Subscribe to Updates
Get the latest creative news from FooBar about art, design and business.
- ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
- ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
- ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
- ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!
- ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
- ತಿಂಗಳ ಅಂತರದಲ್ಲಿ ಹುಲಿ ದಾಳಿಗೆ ಮೂವರು ಬಲಿ: ಸರ್ಕಾರ ಎಚ್ಚೆತ್ತುಕೊಳ್ಳುವುದು ಯಾವಾಗ?
- ಬೀದರ್ | ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ
- ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ
Author: admin
ಕೊರಟಗೆರೆ: ರಾಷ್ಟ್ರೀಯ ಹಬ್ಬವಾದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಜಿ.ಪರಮೇಶ್ವರ್ ಅವರ ಹೆಸರು ಹೇಳದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಾಂಗ್ರೆಸ್ ಮುಖಂಡ ಹಾಗೂ ಜಿ.ಪರಮೇಶ್ವರ್ ಬೆಂಬಲಿಗ ಬಟ್ಟೆ ಬಿಚ್ಚಿ ಪ್ರತಿಭಟಿಸಲು ಯತ್ನಿಸಿದ ಘಟನೆ ನಡೆದಿದೆ. ಗಣರಾಜ್ಯೋತ್ಸವ ಆಚರಣೆ ವೇಳೆ ಕೊರಟಗೆರೆ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಈ ಘಟನೆ ನಡೆದಿದ್ದು, ಕೊರಟಗೆರೆ ತಹಶೀಲ್ದಾರ್ ನಾಹೀದಾ ಜಮ್ ಜಮ್ ಮತ್ತು ಶಿಕ್ಷಣಾಧಿಕಾರಿ ಸುಧಾಕರ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡರಾದ ಚಿಕ್ಕರಂಗಯ್ಯ ಮತ್ತು ನಾಗೇಶ್ ಸೇರಿದಂತೆ ಇತರೇ ಮುಖಂಡರುಕಾರ್ಯಕ್ರಮಕ್ಕೆ ಅಡ್ಡಿಪಡಿಸಿದರು. ಏಕವಚನದಲ್ಲೇ ಅಧಿಕಾರಿಗಳನ್ನು ಕಾಂಗ್ರೆಸ್ ಮುಖಂಡ ಚಿಕ್ಕರಂಗಯ್ಯ ತರಾಟೆಗೆತ್ತಿಕೊಂಡರು. ಈ ವೇಳೆ ಪೊಲೀಸ್ ಮತ್ತು ಕಂದಾಯ ಇಲಾಖೆ ಅಧಿಕಾರಿ ವರ್ಗ ಮೌನಕ್ಕೆ ಶರಣಾದರು. ಇನ್ನೂ ಕಾರ್ಯಕ್ರಮ ನಿರೂಪಣೆ ಮಾಡುತ್ತಿದ್ದ ಶಿಕ್ಷಣಾಧಿಕಾರಿ ಸುಧಾಕರ್ ಗೆ ವೇದಿಕೆಯಿಂದ ಇಳಿಯುವಂತೆ ಎಚ್ಚರಿಕೆ ನೀಡಿದರು. ಅನಾರೋಗ್ಯ ಕಾರಣ ಗಣರಾಜ್ಯೋತ್ಸವಕ್ಕೆ ಶಾಸಕ ಡಾ.ಜಿ.ಪರಮೇಶ್ವರ್ ಗೈರಾಗಿದ್ದರು. ಅವರಿಗೆ ಕಾರ್ಯಕ್ರಮಕ್ಕೆ ಸ್ವಾಗತ ಕೋರಿದ ವೇಳೆ ಕೇವಲ ಶಾಸಕರು ಎಂದು ಮಾತ್ರವೇ ಹೇಳಲಾಗಿದೆ. ಅವರನ್ನು ಮಾಜಿ…
