Subscribe to Updates
Get the latest creative news from FooBar about art, design and business.
- ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಪ್ರಕಾಶ್ ರಾಜ್ ರಾಯಭಾರಿ, ಮಹಿಳಾ ಸಬಲೀಕರಣವೇ ಈ ಬಾರಿಯ ‘ಥೀಮ್’
- ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ನನ್ನ ಪೂರ್ಣ ಸಹಮತವಿದೆ: ಸಿಎಂ ಸಿದ್ದರಾಮಯ್ಯ
- ಹಾವೇರಿ: 7ಕ್ಕೂ ಹೆಚ್ಚು ಮನೆಗಳಲ್ಲಿ ಸರಣಿ ಕಳ್ಳತನ, ಚಹಾ ಕುಡಿದು ಹೋದ ಕಳ್ಳರು!
- ಕೊರಟಗೆರೆ: ಜಿ.ಎಂ.ಕಾಮರಾಜ್ ಪಶ್ಚಿಮ ರೈಲ್ವೆ ಬೋರ್ಡ್ ನಿರ್ದೇಶಕರಾಗಿ ಆಯ್ಕೆ
- ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ
- ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ ಚಿರತೆ ಸೆರೆ
- ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ
- ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
Author: admin
ಮಧುಗಿರಿ : ಹೆರಿಗೆಗೆ ಬಂದಿದ್ದ ಗರ್ಭಿಣಿ ಮಹಿಳೆ ವೈದ್ಯರಿಲ್ಲದ ಕಾರಣ ಸರಿಯಾದ ಸಮಯದಲ್ಲಿ ಚಿಕಿತ್ಸೆ ದೊರೆಯದೇ ಸಾವಿಗೀಡಾಗಿರುವ ಘಟನೆ ನಡೆದಿದ್ದು, ತಾಯಿ ಮಗು ಇಬ್ಬರೂ ಬಲಿಯಾಗಿದ್ದಾರೆ. ಮಿಡಿಗೇಶಿ ಹೋಬಳಿ ಬ್ರಹ್ಮದೇವರಹಳ್ಳಿ ಗ್ರಾಮದ ವಾಸಿ ಕಮಲಮ್ಮ ಮೃತ ಮಹಿಳೆ ಎಂದು ಗುರುತಿಸಲಾಗಿದ್ದು, ಹೊಸಕೆರೆ ಆಸ್ಪತ್ರೆಗೆ ಹೆರಿಗೆಗೆ ಬಂದಿದ್ದ ವೇಳೆ ಆಸ್ಪತ್ರೆಯಲ್ಲಿ ವೈದ್ಯರಿರಲಿಲ್ಲ ಎನ್ನಲಾಗಿದೆ. ವೈದ್ಯರಿಲ್ಲದ ಕಾರಣ ನರ್ಸ್ ಗಳೇ ಚಿಕಿತ್ಸೆ ನೀಡಿದ್ದಾರೆ. ಪರಿಸ್ಥಿತಿ ಬಿಗಡಾಯಿಸಿದಾಗ ತಾಲೂಕು ಆಸ್ಪತ್ರೆಗೆ ಸಾಗಿಸಲು ಯತ್ನಿಸಲಾಗಿದೆ. ಆದರೆ, ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಕೂಡ ಲಭ್ಯವಾಗಲಿಲ್ಲ ಎನ್ನಲಾಗಿದೆ. ಬಹಳಷ್ಟು ಸಮಯಗಳ ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ದಾರಿ ಮಧ್ಯೆ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ವೈದ್ಯರಿಲ್ಲದ ಕಾರಣ ತಾಯಿ ಹಾಗೂ ಮಗು ಸಾವನ್ನಪ್ಪಿದೆ. ಸೂಕ್ತ ಸಮಯಕ್ಕೆ ವೈದ್ಯರು ಲಭ್ಯವಾಗದ ಕಾರಣದಿಂದಾಗಿ ತಾಯಿ ಮಗು ಇಬ್ಬರೂ ಸಾವಿಗೀಡಾಗುವಂತಾಯಿತು ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದು, ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರನ್ನು ಪ್ರತಿಭಟನೆಗೆ ಕಳುಹಿಸಿದ ಪ್ರಾಂಶುಪಾಲರ ವಿರುದ್ಧ ಕ್ರಮ ಕೈಗೊಳ್ಳಲು ತಾಲ್ಲೂಕಿನ ಜನಪರ ಸಂಘಟನೆಗಳ ಒಕ್ಕೂಟದ ಆಗ್ರಹಿಸಿದೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ತಾಲ್ಲೂಕು ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಈ ಒತ್ತಾಯ ಮಾಡಲಾಗಿದೆ. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷರಾದ ಕೆ.ರಾಮಚಂದ್ರ, ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರನ್ನು ಪೋಷಕರ ಅನುಮತಿಯಿಲ್ಲದೆ ಒತ್ತಾಯಪೂರ್ವಕವಾಗಿ ಹೋರಾಟಕ್ಕೆ ಕಳುಹಿಸುವುದರಿಂದ ಎಳೆಯ ವಯಸ್ಸಿನಲ್ಲಿ ಮಕ್ಕಳ ಮನಸ್ಸಿನಲ್ಲಿ ಜಾತಿ-ಧರ್ಮಗಳ ವಿಷಬೀಜ ಬಿತ್ತುವ ಹುನ್ನಾರ ನಡೆಸುತ್ತಿರುವುದು ನೋವಿನಸಂಗತಿಯಾಗಿದೆ ಎಂಬುದಾಗಿ ಹೇಳಿದರು. ತಾಲ್ಲೂಕಿನಲ್ಲಿ ಕೋಮು, ಸೌಹಾರ್ದ, ಶಾಂತಿ, ಸಹಬಾಳ್ವೆ ನಡೆಸಲು ಸಹಕಾರ ಮಾಡಿಕೊಡಬೇಕು ಎಂಬುದಾಗಿ ಜಿಲ್ಲಾಧಿಕಾರಿಗಳ ಮೂಲಕ ಶಿಕ್ಷಣ ಸಚಿವರು, ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ರೈತಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ, ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾ ಯುವಘಟಕದ ಅಧ್ಯಕ್ಷ ಬಿ.ರೇವಣಸಿದ್ಧಪ್ಪ, ಅಂಬೇಡ್ಕರ್ ಸ್ವಾಭಿಮಾನಿ ಸೇನೆ…
ತುಮಕೂರು: ಚೇತನ್ ಅಹಿಂಸಾ ರವರು ಸಾರ್ವಜನಿಕ ಸೇವೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿದ್ದು, ನೊಂದವರ ಪರ ಹೋರಾಟ ನಡೆಸಿ ಅವರಿಗೆ ನ್ಯಾಯ ಒದಗಿಸಿಕೊಡುವ ವ್ಯಕ್ತಿತ್ವ ಹೊಂದಿದ್ದಾರೆ. ಚೇತನ್ ಅಹಿಂಸಾ ಅವರ ಜೊತೆಗೆ ಪೊಲೀಸರು ದುರ್ವರ್ತನೆ ತೋರಿದ್ದು, ಅಕ್ರಮವಾಗಿ ಅಪಹರಿಸಿಕೊಂಡು ಹೋಗಿ ಅವರ ಮೊಬೈಲ್ ಸ್ವಿಚ್ ಆಫ್ ಮಾಡಿಸಿ, ಪೊಲೀಸ್ ಗಿರಿಯನ್ನು ಪ್ರದರ್ಶಿಸಿರುವುದು ಖಂಡನೀಯ ಎಂದು ವಿವಿಧ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ವಿವಿಧ ಸಂವಿಧಾನ ಪರ ಸಂಘಟನೆಗಳು ಸರ್ಕಾರದ ವಿರುದ್ಧ ಘೋಷಣೆ ಗಳನ್ನು ಕೂಗಿ ಕೂಡಲೇ ನಟ ಅಹಿಂಸಾ ಚೇತನ್ ಅವರನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿದವು. ರಾಜ್ಯ ಎಡ-ಬಲ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ದಲಿತ ಮುಖಂಡ ಪಿ.ಎನ್ . ರಾಮಯ್ಯ ಮಾತನಾಡಿ, ಸಾರ್ವಜನಿಕರ ಬಗ್ಗೆ ಕಾಳಜಿ ಇಲ್ಲದ ಸರ್ಕಾರ ನಟ ಚೇತನ್ ಅವರನ್ನು ನಿಗೂಢವಾಗಿ ಅರೆಸ್ಟ್ ಮಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಕಾನೂನು ಸಂವಿಧಾನದ ಬಗ್ಗೆ ಕಾಳಜಿ ಇಲ್ಲ. ಇದು ಕೊಲೆಗಡುಕರ ಸರ್ಕಾರ. ಕದ್ದು ಆಡಳಿತ…
