಡೆದು ಹೋಗಿದ್ದು, ಇದರ ದುರಸ್ತಿಗೆ ಹಣ ಮಂಜೂರಾದರೂ ದುರಸ್ತಿ ಕಾರ್ಯ ನಡೆಸಿಲ್ಲ ಎಂದು ಎಸ್ ಡಿಎಂಸಿ ಸದಸ್ಯರು ಹಾಗೂ ಪೋಷಕರ ನಡುವೆ ಮಾತಿನ ಚಕಮಕಿ ನಡೆಯಿತು. ಶಾಲೆಯ ಮೇಲ್ಛಾವಣಿಯ ಹೆಂಚು ಒಡೆದು ಹೋಗಿ ವಿದ್ಯಾರ್ಥಿಗಳಿಗೆ ಓದುವ ವಾತಾವರಣ ವಿಲ್ಲದಂತಾಗಿದೆ. ಮೇಲ್ಛಾವಣಿಯ ಹೆಂಚುಗಳು ಹೋಗಿ ಶಾಲೆಯೊಳಗೆ ಬಿಸಿಲು ಬೀಳುತ್ತಿವೆ.  ಇದರ ದುರಸ್ತಿಗೆ 1 ಲಕ್ಷ ರೂಪಾಯಿಗಳು ಮಂಜೂರಾಗಿದ್ದರೂ, ದುರಸ್ತಿ ಕಾರ್ಯ ನಡೆಸಲಾಗಿಲ್ಲ ಎಂದು ಪೋಷಕರು ಆರೋಪಿಸಿದರು. ತಕ್ಷಣವೇ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಹಾಗೂ ಶಾಲೆಯ ಅಧಿಕಾರಿಗಳು ಈ ಸಂಬಂಧ ಕ್ರಮಕೈಗೊಳ್ಳಬೇಕು.  ಶಾಲಾ ಕೊಠಡಿಯ ಮೇಲ್ಛಾವಣಿಯನ್ನು ಸರಿಪಡಿಸಬೇಕು ಎಂದು  ಗ್ರಾಮಸ್ಥರು ಹಾಗೂ ಎಸ್ ಡಿಎಂಸಿಯವರು ಅಧ್ಯಕ್ಷರು ಪೋಷಕರು ಒತ್ತಾಯಿಸಿದ್ದಾರೆ. ಈ ವೇಳೆ ಗ್ರಾಮಸ್ಥರಾದ ಪ್ರಭಾಕರ್, ಚಿತ್ತಣ್ಣ, ದೊಡ್ಡ ದಾಸಪ್ಪ, ಪೂಜಾರಪ್ಪ, ಈರಮುತ್ತಪ್ಪ, ಶಾರದಮ್ಮ,  ಮಮತಾ  ಮತ್ತಿತರರು ಭಾಗವಹಿಸಿದರು.  ವರದಿ: ನಂದೀಶ್,  ಕೊತ್ತೂರು ನಿಡಗಲ್ ಹೋಬಳಿ ನಮ್ಮತುಮಕೂರು.ಕಾಂನ ಕ್ಷಣ…

Read More

ತುಮಕೂರು:  ಚಿಕ್ಕನಾಯಕನಹಳ್ಳಿ  ತಾಲ್ಲೂಕಿನ ತಹಶೀಲ್ದಾರ್‌ ತೇಜಸ್ವಿನಿ ಬಿ. ರವರ ವಿರುದ್ಧ ಜ.22 ರಂದು ಅಟ್ರಾಸಿಟಿ ಕಾಯ್ದೆ ಅಡಿಯಲ್ಲಿ ಎಫ್.ಐ.ಆರ್ ದಾಖಲಾಗಿ ಒಂದು ವಾರ ಕಳೆದರೂ ಅವರನ್ನು ಬಂಧಿಸದೇ, ಅಮಾನತ್ತು ಮಾಡದೆ ಸೇವೆಯಲ್ಲಿ ಮುಂದುವರೆಸಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ  ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು,  ಅಟ್ರಾಸಿಟಿ ಆರೋಪ ಹೊತ್ತಿರುವ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ರವರು ಇದೇ ಜಾಗದಲ್ಲಿ ಸೇವೆ ಮುಂದುವರೆಸಿದ್ದಾರೆ. ತಹಶೀಲ್ದಾರ್ ತಮ್ಮ ವಿರುದ್ಧದ ಆರೋಪಗಳ ಬಗ್ಗೆ  ಸಾಕ್ಷಿ ನಾಶಕ್ಕೆ ಮುಂದಾಗುವ ಎಲ್ಲಾ ಸಾಧ್ಯತೆಗಳು ಇರುತ್ತದೆ. ಆದ್ದರಿಂದ ತುರ್ತಾಗಿ ಆರೋಪಿತೆಯನ್ನು ಬಂಧಿಸಿ ಅಮಾನತುಗೊಳಿಸುವಂತೆ ಬುಡಕಟ್ಟು ಮಹಾಸಭಾ ಒತ್ತಾಯಿಸಿದೆ. ಈ ವೇಳೆ ಮಾತನಾಡಿದ ದೂರುದಾರ ಪರಮೇಶ್ ಜಿಲ್ಲಾಧಿಕಾರಿಗಳು ಕೂಡಲೇ ತಾಲ್ಲೂಕು ತಹಶೀಲ್ದಾರ್ ಅವರ ಮೇಲೆ ಸೂಕ್ತ ಕ್ರಮ ವಹಿಸದೆ ಹೋದರೆ ಮುಂದಿನ ದಿನಗಳಲ್ಲಿ ಇದರ ಬಗ್ಗೆ ಹೋರಾಟ ನಡೆಸಲಾಗುವುದು ಎಂದರು. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ ವೇಳೆ ಶಾಂತರಾಜು,…

Read More