ಸರಗೂರು: ಇಂದು ತಾಲೂಕಿನ ಪುರಸಭೆ ಕಚೇರಿಯ ಮುಂಭಾಗ ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ಪ್ರಗತಿಪರ ಸಂಘಟನೆಯ ಸಹಯೋಗದಲ್ಲಿ ಕರಪತ್ರ ಚಳುವಳಿಯನ್ನು ಹಮ್ಮಿಕೊಳ್ಳಲಾಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತರುವ ಮತಾಂತರ ಕಾಯ್ದೆಯನ್ನು ವಿರೋಧಿಸಿ ಇಂದು ಕರಪತ್ರವನ್ನು ಬಿಡುಗಡೆ ಮಾಡಿ ಚಳುವಳಿಯನ್ನು ಆರಂಭಿಸಿದರು. ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲ್ಲೂಕಿನ ಶಾಸಕರಾದ ಅನಿಲ್ ಚಿಕ್ಕಮಾದು ಅವರು ಕರಪತ್ರವನ್ನು ಬಿಡುಗಡೆಗೊಳಿಸಿದರು. ಭಾರತ ಸಂವಿಧಾನವನ್ನು ಸಂರಕ್ಷಣೆ ಮಾಡುವ ಉದ್ದೇಶದಿಂದ ಇಂದು ಕರಪತ್ರವನ್ನು ಬಿಡುಗಡೆ ಮಾಡಿ ಚಳುವಳಿಯನ್ನು ಹಮ್ಮಿಕೊಳ್ಳಲಾಯಿತು. ಈ ವೇಳೆ ಮಾತನಾಡುದ ಮುಖಂಡರಾದ ಮಹೇಶ್, ಸಂವಿಧಾನವನ್ನು ಬದಲಾವಣೆ ಮಾಡುವ ಸಲುವಾಗಿ ಹಲವಾರು ಕಾಣದ ಕೈಗಳು ಕೆಲಸ ನಡೆಸುತ್ತಿದೆ. ಇದರ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಭಾರತ ಸಂವಿಧಾನವು ಕೇವಲ ಎಸ್.ಸಿ. ಮತ್ತು ಎಸ್.ಟಿ ಸಮುದಾಯಕ್ಕೆ ಸೀಮಿತವಾಗಿದೆ ಎಂದು ಕೆಲವು ವರ್ಗಗಳ ಜನರು ಬಿಂಬಿಸುತ್ತಿದ್ದಾರೆ. ಇದು ತಪ್ಪು ಕಲ್ಪನೆ ಸಂವಿಧಾನವು ಎಲ್ಲಾ ವರ್ಗದ ಅಭಿವೃದ್ಧಿಗೆ ಇರುವ ಆಸ್ತ್ರ ಎಂದರು. ಸಾಮಾಜಿಕ ಹೋರಾಟಗಾರರಾದ…
5ಜಿ ತಂತ್ರಜ್ಞಾನದ ವಿರುದ್ಧ ಸಂಬಂಧಿಸಿದ ಕೇಸ್ ನಲ್ಲಿ ಬಾಲಿವುಡ್ ನಟಿ ಜೂಹಿ ಚಾವ್ಲಾ ಅವರಿಗೆ ಹೈಕೋರ್ಟ್ 20 ಲಕ್ಷ ರೂ. ದಂಡ ವಿಧಿಸಿತ್ತು. ಇದನ್ನ ಮರು ಪರಿಶೀಲಿಸಿರುವ ಈಗ ಹೈಕೋರ್ಟ್ 2 ಲಕ್ಷಕ್ಕೆ ಇಳಿಸಿದೆ. ಭಾರತದಲ್ಲಿ 5ಜಿ ಅಳವಡಿಕೆ ವಿರುದ್ಧದ ಜೂಯ್ಲಿ ಚಾವ್ಲಾ ಕೋರ್ಟ್ ಮೆಟ್ಟಿಲೇರಿದ್ದರು, ಈ ಮೊಕದ್ದಮೆಗಾಗಿ ನಟಿ ಜೂಹಿ ಚಾವ್ಲಾ ಅವರಿಗೆ ಹೈಕೋರ್ಟ್ ವಿಧಿಸಿದ್ದ ದಂಡವನ್ನು 20 ಲಕ್ಷದಿಂದ 2 ಲಕ್ಷಕ್ಕೆ ಇಳಿಸಲು ದೆಹಲಿ ಹೈಕೋರ್ಟ್ ಮುಂದಾಗಿದೆ. ಈ ಬಾರಿ ಕೋರ್ಟ್ ಷರತ್ತೊಂದನ್ನ ವಿಧಿಸಿದೆ ಸಾರ್ವಜನಿಕರಿಗಾಗಿ ಒಂದಿಷ್ಟು ಸೇವೆ ಮಾಡಬೇಕು ಎಂದು ತಾಕೀತು ಮಾಡಿದೆ. ನ್ಯಾಯಾಂಗದ ಸಮಯವನ್ನು ವ್ಯರ್ಥ ಮಾಡಿದ್ದಕ್ಕಾಗಿ ಜೂಹಿ ಚಾವ್ಲಾ ಸೇರಿದಂತೆ ಇತರ ಇಬ್ಬರ ಮೇಲೆ ದಂಡ ವಿಧಿಸಿದೆ. Delhi High Court to reduce Juhi Chawla’s fine in 5G suit to Rs 2 lakh ಭಾರತದಲ್ಲಿ 5ಜಿ ತಂತ್ರಜ್ಞಾನದ ರೋಲ್ ಔಟ್ ವಿರುದ್ಧ ಜೂಹಿ ಚಾವ್ಲಾ ಅವರ ಸಿವಿಲ್ ಮೊಕದ್ದಮೆಯನ್ನು…
ಭಾರತೀಯ ಸಂವಿಧಾನವು ವಿವಿಧ ಧರ್ಮ, ಬಣ್ಣ, ಭಾಷೆ, ಸಂಸ್ಕೃತಿ, ಆಚಾರ-ವಿಚಾರಗಳ ವೈವಿಧ್ಯತೆಯ ನಡುವೆ ದೇಶದ ಏಕತೆಯನ್ನು ಸಾರುವ ಮಾದರಿ ಪ್ರಜಾತಂತ್ರ ವ್ಯವಸ್ಥೆಯಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ೭೩ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವರಕ್ಷೆ ಸ್ವೀಕರಿಸಿ ಮಾತನಾಡಿದ ಅವರು, ಭಾರತ ದೇಶವು ಸ್ವಾತಂತ್ರö್ಯ ಪಡೆದ ಬಳಿಕ ಸಂಪೂರ್ಣ ಕಾರ್ಯೋನ್ಮುಖವಾದ ಸಂವಿಧಾನ ರಚನಾ ಸಮಿತಿಯು ೨ ವರ್ಷಗಳ ಕಾಲ ನಿರಂತರ ಶ್ರಮವಹಿಸಿ ಸಂವಿಧಾನದ ಪ್ರಾಥಮಿಕ ಕರಡು ಪ್ರತಿಯನ್ನು ಸಿದ್ಧಪಡಿಸಿತು. ನಂತರ ಸಂವಿಧಾನದ ಕರಡು ಪ್ರತಿಯ ಬಗ್ಗೆ ಚರ್ಚೆ ನಡೆದು ಅಂತಿಮವಾಗಿ ೧೯೪೯ರ ನವೆಂಬರ್ ೨೬ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು. ವಿಧಿಗಳು, ಅನುಸೂಚಿಗಳು ಹಾಗೂ ಅಧ್ಯಾಯಗಳನ್ನೊಳಗೊಂಡ ಭಾರತ ಸಂವಿಧಾನವು ೧೯೫೦ರ ಜನವರಿ ೨೬ರಂದು ಜಾರಿಗೆ ಬಂದಿತು. ಇದೇ ದಿನವನ್ನು ಪ್ರತಿ ವರ್ಷ ಗಣರಾಜ್ಯ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು. ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ…
ಗುಬ್ಬಿ: ತಾಲ್ಲೂಕಿನ ಸಿ.ಎಸ್.ಪುರ ಕಂದಾಯ ಇಲಾಖೆಯ ನಾಡಕಛೇರಿಯಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸರಳವಾಗಿ ಹಾಗೂ ಸಂಭ್ರಮದಿಂದ ಆಚರಿಸಿದರು. ಕಂದಾಯ ಇಲಾಖೆಯ ಉಪತಹಶೀಲ್ದರ್ ಮುತ್ತು ರಾಜ್ ಧ್ಜಜರೋಹಣ ನೆರವೇರಿಸಿ ಬಳಿಕ ಮಾತನಾಡಿದ ಅವರು, ಭಾರತದಲ್ಲಿ ಪ್ರತಿ ವರ್ಷ ಜನವರಿ 26ರಂದು ಗಣರಾಜ್ಯ ದಿನವೆಂದು ಸಂಭ್ರಮದಿಂದ ಆಚರಿಸಲಾಗುತ್ತದೆ. ಸಂವಿಧಾನ ಜಾರಿಗೆ ಬಂದ ಈ ದಿನ ಬಹಳ ವಿಶೇಷವಾಗಿದ್ದು. ಭಾರತ ಸ್ವಾತಂತ್ರ್ಯಕ್ಕೆ ಹೋರಾಡಿದ ಹಲವು ಪ್ರಮುಖ ನಾಯಕರನ್ನು ಮತ್ತು ಸಂವಿಧಾನ ಜಾರಿಗೆ ಶ್ರಮಿಸಿದಂತಹ ಪ್ರತಿಯೊಬ್ಬರು ನಮಗೆ ಸ್ಪೂರ್ತಿಯಾಗಿದ್ದಾರೆ ಎಂದರು. ಗಣರಾಜ್ಯೋತ್ಸವ ದಿನವನ್ನು ಭಾರತದ ಪ್ರತಿ ಸರ್ಕಾರಿ ಕಚೇರಿಗಳು, ಇಲಾಖೆಗಳು ಮತ್ತು ಸಂಸ್ಥೆಗಳು, ಹಾಗೂ ಎಲ್ಲಾ ಶಾಲಾ, ಕಾಲೇಜುಗಳು ಸೇರಿದಂತೆ ವಿಶ್ವವಿದ್ಯಾಲಯಗಳಲ್ಲಿ ಅತ್ಯಂತ ವಿಶೇಷವಾಗಿ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಭಾರತದ ಸರ್ವ ಪ್ರಜೆಗೂ ಸಮಾನ ಶಿಕ್ಷಣ, ಸರ್ವರಿಗೂ ಹಕ್ಕುಗಳನ್ನು ನೀಡಿರುವ ಸಂವಿಧಾನ ಜಾರಿಗೆ ತಂದ ಈ ದಿನವನ್ನು ನಾವೆಲ್ಲರೂ ವಿಶೇಷವಾಗಿ ಗೌರವಿಸಬೇಕು ಹಬ್ಬದ ದಿನವಾಗಿ ಆಚರಿಸಬೇಕು ಮತ್ತು ಸಂವಿಧಾನ ಜಾರಿಗೆ ಶ್ರಮಿಸಿರುವ ಎಲ್ಲಾ ಮಹಾನ್ ನಾಯಕರನ್ನು, ಅವರ…
ತುಮಕೂರು: ನಗರದ ಹೃದಯ ಭಾಗದಲ್ಲಿರುವ ಸರ್ಕಾರಿ ಚಿತ್ರಕಲಾ ಪದವಿ ಕಾಲೇಜಿನಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಜರಗಿತು. ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್ .ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಸಿ.ಸಿ.ಬಾರಕೇರ ಧ್ವಜಾರೋಹಣ ಮಾಡಿದರು. ಬಳಿಕ ಮಾತನಾಡಿದ ಅವರು, ವಿಶ್ವದಲ್ಲಿ ಭಾರತದ ಸಂವಿಧಾನಕ್ಕೆ ಅಪಾರವಾದ ಗೌರವವಿದೆ. ನಮ್ಮ ಸಂವಿಧಾನದಲ್ಲಿನ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಎಲ್ಲ ಭಾರತೀಯರಿಗೂ ನೀಡಿದ ಶುಭದಿನವಿದು. ಪ್ರತಿಯೊಬ್ಬ ಭಾರತೀಯ ನಾಗರಿಕನೂ ದೇಶದ ಸಂವಿಧಾನಕ್ಕೆ ಬದ್ಧರಾಗಿರಬೇಕು. ದೇಶದ ಗೌರವಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳುವ ಮೂಲಕ ದೇಶ ಭಕ್ತಿಯನ್ನು ನಿತ್ಯ ಜೀವನದಲ್ಲಿ ಪಾಲಿಸಿಕೊಂಡು ಬರಬೇಕು ಎಂದು ಕರೆ ನೀಡಿದರು. ನಮ್ಮ ಕಾಲೇಜಿನಲ್ಲಿ ಕಳೆದ 28 ವರ್ಷಗಳಿಂದ ಉತ್ತಮ ಫಲಿತಾಂಶ ಹಾಗೂ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿದೆ. ಇಲ್ಲಿನ ವಿದ್ಯಾರ್ಥಿಗಳು ಕಳೆದ 4 ವರ್ಷಗಳಿಂದ ಚಿತ್ರ ಕಲಾ ಪದವಿ ರ್ಯಾಂಕ್ ಪಡೆಯುತ್ತಿದ್ದಾರೆ. ಆದರೆ, ಈ ಕಾಲೇಜಿಗೆ ಅನೇಕ ಮೂಲಭೂತ ಶೈಕ್ಷಣಿಕ…
ಇಂದಿನ ಕಾಲದಲ್ಲಿ ಎಲ್ಲರ ಬಳಿಯೂ ಮೊಬೈಲ್ ಇರುತ್ತದೆ.ಅದರಲ್ಲೂ ಇಂಟರ್ನೆಟ್ ಇರುವ ಮೊಬೈಲ್ ಇದ್ದರೆ ಮುಗಿದೇ ಹೋಯ್ತು. ಹಿಂದೂ ಮುಂದು ನೋಡದೇ ತಮಗೆ ಬಂದ ಸುದ್ಧಿಯನ್ನು ಇನ್ನೊಬ್ಬರಿಗೆ ಕಳಿಸುವುದೇ ಕೆಲಸವಾಗಿಬಿಟ್ಟಿದೆ. ಇದೇ ತರಹ ಇಲ್ಲೊಂದು ಸುಳ್ಳು ಸುದ್ಧಿ ಕಳೆದ ಎರಡು ದಿನಗಳಿಂದ ಸಖತ್ ವೈರಲ್ ಆಗಿದೆ” . ಗುಜರಾತ್’ನಲ್ಲಿ 12 ವರ್ಷದ ನಂತರ ಗಂಡು ಮಗುವಿಗೆ ಜನ್ಮ ಕೊಟ್ಟ ತಾಯಿಗೆ , ವೈದ್ಯರು ತಾಯಿ ಮತ್ತು ಮಗು ಇಬ್ಬರಲ್ಲಿ ಒಬ್ಬರನ್ನು ಮಾತ್ರ ಉಳಿಸಬಹುದು ಎಂದಾಗ , ತಾಯಿ ಮಗುವನ್ನು ಉಳಿಸಿ ಈ ಮಗು ಜಗತ್ತನ್ನು ನೋಡಲಿ ಎಂದು ಹೇಳಿ 2 ನಿಮಿಷ ಮಗುವನ್ನು ಮುದ್ದಾಡಿ ಪ್ರಾಣ ಬಿಟ್ಟಳು ” ಎಂಬ ಕಟ್ಟುಕಥೆಯ ಮತ್ತು ಸುಳ್ಳು ಸುದ್ಧಿಯ ಸತ್ಯಾಸತ್ಯತೆಯನ್ನು ಬೆನ್ನತ್ತಿದ್ದ ವೇಳೆ ಇಂದೊಂದು ಸುಳ್ಳು ಸುದ್ಧಿ ಎಂಬುದು ಖಚಿತವಾಗಿದೆ. ಹೌದು, ಈ ಫೋಟೋ ಬ್ರೆಜಿಲ್ ದೇಶದ್ದು, ಡಿಸೆಂಬರ್ 14, 2015ರಲ್ಲಿ Facebookನಲ್ಲಿ ಅಪ್ಲೋಡ್ ಆದ ಚಿತ್ರವಿದು. ಇದರ ಲಿಂಕ್ ಅನ್ನು ಕೆಳಗಡೆ ಹಾಕಲಾಗಿದೆ. ತಾಯಿಗಿಂತ…
ಬೆಂಗಳೂರು: ಬದಲಾವಣೆ ಜಗದ ನಿಯಮ ಯುಗಾದಿಗೆ ಸರಕಾರದಲ್ಲೂ ಬದಲಾವಣೆ ಆಗಬಹುದು ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ ವಿಜಯಪುರದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೊಸ ವರ್ಷ ಯುಗಾದಿಗೆ ಸರಕಾರದಲ್ಲೂ ಬದಲಾವಣೆ ಆಗಬಹುದು. ಕಾಂಗ್ರೆಸ್ ನಾಯಕರ ಪಾದಯಾತ್ರೆಗೆ ಅವಕಾಶ ನೀಡಬಾರದಿತ್ತು. ಕಾಂಗ್ರೆಸ್ ನಾಯಕರು ಪಾದಯಾತ್ರೆ ಮುಂದುವರಿಸಿದ್ದರೆ ಎಲ್ಲಾ ಹಾರಿ ಹೋಗುತ್ತಿದ್ದರು ಎಂದು ಹೇಳಿದರು. ವೀಕೆಂಡ್ ಕರ್ಫ್ಯೂ ತೆರವು ಮಾಡಿದ್ದಕ್ಕಾಗಿ ಜನರ ಪರ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಕೊರೋನಾ ಕೇವಲ ಶುಕ್ರವಾರ ಸಂಜೆ ಬಂದು ಸೋಮವಾರ ಹೋಗುತ್ತದೆ ಎನ್ನುವ ಗೊಂದಲ ಜನರಲ್ಲಿ ಇತ್ತು. ನೈಟ್ ಕರ್ಫ್ಯೂ ಯಾಕೆ ಅಂದರೆ ಸ್ವಲ್ಪವಾದರು ಏನಾದರು ಇರಬೇಕು. ಏನೋ ಮಾಡಿದ್ದೇವೆ ಎನ್ನುವ ಕಾರಣಕ್ಕೆ ನೈಟ್ ಕರ್ಫ್ಯೂ ಮುಂದುವರಿಕೆ ಮಾಡಿದ್ದಾರೆ ಎಂದು ಸರಕಾರಕ್ಕೆ ವ್ಯಂಗ್ಯವಾಡಿದರು. ಇನ್ನೂ ಸೂರ್ಯ, ಚಂದ್ರ ಇರುವ ತನಕ ನಿರಾಣಿ ಮುಖ್ಯಂತ್ರಿಯಾಗಲ್ಲಾ. ಬ್ಲೆಜರ್ ಹೊಲಿಸಿ ಇಟ್ಟುಕೊಂಡರೆ ಮಾರಾಟಕ್ಕೆ ಇದೆ ಎಂದು ಎಂಜಿ ರಸ್ತೆಯಲ್ಲಿ ಮಾರಾಟಕ್ಕೆ ಹಾಕಬಹುದು.…
ನವದೆಹಲಿ : ಇದೇ ತಿಂಗಳ 31 ರಿಂದ ಸಂಸತ್ ನ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಗೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಲಿದ್ದಾರೆ. ಸಂಸತ್ ನ ಬಜೆಟ್ ಅಧಿವೇಶದ ಮೊದಲ ದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಮರು ದಿನ ಕೇಂದ್ರ ಬಜೆಟ್ ಮಂಡನೆ ಆಗಲಿದೆ. ಇನ್ನು ಈ ಬಾರಿಯ ಸಂಸತ್ ಅಧಿವೇಶನ 2 ಭಾಗಗಳಲ್ಲಿ ನಡೆಯಲಿದೆ. ಮೊದಲ ಭಾಗ ಫೆಬ್ರವರಿ 11 ರಂದು ಮುಕ್ತಾಯವಾಗಲಿದ್ದು, 2ನೇ ಭಾಗ ಮಾರ್ಚ್ 14 ರಿಂದ ಏಪ್ರಿಲ್ 8 ರವರೆಗೆ ನಡೆಯಲಿದೆ ಎಂದು ವರದಿಯಾಗಿದೆ. ವರದಿ :ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಂಡ್ಯ : ಹಾಲಿನ ಕ್ಯಾಂಟರ್ ರಸ್ತೆಯಲ್ಲಿ ಪಲ್ಟಿಯಾಗುತ್ತಿದ್ದಂತೆ ಹಾಲಿಗಾಗಿ ಜನರು ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ರಾಗಿಮುದ್ದನಹಳ್ಳಿ ಗ್ರಾಮದಿಂದ ಹಾಲಿನ ಕ್ಯಾಂಟರ್ ಹಾಲನ್ನು ತುಂಬಿಕೊಂಡು ಬರುತ್ತಿತ್ತು. ಹೀಗೆ ಬರುತ್ತಿದ್ದ ಟ್ಯಾಂಕರ್, ಇಂಡುವಾಳು ಗ್ರಾಮದ ಬಳಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಟ್ಯಾಂಕರ್ ಪಟ್ಟಿಯಾದ ಕೂಡಲೇ ಹಾಲು ರಸ್ತೆಪಾಲಾಗಿದೆ. ಇದನ್ನು ಕಂಡ ಸ್ಥಳೀಯರು ಬಿಂದಿಗೆ, ಕ್ಯಾನ್, ಪಾತ್ರೆಯನ್ನು ತಂದು ಹಾಲನ್ನು ತುಂಬಿಕೊಳ್ಳಲು ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿದ್ದಾರೆ. ವರದಿ :ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy