Subscribe to Updates
Get the latest creative news from FooBar about art, design and business.
- ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ
- ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ ಚಿರತೆ ಸೆರೆ
- ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ
- ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
- ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?
- ಚಾಮರಾಜನಗರ: ಗ್ರಾಮದ ಬಳಿ ಐದು ಹುಲಿಗಳ ಪ್ರತ್ಯಕ್ಷ; ಆತಂಕದಲ್ಲಿ ಜನತೆ, ನಿಷೇಧಾಜ್ಞೆ ಜಾರಿ
- ಹುಸಿ ಬಾಂಬ್ ಇ–ಮೇಲ್ ಬೆದರಿಕೆ ಸಂದೇಶ: ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ
- ಸಿದ್ದಗಂಗಾ ಶ್ರೀಗಳ ಮಿಂಚಿನ ಸಂಚಾರ ಸ್ಫೂರ್ತಿದಾಯಕ : ಸಸ್ಯಾಂದೋಲನ ನಡೆಸಲು ಎಂ.ಶಿವಕುಮಾರ್ ಮನವಿ
Author: admin
ಸರ್ಕಾರದ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಲು ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ ಈ ಮೂಲಕ ಇಡೀ ಜಿಲ್ಲಾಡಳಿತ ಆಡಳಿತ ಯಂತ್ರವನ್ನ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಮೂಲಕ ಜನರ ಸಂಕಷ್ಟಗಳಿಗೆ ಮಿಡಿಯುವ ಜನಸ್ನೇಹಿ ಸರ್ಕಾರ ನಮ್ಮದಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು. ಹೊನ್ನಾಳಿ ಪಟ್ಟಣದ ಅಂಗಳ ಮೈದಾನದಲ್ಲಿ ಹಮ್ಮಿಕೊಂಡಿದ್ದ ನೂತನ ಕಂದಾಯ ಉಪವಿಭಾಗದ ಉಪವಿಭಾಗಾಧಿಕಾರಿಗಳ ಕಚೇರಿ ಉದ್ಘಾಟನಾ ಸಮಾರಂಭ ಹಾಗೂ ಸಂಜೀವಿನಿ ಯೋಜನೆ ಅಡಿಯಲ್ಲಿ ಸ್ತ್ರೀಶಕ್ತಿ ಸಂಘಗಳಿಗೆ ನಿಧಿ ಚೆಕ್ ವಿತರಣೆ ಹಾಗೂ ಸಾಮಾಜಿಕ ಭದ್ರತಾ ಯೋಜನೆಯಡಿ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ 1035 ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಘೋಷಣೆ ಮಾಡಲಾಗಿದೆ.ದಾವಣಗೆರೆ ಜಿಲ್ಲೆಯಲ್ಲಿ 84 ಜನವಸತಿ ಪ್ರದೇಶಗಳ 39 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿದ್ದು ಅದರಲ್ಲಿ ಹೊನ್ನಾಳಿ ತಾಲ್ಲೂಕಿನಲ್ಲಿ 5 ಗ್ರಾಮಗಳು ಕೂಡ ಸೇರ್ಪಡೆಯಾಗಿವೆ. ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡುವುದರಿಂದ ಆ ಗ್ರಾಮಕ್ಕೆ ಸರ್ಕಾರದ…
