Author: admin

ಮಹಾರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್‌ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಪಿಎಲ್‌ 2022ರ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು 13 ರನ್‌ಗಳಿಂದ ಜಯ ಸಾಧಿಸಿದೆ. ಈ ಋತುವಿನಲ್ಲಿ ಧೋನಿ ನಾಯಕತ್ವ ವಹಿಸಿಕೊಂಡ ನಂತರ ಚೆನ್ನೈಗೆ ಮೊದಲ ಸೋಲು ಇದಾಗಿದೆ. ಗುರಿ ಬೆನ್ನತ್ತಿದ ಚೆನ್ನೈ ಪರ ಡೆವೊನ್ ಕಾನ್ವೆ ಅರ್ಧಶತಕ ಗಳಿಸಿದರು. ರುತುರಾಜ್ ಗಾಯಕ್ವಾಡ್ (28 ರನ್) ಮತ್ತು ಮೊಯಿನ್ ಅಲಿ (34 ರನ್) ಹೊರತುಪಡಿಸಿ, ಯಾವುದೇ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಚೆನ್ನೈ ಗುರಿ ಮುಟ್ಟುವಲ್ಲಿ ಹಿಂದೆ ಬಿದ್ದಿತು. ಬೆಂಗಳೂರು ಪರ ಹರ್ಷಲ್ ಪಟೇಲ್ 3 ಬ್ಯಾಟ್ಸ್ ಮನ್ ಗಳನ್ನು ಔಟ್ ಮಾಡಿದರು. ಬೆಂಗಳೂರು ತಂಡಕ್ಕೆ 174 ರನ್ ಟಾರ್ಗೆಟ್ ಇದಕ್ಕೂ ಮೊದಲು ಮಹಿಪಾಲ್ ಲೊಮ್ರೊರ್ (42) ಮತ್ತು ನಾಯಕ ಫಾಫ್ ಡು ಪ್ಲೆಸಿಸ್ (38) ಅವರ ಅದ್ಭುತ ಬ್ಯಾಟಿಂಗ್‌ನಿಂದಾಗಿ ಆರ್‌ಸಿಬಿ ಚೆನ್ನೈಗೆ 174 ರನ್‌ಗಳ ಗುರಿಯನ್ನು ನೀಡಿತ್ತು. ಬೆಂಗಳೂರು 20 ಓವರ್‌ಗಳಲ್ಲಿ ಎಂಟು…

Read More

ಈಗ ಎಲ್ಲೆಲ್ಲೂ IPL ಫೀವರ್ ಶುರುವಾಗಿದೆ. ಈ ಐಪಿಎಲ್ ಹಂಗಾಮದ ನಡುವೆ YPL ಟೂರ್ನಿ ಶುರುವಾಗ್ತಿದೆ. ನಾವು ಕೆಪಿಎಲ್ (ಕರ್ನಾಟಕ ಪ್ರೀಮಿಯರ್ ಲೀಗ್) ಸಿಸಿಎಲ್ ಸೆಲೆಬ್ರಿಟಿ ಪ್ರೀಮಿಯರ್ ಲೀಗ್) ಕೇಳಿದ್ದೇವೆ ಇದು ಯಾವುದು YPL ಅನ್ನೋ ಪ್ರಶ್ನೆಗೆ ಉತ್ತರ ಯಜಮಾನ ಪ್ರೀಮಿಯರ್ ಲೀಗ್. ವಿಷ್ಣುಸೇನಾ ಸಮಿತಿಯಿಂದ ಆಯೋಜಿಸಲಾಗಿರುವ ಈ ಟೂರ್ನಿಯ ಸಂಪೂರ್ಣ ಜವಾಬ್ದಾರಿಯನ್ನು ವಿಷ್ಣುಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ವಹಿಸಿಕೊಂಡಿದ್ದಾರೆ. ಇದೇ 7 ಮತ್ತು 8ರಂದು‌ ನಡೆಯಲಿರುವ YPL ಟೂರ್ನಿಮೆಂಟ್ ಗಾಗಿ ವಿಷ್ಣುಸೇನಾ ಸಮಿತಿ ಇವತ್ತು ಥೀಮ್ ಸಾಂಗ್ ಬಿಡುಗಡೆಯಾಗಿದೆ. ಥೀಮ್ ಸಾಂಗ್ ಸಾಂಗ್ ಪ್ರಮೋದ್ ಮರವಂತೆ ಸಾಹಿತ್ಯ ನೀಡಿದ್ದು, ಹೇಮಂತ್ ಜೋಯಿಸ್ ಮ್ಯೂಸಿಕ್ , ಚೇತನ್ ನಾಯ್ಕ್ ಕಂಠ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ವೀರಕಪುತ್ರ ಶ್ರೀನಿವಾಸ್ ಮಾತನಾಡಿ, ಈ ಪ್ರೀಮಿಯರ್ ಲೀಗ್ ಜವಾಬ್ದಾರಿಯನ್ನು ಬೆಂಗಳೂರು ವಿಷ್ಣುಸೇನಾ ಸಮಿತಿಯ ಅಧ್ಯಕ್ಷ ಯದುನಂದನ್ ಗೌಡ , ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್, ಆನಂದ್ ವಹಿಸಿಕೊಂಡಿದ್ದಾರೆ. ಕ್ರಿಕೆಟ್ ಅನ್ನೋದನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯ ಮಾಡಿಸಿದ್ದು…

