Subscribe to Updates
Get the latest creative news from FooBar about art, design and business.
- ಗ್ಯಾಂಗ್ ರೇಪ್ ಪ್ರಕರಣ: ಶಾಸಕ ಮುನಿರತ್ನಗೆ ಬಿಗ್ ರಿಲೀಫ್
- ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರ: ಸಿಎಂನ್ನು ಭೇಟಿಯಾದ ಭಾರತಿ, ಅನಿರುದ್ಧ್
- ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು ಅಂತ ಕಾರ್ಯಕರ್ತರು ಹೇಳೋದ್ರಲ್ಲಿ ಅರ್ಥ ಇದೆ: ಕುಣಿಗಲ್ ಶಾಸಕ ರಂಗನಾಥ್
- ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡಲ್ಲ: ಮಾಜಿ ಸಚಿವ ಕೆ.ಎನ್.ರಾಜಣ್ಣ
- ಔರಾದ್ ಟಿಎಚ್ ಒ ವಿರುದ್ಧ ದೂರು: ಕ್ರಮಕ್ಕೆ ಸೂಚನೆ
- ಕರ್ನಾಟಕದ ಬಾಡಿ ಬಿಲ್ಡರ್ ಅಮೆರಿಕದಲ್ಲಿ ಅಪಘಾತಕ್ಕೆ ಬಲಿ
- ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ಶಾಕ್: ಓರ್ವ ಸಾವು, ಇಬ್ಬರು ಗಂಭೀರ
- “ನಿನ್ನ ಹೆರಿಗೆಗೆ ಆಸ್ಪತ್ರೆ ಮಾಡಿಸೋಣ, ಚಿಂತಿಸಬೇಡ”: ಪತ್ರಕರ್ತೆಗೆ ಆರ್.ವಿ. ದೇಶಪಾಂಡೆ ಅವಮಾನ
Author: admin
ಹಾಸನ: ಮಗಳ ಸಾವಿಗೆ ಅಳಿಯನೇ ಕಾರಣ ಎಂದು ಆರೋಪಿಸಿ ಸೆಲ್ಫಿ ವಿಡಿಯೋ ಮಾಡಿ ಅಳಿಯನ ಮನೆ ಬಾಗಿಲಲ್ಲಿ ಮಾವ ನೇಣಿಗೆ ಶರಣಾಗಿರುವ ಘಟನೆ ಬೇಲೂರು ತಾಲ್ಲೂಕಿನ ಮಾಳೆಗೆರೆ ಗ್ರಾಮದಲ್ಲಿ ನಡೆದಿದೆ. ದೊಡ್ಡಗದ್ದವಳ್ಳಿ ಗ್ರಾಮದ ನಾಗರಾಜ್ (55) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕಳೆದ ಒಂದು ಕೆಲ ದಿನಗಳ ಹಿಂದೆ ನಾಗರಾಜ್ ಅವರ ಮಗಳು ಹೇಮಾಶ್ರೀ ಮೃತಪಟ್ಟಿದ್ದು, ಇಂದು ಮಗಳ ತಿಂಗಳ ತಿಥಿ ಕಾರ್ಯ ಮಾಡಲು ನಿರ್ಧರಿಸಲಾಗಿತ್ತು. ಹೀಗಾಗಿ ಮಗಳ ತಿಥಿ ಕಾರ್ಯಕ್ಕೆ ತಂದೆ ಬಂದಾಗ, ಮನೆಗೆ ಬೀಗ ಹಾಕಿ ಅಳಿಯ ಪ್ರವೀಣ್ ಹಾಗೂ ಕುಟುಂಬಸ್ಥರು ನಾಪತ್ತೆಯಾಗಿದ್ದರು. ಇದನ್ನೆಲ್ಲ ಕಂಡು ನೊಂದ ತಂದೆ, ನನ್ನ ಮಗಳ ಸಾವಿಗೆ ಅಳಿಯ ಪ್ರವೀಣ್, ಅತ್ತೆ ಭದ್ರಮ್ಮ ಕಾರಣ ಎಂದು ಆರೋಪಿಸಿ ವೀಡಿಯೋ ಮಾಡಿದ್ದಾರೆ. ಮಗಳನ್ನು ವರದಕ್ಷಿಣೆ ಕಿರುಕುಳ ನೀಡಿ ಕೊಂದಿದ್ದಾರೆ. ನನ್ನ ಮಗಳಿಗೆ ಆದ ಪರಿಸ್ಥಿತಿ ಇನ್ಯಾರಿಗೂ ಆಗಬಾರದು ಎಂದು ಮನನೊಂದು ವಿಡಿಯೋ ಮಾಡಿ ನಾಗರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಒಂದೂವರೆ ವರ್ಷದ ಹಿಂದೆ ಮಾಳಿಗೆರೆಯ ಪ್ರವೀಣ್…
ಭಾರತದ ಆಗರ್ಭ ಶ್ರೀಮಂತ , ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಮುಕೇಶ್ ಅಂಬಾನಿ, ಸಂಪೂರ್ಣವಾಗಿ 5ಜಿ ತಂತ್ರಜ್ಞಾನವನ್ನು ಸಾಕಾರಗೊಳಿಸುವುದು ಭಾರತದ ಪ್ರಥಮ ಆದ್ಯತೆಯಾಗಬೇಕು ಎಂದು ಮುಕೇಶ್ ಅಂಬಾನಿ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆಯುತ್ತಿರುವ ಇಂಡಿಯಾ ಮೊಬೈಲ್ ಕಾಂಗ್ರೆಸ್ ನಲ್ಲಿ ಭಾಗವಹಿಸಿದ್ದ ಮುಕೇಶ್ ಅಂಬಾನಿ 5ಜಿ ದೇಶದ ಪ್ರಥಮ ಆದ್ಯತೆಯಾಗಬೇಕು. 2ಜಿ , 4ಜಿ ಇಂದ ಎಲ್ಲರೂ ಶೀಘ್ರದಲ್ಲೇ 5ಜಿಗೆ ಅಪ್ ಡೇಟ್ ಆಗಬೇಕು ಎಂದು ಡಿಜಿಟಲ್ ಕ್ರಾಂತಿಗೆ ಕರೆ ನೀಡಿದ್ದಾರೆ. ಅಲ್ಲದೇ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಕೆಳಗಿರುವ ಜನರನ್ನು 2ಜಿಗೆ ಸೀಮಿತಗೊಳಿಸುವುದು ಡಿಜಿಟಲ್ ಕ್ರಾಂತಿಯ ಪ್ರಯೋಜನಗಳಿಂದ ಅವರನ್ನು ಹೊರಗಿಟ್ಟಂತಾಗುತ್ತದೆ ಎಂದು ಹೇಳಿದ್ದಾರೆ. ವರದಿ: ಆಂಟೋನಿ ಬೇಗೂರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಮಧುಗಿರಿ: ಪಟ್ಟಣದ ಶ್ರೀ ಚೌಡೇಶ್ವರಿ ಗುಡಿ ಬೀದಿಯಲ್ಲಿರುವ ಶ್ರೀ ಬಾಲಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಗುರುವಾರದಂದು ಸ್ಕಂದ ಷಷ್ಠಿ ಮಹೋತ್ಸವವು ನಡೆಯಿತು. ಮಹೋತ್ಸವದ ಅಂಗವಾಗಿ ಶ್ರೀಸ್ವಾಮಿಯವರಿಗೆ ಪಂಚಾಮೃತಾಭಿಷೇಕ ರುದ್ರಾಭಿಷೇಕ ಪುಣ್ಯಾಹ ದೇವನಾಂದಿ ರಕ್ಷಾಬಂಧನ ಕಲಶಸ್ಥಾಪನೆ, ನಾರಿಕೇಳ ಗಣಪತಿ ಹೋಮ, ಕಾಳ ಸರ್ಪ ದೋಷ ನಿವಾರಣೆ, ರಾಹುಕೇತು ಸುಬ್ರಹ್ಮಣ್ಯ ಹೋಮ, ಪೂರ್ಣಾಹುತಿ ಬಲಿಹರಣ ಪ್ರಧಾನ ಹೋಮ, ವಿಶೇಷ ಪೂಜೆ ಅಲಂಕಾರ, ಮಹಾಮಂಗಳಾರತಿ, ಗೋಪೂಜೆ, ಬ್ರಹ್ಮಚಾರಿ ಪೂಜೆ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಇದೇ ವೇಳೆ ಆಶ್ಲೇಷಬಲಿಯೂ ಸಹ ನಡೆಯಿತು. ಈ ಸಂದರ್ಭದಲ್ಲಿ ಧಾರ್ಮಿಕ ಮುಖಂಡ ಡಾ.ಎಂ.ಜಿ. ಶ್ರೀನಿವಾಸ್ ಮೂರ್ತಿ, ಡಿವೈಎಸ್ಪಿ ರಾಮಕೃಷ್ಣಪ್ಪ, ಅರ್ಚಕರಾದ ಪಿ.ವಿ. ಬಾಲಕೃಷ್ಣ (ಅಪ್ಪಿ ಸ್ವಾಮಿ), ಎಂ.ಎಸ್. ವಿನಯ್ ಶರ್ಮಾ, ವಿಜಯ್ ಶರ್ಮಾ ಹಾಗೂ ಅಪಾರ ಭಕ್ತಾದಿಗಳು ಭಾಗವಹಿಸಿದ್ದರು . ವರದಿ: ಅಬಿದ್ ಮಧುಗಿರಿ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತಿಪಟೂರು: ಸೇನಾ ಹೆಲಿಕ್ಯಾಪ್ಟರ್ ಪತನದಲ್ಲಿ ನಿಧನರಾದ ನಮ್ಮ ದೇಶ ಸೇನೆಯ ಮುಖ್ಯಸ್ಥರಾದ ಬಿಪಿನ್ ರಾವತ್ ಮತ್ತು ಅವರ ಸೇನಾ ಸಿಬ್ಬಂದಿಗೆ ಕರ್ನಾಟಕ ಸಂಪಾದಕ ಮತ್ತು ವರದಿಗಾರ ಸಂಘದ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು. ನಗರದ ಶಿವಕುಮಾರ ಸ್ವಾಮೀಜಿ ಸರ್ಕಲ್ ನಂದಿನಿ ಡೈರಿ ಸಂಘದ ಕಚೇರಿಯಲ್ಲಿ ಬಳಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಂಘದ ಗೌರವಾಧ್ಯಕ್ಷರಾದ ಡಾ.ಭಾಸ್ಕರ್ ಅವರು, ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮತ್ತು ಇತರ ಸಿಬ್ಬಂದಿಗಳ ದುರದೃಷ್ಟಕರ ನಿಧನದಿಂದ ಇಂದು ನಮ್ಮ ದೇಶಕ್ಕೆ ಮತ್ತು ಭಾರತದ ರಕ್ಷಣೆಗೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದರು. ತಾಲೂಕು ಅಧ್ಯಕ್ಷ ಗಣೇಶ್ ಮಾತನಾಡಿ, ರಕ್ಷಣಾ ವ್ಯವಸ್ಥೆಯ ಪ್ರಮುಖರಾದ ಜನರಲ್ ಬಿಪಿನ್ ರಾವತ್ ಅವರು ದುರ್ಘಟನೆಯಲ್ಲಿ ಮೃತರಾಗಿರುವುದು ಅತ್ಯಂತ ದುಃಖದ ಸಂಗತಿ. ಅವರ ನಿಧನದಿಂದ ದೇಶವು ಒಬ್ಬ ಶ್ರೇಷ್ಠ ರಣನೀತಿ ತಜ್ಞರನ್ನು ಕಳೆದುಕೊಂಡಂತಾಗಿದೆ ಎಂದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಒಂದು ನಿಮಿಷಗಳ ಕಾಲ ಮೌನ ಆಚರಿಸಿ…
ಬೆಂಗಳೂರು: ಕೊವಿಡ್ 19 ಮತ್ತು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಚರ್ಚೆ ನಡೆಸಿದರು. ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೊವಿಡ್ 19 ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧರಿಸಿಲ್ಲ. ಇನ್ನೊಂದು ವಾರದ ಬೆಳವಣಿಗೆ ಅವಲೋಕಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಮುಂದಿನ ಪರಿಸ್ಥಿತಿ ನೋಡಿಕೊಂಡು ಕಠಿಣ ಕ್ರಮಗಳ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಯ ಬಗ್ಗೆ ನಿರ್ಧಾರ ಮಾಡಲಾಗುವುದು ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಮುಂದುವರಿಯುತ್ತದೆ. ಮೂವರಿಗೆ ಕೊರೊನಾ ಪಾಸಿಟಿವ್ ಬಂದರೆ, ಕ್ಲಸ್ಟರ್ ಮಾಡುತ್ತೇವೆ. ಸದ್ಯಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಇದೇ ವೇಳೆ ಸಿಎಂ ತಿಳಿಸಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಮಡಿಕೇರಿ: ಒಮಿಕ್ರಾನ್ ಸೋಂಕು ರಾಜ್ಯದ ಜನರಲ್ಲಿ ಆತಂಕವನ್ನು ಹೆಚ್ಚಿಸುತ್ತಿದೆ. ಕೊರೊನಾ ಸೋಂಕಿಗಿಂತಲೂ ಒಮಿಕ್ರಾನ್ ವೇಗವಾಗಿ ಹರಡುವುದರಿಂದ ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸಲಾಗುತ್ತಿದೆ. ಅದರಂತೆ ಕೊಡಗು ಜಿಲ್ಲೆಯ ಗಡಿಭಾಗಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಶಾಲೆಯೊಂದರಲ್ಲಿ 9 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಆರ್ಭಟ ಕೂಡ ಜೋರಾಗಿದೆ. ಹೀಗಾಗಿ ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗಿದ್ದಾರೆ.ಇತ್ತ ಜಿಲ್ಲೆಯ ಜನತೆ ಹೆಚ್ಚಾಗಿ ನೆರೆಯ ಕೇರಳ ರಾಜ್ಯದೊಂದಿದೆ ಹೆಚ್ಚಿನ ವ್ಯವಹಾರ ನಡೆಸುತ್ತಾರೆ. ಜತೆಗೆ ಕೇರಳದಿಂದ ಕೊಡಗಿಗೆ ಸಾಕಷ್ಟು ಮಂದಿ ಆಗಮಿಸುತ್ತಾರೆ. ಹಾಗಾಗಿ, ಕೊಡಗಿನ 3 ಗಡಿಯಲ್ಲಿ ಹೈಅಲರ್ಟ್ ಮಾಡಲಾಗಿದೆ. ವರದಿ: ಆಂಟೋನಿ ಬೇಗೂರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಮಧುಗಿರಿ: ಕಾಡುಗೊಲ್ಲರ ಅಭಿವೃದ್ಧಿ ನಿಗಮವನ್ನು ಗೊಲ್ಲ-ಕಾಡುಗೊಲ್ಲರ ಅಭಿವೃದ್ಧಿ ನಿಗಮ ಎಂದು ಮರು ಆದೇಶ ಮಾಡಿರುವುದನ್ನು ತಡೆಹಿಡಿಯಬೇಕು ಎಂದು ಕಾಡುಗೊಲ್ಲರ ಸಂಘದ ವತಿಯಿಂದ ತಹಸಿಲ್ದಾರ್ ವೈ.ರವಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಿ.ಎಂ.ಈರಣ್ಣ ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬುಡಕಟ್ಟು ನೆಲೆಯುಳ್ಳ ಕಾಡುಗೊಲ್ಲರು ಆರ್ಥಿಕವಾಗಿ ಹಿಂದುಳಿದಿರುವುದನ್ನು ಮನಗಂಡು ಕಾಡುಗೊಲ್ಲರು ಆರ್ಥಿಕವಾಗಿ ಮುಂದೆ ಬರಬೇಕು ಎಂಬ ಸದುದ್ದೇಶದಿಂದ ಕಾಡುಗೊಲ್ಲರ ಅಭಿವೃದ್ಧಿ ನಿಗಮವನ್ನು ಸ್ಥಾಪನೆಮಾಡಿ ಆದೇಶ ಹೊರಡಿಸಿದ್ದರು. ಆದರೆ ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕಿ ಕೆ.ಪೂರ್ಣಿಮಾ ಅವರು ಗೊಲ್ಲಾ-ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಾಡಬೇಕು ಎಂದು ಪತ್ರ ಬರೆದಿದ್ದು, ಈ ಸಂಬಂಧ ಸರ್ಕಾರದ ಆಪ್ತ ಕಾರ್ಯದರ್ಶಿಯವರು ಮರು ನಾಮಕರಣ ಮಾಡಲು ಆದೇಶ ಹೊರಡಿಸಿದ್ದಾರೆ, ಆದ್ದರಿಂದ ಕೂಡಲೇ ಈ ಆದೇಶವನ್ನು ತಡೆಹಿಡಿಯಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇದರ ವಿರುದ್ಧ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮುತ್ತುರಾಜ್, ಚಿತ್ತಪ್ಪ, ಈರ ದಾಸಪ್ಪ, ಗೌಡ ಮುದ್ದಯ್ಯ ಹಾಗೂ ಪೂಜಪ್ಪ ಇದ್ದರು.…
ಚೆನ್ನೈ: ತಮಿಳುನಾಡು ಸರ್ಕಾರವು ತಮ್ಮ ರಾಜ್ಯದಲ್ಲಿ ಕೋವಿಡ್ ನಿಂದಾಗಿ ಮೃತಪಟ್ಟವರ ಕುಟುಂಬದವರಿಗೆ 50 ಸಾವಿರ ರೂಪಾಯಿಗಳ ಪರಿಹಾರವನ್ನ ಘೋಷಣೆ ಮಾಡಿದೆ. ಈ ಕುರಿತು ತಮಿಳುನಾಡಿನ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಡಿಸೆಂಬರ್ 3ರಂದೇ ಆದೇಶ ಹೊರಡಿಸಿದೆ. ಪರಿಹಾರ ನೀಡಲು ರಾಜ್ಯ ವಿಪತ್ತು ನಿರ್ವಹಣಾ ನಿಧಿಯನ್ನು ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಕೋವಿಡ್ ಪರಿಹಾರ ಕಾರ್ಯದಲ್ಲಿ ನಿರತರಾಗಿರುವ ಸಂದರ್ಭ ಹಾಗೂ ಕೋವಿಡ್ ವಿರುದ್ಧದ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದವರೂ ಸೇರಿದಂತೆ ಕೋವಿಡ್ ನಿಂದ ಮೃತಪಟ್ಟವರ ಸಂಬಂಧಿಕರಿಗೆ ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ 2021ರ ಸೆಪ್ಟೆಂಬರ್‌ನಲ್ಲಿ ಬಿಡುಗಡೆ ಮಾಡಿರುವ ಮಾರ್ಗಸೂಚಿಗೆ ಅನುಗುಣವಾಗಿಯೇ ಪರಿಹಾರ ವಿತರಣೆ ನಡೆಯಲಿದೆ. ದೇಶದಲ್ಲಿ ಮೊದಲ ಕೋವಿಡ್ ಪ್ರಕರಣ ವರದಿಯಾದ ದಿನದಿಂದ ಅನ್ವಯವಾಗುವಂತೆ ಪರಿಹಾರ ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ವರದಿ: ಆಂಟೋನಿ ಬೇಗೂರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ ತಿಪಟೂರು: ಪ್ರಪಂಚದಲ್ಲಿಯೇ ಮೊದಲ ವಿಶ್ವವಿದ್ಯಾಲಯ ಪ್ರಾರಂಭವಾಗಿದ್ದು ನಮ್ಮ ದೇಶದಲ್ಲೇ ( ನಳಂದ ವಿಶ್ವವಿದ್ಯಾಲಯ ಕ್ರಿ.ಶ. 427) ಎಂಬ ಹೆಗ್ಗಳಿಕೆ ಎಲ್ಲಾ ಭಾರತೀಯರಿಗು ಹೆಮ್ಮೆಯ ವಿಷಯ. ಆದರೆ ಇಂದಿನ ನಮ್ಮ ದೇಶದ ಕೆಲವು ಸರ್ಕಾರಿ ಶಾಲೆಗಳ ಕಟ್ಟಡಗಳ ಅವಸ್ಥೆಯನ್ನು ನೋಡಿ ಸ್ವತಃ ಭಾರತೀಯರಿಗೆ ನಾಚಿಕೆ ಆಗುತ್ತಿದೆ. ಇದಕ್ಕೆ ಕಾರಣ ಶಾಸಕಾಂಗವೋ, ಕಾರ್ಯಾಂಗವೋ ಇಲ್ಲ ಪ್ರಜೆಗಳೋ ಎಂಬ ಒಂದಕ್ಕೊಂದು ಸರಪಳಿ ಕಾರಣಗಳು ನಮ್ಮ ಕಣ್ಣೆದುರಿಗೆ ಕಾಣುತ್ತವೆ. ತಿಪಟೂರು ತಾಲ್ಲೂಕಿನ ಕೋಟೆನಾಯಕನಹಳ್ಳಿಯ ಸರ್ಕಾರಿ “ಮಾದರಿ” ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವನ್ನು ನೋಡಿದರೆ ಇಲ್ಲಿನ ಜನಪ್ರತಿನಿದಿಗಳು ಮತ್ತು ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ. ಹೆಸರಲ್ಲಿ ಮಾತ್ರ ” ಮಾದರಿ ” ಎಂಬುದು ಕಾಣುತ್ತಿದೆ. ಆದರೆ, ಇಂತಹ ಅಪಾಯಕಾರಿ ಕಟ್ಟಡವನ್ನು ವಿದ್ಯಾರ್ಥಿಗಳಿಗೆ ಕೊಟ್ಟ ಸರ್ಕಾರದ ನಡೆ ಮಾದರಿಯೇ? ಇಲ್ಲಿನ ಜನಪ್ರತಿನಿಧಿಗಳು ಮಾದರಿಯೇ ಎಂದು ಇಲ್ಲಿನ ಜನರು ಪ್ರಶ್ನಿಸುವಂತಾಗಿದೆ. ಕೇವಲ 15 ವರ್ಷಗಳ ಹಿಂದೆ ಉದ್ಘಾಟನೆಯಾದ ಶಾಲಾ ಕಟ್ಟಡ…
ಬೆಂಗಳೂರು: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಸಿಮೆಂಟ್ ಬೆಲೆಯಲ್ಲಿ ಇಳಿಕೆಯಾಗಿದ್ದು, ಹೀಗಾಗಿ ಮನೆ ಕಟ್ಟುವವರಿಗೆ ಇದೊಂದು ಸಂತಸದ ಸುದ್ದಿಯಾಗಿ ಪರಿಣಮಿಸಿದೆ. 50 ಕೆಜಿ ಸಿಮೆಂಟ್ ಚೀಲದ ಬೆಲೆಯಲ್ಲಿ 20-40 ರೂ. ವರೆಗೆ ಇಳಿಕೆಯಾಗಿದೆ. ಕರ್ನಾಟಕದಲ್ಲಿ 20-40 ರೂ. ನಷ್ಟು ಇಳಿಕೆಯಾಗಿದ್ದರೆ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಪ್ರತಿ ಚೀಲಕ್ಕೆ 40 ರೂ. ತಮಿಳುನಾಡಿನಲ್ಲಿ 20 ರೂ.ಗಳವರೆಗೆ ಕಡಿತವಾಗಿದೆ ಎಂದು ವರದಿಯಾಗಿದೆ. ಬೆಲೆ ಇಳಿಕೆಯ ಪರಿಣಾಮ ಕರ್ನಾಟಕದಲ್ಲಿ 50 ಕೆ.ಜಿ. ಸಿಮೆಂಟ್ ಚೀಲದ ಬೆಲೆ 340 ರೂ.ನಿಂದ 380 ರೂ.ಗೆ ಇಳಿಕೆಯಾಗಿದೆ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ 280 ರೂ.ನಿಂದ 320 ರೂ. ಇಳಿಕೆಯಾಗಿದೆ. ಕೇರಳದಲ್ಲಿ 340 ರೂ.ನಿಂದ 380 ರೂ.ಗೆ ಇಳಿಕೆಯಾಗಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700