Subscribe to Updates
Get the latest creative news from FooBar about art, design and business.
- ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಹೆಸರನ್ನ ವಿರೋಧಿಸುತ್ತಾರೆ: ಸಿಎಂ ಸಿದ್ದರಾಮಯ್ಯ
- 216 ಗಂಟೆಗಳ ಕಾಲ ಭರತ ನಾಟ್ಯ: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ಗೆ ಪ್ರವೇಶಿಸಿದ ವಿದುಷಿ ದೀಕ್ಷಾ
- ‘ಸಿದ್ರಾಮುಲ್ಲಾಖಾನ್’ ಎಂದು ವಾಟ್ಸಾಪ್ ಸ್ಟೇಟಸ್ ಹಾಕಿದ ಪಿಡಿಓ ವಿರುದ್ಧ ಎಫ್ ಐಆರ್
- ಸಂಸದ ಸುನೀಲ್ ಬೋಸ್ ಹುಟ್ಟುಹಬ್ಬ ಆಚರಿಸಿದ ಕಾರ್ಯಕರ್ತರು, ಅಭಿಮಾನಿಗಳು
- ವಿಷ್ಣುವರ್ಧನ್ ಸಮಾಧಿ ಮರುಸ್ಥಾಪನೆಗೆ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆಗೆ ಮನವಿ
- ಚಾಮುಂಡಿ ತಾಯಿಯ ದರ್ಶನ ಪಡೆದ ಕಿಚ್ಚ ಸುದೀಪ್ ದಂಪತಿ
- ಗ್ಯಾಸ್ ಬಳಕೆ ವೇಳೆ ಮಹಿಳೆಯರು ಸುರಕ್ಷತಾ ಕ್ರಮ ಅನುಸರಿಸಿ: ಮಾಜಿ ಸಚಿವ ಎಂ.ಶಿವಣ್ಣ ಸಲಹೆ
- ಅತಿವೃಷ್ಟಿ: ಬೀದರ್ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಿಸಲು ಒತ್ತಾಯ
Author: admin
ಅಮೆರಿಕಾದಲ್ಲಿ ಕೆಲವು ವರ್ಷಗಳು ವಾಸವಾಗಿದ್ದು ಹಿಂತಿರುಗಿದ ಹಿರಿಯ ಪರಿಚಿತರೊಬ್ಬರು ಭೇಟಿಯಾಗಿದ್ದರು….. ಹೀಗೆ ಲೋಕಾಭಿರಾಮವಾಗಿ ಮಾತನಾಡುತ್ತಾ ಅನೇಕ ವಿಷಯಗಳನ್ನು ಚರ್ಚಿಸಿದೆವು. ಭಾರತದ ಸಂಸ್ಕೃತಿ ಸಂಪ್ರದಾಯಗಳ ಬಗ್ಗೆ ಅಪಾರ ಕಾಳಜಿ ಮತ್ತು ವಿದೇಶಿ ಸಂಸ್ಕೃತಿಯ ಬಗ್ಗೆ ಒಂದಷ್ಟು ತಿರಸ್ಕಾರ ಮನೋಭಾವದ ವ್ಯಕ್ತಿ ಅವರು. ಆ ಹೊತ್ತಿನಲ್ಲಿ ನಮ್ಮ ಮುಂದೆ ಇದ್ದ ಪತ್ರಿಕೆಯೊಂದರಲ್ಲಿ ಕೊರೋನಾ ಕಾರಣದಿಂದ ಅನಾಥರಾದ ಮಕ್ಕಳನ್ನು ಮಾರಾಟ ಮಾಡುವ ಜಾಲದ ಬಗ್ಗೆ ಒಂದು ವರದಿ ಇತ್ತು. ಅದರ ಬಗ್ಗೆ ತುಂಬಾ ವಿಷಾದನೀಯ ವ್ಯಕ್ತಪಡಿಸಿ ಮಾತು ಆರಂಭವಾಗುತ್ತಿದ್ದಂತೆ ಅವರು ಒಂದು ಮಾತು ಹೇಳಿದರು…. ಅಮೆರಿಕಾದಲ್ಲಿ ಮಗುವೊಂದು ಅನಾಥವಾಗುವುದು ವೈಯಕ್ತಿಕವಾಗಿ ತುಂಬಾ ನೋವಿನ ವಿಷಯವಾದರು ಸಾಮಾಜಿಕವಾಗಿ ಆ ಮಗುವನ್ನು ಅದೃಷ್ಟಶಾಲಿ ಎಂದು ಪರಿಗಣಿಸಬಹುದು