Read More

ಸಿರಾ:  ನಾನು ಮುಖ್ಯಮಂತ್ರಿ ಆಗಲು ಪಕ್ಷಕ್ಕೆ ಮತ ಕೇಳಲು ಬಂದಿಲ್ಲ. ರಾಜ್ಯದಲ್ಲಿ ಶಾಶ್ವತವಾದ ನೀರಾವರಿ ಯೋಜನೆ ಜಾರಿ ಮಾಡುವ ಉದ್ದೇಶವೇ ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮದ ಉದ್ದೇಶ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಸಿರಾ ನಗರದ   ಜ್ಯೋತಿ ನಗರದಲ್ಲಿ ನಡೆದ  ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,   ನಾನು ಮುಖ್ಯಮಂತ್ರಿ ಆಗಬೇಕೆಂದು ಜನತಾ ಜಲಧಾರೆ ಯಾತ್ರೆ ಹಮ್ಮಿಕೊಂಡಿಲ್ಲ. ಬಹುಮತ ಬರದಿದ್ದರೂ ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಾನು ಮುಖ್ಯಮಂತ್ರಿ ಆಗಲು ಪಕ್ಷಕ್ಕೆ ಮತ ಕೇಳಲು ಬಂದಿಲ್ಲ. ರಾಜ್ಯದಲ್ಲಿ ಶಾಶ್ವತವಾದ ನೀರಾವರಿ ಯೋಜನೆ ಜಾರಿ ಮಾಡುವ ಉದ್ದೇಶವೇ ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮದ ಉದ್ದೇಶ ಎಂದು ಅವರು ಹೇಳಿದರು. ರಾಜ್ಯದಲ್ಲಿ 2023ಕ್ಕೆ ಜೆಡಿಎಸ್‌ ಪಕ್ಷವನ್ನು ಬಹುಮತದಿಂದ ಅಧಿಕಾರಕ್ಕೆ ತಂದರೆ ಪ್ರತಿ ಗ್ರಾಮ ಪಂಚಾಯಿತಿಯ ಕೇಂದ್ರದಲ್ಲಿ ಎಲ್‌ ಕೆಜಿಯಿಂದ 12ನೇ ತರಗತಿಯವರೆಗೆ ಇಂಗ್ಲಿಷ್‌ ಮತ್ತು ಕನ್ನಡ ಎರಡೂ ಮಾಧ್ಯಮದಲ್ಲಿ ಹೈಟೆಕ್‌ ಶಾಲೆಗಳನ್ನು ತೆರೆದು ಉಚಿತವಾಗಿ ಶಿಕ್ಷಣ ಕೊಡುವ ಯೋಜನೆ ಹಾಕಿಕೊಂಡಿದ್ದೇನೆ. ರಾಜ್ಯದ ಜನತೆ…

