Subscribe to Updates
Get the latest creative news from FooBar about art, design and business.
- ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ
- 100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ
- ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!
- ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ
- ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
- ಹಣಕಾಸು ಇಲಾಖೆಯ ಸಲಹೆ ರಾಜಕೀಯ ಮಾಡುವ ವಿಷಯವಲ್ಲ, ಬಿಜೆಪಿ ಪ್ರತಿಭಟಿಸಲಿ: ಡಿ.ಕೆ. ಶಿವಕುಮಾರ್ ತಿರುಗೇಟು
- ಮಧುಗಿರಿ: ಪೌತಿ ಖಾತೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ ನಾಗೇಶ್!
Author: admin
ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಇತಿಹಾಸದಲ್ಲೇ ದಾಖಲೆಯ ಪ್ರಮಾಣದಲ್ಲಿ ಅನುದಾನ ತಂದಿರುವ ಸಮಾಧಾನ ನನಗಿದೆ. ಹಾಗಂತ ನನಗಿನ್ನೂ ಸಂಪೂರ್ಣ ತೃಪ್ತಿ ಇಲ್ಲ. ಇನ್ನಷ್ಟು ಅಭಿವೃದ್ಧಿಪರ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾವಗಾಂವ ಗ್ರಾಮದ ರಸ್ತೆಗಳ ಹಾಗೂ ಒಳಚರಂಡಿಗಳ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆಯ ವತಿಯಿಂದ 2.5 ಕೋಟಿ ರೂ,ಗಳನ್ನು ಮಂಜೂರು ಮಾಡಿಸಿರುವ ಲಕ್ಷ್ಮೀ ಹೆಬ್ಬಾಳಕರ್, ಶುಕ್ರವಾರ ಕಾಂಕ್ರೀಟ್ ರಸ್ತೆಗಳ ಹಾಗೂ ಒಳಚರಂಡಿಗಳ ಕಾಮಗಾರಿಗಳಿಗೆ ಪೂಜೆ ನೆರವೇರಿಸಿದರು. ಜನರಿಗೆ ತುರ್ತು ಅಗತ್ಯದ ಕೆಲಸಗಳನ್ನು ಮಾಡಿಸಿದ್ದೇನೆ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕೆಲಸ ಮಾಡಿದ್ದೇನೆ. ಆರೋಗ್ಯ ಕ್ಷೇತ್ರದಲ್ಲಿ ಒಂದಿಷ್ಟು ಕೆಲಸಗಳನ್ನು ಮಾಡಿಸಿದ್ದೇನೆ. ಶೈಕ್ಷಣಿಕ ಕ್ಷೇತ್ರದಲ್ಲಿ ಕೆಲಸಗಳಾಗಿವೆ. ನೀರಾವರಿ ಯೋಜನೆಗಳು ಬಂದಿವೆ. ಆದರೆ ಇವಿಷ್ಟರಿಂದಲೇ ನಾನು ತೃಪ್ತಿಪಡುವವಳಲ್ಲ. ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ದೊಡ್ಡ ಯೋಜನೆಗಳನ್ನು ತರುವ, ಯುವಕರಿಗೆ ಉದ್ದೋಗ ಸೃಷ್ಟಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದೇನೆ. ಮುಂದಿನ ದಿನಗಳಲ್ಲಿ ಅವನ್ನೆಲ್ಲ ಕ್ಷೇತ್ರದ ಜನರು ಕಾಣಲು ಸಾಧ್ಯ ಎಂದು…
