Subscribe to Updates
Get the latest creative news from FooBar about art, design and business.
- ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
- ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
- ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
- ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
- ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್ ಕ್ಯಾಮೆರಾದಲ್ಲಿ ಹುಲಿ ಪತ್ತೆ!
- ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
- ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ ಶಿವಕುಮಾರ್
- ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ
Author: admin
ತಿಪಟೂರು: ತಾಲ್ಲೂಕು ನೊಣವಿನಕೆ ಹೋಬಳಿ ಮಸವನಘಟ್ಟ ಗ್ರಾಮ ಪಂಚಾಯಿತಿ ಬಿಜೆಪಿ ಬೆಂಬಲಿತ ಅಧ್ಯಕ್ಷರಾಗಿ ಕಾವ್ಯ ಹರೀಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಹಸೀಲ್ದಾರ್ ಚಂದ್ರಶೇಖರ್ ಸಹ ಸಹಾಯಕಿಯಾಗಿ ಅರುಣ್ ಕುಮಾರ್ ಅವರು ಕಾರ್ಯನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಬಿಸಿಲಲ್ಲಿ ಜಗದೀಶ್, ತಾಲೂಕು ಅಧ್ಯಕ್ಷ ಸುರೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಬಿಜೆಪಿ ಮುಖಂಡರಾದ ಮಂಜೇಗೌಡ, ಗಿರೀಶ್ ಕುಮಾರ್ ಭಾಗವಹಿಸಿದ್ದರು. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿಯ ಎಂ.ಎನ್.ಕೋಟೆ ಗ್ರಾಮದಲ್ಲಿ ಎಂ.ಎನ್.ಕೋಟೆ ವಲಯದ ಪದಾಧಿಕಾರಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಮಾಜಕ್ಕೆ ದೊರೆಯುವ ಸೌಲಭ್ಯಗಳ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಎಂ.ಎನ್.ಕೋಟೆ ಗ್ರಾಮದ ಉದ್ಯಮಿ ಬಿ.ಎನ್.ಮಾರುತಿ ದೀಪ ಬೆಳಗಿಸುವ ಮುಖಾಂತರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದಿಂದ ಪಡೆದುಕೊಂಡ ಪ್ರಗತಿನಿಧಿಯನ್ನು ಉತ್ಪಾದನೆ ಬರುವ ಉದ್ದೇಶಗಳಿಗೆ ಉಪಯೋಗಿಸಿ , ತಾನು ಸ್ವ-ಉದ್ಯೋಗಿ ಯಾಗುವ ಮೂಲಕ ಮತ್ತೊಬ್ಬರಿಗೆ ಕಾಯಕ ಕಲ್ಲಿಸುವ ನಿಟ್ಟಿನಲ್ಲಿ ಸ್ವಾವಲಂಬಿ ಜೀವನ ನಡೆಸಬೇಕು. ಆಗ ಮಾತ್ರ ಶ್ರೀ ಕ್ಷೇತ್ರದಿಂದ ಪಡೆದ ಪ್ರಗತಿ ನಿಧಿಗೆ ಒಂದು ಅರ್ಥ ಬಂದಂತೆ ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಎಂ.ಎನ್.ಕೋಟೆ ಗ್ರಾಮದ ಪ್ರಗತಿ ಕೃಷ್ಣ ಬ್ಯಾಂಕ್ ನ ಚಂದನ್, ತುಮಕೂರು ಜಿಲ್ಲಾ ರಿಕವರಿ ಯೋಜನಾಧಿಕಾರಿ ಪುರಂದರ್ ಗುಬ್ಬಿ ತಾಲೂಕಿನ ಯೋಜನಾಧಿಕಾರಿಗಳಾದ ಹರೀಶ್ ಆರ್.ಎಸ್. ಜನಜಾಗೃತಿ ವೇದಿಕೆಯ ಸದಸ್ಯರಾದ ರಂಗಸ್ವಾಮಿ, ಒಕ್ಕೂಟದ…
ಕೊರಟಗೆರೆ : ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಸುಪ್ರಸಿದ್ಧ ಕಮನೀಯ ಕ್ಷೇತ್ರದ ಶ್ರೀ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿಯ ಸನ್ನಿಧಾನದಲ್ಲಿ ಪ್ರತಿ ವರ್ಷವೂ ಸಂಕ್ರಾಂತಿ ಮುಗಿದ ಮಾರನೇ ದಿನ ರಾಸುಗಳ ಜಾತ್ರೆ ಪ್ರಾರಂಭವಾಗಿ, ಸುಮಾರು ಹತ್ತರಿಂದ ಹದಿನೈದು ದಿನಗಳ ಕಾಲ ಭಾರೀ ರಾಸುಗಳ ಜಾತ್ರೆ ನಡೆಯುತ್ತಿತ್ತು. ರಾಸುಗಳ ಜಾತ್ರೆ ಮುಗಿದ ನಂತರ ಶ್ರೀ ಆಂಜನೇಯ ಸ್ವಾಮಿಯ ಬ್ರಹ್ಮರಥೋತ್ಸವ ನಡೆಯುತ್ತಿತ್ತು. ಆದರೆ ಈ ಬಾರಿ ಕೊವಿಡ್ ಹಿನ್ನೆಲೆಯಲ್ಲಿ ಜಾತ್ರೆಗೆ ನಿರ್ಬಂಧ ಹಾಕಲಾಗಿದೆ. ಕೊವಿಡ್ ಮಾರ್ಗಸೂಚಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ನಿರ್ದೇಶನದಂತೆ ಜಾತ್ರೆ ನಡೆದಂತೆ ತಾಲ್ಲೂಕು ಆಡಳಿತವು ನಿರ್ಬಂಧವನ್ನು ವಿಧಿಸಿದ್ದು, ಈ ವಿಚಾರ ತಿಳಿಯದೇ ರಾಸುಗಳನ್ನು ಮಾರಲು ಮತ್ತು ಕೊಳ್ಳಲು ಬಂದ ರೈತರು ನಿರಾಸೆಯಿಂದ ತಮ್ಮ ಊರಿಗೆ ತೆರಳುವಂತಾಗಿದೆ. ಈ ಸಂಬಂಧ ತಾಲೂಕ ದಂಡಾಧಿಕಾರಿ ನಹಿದಾ ಜಮ್ ಜಮ್ ಮಾತನಾಡಿ, ತಾಲ್ಲೂಕಿನಲ್ಲಿ ನಡೆಯುವ ಯಾವುದೇ ಸಭೆ ಸಮಾರಂಭ ಜಾತ್ರೆ ಉರೂಸ್ ಇನ್ನಿತರ ಅನೇಕ ಧಾರ್ಮಿಕ ಕಾರ್ಯಕ್ರಮಗಳನ್ನು ರದ್ದು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳ ಮುಖೇನ ಸೂಚನೆ ಹೊರಡಿಸಲಾಗಿದೆ. ಆದರೂ ಕ್ಯಾಮೆನಹಳ್ಳಿಯ…
ಮಧುಗಿರಿ: ಕೊವಿಡ್ ಹಾಗೂ ಸಾಂಕ್ರಾಮಿಕ ರೋಗಗಳು ಹರಡದಂತೆ ಸ್ವಚ್ಛತೆಗೆ ಜನರು ಹೆಚ್ಚಿನ ಮಹತ್ವ ನೀಡುವ ನಿಟ್ಟಿನಲ್ಲಿ ತಾಲೂಕಿನ ಬೇಡತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಿತಾ ಲೋಕೇಶ್ ತಮ್ಮ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿಯೂ ಗಿಡಗಂಟಿಗಳನ್ನು ತೆರವುಗೊಳಿಸಿ, ಚರಂಡಿ ಸ್ವಚ್ಛಗೊಳಿಸುವ ಮೂಲಕ ಮುನ್ನೆಚ್ಚರಿಕೆ ಕ್ರಮಕೈಗೊಂಡರು. ನೀರಿನ ತೊಟ್ಟಿ ಸ್ವಚ್ಛಗೊಳಿಸಿ, ಚರಂಡಿಗಳ ಹೂಳು ತೆಗೆದು ನೀರು ಸುಗಮವಾಗಿ ಹರಿಯುವಂತೆ ಮಾಡಲಾಯಿತು. ಇನ್ನು ಸ್ವಚ್ಛತಾ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಾದ ಸಂತೋಷ್ ಸಿಂಗ್, ಸಮಾಜದಲ್ಲಿ ಗೌರವ ಇರಬೇಕಾದರೆ ನಾವು ಆರೋಗ್ಯಕರ ಮತ್ತು ನೈರ್ಮಲ್ಯದಿಂದ ಬದುಕಬೇಕು. ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಕೈಜೋಡಿಸಿದ ಅನಿತಾ ಲೋಕೇಶ್ ಅಧ್ಯಕ್ಷರು ಸ್ವಚ್ಛತೆಗೆ ಕಾರಣೀಭೂತರಾಗಿದ್ದಾರೆ ಎಂದು ಹೇಳಿದರು. ಇನ್ನೂ ಕಾರ್ಯಕ್ರಮದ ಸಂದರ್ಭ ಮಾತನಾಡಿದ ಅನಿತಾ ಲೋಕೇಶ್, ಓಮಿಕ್ರಾನ್ ಸೋಂಕು ಸೌಮ್ಯ ಸ್ವಭಾವದ್ದು ಎಂದು ಕೆಲವರು ಭಾವಿಸಿದ್ದಾರೆ. ಆದರೆ, ಇದು ವೇಗವಾಗಿ ಕಾಡ್ಗಿಚ್ಚಿನಂತೆ ಇಡೀ ವಿಶ್ವವನ್ನೇ ಆವರಿಸುತ್ತಿದೆ. ಈ ಹೊಸ ರೂಪಾಂತರವು ಹಿಂದಿನ ತಳಿಗಿಂತ ಸಾಂಕ್ರಾಮಿಕವಾಗಿದೆ. ಗಂಭೀರವಾದ ರೋಗವನ್ನುಂಟು ಮಾಡುತ್ತದೆ. ಹಾಗಾಗಿ ಇದನ್ನು…
ಸರಗೂರು: ತಾಲ್ಲೂಕಿನ ಬಿ ಮಟಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ಣೇಗಾಲ ಗ್ರಾಮದಲ್ಲಿ ತಾಲ್ಲೂಕು ಪಂಚಾಯಿತಿ ವತಿಯಿಂದ ನಿರ್ಮಾಣವಾಗಿರುವ ನೀರಿನ ತೊಂಬೆಯ ಕಳಪೆ ಕಾಮಗಾರಿಯಿಂದಾಗಿ ಜನರು ನೀರಿನ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ನಮ್ಮತುಮಕೂರು.ಕಾಂ ವರದಿ ಮಾಡಿದ್ದು, ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ಮತ್ತು ಇಂಜಿನಿಯರ್ ಇದೀಗ ಕಾಮಗಾರಿ ಮತ್ತೆ ಆರಂಭಿಸಿದ್ದಾರೆ. ಈ ಬಗ್ಗೆ ನಮ್ಮತುಮಕೂರು.ಕಾಂ ಜೊತೆಗೆ ಮಾತನಾಡಿದ ಗ್ರಾಮದ ಸುರೇಶ್ ಅವರು, ಸುಮಾರು ಒಂದು ವರ್ಷಗಳ ಹಿಂದೆ ಕಾಮಗಾರಿ ಆರಂಭವಾಗಿದ್ದರೂ, ಈವರೆಗೆ ಪೂರ್ಣಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮತುಮಕೂರು.ಕಾಂ ಪ್ರತಿನಿಧಿ ಚಂದ್ರ ಹಾದನೂರು ಅವರಿಗೆ ನಾವು ಮಾಹಿತಿ ನೀಡಿದ್ದು, ವರದಿಯ ಪ್ರಕಟಗೊಂಡ ಬೆನ್ನಲ್ಲೇ ಇದೀಗ ತೊಂಬೆ ಕಾಮಕಾರಿ ಆರಂಭಗೊಂಡಿದೆ ಎಂದು ತಿಳಿಸಿದರು. ತಾಲ್ಲೂಕಿನ ಬಿ ಮಟಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ಣೇಗಾಲ ಗ್ರಾಮದಲ್ಲಿ ತಾಲ್ಲೂಕು ಪಂಚಾಯಿತಿ ವತಿಯಿಂದ ನಿರ್ಮಾಣವಾಗಿರುವ ನೀರಿನ ತೊಂಬೆ ಅತ್ಯಂತ ಕಳಪೆ ಗುಣಮಟ್ಟ ಹೊಂದಿದ್ದು, ಇದರಿಂದಾಗಿ ಗ್ರಾಮಸ್ಥರು ನೀರಿನ ಸಮಸ್ಯೆಯಿಂದ ಕಂಗೆಟ್ಟಿದ್ದರು. ಈ ಸಂಬಂಧ “ನೀರಿನ ತೊಂಬೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ: ನೀರಿಲ್ಲದೇ…
ಮುರುಳಿಧರನ್ ಆರ್., ಚಿತ್ರದುರ್ಗ ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಆದಿವಾಲ ಗ್ರಾಮದಲ್ಲಿ ರೂ.25 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದ ವೇಳೆ ಹಿರಿಯೂರು ಶಾಸಕಿಯ ಪತಿ ಡಿ.ಟಿ.ಶ್ರೀನಿವಾಸ್ ದರ್ಬಾರ್ ನಡೆಸಿದ್ದು, ಶಿಷ್ಠಾಚಾರ ಉಲ್ಲಂಘಿಸಿರುವ ಬಗ್ಗೆ ವ್ಯಾಪಕ ಚರ್ಚೆ ಕೇಳಿ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹೊರವಲಯದಲ್ಲಿನ ಜವನಗೊಂಡನಹಳ್ಳಿ ಹೋಬಳಿಯ ಆದಿವಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನೆಯ ಸಂದರ್ಭದಲ್ಲಿ ತಾಲ್ಲೂಕಿನ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಪ್ರಾಸ್ತಾವಿಕ ಭಾಷಣ ಮಾಡಬೇಕಿತ್ತು. ಆದರೆ, ಶಾಸಕಿಯ ಪತಿ ವೇಳೆ ಶಿಷ್ಠಾಚಾರ ಉಲ್ಲಂಘಿಸಿ ದರ್ಬಾರ್ ನಡೆಸಿರುವುದು ಇದೀಗ ತೀವ್ರ ಟೀಕೆಗೆ ಗುರಿಯಾಗಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ನಾರಾಯಣ ಸ್ವಾಮಿ, ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್, ಜಿಲ್ಲಾ ಉಸ್ತುವರಿ ಸಚಿವ ಶ್ರೀರಾಮುಲು ಇದ್ದರು. ಶಾಸಕಿಯ ಬದಲು ಶಾಸಕಿಯ ಪತಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವುದನ್ನು ಯಾರೂ ಕೂಡ ಪ್ರಶ್ನಿದೇ ಮೌನವಾಗಿದ್ದದ್ದು ಕಂಡು ಬಂತು. ಜಿಲ್ಲಾಡಳಿತ ಕೂಡ ಈ…
ತುಮಕೂರು: ಇಂದು ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ್ ಅಧ್ಯಕ್ಷತೆಯಲ್ಲಿ ತುಮಕೂರು ಜಿಲ್ಲೆಯ ನಗರ ವ್ಯಾಪ್ತಿ ಕೊಳಚೆ ಪ್ರದೇಶ ನಿವಾಸಿಗಳ ಮತ್ತು ನಿವೇಶನ ರಹಿತ ಕುಂದುಕೊರತೆ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ, ಮಾರ್ಚ್ 5 -2021ರಂದು ನಡೆದ ಸಭೆಯ ಅನುಪಾಲನಾ ವರದಿ ಮೇಲೆ ಇಲಾಖೆವಾರು ತೆಗೆದುಕೊಂಡ ಪರಿಹಾರೋಪಾಯಗಳ ಮೇಲೆ ಚರ್ಚಿಸಿ ಜಿಲ್ಲೆಯಲ್ಲಿರುವ ಆಘೋಷಿತ ಸ್ಲಂಗಳನ್ನು ನಿಗದಿತ ಕಾಲಮಿತಿಯೊಳಗೆ ಸ್ಲಂ ಕಾಯಿದೆ 1973 ಮತ್ತು ಸ್ಲಂ ನೀತಿ 2016ರ ಅನ್ವಯ ಸ್ಥಳೀಯ ಸಂಸ್ಥೆಗಳು ಮತ್ತು ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿ ಸ್ಲಂ ಘೋಷಣೆಗೆ ಕ್ರಮವಹಿಸಲು ಸಭೆಯಲ್ಲಿ ಸೂಚಿಸಲಾಯಿತು. ಸ್ಲಂ ಪ್ರದೇಶದ ನಿವೇಶನ ರಹಿತರಿಗೆ ಪ್ರತ್ಯೇಕವಾಗಿ ವಸತಿ ಸಮುಚ್ಛಯ ನಿರ್ಮಿಸಲು 4 ಎಕರೆ ಭೂಮಿ ಮೀಸಲು ಈ ಹಿಂದಿನ ಸಭೆಯಲ್ಲಿ ಸ್ಲಂಗಳಲ್ಲಿರುವ ನಿವೇಶನ ರಹಿತ 398 ಕುಟುಂಬಗಳಿಗೆ ಅಗತ್ಯವಿರುವ ಭೂಮಿಯ ಪ್ರಸ್ತಾವನೆ ಸಲ್ಲಿಸಲು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಸೂಚಿಸಲಾಗಿತ್ತು. ಅದರಂತೆ ದಿನಾಂಕ: 29-9-2021ರಂದು ಜಿಲ್ಲಾಧಿಕಾರಿಗಳಿಗೆ ಮಂಡಳಿಯಿಂದ ಪ್ರಸ್ತಾವನೆ ಸಲ್ಲಿಸಿ ನಗರ ಪ್ರದೇಶದಲ್ಲಿ 12 ಎಕರೆ ಅಥವಾ…
ತಿಪಟೂರು: ನಗರದ ಹಾಸನ ವೃತ್ತದ ನಂದಿನಿ ಹಾಲಿನ ಮಳಿಗೆ ಆವರಣದಲ್ಲಿ ತಾಲೂಕು ಜಯ ಕರ್ನಾಟಕ ಜನಪದ ವೇದಿಕೆ ವತಿಯಿಂದ ಬೆಂಗಳೂರು ನಗರ ಜಯ ಕರ್ನಾಟಕ ಜನಪದ ವೇದಿಕೆ, ಆಟೋ ಘಟಕದ ಜಿಲ್ಲಾಧ್ಯಕ್ಷರಾದ ಆಟೋ ಮಿತ್ರ ಜಯರಾಮ್ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ದಲಿತ ನೌಕರರ ಮುಖಂಡ ನರಸಿಂಹಯ್ಯ, ತಿಪಟೂರು ಘಟಕದ ಜಯ ಕರ್ನಾಟಕ ತಾಲೂಕು ಅಧ್ಯಕ್ಷ ಬಿ.ಟಿ.ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ ಶಿವಣ್ಣ ಮಾತನಾಡಿದರು. ಹಿಂಡಿಸ್ಕೆರೆ ರವಿ, ದಲಿತ ಸಂಘಟನೆಯ ಕಲ್ಲೇಶ್, ಉಮಾಶಂಕರ್, ಉಪಾಧ್ಯಕ್ಷ ಸಿದ್ದೇಶ್, ವಿದ್ಯಾರ್ಥಿ ಘಟಕದ ಕಲಂದರ್ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿ ಮಸ್ಕಲ್ ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಮಂಜುಳಾ ವೀರೇಶ್ ಅವರನ್ನು ಗ್ರಾಮದ ಗ್ರಾಮಸ್ಥರು ಇಂದು ಸನ್ಮಾನಿಸಿ, ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಂಜುಳಾ ವೀರೇಶ್, ಈ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಮೊದಲನೆಯದಾಗಿ ಕೋವಿಡ್ ನಿಯಂತ್ರಣಕ್ಕೆ ಒತ್ತು ಕೊಡುವುದು ಮತ್ತು ಗ್ರಾಮಸ್ಥರಿಗೆ ಕುಡಿಯುವ ನೀರಿನ ವ್ಯವಸ್ಥೆ, ಬೆಳಕು(ವಿದ್ಯುತ್) ಒದಗಿಸಿಕೊಡುತ್ತೇನೆ. ಸರ್ಕಾರದಿಂದ ಬರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಎಲ್ಲ ಗ್ರಾಮಸ್ಥರಿಗೂ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಎಂದು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಸ್ಕಲ್ ಗ್ರಾಮದ ಉಪಾಧ್ಯಕ್ಷರಾದ ವೈ .ನಾಗರಾಜು ಮಾತನಾಡಿದರು. ಬಳಿಕ ಅಧ್ಯಕ್ಷೆ ಮಂಜುಳಾ ವೀರೇಶ್ ಅವರನ್ನು ಸನ್ಮಾನಿಸಿ ಗೌರವಿಸಿದರು . ಈ ಸಂದರ್ಭ ಸದಸ್ಯರಾದ ಕಲಾವತಿ, ತಿಪ್ಪೇಸ್ವಾಮಿ, ಕೊಲ್ಲಮ್ಮ, ರಮ್ಯ, ಹನುಮಂತಪ್ಪ, ಗೋವಿಂದರಾಜು, ಕಲಾವತಿ, ವಿ.ಎಲ್.ಗೌಡ, ಹರೀಶ್, ಸುಜಾತ, ಪದ್ಮಾವತಿ, ಮಣಿಮೇಗಲೈ, ಗಿರಿಜಮ್ಮ, ಪದ್ಮಾವತಿ ನೂತನ ಅಧ್ಯಕ್ಷರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ಮಸ್ಕಲ್ ಗ್ರಾಮ ಪಂಚಾಯತಿಯ ಅಧ್ಯಕ್ಷೆ…
ಒಬ್ಬ ಶ್ರೀಮಂತ ತನ್ನ ಮುದ್ದು ಮಗನಿಗೆ ಸಾಯುವ ಸಮಯದಲ್ಲಿ ವಿಲ್ ಪತ್ರದ ಜೊತೆ ಹಳೆಯ ಪಾದರಕ್ಷೆಗಳನ್ನು ನೀಡಿ ಹೇಳಿದ, “ವಿಲ್ ಪತ್ರದಲ್ಲಿ ನಿನಗೆ ನನ್ನೆಲ್ಲಾ ಆಸ್ತಿಯನ್ನು ಬರೆದಿದ್ದೇನೆ. ನೀನು ಸುಖವಾಗಿ ಬಾಳು ಆದರೆ ನನ್ನ ಕೊನೆಯ ಆಸೆಯೊಂದಿದೆ ಅದನ್ನು ನೆರವೇರಿಸು ಅಷ್ಟು ಸಾಕು. ಅದೇನೆಂದರೆ ನಾನು ಸತ್ತ ಮೇಲೆ ನನ್ನ ಪಾದಕ್ಕೆ ಈ ಹಳೆಯ ಚಪ್ಪಲಿಯನ್ನು ತೊಡಿಸಿ ಅಂತ್ಯ ಕ್ರಿಯೆ ನೆರವೇರಿಸು!” ಎಂದು ಹೇಳುತ್ತಾನೆ. ಮಗ ತನ್ನ ಕೆನ್ನೆಯ ಮೇಲೆ ಜಾರುತ್ತಿದ್ದ ಕಣ್ಣೀರನ್ನು ಒರೆಸಿಕೊಳ್ಳುತ್ತಾ ಈ ಸಣ್ಣ ಆಸೆಯನ್ನು ನಾನು ಖಂಡಿತ ನೆರವೆರಿಸುತ್ತೇನೆ ಎಂದು ಅಪ್ಪನಿಗೆ ಮಾತು ಕೊಡುತ್ತಾನೆ. ತಂದೆಯು ಕೊನೆಯುಸಿರೆಳೆದ ದಿನ ವಿಧಿ ವಿಧಾನ ಕಾರ್ಯಗಳನ್ನು ಮಾಡಿದ ಪಂಡಿತರಿಗೆ ಮಗ ಅಪ್ಪನಿಗೆ ಹಳೆಯ ಚಪ್ಪಲಿ ತೊಡಿಸಲು ಕೋರುತ್ತಾನೆ. ಆದರೆ ಪಂಡಿತರು ಸಾಧ್ಯವೇ ಇಲ್ಲ ಇದು ನಮ್ಮ ಅಂತ್ಯಕ್ರಿಯೆ ಸಂಪ್ರದಾಯದಲ್ಲೇ ಇಲ್ಲವೆಂದು ನಿರಾಕರಿಸುತ್ತಾರೆ. ಎಷ್ಟೇ ಪ್ರಯತ್ನ ಪಟ್ಟರು ಆ ಶ್ರೀಮಂತ ವ್ಯಕ್ತಿಗೆ ಹಳೆಯ ಚಪ್ಪಲಿ ತೊಡಿಸಲು ಸಾಧ್ಯವೇ ಆಗುವುದಿಲ್ಲ! ಈ ವಿಚಾರವಾಗಿ…