Read More

ತುಮಕೂರು :  ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿಗೆ ಗೃಹ ಸಚಿವ ಅರಗ ಜ್ಞಾನೆಂದ್ರ ಭೇಟಿ ನೀಡಿದರು. ಇದೇ ವೇಳೆ ಮಾಧ್ಯಮಗಳೊಂದಗೆ ಮಾತನಾಡಿದ ಅವರು, ನಾನು ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಜಿಲ್ಲೆಯ ಪ್ರಗತಿ ಬಗ್ಗೆ ಕೆಲವು ಅಧಿಕಾರಿಗಳನ್ನು ಕರೆದು ಅವರ ಜೊತೆ ಚರ್ಚೆ ಮಾಡಿದ್ದೇನೆ. ವಿಶೇಷವಾಗಿ ಕುಡಿಯುವ ನೀರು, ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಬಗ್ಗೆ ಮಾತನಾಡಿದ್ದೇನೆ. ಈ ಬಗ್ಗೆ ಪ್ರಗತಿ ಚೆನ್ನಾಗಿದೆ. ಅಧಿಕಾರಿಗಳು ವಿಶೇಷವಾದ ಪ್ರಯತ್ನ ಮಾಡುತ್ತಿದ್ದಾರೆ ಹಾಗೂ ಕೋವಿಡ್ ಗೆ ಯಾವ ರೀತಿ ಪ್ರಿಪೇರ್ ಆಗಿದೆ, ನಾಲ್ಕನೇ ಅಲೆ  ಬಂದರೆ ನಮ್ಮ ತಯಾರಿ ಏನು ಎಂಬುದರ ಬಗ್ಗೆ ಎಲ್ಲವನ್ನೂ ಮಾತನಾಡಿದ್ದೇವೆ ಎಂದರು. ಪಿಎಸ್ ಐ ಅಕ್ರಮ ಪರೀಕ್ಷೆ ಬಗ್ಗೆ ಸ್ಪಷ್ಟನೆಕೊಟ್ಟ ಗೃಹ ಸಚಿವರು, ಎಲ್ಲಾ ಕಾಲದಲ್ಲಿಯೂ ಇದು ಆಗಿದೆ ಎಂಬುದು ಹೊರಗೆ ಬರುತ್ತಿದೆ.  ನನಗೆ ಮಾಹಿತಿ ಲಭ್ಯ ಆದ ತಕ್ಷಣ ಒಂದು ಸಣ್ಣ ಸುಳಿವು ಸಿಕ್ಕಿತು. ಕೇವಲ ಎರಡು ಗಂಟೆಗಳಲ್ಲಿ ಮುಖ್ಯಮಂತ್ರಿಗಳ ಒಪ್ಪಿಗೆ ಪಡೆದು ಸಿ ಓ ಡಿ…