ಎಂದರು. ಕುತೂಹಲದಿಂದ ಅದು ಹೇಗೆ ಎಂದು ಕೇಳಿದೆ……. ಅವರ ವಿವರಣೆ…… ಒಂದು ವೇಳೆ ಒಂದು ಮಗು ಯಾವುದೇ ಕಾರಣದಿಂದ ತಂದೆ ತಾಯಿ ಅಥವಾ ಪೋಷಕರನ್ನು ಕಳೆದುಕೊಂಡು ಅನಾಥವಾದರೆ ಇಡೀ ಅಮೆರಿಕಾದ ಸಮಾಜ ಮತ್ತು ಸರ್ಕಾರದ ಆಡಳಿತಾತ್ಮಕ ವ್ಯವಸ್ಥೆ ಆ ಮಗುವಿಗೆ ಅನಾಥ…
ತಿಪಟೂರು: ಜೆಡಿಎಸ್ ಪಕ್ಷವು ರೈತರ ಪರವಾಗಿ, ದಲಿತರ ಪರವಾಗಿ ಹಿಂದುಳಿದವರ ಪರವಾಗಿ, ಅಲ್ಪ ಸಂಖ್ಯಾತರ ಪರವಾಗಿ ಎಂದೆಂದಿಗೂ ಇರುತ್ತದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು. ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿ ಆರ್.ಅನಿಲ್ ಕುಮಾರ್ ರವರಿಗೆ ನಿಮ್ಮ ಮತವನ್ನು ನೀಡಿ ಅವರನ್ನು ಜಯಗಳಿಸಿ ಎಂದು ಮನವಿ ಮಾಡಿಕೊಂಡರು. ಜೆಡಿಎಸ್ ಗೆಲುವಿಗೆ ಕಾರ್ಯಕರ್ತರು ಮುಖಂಡರು ಶ್ರಮಿಸಬೇಕು. ಕಳೆದ ಲೋಕಸಭಾ ಚುನಾವಣೆಯಲ್ಲಿ ನಮ್ಮ ಸೋಲಿಗೆ ಕಾರಣರಾದವರ ಸಮುದಾಯದವರನ್ನೇ ಅಭ್ಯರ್ಥಿ ಮಾಡಿದ್ದೇನೆ. ನನ್ನ ಸೋಲಿನ ನೋವು ಮರೆಯಬೇಕಾದರೆ, ಜೆಡಿಎಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ, ನಿಮ್ಮ ಸೇವೆಗೆ ಅವಕಾಶ ಮಾಡಿಕೊಡಿ ಎಂದು ಅವರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸುರೇಶ್ ಬಾಬು, ಶಾಸಕ ಗೌರಿಶಂಕರ್ ಜಕ್ನಲ್ಲಿ ಲಿಂಗರಾಜ್, ತಿಮ್ಮರಾಯಪ್ಪ ಗುರುಪ್ರಸನ್ನ ಸೇರಿದಂತೆ ಪ್ರಮುಖ ಮುಖಂಡರು ಹಾಜರಿದ್ದರು ವರದಿ: ಮಂಜು ಗುರುಗದಹಳ್ಳಿ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ:…
ಶಿವಮೊಗ್ಗ: ಬಿಜೆಪಿ ದೇಶದಲ್ಲೇ ಭ್ರಷ್ಟಾಚಾರದ ದೊಡ್ಡ ಪಕ್ಷ. ಇದನ್ನು ಬಿಜೆಪಿಯವರೇ ಹೇಳುತ್ತಿದ್ದಾರೆ. ಈ ಹಿಂದೆ ಬಿಜೆಪಿ ಭ್ರಷ್ಟ ಆಡಳಿತದ ಬಗ್ಗೆ ಖುದ್ದು ಈಶ್ವರಪ್ಪ ಅವರೇ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಅವತ್ತು ಈಶ್ವರಪ್ಪ ಜಾಗದಲ್ಲಿ ನಾನು ಇದ್ದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅವರು ಸ್ವಾಭಿಮಾನ ಇಲ್ಲದೇ ಬದುಕುತ್ತಿದ್ದಾರೆ. ಬೊಮ್ಮಾಯಿ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಂಡು ಮುರುಗೇಶ್ ನಿರಾಣಿ ಮುಂದಿನ ಮುಖ್ಯಮಂತ್ರಿ ಎನ್ನುತ್ತಾರೆ. ಆದರೆ, ಅಮಿತ್ ಷಾ ಅವರು ಬೊಮ್ಮಾಯಿ ನಾಯಕತ್ವದಲ್ಲಿ ಮುಂದಿನ ಚುನಾವಣೆ ನಡೆಯುತ್ತದೆ ಎಂದಿದ್ದಾರೆ. ಅಧಿಕಾರಕ್ಕಾಗಿ ಬಿಜೆಪಿ ಏನೆಲ್ಲ ಆಟವಾಡುತ್ತಿದೆ ಎಂದು ಡಿಕೆಶಿ ಕುಟುಕಿದರು. ಸಚಿವ ಈಶ್ವರಪ್ಪ ಅವರು ತಾನು ಜವಾಬ್ದಾರಿ ಸ್ಥಾನದಲ್ಲಿ ಇದ್ದೇನೆ ಎಂಬುದನ್ನೇ ಮರೆತಿದ್ದಾರೆ. ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಇರಬೇಕು ಎಂದರೆ ಬೊಮ್ಮಾಯಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲ ಈಶ್ವರಪ್ಪ ಅವರನ್ನು…
ಶಿವಮೊಗ್ಗ: ನನ್ನ ಅವಧಿಯಲ್ಲಿ ಹಣ ಪಡೆದು ಇಲಾಖೆಗಳ ಎನ್ ಒಸಿ ಕೊಟ್ಟಿದ್ದೇನೆ ಎಂದು ಸಾಬೀತಾದರೆ ರಾಜಕೀಯ ನಿವೃತ್ತಿ ಘೊಷಿಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸವಾಲೆಸೆದರು. ಇಲ್ಲಿನ ಸವಳಂಗ ರಸ್ತೆಯಲ್ಲಿರುವ ಸರ್ಜಿ ಕನ್ವೆನ್ಷನ್ ಹಾಲ್ ನಲ್ಲಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ವಿಧಾನಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಅಮಾತನಾಡಿದ ಅವರು, ಶೇ.40ರಷ್ಟು ಪರ್ಸೆಂಟೇಜ್ ನೀಡಿದರೆ ಮಾತ್ರ ಹಣ ಬಿಡುಗಡೆ ಆಗಲಿದೆ ಎಂದು ನಾನು ಆರೋಪಿಸಿಲ್ಲ. ಇದನ್ನು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಿಸಿ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಸಣ್ಣ ನೀರಾವರಿ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ದಿ ಪಿಡಬ್ಲೂಡಿ, ಎಲ್ಲಾ ಇಲಾಖೆಯಲ್ಲಿ ಪರ್ಸೆಂಟೇಜ್ ನೀಡಿದರೆ ಮಾತ್ರ ಕೆಲಸ ಆಗಲಿದೆ. ಬಿಜೆಪಿ ಸರ್ಕಾರದಲ್ಲಿ ಶೇ. 40ರಷ್ಟು ಹಣ ನೀಡಿದರೆ ಇನ್ನೆಲ್ಲಿ ಗುಣಮಟ್ಟದ ಕಾಮಗಾರಿ ನಿರೀಕ್ಷಿಸಲು ಸಾಧ್ಯವಾಗುತ್ತದೆ ಎಂದು ಅವರು ಪ್ರಶ್ನಿಸಿದರು. ಈ ತರಹ ಯಾವ ಕಾಲದಲ್ಲಿಯೂ ನಡೆದಿರಲಿಲ್ಲ. 12 ವರ್ಷ ಹಣಕಾಸು ಮಂತ್ರಿ ಆಗಿ ಕೆಲಸ ಮಾಡಿದ್ದೇನೆ. ಎಲ್ಲಾ ಇಲಾಖೆಯಲ್ಲಿ ಎನ್ ಒಸಿ ನೀಡಿದ್ದೀನಿ.…