ಶಾಲಾ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಅಥಣಿಯ ತಾಲೂಕಿನ ವಿಜಯಪುರ – ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಶಾಲಾ ವಾಹನ ನಜ್ಜುಗುಜ್ಜಾಗಿದ್ದು, ಇಬ್ಬರು ಚಾಲಕರು ಸ್ಥಳದಲ್ಲೇ ಸಾವಿಗಿಡಾಗಿದ್ದಾರೆ. 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹುಬ್ಬಳ್ಳಿ: ನಿಮ್ಮ ಕ್ರೆಡಿಟ್ ಕಾರ್ಡ್ ಕ್ಯಾಶ್ ಬ್ಯಾಕ್ ಬಂದಿದೆ ಎಂದು ನಗರದ ಉಣಕಲ್‌ನ ಬ್ಯಾಂಕ್ ಉದ್ಯೋಗಿಗೆ ಮೊಬೈಲ್‌ಗೆ ಲಿಂಕ್ ಕಳುಹಿಸಿ ಬ್ಯಾಂಕ್ ಮಾಹಿತಿ ಪಡೆದ ವಂಚಕರು 3.12 ಲಕ್ಷ ರೂಪಾಯಿ ಹಣ ವರ್ಗಾಯಿಸಿಕೊಂಡಿದ್ದಾನೆ. ಕ್ರೆಡಿಟ್ ಕಾರ್ಡ್‌ಗೆ 6 ಸಾವಿರ ಕ್ಯಾಶ್ ಬ್ಯಾಕ್ ಬಂದಿದ್ದು, ಅದನ್ನು ಪಡೆಯಲು ಲಿಂಕ್ ಒತ್ತಿ ಮಾಹಿತಿ ಭರ್ತಿ ಮಾಡಬೇಕು ಎಂದು ಮಹಾಂತೇಶ ಅವರ ಮೊಬೈಲ್‌ಗೆ ವಂಚಕ ಲಿಂಕ್ ಸಮೇತ ಸಂದೇಶ ಕಳುಹಿಸಿದ್ದ. ಅದನ್ನು ನಂಬಿದ ಅವರು ಆನ್‌ಲೈನ್‌ನಲ್ಲಿ ಈ-ಮೇಲ್ ಐಡಿ, ಫೋನ್ ನಂಬರ್, ಕ್ರೆಡಿಟ್ ಕಾರ್ಡ್ ನಂಬರ್ ಭರ್ತಿ ಮಾಡಿದ್ದಾರೆ. ಅದಾದ ಕೆಲವೇ ಸಮಯದಲ್ಲಿ ವಂಚಕ ಅವರ ಬ್ಯಾಂಕ್ ಖಾತೆಯಿಂದ ಏಳು ಬಾರಿ ಹಣ ವರ್ಗಾಯಿಸಿಕೊಂಡಿದ್ದಾನೆ. ಹುಬ್ಬಳ್ಳಿ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಾವರ್ಕರ್ ವಾರ್ ಶುರುವಾಗಿದೆ. ಇದರ ನಡುವೆ ಈಗ ಮತ್ತೊಂದು ಹೊಸ ಗಲಾಟೆ ಶುರುವಾಗಿದೆ. ಗೋಕಾಕ್ ತಾಲೂಕಿನ ಖನಗಾಂವ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿದೆ. ತಡರಾತ್ರಿ ಕೆಲ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಭಾವಚಿತ್ರ ಹರಿದು ದರ್ಪ ಮೆರೆದಿದ್ದಾರೆ. ಕಿಡಿಗೇಡಿಗಳ ಕೃತ್ಯವನ್ನ ಖಂಡಿಸಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಟೈರ್ಗೆ ಬೆಂಕಿ ಹಚ್ಚಿ ಗ್ರಾಮದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ. ಗ್ರಾಮದ ರಸ್ತೆಗೆ ರಾಯಣ್ಣ ಸರ್ಕಲ್ ಎಂದು ಹೆಸರಿಡಿ ಎಂದು ಫೋಟೋ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗೋಕಾಕ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಧಾರವಾಡ: ನಗರದಲ್ಲಿ ಸಾವರ್ಕರ್ ಫೋಟೋ ಸುಟ್ಟ ಪ್ರಕರಣ ಸಂಬಂಧಿಸಿ ಕಾಂಗ್ರೆಸ್ ನ 12 ಕಾರ್ಯಕರ್ತರ FIR ದಾಖಲಿಸಲಾಗಿದೆ. ನಿನ್ನೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆಯಲ್ಲಿ ವೀರ್ ಸಾವರ್ಕರ್ ಅವರ ಭಾವಚಿತ್ರಕ್ಕೆ ಮೊಟ್ಟೆ ಒಡೆದು, ಬಳಿಕ ಕಾಲಿನಲ್ಲಿ ಭಾವಚಿತ್ರ ತುಳಿದು