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಮ್ಮ ಆದಾಯ 10 ಪಟ್ಟು ಹೆಚ್ಚಾಗಿದೆ ಎಂದು ದೋಣಿ ನಿರ್ವಾಹಕರು ಹೇಳಿದ್ದಾರೆ. ದೇಶದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಹಲವಾರು ಕ್ರಮಗಳನ್ನು ಕೈಗೊಂಡಿದ್ದಾರೆ. ಇದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ನಮ್ಮ ಆದಾಯವು ವೃದ್ಧಿಸಿದೆ ಎಂದು ದೋಣಿ ನಡೆಸುವ ಸೋನಿನಿಸಾದ್ ತಿಳಿಸಿದ್ದಾರೆ. ನಮ್ಮ ಮುತ್ತಾತ ಅವರು ಆಸಿಘಾಟ್ ನಲ್ಲಿ ದೋಣಿ ನಡೆಸುತ್ತಿದ್ದರು. ಈ ಭಾಗದಲ್ಲಿ ಸುಮಾರು ಒಂದೂವರೆ ಲಕ್ಷ ಕುಟುಂಬಗಳು ಈ ವೃತ್ತಿ ಅವಲಂಬಿಸಿವೆ. ಅವರ ದೈನಂದಿನ ಖರ್ಚು, ವೆಚ್ಚಗಳನ್ನು ನಿಬಾಯಿಸುವುದು ಒಂದು ಕಾಲದಲ್ಲಿ ಕಷ್ಟವಾಗಿತ್ತು. ಆದರೆ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನದಿಗಳನ್ನು ಸ್ವಚ್ಛಗೊಳಿಸಿದ್ದರಿಂದ, ದೇವಸ್ಥಾನಗಳನ್ನು ಪುನರುಜ್ಜೀವನಗೊಳಿಸಿದ್ದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ ಎಂದಿದ್ದಾರೆ. ಚಂದನ್ ಶೈನಿ ಮಾತನಾಡಿ, ದೋಣಿಗಳಿಗೆ ಗ್ಯಾಸ್ ಸಂಪರ್ಕ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. 84 ಘಾಟ್‍ಗಳು ಸುಸಜ್ಜಿತವಾಗಿವೆ. ಪ್ರಯಾಣಿಕರಿಗೆ ನಾಲ್ಕು ಪಟ್ಟು ಹೆಚ್ಚಾಗಿದೆ. ಆದಾಯವೂ ದ್ವಿಗುಣಗೊಂಡಿದೆ ಎಂದಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ…
ಇಡೀ ರಾಜ್ಯದ ಜನತೆ ಶಿವರಾತ್ರಿ ಆಚರಿಸುವ ಸಂದರ್ಭದಲ್ಲಿ ನಾವು ಬೆಂಗಳೂರು ಹಾಗೂ ಕಾವೇರಿ ಜಲಾನಯನ ಪ್ರದೇಶದ ಜನರ ಬದುಕಿನ ರಕ್ಷಣೆಗಾಗಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.ನಾನು ಬೆಂಗಳೂರು ಜನರ ಕ್ಷಮೆ ಕೇಳಲು ಬಯಸುತ್ತೇನೆ. ಮುಂದಿನ 3 ದಿನ ಟ್ರಾಫಿಕ್ ಸಮಸ್ಯೆ ಎದುರಾಗಲಿದೆ. ಈ ಹೋರಾಟದಿಂದ ಮುಂದಿನ 50 ವರ್ಷ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ. ಹೀಗಾಗಿ ನೀವು ನಮಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಬೆಂಗಳೂರಿನ ಜನರಿಗಾಗಿ ಪಾದಯಾತ್ರೆ ಮಾಡುತ್ತಿದ್ದು, ಎಲ್ಲರೂ ಈ ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡುತ್ತೇನೆ. ಪಾದಯಾತ್ರೆಗೆ ಅಪಾಟ್ರ್ಮೆಂಟ್ ಸಂಘ, ಕೈಗಾರಿಕೆ, ಕಾರ್ಖಾನೆ ಸಂಘಗಳು ಎಲ್ಲರೂ ಪಕ್ಷಭೇಧ ಮರೆತು ಆಗಮಿಸಿದ್ದಾರೆ. ಎಲ್ಲ ಸಹಕಾರ ಕೊಟ್ಟಿದ್ದಾರೆ ಎಂದರು.