Read More

ಗುಬ್ಬಿ:ಬಸವರಾಜು ಹೊರಟ್ಟಿಯವರು ಪ್ರಬುದ್ದ ರಾಜಕಾರಣಿ. ಬುದ್ದಿವಂತರು, ವಿಚಾರವಂತರು ಅವರ ತೀರ್ಮಾನ ಸರಿಯಾಗಿ ಇರುತ್ತದೆ ಜೆಡಿಎಸ್ ನಲ್ಲಿ ಇರುವವರಿಗೆ ಬೆಲೆ ಇಲ್ಲ ಎಂದು ಶಾಸಕ ಎಸ್ .ಆರ್. ಶ್ರೀನಿವಾಸ್ ತಿಳಿಸಿದರು. ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಜೋಗಿಹಳ್ಳಿ ,ಮಠ ಗ್ರಾಮದಲ್ಲಿ ಸುಮಾರು 60 ಲಕ್ಷ ವೆಚ್ಚದ ಸಿಸಿ ರಸ್ತೆಗೆ ಗುದ್ದಲಿ ಪೂಜೆ ಸಲ್ಲಿಸಿ ಮಾತನಾಡಿದ ಅವರು , ನಾನು ಕೂಡ ಜೆಡಿಎಸ್ ನಿಂದ ನಾಲ್ಕು ಬಾರಿ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದು ಬಂದಿದ್ದಾನೆ. ನನ್ನನ್ನೇ ಮೂಲೆಗುಂಪು ಮಾಡಿದ್ದಾರೆ. ಇವತ್ತು ಜೆಡಿಎಸ್ ಪಕ್ಷದಲ್ಲಿ ಇದ್ರೂ ಕೂಡ ಆಟಕುಂಟು ಲೆಕ್ಕಕಿಲ್ಲ ಎಂಬ ಪರಿಸ್ಥಿತಿಯಲ್ಲಿ ನಾನು ಇದ್ದೇನೆ. ನಾನು ಜೆಡಿಎಸ್ ಪಕ್ಷದಲ್ಲಿ ಇದ್ದೇನೆ ಪಕ್ಷ ಬಿಟ್ಟಿಲ್ಲ ಆದರೆ ನನ್ನನ್ನು ಅವರೇ ದೂರ ಮಾಡಿಕೊಳುತ್ತಿದ್ದಾರೆ ಎಂದು ಅವರು ಅಸಮಾಧಾನ ತೋಡಿಕೊಂಡರು. ಚುನಾವಣೆ ಪಕ್ಷದ ವಿಚಾರದಲ್ಲಿ ಯಾವುದೇ ಹೇಳಿಕೆ ನೀಡುವುದಿಲ್ಲ. ಕಾರ್ಯಕರ್ತರನ್ನ ಕೇಳಿ ಹೇಳುತ್ತೇನೆ. ನನ್ನ ಕಾರ್ಯಕರ್ತರೇ ನನ್ನ ಬೆನ್ನೆಲುಬು. ನಾನು ಪಕ್ಷೇತರ ಅಭ್ಯರ್ಥಿಯಾಗಿ ನಿಂತಾಗಲೂ ನನ್ನ ಕಾರ್ಯಕರ್ತರನ್ನು ನಂಬಿದ್ದೇನೆ.…