ಅವಮಾನ ಮಾಡಿದ್ದಾರೆ. ಈ ವೇಳೆ ಕಾರ್ಯಕರ್ತರು ಪೂರ್ವ ನಿಯೋಜಿತವಾಗಿ ಐದಾರು ಭಾವಚಿತ್ರ ತಂದಿದ್ದರು. ಪೊಲೀಸ್ ಬಂದೋಬಸ್ತ್ ಮಧ್ಯೆಯೇ ಸಾವರ್ಕರ್ ಭಾವಚಿತ್ರಕ್ಕೆ ಅವಮಾನ, ಸುಟ್ಟು ಹಾಕಿದರು. ಕಾಂಗ್ರೆಸ್ ಕಾರ್ಯಕರ್ತರಿಂದ ವೀರ್ ಸಾವರ್ಕರ್ ಫೋಟೋ ಸುಟ್ಟ ಹಿನ್ನೆಲೆ ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ಧಾರವಾಡದ ಉಪ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಮಾಡಿದ್ದಾರೆ. ಸಾವರ್ಕರ್ ಫೋಟೋ ಸುಟ್ಟವರನ್ನು ಬಂಧಿಸುವಂತೆ ಧಾರವಾಡ-ಬೆಳಗಾವಿ ರಸ್ತೆ ತಡೆದು ಬಿಜೆಪಿ ಮತ್ತು ಹಿಂದೂಪರ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಈ ಬಗ್ಗೆ ಭಜರಂಗದಳದ ಮುಖಂಡ ಶಿವಾನಂದ ಸತ್ತಿಗೇರಿ ಧಾರವಾಡ ಉಪಠಾಣೆಗೆ ದೂರು ನೀಡಿದ್ದರು. ಇಂದು ಧಾರವಾಡ ಉಪಠಾಣೆಯಲ್ಲಿ ಕಾಂಗ್ರೆಸ್‌ನ 12 ಕಾರ್ಯಕರ್ತರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ…
ತುಮಕೂರು: ರಾಜಕೀಯ ದುರುದ್ದೇಶ ಇಟ್ಟುಕೊಂಡು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆಯಲಾಗಿದೆ. ಹೀಗೆ ಮುಂದುವರೆದರೆ ಬಿಜೆಪಿಯವರು ಕಾರ್ಯಕ್ರಮ ಮಾಡಲು ಕೂಡ ಬಿಡೋದಿಲ್ಲ ಎಂದು ಕೆ.ಎನ್.ರಾಜಣ್ಣ ಎಚ್ಚರಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗು ಸಂತ್ರಸ್ಥರನ್ನ ವಿಚಾರಿಸಲು ಸಿದ್ದರಾಮಯ್ಯ ಹೋಗಿದ್ರು. ಬಡವರ, ನಿರಾಶ್ರಿತರ ಪರವಾಗಿ ಪರಿಶೀಲನೆಗೆ ತೆರಳಿದ್ದರು. ರಾಜಕೀಯ ದುರುದ್ದೇಶ ಇಟ್ಟುಕೊಂಡು ಮಾಡಿರೋದು ಅನಾಗರಿಕ ವರ್ತನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲೆಲ್ಲೋ ಊರಲ್ಲಿ 50 ಜನ ಇರಬಹುದು. ಸಿದ್ದರಾಮಯ್ಯ ತಂಟೆಗೆ ಬಂದ್ರೆ ರಾಜ್ಯವೇ ಉರಿದು ಹೋಗಲಿದೆ. ಹೀಗೆ ಮುಂದುವರೆದರೆ ಬಿಜೆಪಿಯವರು ಕಾರ್ಯಕ್ರಮ ಮಾಡಲು ಕೂಡ ಬಿಡೋದಿಲ್ಲ. ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಸುಮ್ಮನಿದ್ದೇವೆ. ಈ ಘಟನೆಯನ್ನ ನಾವೆಲ್ಲ ಖಂಡಿಸುತ್ತೇವೆ ಎಂದರು. ಬಿಜೆಪಿಯಲ್ಲಿ ನಾಯಿ ಕೊಡೆಗಳಂತೆ ಹುಟ್ಟಿಕೊಂಡಿರುವ ಸಂಘಟನೆಗಳು ಕಾನೂನು ಕೈಗೆತ್ತಿಕೊಂಡ್ರೆ ಪರಿಣಾಮ ನೆಟ್ಟಗಿರಲ್ಲ. ಮಡಿಕೇರಿಯಲ್ಲಿ ಸಿದ್ದರಾಮಯ್ಯನವರು 26 ರಂದು ಪ್ರತಿಭಟನೆ ಮಾಡ್ತೀವಿ ಅಂತಾ ಹೇಳಿದ್ದಾರೆ. ನಾವು ಕೂಡಾ ಪ್ರತಿಭಟನೆಯಲ್ಲಿ ಭಾಗಿಯಾಗ್ತೀವಿ. ಭದ್ರತಾ ಲೋಪದ ಬಗ್ಗೆ ಸರ್ಕಾರನೇ ಒಪ್ಪಿಕೊಂಡಿದೆ. ಮೊದಲೇ ಭದ್ರತೆ ಯಾಕ್ ಕೊಡಬಾರದಿತ್ತು.…
