Author: admin

ತುಮಕೂರು: ಯುವಜನತೆ ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು, ರಾಷ್ಟ್ರ ನಿರ್ಮಾಣಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡಿದಾಗ ಮಾತ್ರ ಭವ್ಯ ಭಾರತದ ಕನಸು ನನಸಾಗುತ್ತದೆ. ಯುವ ಜನತೆ ಎಲ್ಲಾ ರೀತಿಯ ಮಾದಕ ವಸ್ತುಗಳ ವ್ಯಸನದಿಂದ ಮುಕ್ತರಾಗಬೇಕು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಸಿ.ಗೋಪಾಲ್ ತಿಳಿಸಿದರು. ಅವರು ಭಾರತ ಸರ್ಕಾರದ ಕೇಂದ್ರ ಯುವ ಕಾರ್ಯಕ್ರಮ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ, ಚೇಳೂರು ಸಂಜೀವಿನಿ ಯುವಜನ ಸಂಘ, ಸುಫಿಯಾ ಕಾನೂನು ಮಹಾವಿದ್ಯಾಲಯ ಹಾಗೂ ಇನ್ಹರ್ ವೀಲ್‌ಕ್ಲಬ್ ಆಫ್ ತುಮಕೂರು ಸೆಂಟ್ರಲ್ ಇವರ ಸಹಯೋಗದಲ್ಲಿ ಗುರುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಮಾದಕ ವ್ಯಸನ, ಮಾದಕ ವಸ್ತುಗಳ ದುಷ್ಪರಿಣಾಮ ಹಾಗೂ ಸೈಬರ್ ಅಪರಾಧಗಳ ಕುರಿತು ಜಾಗೃತಿ ಮತ್ತು ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿಂದುಳಿದ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಯುವಜನರು ಮಾದಕ ವ್ಯಸನಕ್ಕೆ ಬಲಿಯಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿರುವುದು ದುರ್ದೈವದ ಸಂಗತಿ ಎಂದರು. ಸೈಬರ್ ಕ್ರೈಮ್ ಕುರಿತು ನಾಗರಿಕರು ಎಚ್ಚರಿಕೆಯಿಂದಿರಬೇಕು ಎಂದರು. ಇತ್ತೀಚೆಗೆ ಶಾಲಾ…

Read More

ತುಮಕೂರು: ನಗರದ ಜಿಲ್ಲಾ ಬಾಲಭವನ ಸಮಿತಿ ವತಿಯಿಂದ 2025–26ನೇ ಸಾಲಿಗೆ ಸಂಬಂಧಿಸಿದಂತೆ 10 ರಿಂದ 16 ವರ್ಷದ ವಯೋಮಾನದ ಮಕ್ಕಳಿಗಾಗಿ ಮೇ 6 ರಿಂದ ಮೇ 20ರ ವರೆಗೆ 15 ದಿನಗಳ “ಬೇಸಿಗೆ ಶಿಬಿರ”ವನ್ನು ಆಯೋಜಿಸಲಾಗಿದೆ. ಶಿಬಿರವು ಪ್ರತಿ ದಿನ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಶಿಬಿರದಲ್ಲಿ ಕೇವಲ 60 ಮಕ್ಕಳಿಗೆ ಮಾತ್ರ ಅವಕಾಶವಿರುವುದರಿಂದ, ಆಸಕ್ತ ಪಾಲಕರು ತಮ್ಮ ಮಕ್ಕಳನ್ನು ಮೇ 03 ಸಂಜೆ 5:30 ಗಂಟೆಯೊಳಗೆ ಜಿಲ್ಲೆಯ ಬಾಲಭವನ ಕಚೇರಿ, ಎಂ.ಜಿ ರಸ್ತೆ, ಇಲ್ಲಿ ಕಛೇರಿ ವೇಳೆಯಲ್ಲಿ ನೊಂದಾಯಿಸಿಕೊಳ್ಳಬಹುದು. ಮೊದಲಿಗೆ ನೋಂದಾಯಿಸಿಕೊಂಡವರಿಗೆ ಆದ್ಯತೆ ನೀಡಲಾಗುತ್ತದೆ. ಸರ್ಕಾರಿ ಶಾಲಾ ಮಕ್ಕಳು, ಗ್ರಾಮೀಣ/ಹೋಬಳಿ ಮಟ್ಟದ ಮತ್ತು ಸೌಲಭ್ಯ ವಂಚಿತ ಮಕ್ಕಳು, ಸರ್ಕಾರಿ ಸುಧಾರಣಾ ಸಂಸ್ಥೆಗಳ ಬಾಲಕ/ಬಾಲಕಿಯರ ಬಾಲ ಮಂದಿರದ ಮಕ್ಕಳು ಹಾಗೂ ವಿಕಲಚೇತನ ಮಕ್ಕಳಿಗೆ ಈ ಶಿಬಿರದಲ್ಲಿ ವಿಶೇಷ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಚಾರಿ ದೂರವಾಣಿ ಸಂಖ್ಯೆ 9901890079ನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

Read More

ಬೀದರ್ : ಪೊಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 35 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 70 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ ಆದೇಶಿಸಿದೆ. ತೆಲಂಗಾಣ ರಾಜ್ಯದ ಸಂಗಾರೆಡ್ಡಿಯ ಯಲ್ಗೊಯಿ ಮೂಲದ ನಿವಾಸಿ ರಾಜು (25) ಶಿಕ್ಷೆಗೊಳಗಾದ ಆರೋಪಿ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಹಿನ್ನೆಲೆಯಲ್ಲಿ ಈತನವಿರುದ್ಧ ಜನವಾಡ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ದೋಷಾರೋಪಣೆ ಪತ್ರ ಸಲ್ಲಿಸಿದ ನಂತರ ಇದೀಗ ಈ ಪ್ರಕರಣ ಬಗ್ಗೆ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಆರ್.ಎನ್. ಅವರು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ತಮ್ಮ ಮನೆ/ಅಂಗಡಿ/ನರ್ಸಿಂಗ್ ಹೋಂ/ಹೋಟೆಲ್/ಮಾಲ್‌ ಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳನ್ನು ಹಸಿ ಕಸ ಮತ್ತು ಒಣ ಕಸವನ್ನಾಗಿ ವಿಂಗಡಿಸಿ ಕಸದ ವಾಹನಕ್ಕೆ ನೀಡಬೇಕು ಎಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಮನವಿ ಮಾಡಿದ್ದಾರೆ. ಕಸವನ್ನು ವಾಹನಕ್ಕೆ ನೀಡದೆ ರಸ್ತೆ ಬದಿ, ಖಾಲಿ ನಿವೇಶನ, ಎಲ್ಲೆಂದರಲ್ಲಿ ಬಿಡಾಡುವವರ ವಿರುದ್ಧ ದೂರು ದಾಖಲಿಸಿ ಶಿಸ್ತು ಕ್ರಮ ಜರುಗಿಸಲಾಗುವುದು. ಕೆಲವು ಸಾರ್ವಜನಿಕರು ರಾತ್ರಿ ವೇಳೆಯಲ್ಲಿ ಕಸವನ್ನು ರಸ್ತೆಗೆ ಸುರಿಯುವುದು ಹಾಗೂ ತಮ್ಮ ವಾಹನಗಳಲ್ಲಿ ಸಂಗ್ರಹಿಸಿಕೊಂಡು ತಂದು ಸಾರ್ವಜನಿಕ ಪ್ರದೇಶಗಳಲ್ಲಿ ಎಸೆಯುವುದು ಕಂಡು ಬಂದಿದೆ. ಇದರಿಂದ ನಗರದ ಸ್ವಚ್ಛತೆ ಹಾಗೂ ನೈರ್ಮಲ್ಯತೆ ನಿರ್ವಹಣೆ ಕಷ್ಟ ಸಾಧ್ಯವಾಗುತ್ತಿದೆ. ಎಲ್ಲೆಂದರಲ್ಲಿ ಕಸ ಬಿಸಾಡುತ್ತಿರುವುದರಿಂದ ಪಾಲಿಕೆಯ ಅಂದವನ್ನು ಹಾಳಾಗುತ್ತಿದೆ. ಅಲ್ಲದೆ ಹಾವು, ಚೇಳು ಇನ್ನಿತರೆ ವಿಷಜಂತುಗಳ ಸಂಖ್ಯೆ ಹೆಚ್ಚಾಗಿ ಸುತ್ತಮುತ್ತಲು ವಾಸಿಸುತ್ತಿರುವ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತದೆ. ಪರಿಸರ ಮಾಲಿನ್ಯ ಉಂಟಾಗಿ ಸಾರ್ವಜನಿಕರು/ಹಿರಿಯ ನಾಗರಿಕರ ಆರೋಗ್ಯದ ಮೇಲೆ ಧಕ್ಕೆ ಉಂಟಾಗುತ್ತದೆ. ಖಾಲಿ ನಿವೇಶನಗಳ ಮಾಲೀಕರು ತಮ್ಮ ನಿವೇಶನಗಳಲ್ಲಿ ಬೆಳೆದಿರುವ…