Read More

ಕೊರಟಗೆರೆ:  ಪಟ್ಟಣದ ಕರ್ನಾಟಕ ಬ್ಯಾಂಕ್ ಬಳಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಖಾಸಗಿ ಬಸ್ ಗುದ್ದಿದ ಪರಿಣಾಮ ತಲೆಗೆ ಗಂಭೀರ ಗಾಯವಾಗಿದೆ. ಈ ವೇಳೆ ಸ್ಥಳೀಯರು ಗಾಯಗೊಂಡ ವ್ಯಕ್ತಿಯನ್ನು ಸರ್ಕಾರಿ ಆಸ್ಪತ್ರೆ ಸೇರಿಸಿದ್ದಾರೆ. ಪ್ರಥಮ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗೆ ತುಮಕೂರು ಜಿಲ್ಲಾಸ್ಪತ್ರೆಗೆ ಗಾಯಾಳುವನ್ನು ಕಳುಹಿಸಿಕೊಡಲಾಗಿದೆ . ಅಪಘಾತ ನಡೆದ ತಕ್ಷಣ ಬಸ್ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ. ಬಸ್ ನಲ್ಲಿದ್ದ ಪ್ರಯಾಣಿಕರ ತಮ್ಮ ಊರುಗಳಿಗೆ ತಲುಪಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು . ಬಸ್ ಚಾಲಕನ ಅತಿವೇಗದ ಚಾಲನೆ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ .. ಗಾಯಗೊಂಡಿರುವ ವ್ಯಕ್ತಿಯು ತುಮಕೂರಿನ ಸ್ವಾಧೇನಹಳ್ಳಿ ಗ್ರಾಮದ 55 ವರ್ಷದ  ಓಬಳದಾಸಯ್ಯ ಎಂದು ತಿಳಿದುಬಂದಿದೆ . ಇನ್ನು ಘಟನೆ ನಡೆದ ಸ್ಥಳಕ್ಕೆ ಕೊರಟಗೆರೆಯ ಪೊಲೀಸ್ ಠಾಣಾ  ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ವರದಿ: ಮಂಜುಸ್ವಾಮಿ.ಎಂ.ಎನ್.,  ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ತುಮಕೂರು: ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ಭ್ರಷ್ಟಾಚಾರದ ವಿರುದ್ಧದ  ಹೋರಾಟಕ್ಕೆ ಇತ್ತೀಚಿನ ದಿನಗಳಲ್ಲಿ ಮನೆ ಮಾತಾಗುತ್ತಿದ್ದಾರೆ.  ಇದೀಗ ಅವರ ಹೋರಾಟಕ್ಕೆ  ಮತ್ತೊಂದು ಜಯ ಸಿಕ್ಕಿದೆ. ಎಸಿಬಿ ಅಧಿಕಾರಿಗಳಿಂದ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ಇವರುಗಳ ಹೋರಾಟದಿಂದ ಬಡ ರೈತರು ಮತ್ತು ಮಧ್ಯಮ ವರ್ಗದ ಸಾರ್ವಜನಿಕರು ಅಲ್ಪಪ್ರಮಾಣದ ನಿಟ್ಟುಸಿರು ಬಿಡುತ್ತಿದ್ದಾರೆ. ತಿಂಗಳಲ್ಲಿ ಒಬ್ಬ ಭ್ರಷ್ಟ ಅಧಿಕಾರಿಗಳು, ಸಿಕ್ಕಿ ಹಾಕಿಕೊಂಡು ಜೈಲು ಪಾಲಾಗುತ್ತಿದ್ದಾರೆ. ತುಮಕೂರು ತಾಲ್ಲೂಕು ಅರಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಖಾಲಿ ನಿವೇಶನದ ಈ ಸ್ವತ್ತು ಮಾಡಿಸಿಕೊಳ್ಳಲು  ಅರುಣ್ ಕುಮಾರ್  ಎಂಬವರು ಅರ್ಜಿ ನೀಡಿದ್ದು,  ಪಂಚಾಯಿತಿ ಕಾರ್ಯದರ್ಶಿ ಶ್ರೀಧರ್ 7,500 ಲಂಚಕ್ಕೆ  ಬೇಡಿಕೆ ಇಟ್ಟು 3, 000 ಹಣ ಮುಂಗಡವಾಗಿ ಪಡೆದುಕೊಂಡಿದ್ದ. ಉಳಿದ 4,500 ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡಾಗಿ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಸಾಮಾಜಿಕ ಕಾರ್ಯಕರ್ತ ಜೆಟ್ಟಿ ಅಗ್ರಹಾರ ನಾಗರಾಜು ಅವರ ಹೋರಾಟದಿಂದಾಗಿ ಸಾರ್ವಜನಿಕ ವಲಯದಲ್ಲಿ, ಎಸಿಬಿ ಅಧಿಕಾರಿಗಳ ತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೆಟ್ಟಿ ಅಗ್ರಹಾರ ನಾಗರಾಜು ಜಿಲ್ಲಾ…

Read More

ತುಮಕೂರು: ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಒತ್ತಾಯಿಸಿ ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಕರ್ನಾಟಕ, ವತಿಯಿಂದ ಪ್ರತಿಭಟನೆ ನಡೆಯಿತು. ಸರಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳು ನಡೆಯುತ್ತಿರುವುದು ವಿಪರ್ಯಾಸ. ವಿದ್ಯಾವಂತ, ಬಡ ಮತ್ತು ಪ್ರತಿಭಾವವಂತ ವಿದ್ಯಾರ್ಥಿಗಳು ನ್ಯಾಯಯುತವಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಿ ತಮ್ಮನಸನ್ನು ನನಸಾಗಿಸಲು ಅನೇಕ ಸವಾಲುಗಳನ್ನು ಎದುರಿಸುತ್ತಾರೆ. ಆದರೆ ಇಂತಹ ಪರೀಕ್ಷೆಯಲ್ಲಿ ಅಕ್ರಮ ನಡೆಯುತ್ತಿರುವುದು ವಿಪರ್ಯಾಸವಾಗಿದೆ ಎಂದು ಸಂಘಟನೆ ಖಂಡಿಸಿದೆ. ಹುದ್ದೆಗಳ ಸಂಖ್ಯೆ ಬೆರಳೆಣಿಕೆಯಷ್ಟಿದ್ದರೂ ಸಾವಿರರರು – ಲಕ್ಷಾಂತರ ಸಂಖ್ಯೆಯಲ್ಲಿ ಸರ್ಧಾತ್ಮಕ ಪರೀಕ್ಷೆ ಎದುರಿಸುತ್ತಾರೆ. ಆದರೆ ಅವರು ಎದುರಿಸುವ ಪರೀಕ್ಷೆಗಳಲ್ಲಿಯೇ ದೊಡ್ಡಮಟ್ಟದಲ್ಲಿ ಅಕ್ರಮಗಳು ನಡೆಯುತ್ತವೆ. ಇದರಿಂದಾಗಿ ಬಡ ಮತ್ತು ಪ್ರತಿಭಾವಂತ ನಿರುದ್ಯೋಗಿಗಳ ಕನಸಿಗೆ ತಣ್ಣೀರೆರಚಿದಂತಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರೀ ಆಕ್ರಮ, ಭ್ರಷ್ಟಾಚಾರ ನಡೆಯುತ್ತಿರುವುದು ವಿದ್ಯಾವಂತ ನಿರುದ್ಯೋಗಿಗಳಲ್ಲಿ ನಿರಾಸೆಯನ್ನು ಮೂಡಿಸಿದೆ ಎಂದು ಸಂಘಟನೆಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಪರೀಕ್ಷೆಗಳಲ್ಲಿ ಅಕ್ರಮ ನಡೆಯುತ್ತಿರುವ ಬಗೆಗೆ ಈ…

Read More

ಪಾವಗಡ: ಗೊಲ್ಲರ ಆರಾಧ್ಯದೈವನಾದ ಪಾಲೇನಹಳ್ಳಿ ಶ್ರೀಚಿತ್ರಲಿಂಗೇಶ್ವರ ಸ್ವಾಮಿಯ ದೇವಸ್ಥಾನ ನಿರ್ಮಾಣದ ಶಿಲಾಸ್ತಂಭ ರಥಯಾತ್ರೆಯನ್ನು ಸುತ್ತಮುತ್ತಲಿನ ಹಳ್ಳಿಗಳಿಂದ ಗೊಲ್ಲ ಜನಾಂಗದವರು ಸಿ.ಕೆ.ಪುರ ಮತ್ತು ದೇವರಹಟ್ಟಿಯಲ್ಲಿ ಅದ್ದೂರಿಯಾಗಿ ಸ್ವಾಗತಿಸಿದರು. ಈ ಶಿಲಾಸ್ತಂಭ ರಥ ಯಾತ್ರೆಯ ನೇತೃತ್ವವನ್ನು ಮುಖ್ಯ ಇಂಜಿನಿಯರ್ ಸಣ್ಣ ಚಿತ್ತಪ್ಪ ವಹಿಸಿದರು. ಈ ದೇವಸ್ಥಾನವು ಸುಮಾರು ಐವತ್ತು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಈ ಸಂದರ್ಭದಲ್ಲಿ ಇಂಜಿನಿಯರ್ ಸಣ್ಣಚಿತ್ತಪ್ಪ. ಮುಗ್ದಾಳಬೆಟ್ಟ ನರಸಿಂಹಪ್ಪ. ಕೆ.ಟಿ.ಹಳ್ಳಿ ಚಿಕ್ಕಣ್ಣ, ಕೋಟೆ ಪ್ರಭಾಕರ್. ಕೆಪಿಸಿಸಿ ಒಬಿಸಿ ಪ್ರಧಾನಕಾರ್ಯದರ್ಶಿಗಳಾದ ಮೈಲಾರರೆಡ್ಡಿ. ದೇವದಬೆಟ್ಟ ಚಿತ್ತಯ್ಯಪೂಜಾರ್, ಬೆಸ್ಕಾಂ ಯರ್ರಪ್ಪ, ಗುಂಡಾರ್ಲಹಳ್ಳಿ ಜಯಂತ್ ಇನ್ನು ಅನೇಕ ಯಾದವ ಮುಖಂಡರುಗಳು ಭಾಗವಹಿಸಿದ್ದರು. ವರದಿ: ದೇವರಹಟ್ಟಿ ನಾಗರಾಜ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು_ತುಮಕೂರು ನಗರದ ಸದಾಶಿವನಗರ ರಿಂಗ್ ರಸ್ತೆಯಲ್ಲಿ ಹಾಡುಹಗಲೇ ಪುಂಡರು ಗಂಟೆಗಟ್ಟಲೆ ಬೈಕ್ ವೀಲಿಂಗ್ ಮಾಡುತ್ತಾ ಅಟ್ಟಹಾಸ ಮೆರೆಯುತ್ತಿದ್ದು ಇಂತಹ ಪುಂಡರಿಗೆ ಸಂಬಂಧಪಟ್ಟ ಇಲಾಖೆಗಳು ಕಡಿವಾಣ ಹಾಕಬೇಕು ಎಂದು ಸಾರ್ವಜನಿಕ ವಲಯದಲ್ಲಿ ಆಗ್ರಹ ವ್ಯಕ್ತವಾಗಿದೆ. ಇನ್ನು ರಂಜಾನ್ ಹಬ್ಬದ ದಿನದಂದು ಪುಂಡರು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಬೈಕ್ ವೀಲಿಂಗ್ ಮಾಡುತ್ತಿದ್ದನ್ನು ಸ್ಥಳದಲ್ಲಿದ್ದ ಸಾರ್ವಜನಿಕರೊಬ್ಬರು ಮೊಬೈಲ್ ನಲ್ಲಿ ದೃಶ್ಯಗಳನ್ನು ಸೆರೆಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋಗಳು ವೈರಲ್ ಆಗಿದೆ. ಸುಮಾರು ನಾಲ್ಕು ಬೈಕ್ಗಳಲ್ಲಿ ಬಂದ ಪುಂಡರು ಮರಳೂರು ಸರ್ಕಲ್ ನಿಂದ ಸದಾಶಿವನಗರದ ಎರಡನೇ ಹಂತದ ಸರ್ಕಲ್ ವರೆಗೂ ಸತತ ಅರ್ಧಗಂಟೆಗೂ ಹೆಚ್ಚು ಕಾಲ ಬೈಕ್ ವೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡಿದ್ದಾರೆ. ಇನ್ನು ಇದೇ ಸ್ಥಳದಲ್ಲಿ ಪೊಲೀಸರು ಸಹ ಸಂಚರಿಸಿ ಗಸ್ತು ಹಾಕುತ್ತಿದ್ದರು ಸಹ ಅಂತಹ ಪೊಲೀಸರನ್ನು ಯಾಮಾರಿಸಿ ಬೈಕ್ ವೀಲಿಂಗ್ ಮಾಡಿರುವ ಪುಂಡರು ಸರ್ವಿಸ್ ರಸ್ತೆಯಲ್ಲಿ ಪ್ರಾಕ್ಟೀಸ್ ಮಾಡುತ್ತಾ ಮುಖ್ಯರಸ್ತೆಯಲ್ಲಿ ಬೈಕ್ಗಳನ್ನು ಒಂದು ಚಕ್ರದಲ್ಲಿ ಎತ್ತಿಕೊಂಡು ಕಿಲೋಮೀಟರ್ ಗಟ್ಟಲೆ ಕರ್ಕಶವಾದ…

Read More