ತಿಪಟೂರು: ಪರೀಕ್ಷಾ ಶುಲ್ಕ ಹೆಚ್ಚಳ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಎನ್ ಎಸ್ ಯು ಐ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ರಸ್ತೆ ತಡೆ ನಡೆಸಿ ಪ್ರತಿಭಟಿಸಿದ ವಿದ್ಯಾರ್ಥಿಗಳು ಪೈ ಹೋಟೆಲ್ ವೃತ್ತದಲ್ಲಿ ಸಮಾವೇಶಗೊಂಡು, ಪರೀಕ್ಷಾ ಶುಲ್ಕ ಹೆಚ್ಚಳ ಆದೇಶದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದಿನ ಸರ್ಕಾರಗಳು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಸ್ಕಾಲರ್ ಶಿಪ್ ಗಳನ್ನು ನೀಡುತ್ತಿದ್ದವು. ಬಡ ಮಕ್ಕಳು ಓದಬೇಕು ಎಂಬ ಉದ್ದೇಶದಿಂದ ಪ್ರೋತ್ಸಾಹ ನೀಡುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಪರೀಕ್ಷಾ ಶುಲ್ಕವನ್ನು ದಿಢೀರ್ 1 ಸಾವಿರ ಹೆಚ್ಚಳ ಮಾಡಲಾಗಿದೆ. ಇದನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುತ್ತದೆ ಎಂದು ಮುಖಂಡರು ಎಚ್ಚರಿಕೆ ನೀಡಿದರು. ಪ್ರತಿಭಟನಾ ರ್ಯಾಲಿಯಲ್ಲಿ ಎನ್ ಎಸ್ ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಹೇಮಂತ್ ನಗರಸಭಾ ಮಾಜಿ ಅಧ್ಯಕ್ಷ ಪ್ರಕಾಶ್ ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ವರದಿ: ಆನಂದ್, ತಿಪಟೂರು ನಮ್ಮತುಮಕೂರು.ಕಾಂನ…
ತುಮಕೂರು: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರು ಗೇಟ್ ಬಳಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿ ತಂದೆ ಹಾಗೂ ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದು, ಚಲಿಸುತ್ತಿದ್ದ ಲಾರಿಗೆ ಕಾರು ಏಕಾಏಕಿ ಡಿಕ್ಕಿಯಾದ ಪರಿಣಾಮ ಮೂವರೂ ಸಾವನ್ನಪ್ಪಿದ್ದಾರೆ. ಅವಿನಾಶ್(28), ಪ್ರಣತಿ(5), ಸೌಖ್ಯ(3) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಲಾರಿಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಗಾಯಾಳು ಬಾಲಕಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಬಗ್ಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧುಗಿರಿ: ಸಮಾಜದಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ನಾಗರಿಕರು ತಮ್ಮ ಜವಾಬ್ದಾರಿಯನ್ನು ಅರಿತು ತಕ್ಷಣವೇ ದೂರುಗಳನ್ನು ನೀಡುವ ಮೂಲಕ ಪೊಲೀಸರಿಗೆ ಸಹಕರಿಸಬೇಕಾಗಿದೆ ಎಂದು ಮಧುಗಿರಿ ಡಿವೈಎಸ್ಪಿ ಕೆ.ಎಸ್. ವೆಂಕಟೇಶ್ ನಾಯ್ಡು ತಿಳಿಸಿದರು. ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಗುರುವಾರದಂದು ಪೊಲೀಸ್ ಇಲಾಖೆ ವತಿಯಿಂದ ಏರ್ಪಡಿಸಿದ್ದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನಸಂಪರ್ಕ ಸಭೆಯಲ್ಲಿ ನಾಗರಿಕರು ಬರಿ ದೂರುಗಳನ್ನು ಹೇಳುತ್ತಾ ಇದ್ದರೆ ಸಾಲದು ಘಟನೆ ನಡೆದ ತಕ್ಷಣವೇ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ನಿಶ್ಚಿತವಾಗಿ ಆಗಲಿ ಅಥವಾ ದೂರವಾಣಿ ಮೂಲಕ ದೂರು ಸಲ್ಲಿಸಿದರೆ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಸಾಧ್ಯ ಎಂದರು. ಮಧುಗಿರಿ ಉಪವಿಭಾಗ ಮಟ್ಟದಲ್ಲಿ ಜನಸಂಪರ್ಕ ಸಭೆಯಲ್ಲಿ ಮುಖಂಡರಾದ ಎಸ್ ಬಿ ಟಿ ರಾಮು ಮಾತನಾಡಿ, ಉತ್ತಮ ಸಂಚಾರಿ ವ್ಯವಸ್ಥೆ ಹಾಗೂ ಬೀಟ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಪೋಲಿಸ್ ಇಲಾಖೆ ನಿಭಾಯಿಸುತ್ತಿದೆ. ಜೊತೆಗೆ ಈ ಹಿಂದೆ ಸಿಪಿಐ ಸರ್ದಾರ್ ರವರು ಪಟ್ಟಣದ ಹಲವು ಪ್ರಮುಖ ಅಪಘಾತ ಸ್ಥಳಗಳನ್ನು ಗಮನಿಸಿ, ಅಪಘಾತ ತಡೆಗೆ ಸರ್ಕಲ್ ಗಳಲ್ಲಿ ವೃತ್ತಗಳನ್ನು…
ಜಮಖಂಡಿ: ರಾಜಸ್ಥಾನದ ಜಲೋರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊಡ ಮುಟ್ಟಿದ್ದಕ್ಕೆ ದಲಿತ ಬಾಲಕನನ್ನು ಶಾಲಾ ಶಿಕ್ಷಕನೋರ್ವ ಮಾರಣಾಂತಿಕವಾಗಿ ಥಳಿಸಿ ಹತ್ಯೆ ಮಾಡಿದ ಘಟನೆಯನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ದೇಸಾಯಿ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ರಾಜಸ್ಥಾನ ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು, ದೇಸಾಯಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ರಾಜಸ್ಥಾನದಲ್ಲಿ ನಡೆದಿರುವ ಘಟನೆಯಿಂದಾಗಿ ಪ್ರಜ್ಞಾವಂತ ನಾಗರಿಕರು ತಲೆತಗ್ಗಿಸುವಂತಾಗಿದೆ. ದಲಿತರನ್ನು ವೋಟ್ ಬ್ಯಾಂಕ್ ಗೆ ಬಳಸಿಕೊಂಡ ಕಾಂಗ್ರೆಸ್ ಈ ಘಟನೆಗೆ ಏನು ಉತ್ತರ ನೀಡುತ್ತದೆ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಕುಶಾಲ ವಾಘಮೋರೆ, ಗಣೇಶ ಸಿರಿಗನ್ನವರ ಪ್ರಶಾಂತ ಘಾಯಕವಾಡ, ವಿಜಯಲಕ್ಷ್ಮಿ ತುಂಗಳ ಸೇರಿದಂತೆ ಹಲವಾರು ಬಿ ಜೆ ಪಿ ಕಾರ್ಯಕರ್ತರು ಉಪಸ್ಥಿತರಿದ್ದರು. ವರದಿ: ಬಂದೇನವಾಜ ನದಾಫ್, ಜಮಖಂಡಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…