Author: admin

ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಗಂಗಾ ಕ್ಷೇತ್ರದ ಆರಾಧ್ಯ ದೈವ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರೆ ಮಹೋತ್ಸವದ ಅಂಗವಾಗಿ ಹಿರಿಯ ಶ್ರೀಗಳ ಮಾದರಿಯಲ್ಲೆ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರು ನಗರದಾದ್ಯಂತ ಸಂಚರಿಸಿ ಭಿಕ್ಷಾಟನೆ ನಡೆಸಿದರು. ಶ್ರೀಮಠದ ಪರಂಪರೆಯನ್ನು ಮುನ್ನಡೆಸುತ್ತಿರುವ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರು ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಸುಸಂದರ್ಭದಲ್ಲಿ ಹಿರಿಯ ಶ್ರೀಗಳಂತೆ ನಗರದ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ವಿವಿಧ ಅಂಗಡಿಗಳು, ವರ್ತಕರನ್ನು ಭೇಟಿ ಮಾಡಿ ಭಿಕ್ಷಾಟನೆ ನಡೆಸಿದರು.ನಗರದ ಅಶೋಕ ರಸ್ತೆಯಲ್ಲಿರುವ ಶ್ರೀ ಬಸವೇಶ್ವರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ರೆಡ್‍ಕ್ರಾಸ್ ಬಿಲ್ಡಿಂಗ್, ಮಂಡಿಪೇಟೆಯ ವಿವಿಧ ಅಂಗಡಿಗಳು ಸೇರಿದಂತೆ ನಗರದಾದ್ಯಂತ ಶ್ರೀಗಳು ಸಂಚರಿಸಿ ಭಕ್ತರಿಂದ ಕಾಣಿಕೆ, ದವಸ-ಧಾನ್ಯಗಳನ್ನು ಸ್ವೀಕರಿಸಿದರು. ಭಿಕ್ಷಾಟನೆಗೆ ಬಂದ ಶ್ರೀಗಳನ್ನು ಭಕ್ತಿಪೂರ್ವಕವಾಗಿ ಬರ ಮಾಡಿಕೊಂಡ ವರ್ತಕರು, ಜನಸಾಮಾನ್ಯರು ಕಾಣಿಕೆ, ದವಸ-ಧಾನ್ಯಗಳನ್ನು ನೀಡಿ ಆಶೀರ್ವಾದ ಪಡೆದರು.ಈ ವೇಳೆ ಮಾತನಾಡಿದ ಶ್ರೀಗಳು, ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ನಿರ್ಬಂಧಗಳನ್ನು ಸಡಿಲಗೊಳಿಸಿದೆ. ಹಾಗಾಗಿ ಶ್ರೀಕ್ಷೇತ್ರದಲ್ಲಿ ಜಾತ್ರೆ ನಡೆಯುತ್ತಿದೆ. ಸೋಂಕು ಕಡಿಮೆಯಾಗಿದ್ದರೂ…