Read More

ತುಮಕೂರು:  ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿ ಹರಡುತ್ತಿರುವ ಡೆಂಗ್ಯೂ, ಚಿಕನ್‌ ಗುನ್ಯಾ, ಮಲೇರಿಯಾ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವಲ್ಲಿ ಸಾರ್ವಜನಿಕರು ಪಾಲಿಕೆಯೊಂದಿಗೆ ಕೈಜೋಡಿಸಬೇಕೆಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಮನವಿ ಮಾಡಿದ್ದಾರೆ. ಘನತ್ಯಾಜ್ಯ ವಿಲೇವಾರಿ : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಪ್ರತಿನಿತ್ಯ ಸಮರ್ಪಕವಾಗಿ ಘನತ್ಯಾಜ್ಯ ವಿಲೇವಾರಿ ಮತ್ತು ಚರಂಡಿ ಸ್ವಚ್ಚತಾ ಕಾರ್ಯ ನಡೆಯುತ್ತಿದೆ. ಎಲ್ಲಾ ವರ್ಗದ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಘನತ್ಯಾಜ್ಯ ವಿಲೇವಾರಿ ಮತ್ತು ನಿಂತ ನೀರಿನ ತಾಣ, ತಗ್ಗು ಪ್ರದೇಶ, ಕೊಳಚೆ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಕೊಳಚೆ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸಿ, ಕೀಟನಾಶಕ ಔಷಧಿಗಳನ್ನು ಸಿಂಪಡಿಸಿ, ಕಡ್ಡಾಯವಾಗಿ ಕಾಲಕಾಲಕ್ಕೆ ಫಾಗಿಂಗ್ ಕಾರ್ಯವನ್ನು ನಿರ್ವಹಿಸಲಾಗುತ್ತಿದೆ. ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕ್ರಮ : ಆಟೋ ಟಿಪ್ಪರ್ ವಾಹನಗಳಲ್ಲಿ ಧ್ವನಿವರ್ಧಕಗಳ ಮೂಲಕ ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯಾ ಮತ್ತು ಇತರೆ ಸಾಂಕ್ರಾಮಿಕ ರೋಗಗಳ ಬಗ್ಗೆ ಪ್ರಚಾರ ಮಾಡಿಸುವ ಮೂಲಕ ಡೆಂಗ್ಯೂ ಮತ್ತು ಚಿಕನ್ ಗುನ್ಯಾ ರೋಗಗಳ ಬಗ್ಗೆ…

Read More

ತುಮಕೂರು:  ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಮೌಲಾನ ಆಜಾದ್ ಮಾದರಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ 5ನೇ ತರಗತಿಯಲ್ಲಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ. 75ರಷ್ಟು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಅರ್ಜಿ ಸಲ್ಲಿಸುವವರ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ.ಗಳನ್ನು ಮೀರಿರಬಾರದು. ಆಸಕ್ತರು SATS ಸಂಖ್ಯೆ, ಆಧಾರ್ ಸಂಖ್ಯೆ, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಅಂಗವೈಕಲ್ಯ ಪ್ರಮಾಣಪತ್ರ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಮೇ 10ರೊಳಗಾಗಿ ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ / ಮೌಲಾನ ಆಜಾದ್ ಮಾದರಿ ಶಾಲೆ/ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ…

Read More

ತುಮಕೂರು:  ರುಡ್‌ ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ ಮತ್ತು ಫ್ಯಾಬ್ರಿಕ್ ಪೇಂಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿ ನೀಡಲು ಗ್ರಾಮೀಣ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ಮೇ 5ರಿಂದ ಪ್ರಾರಂಭವಾಗಲಿದ್ದು, ಅರ್ಜಿ ಸಲ್ಲಿಸುವವರು 18 ರಿಂದ 45 ವರ್ಷ ವಯೋಮಾನದವರಾಗಿರಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡನ್ನು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಆಸಕ್ತರು ಏಪ್ರಿಲ್ 25ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380220884, 9380162042, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ ಸೆಟ್ ಸಂಸ್ಥೆ ಬೆಂಗಳೂರು…

Read More

ತುಮಕೂರು:  ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಗುರುವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿಯ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಬೇಸಿಗೆಯಿಂದ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ತಲೆದೋರಿರುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಯೋಜನೆಗಳನ್ನು ರೂಪಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಜಲ್ ಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರನ್ನು ಒದಗಿಸುವ ಪೈಪ್‌ಲೈನ್ ಅಳವಡಿಕೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 3 ವಾಟರ್ ಟೆಸ್ಟಿಂಗ್ ಲ್ಯಾಬ್‌ಗಳಿಂದ ಈವರೆಗೆ ಯಾವುದೇ ನೀರು ಪರೀಕ್ಷಾ ವರದಿಗಳು ಸಲ್ಲಿಕೆಯಾಗಿಲ್ಲವೆಂದ ಅಸಮಾಧಾನ ವ್ಯಕ್ತಪಡಿಸಿದರು. ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಹೊಣೆಗಾರಿಕೆ ನಮ್ಮದು. ಈ ನಿಟ್ಟಿನಲ್ಲಿ ನೀರಿನ ಜೈವಿಕ ಹಾಗೂ ರಾಸಾಯನಿಕ ಪರೀಕ್ಷೆ ನಡೆಸಿ ಪ್ರತಿ 15 ದಿನಗಳಿಗೊಮ್ಮೆ ವರದಿ ಸಲ್ಲಿಸಬೇಕೆಂದು ಸಂಬಂಧಿಸಿದ…

Read More

ತುಮಕೂರು: ಬಾಗಲಕೋಟೆ ಜಿಲ್ಲೆ ಕೂಡಲ ಸಂಗಮದಲ್ಲಿ ಏಪ್ರಿಲ್ 29 ಹಾಗೂ 30ರಂದು ಆಯೋಜಿಸಿರುವ ಅನುಭವ ಮಂಟಪ – ಬಸವಾದಿ ಶರಣರ ವೈಭವ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಸಾಂಸ್ಕೃತಿಕ ನಾಯಕರಾದ ವಿಶ್ವ ಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ನಾಡಿನಾದ್ಯಂತ ತಿಳಿಸುವ ನಿಟ್ಟಿನಲ್ಲಿ ಏಪ್ರಿಲ್ 17 ರಿಂದ 29ರವರೆಗೆ ರಥಯಾತ್ರೆ ರಾಜ್ಯದಾದ್ಯಂತ ಸಂಚರಿಸಲಿದೆ. ಈ ರಥಯಾತ್ರೆಯು ಏಪ್ರಿಲ್ 19ರಂದು ಮಧ್ಯಾಹ್ನ 1:30 ಗಂಟೆಗೆ ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗಕ್ಕೆ ಆಗಮಿಸಲಿದ್ದು, ರಥಯಾತ್ರೆಯನ್ನು ಜಿಲ್ಲಾಡಳಿತದಿಂದ ಗೌರವಯುತವಾಗಿ ಸ್ವಾಗತಿಸಿ ಬೀಳ್ಕೊಡಲಾಗುವುದು. ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಪರಿಷತ್ತು, ಸರ್ಕಾರಿ ಅಧಿಕಾರಿ/ನೌಕರರು, ಕನ್ನಡ ಪರ ಸಂಘಟನೆಗಳ ಅಧ್ಯಕ್ಷರು, ಜಿಲ್ಲೆಯ ವಿವಿಧ ಸಮುದಾಯದ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ತುಮಕೂರು:  ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾದ್ಯಂತ ಏಪ್ರಿಲ್ 26 ರಿಂದ ಜೂನ್ 4ರವರೆಗೆ ಜಾನುವಾರುಗಳಿಗಾಗಿ ಹಮ್ಮಿಕೊಳ್ಳಲಾಗುವ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನದಲ್ಲಿ ನಿಗಧಿತ ಗುರಿ ಸಾಧಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಜರುಗಿದ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಕಾಲುಬಾಯಿ ರೋಗದ ಲಸಿಕೆಯನ್ನು ಜಾನುವಾರುಗಳಿಗೆ ಕಡ್ಡಾಯವಾಗಿ ಹಾಕಿಸುವ ಹಾಗೂ ಲಸಿಕೆಯನ್ನು ಉಚಿತವಾಗಿ ನೀಡುವ ಬಗ್ಗೆ ಪಶುಪಾಲಕರಲ್ಲಿ ಅರಿವು ಮೂಡಿಸಬೇಕು ಎಂದರಲ್ಲದೆ, ನಿಗಧಿತ ಗುರಿ ಸಾಧಿಸುವ ಮೂಲಕ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ನಿರ್ದೇಶನ ನೀಡಿದರು. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ(ತಾಂತ್ರಿಕ) ಡಾ.ನಾಗಮಣಿ ಮಾತನಾಡಿ, ಕಳೆದ ವರ್ಷ ಹಮ್ಮಿಕೊಂಡಿದ್ದ 6ನೇ ಸುತ್ತಿನ ಲಸಿಕಾ ಅಭಿಯಾನದಲ್ಲಿ 478624 ಜಾನುವಾರುಗಳಿಗೆ ಲಸಿಕೆ ನೀಡುವ ಮೂಲಕ ಶೇ. 96ರಷ್ಟು ಗುರಿ ಸಾಧಿಸಲಾಗಿತ್ತು. ಪ್ರಸಕ್ತ ವರ್ಷ ಜಿಲ್ಲೆಯಲ್ಲಿ 388209 ದನ ಹಾಗೂ 107969 ಎಮ್ಮೆ ಸೇರಿದಂತೆ ಒಟ್ಟು 496278…

Read More