Author: admin

ಬೆಂಗಳೂರು: ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನ ಕುರಿತಾಗಿ ಇಂದು ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮಹತ್ವದ ಸೂಚನೆಯನ್ನು ಸಿಎಂ ನೀಡಿದರು. ಪ್ರಮುಖ ನಿರ್ಣಯಗಳು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಿಸುವ ಕುರಿತು ಈಗಾಗಲೇ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ಯೋಜನೆಯಡಿ ಕುಟುಂಬದ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಐದು ಕೆಜಿ ಅಕ್ಕಿ ಬದಲಾಗಿ ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು ನೀಡಲಾಗುವುದು. ಪ್ರತಿ ತಿಂಗಳು ಪ್ರಸ್ತುತ 1,25,08,262 ಇಂದಿರಾ ಆಹಾರ ಕಿಟ್‌ಗಳ ಅಗತ್ಯವಿದ್ದು, ಇದಕ್ಕಾಗಿ ಪ್ರತಿ ತಿಂಗಳು ರೂ.466 ಕೋಟಿ ವೆಚ್ಚ ಅಂದಾಜಿಸಲಾಗಿದೆ. ಈ ಯೋಜನೆಯಡಿ ಪ್ರತಿ ತಿಂಗಳು ಒಟ್ಟು 18,628 ಮೆ.ಟನ್ ತೊಗರಿ ಬೇಳೆ ಮತ್ತು ತಲಾ 12,419 ಮೆ.ಟನ್ ಸೂರ್ಯಕಾಂತಿ ಎಣ್ಣೆ, ಸಕ್ಕರೆ ಮತ್ತು ಉಪ್ಪು ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಆಹಾರ ಕಿಟ್‌ನಲ್ಲಿ ಪೌಷ್ಟಿಕಾಂಶಗಳಿಂದ ಕೂಡಿರುವ ತೊಗರಿ ಬೇಳೆ ಗರಿಷ್ಟ ಪ್ರಮಾಣದಲ್ಲಿ ನೀಡಲು ಕ್ರಮ ಕೈಗೊಳ್ಳಬೇಕು.…

Read More

ತಿಪಟೂರು:  ವೈದ್ಯಕೀಯ ಪರೀಕ್ಷೆ ನಡೆಸಿ ಎರಡು ವರ್ಷ ಕಳೆದಿದೆ. ಆರು ತಿಂಗಳಿನಿಂದ ಸ್ಯಾನಿಟರಿ ಪ್ಯಾಡ್ ನೀಡಿಲ್ಲ. ಊಟ ಬಡಿಸುವಾಗ ಅಡುಗೆಯವರು ನಮ್ಮನ್ನು ನೀವು ಬಿಕಾರಿಗಳು ಎಂದು ನಿಂದಿಸುತ್ತಾರೆ ಎಂದು ಇಂದಿರಾ ನಗರದ ಹಿಂದುಳಿದ ವರ್ಗಗಳ ಮೆಟ್ರಿಕ್‌ ನಂತರ ಬಾಲಕಿಯರ ಹಾಸ್ಟೆಲ್‌ ನ ವಿದ್ಯಾರ್ಥಿನಿಯರು ನೋವು ತೋಡಿಕೊಂಡಿದ್ದಾರೆ. ಉಪಲೋಕಾಯುಕ್ತ ಬಿ.ವೀರಪ್ಪ  ಅವರು ಜಿಲ್ಲೆಯ ವಿವಿಧೆಡೆಗಳಿಗೆ ತೆರಳಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸವನ್ನ ಮಾಡುತ್ತಿದ್ದಾರೆ. ಅಂತೆಯೇ ಶುಕ್ರವಾರ ರಾತ್ರಿ ಅವರು ದಿಢೀರ್ ಆಗಿ ಹಾಸ್ಟೆಲ್ ಗೆ ಭೇಟಿ ನೀಡಿ ವೇಳೆ ವಿದ್ಯಾರ್ಥಿನಿಯರಿಂದ ದೂರಿನ ಸರಮಾಲೆಯೇ ಕೇಳಿ ಬಂತು. ಹಾಸ್ಟೆಲ್ ನ ಅವ್ಯವಸ್ಥೆಯನ್ನು ಕಣ್ಣಾರೆ ಕಂಡ ಉಪಲೋಕಾಯುಕ್ತ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ತರಾಟೆಗೆತ್ತಿಕೊಂಡರು. ಕೊಪ್ಪಳದ ವಸತಿ ಶಾಲೆಯಲ್ಲಿ 9ನೇ ತರಗತಿ ಬಾಲಕಿಗೆ ಹೆರಿಗೆಯಾಗಿದೆ. ವೈದ್ಯಕೀಯ ಪರೀಕ್ಷೆ ನಡೆಸಿದರೂ ಆಕೆ ಗರ್ಭಿಣಿ ಆಗಿರುವುದನ್ನು ಪತ್ತೆ ಹಚ್ಚಲು ಆಗಿಲ್ಲ. ಈ ಹಾಸ್ಟೆಲ್‌ನಲ್ಲಿ ಪರೀಕ್ಷೆಯೇ ನಡೆಸಿಲ್ಲ. ಸ್ಯಾನಿಟರಿ ಪ್ಯಾಡ್ ಬಂದಿಲ್ಲ ಎಂದು ಸರ್ಕಾರಕ್ಕೆ ಎಲ್ಲಿ ಪತ್ರ ಬರೆದಿದ್ದೀರಾ,…

Read More

ಸರಗೂರು: ಹುಲಿ ದಾಳಿಯಿಂದಾಗಿ ಪ್ರವಾಸೋದ್ಯಮವನ್ನು ಸಂಪೂರ್ಣವಾಗಿ ಬಂದ್ ಮಾಡಿದ್ದಾರೆ, ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ಕೊಡದೆ ಹೋದರೆ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಯಾಗುವುದು ಹೇಗೆ ಎಂದು ಜೆಡಿಎಸ್ ನ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಪಟ್ಟಣದಲ್ಲಿ ರೋಡ್ ಶೋ ನಡೆಸಿದ ನಂತರ ಹುಲಿ ದಾಳಿಗೆ ಮೃತಪಟ್ಟ ಕುಟುಂಬದವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ವೈಫಲ್ಯತೆಯನ್ನು ಇಟ್ಟುಕೊಂಡು ಅಸಂಬದ್ಧವಾಗಿ ನಡೆಕೊಂಡು ಇವತ್ತು ಸಫಾರಿಗಳನ್ನ ಬಂದ್ ಮಾಡೋದ್ರಿಂದ ಸುತ್ತಮುತ್ತಲಿನ ಜನಕ್ಕೆ ಜೀವನೋಪಾಯಕ್ಕೆ ತುಂಬಾ ಕಷ್ಟವಾಗಿದೆ.  ಹೌದಪ್ಪ ತಪ್ಪಾಗಿದೆ, ಆ ತಪ್ಪಿಗೆ ಸರಿಯಾದ ರೀತಿ ಕ್ರಮ ಕೈಗೊಳ್ಳಬೇಕು ಅನ್ನೋದು ಇನ್ನೂ ಸರ್ಕಾರದ ಕಡೆಯಿಂದ ಏನು ಚರ್ಚೆಯಾಗಿಲ್ಲ. ಹುಲಿ ದಾಳಿಯಿಂದ ಸತತವಾಗಿ ನಡೆದರೂ ಪುಣ್ಯಾತ್ಮರನ್ನ ನೋಡಲಿಕ್ಕೂ ಕೂಡ ಸಚಿವರು ಇಲ್ಲಿ ಬರಲಿಲ್ಲ, ಮೈಸೂರಿಗೆ ತರಿಸಿಕೊಂಡ್ರು, ಮತ್ತೆ ಯಾವ ಪುರುಷಾರ್ಥಗೋಸ್ಕರ ಇವತ್ತು ಅರಣ್ಯ ಸಚಿವರಾಗಿದ್ದಾರೆ ಎಂದು ಪ್ರಶ್ನಿಸಿದರು. ಈ ಭಾಗದ ರೈತರ ಜೊತೆ ನಾವು ನಿಲ್ಲುತ್ತೇವೆ ಅನ್ನೋದನ್ನ ಈ ಸಂದರ್ಭದಲ್ಲಿ ಹೇಳುತ್ತಿದ್ದಾನೆ, ಮತ್ತೊಮ್ಮೆ …

Read More

ತುಮಕೂರು: ಜಿಲ್ಲೆಯಲ್ಲಿ ಕಳೆದ ಐದು ವರ್ಷದಲ್ಲಿ ಹೊಸದಾಗಿ 2,521 ಜನರಲ್ಲಿ ಎಚ್‌ ಐವಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ವರದಿಗಳ ಪ್ರಕಾರ, 2020–21ರಿಂದ 2024–25ರ ವರೆಗೆ 6,12,730 ಸಾಮಾನ್ಯ ಜನರು ಎಚ್‌ ಐವಿ ಪರೀಕ್ಷೆಗೆ ಒಳಗಾಗಿದ್ದಾರೆ. ಈ ಪೈಕಿ 2,406 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದೇ ಅವಧಿಯಲ್ಲಿ 2,92,870 ಗರ್ಭಿಣಿಯರು ಪರೀಕ್ಷೆ ಮಾಡಿಸಿಕೊಂಡಿದ್ದು, 145 ಮಹಿಳೆಯರಲ್ಲಿ ಎಚ್‌ಐವಿ ಇರುವುದು ಖಚಿತ ಪಟ್ಟಿದೆ. ಗರ್ಭಿಣಿಯರಲ್ಲಿ ಸೋಂಕು ಹರಡುವಿಕೆ ಇಳಿಮುಖವಾಗುತ್ತಿದೆ. 2022–23ರಲ್ಲಿ 482 ಮಂದಿಗೆ ಸೋಂಕು ಹರಡಿತ್ತು. 2024–25ರಲ್ಲಿ 530ಕ್ಕೆ ಜಿಗಿದಿದೆ. ಪ್ರಸ್ತುತ ಜಿಲ್ಲೆಯಾದ್ಯಂತ 14,178 ಸೋಂಕಿತರಿದ್ದಾರೆ. ಇದರಲ್ಲಿ 20ರಿಂದ 40 ವರ್ಷದ ಒಳಗಿನವರ ಸಂಖ್ಯೆ ಹೆಚ್ಚಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಎಚ್‌ ಐವಿ ಸೋಂಕಿತರಿಗೆ ಅಗತ್ಯ ಚಿಕಿತ್ಸೆ ನೀಡುವ ಉದ್ದೇಶದಿಂದ ಜಿಲ್ಲಾ ಆಸ್ಪತ್ರೆ ಸೇರಿ ಒಟ್ಟು 6 ಕಡೆಗಳಲ್ಲಿ ಎಆರ್‌ಟಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಕೇಂದ್ರಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಲಸಿಕೆ, ಔಷಧಿ ವಿತರಿಸಲಾಗುತ್ತದೆ. ರೋಗಿಗಳಿಗೆ ಆಪ್ತ ಸಮಾಲೋಚನೆ, ಸೂಕ್ತ ಮಾರ್ಗದರ್ಶನ…

Read More

ತುಮಕೂರು: ನಗರದ ಸಪ್ತಗಿರಿ ಬಡಾವಣೆಯ ಭಗತ್ ಸಿಂಗ್ ಆಟೋ ನಿಲ್ದಾಣದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿಗೆ ನಮನ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಲಾಯಿತು. ನಂತರ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಸ್ಥಳೀಯ ನಾಗರಿಕರು ಹಾಗೂ ಆಟೋ ಚಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ರಮೇಶ್, ಗಂಗಾಧರ್, ಚಂದ್ರಣ್ಣ, ಗೋಪಾಲ್ ಕೃಷ್ಣ, ರಂಗೇ ಗೌಡ ಸೇರಿದಂತೆ ಅನೇಕರು ಹಾಜರಿದ್ದು, ಕನ್ನಡ ನಾಡಿನ ಗೌರವ ಸಂಸ್ಕೃತಿಯನ್ನು ಕಾಪಾಡಿ ಬೆಳೆಸುವ ಸಂಕಲ್ಪ ವ್ಯಕ್ತಪಡಿಸಿದರು. ಸಪ್ತಗಿರಿ ಬಡಾವಣೆಯ ಭಗತ್ ಸಿಂಗ್ ಆಟೋ ನಿಲ್ದಾಣದಲ್ಲಿ ನಡೆದ ಈ ರಾಜ್ಯೋತ್ಸವ ಸಂಭ್ರಮವು ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಯಿತು. ವರದಿ: ನಂದೀಶ್ ನಾಯ್ಕ ಪಿ., ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೀದರ್: ಹೈದರಾಬಾದ್‌ ನಿಂದ ಮಹಾರಾಷ್ಟ್ರದ ಕಡೆಗೆ ಟಾಟಾ ಗೂಡ್ಸ್ ವಾಹನವೊಂದರಲ್ಲಿ 6 ಕೋಟಿ 50ಲಕ್ಷ ರೂ. ಮೌಲ್ಯದ ಗಾಂಜಾ ಸಾಗಿಸುತ್ತಿರುವಾಗ ದಾಳಿ ನಡೆಸಿದ ಪೊಲೀಸರು, ಗಾಂಜಾ ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಬೀದರ್‌ ರಾಷ್ಟ್ರೀಯ ಹೆದ್ದಾರಿ–65ರ ರಾಜೇಶ್ವರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಗಾಂಜಾ ಸಾಗಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹುಮನಾಬಾದ ಉಪ ವಿಭಾಗದ ಸಿಪಿಐ ಮಾಡೋಳಪ್ಪ ಅವರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದೆ. ಟಾಟಾ ಗೂಡ್ಸ್ ವಾಹನದಲ್ಲಿ ಗಾಂಜಾ ಇದ್ದ ಮೂಟೆಗಳನ್ನಿಟ್ಟು ಅದರ ಮೇಲೆ ಮೊಟ್ಟೆಗಳನ್ನು ಇಡಲಾಗಿತ್ತು. ದಾಳಿ ವೇಳೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಟಾಟಾ ಗೂಡ್ಸ್ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಸುಮಾರು 6 ಕೋಟಿ 50 ಲಕ್ಷ ರೂ. ಮೌಲ್ಯದ 650 ಕೆ.ಜಿ. ತೂಕದ ಗಾಂಜಾ ದೊರಕಿದೆ. ಚಾಲಕನನ್ನು ವಿಚಾರಿಸಿದಾಗ ಹೈದರಾಬಾದ್‌ನಿಂದ ಮಹಾರಾಷ್ಟ್ರದ ಸೋಲಾಪುರಕ್ಕೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಎಸ್‌ ಪಿ…

Read More

ಬೆಂಗಳೂರು: ಕನ್ನಡದ ಹಿರಿಯ ನಟ ಎಂ.ಎಸ್.ಉಮೇಶ್ ತಮ್ಮ 80ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಕಿದ್ವಾಯಿ ಆಸ್ಪತ್ರೆಯಲ್ಲಿ ಹಲವು ದಿನಗಳಿಂದಲೂ ಅವರು ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಬೆಳಿಗ್ಗೆ 8:30ರ ಸುಮಾರಿಗೆ ಅವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಏಪ್ರಿಲ್ 22, 1945ರಲ್ಲಿ ಮೈಸೂರಿನಲ್ಲಿ ಜನಿಸಿದ್ದ ಉಮೇಶ್ ಅವರು ರಂಗಭೂಮಿ ಮತ್ತು ಚಲನಚಿತ್ರ ಕಲಾವಿದರಾಗಿ 1948ರಿಂದಲೂ ಸಕ್ರಿಯರಾಗಿದ್ದರು. 1960ರಲ್ಲಿ ಬಿ.ಆರ್‌ ಪಂಥುಲು ನಿರ್ದೇಶನದ ಮಕ್ಕಳ ರಾಜ್ಯ ಸಿನಿಮಾದ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು ಭಾಗ್ಯವಂತರು, ಕಿಲಾಡಿ ಜೋಡಿ, ಕಾಮನಬಿಲ್ಲು, ಗುರು ಶಿಷ್ಯರು, ಭೂಮಿಗೆ ಬಂದ ಭಗವಂತ, ಹಾಲು ಜೇನು, ಶೃತಿ ಸೇರಿದಾಗ, ನನ್ನಾಸೆಯ ಹೂವೆ, ಜಾಕಿ, ಮುಸ್ಸಂಜೆ ಮಾತು, ಡೇರ್ ಡೆವಿಲ್ ಮುಸ್ತಫಾ, ಹಗಲುವೇಷ ಸೇರಿದಂತೆ 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಇನ್ನೂ, ಗೋಲ್ಮಾಲ್ ರಾಧಾಕೃಷ್ಣ ಚಿತ್ರದಲ್ಲಿ ಉಮೇಶ್ ಅವರು ಮಾಡಿರುವ ಪಾತ್ರ ದೊಡ್ಡ ಹಿಟ್ ಆಗಿತ್ತು. ಆ ಚಿತ್ರದಲ್ಲಿ “ಅಯ್ಯೋ ನನ್ನ ಅಪಾರ್ಥ ಮಾಡ್ಕೊಂಡ್ಬಿಟ್ರಲ್ಲ” ಎನ್ನುವ ಡೈಲಾಗ್ ಇಂದಿಗೂ ಸಿನಿಮಾ ಪ್ರಿಯರು ಮರೆತಿಲ್ಲ. ರಂಗಭೂಮಿ ಮತ್ತು ಚಿತ್ರರಂಗಗಳೆರಡರಲ್ಲೂ…

Read More

ತುಮಕೂರು: ಶ್ರೀ ಕ್ಷೇತ್ರ ಮಿಂಚುಕಲ್ಲು ಬೆಟ್ಟ, ವೈಕುಂಠಗಿರಿ ಬೆಳಧರ ಅಂಚೆ, ತುಮಕೂರು ತಾಲ್ಲೂಕು, ತುಮಕೂರು ಜಿಲ್ಲೆ, ವೈಕುಂಠಗಿರಿಯಲ್ಲಿ ಶತ–ಶತಮಾನಗಳಿಂದ ನೆಲೆಸಿರುವ ಶ್ರೀ ಸ್ವಾಮಿಗಳು ಡಿ.3 ನೇ ಬುಧವಾರ ಸ್ವಸ್ತಿ ಶ್ರೀ ವಿಶ್ವಾವಸು ನಾಮ ಸಂವತ್ಸ ರ ದಕ್ಷಿಣಾಯನ ಹಿಮಂತ ಋತು ಮಾರ್ಗಶಿರ ಮಾಸ ಶುಕ್ಲ ಪಕ್ಷ ತ್ರಯೋದಶಿ ಬೆಳಗ್ಗೆ 8 ರಿಂದ 12 ಗಂಟೆಯೊಳಗೆ ಸಲ್ಲುವ ಶುಭ ಮುಹೂರ್ತದಲ್ಲಿ ಶ್ರೀ ವೆಂಕಟರಮಣಸ್ವಾಮಿ ವೈಕುಂಠ ಪಾದುಕೆಗೆ ಮತ್ತು ಶ್ರೀ ವೀರಾಜಂನೇಯ ಸ್ವಾಮಿಗೆ ಹೋಮ, ಹರಿಸೇವೆ ಮತ್ತು ಮಹಾ ಕುಂಭಾಭಿಷೇಕ ಮಹೋತ್ಸವವನ್ನು ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಗೃಹಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಡಾ.ಕೆ.ನಾಗಣ್ಣ, ಸಂಸ್ಥಾಪಕ ಪೀಠಾಧ್ಯಕ್ಷರು ಪಾಲನಹಳ್ಳಿ ಮಠದ ಡಾ.ಶ್ರೀ ಶ್ರೀ ಸಿದ್ದರಾಜು ಸ್ವಾಮೀಜಿ, ತುಮಕೂರು ಜಿಪಂ ಸಿಇಒ ಜಿ.ಪ್ರಭು, ತುಮಕೂರು ತಹಶೀಲ್ದಾರ್ ರಾಜೇಶ್ವರಿ, ಕವಿಗಳು, ಸಂಶೋಧಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಡಾ.ವಡ್ಡಗೆರೆ ನಾಗರಾಜಯ್ಯ ಬೆಂಗಳೂರು, ಪರವಾನಗಿ ಭೂಮಾಪಕರ ಸಂಘದ ರಾಜ್ಯಾಧ್ಯಕ್ಷರಾದ ತಿರುಮಲೇಗೌಡ, ಸೇರಿದಂತೆ ಇತರೆ ಗಣ್ಯರುಗಳು ಭಾಗವಹಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ತುಮಕೂರು: ಹನುಮಜಯಂತಿ ಪ್ರಯುಕ್ತ ಅಗ್ನಿ ಬನ್ನಿರಾಯನಗರದಲ್ಲಿರುವ ಗಾರ್ಡನ್ ರಸ್ತೆ, ಶ್ರೀ ರಾಮ ಸೇವಾ ಸಮಿತಿ ವತಿಯಿಂದ ಡಿ.2ರಂದು ಬೆಳಗ್ಗೆ 6 ಗಂಟೆಗೆ ಶ್ರೀ ರಾಮ ದೇವಸ್ಥಾನದಲ್ಲಿ ಶ್ರೀ ರಾಮ ದೇವರಿಗೆ ಪಂಚಾಮೃತ ಅಭಿಷೇಕ ಮತ್ತು ವಿಶೇಷ ಹೂವಿನ ಅಲಂಕಾರದೊಂದಿಗೆ ವಿವಿಧ ರೀತಿಯ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ಮಾಡಲಾಗುವುದು. ಸಂಜೆ 6:30ಕ್ಕೆ ಗ್ರಾಮೀಣ ಕ್ರಿಯಾತ್ಮಕ ರಂಗ ತಂಡದವರಿಂದ ಪ್ರೊ.ಚಂದ್ರಶೇಖರ ಪಾಟೀಲರವರ ಗೋಕರ್ಣದ ಗೌಡಶಾಲೆ ಎಂಬ ನಾಟಕ ಪ್ರದರ್ಶನ ನಡೆಯಲಿದ್ದು 6:30 ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಕುಣಿಗಲ್: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಕಸಾಯ ಖಾನೆಗೆ ಸಾಗಿಸುತ್ತಿದ್ದ 15 ಜಾನುವಾರುಗಳನ್ನು ಕುಣಿಗಲ್ ಪೊಲೀಸರು ರಕ್ಷಿಸಿ ಓರ್ವ ಆರೋಪಿಯನ್ನು ಬಂಧಿಸಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಅಂಚೆಪಾಳ್ಯ ಸಮೀಪ ನಡೆದಿದೆ. ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕು ನುಗ್ಗೆಹಳ್ಳಿ ಗ್ರಾಮದ ಎಂ.ಹೆಚ್.ಪ್ರದೀಪ್ (40) ಬಂಧಿತ ಆರೋಪಿ. ಕುಣಿಗಲ್ ಪೊಲೀಸರು ಹಾಸನ ಜಿಲ್ಲೆ ಚನ್ನರಾಯಪಟ್ಟಣ ಕಡೆಯಿಂದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಗೋವುಗಳನ್ನು ತುಂಬಿಕೊಂಡು ಬೆಂಗಳೂರು ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ತಕ್ಷಣ ಎಚ್ಚೆತ್ತ ಪೊಲೀಸರು ರಾಷ್ಟ್ರೀಯ ಹೆದ್ದಾರಿ 75 ಅಂಚೇಪಾಳ್ಯ ಹಂಪ್ಸ್ ಬಳಿ ವಾಹನ ತಡೆದಾಗ ವಾಹನ ನಿಲ್ಲಿಸಿ ಪರಾರಿಯಾಗಲು ಚಾಲಕ ಪ್ರದೀಪ್‌ ಯತ್ನಿಸಿದ್ದಾನೆ. ತಕ್ಷಣ ಪೊಲೀಸರು ಆತನನ್ನು ವಶಕ್ಕೆ ಪಡೆದು, ಪರಿಶೀಲಿಸಿದಾಗ ವಾಹನದಲ್ಲಿ ಒಟ್ಟು 15 ಜಾನುವಾರುಗಳು (5 ಕೋಣಗಳು, 2 ಎಮ್ಮೆ ಕರುಗಳು, 6 ಸೀಮೆ ಹಸುವಿನ ಗಂಡು ಕರುಗಳು ಮತ್ತು 2 ಹೆಣ್ಣು ಕರುಗಳು) ಪತ್ತೆಯಾಗಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ…

Read More