Subscribe to Updates
Get the latest creative news from FooBar about art, design and business.
- ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ
- ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಿ: ಶಾಸಕ ಅನಿಲ್ ಚಿಕ್ಕಮಾದು ಕಿವಿಮಾತು
- ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ
- ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ
- ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ
- ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ
- ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ
- ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.
Author: admin
ಗುಬ್ಬಿ: ಗುಬ್ಬಿ ತಾಲೂಕಿನಲ್ಲಿ ಜಾತಿ ದೌರ್ಜನ್ಯಕ್ಕೊಳಗಾಗಿ ಇಬ್ಬರು ಯುವಕರು ಹತ್ಯೆಗೀಡಾದ ಘಟನೆಗೆ ಸಂಬಂಧಿಸಿದಂತೆ ಬಹುಜನ ಸಮಾಜ ಪಕ್ಷದ ತುಮಕೂರು ಜಿಲ್ಲಾ ಸಮಿತಿಯ ನಿಯೋಗ ಶನಿವಾರ ಗುಬ್ಬಿ ತಾಲೂಕಿಗೆ ಭೇಟಿ ನೀಡಿತು. ನಿಯೋಗದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಎಂ. ಗುರುಮೂರ್ತಿ, ರಾಜ್ಯ ಕಾರ್ಯದರ್ಶಿ ಸೂಲಯ್ಯ , ಜಿಲ್ಲಾಧ್ಯಕ್ಷ ರಾಜಸಿಂಹ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಗಧಾಮಯ ಇದ್ದರು. ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಪೆದ್ದನಹಳ್ಳಿ ಗ್ರಾಮದಲ್ಲಿ ಜಾತಿ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ.ಗಿರೀಶ್ ಅವರ ಅಂತ್ಯ ಸಂಸ್ಕಾರಕ್ಕೆ ಅವರ ತೋಟಕ್ಕೆ ಮತ್ತು ಮನೆಗೆ ಭೇಟಿ ಕೊಟ್ಟು ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಅವರಿಗೆ ಧೈರ್ಯ ತುಂಬಲಾಯಿತು. ಘಟನೆ ಬಗ್ಗೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಮಾತನಾಡಿ, ಯಾವುದೇ ಒತ್ತಡಕ್ಕೆ ಮಣಿಯದೆ ಆರೋಪಿಗಳ ದಸ್ತಗಿರಿಗೆ ಒತ್ತಾಯಿಸಲಾಯಿತು. ಸಂತ್ರಸ್ತರಿಗೆ ಪೊಲೀಸ್ ರಕ್ಷಣೆ ಒದಗಿಸಲು ಸೂಚಿಸಲಾಯಿತು. ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮತ್ತು ಗುಬ್ಬಿ ತಾಲೂಕು ಸಮಾಜ ಕಲ್ಯಾಣ ಅಧಕಾರಿಗಳ ಜೊತೆ ಮಾತನಾಡಿ ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ವಿಳಂಬ ಮಾಡದೇ…
ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರಿನ ಬದಲು ಮಹನೀಯರ ಹೆಸರನ್ನು ಇಡುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಶಿವಮೊಗ್ಗದಲ್ಲಿ ನೂತನವಾಗಿ ವಿಮಾನ ನಿಲ್ದಾಣವಾಗುತ್ತಿದೆ.ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ. ಹೀಗಾಗಿ ಅಂತವರ ಹೆಸರನ್ನಿಡುವುದು ಸೂಕ್ತ ಎಂದು ಬಿಎಸ್ವೈ ಪತ್ರದಲ್ಲಿ ತಿಳಿಸಿದ್ದಾರೆ. ಶಿವಮೊಗ್ಗ ವಿಮಾನನಿಲ್ದಾಣ ನಿರ್ಮಾಣ 2006ರಲ್ಲೇ ಆರಂಭಗೊಂಡಿತ್ತು. ಆದರೆ ಕಾಮಗಾರಿ ವಿಳಂಬವಾಯ್ತು. ಬೆಂಗಳೂರಿನ ನಂತರ ಅತಿಹೆಚ್ಚು ಉದ್ದದ ರನ್ ವೇ ಹೊಂದಿರುವ ಏರ್‌ಪೋರ್ಟ್ ಶಿವಮೊಗ್ಗ ವಿಮಾನ ನಿಲ್ದಾಣವಾಗಿದೆ. ಇದು ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣದ ಸೌಲಭ್ಯ ಹೊಂದಿರಲಿದೆ ಎಂದು ಬಿಎಸ್ವೈ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಾಸನ: ಸಾಲದ ಹಣವನ್ನು ವಾಪಸ್ ಕೊಡುವಂತೆ ಕೇಳಿದಾಗ ಬಲವಂತವಾಗಿ ಮದ್ಯ ಕುಡಿಸಿ , ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಹೊಳೆನರಸೀಪುರ ತಾಲೂಕು ಪರಸನಹಳ್ಳಿಯಲ್ಲಿ ಎಂಬಲ್ಲಿ ನಡೆದಿದೆ. ಪರಸನಹಳ್ಳಿ ಗ್ರಾಮದ ನಂಜೇಗೌಡ ಎಂಬವರು ತಮ್ಮ ಪಕ್ಕದ ಬಂಡಿಹಳ್ಳಿ ಗ್ರಾಮದ ಶಿವಶಂಕರ ಅವರಿಗೆ ಮನೆ ಕಟ್ಟಲು 1.43 ಲಕ್ಷ ರೂ. ಸಾಲ ಕೊಟ್ಟಿದ್ದರು. ಇವರು ಕೊಟ್ಟ ಸಾಲವನ್ನು ವಾಪಸ್ ಕೊಡುವಂತೆ ಶಿವಶಂಕರ ಅವರ ಮನೆಯ ಹತ್ತಿರ ಹೋಗಿ ಕೇಳಿದ್ದರು. ಆದರೆ ಶಿವಶಂಕರ ಅವರ ತಾಯಿ ಭಾಗ್ಯಮ್ಮ ಮತ್ತು ಅವರ ಹೆಂಡತಿ ರೇಣುಕಾ ಎಂಬವರು ಹಣ ಕೊಡುತ್ತೇವೆ ಎಂದು ಉಪಾಯದಿಂದ ನಂಜೇಗೌಡ ಅವರನ್ನು ಮನೆ ಒಳಗೆ ಕರೆದು ಬಾಗಿಲು ಹಾಕಿಕೊಂಡು ಮದ್ಯ ಕುಡಿಸಿ ದೊಣ್ಣೆಯಿಂದ ಹೊಡೆದಿದ್ದಾರೆ. ನಂಜೇಗೌಡರವರು ಮನೆಗೆ ವಾಪಸ್ ಬರದೆ ಇದ್ದಾಗ ಅವರ ಮಗ ಗಂಗಾಧರ ಮತ್ತು ಕಲ್ಲೇನಹಳ್ಳಿ ಸುನಿಲ್ ಎಂಬುವರು ಶಿವಶಂಕರ ಅವರ ಮನೆಯ ಹತ್ತಿರ ನೋಡಿದಾಗ ನಂಜೇಗೌಡರು ರಕ್ತಸ್ರಾವದಿಂದ ಬಿದ್ದು ಒದ್ದಾಡುತ್ತಿದ್ದರು. ಮಗ ಗಂಗಾಧರನ ಬಳಿ ಆರೋಪಿಗಳು ಹಲ್ಲೆ ನಡೆಸಿದ ವಿಷಯ…
ನವದೆಹಲಿ: ಓಲಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆ ದೇಶದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು,ಓಲಾ ಕಂಪನಿಯು ತನ್ನ 1,441 ವಾಹನಗಳನ್ನು ಭಾನುವಾರ ಹಿಂಪಡೆದಿದೆ. ‘ಮುನ್ನೆಚ್ಚರಿಕಾ ಕ್ರಮವಾಗಿ ನಾವು ನಿರ್ದಿಷ್ಟ ಬ್ಯಾಚ್‌ನ ವಾಹನಗಳನ್ನು ಪರಿಶೀಲಿಸುತ್ತೇವೆ. ಆದ್ದರಿಂದ 1,441 ವಾಹನಗಳನ್ನು ಸ್ವಯಂಪ್ರೇರಿತವಾಗಿ ಹಿಂಪಡೆಯುತ್ತಿದ್ದೇವೆ’ ಎಂದು ಓಲಾ ಕಂಪೆನಿ ತಿಳಿಸಿದೆ. ಹಿಂಪಡೆದ ಸ್ಕೂಟರ್‌ಗಳನ್ನು ಎಂಜಿನಿಯರ್‌ಗಳು ಪರಿಶೀಲಿಸುತ್ತಾರೆ. ಬ್ಯಾಟರಿ ವ್ಯವಸ್ಥೆಗಳು, ಥರ್ಮಲ್ ಸಿಸ್ಟಮ್‌ಗಳು ಮತ್ತು ಸುರಕ್ಷತಾ ವ್ಯವಸ್ಥೆಗಳಲ್ಲಿನ ಸಮಸ್ಯೆಯನ್ನು ಪತ್ತೆ ಮಾಡಲಿದ್ದಾರೆ’ ಎಂದು ಸಂಸ್ಥೆ ತಿಳಿಸಿದೆ. ಬ್ಯಾಟರಿ ವ್ಯವಸ್ಥೆಗಳು ಯುರೋಪಿನ ‘ಇಸಿಇ-136’ ಮಾನದಂಡಗಳಿಗೆ ಅನುಗುಣವಾಗಿವೆ. ಜತೆಗೆ, ಭಾರತದ ಇತ್ತೀಚಿನ ಪ್ರಸ್ತಾವಿತ ‘ಎಐಎಸ್-156’ಗೆ ಅನುಗುಣವಾಗಿ ಪರೀಕ್ಷಿಸಲ್ಪಟ್ಟಿದೆ’ ಎಂದು ಓಲಾ ಹೇಳಿದೆ. ಅಗ್ನಿ ಅವಘಡಗಳನ್ನು ಪರಿಶೀಲಿಸಲು ಸರ್ಕಾರ ಸಮಿತಿಯನ್ನು ರಚಿಸಿದೆ. ಕಂಪನಿಗಳು ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದರೆ ದಂಡ ವಿಧಿಸುವುದಾಗಿಯೂ ಸರ್ಕಾರ ಎಚ್ಚರಿಕೆಯನ್ನು ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೋವಿಡ್ ಹೊಸ ರೂಪಾಂತರ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಪಾಯಕಾರಿ ಪರಿಸ್ಥಿತಿಯನ್ನು ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಎಚ್ಚೆತ್ತುಕೊಂಡಿದ್ದು, ಏಪ್ರಿಲ್ 27ಕ್ಕೆಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಸರ್ಕಾರ ನಿರ್ಧರಿಸಿದೆ. ಕೋವಿಡ್ 1 ಮತ್ತು 2ನೇ ಅಲೆಯ ಪರಿಣಾಮ ಜನಜೀವನ, ಆರ್ಥಿಕ ವ್ಯವಸ್ಥೆ ಕುಸಿದು ಹೋಗಿ ಜನರು ಸಂಕಷ್ಟ ಎದುರಿಸಿದ್ದಾರೆ. ಲಾಕ್‍ಡೌನ್ ಸೇರಿದಂತೆ ನಾನಾ ರೀತಿಯ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿತ್ತು. ಕೋರೊನಾ ಮೂರನೆ ಅಲೆಯಿಂದ ಹೆಚ್ಚಿನ ಹಾನಿಯಾಗಲಿಲ್ಲ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್‍ನ ಎಲ್ಲಾ ನಿರ್ಬಂಧಗಳನ್ನು ತೆಗೆದು ಹಾಕಿವೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರದಿಯ ಪ್ರಕಾರ ರಾಜ್ಯದಲ್ಲಿ ಈಗಾಗಲೇ ಕೋವಿಡ್ ರೂಪಾಂತರದ ಸೋಂಕುಗಳು ಕಾಣಿಸಿಕೊಂಡಿವೆ. ಹೀಗಾಗಿ ನಾಲ್ಕನೇ ಅಲೆ ಎದುರಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯ ಸರ್ಕಾರಗಳ ಜೊತೆ ಏ.27ರಂದು ವರ್ಚುವಲ್ ಮಾದರಿಯಲ್ಲಿ ಸಭೆ ನಡೆಸಲಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೋವಿಡ್ ಜಾಗೃತಿಗೆ…
ಮಧುಗಿರಿ: 2021- 22ನೇ ಸಾಲಿನ ರಾಷ್ಟ್ರೀಯ ವಿಕಾಸ ಯೋಜನೆಯಡಿ ರಸಮೇವು ಘಟಕ ಸ್ಥಾಪಿಸಲು ತಾಲೂಕಿನ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಮೇ 10ರೊಳಗೆ ತಮ್ಮ ಹತ್ತಿರದ ಪಶು ಆಸ್ಪತ್ರೆಗಳಿಂದ ಅರ್ಜಿ ಪಡೆದು ನಿಗದಿತ ದಾಖಲಾತಿಯೊಂದಿಗೆ ಹತ್ತಿರದ ಪಶು ಆಸ್ಪತ್ರೆಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಧುಗಿರಿ ತಾಲೂಕಿನ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಜಿ.ಗಿರೀಶ್ ಬಾಬು ರೆಡ್ಡಿ ತಿಳಿಸಿದ್ದಾರೆ. ಮಧುಗಿರಿ ತಾಲೂಕಿನಿಂದ 47 ಸಾಮನ್ಯ ವರ್ಗ, 18 ಪರಿಶಿಷ್ಟ ಜಾತಿ, 9 ಪರಿಶಿಷ್ಟ ಪಂಗಡದ ಫಲಾನುಭವಿಗಳನ್ನು ಶಾಸಕರ ಅಧ್ಯಕ್ಷತೆಯಲ್ಲಿನ ಆಯ್ಕೆ ಸಮಿತಿಯಿಂದ ಆಯ್ಕೆ ಮಾಡಲಾಗುವುದು. ಆಯ್ಕೆ ಮಾಡಲಾದ ಪ್ರತಿ ಫಲಾನುಭವಿಗಳಿಗೆ 5 ಕೆ.ಜಿ. ಆಫ್ರಿಕನ್ ಟಾಲ್ ಮೇವಿನ ಬೀಜ, ಒಂದು ಪ್ಲಾಸ್ಟಿಕ್ ಶೀಟ್, 100 ಕೆ.ಜಿ.ಸಾಮರ್ಥ್ಯದ 20 ಸೈಲೋ ಬ್ಯಾಗ್ ಗಳು ಅಥವಾ 500 ಕೆಜಿ ಸಾಮರ್ಥ್ಯದ 4 ಸೈಲೋ ಬ್ಯಾಕ್ ಗಳನ್ನು ಉಚಿತವಾಗಿ ನೀಡಲಾಗುವುದು. ಅರ್ಜಿದಾರರು ಮೇವು ಬೆಳೆಯಲು ಭೂಮಿ ಹೊಂದಿರಬೇಕು. Fruits ID ಹೊಂದಿರಬೇಕು. ಕಡ್ಡಾಯವಾಗಿ 2…
ವಿಶೇಷ ವರದಿ: ತುಮಕೂರು: ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರ ಹತ್ಯೆ ತುಮಕೂರು ತಾಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಘಟನೆಯ ನಂತರ ಗ್ರಾಮದಲ್ಲಿ ಇದೀಗ ಮೌನ ಆವರಿಸಿದ್ದು, ಸ್ಥಳೀಯ ಜನರು ಭೀತಿಗೊಂಡಿದ್ದಾರೆ. ಪೆದ್ದನಹಳ್ಳಿಯ ಪರಿಶಿಷ್ಟ ಜಾತಿಗೆ ಸೇರಿದ ಪಿ.ಎಂ.ಗಿರೀಶ್ (32), ಮಂಚಲದೊರೆ ಗ್ರಾಮದ ಪರಿಶಿಷ್ಟ ಪಂಗಡಕ್ಕೆ ಸೇರಿದ ಗಿರೀಶ್ (33) ಕೊಲೆಯಾದವರು. ಇದೇ ಗ್ರಾಮದ ಲಿಂಗಾಯತ ಸಮುದಾಯಕ್ಕೆ ಸೇರಿದ ನಂದೀಶ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ. ಶುಕ್ರವಾರ ಬೆಳಗ್ಗೆ ಗ್ರಾಮದ ನೀರಿನ ಕಟ್ಟೆಯ ಬಳಿಯಲ್ಲಿ ಈ ಇಬ್ಬರು ಯುವಕರ ಮೃತದೇಹ ಪತ್ತೆಯಾಗಿದೆ. ದಾರಿಹೋಕರು ನೀಡಿದ ಮಾಹಿತಿಯಿಂದಾಗಿ ಕುಟುಂಬಸ್ಥರಿಗೆ ವಿಚಾರ ತಿಳಿದು ಬಂದಿತ್ತು. ಇಬ್ಬರ ದೇಹದ ಮೇಲೆಯೂ ಗಂಭೀರವಾದ ಗಾಯಗಳಿದ್ದು, ತೀವ್ರವಾಗಿ ಹಲ್ಲೆ ನಡೆಸಿ ಹತ್ಯೆ ನಡೆಸಲಾಗಿದೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಶ್ವಾನದಳ ಕರೆಸಲಾಗಿದ್ದು. ಶ್ವಾನಗಳು ಹಲವು ಮನೆಗಳ ಬಳಿಗೆ ಹೋಗಿದ್ದವು. ಇದರಿಂದ ಆತಂಕಗೊಂಡ ಪೆದ್ದನಹಳ್ಳಿಯ ಕೆಲವು ಪುರುಷರು ಮನೆಗಳನ್ನು ತೊರೆದಿದ್ದಾರೆ ಎನ್ನಲಾಗಿದೆ. ಈ ಘಟನೆಯಿಂದಾಗಿ ಗ್ರಾಮದಲ್ಲಿ ಮೌನ ಆವರಿಸಿದೆ. ಕೃಷಿ ಪಂಪ್…
ಸರಗೂರು: ತಾಲ್ಲೂಕಿನ ಮೂಳ್ಳೂರು ಗ್ರಾ.ಪಂ. ಹಳೆಹೆಗ್ಗುಡಿಲು ಗ್ರಾಮದಲ್ಲಿ ಆನೆ ಹಾವಳಿ ಹೆಚ್ಚುತ್ತಿದ್ದು, ಮಾಜಿ ಗ್ರಾಮ ಪಂಚಾಯತಿ ಸದಸ್ಯರಾದ ಮಹದೇವನಾಯಕ ಅವರು ನೀರು ತರಲೆಂದು ಹೋಗುತ್ತಿದ್ದ ವೇಳೆ ಆನೆಗಳನ್ನು ಕಂಡು ಬೆಚ್ಚಿ ಬಿದ್ದು ಬೈಕ್ ನಿಂದ ಬಿದ್ದಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೈಕ್ ಗೆ ಹಾನಿಯಾಗಿದೆ. ಇಲ್ಲಿನ ಜನರಿಗೆ ಹಲವು ಬಾರಿ ಆನೆಗಳು ಎದುರಾಗಿವೆ ಎನ್ನಲಾಗುತ್ತಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎನ್ನುವ ಆಕ್ರೋಶದ ಮಾತುಗಳು ಕೇಳಿ ಬಂದಿವೆ. ಜನರು ಆನೆ ಹಾವಳಿಯ ಬಗ್ಗೆ ಬಂಡೀಪುರ ಅರಣ್ಯ ಅಧಿಕಾರಿಗಳಿಗೆ ತಿಳಿಸಿದರೆ , ಅವರು ಸರಗೂರಿನ ಅರಣ್ಯ ಅಧಿಕಾರಿಗಳಿಗೆ ಹೇಳಿ ಎಂದು ಹೇಳುತ್ತಾರೆ. ಸರಗೂರು ಅರಣ್ಯ ಇಲಾಖೆ ಅಧಿಕಾರಿಗಳು ನಾವು ಆನೆ ಕಾವಲುಗಾರರನ್ನು ಹಾಕಿದ್ದೇವೆ ಎಂದು ಹೇಳುತ್ತಾರೆ. ಆದರೆ ಆನೆ ಕಾವಲುಗಾರರು ಯಾವುದೇ ಕೆಲಸವನ್ನು ಮಾಡುತ್ತಿಲ್ಲ . ಮತ್ತೆ ಅರಣ್ಯ ಅಧಿಕಾರಿಗಳು ವ್ಯಾಪ್ತಿ ಸರಗೂರು ಭಾಗಕ್ಕೆ ಬರುವುದಿಲ್ಲ ಎಂದು ಹೇಳುತ್ತಾರೆ. ನಾವು ಕೇವಲ ಆನೆ ಕಾವಲುಗಾರರನ್ನು ಮಾತ್ರ ಹಾಕಬಹುದು ಎಂದು…
ಪಟ್ನಾ: ಇಫ್ತಾರ್ ಕೂಟದಲ್ಲಿ ಪಾಲ್ಗೊಂಡಿದ್ದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಸ್ಪಷ್ಟಪಡಿಸಿದರು. ಸ್ವಾತಂತ್ರ್ಯ ಹೋರಾಟಗಾರ ವೀರ್ ಕುನ್ವರ್ ಸಿಂಗ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಆರ್ ಜೆಡಿ ಮುಖಂಡರಾದ ರಾಬ್ಡಿದೇವಿ ಅವರ ನಿವಾಸದಲ್ಲಿ ಶುಕ್ರವಾರ ನಡೆದ ಇಫ್ತಾರ್ ಕೂಟದಲ್ಲಿ ಪಾಲ್ಗೊಂಡಿದ್ದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ. ಕಾರ್ಯಕ್ರಮದಲ್ಲಿ ಭಾಗವಹಿಸಲು ನನಗೆ ಆಹ್ವಾನ ಬಂದಿತ್ತು, ನಾನು ಹಾಜರಾಗಿದ್ದೆ ಎಂದು ಅವರು ಹೇಳಿದ್ದಾರೆ. ನಾವು ಕೂಡ ಇಫ್ತಾರ್ ಕೂಟಗಳನ್ನು ಆಯೋಜಿಸುತ್ತೇವೆ ಮತ್ತು ಎಲ್ಲರನ್ನೂ ಆಹ್ವಾನಿಸುತ್ತೇವೆ ಎಂದು ಅವರು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಬೆಂಗಳೂರು: 545 ಸಬ್ ಇನ್‌ಸ್ಪೆಕ್ಟರ್ ನೇಮಕಾತಿ ಅಕ್ರಮ ಪ್ರಕರಣವನ್ನು ಸರ್ಕಾರ ಈಗಾಗಲೇ ಸಿಐಡಿಗೆ ವಹಿಸಿದ್ದು, ಅದಕ್ಕೆ ಮುಕ್ತ ಅಧಿಕಾರ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಜಿಎಂಐಟಿ ಕಾಲೇಜಿನ ಆವರಣದಲ್ಲಿರುವ ಹೆಲಿಪ್ಯಾಡ್ ನಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರು, ಯಾವ ಮಟ್ಟದಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ಪರಿಶೀಲಿಸಲಾಗುವುದು. ಯಾವುದೇ ಪಕ್ಷದವರಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪರೀಕ್ಷಾ ಕೇಂದ್ರ, ಅಭ್ಯರ್ಥಿಗಳಿಗೆ ಸಹಾಯ ಮಾಡಿದ ಸೂಪರ್ ವೈಸರ್ ಗಳನ್ನು ಪತ್ತೆ ಹಚ್ಚಿ ಪೂರ್ಣ ಪ್ರಮಾಣದಲ್ಲಿ ತನಿಖೆ ಮಾಡಲಾಗುವುದು. ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿರುವ ಆಡಿಯೊದಲ್ಲಿ ಯಾರು, ಏನು ಮಾತನಾಡಿದ್ದಾರೆ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಹೇಳಿದರು. ಈ ವೇಳೆ ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಚನ್ನಪ್ಪ, ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ, ಪಾಲಿಕೆ ಆಯುಕ್ತ ವಿಶ್ವನಾಥ ಮುದ್ದಜ್ಜಿ, ಎಸ್ಪಿ ಸಿ.ಬಿ.ರಿಷ್ಯಂತ್ ಇದ್ದರು. ನಮ್ಮತುಮಕೂರು.ಕಾಂನ…