Read More

ಚಿತ್ರದುರ್ಗ: ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿರುವ  ಸಚಿವ ಈಶ್ವರಪ್ಪನವರ ಹೇಳಿಕೆಯನ್ನು ಖಂಡಿಸಿ,ಈ  ಕೂಡಲೇ ಸಚಿವ ಸಂಪುಟದಿಂದ  ಈಶ್ವರಪ್ಪ ನವರನ್ನು ವಜಾಗೊಳಿಸಿ, ಅವರ ವಿರುದ್ಧ ಸೂಕ್ತ ಪ್ರಕರಣವನ್ನು ದಾಖಲಿಸುವಂತೆ ಆಗ್ರಹಿಸಿ  ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು. ತಾಲ್ಲೂಕಿನ ಕಾಂಗ್ರೆಸ್ ಕಛೇರಿಯಿಂದ ಪ್ರಮುಖ ರಸ್ತೆಗಳಲ್ಲಿ, ಈಶ್ವರಪ್ಪ  ಒಬ್ಬ ಹುಚ್ಚ ಎಂದು  ಘೋಷಣೆಯನ್ನು ಕೂಗುತ್ತ,  ಹಿರಿಯೂರು ತಹಶಿಲ್ದಾರರ ಕಛೇರಿಯವರೆಗೆ  ತೆರಳಿ  ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಸಚಿವರಾಗಿರುವ ಕೆ.ಎಸ್.ಈಶ್ವರಪ್ಪನವರು ಇತ್ತೀಚೆಗೆ ತ್ರಿವರ್ಣ ಧ್ವಜದ ಸ್ಥಾನದಲ್ಲಿ ಕೇಸರಿ ಧ್ವಜವನ್ನು ಹಾರಿಸುವ ಹೇಳಿಕೆಯನ್ನು ಕೊಟ್ಟಿರುವುದು  ದೇಶದ್ರೋಹದ ಹೇಳಿಕೆಯಾಗಿದೆ, ತ್ರಿವರ್ಣ ಧ್ವಜವು ನಮ್ಮ ರಾಷ್ಟ್ರದ ಸ್ವಾತಂತ್ರ್ಯ, ಅಖಂಡತೆ,  ಸಾರ್ವಭೌಮತೆಯ ಸಂಕೇತವಾಗಿದೆ ಎಂದರು.  ಈಶ್ವರಪ್ಪನವರ ಹೇಳಿಕೆಯಿಂದ ದೇಶದ ಪ್ರತಿಯೊಬ್ಬ ಪ್ರಜೆಗಳಿಗೆ ದಿಗ್ಭ್ರಮೆಯಾಗಿದೆ.  ಇದನ್ನು  ವಿರೋಧಿಸಿ, ಈಶ್ವರಪ್ಪನವರನ್ನು ತಕ್ಷಣವೇ ಸಚಿವ ಸಂಪುಟದಿಂದ ಕೈಬಿಟ್ಟು ಅವರ ವಿರುದ್ಧ ದೇಶದ್ರೋಹದ…

Read More

ಮಧುಗಿರಿ: ಮಧುಗಿರಿಯನ್ನು ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಮಧು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಧು ಜಿ.ಡಿ.ಪಾಳ್ಯ ಅವರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳು ಮಧುಗಿರಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು ಈ ವೇಳೆ ಮಾತನಾಡಿದ ಮಧು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಧು ಜಿ.ಡಿ.ಪಾಳ್ಯ, ನಂಜುಂಡಪ್ಪ ವರದಿ ಪ್ರಕಾರ ಮಧುಗಿರಿ ಅತ್ಯಂತ ಹಿಂದುಳಿದ ಪ್ರದೇಶವಾಗಿದೆ, ಮಧುಗಿರಿ, ಪಾವಗಡ, ಶಿರಾ ತಾಲ್ಲೂಕುಗಳನ್ನು ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿದ್ದು, ರಾಜಕೀಯ ಶಿಕ್ಷಣ, ಕಲೆ, ಸಾಹಿತ್ಯ, ರಂಗಭೂಮಿ, ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ತನ್ನದೇ ಆದ ಹೆಸರು ಮಾಡಿದ್ದು, ಇನ್ನೂ ಹೆಚ್ಚಿನ ಬೆಳವಣಿಗೆ ಆಗಬೇಕಾದ ಅನಿವಾರ್ಯತೆ ಇದೆ. ಪಾವಗಡ, ಮಧುಗಿರಿ, ಶಿರ, ಕೊರಟಗೆರೆ ಕ್ಷೇತ್ರಗಳಲ್ಲಿ ಈಗಾಗಲೇ ಹಲವಾರು ಸರ್ಕಾರಿ ಮತ್ತು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್, ಉನ್ನತ ಶಿಕ್ಷಣ ನೀಡುವ ಸಂಸ್ಥೆಗಳಿದ್ದು, ಮಧುಗಿರಿಯನ್ನು ಈಗಾಗಲೇ ಶೈಕ್ಷಣಿಕ ಜಿಲ್ಲೆಯಾಗಿ ಸರ್ಕಾರ ಘೋಷಿಸಿ ಶಿಕ್ಷಣ ಕ್ಷೇತ್ರದ ಬೆಳವಣಿಗೆ ಸಹಕಾರ ನೀಡಿದೆ. ಮುಂದಿನ ದಿನಗಳಲ್ಲಿ ತಾಂತ್ರಿಕ ಶಿಕ್ಷಣದ ಜೊತೆಗೆ ವೈದ್ಯಕೀಯ ಶಿಕ್ಷಣ ನೀಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ…

Read More

ಶಿವಮೊಗ್ಗದಲ್ಲಿ ಸಮಾಜಘಾತುಕ ಶಕ್ತಿಗಳ ಮೇಲೆ ನಿಗಾ ಇಡಲು ನಗರದಲ್ಲಿ ಈಗ ಡ್ರೋಣ್‍ ಗಳನ್ನು ಬಳಸಲಾಗುತ್ತಿದೆ. ಇದಕ್ಕಾಗಿ ನುರಿತ ತಂಡವೊಂದು ನಗರಕ್ಕೆ ಆಗಮಿಸಿದ್ದು ಕಾರ್ಯಾಚರಣೆ ಆರಂಭಿಸಿದೆ. ನಕ್ಸಲ್ ನಿಗ್ರಹ ಪಡೆ, ಕರಾವಳಿ ಕಾವಲು ಪಡೆ, ಉತ್ತರಕನ್ನಡ ಹಾಗೂ ಮಂಡ್ಯ ಜಿಲ್ಲೆಗಳಿಂದ ಪೊಲೀಸರ ತಂಡ ಇಲ್ಲಿಗೆ ಆಗಮಿಸಿವೆ. ಬೆಳಗ್ಗೆಯಿಂದಲೇ ಡ್ರೋಣ್‍ ಗೆ ಕ್ಯಾಮೆರಾಗಳನ್ನು ಅಳವಡಿಸಿ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ನಡೆಯುತ್ತಿರುವ ಘಟನೆಗಳನ್ನು ಚಿತ್ರೀಕರಿಸಲಾಗುತ್ತಿದೆ. ಕರ್ಫ್ಯೂ ನಡುವೆಯೂ ನಿನ್ನೆ ಕೆಲವು ದುಷ್ಕøತ್ಯಗಳು ನಡೆದಿರುವ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ಪತ್ತೆಗೆ ತಂತ್ರಜ್ಞಾನವನ್ನು ಕೂಡ ಬಳಸಿಕೊಳ್ಳಲಾಗುತ್ತಿದೆ. ಸುಮಾರು 5 ಕಿ.ಮೀವರೆಗೂ ಈ ಕ್ಯಾಮೆರಾಗಳು ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದು, ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸಲು ವಿಶೇಷ ಕೇಂದ್ರವನ್ನು ಕೂಡ ತೆರೆಯಲಾಗಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರನ್ನು ಪ್ರತಿಭಟನೆಗೆ  ಕಳುಹಿಸಿದ ಪ್ರಾಂಶುಪಾಲ  ಜಿ.ಮನೋಹರ ವಿರುದ್ಧ ಸೂಕ್ತ ಕ್ರಮಕ್ಕೆ ಹಿರಿಯೂರು ಕಾಂಗ್ರೆಸ್ ಪಕ್ಷದಿಂದ  ಚಿತ್ರದುರ್ಗ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಜಿಲ್ಲಾಧಿಕಾರಿ ಗಳಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿರಮೇಶ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಹಿರಿಯೂರು ನಗರದಲ್ಲಿ ಮಂಗಳವಾರದಂದು ನಡೆದ ಭಜರಂಗ ದಳದ ಕಾರ್ಯಕರ್ತ ಹರ್ಷಾ ಕೊಲೆಗೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳ ಪ್ರತಿಭಟನೆಗೆ ಹಿರಿಯೂರು ಬಾಲಕಿಯರ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರಾದ ಜಿ ಮನೋಹರ ಕಳುಹಿಸಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್,  ಪ್ರಾಂಶುಪಾಲರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಒತ್ತಾಯಿಸಿದರು. ಕಳೆದ ಎರಡು ವರ್ಷಗಳಿಂದ ಕೊರೊಣ ಎಂಬ ಮಹಾಮಾರಿಯಿಂದ ವಿದ್ಯಾರ್ಥಿಗಳ ಭವಿಷ್ಯ ನೆಲಕಚ್ಚಿದೆ .  ವಿದ್ಯಾರ್ಥಿಗಳ ಭವಿಷ್ಯಕ್ಕೆ  ಬೆಳಕಾಗ ಬೇಕಿರುವ ಪ್ರಾಂಶುಪಾಲರು,  ಕಾಲೇಜಿನಲ್ಲಿ ವಿದ್ಯಾಭ್ಯಾಸ  ಮಾಡುತ್ತಿರುವ ವಿದ್ಯಾರ್ಥಿಗಳನ್ನು  ಸಂಘ  ಪರಿವಾರಕ್ಕೆ ಕಳುಹಿಸಿ ಕೊಡುವುದು ಎಷ್ಟರ ಮಟ್ಟಿಗೆ ಸರಿ ಎಂಬುದೇ ಕಾಣುತ್ತಿಲ್ಲ , ಮಕ್ಕಳ ಭವಿಷ್ಯವನ್ನು ಕಲ್ಪಿಸಿಕೊಂಡು ದಿನನಿತ್ಯ…

Read More

ಗುಬ್ಬಿ: ತಾಲ್ಲೂಕಿನ ಹಾಗಲವಾಡಿ ಗ್ರಾ.ಪಂ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜ್ಯೋತಿಲಕ್ಷ್ಮೀ ,ಮಹೇಶ್ ಉಪಾಧ್ಯಕ್ಷರಾಗಿ ನಿರ್ಮಲ ಅವಿರೋಧವಾಗಿ ಆಯ್ಕೆಯಾದರು. ಹಾಗಲವಾಡಿ ಪಂಚಾಯಿತಿ ಕಚೇರಿಯಲ್ಲಿ ಶಿರಸ್ತೇದಾರ್ ರವೀಶ್ ಹಾಗೂ ಕಂದಾಯ ನಿರೀಕ್ಷಕ ಗುರುಪ್ರಸಾದ್ ಎಲ್ಲಾ ಪ್ರಕ್ರಿಯೆ ನಡೆಸಿಕೊಟ್ಟರು. ನಡೆದ  ಹಿಂದುಳಿದ ವರ್ಗ(ಅ) ಮೀಸಲಿನ ಅಧ್ಯಕ್ಷ ಸ್ಥಾನಕ್ಕೆ  ಈ ಹಿಂದೆ ಗಂಗಮ್ಮ ಉಪಾಧ್ಯಕ್ಷ ಸ್ಥಾನಕ್ಕೆ ವನಿತಾ ರಾಜೀನಾಮೆ ಸಲ್ಲಿಸಿದ ಹಿನ್ನಲೆ  ತೆರವಾಗಿದ್ದ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಹಾಗಲವಾಡಿ ಕ್ಷೇತ್ರದ ಜ್ಯೋತಿಲಕ್ಷ್ಮೀ ಮಹೇಶ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಾಗಲವಾಡಿ ಕ್ಷೇತ್ರದ ನಿರ್ಮಲ ನಾಮಪತ್ರ ಸಲ್ಲಿಸಿದ್ದರು. ಏಕೈಕ ನಾಮಪತ್ರ ಹಿನ್ನಲೆ ಎರಡೂ ಸ್ಥಾನವನ್ನು ಅವಿರೋಧ ಆಯ್ಕೆ ಎಂದು ಬುಧವಾರ ಘೋಷಿಸಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಅಧ್ಯಕ್ಷೆ ಜ್ಯೋತಿಲಕ್ಷ್ಮೀ, ತಾಲ್ಲೂಕಿನ ಗಡಿಭಾಗದ ಹಾಗಲವಾಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸರ್ವ ಸದಸ್ಯರ ಸಹಕಾರ ಪಡೆಯಲಾಗುವುದು. ಈ ಜತೆಗೆ ಶಾಸಕ ಎಸ್.ಆರ್.ಶ್ರೀನಿವಾಸ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಮೂಲಕ ಸರ್ಕಾರದಿಂದ ವಿಶೇಷ ಅನುದಾನ ತಂದು…

Read More

ಪಾವಗಡ : ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ  ಅವರ ಹತ್ಯೆಯನ್ನು  ಖಂಡಿಸಿ,  ರಾಷ್ಟ್ರೀಯ ಹಿಂದು ಪರಿಷತ್  ಪ್ರಧಾನ ಕಾರ್ಯದರ್ಶಿಯಾದ ಅನಿಲ್ ಯಾದವ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಬಜರಂಗದಳ ಹಾಗೂ ಶ್ರೀರಾಮಸೇನೆಯ ಸಂಘಟನೆಗಳು ಈ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ,  ಪ್ರವಾಸಿ ಮಂದಿರದಿಂದ  ಶನಿಮಹಾತ್ಮ ವೃತ್ತದ ವರೆಗೂ ತೆರಳಿ ರಸ್ತೆಯುದ್ದಕ್ಕೂ ಜೈಶ್ರೀರಾಮ್ ಎಂಬ ಹರ್ಷೋದ್ಗಾರವನ್ನು ಮೊಳಗಿಸಿದರು. ಬಳಿಕ ಗ್ರೇಟ್ 2 ತಹಶೀಲ್ದಾರ್  ಸುಮತಿರವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅನಿಲ್ ಯಾದವ್, ಹಿಂದೂ ಧರ್ಮದ ರಕ್ಷಣೆಯ ಮೂಲ ಮಂತ್ರವನ್ನು ಜಪಿಸುತ್ತ ಅಧಿಕಾರಕ್ಕೆ ಬಂದ ಭಾರತೀಯ ಜನತಾ ಪಕ್ಷದ ಆಡಳಿತದ ಅವಧಿಯಲ್ಲಿ ನಮ್ಮ ಹಿಂದೂ ಕಾರ್ಯಕರ್ತರ ಹತ್ಯೆ ಆಗಿರುವುದು ಖಂಡನೀಯ . ಈಗಲಾದರೂ ಪಕ್ಷವು ಎಚ್ಚೆತ್ತುಕೊಂಡು ಶೀಘ್ರವಾಗಿ ಎಲ್ಲಾ ಕೊಲೆಗಡುಕರನ್ನು ಬಂಧಿಸಿ ಗಲ್ಲಿಗೇರಿಸಬೇಕು. ಈ ಕೊಲೆಯ ಹಿಂದಿರುವ ಸಂಘಟನೆಗಳನ್ನು ಗುರುತಿಸಿ ಕಾನೂನಿನಡಿಯಲ್ಲಿ ಕ್ರಮಕೈಗೊಳ್ಳಬೇಕು.  SDPI ,PFI,CFI ಸಂಘಟನೆಗಳನ್ನು ಕೂಡಲೇ ನಿಷೇಧಿಸಬೇಕು ಮತ್ತು ಮೃತಪಟ್ಟ ಕುಟುಂಬದವರಿಗೆ 50 ಲಕ್ಷ ರೂಪಾಯಿಗಳ ಪರಿಹಾರವನ್ನು ಸರ್ಕಾರ ತಕ್ಷಣವೇ ನೀಡಬೇಕೆಂದು…

Read More

ಸರಗೂರು: ಮಳೆಯಿಂದ ಮನೆ ನಾಶವಾಗಿದ್ದರೂ, ಮನೆ ಮಂಜೂರು ಮಾಡದೇ ಇರುವ ಕಾರಣ ಕುಟುಂಬವೊಂದು ಶೌಚಾಲಯದಲ್ಲಿ ವಾಸಿಸುವಂತಹ ಪರಿಸ್ಥಿತಿ ನಿರ್ಮಾಣ ವಾಗಿದ್ದು, ಸರಗೂರು ತಾಲ್ಲೂಕಿನ ಪಟ್ಟಣದ 10 ನೇ ವಾರ್ಡಿನಲ್ಲಿ ನಡೆದಿದೆ. ಟೈಲರ್ ವೃತ್ತಿಯ ನಾಗರಾಜು ಹಾಗೂ ಅವರ ತಾಯಿ, ಪತ್ನಿ ಮಕ್ಕಳು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ಕಳೆದ ವರ್ಷ ಬಿದ್ದ ಮಳೆಯಿಂದಾಗಿ ತಮ್ಮ ಮನೆಯನ್ನು ಕಳೆದುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಮನೆ ಮಂಜೂರು ಮಾಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಇವರಿಗೆ ಮನೆ ಮಂಜೂರು ಆಗಿಲ್ಲ, ಅಧಿಕಾರಿಗಳು ನಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇವರ ಕುಟುಂಬದಲ್ಲಿ ನಾಲ್ವರು ಸದಸ್ಯರಿದ್ದು,  ಆದರೆ, ಮನೆ ಇಲ್ಲದ ಕಾರಣ ಇವರು ಶೌಚಾಲಯದಲ್ಲಿ ವಾಸಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಷ್ಟೊಂದು ಗಂಭೀರ ಪರಿಸ್ಥಿತಿಗಳಿದ್ದರೂ, ಪಟ್ಟಣ ಪಂಚಾಯತ್,  ತಾಲೂಕು ಆಡಳಿತ ಮನೆಯನ್ನು  ಮಂಜೂರು ಮಾಡಿಲ್ಲ ಎಂದು ಸ್ಥಳೀಯರಾದ ರಮೇಶ್ ಎಂಬವರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಮಿಕ ಕಟ್ಟಡ ನಿರ್ಮಾಣ ಸಂಘದ…

Read More

ಗುಬ್ಬಿ: ಇತ್ತೀಚೆಗೆ ಶಿವಮೊಗ್ಗ ನಗರದಲ್ಲಿ ಬಜರಂಗದಳದ ಹರ್ಷ ಹತ್ಯೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಮುಖಂಡರು, ಧರ್ಮದ ರಕ್ಷಣೆಗೆಂದೇ ಬಾಳನ್ನು ಮುಡುಪಾಗಿಟ್ಟು, ಸಮಾಜಕ್ಕೆ ತನ್ನನ್ನೇ ತಾನು ಅರ್ಪಿಸಿಕೊಂಡು ಸಾಮಾಜಿಕ ಸೇವೆಯನ್ನು ಮಾಡುತ್ತಿದ್ದಂತಹ ಹರ್ಷ, ದ್ರೋಹಿಗಳ ಸಂಚಿಗೆ ಬಲಿಯಾಗಿದ್ದು, ಧರ್ಮದ ವಿಚಾರವನ್ನು ಇಟ್ಟುಕೊಂಡು ಕೆಲಸ ಮಾಡುತ್ತಿರುವಂತಹ ಅವರನ್ನು ಬಲಿ ತೆಗೆದುಕೊಳ್ಳುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದರು. ಇದು ಹಿಂದೂ ಸಮಾಜಕ್ಕೆ ಎಚ್ಚರಿಕೆ ಗಂಟೆಯಾಗಿದ್ದು, ಇದನ್ನು ಹೀಗೆ ಬಿಟ್ಟರೆ ಇಡೀ ದೇಶಕ್ಕೆ ಗಂಡಾಂತರ ಕಾದಿದೆ ಎಂಬುದು ಎಲ್ಲರಿಗೂ ಅರ್ಥವಾಗಬೇಕಿದೆ. ಹತ್ಯೆ ಮಾಡಿದವರನ್ನು ಸರಕಾರ ಕೂಡಲೇ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಬೇಕು. ಈ ಹತ್ಯೆಯು ದೇಶದ್ರೋಹಿ ಸಂಚಿನ ಹತ್ಯೆಯಾಗಿರುವುದರಿಂದ ಇದರ ತನಿಖೆಯನ್ನು ಕೇಂದ್ರ ತನಿಖಾ ದಳ ಗಳಾದ ಎನ್ ಐಎ ಮತ್ತು ಸಿಬಿಐಗೆ ಒಪ್ಪಿಸಿ ಈ ಹಿಂದೆ ಇರುವ ಸಮಾಜ ಘಾತುಕರ ಸಂಚನ್ನು ಬಯಲಿಗೆಳೆದು ಅವರನ್ನು ಕಠಿಣವಾಗಿ ಶಿಕ್ಷಿಸಬೇಕು ಒತ್ತಾಯಿಸಿದರು. ಇಂತಹ ಕೃತ್ಯಗಳನ್ನು ನಡೆಸಿ ಸಮಾಜದ ಶಾಂತಿಯನ್ನು…

Read More

ತುಮಕೂರು: ಚಿತ್ರನಟ ಚೇತನ್ ಕುಮಾರ್ ನ್ಯಾಯಧೀಶರಿಗೆ ನಿಂದನೆ ಮಾಡಿದ್ದಾರೆಂಬ ಆಕ್ಷೇಪಾರ್ಹ ಟ್ವೀಟ್ ನ ಆರೋಪದಡಿಯಲ್ಲಿ ಏಕಾಏಕಿ ಪೊಲೀಸರು ಯಾವುದೇ ಪೂರ್ವ ಮಾಹಿತಿ ನೀಡದೆ ಬಂಧಿಸಿರುವುದು ಖಂಡನೀಯ ಎಂದು ಸಾಮಾಜಿಕ ಕಾರ್ಯಕರ್ತ ನಾಗಣ್ಣ ಜಿ.ಕೆ. ಟೀಕಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಬುಧವಾರ ಸಾಮಾಜಿಕ ಕಾರ್ಯಕರ್ತ, ನಟ ಚೇತನ್ ಅವರ ಬಂಧನ ಸಂಬಂಧ ಕರೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಟ ಚೇತನ್ ಒಬ್ಬ ಸಾಮಾಜಿಕ ಕಳಕಳಿ ಹೊಂದಿರುವ ಸಾಮಾಜಿಕ ಹೋರಾಟಗಾರ. ಅನ್ಯಾಯ ಪ್ರಶ್ನಿಸುವ ಮಾನವತಾದಿ, ಬುದ್ಧ ಬಸವ, ಪೆರಿಯಾರ್, ಡಾ.ಬಿ.ಆರ್.ಅಂಬೇಡ್ಕರ್ ಅಂತಹವರ ತತ್ವಾದರ್ಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಸದಾ ಧ್ವನಿಯಿಲ್ಲದವರಿಗೆ ದನಿಯಾಗುವ ನಿಟ್ಟಿನಲ್ಲಿ ಸಮಾನತೆ ಪಾಲಿಸುವ ಹಿತದೃಷ್ಟಿಯ ಚಿಂತಕ ಅಂದರೆ ಅತಿಶಯೋಕ್ತಿಯೆನಿಸದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿ ಕದಡುವ ವ್ಯಕ್ತಿಗಳ ಮೇಲೆ ಕ್ರಮ ಕೈಗೊಳ್ಳದ ಸರ್ಕಾರ ಸದಾ ಶಾಂತಿ, ಸೌಹಾರ್ಧತೆ, ಸೋದರತ್ವ ಭಾವನೆ ಇರುವ ಭಾವುಕ ಜೀವಿ ಚೇತನ್ ಅವರ ಮೇಲೆ ಕೋಮು ಪ್ರಚೋದನೆ ಪ್ರಕರಣ ದಾಖಲಿಸಿರುವುದು ಖಂಡನೀಯ. ಜೊತೆಗೆ ರಾಜ್ಯದ ಮುಖ್ಯಮಂತ್ರಿಗಳ…

Read More