Subscribe to Updates
Get the latest creative news from FooBar about art, design and business.
- ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಹೆಸರನ್ನ ವಿರೋಧಿಸುತ್ತಾರೆ: ಸಿಎಂ ಸಿದ್ದರಾಮಯ್ಯ
- 216 ಗಂಟೆಗಳ ಕಾಲ ಭರತ ನಾಟ್ಯ: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ಗೆ ಪ್ರವೇಶಿಸಿದ ವಿದುಷಿ ದೀಕ್ಷಾ
- ‘ಸಿದ್ರಾಮುಲ್ಲಾಖಾನ್’ ಎಂದು ವಾಟ್ಸಾಪ್ ಸ್ಟೇಟಸ್ ಹಾಕಿದ ಪಿಡಿಓ ವಿರುದ್ಧ ಎಫ್ ಐಆರ್
- ಸಂಸದ ಸುನೀಲ್ ಬೋಸ್ ಹುಟ್ಟುಹಬ್ಬ ಆಚರಿಸಿದ ಕಾರ್ಯಕರ್ತರು, ಅಭಿಮಾನಿಗಳು
- ವಿಷ್ಣುವರ್ಧನ್ ಸಮಾಧಿ ಮರುಸ್ಥಾಪನೆಗೆ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆಗೆ ಮನವಿ
- ಚಾಮುಂಡಿ ತಾಯಿಯ ದರ್ಶನ ಪಡೆದ ಕಿಚ್ಚ ಸುದೀಪ್ ದಂಪತಿ
- ಗ್ಯಾಸ್ ಬಳಕೆ ವೇಳೆ ಮಹಿಳೆಯರು ಸುರಕ್ಷತಾ ಕ್ರಮ ಅನುಸರಿಸಿ: ಮಾಜಿ ಸಚಿವ ಎಂ.ಶಿವಣ್ಣ ಸಲಹೆ
- ಅತಿವೃಷ್ಟಿ: ಬೀದರ್ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಿಸಲು ಒತ್ತಾಯ
Author: admin
ತುಮಕೂರು: ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ರಾಜಕೀಯ ಪಕ್ಷಗಳು ಕೊವಿಡ್ ನಿಯಮಗಳನ್ನು ಪಾಲಿಸಬೇಕು ಮತ್ತು ಚುನಾವಣೆಗೂ 72 ಗಂಟೆಗೂ ಮುಂಚಿತವಾಗಿ ಬಹಿರಂಗ ಪ್ರಚಾರ ನಿಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ಸೂಚನೆ ನೀಡಿದ್ದಾರೆ. ಎಲ್ಲ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಕಡ್ಡಾಯವಾಗಿ ಕೊವಿಡ್ ನಿಯಮಗಳನ್ನು ಪಾಲಿಸಬೇಕು. ಚುನಾವಣೆ ದಿನಾಂಕಕ್ಕೂ 72 ಗಂಟೆ ಮುನ್ನ ಸಾರ್ವಜನಿಕ ಸಭೆ ಸಮಾರಂಭ, ರ್ಯಾಲಿ, ಬೀದಿ ನಾಟಕ ಸೇರಿದಂತೆ ಎಲ್ಲ ರೀತಿಯ ಬಹಿರಂಗ ಪ್ರಚಾರಗಳನ್ನು ಮುಕ್ತಾಯಗೊಳಿಸಬೇಕು ಎಂದು ಅವರು ಸೂಚಿಸಿದ್ದಾರೆ. ವಿಧಾನ ಪರಿಷತ್ ಚುನಾವಣಾ ಕಣ ಇದೀಗ ರಂಗೇರಿದ್ದು, ಎಲ್ಲ ಪಕ್ಷಗಳು ಸ್ಪರ್ಧೆಗೆ ಬಿದ್ದು ಭರ್ಜರಿ ಪ್ರಚಾರ ನಡೆಸುತ್ತಿವೆ. ಬಹಿರಂಗ ಪ್ರಚಾರವು ಡಿಸೆಂಬರ್ 7ರ ಸಂಜೆ 4 ಗಂಟೆಗೆ ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಈ ಸೂಚನೆ ನೀಡಿದ್ದಾರೆ. ವರದಿ: ರಾಜೇಶ್ ರಂಗನಾಥ್ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ:…
ಗುಬ್ಬಿ: ಸಾರ್ವಜನಿಕ ಸ್ಥಳದಲ್ಲಿ ಜೂಜಾಟದಲ್ಲಿ ನಿರತರಾಗಿದ್ದವರ ಮೇಲೆ ಗುಬ್ಬಿ ಸರ್ಕಲ್ ಇನ್ಸ್ ಪೆಕ್ಟರ್ ಮತ್ತು ಸಿಬ್ಭಂದಿ ದಾಳಿ ನಡೆಸಿದ ಘಟನೆ ಗುಬ್ಬಿ ತಾಲ್ಲೂಕು ಕಸಬಾ ಹೋಬಳಿ ಅಮ್ಮನಘಟ್ಟ ಗ್ರಾಮದ ವರದೇನಹಳ್ಳಿಯಲ್ಲಿ ಶನಿವಾರ ಸಂಜೆ ನಡೆದಿದೆ. ದಾಳಿ ವೇಳೆ ಮೂವರನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು, 2 ಮೊಬೈಲ್, 9 ದ್ವಿಚಕ್ರ ವಾಹನ ಹಾಗೂ ಜೂಜಾಟಕ್ಕೆ ಬಳಸಿದ್ದ 2,700 ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. 8 ಮಂದಿ ಜೂಜಾಟದಲ್ಲಿ ನಿರತರಾಗಿದ್ದು, ಈ ಪೈಕಿ 5 ಮಂದಿ ಪೊಲೀಸರ ದಾಳಿ ವೇಳೆ ಸ್ಥಳದಿಂದ ಪರಾರಿಯಾಗಿದ್ದು, ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಿಪಿಐ ಎಫ್ ಕೆ ನದಾಫ್ ಹಾಗೂ ಸಿಬ್ಬಂದಿ ಪೃಥ್ವಿರಾಜ್, ಪಾತರಾಜು, ಧನಂಜಯ, ನಾಗರಾಜ್, ರಬ್ಬಾನಿ ದಾಳಿಯಲ್ಲಿ ಭಾಗವಹಿಸಿದ್ದರು. ಘಟನೆ ಸಂಬಂಧ ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಶಿವರಾಂ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ನಡೆಯಿತು. ಶಿವರಾಂ ಮಕ್ಕಳಾದ ರವಿಶಂಕರ್, ಲಕ್ಷ್ಮೀಶ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಶಿವರಾಮ್ ಅವರು ಅಯ್ಯಪ್ಪ ಸ್ವಾಮಿ ಭಕ್ತರಾಗಿದ್ದರು. ಪೂಜೆಯ ವೇಳೆ ಅವರು ಯಾವಾಗಲೂ ಬಾಗಿಲು ಹಾಕಿಕೊಳ್ಳುತ್ತಿದ್ದರು. ಈ ಘಟನೆ ನಡೆದ ದಿನವೂ ಅದೇ ರೀತಿ ಬಾಗಿಲು ಹಾಕಿಕೊಂಡು ಪೂಜೆ ಮಾಡುತ್ತಿದ್ದರು. ಈ ವೇಳೆ ಅವರು ಕುಸಿದು ಬಿದ್ದು, ಅವರ ತಲೆಗೆ ಗಂಭೀರವಾಗಿ ಏಟು ತಗಲಿತ್ತು. ಇನ್ನೂ ಪೂಜಾ ಕೊಠಡಿಗೆ ಬಾಗಿಲು ಹಾಕಿಕೊಂಡಿದ್ದರಿಂದಾಗಿ ಶಿವರಾಮ್ ಅವರು ಕುಸಿದು ಬಿದ್ದಿದ್ದರು ಯಾರ ಗಮನಕ್ಕೂ ಬಂದಿರಲಿಲ್ಲ ಎನ್ನಲಾಗಿದೆ. ವರದಿಗಳ ಪ್ರಕಾರ, ಒಂದು ಗಂಟೆಗೂ ಹೆಚ್ಚು ಕಾಲ ಅವರಿಗೆ ರಕ್ತಸ್ರಾವವಾಗಿತ್ತು ಎಂದು ಹೇಳಲಾಗಿದೆ. ಆ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ರಾಜೇಶ್ ರಂಗನಾಥ್ ತುಮಕೂರು: ಮುಂದಿನ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ತಾವು ತುಮಕೂರಿನಲ್ಲೇ ಇದ್ದು ಪಕ್ಷದ ಗೆಲುವಿಗೆ ಶ್ರಮಿಸುವುದಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿ ಹೊಸ ರಾಜಕಾರಣದ ಸಮೀಕರಣಕ್ಕೆ ನಾಂದಿ ಹಾಡಿದರು. ಅವರು ತಾಲ್ಲೂಕಿನ ಬಳ್ಳಗೆರೆಯ ಶಾಸಕ ಡಿ.ಸಿ.ಗೌರಿಶಂಕರ್ ರವರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡ ಬಗ್ಗೆ ಅನ್ಯ ಪಕ್ಷದ ರಾಜ್ಯ ಹಾಗೂ ಜಿಲ್ಲಾ ನಾಯಕರುಗಳು ತಮಗಿಚ್ಛೆ ಬಂದಂತೆ ಹೇಳಿಕೆ ನೀಡುತ್ತಿದ್ದು, ಆ ಹೇಳಿಕೆಗಳಿಗೆ ಮತ್ತು ಅವರ ಆರೋಪಗಳಿಗೆ ಯಾವುದೇ ಮನ್ನಣೆ ನೀಡುವುದಿಲ್ಲ. ತಮಗೆ ಪಕ್ಷ ಸಂಘಟನೆ ಮಾಡುವ ಗುರಿ ಮುಂದಿದ್ದು, ಅದಕ್ಕಾಗಿ ರಾಜ್ಯವ್ಯಾಪಿ ಪ್ರವಾಸ ಮಾಡಿ ಮಾಡಿಯೇ ತೀರುತ್ತೇನೆ. ನಾನು ಕಳೆದ ಬಾರಿ ಲೋಕಸಭೆಯಲ್ಲಿಯೇ ಇನ್ನು ಮುಂದೆ ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎಂದು ಭಾಷಣ ಮಾಡಿ ಹೊರಬಂದಿದ್ದೆ. ಆದರೆ ಅಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೇ ನನ್ನನ್ನು ತುಮಕೂರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಆಹ್ವಾನ ನೀಡಿ ಕರೆತಂದರು. ಇಲ್ಲಿಯ ಸಂಸದರಾಗಿದ್ದ ಮುದ್ದಹನುಮೇಗೌಡರಿಗೆ ಟಿಕೆಟ್ ತಪ್ಪಿಸುವ ಉದ್ದೇಶ…
ಶಿವಮೊಗ್ಗ: ಏನು ತಪ್ಪು ಮಾಡಿ ತಿಹಾರ್ ಜೈಲಿಗೆ ಹೋಗಿದ್ರಿ ಮೊದಲು ಹೇಳಿ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದು, ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿಗೆ ಏಕೆ ಹೋಗಿದ್ದರು? ಅವರು ಏನು ತಪ್ಪು ಮಾಡಿದ್ದರು ಎಂಬುದನ್ನು ಹೇಳಬೇಕು ಎಂದು ಅವರು ಪ್ರಶ್ನಿಸಿದ್ದಾರೆ. ಏನ್ ತಪ್ಪು ಮಾಡಿ ತಿಹಾರ್ ಜೈಲಿಗೆ ಹೋಗಿದ್ರಿ ಎಂದು ಮೊದಲು ಹೇಳಿ. ಹೆತ್ತ ತಾಯಿ ಕಣ್ಣೀರಿನ ಶಾಪ ಯಾರಿಗೆ ತಟ್ಟುತ್ತದೆ. ತಾಯಿಗೆ ಕಣ್ಣೀರು ಹಾಕಿಸಿದ್ದು ಯಾರ ತಪ್ಪು ಉತ್ತರಸಲಿ. ಡಿಕೆಶಿ ಬಂಡೆಯಲ್ಲಿ ಎಷ್ಟು ದುಡ್ಡು ಮಾಡಿದ್ದಾರೆ ಎಂದು ಗೊತ್ತಿದೆ ನಮ್ಮನ್ನು ಹೊಗಳಿದ ಡಿಕೆಶಿಗೆ ಧನ್ಯವಾದಗಳು ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಈಶ್ವರಪ್ಪ ಕಿಡಿಕಾರಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಜ್ಞಾನಿ. ನನ್ನ ಇಲಾಖೆಯ ಸಾಧನೆ ಕುರಿತು ಪ್ರಶ್ನೆ ಹಾಕಿದ್ದಾರೆ. ಒಂದೇ ಒಂದು ಮನೆ ಕೊಟ್ಟಿಲ್ಲ ಎಂದು ಆರೋಪಿಸಿದ್ದಾರೆ. ಮನೆ ಕೊಡುವುದು ವಸತಿ ಇಲಾಖೆ. ನನ್ನ ಇಲಾಖೆಯಲ್ಲಿ ಮನೆ ಹಂಚಲು, ಕಟ್ಟಲು ಬರುವುದಿಲ್ಲ. ನನ್ನನ್ನು ಟೀಕಿಸದಿದ್ದರೆ ಅವರಿಗೆ ತಿಂದಿದ್ದು ಕರಗುವುದಿಲ್ಲ ಎಂದಿದ್ದಾರೆ ಎಂದು…
ಕುಣಿಗಲ್: ಸುಳ್ಳು ಹೇಳುವುದರಲ್ಲಿ ಮತ್ತು ಅಳುವುದರಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ನಿಸ್ಸೀಮರು. ಜನರ ಅನುಕಂಪ ಗಿಟ್ಟಿಸಿಕೊಳ್ಳಲು ಅವರು ಅಳುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ತಾಲ್ಲೂಕಿನ ಎಡೆಯೂರಿನಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಜನಾಭಿಪ್ರಾಯವಿದ್ದರೆ ಅಧಿಕಾರದಲ್ಲಿರಬೇಕು. ಇಲ್ಲವಾದರೆ ಮನೆಯಲ್ಲಿರಬೇಕು. ಅದುಬಿಟ್ಟು ಸಭೆಯಲ್ಲಿ ಕಣ್ಣೀರು ಹಾಕುವುದು ಸರಿಯಲ್ಲ. ಜೆಡಿಎಸ್ ದೇವೇಗೌಡರ ಕುಟುಂಬದ ಪಕ್ಷವಾಗಿದ್ದು, ಅವಕಾಶವಾದಿ ರಾಜಕಾರಣ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು. ಕೋಮವಾದಿ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಲು ಜೆಡಿಎಸ್ ಜತೆ ಸೇರಿ ಸರ್ಕಾರ ರಚಿಸಲಾಗಿತ್ತು. ಆದರೆ ಶಾಸಕರು, ಸಚಿವರನ್ನು ಕುಮಾರಸ್ವಾಮಿ ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ‘ಆಪರೇಷನ್ ಕಮಲ’ಕ್ಕೆ ಸರ್ಕಾರ ಬಲಿಯಾಯಿತು. ಇದೀಗ ಸಿದ್ದರಾಮಯ್ಯ ಅವರಿಂದ ಸರ್ಕಾರ ಉರುಳಿತು ಎಂದು ಈಗ ಸುಳ್ಳು ಹೇಳುತ್ತಿದ್ದಾರೆ ಎಂದು ಹೇಳಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತುಮಕೂರು: ಕಾಮಗಾರಿಗಳಲ್ಲಿ ಗುತ್ತಿಗೆದಾರರಿಂದ ಶೇ.40ರಷ್ಟು ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ ಎಂಬ ಆರೋಪದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ಸಂಬಂಧ ಮಾತನಾಡಿದ ಅವರು, ಗುತ್ತಿಗೆದಾರರಿಂದ ಶೇ 40ರಷ್ಟು ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ ಎಂಬ ಆರೋಪದ ಬಗ್ಗೆ ಹಾಲಿ ನ್ಯಾಯಮೂರ್ತಿ ಅಥವಾ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸಿದರೆ, ಸತ್ಯ ಹೊರ ಬರಲಿದೆ ಎಂದು ಅವರು ಹೇಳಿದರು. ಕಾಮಗಾರಿಗಳಲ್ಲಿ ಶೇ.40ರಷ್ಟು ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದವರು ಪ್ರಧಾನಿಗೆ ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಹೇಳಿದ್ದರು. ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಜಲಸಂಪನ್ಮೂಲ ಇಲಾಖೆ ಮೇಲೂ ಕಮಿಷನ್ ಆರೋಪಗಳಿದ್ದು, ಅದೇ ಇಲಾಖೆ ಅಧಿಕಾರಿ ತನಿಖೆ ನಡೆದರೆ ಸತ್ಯ ಹೊರ ಬರುವುದೆ? ಎಂದು ಡಿಕೆಶಿ ಪ್ರಶ್ನಿಸಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತಿಪಟೂರು: ಕರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿ ಕೆರೆ ಸುಮಾರು 18 ವರ್ಷಗಳ ನಂತರ ತುಂಬಿ ಕೋಡಿ ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಅವರು, ಕೆರೆಗೆ ಗಂಗಾಪೂಜೆಯನ್ನು ಸಲ್ಲಿಸಿದರು. ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಸಹಕಾರ ಬ್ಯಾಂಕಿನ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತಿ ಸದಸ್ಯರಾದ ಕೆ.ಆರ್. ದೇವರಾಜ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಕುಮಾರಯ್ಯ ರವೀಶ್ ರವರು ಹಾಜರಿದ್ದರು. ಕಾರ್ಯಕ್ರಮದಲ್ಲಿ ನೂತನ ಹಾಲು ಉತ್ಪಾದಕರ ಸಂಘ ಕರಡಿ ಇದರ ಉಪಾಧ್ಯಕ್ಷರಾದ ರಂಗಸ್ವಾಮಿ ಮತ್ತು ಸುತ್ತಮುತ್ತಲಿನ ರೈತರುಗಳು ಭಾರೀ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದರು. ವರದಿ: ಆನಂದ್ ತಿಪಟೂರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಮಧುಗಿರಿ: 15 ವರ್ಷಗಳ ನಂತರ ತುಂಬಿದ ಕೆರೆಯ ತೂಬಿನ ಸಮೀಪ ಬಿರುಕು ಬಿಟ್ಟಿದ್ದು ಸಮೀಪದ ಗ್ರಾಮಸ್ಥರಲ್ಲಿ ಆತಂಕ ಎದುರಾಗಿದೆ. ದೊಡ್ಡೇರಿ ಹೋಬಳಿಯ ಬಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೆರೆಯು ಇತ್ತೀಚೆಗೆ ಸುರಿದ ಮಳೆಯಿಂದಾಗಿ ಶನಿವಾರ ರಾತ್ರಿ ಕೆರೆ ಕೋಡಿ ಹರಿದಿದೆ. ಆದರೆ ಕೆರೆಯ ಸುತ್ತ ಮುತ್ತ ಸುಮಾರು 400 ಎಕರೆಯಷ್ಟು ಜಮೀನು ಇದ್ದು, ಕೆರೆ ಒಡೆದರೆ, ಈ ಜಮೀನುಗಳ ಪರಿಸ್ಥಿತಿ ಏನು ಎಂದು ಜನ ಪ್ರಶ್ನಿಸುತ್ತಿದ್ದಾರೆ. ಗ್ರಾ.ಪಂ. ವತಿಯಿಂದ ಗ್ರಾಮಸ್ಥರ ಮನವಿ ಮೇರೆಗೆ ಬಡವನಹಳ್ಳಿ ಗ್ರಾಪಂ ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಭೇಟಿ ನೀಡಿ ಮುಂದೆ ಆಗಬಹುದಾದ ಅನಾಹುತಕ್ಕೆ ಸ್ವಲ್ಪ ಕಡಿವಾಣ ಹಾಕಿದ್ದಾರೆ. ಆದರೆ, ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವಲ್ಲಿ ವಿಫಲರಾಗಿದ್ದಾರೆ. ಕೋಡಿಯ ಸಮೀಪ ಈ ಘಟನೆ ಸಂಭವಿಸಿದ್ದು, ಗ್ರಾ.ಪಂ. ರವರು ಸದ್ಯಕ್ಕೆ 50 ಕ್ಕೂ ಹೆಚ್ಚು ಮರಳು ಚೀಲಗಳನ್ನು ಹಾಕಿ ಭದ್ರಪಡಿಸಲು ಮುಂದಾಗಿದ್ದಾರೆ. ಆದರೆ, ಇದು ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆಗಳು ಕೂಡ ಕೇಳಿ ಬಂದಿದೆ. ಈ ಕೆರೆ ಸಣ್ಣ…
ತಿಪಟೂರು: ರೈತರು ಆದಾಯ ಬರುವಂತ ಕೃಷಿ ಬೆಳೆಗಳು ಹಾಗೂ ನಮ್ಮಲ್ಲೆ ಬೆಳೆಯುವ ಆರೋಗ್ಯಕರವಾದ ಸಿರಿಧಾನ್ಯಗಳನ್ನು ಬೆಳೆದು ಆರೋಗ್ಯ ಹಾಗೂ ಆದಾಯ ಎರಡನ್ನು ಸ್ವಯಂ ಕೃಷಿಯಿಂದ ಪಡೆಯುವಂತೆ ತೋಟಗಾರಿಕೆ ಇಲಾಖೆ ಆಧಿಕಾರಿಗಳಾದ ಡಾ.ನವೀನ್ ಕುಮಾರ್ ತಿಳಿಸಿದರು. ಇತ್ತೀಚೆಗೆ ಕರಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 20-21 ನೇ ಸಾಲಿನ ವಾರ್ಷಿಕ ಮಹಾ ಸಭೆಯಲ್ಲಿ ಭಾಗವಹಿಸಿ ಡಾ.ನವೀನ್ ಕುಮಾರ್ ಮಾತನಾಡಿದರು. ನಗರಸಭೆ ಅಧ್ಯಕ್ಷರಾದ ರಾಮ್ ಮೋಹನ್ ಮಾತನಾಡಿ, ಸಹಕಾರ ಸಂಘಗಳು ರೈತರೊಂದಿಗೆ ಉತ್ತಮ ಬಾಂದವ್ಯವನ್ನು ಭೆಳೆಸಿಕೊಂಡು, ಸಂಘದ ಅಭಿವೃದ್ದಿಗೆ ಸಹಕಾರಿಯಾಗಬೇಕು. ಸಂಘವು ಉತ್ತಮ ರೀತಿಯಲ್ಲಿ ನಡೆಯುತ್ತಿದ್ದು, ಇದೇ ರೀತಿ ಇನ್ನೂ ಅಭಿವೃದ್ದಿ ಹೊಂದಲು ಶ್ರಮಿಸುವಂತೆ ಕರೆ ನೀಡಿದರು. ಬಿಳಿಗೆರೆ ಪ್ರತಾಪ್ ಸಿಂಗ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಲ್ಲಿ ಲಕ್ಷಾಂತರ ರೈತರಿಗೆ ಬ್ಯಾಂಕ್ ಖಾತೆಗಳಿಗೆ ಸಹಾಯಧನ ಜಮೆಯಾಗುತ್ತಿದ್ದು, ಇದರಿಂದಾಗಿ ರೈತರಿಗೆ ಅನುಕೂಲವಾಗುತ್ತಿದೆ, ಇದೇ ರೀತಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ಪರ ಯೋಜನೆಗಳನ್ನು ಸಂಬಂದಪಟ್ಟ…