ಮಾರ್ಚ್ 3ರಂದು ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬಹಿರಂಗ ಸಭೆ ನಡೆಯಲಿದ್ದು ಇದರಲ್ಲಿ ಭಾಗವಹಿಸುವ ಎಲ್ಲ ಕಾರ್ಯಕರ್ತರು ಮೆಟ್ರೋ ಮೂಲಕ ಆಗಮಿಸಿ, ಮೆಟ್ರೋ ಮೂಲಕ ತೆರಳಬೇಕು ಎಂದು…
ತುಮಕೂರು: ತುಮಕೂರಿನ ಎಂ.ಜಿ. ರಸ್ತೆಯಲ್ಲಿರುವ ಅಂಬೇಡ್ಕರ್ ಭವನದಲ್ಲಿ ತುಮಕೂರು ಗ್ರಾಮಾಂತರ ಛಲವಾದಿ ಗ್ರಾಮೀಣಾಭಿವೃದ್ಧಿ ಸಂಘ (ರಿ ). ಸಂಘದ ವತಿಯಿಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಿರ್ದೇಶಕರುಗಳ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು. ಈ ಸಂದರ್ಭದಲ್ಲಿ ಸಮುದಾಯದ ವಿದ್ಯಾರ್ಥಿಗಳ ವಿಚಾರವಾಗಿ ಮತ್ತು ಸಮುದಾಯದ ಏಳಿಗೆಯ ವಿಚಾರವನ್ನು ಚರ್ಚಿಸಲಾಯಿತು. ಸಭೆಯಲ್ಲಿ ಗೌರವಾಧ್ಯಕ್ಷರಾದ ಸಂಪತ್ ಕುಮಾರ್, ಉಪಾಧ್ಯಕ್ಷರಾದ ಯಲ್ಲಯ್ಯ, ಕಾರ್ಯದರ್ಶಿಗಳಾದ ಮಂಜುನಾಥ್ ಹೆಚ್, ಸಂಘಟನಾ ಕಾರ್ಯದರ್ಶಿಗಳಾದ ಸುರೇಶ್, ಸಹಕಾರ್ಯದರ್ಶಿ ಪ್ರವೀಣ್, ನಿರ್ದೇಶಕರುಗಳಾದ ರಾಜಣ್ಣ ಹೊನ್ನುಡಿಕೆ, ರಾಮಚಂದ್ರ ಆರ್., ಶ್ರೀನಿವಾಸ್ ಶಶಿಕುಮಾರ್, ಮಹೇಶ್, ಮಮತಾ ಗುರೂಜಿ, ಮಂಜುಳಾ ಹಾಗೂ ವೆಂಕಟೇಶ್ ರವರು ಭಾಗವಹಿಸಿದ್ದರು ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರ ಸ್ಥಾನಕ್ಕೆ ಆಯ್ಕೆಯಾದ ಪರಮೇಶ್ ರವರನ್ನು ಸನ್ಮಾನಿಸಲಾಯಿತು. ವರದಿ: ಎ.ಎನ್.ಪೀರ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಪಾವಗಡ: ತಾಲೂಕಿನ ಕಾಂಗ್ರೆಸ್ ಶಾಸಕ ವೆಂಕಟರಮಣಪ್ಪ ಹಾಗೂ ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಎಚ್.ವಿ.ವೆಂಕಟೇಶ್ ನೇತೃತ್ವದಲ್ಲಿ ತಾಲ್ಲೂಕಿನಿಂದ ಎರಡು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು, ನೂರಾರು ವಾಹನಗಳಲ್ಲಿ ಮೇಕೆದಾಟು ಪಾದಯಾತ್ರೆಗೆ ತೆರಳಿದರು. ಈ ಸಂದರ್ಭದಲ್ಲಿ ಪಾವಗಡ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ H V V ವೆಂಕಟೇಶ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಕೋಟೆ ಪ್ರಭಾಕರ. ಸಿ.