ಕೊರಟಗೆರೆ : ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಆಗತಾನೆ ಜನಿಸಿರುವ ಹೆಣ್ಣು ಮಗುವಿನ ಶವ ಪತ್ತೆಯಾಗಿರುವ ಘಟನೆ ನಡೆದಿದ್ದು, ಹೆಣ್ಣು ಮಗು ಎನ್ನುವ ಕಾರಣಕ್ಕೋ ಅಥವಾ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಜನಿಸಿದ ಮಗು ಎಂಬ ಕಾರಣಕ್ಕೋ ಮಗುವನ್ನು ಶೌಚಾಲಯ ಹಾಕಿರುವ ಸಾಧ್ಯತೆಗಳಿವೆ ಎನ್ನಲಾಗಿದೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದ್ದು, ರಾತ್ರಿ ವೇಳೆ ವೈದ್ಯರು ಹಾಗೂ ಸಿಬ್ಬಂದಿ ಕಡಿಮೆ ಇರುವ ಸಂದರ್ಭದಲ್ಲಿ ಈ ಕೃತ್ಯ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಸಿಸಿ ಕ್ಯಾಮಾರ ದೃಶ್ಯಾವಳಿಗಳಿಂದ ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿಗಳು ದೊರೆಯುವ ಸಾಧ್ಯತೆಗಳಿವೆ. ಘಟನೆ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ಕೊರಟಗೆರೆ ಪೊಲೀಸ್ ಠಾಣೆ ಪಿಎಸ್ ಐ ಮಂಜುಳ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿ ಕೊಂಡಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಹಿಜಾಬ್ ಪ್ರಕರಣದ (Hijab Row) ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ ಬುಧವಾರ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI) ಪಾತ್ರವನ್ನು ರಾಜ್ಯ ಸರ್ಕಾರದಿಂದ ಕೇಳಿದೆ. ಜನವರಿ 1 ರಂದು ಉಡುಪಿಯ ಕಾಲೇಜೊಂದರ ಹಿಜಾಬ್ (Hijab) ಧರಿಸಿ ತರಗತಿಗೆ ಪ್ರವೇಶ ನಿರಾಕರಿಸಲಾಯಿತು. ಇದಾದ ಬಳಿಕ ಕಾಲೇಜು ಅಧಿಕಾರಿಗಳನ್ನು ವಿರೋಧಿಸಿ ಕರಾವಳಿ ಪಟ್ಟಣದಲ್ಲಿ ಸಿಎಫ್‌ಐ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಆರು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.ಬಾಲಕಿಯರ ಸರ್ಕಾರಿ ಪಿಯು ಕಾಲೇಜು, ಅದರ ಪ್ರಾಂಶುಪಾಲರು ಮತ್ತು ಶಿಕ್ಷಕರನ್ನು ಪ್ರತಿನಿಧಿಸುವ ಹಿರಿಯ ವಕೀಲ ಎಸ್‌ಎಸ್ ನಾಗಾನಂದ್ ಅವರು ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಜೆಎಂ ಖಾಜಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ಪೂರ್ಣ ಪೀಠಕ್ಕೆ, “ಹಿಜಾಬ್ ಪ್ರಕರಣವನ್ನು ಕೆಲವು CFI ಗೆ ನಿಷ್ಠರಾಗಿರುವ ವಿದ್ಯಾರ್ಥಿಗಳು ಪ್ರಾರಂಭಿಸಿದರು” ಎಂದು ಹೇಳಿದರು. ಇದಕ್ಕೆ ಮುಖ್ಯ ನ್ಯಾಯಮೂರ್ತಿಗಳು CFI ಏನನ್ನು ಪ್ರತಿನಿಧಿಸುತ್ತದೆ ಮತ್ತು ಅದರ ಪಾತ್ರವೇನು ಎಂದು ತಿಳಿಯಲು ಪ್ರಯತ್ನಿಸಿದರು. ಸಂಘಟನೆಯು ರಾಜ್ಯದಲ್ಲಿ ಪ್ರತಿಭಟನೆಗಳನ್ನು ಸಂಘಟಿಸುತ್ತಿದೆ ಎಂದು ಹಿರಿಯ ವಕೀಲರು…
10 ಮತ್ತು 12ನೇ ತರಗತಿ ಪರೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರ ಮಹತ್ತರ ತೀರ್ಪು ನೀಡಿದೆ. . 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE Exam Latest Update) ನಡೆಸಲಿರುವ 10 ಮತ್ತು 12 ನೇ ತರಗತಿಯ ‘ಆಫ್‌ಲೈನ್’ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಕೋರ್ಟ್ ತಿರಸ್ಕರಿಸಿದೆ. ಇದರೊಂದಿಗೆ ಐಸಿಎಸ್‌ಇ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (NIOS) ನಡೆಸುವ ಆಫ್‌ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೂಡಾ ನ್ಯಾಯಾಲಯ ವಜಾಗೊಳಿಸಿದೆ. ಆನ್‌ಲೈನ್ ಪರೀಕ್ಷೆ ನಡೆಸುವಂತೆ ಅರ್ಜಿಗಳನ್ನು ಸಲ್ಲಿಸಲಾಗಿತ್ತು: 10 ಮತ್ತು 12ನೇ ತರಗತಿಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ (Supreme court)ಅರ್ಜಿ ಸಲ್ಲಿಸಲಾಗಿದ್ದು, ಆನ್‌ಲೈನ್‌ನಲ್ಲಿ ಪರೀಕ್ಷೆಗಳನ್ನು ನಡೆಸುವಂತೆ ಒತ್ತಾಯಿಸಲಾಗಿತ್ತು. ಕಳೆದ ವರ್ಷದಂತೆ ಪರೀಕ್ಷೆ ನಡೆಸಲು ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು (CBSE Exam Latest Update).…
ಜಿರಳೆ ಭಾರತದ ಪ್ರತಿಯೊಂದು ಮನೆಯಲ್ಲೂ ಕಂಡುಬರುವ ಅನಗತ್ಯ ಜೀವಿ. ಇದು ಕೊಳಚೆಯಲ್ಲಿ ವಾಸಿಸುತ್ತದೆ. ಈ ಜಿರಳೆಗಳು (Cockroach)ಅನೇಕ ರೋಗಗಳ ಅಪಾಯವನ್ನು ತಂದೊಡ್ಡುತ್ತದೆ. ಮನೆಯ ಅಡಿಗೆ ಮನೆ ಮತ್ತು ಸಿಂಕ್ ಜಿರಳೆಗಳ ನೆಚ್ಚಿನ ಸ್ಥಳಗಳಾಗಿರುತ್ತವೆ. ಅವು ಆಹಾರ ಪದಾರ್ಥಗಳನ್ನು ಕಲುಷಿತಗೊಳಿಸುತ್ತವೆ. ಜಿರಳೆಗಳನ್ನು ತೊಡೆದುಹಾಕಲು 5 ಸುಲಭ ಮಾರ್ಗಗಳು : ಜಿರಳೆಗಳ (Cockroach)ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಅವುಗಳನ್ನು ಸಮಯಕ್ಕೆ ಸರಿಯಾಗಿ ನಿಯಂತ್ರಿಸುವುದು ಅವಶ್ಯಕ. ಇಲ್ಲದಿದ್ದರೆ ಫುಡ್ ಪಾಯಿಸನ್ (Food Poisoning)ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. 