Author: admin

ಮಧುಗಿರಿ:  ಮಾಜಿ ಶಾಸಕ ಕೆ.ಎನ್.ರಾಜಣ್ಣ ನವರು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರ ಬಗ್ಗೆ ಆವಹೇಳನಕಾರಿಯಾಗಿ ಆಡಿದ ಮಾತುಗಳನ್ನು ಖಂಡಿಸಿ,  ಮಧುಗಿರಿಯಲ್ಲಿ ಬೃಹತ್  ಪ್ರತಿಭಟನೆ ನಡೆಸಲಾಯಿತು. ಮಧುಗಿರಿಯ  ಶಾಸಕರಾದ ಎಂ.ವಿ.ವೀರಭದ್ರಯ್ಯ  ನೇತೃತ್ವದಲ್ಲಿ ಮಧುಗಿರಿ ಪಟ್ಟಣದ ನಿರೀಕ್ಷಣ ಮಂದಿರದಿಂದ  ಬೃಹತ್ ಪ್ರತಿಭಟನೆ ನಡೆಸಲಾಯಿತು.   ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಂ.ವಿ. ವೀರಭದ್ರಯ್ಯ,   ಕಾಟಾಚಾರದ ಕ್ಷಮೆ ಯಾಚನೆ ಈಗಿನ ಉದ್ವಿಗ್ನ ಸನ್ನಿವೇಶದಿಂದ ಪಾರಾಗುವ ನರಿ ಬುದ್ದಿಯ ರಾಜಣ್ಣನ ಈ ನಡೆಯಿಂದ ಯಾರೂ ಸಹ ಗೊಂದಲಕ್ಕೆ ಒಳಗಾಗುವುದು ಬೇಡ.  ಮುಂದೆ ಬರುವ 2023ರ ಚುನಾವಣೆಯಲ್ಲಿ ರಾಜಣ್ಣನವರಿಗೆ ಜಾತ್ಯತೀತ ಜನತಾದಳದ ಕಾರ್ಯಕರ್ತರು ತಕ್ಕ ಪಾಠ ಕಲಿಸುತ್ತಾರೆ ಎಂದು ತಿಳಿಸಿದರು. ವರದಿ: ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುರುವೇಕೆರೆ: ಪಟ್ಟಣದಲ್ಲಿರುವ ತಾಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ತಾಲೂಕಿನ ಹೆಸರಾಂತ ಪ್ರಿಯ ಆಂಗ್ಲ ಮಾಧ್ಯಮ ಶಾಲೆ, ವತಿಯಿಂದ ವಿಶ್ವ ವೈದ್ಯರ ದಿನವನ್ನು ಆಚರಣೆ ಮಾಡಲಾಯಿತು. ಶಾಲಾ ಮಕ್ಕಳಿಗೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯಗಳು ಯಂತ್ರೋಪಕರಣಗಳು ವಿವಿಧ ರೋಗಗಳ ವೈದ್ಯರುಗಳನ್ನು ಪರಿಚಯ ಮಾಡಿಕೊಳ್ಳಲಾಯಿತು  ಮತ್ತು ಆಕ್ಸಿಜನ್ ಪ್ಲಾಂಟ್ ವೀಕ್ಷಿಸಲು ಅವಕಾಶ ಮಾಡಿಕೊಡಲಾಯಿತು. ನಂತರ ಶಾಲಾ ಮಕ್ಕಳಿಗೆ  ಕೆಕ್ ವಿತರಿಸಲಾಯಿತು ಇದೇ ಸಂದರ್ಭದಲ್ಲಿ ತುರುವೇಕೆರೆ ಸಾರ್ವಜನಿಕ ಆಸ್ಪತ್ರೆಯ ವೈದ್ಯರುಗಳಾದ ಡಾ.ಮುರುಳಿ,  ಡಾ.ಮಧುಕರ್ ಹಾಗೂ ಭಾಸ್ಕರ್ ರವರನ್ನು ಪ್ರಿಯಾ ಆಂಗ್ಲ ಶಾಲೆಯ ಆಡಳಿತ ಮಂಡಳಿಯಿಂದ ಸನ್ಮಾನಿಸಲಾಯಿತು ಈ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಹರಿಪ್ರಸಾದ್,  ಡಾ. ಸೌಮ್ಯ,  ಡಾ.ನವೀನ್  ಹಾಗೂ ಪ್ರಿಯಾ ಆಂಗ್ಲ ಶಾಲೆಯ ಶಿಕ್ಷಕ ವೃಂದ ಹಾಜರಿದ್ದರು. ವೈದ್ಯರು, ವಿದ್ಯಾರ್ಥಿಗಳು ಹಾಜರಿದ್ದರು. ವರದಿ: ಸುರೇಶ್ ಬಾಬು,  ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುಮಕೂರು: ಜನಪ್ರತಿನಿಧಿಯಾಗಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಾದ ಗ್ರಾಮ ಪಂಚಾಯತ್ ಸದಸ್ಯನೋರ್ವ, ಮಹಿಳಾ ಪಿಡಿಒ ಜೊತೆಗೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಗ್ರಾ.ಪಂ. ಸದಸ್ಯನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಜೆಸಿ  ಪುರ ಗ್ರಾಮ ಪಂಚಾಯತಿಯಲ್ಲಿ ಈ ಘಟನೆ ನಡೆದಿದ್ದು, ಮಹಿಳಾ ಪಿಡಿಓ ಕೈಗೆ ಮುತ್ತಿಡುವುದು, ಕೈ ಹಿಡಿದೆಳೆಯುವುದು, ಅವರು ಕುಳಿತುಕೊಳ್ಳುತ್ತಿದ್ದ ಸ್ಥಳಕ್ಕೆ ಬಂದು ಕಿರುಕುಳ ನೀಡುವುದು ವಿಡಿಯೋದಲ್ಲಿ ಸೆರೆಯಾಗಿದೆ. ಪಿಡಿಒ ಕೆಲಸ ನಿರ್ವಹಿಸುತ್ತಿರುವ ಸ್ಥಳದ ಮುಂಭಾಗ ಸಾರ್ವಜನಿಕರು ಕುಳಿತುಕೊಳ್ಳಲು ಇಡಲಾಗಿರುವ ಕುರ್ಚಿಯಲ್ಲಿ ಕುಳಿತುಕೊಂಡಿರುವ ಗ್ರಾ.ಪಂ.ಸದಸ್ಯ ಪಿಡಿಒ ಕೆಲಸ ನಿರ್ವಹಿಸಲು ಸಾಧ್ಯವಾಗದಂತೆ ಕಿರುಕುಳ ನೀಡುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಪಿಡಿಒ ತಮ್ಮ ಕರ್ತವ್ಯದಲ್ಲಿ ನಿರತರಾಗಿದ್ದರೆ, ಗ್ರಾ.ಪಂ.ಸದಸ್ಯ ಪಿಡಿಒ ಜೊತೆಗೆ ದುರ್ವರ್ತನೆ ತೋರುತ್ತಿರುವುದು ಕಂಡು ಬಂದಿದೆ. ಕೈ ಹಿಡಿದೆಳೆದು ಕಿರುಕುಳ ನೀಡುತ್ತಿರುವುದು ಕಂಡು ಬಂದಿದೆ. ಗ್ರಾ.ಪಂ. ಸದಸ್ಯನ ದುರ್ವರ್ತನೆಯ ಮುಂದೆ ಪಿಡಿಓ ಅಸಹಾಯಕಳಾಗಿರುವುದು ಕಂಡು ಬಂದಿದ್ದು, ಕರ್ತವ್ಯ ನಿರತ ಪಿಡಿಓ ಮೇಲೆ ಕಚೇರಿಯಲ್ಲೇ ಲೈಂಗಿಕ ದೌರ್ಜನ್ಯಗಳು ನಡೆದರೆ,  ಇನ್ನು…

Read More

ನವದೆಹಲಿ: ಮೆಟ್ಟಿಲಿಂದ ಇಳಿಯುವಾಗ ಜಾರಿ ಬಿದ್ದ ಮಹಿಳೆಯೊಬ್ಬರು ಮಾಂಗಲ್ಯ ಸರ ಗಂಟಲಿಗೆ ಬಿಗಿದ ಪರಿಣಾಮ ದಾರುಣವಾಗಿ ಸಾವನ್ನಪ್ಪಿದ್ದಾರೆ.  ದೆಹಲಿಯ ಗಾಂಧಿನಗರ ಪ್ರದೇಶದಲ್ಲಿ ಶುಕ್ರವಾರ ಘಟನೆ ನಡೆದಿದ್ದು, 22 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಗಾಂಧಿನಗರದ ರಘುವೀರ್ ಪುರ 2ರ ಲೇನ್ 4ರ ಮನೆಯಲ್ಲಿ ಮಹಿಳೆಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಮಧ್ಯಾಹ್ನ 12.39ಕ್ಕೆ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ಬಂದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ ವೇಳೆ ಘಟನೆ ಬೆಳಕಿಗೆ ಬಂದಿತ್ತು. ಘಟನೆಯ ಸಮಯದಲ್ಲಿ ಮಹಿಳೆಯ ನಾಲ್ಕು ವರ್ಷದ ಮಗ ಅವಳೊಂದಿಗೆ ಇದ್ದ. ತನ್ನ ತಾಯಿ ಬಟ್ಟೆ ಒಣಗಲು ಟೆರೇಸ್‌ ಗೆ ಹೋಗಿದ್ದು, ಕೆಳಗೆ ಬರುವಾಗ ಮೆಟ್ಟಿಲಿನಿಂದ ಜಾರಿ ಬಿದ್ದಿದ್ದಾಳೆ ಈ ವೇಳೆ ಆಕೆ ಧರಿಸಿದ್ದ ಲಾಕೆಟ್‌ ನಿಂದ ಅವಳ ಗಂಟಲಿನ ಮೇಲೆ ಆಳವಾದ ಗಾಯವಾಗಿದೆ ಪರಿಣಾಮವಾಗಿ ಮಹಿಳೆ ಸಾವನ್ನಪ್ಪಿರುವುದಾಗಿ ಪೊಲೀಸರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಅಪರಾಧ ತಂಡಗಳು ಮತ್ತು ವಿಧಿವಿಜ್ಞಾನ ತಂಡಗಳು ಭೇಟಿ ನೀಡಿವೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಟಿಬಿ…

Read More

ಸಿಂಧನೂರು: ತಾಲೂಕಿನ ಸಿಂಗಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರೊಬ್ಬರು ಮಹಿಳೆಯೊಂದಿಗೆ ನಡೆಸಿರುವ ರಾಸಲೀಲೆಯ ವಿಡಿಯೋ ಎನ್ನಲಾಗಿರುವ ವಿಡಿಯೋ ವೈರಲ್ ಆಗಿದ್ದು, ಶಿಕ್ಷಕ ತಲೆಮರೆಸಿಕೊಂಡಿದ್ದಾನೆ ಎಂದು ವರದಿಯಾಗಿದೆ. ಮಹ್ಮದ್ ಹಜರುದ್ದೀನ್ ಎನ್ನುವ ಶಿಕ್ಷಕ ಮಹಿಳೆಯೊಂದಿಗೆ ರಾಸಲೀಲೆ ನಡೆಸಿ, ತಾನೇ ವಿಡಿಯೋ ಮಾಡಿಕೊಂಡಿದ್ದಾನೆ. ಎರಡು ದಿನದ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದ್ದಂತೆ ಶಿಕ್ಷಕ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಸಿಂಗಾಪುರದಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕ, ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಮನೆ ಮಾಡಿಕೊಂಡಿದ್ದ. ಅಲ್ಲಿಯೇ ಟ್ಯೂಷನ್ ಕೂಡ ನಡೆಸುತ್ತಿದ್ದ. ಗೃಹಿಣಿಯೊಬ್ಬರನ್ನು ಕಾರಟಗಿಯ ತನ್ನ ನಿವಾಸಕ್ಕೆ ಕರೆಯಿಸಿಕೊಂಡು ರಾಸಲೀಲೆ ನಡೆಸಿದ್ದ ಎನ್ನಲಾಗುತ್ತಿದೆ. ಘಟನೆಯ ಬಳಿಕ ಬಿಇಒ ಹಾಗೂ ಡಿಡಿಪಿಐ ಅವರಿಗೂ ದೂರು ಸಲ್ಲಿಕೆಯಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು: ರಾಜ್ಯದಲ್ಲಿ ಹಾಳಾಗಿರುವ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಸರಿ ಮಾಡುವುದು ಹಾಗೂ ಶಾಲಾ ಕಟ್ಟಡಗಳನ್ನು ದುರಸ್ಥಿ ಮಾಡಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರಕ್ಕೆ ಒಂದು ತಿಂಗಳು ಗಡುವು ನೀಡಿದ್ದಾರೆ. ಸರಕಾರಿ ಪ್ರಾಥಮಿಕ ಹಾಗೂ ಕಿರಿಯ ಶಾಲೆಗಳ ದುಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಅವರು, ಈ ಕುರಿತು ಸರಣಿ ಟ್ವೀಟ್ ಮಾಡಿದ್ದು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕರ್ನಾಟಕದ ಸರ್ಕಾರಿ ಶಾಲೆಗಳ ದೃಶ್ಯವೈಭವ ನೋಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ‘ಮಾಳಿಗೆಗಳು ಸೋರುತ್ತಿವೆ. ಗೋಡೆಗಳು ಬಣ್ಣಗೆಟ್ಟಿವೆ. ಕಿಟಕಿ, ಬಾಗಿಲು ಹಾಳಾಗಿವೆ. ಕುಡಿಯಲು ನೀರಿಲ್ಲ. ಮಕ್ಕಳಿಗೆ ಶೌಚಾಲಯವೂ ಇಲ್ಲ. ಮಕ್ಕಳ ಜೀವಕ್ಕೆ ಗ್ಯಾರಂಟಿ ಇಲ್ಲ ಎಂದು ಕಿಡಿಕಾರಿದ್ದಾರೆ. ಬಿಜೆಪಿ ಬಣ್ಣಗೇಡು ವರಸೆಗೆ ಇದು ತಾಜಾ ಉದಾಹರಣೆ. ಹೇಳುವುದು ಒಂದು, ಮಾಡುವುದು ಇನ್ನೊಂದು. ಶಿಕ್ಷಣ ಕ್ಷೇತ್ರದಲ್ಲಿ ಬಿಜೆಪಿ ಸರ್ಕಾರ ಸೃಷ್ಟಿಸಿರುವ ಅರಾಜಕತೆ ಮಕ್ಕಳ ಕಲಿಕೆಯಲ್ಲಿ ಅಲ್ಲೋಲಕಲ್ಲೋಲ ಎಬ್ಬಿಸಿದೆ. ಪಠ್ಯಕ್ಕೆ ಕೇಸರಿ ಬಳಿದು ಕತ್ತರಿ ಹಾಕುವ ಅಕ್ಷರದ್ರೋಹಿ ಬಿಜೆಪಿ ಸರಕಾರಕ್ಕೆ ಬಣ್ಣಗೆಟ್ಟ ಶಾಲೆಗಳ…

Read More

ಶಿವಮೊಗ್ಗ: ಸಾಗರದಿಂದ ಯಲ್ಲಾಪುರಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ – ಸೈಕಲ್ ಡಿಕ್ಕಿ ಹೊಡೆದ ಪರಿಣಾಮ ಪತ್ರಿಕಾ ವಿತರಕ ಸ್ಥಳದಲ್ಲೆ ಮೃತಪಟ್ಟ ಘಟನೆ ಇಂದು ಬೆಳಗಿನ ಜಾವ ಸಾಗರದ ಪ್ರವಾಸಿ ಮಂದಿರದ ಬಳಿ ನಡೆದಿದೆ. ಬೆಳಲಮಕ್ಕಿ ನಿವಾಸಿ ಗಣೇಶ್ (25) ಮೃತಪಟ್ಟ ದುರ್ದೈವಿ. ಗಣೇಶ ಪಟ್ಟಣದಲ್ಲಿ ಪತ್ರಿಕಾ ವಿತರಕನಾಗಿ ಕಳೆದ 10 ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಇಂದು ಬೆಳಗಿನ ಜಾವ 5 ಗಂಟೆಗೆ ಪತ್ರಿಕೆ ವಿತರಿಸಲು ಹೋಗುವಾಗ ಬಸ್ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸೈಕಲ್ ಹಿಂಬದಿಯ ಸವಾರ ರಾಹುಲ್‌ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ನವದೆಹಲಿ: ಮೋದಿ ನೋಟ್ ಬ್ಯಾನ್ ಮಾಡಿದ್ರು. ಕಪ್ಪು ಹಣ ನಿರ್ನಾಮ ಮಾಡ್ತೆವೆ ಅಂದ್ರು. ಭ್ರಷ್ಟಾಚಾರ ಕಡಿಮೆ ಆಗಿದೇಯಾ.? ಕಪ್ಪು ಹಣ ನಿಂತಿಲ್ಲ, ಕೇವಲ ಭಾಷಣ ಮಾತ್ರ ಮಾಡಿದ್ರು. ಕೋಟಾ‌ನೋಟು‌ ಮತ್ತು ಬ್ಲಾಕ್ ಮನಿ ಬಗ್ಗೆ ಮೋದಿ ‌ಹೇಳಬೇಕು. ಅದ್ರೆ ಮೋದಿ ಇಲ್ಲಿಯವರೆಗೆ ಮಾತೇ ಆಡಿಲ್ಲ  ಎಂದು  ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಿ 8 ವರ್ಷ ಪೂರೈಸಿದ ಹಿನ್ನೆಲೆ, ಕೇಂದ್ರ ಸರ್ಕಾರದ ವಿರುದ್ಧ ವರುಷ ಎಂಟು ಅವಾಂತರ ನೂರೆಂಟು ಎಂಬ ಪುಸ್ತಕ ಬಿಡುಗಡೆ ಮಾಡಿ ವಿಧಾನಸೌಧದಲ್ಲಿ ಅವರು ಮಾತನಾಡುತ್ತಿದ್ದರು. ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ 8 ವರ್ಷ ಕಳೆಯುತ್ತಿದೆ. ಇಡೀ ದೇಶದಲ್ಲಿ ಪ್ರಧಾನಿ ಮೋದಿ ತಮ್ಮ 8 ವರ್ಷ ಪೂರೈಸಿದ ಹಿನ್ನೆಲೆ ಸಂಭ್ರಮಾಚರಣೆ ಮಾಡಿಕೊಳ್ಳುತ್ತಿದ್ದಾರೆ. ಚುನಾವಣೆಗೂ ಮುನ್ನ ಮೋದಿ ಅವರು ಜನರಿಗೆ ಏನ ಭರವಸೆ ಕೊಟ್ಟಿದ್ರು..? ಜನರಿಗೆ ಕೊಟ್ಟ ಭರವಸೆ ಈಡೇರಿಸಿದೇವೆ ಎಂದು ದೊಡ್ಡ ದೊಡ್ಡ ಜಾಹೀರಾತು ಹಾಕಿದ್ದಾರೆ. ರಾಜ್ಯದಲ್ಲಿ ಕೂಡ ದೊಡ್ಡ ದೊಡ್ಡ ಜಾಹೀರಾತು…

Read More

ತುಮಕೂರು: ಮಾಜಿ ಪ್ರಧಾನಿ ದೇವೇಗೌಡ ವಿರುದ್ಧ ಮಾಜಿ ಶಾಸಕ ಕೆ.ಎನ್.ರಾಜಣ್ಣ ನೀಡಿದ ಅವಹೇಳನಾಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಇದೇ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ. ಮಧುಗಿರಿ ಐಬಿ ಬಳಿ ಘಟನೆ ನಡೆದಿದ್ದು, ಪ್ರತಿಭಟನೆ ನಡೆಸಲು ಕಾರ್ಯಕರ್ತರು ಆಗಮಿಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಪರಸ್ಪರ ತೀವ್ರ ವಾಗ್ವಾದ ನಡೆಯಿತು. ಮೆರವಣಿಗೆಗೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ಹೇಳಿದ್ದರಿಂದಾಗಿ ಪೊಲೀಸರು ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆಯಿತು. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಹಿರಿಯೂರು: ಸರ್ಕಾರ ಹೊರಗುತ್ತಿಗೆದಾರ ನೌಕರರನ್ನು ಖಾಯಂಗೊಳಿಸಲು ಒತ್ತಾಯಿಸಿ, ನಗರಸಭೆ ಆವರಣದಲ್ಲಿ  ಪೌರಕಾರ್ಮಿಕರ ಅಧ್ಯಕ್ಷರಾದ ದುರ್ಗೇಶ್ ಅಧ್ಯಕ್ಷತೆಯಲ್ಲಿ ಹಿರಿಯೂರು ನಗರಸಭೆಯ ಗುತ್ತಿಗೆ ನೌಕರರಿಂದ ಬೃಹತ್  ಪ್ರತಿಭಟನೆ ನಡೆಸಿದರು. ನಗರಸಭಾ ಸಂಸ್ಥೆಯಲ್ಲಿ ಹೊರಗುತ್ತಿಗೆ ಪದ್ಧತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್ ಗಳು, ವಾಟರ್ ಮ್ಯಾನ್ ಗಳನ್ನು ಸರ್ಕಾರ ಖಾಯಂಗೊಳಿಸಬೇಕು ಎಂಬುದಾಗಿ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷರಾದ ಆರ್.ಎಲ್.ರಾಜಶೇಖರ್ ರವರನ್ನು ಒತ್ತಾಯಿಸಿದರು. ಚಿತ್ರದುರ್ಗ  ಜಿಲ್ಲೆಯ ಹಿರಿಯೂರು ನಗರದ ನಗರಸಭೆ ಆವರಣದಲ್ಲಿ ಕರ್ನಾಟಕ ರಾಜ್ಯ ಪೌರನೌಕರರ ಸಂಘ, ಹಿರಿಯೂರು ಸಮಿತಿ ಹಾಗೂ ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘ ಹಿರಿಯೂರು ಶಾಖೆಯ ನೇತೃತ್ವದಲ್ಲಿ ಜುಲೈ 1 ಶುಕ್ರವಾರದಿಂದ ರಾಜ್ಯಾದ್ಯಂತ ನಗರ ನೈರ್ಮಲ್ಯ, ಸ್ವಚ್ಛತೆ ಸ್ಥಗಿತಗೊಳಿಸಿ, ಹಮ್ಮಿಕೊಳ್ಳಲಾಗಿದ್ದ ಅನಿರ್ಧಿಷ್ಟಾವಧಿ ಪ್ರತಿಭಟನೆಯಲ್ಲಿ ಪೌರಕಾರ್ಮಿಕರು,  ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್ ಗಳು, ವಾಟರ್ ಮ್ಯಾನ್ ಗಳು  ಭಾಗವಹಿಸಿದ್ದರು. ಇದೇ ವೇಳೆ ನಮ್ಮ ತುಮಕೂರು ಜೊತೆಗೆ ಮಾತನಾಡಿದ ಪ್ರತಿಭಟನಾಕಾರರು,  ನಾವುಗಳು ಗುತ್ತಿಗೆ ನೌಕರರಾಗಿ ಸುಮಾರು 10-15 ವರ್ಷಗಳ…

Read More