ಕೆ.ಪುರ.ಗ್ರಾಮದ ಬಿಂದು ಮಾಧವ ರಾವ್ ಹಾಗೂ ಪಾವಗಡ ತಾಲ್ಲೂಕಿನ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು ವರದಿ: ರಾಮಪ್ಪ ಸಿ.ಕೆ.ಪುರ., ಪಾವಗಡ ತಾಲ್ಲೂಕು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುಮಕೂರು: ನಾಡಿನಲ್ಲೆಡೆ ಶಿವರಾತ್ರಿ ಹಬ್ಬದ ಸಡಗರ ಗರಿಗೆದರಿದ್ದು ಹಿನ್ನೆಲೆಯಲ್ಲಿ ತುಮಕೂರು ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷವಾದ ಪೂಜಾ ಕೈಂಕರ್ಯಗಳು ನಡೆಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇರುವ ಕೋಟೆ ಆಂಜನೇಯ ಸ್ವಾಮಿಗೆ ಬೆಳಗ್ಗೆಯಿಂದ ವಿಶೇಷವಾದ ಪೂಜಾಕೈಂಕರ್ಯಗಳು ಜರುಗಿದವು. ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಆಂಜನೇಯಸ್ವಾಮಿಗೆ ವಿಶೇಷವಾದ ಅಲಂಕಾರವನ್ನು ಏರ್ಪಡಿಸಲಾಗಿತ್ತು. ಶಿವರಾತ್ರಿ ಹಬ್ಬದ ಪ್ರಯುಕ್ತ ಚಿಕ್ಕಪೇಟೆಯಲ್ಲಿರುವ ಪಾರ್ವತಿ ಸಮೇತ ಗಂಗಾಧರೇಶ್ವರ ದೇವಾಲಯದಲ್ಲಿ ಕೂಡ ವಿಶೇಷವಾದ ಪೂಜಾಕೈಂಕರ್ಯಗಳು ನಡೆದವು.ಸುಮಾರು 700 ವರ್ಷಗಳ ಇತಿಹಾಸವಿರುವ ಚಿಕ್ಕಪೇಟೆಯ ಪ್ರಸನ್ನ ಗಂಗಾಧರೇಶ್ವರ ದೇವಾಲಯವು ಮುಜರಾಯಿ ಇಲಾಖೆಯ ಅಡಿಯಲ್ಲಿದ್ದು, ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ವಿಶೇಷವಾದ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆಯಿಂದ ಗಂಗಾಧರೇಶ್ವರಸ್ವಾಮಿ ವಿಶೇಷವಾದ ಅಭಿಷೇಕಗಳು ವಿವಿಧ ಅಲಂಕಾರಗಳು ನಡೆದವು ಪಾರ್ವತಿ ಸಮೇತ ಗಂಗಾಧರೇಶ್ವರಸ್ವಾಮಿ ದೇವಾಲಯಕ್ಕೆ ಅನೇಕ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಪುನೀತರಾದರು. ವರದಿ: ಎ.ಎನ್.ಪೀರ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುಮಕೂರು: ಇತ್ತೀಚೆಗೆ ನಗರದಲ್ಲಿ ನಡೆದ ಪತ್ರಕರ್ತ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಪರಮೇಶ್ವರ್ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರದ ಛಲವಾದಿ ಗ್ರಾಮೀಣ ಅಭಿವೃದ್ಧಿ ಸಂಘಟನೆಯವರು ಇಂದುನಗರದ ಅಂಬೇಡ್ಕರ್ ಭವನದಲ್ಲಿ ಪರಮೇಶ್ ಅವರನ್ನು ಸನ್ಮಾನಿಸಿದರು. ಈ ಸಂದರ್ಭ ಅಧ್ಯಕ್ಷ ಕೆ.ಕುಮಾರ್ , ಗೌರವಾಧ್ಯಕ್ಷ ಎಂ.ಸಂಪತ್ ಕುಮಾರ್ , ಉಪಾಧ್ಯಕ್ಷ ಯಲ್ಲಯ್ಯ ಸೇರಿದಂತೆ ಸಂಘದ ನಿರ್ದೇಶಕರುಗಳು ಸನ್ಮಾನದ ವೇಳೆ ಹಾಜರಿದ್ದರು. ವರದಿ: ಎ.ಎನ್.ಪೀರ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಪಾವಗಡ: ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಕಿಲಾರ್ಲಹಳ್ಳಿ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮದ ನಿರೂಪಣೆಯನ್ನು ವಿಜ್ಞಾನ ಶಿಕ್ಷಕರಾದ ರಾಜಾನಾಯ್ಕ ಎಸ್.ಹೆಚ್. ನೆರವೇರಿಸಿದರು. ಸರ್ ಸಿ.ವಿ.ರಾಮನ್ ಫೋಟೋ ಪೂಜೆ ಮತ್ತು ಪ್ರಾರ್ಥನೆಯನ್ನು 7ನೇ ತರಗತಿ ಲಾವಣ್ಯ ಮತ್ತು ತಂಡ ನೆರವೇರಿಸಿದರು, ಮುಖ್ಯ ಶಿಕ್ಷಕರಾದ ಚಂದ್ರಪ್ಪ ಸ್ವಾಗತ ಮಾಡಿದರು. ಕ್ಷೇತ್ರಶಿಕ್ಷಣಾಧಿಕಾರಿಗಳಾದ ಅಶ್ವತ್ಥ ನಾರಾಯಣರವರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಮಕ್ಕಳು ಉತ್ತಮ ಕಡಿಮೆ ವೆಚ್ಚದ ಮಾದರಿಗಳನ್ನು ತಯಾರಿಸಲು ವಿಜ್ಞಾನ ಶಿಕ್ಷಕರು ಮತ್ತು ಇತರ ಶಿಕ್ಷಕರು ಪ್ರೋತ್ಸಾಹಿಸಬೇಕು. ಪೋಷಕರು ಮಕ್ಕಳಿಗೆ 1 ರಿಂದ 10 ನೇ ತರಗತಿವರೆಗೆ ಹೆಚ್ಚು ಗಮನ ಕೊಟ್ಟರೆ ಅವರ ಭವಿಷ್ಯ ಉತ್ತಮವಾಗಿರುತ್ತದೆ ಎಂದು ಹೇಳಿದರು. ತಾಲ್ಲೂಕು ಅಕ್ಷರ ದಾಸೋಹ ಅಧಿಕಾರಿಗಳಾದ ಹನುಮಂತರಾಯಪ್ಪ ಮಾತನಾಡಿ, ಈ ದಿನ ಸಿ.ವಿ. ರಾಮನ್ ರವರಿಗೆ ನೋಬಲ್ ಪ್ರಶಸ್ತಿ ಬಂದ ದಿನ. ಅವರು ಭೌತಶಾಸ್ತ್ರ ವಿಷಯದಲ್ಲಿ ಬೆಳಕಿನ ಚದುರುವಿಕೆಯ ಬಗ್ಗೆ ಕೊಡುಗೆ ಅಪಾರ ಎಂದು ತಿಳಿಸಿದರು. ಅದೇ ರೀತಿ…
ಗುಬ್ಬಿ: ತಾಲೂಕಿನ ಕೋಡಿ ನಾಗೇನಹಳ್ಳಿ ಗ್ರಾಮದಲ್ಲಿ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ಪೂಜೆಯನ್ನು ಮಾರ್ಚ್ 6ರಂದು ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತಾ ಸಭೆಯನ್ನು ನಡೆಸಲಾಯಿತು. ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಕೋಡಿ ನಾಗೇನಹಳ್ಳಿ ಗ್ರಾಮದ ಪ್ರಸಾದ್ ಪಟೇಲ್ ರವರ ತೋಟದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಎಂ.ಎನ್.ಕೋಟೆ ವಲಯದ ಒಕ್ಕೂಟದ ಗೌರವಾಧ್ಯಕ್ಷರಾದ ಕಿಡಿಗಣ್ಣಪ್ಪ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ಪೂಜೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಮನವಿ ಮಾಡಿಕೊಂಡರು ಸುಮಾರು ಎರಡು ಸಾವಿರ ಸದಸ್ಯರು 500 ಜೋಡಿಗಳು ಸತ್ಯ ನಾರಾಯಣ ಸ್ವಾಮಿ ಪೂಜೆಗೆ ಭಾಗವಹಿಸಲಿದ್ದು, ಈ ಭಾಗದ ಸರ್ವ ಸದಸ್ಯರು ಈ ಧಾರ್ಮಿಕ ಕಾರ್ಯಕ್ರಮ ದಲ್ಲಿ ಭಾಗವಹಿಸುವ ಮೂಲಕ ಕಾರ್ಯ ಕ್ರಮದ ಅಭೂತಪೂರ್ವ ಸಂಗಮ ಯಶಸ್ವಿ ಗೆ ಸಹಕರಿಸಬೇಕು ಎಂದು ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಹರೀಶ್, ಮಾಜಿ ತಾ.ಪಂ.ಸದಸ್ಯ ಅ.ನಾ.ಲಿಂಗಪ್ಪ, ಮೇಲ್ವಿಚಾರಕ ವಿಶ್ವನಾಥ್ ಪೂಜಾರಿ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಇದ್ದರು. ವರದಿ: ಮಂಜುನಾಥ್, ಗುಬ್ಬಿ ನಮ್ಮತುಮಕೂರು.ಕಾಂನ…
ಚಿತ್ರದುರ್ಗ: ಸದನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಬಿಡದ ಕಾಂಗ್ರೆಸ್ ಶಾಸಕರು ಕಲಾಪ ವ್ಯರ್ಥವಾಗಲು ಕಾರಣರಾಗಿದ್ದು, ಈಶ್ವರಪ್ಪನವರ ಹೇಳಿಕೆಯನ್ನು ತಿರುಚಿ, ಸದನ ನಡೆಯಲು ಬಿಡದೇ ಜನರ ತೆರಿಗೆ ವ್ಯರ್ಥವಾಗುವಂತೆ ಮಾಡಿದ್ದಾರೆ ಎಂದು ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾಶ್ರೀನಿವಾಸ್ ಆರೋಪಿಸಿದರು. ಬಿಜೆಪಿ ಮಂಡಲ ಅಧ್ಯಕ್ಷರಾದ ವಿ.ವಿಶ್ವನಾಥ್ ರವರ ನೇತೃತ್ವದಲ್ಲಿ ವಿರೋಧ ಪಕ್ಷ ಕಾಂಗ್ರೆಸ್ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು. ಡಿ . ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಧರ್ಮ – ಧರ್ಮಗಳ ನಡುವೆ ಸಂಘರ್ಷ ಉಂಟುಮಾಡುವಂತ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಶಿವಮೊಗ್ಗದ ಬಜರಂಗದಳದ ನಿಷ್ಠಾವಂತ ಕಾರ್ಯಕರ್ತ ಹರ್ಷನ ಹತ್ಯೆಗೆ ಪರೋಕ್ಷವಾಗಿ ಕಾರಣವಾಗಿದ್ದಾರೆ. ಅಧಿಕಾರ ಕಳೆದು ಕೊಂಡಾಗ ಪಾದಯಾತ್ರೆ ನೆಪದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಕಪಟನಾಟಕದ ಎರಡನೇ ಭಾಗ ಪ್ರಾರಂಭಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಕೇಂದ್ರ ಸರ್ಕಾರ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಹಾಗೂ ಪ್ರಜೆಗಳನ್ನು ಸುರಕ್ಷಿತವಾಗಿ ದೇಶಕ್ಕೆ ಮರಳಿ ಕರೆತರುತ್ತಿದ್ದು…