ಚಿತ್ರದುರ್ಗ: ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ರಾಷ್ಟ್ರೀಯ ಹೆದ್ದಾರಿ 40ರಲ್ಲಿ ನಡೆದಿದೆ. ಈರುಳ್ಳಿ ಲಾರಿ ಪಂಚರ್ ಆಗಿದ್ದ ಕಾರಣ, ರಸ್ತೆ ಬದಿ ಲಾರಿ ನಿಲ್ಲಿಸಿ ಪಂಕ್ಚರ್ ಹಾಕುತ್ತಿದ್ದ ವೇಳೆ ಹಿಂದಿನಿಂದ ಬಂದ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಪರಿಣಾಮವಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಯಚೂರು ಮೂಲದ ಹುಲುಗಪ್ಪ, ಕುಷ್ಟಗಿ ಮೂಲದ ಮಂಜುನಾಥ, ವಿಜಯಪುರ ಮೂಲದ ಕ್ಲೀನರ್ ಸಂಜಯ್, ರೋಣ ಮೂಲದ ಚಾಲಕ ಶರಣಪ್ಪ ಅಪಘಾತದಲ್ಲಿ ಸಾವನ್ನಪ್ಪಿದವರು ಎಂದು ಗುರುತಿಸಲಾಗಿದೆ. ಇವ ಗದಗ ಜಿಲ್ಲೆ ರೋಣದಿಂದ ಬೆಂಗಳೂರಿಗೆ ಈರುಳ್ಳಿ ಸಾಗಿಸುತ್ತಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಗುಬ್ಬಿ: ಜಿಲ್ಲೆಯಲ್ಲಿ ಯಾವ ಪುಣ್ಯಾತ್ಮ ಜಾತಿ ವಿಷ ಬೀಜ ಬಿತ್ತಿದ್ದಾರೋ ಅವರಿಗೆ ತಕ್ಕ ಉತ್ತರ ನೀಡಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು. ಹೆರೂರಿನಲ್ಲಿ ಪಕ್ಷದ ಅಭ್ಯರ್ಥಿ ಆರ್.ಅನಿಲ್ ಕುಮಾರ್ ಪರ ಶುಕ್ರವಾರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸಮಾಜವನ್ನು ಒಡೆದು, ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಇಂತಹ ಅನ್ಯಾಯ ನೋಡಿಕೊಂಡು ಸುಮ್ಮನಿರುವುದಿಲ್ಲ, ಅಂತಹವರ ವಿರುದ್ಧ ಜೀವ ಇರುವವರೆಗೂ ಹೋರಾಡುತ್ತೇನೆ ಎಂದರು. ಒಕ್ಕಲಿಗ ಸಮುದಾಯದ ಗಂಗಟಕಾರ, ಕುಂಚಿಟಿಗ, ಮೊರಸು ಒಕ್ಕಲಿಗರೆಲ್ಲಾ ಒಂದೇ. ಆದರೆ ಕೆಲವರು ನಮ್ಮ ಸಮುದಾಯದ ಒಗ್ಗಟ್ಟು ಮುರಿದು, ನಮ್ಮ ಶಕ್ತಿ ನಾಶ ಮಾಡಲು ಹೊರಟಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣರಾದವರ ಸಮುದಾಯದವರನ್ನೇ ಅಭ್ಯರ್ಥಿ ಮಾಡಿದ್ದೇನೆ. ನನ್ನ ಸೋಲಿನ ನೋವು ಮರೆಯಬೇಕಾದರೆ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಡಿ ಎಂದು ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು. ಕೇವಲ ಒಕ್ಕಲಿಗ ಸಮುದಾಯದವರಲ್ಲ ನಾನು ಈ ದೇಶದ ಎಲ್ಲಾ ಸಮುದಾಯ ನಾಯಕನಾಗಿ ರಾಜಕೀಯ ಜೀವನದಲ್ಲಿ ಮಹತ್ವದ ಕೆಲಸವನ್ನು ಮಾಡಿದ್ದೇನೆ. ದೇವೇಗೌಡರ ಶಕ್ತಿ ಏನು…
ತಿಪಟೂರು: ಶ್ರೀಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಕ್ಷೇತ್ರ ದಸರಿಘಟ್ಟದಲ್ಲಿ ಶ್ರೀ ಚೌಡೇಶ್ವರಿ ಅಮ್ಮನವರು ಮತ್ತು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರ ತೆಪ್ಪೋತ್ಸವ ಕಾರ್ಯಕ್ರಮ ಶ್ರೀಕ್ಷೇತ್ರ ದಸರಿಘಟ್ಟಕೆರೆಯಲ್ಲಿ ಇಂದು ನೆರವೇರಿತು ಈ ಕಾರ್ಯಕ್ರಮದಲ್ಲಿ ತಿಪಟೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರು ನಮ್ಮ ನಾಯಕರಾದ ಕೆ.ಷಡಕ್ಷರಿ ಅವರು ಭಾಗವಹಿಸಿದ್ದರು. ವರದಿ: ಆನಂದ್ ತಿಪಟೂರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತುಂಬಾ ಆಳವಾಗಿ ಯೋಚಿಸಿದಾಗ ಯಾರೂ ಸಂಪೂರ್ಣ ಸಸ್ಯಾಹಾರಿಗಳಾಗಿರಲು ಅಥವಾ ಸಂಪೂರ್ಣ ಮಾಂಸಾಹಾರಿಗಳಾಗಿರಲು ಸಾಧ್ಯವಿಲ್ಲ ಎನ್ನಲಾಗುತ್ತದೆ. ಅಷ್ಟೊಂದು ಆಳಕ್ಕೆ ಈ ಲೇಖನದಲ್ಲಿ ಹೋಗುತ್ತಿಲ್ಲ. ಕೇವಲ ದಿನನಿತ್ಯದ ಆಹಾರ ಕ್ರಮಗಳು ಮತ್ತು ಜನರ ಸಾಮಾನ್ಯ ಅಭಿಪ್ರಾಯ ಆಧರಿಸಿ ಸಸ್ಯಹಾರ ಮತ್ತು ಮಾಂಸಾಹಾರದ ಬಗ್ಗೆ ಒಂದು ಸಣ್ಣ ವಿಶ್ಲೇಷಣೆ. ಸಾಮಾನ್ಯವಾಗಿ ಸಸ್ಯಾಹಾರಿ ಗಳಿಗೆ ಮಾಂಸಾಹಾರಿಗಳ ಬಗ್ಗೆ ಒಂದು ಅಭಿಪ್ರಾಯವಿದೆ. ಮಾಂಸಾಹಾರಿಗಳಿಗೆ ಅತಿಹೆಚ್ಚು ವೈವಿಧ್ಯಮಯ ಅಡುಗೆಗಳಿವೆ, ಅವರು ಎಲ್ಲಿ ಹೋದರು, ಯಾವುದೇ ಪ್ರದೇಶಕ್ಕೆ ಹೋದರೂ ಹೇಗೋ ಊಟದ ಸಮಸ್ಯೆಯಾಗುವುದಿಲ್ಲ, ಸಸ್ಯಹಾರಿಗಳಿಗೆ ತುಂಬಾ ಕಷ್ಟ. ಏನೋ ಹಣ್ಣು ಹಂಪಲು ತಿಂದು ಸಮಾಧಾನ ಮಾಡಿಕೊಳ್ಳಬೇಕು ಎಂದು ಗೊಣಗುತ್ತಿರುತ್ತಾರೆ. ಇದು ನಿಜವೇ ???? ಕೂಲಂಕಷವಾಗಿ ಪರಿಶೀಲಿಸಿ ನೋಡಿದಾಗ ವ್ಯಾಪಾರ ವ್ಯವಹಾರದ ಹೋಟೆಲುಗಳ ದೃಷ್ಟಿಯಿಂದ ಸ್ವಲ್ಪ ಮಾತ್ರ ನಿಜವೆನಿಸುತ್ತದೆ. ಆದರೆ ಸಂಪೂರ್ಣ ಸತ್ಯವಲ್ಲ. ಏಕೆಂದರೆ…… ಭಾರತದ ಮಟ್ಟಿಗೆ, ಸಾಮಾನ್ಯವಾಗಿ ಕೇವಲ ಕುರಿ ( ಮೇಕೆ ) ಕೋಳಿ ಮತ್ತು ಮೀನು ಎಂಬ ಮೂರು ಮಾತ್ರವೇ ಅತಿಹೆಚ್ಚು ಉಪಯೋಗಿಸಲ್ಪಡುವ ಮಾಂಸಾಹಾರ. ಮೊಟ್ಟೆ ಅರೆ ಮಾಂಸಾಹಾರ.…
ತಿಪಟೂರು: ತಾಲೂಕಿನ ಮಸವನಘಟ್ಟ ಸಮೀಪ ಬರುವ ಕಲ್ಲಹಳ್ಳಿ ಗ್ರಾಮದ ಗ್ರಾಮ ದೇವತೆ ಜಾತ್ರಾ ಮಹೋತ್ಸವ ಜರಗಿತು. ಮಹೋತ್ಸವದಲ್ಲಿ ಕೆಪಿಸಿಸಿ ಅಸಂಘಟಿತ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ. ಶಾಂತಕುಮಾರ್ ಭಾಗಿಯಾಗಿ ದೇವರ ಆಶೀರ್ವಾದ ಪಡೆದರು. ದೇವರ ಆಶೀರ್ವಾದ ಪಡೆದ ಬಳಿಕ ಮಾತನಾಡಿದ ಅವರು ಕಲ್ಪತರು ನಾಡು ತಾಲೂಕಿನ ವಿಧಾನಸಭಾ ಕ್ಷೇತ್ರದ ಜನತೆಗೆ ನನ್ನ ಮೇಲೆ ಇಟ್ಟಿರುವ ಅಭಿಮಾನ, ಪ್ರೀತಿಗೆ ನಾನೆಂದು ಚಿರಋಣಿಯಾಗಿರುತ್ತೇನೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಗೊರಗೊಂಡನಹಳ್ಳಿ ಸುದರ್ಶನ್ ಸೇರಿದಂತೆ ಊರಿನ ಗ್ರಾಮಸ್ಥರು ಮುಖಂಡರು ಭಾಗಿಯಾಗಿದ್ದರು ವರದಿ: ಮಂಜು ಗುರುಗದಹಳ್ಳಿ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತುರುವೇಕೆರೆ: ಎಡೆಯೂರು ಶ್ರೀ ಕ್ಷೇತ್ರದಲ್ಲಿ ಶುಕ್ರವಾರ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮ ಕಾಲ್ನಡಿಗೆಯಲ್ಲಿ ಆಗಮಿಸುತ್ತಿರುವ ಭಕ್ತಾದಿಗಳಿಗೆ ತುರುವೇಕೆರೆ ಪಟ್ಟಣದ ಹೊರವಲಯದಲ್ಲಿರುವ ಮೆಟ್ರೋ ಪಾಲಿಟನ್ ಕ್ಲಬ್ ವತಿಯಿಂದ ನೀರು ಮತ್ತು ಹಾಳೆ ಹಣ್ಣು ವಿತರಿಸಲಾಯಿತು. 46 ನೇ ವರ್ಷದ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ಗದಗ, ನವಲಗುಂದ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತೀ ವರ್ಷ ಭಕ್ತರು ಕಾಲ್ನಡಿಗೆಯಲ್ಲಿ ಆಗಮಿಸುತ್ತಿರುತ್ತಾರೆ. ಹೀಗಾಗಿ ದಣಿದು ಬರುವ ಭಕ್ತಾದಿಗಳಿಗಾಗಿ ಮೆಟ್ರೋ ಪಾಲಿಟನ್ ಕ್ಲಬ್ ಈ ವ್ಯವಸ್ಥೆ ಮಾಡಿಸಿತ್ತು. ಇನ್ನೂ ಮೆಟ್ರೋ ಪಾಲಿಟನ್ ಕ್ಲಬ್ ನ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ನಿಮ್ಮ ಸೇವೆ ಇದೇ ರೀತಿಯಾಗಿ ಮುಂದುವರಿಯಲಿ ಎಂದು ಶುಭಹಾರೈಸಿದ್ದಾರೆ. ವರದಿ: ಸುರೇಶ್ ಬಾಬು.ಎಂ., ತುರುವೇಕೆರೆ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700