1. ಲವಂಗ ಲವಂಗವು (Clove) ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಇದು ಬಾಯಿಯ ದುರ್ವಾಸನೆ, ಶೀತಗಳನ್ನು ಗುಣಪಡಿಸಲು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಜಿರಳೆಯನ್ನು (Cockroach) ಸಹ ಅದರಿಂದ ಓಡಿಸಬಹುದು ಎನ್ನುವುದು ಬಹುಶಃ ಬಹಳಷ್ಟು ಮಂದಿಗೆ ತಿಳಿದಿರಲಿಕ್ಕಿಲ್ಲ. ಲವಂಗದ ಕೆಲವು ತುಂಡುಗಳನ್ನು ಮನೆಯ ಮೂಲೆಗಳಲ್ಲಿ ಇರಿಸಿದರೆ ಜಿರಳೆಗಳು ಓಡಿಹೋಗುತ್ತವೆ. 2. ಸೀಮೆ ಎಣ್ಣೆ ಜಿರಳೆಗಳೂ ಸೀಮೆ ಎಣ್ಣೆಯ (Kerosene Oil) ವಾಸನೆಯನ್ನು ಇಷ್ಟಪಡುವುದಿಲ್ಲ ಮತ್ತು ಅವು ಅದರಿಂದ ಓಡಿಹೋಗುತ್ತವೆ. ಮನೆಯಲ್ಲಿ…
ತರಗತಿಗೆ ಹಾಜರಾಗುವ ಮುನ್ನ ವಿದ್ಯಾರ್ಥಿನಿಯರು ಹಿಜಾಬ್ ತೆಗೆಯಲು ಸ್ಥಳ ಕಲ್ಪಿಸುವಂತೆ ಶಾಲಾ-ಕಾಲೇಜುಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಉಡುಪಿಯಲ್ಲಿ ಶುರುವಾದ ಹಿಜಾಬ್-ಕೇಸರಿ ಶಾಲು ಕಿಡಿ ದೇಶಾದ್ಯಂತ ಹಬ್ಬಿ ಸದ್ಯ ಕೋರ್ಟ್ ಅಂಗಳದಲ್ಲಿ ವಾದ ಮಂಡನೆ ನಡೆಯುತ್ತಿದೆ. ಇತ್ತ ಹೈಕೋರ್ಟ್ ಮಧ್ಯಂತರ ಆದೇಶದ ಅನ್ವಯ ಹಿಜಾಬ್ ಧರಿಸಿ ಶಾಲಾ-ಕಾಲೇಜಿಗೆ ಬರುತ್ತಿರುವ ವಿದ್ಯಾರ್ಥಿಗಳು ತರಗತಿಗಳಿಗೆ ಹಿಜಾಬ್ ಧರಿಸಿ ಪ್ರವೇಶಿಸದಂತೆ ಸರ್ಕಾರ ಸೂಚಿಸಿದೆ.ಹಿಜಾಬ್ ತೆಗೆದು ತರಗತಿಗಳಿಗೆ ಪ್ರವೇಶಿಸಲು ಅನುಕೂಲವಾಗುವಂತೆ ಮಹಿಳಾ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಆವೃತ ಸ್ಥಳ ಕಲ್ಪಿಸುವಂತೆ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ. ಕರ್ನಾಟಕದಲ್ಲಿನ ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಫೆ.10ರಂದು ಮಧ್ಯಂತರ ಆದೇಶ ನೀಡಿತ್ತು. ಈ ಆದೇಶದಲ್ಲಿ ಶಾಲೆ, ಕಾಲೇಜುಗಳನ್ನು ಮುಚ್ಚುವುದು ಬೇಡ. ತಕ್ಷಣವಾಗಿ ಶಾಲೆ ಕಾಲೇಜು ಆರಂಭಿಸಿ ಎಂದು ಸರ್ಕಾರಕ್ಕೆ ಸೂಚನೆ ನೀಡಿತ್ತು.ಹೈಕೋರ್ಟ್ ಮಧ್ಯಂತರ ಆದೇಶದನ್ವಯ ಹಿಜಾಬ್ ಧರಿಸಿ ಶಾಲಾ ಕಾಲೇಜಿಗೆ ಬರುತ್ತಿರುವ ವಿದ್ಯಾರ್ಥಿಗಳು ತರಗತಿಗಳಿಗೆ ಹಿಜಾಬ್ ಧರಿಸಿದಂತೆ ಸೂಚಿಸಿರುವ ಹಿನ್ನೆಲೆಯಲ್ಲಿ, ಹಿಜಾಬ್ ತೆಗೆದು ತರಗತಿಗೆ ಆಗಮಿಸಲು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ…
ಶಿವಮೊಗ್ಗದಲ್ಲಿ ಬಜರಂಗ ದಳದ ಕಾರ್ಯಕರ್ತ ಹರ್ಷನ ಕೊಲೆ ಮಾಡಲು ಹಲವು ರೀತಿಯ ತಯಾರಿಗಳನ್ನು ಮಾಡಿಕೊಂಡಿದ್ದ ದುಷ್ಕರ್ಮಿಗಳು, ಸಹಾಯ ಕೇಳುವ ನೆಪದಲ್ಲಿ ಹೆಣ್ಣುಮಕ್ಕಳಿಂದ ಕರೆ ಮಾಡಿಸಿದ್ದರೆ ಎಂಬ ಅನುಮಾನಗಳು ಚರ್ಚೆಗೆ ಗ್ರಾಸವಾಗುತ್ತಿವೆ. ತನಿಖೆ ಆರಂಭಿಸಿರುವ ಪೊಲೀಸರು ಎಲ್ಲಾ ರೀತಿಯಿಂದಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆಯಾದ ದಿನ ಹರ್ಷ ಬೈಕ್‍ನಲ್ಲಿ ಹೋಗದೆ, ಮೂವರು ಸ್ನೇಹಿತರ ಜತೆ ನಡೆದುಕೊಂಡು ಹೋಗುತ್ತಿದ್ದ. ಅಮ್ಮಾ ಕಾಂಟೀನ್ ವರೆಗೂ ಸ್ನೇಹಿತರು ಜತೆಯಲ್ಲೇ ಇದ್ದರು, ಅಲ್ಲಿ ಸ್ನೇಹಿತರಿಗೆ ಬೈಕ್ ಕೀ ಕೊಟ್ಟ ಹರ್ಷ ಯಾಕೋ ಪರಿಸ್ಥಿತಿ ಸರಿ ಹೋಗುತ್ತಿಲ್ಲ ಬೈಕ್ ತನ್ನಿ ಎಂದು ಹೇಳಿದ್ದಾನೆ. ಇದಕ್ಕೂ ಮೊದಲು ಹರ್ಷನ ಮೊಬೈಲ್ ಗೆ ಇಬ್ಬರು ಯುವತಿಯರು ಪದೇ ಪದೇ ವಿಡಿಯೋ ಕಾಲ್ ಮಾಡುತ್ತಿದ್ದರು. ಅದನ್ನು ರಿಸೀವ್ ಮಾಡಿದ್ದ ಆತ ಯಾರು ಎಂದು ಕೇಳಿದ. ಆಗ ಅವರು, ನಿಮ್ಮ ಸ್ನೇಹಿತೆಯರು ಎಂದು ಹೇಳಿದ್ದಾರೆ. ನನಗೆ ನಿಮ್ಮ ಪರಿಚಯ ಇಲ್ಲ ಎಂದು ಕಾಲ್ ಕಟ್ ಮಾಡಿದ್ದರೂ ಕೂಡ ಪದೇ ಪದೇ ಕರೆ ಮಾಡುತ್ತಲೇ ಇದ್ದರು ಎಂದು…
ಜಮೀನಿನಲ್ಲಿ ಹುಲುಸಾಗಿ ಬೆಳೆದಿದ್ದ 170ಕ್ಕೂ ಹೆಚ್ಚಿನ ಅಡಿಕೆ ಗಿಡಗಳನ್ನು ಯಾರೋ ಕಿಡಿಗೇಡಿಗಳು ಕಡಿದು ಹಾಕಿ, ಪೈಪ್‍ಗಳನ್ನು ನಾಶಪಡಿಸಿರುವ ಘಟನೆ ತಾಲೂಕಿನ ಶಂಭುಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ರೈತ ಸಂತೋಷ್ ಎಂಬುವವರು ಕಳೆದ ಎರಡು ವರ್ಷಗಳಿಂದ ಎಲ್ಲ ಗಿಡಗಳಿಗೂ ಹನಿ ನೀರಾವರಿ ವ್ಯವಸ್ಥೆ ಮಾಡಿ ಅಡಿಕೆ ಗಿಡಗಳನ್ನು ಬೆಳೆಸಿದ್ದರು. ಆದರೆ ಸುಮಾರು 170ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಕಡಿದು ನಾಶ ಮಾಡಿದ್ದಾರೆ. ಅಡಿಕೆ ಗಿಡಗಳನ್ನು ಕಡಿದು ಹಾಕಿರುವುದನ್ನು ಕಂಡ ರೈತ ಸಂತೋಷ್ ಆತಂಕ ವ್ಯಕ್ತಪಡಿಸಿದ್ದಲ್ಲದೆ, ಕಣ್ಣೀರಿಟ್ಟು ಈ ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೇಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರೈತ ಸಂತೋಷ್ ಮಾತನಾಡಿ, ಶಂಭುಗನಹಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂ.138 ರಲ್ಲಿ 2 ರಿಂದ 17 ಎಕರೆ ಜಮೀನನ್ನು ಐದು ವರ್ಷಗಳ ಹಿಂದೆ ತೆಗೆದುಕೊಂಡು ವ್ಯವಸಾಯ ಪ್ರಾರಂಭಿಸಲು ಕೊಳವೆ ಬಾವಿ ತೆಗೆಸಿ, ಒಂದೂವರೆ ವರ್ಷದಿಂದ ಜಮೀನಿನಲ್ಲಿ ಅಡಿಕೆ ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದೆವು. ನಾನು ಬೇಲೂರು ಪಟ್ಟಣದಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಮಾರಾಟ…