Subscribe to Updates
Get the latest creative news from FooBar about art, design and business.
- ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್
- ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ
- ತುಮಕೂರು | ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣಕ್ಕೆ ತಡೆಯಾಜ್ಞೆ
- ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
- ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
- ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
- ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
- ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್ ಕ್ಯಾಮೆರಾದಲ್ಲಿ ಹುಲಿ ಪತ್ತೆ!
Author: admin
ತುರುವೇಕೆರೆ: ತುರುವೇಕೆರೆ ವೃತ್ತ ನಿರೀಕ್ಷ ರಾದ ನವೀನ್ ಕುಮಾರ್ ಹಾಗೂ ಪಿ.ಎಸ್.ಐ. ಕೇಶವಮೂರ್ತಿ ಅವರ ಮಾರ್ಗದರ್ಶನದೊಂದಿಗೆ ತುರುವೇಕೆರೆ ಪಟ್ಟಣದಲ್ಲಿರುವ ಸಾರ್ವಜನಿಕ ತಾಲ್ಲೂಕು ಆಸ್ಪತ್ರೆಯಲ್ಲಿ ತುರುವೇಕೆರೆ ಪೊಲೀಸ್ ಠಾಣೆಯ ಸಿಬ್ಬಂದಿ ಮೊದಲ ವಾರದ ಕರ್ಫ್ಯೂ ಪ್ರಯುಕ್ತ ಕೊರೊನಾ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಸ್ವಯಂ ಪ್ರೇರಿತರಾಗಿ ಪರೀಕ್ಷೆ ಮಾಡಿಸಿಕೊಂಡರು ಈ ಸಂದರ್ಭದಲ್ಲಿ ತುರುವೇಕೆರೆಯ ಪೊಲೀಸ್ ಠಾಣೆಯ ಎ.ಎಸ್.ಐ. ಶಿವಲಿಂಗಪ್ಪ., ಎ. ಎಸ್.ಐ. ನಾಗರಾಜ್, ಮುಖ್ಯಪೇದೆಗಳಾದ ಉಮೇಶ್, ಶಂಭುಲಿಂಗಯ್ಯ, ಗುರುಮೂರ್ತಿ, ಪೋಲೀಸ್ ಗಳಾದ ಸುಪ್ರೀತ್, ಜಯರಾಮ್ ಹಾಗೂ ಮಹಿಳಾ ಸಿಬ್ಬಂದಿ ಜಲಜಾಕ್ಷಿ ಮುಂತಾದವರು ಹಾಜರಿದ್ದರು. ವರದಿ: ಸುರೇಶ್ ಬಾಬು.ಎಂ., ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೋಟೆ/ಸರಗೂರು: ಸರ್ವಧರ್ಮದ ಹೃದಯವಂತರು ಸೇವಾಸಂಸ್ಥೆಯ ಕಚೇರಿಯಲ್ಲಿ ಸೇವಾಸಂಸ್ಥೆಯ ಕ್ಯಾಲೆಂಡರ್ ಅನ್ನು ಶಾಸಕರಾದ ಅನಿಲ್ ಚಿಕ್ಕಮಾದು ಬಿಡುಗಡೆ ಮಾಡಿದರು, ಬಳಿಕ ಮಾತನಾಡಿದ ಅವರು, ಸೇವಾಸಂಸ್ಥೆಯು ಚಿಕ್ಕದೇವ್ ಹೆಚ್. ಜಿ. ಹೆಗ್ಗಡಾಪುರ ರವರ ನೇತೃತ್ವದಲ್ಲಿ ನೂರಾರು ಸರ್ವಧರ್ಮದ ಸ್ನೇಹಿತರು ಸೇರಿ ಸರ್ವಧರ್ಮದ ಮಹಾನ್ ನಾಯಕರ ಆದರ್ಶಗಳನ್ನು ಇಟ್ಟುಕೊಂಡು ಉತ್ತಮವಾದ ಸಾಮಾಜಿಕ ಕಳಕಳಿಯ ಸೇವಾಕಾರ್ಯಗಳನ್ನು ಮಾಡುತ್ತಿರುವುದು ಸಮಾಜದಲ್ಲಿ ಉತ್ತಮ ಬೆಳವಣಿಗೆ ಆಗಿದೆ. ಇಂತಹ ಉತ್ತಮ ಕಾರ್ಯಗಳು ಹೆಚ್ಚೆಚ್ಚು ಆಗಬೇಕು. ಮುಂದಿನ ದಿನಗಳಲ್ಲಿ ಸೇವಾಸಂಸ್ಥೆಗೆ ಕೈಲಾದ ಸಹಕಾರ ನೀಡುವುದಾಗಿ ತಿಳಿಸುತ್ತಾ,ಈ ಸೇವಾಸಂಸ್ಥೆಯನ್ನು ಉಳಿಸಿ ಬೆಳೆಸಿ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸತೀಶ್ ಆರಾಧ್ಯ ಮಾತನಾಡಿ, ಪ್ರಸ್ತುತ ಸನ್ನಿವೇಶದಲ್ಲಿ ಮೌಲ್ಯಗಳು ಕಡಿಮೆ ಆಗುತ್ತಿದ್ದು ಸರ್ವಧರ್ಮದವರು ಸೇರಿ ಕಷ್ಟದಲ್ಲಿರುವ ಕುಟುಂಬಗಳಿಗೆ ನೆರವು ನೀಡುತ್ತಾ, ಮಾನವೀಯತೆ ಮೆರೆಯುತ್ತಿರುವ ಹೃದಯವಂತರು ಸೇವಾಸಂಸ್ಥೆಯ ಕಾರ್ಯವನ್ನು ಪ್ರಶಂಶಿಸಿದರು. ಪತ್ರಕರ್ತರು ಬಸವರಾಜು, ಚಾ.ಶಿವಕುಮಾರ್, ಅಧ್ಯಕ್ಷ ಡಾ.ಜವರನಾಯಕ ಆಗತ್ತೂರು ರವರು ಮಾತಾನಾಡಿದರು. ಇದೇ ಸಂಧರ್ಭದಲ್ಲಿ ಸೇವಾಸಂಸ್ಥೆಯ ವತಿಯಿಂದ ಶಾಸಕರಾದ ಅನಿಲ್ ಚಿಕ್ಕಮಾದು, ಪತ್ರಕರ್ತರ ಸಂಘದ…
ಹಿರಿಯೂರು: ಕರ್ನಾಟಕ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಮಂಡಳಿಯು ಸೌಲಭ್ಯಗಳನ್ನು ಪಡೆಯಲು ಸಿ ಎಸ್ ಸಿ ( ಕಾಮನ್ ಸರ್ವಿಸ್ ಸೆಂಟರ್ ) ನ ಆನ್ ಲೈನ್ ನ ಮುಖಾಂತರ ಮಧ್ಯವರ್ತಿಗಳ ಮುಖಾಂತರ ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ಕಟ್ಟಡ ಕಾರ್ಮಿಕರ ಕಾರ್ಡ್ ಗಳು ನೋಂದಣಿಯಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸಹ ಇದರ ಬಗ್ಗೆ ತೀವ್ರವಾಗಿ ಗಮನ ನೀಡದೆ ಇರುವುದು ಬೇಸರದ ಸಂಗತಿಯಾಗಿದೆ ಎಂದು ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಶಿವಕುಮಾರ್ ವಿ. ಹೇಳಿದ್ದಾರೆ. ಕಟ್ಟಡ ಕಾರ್ಮಿಕರ ಇಲಾಖೆ ದೊರೆಯುವ ಸೌಲಭ್ಯಗಳು ಯಾವುದು ಸಹ ನಿಜವಾದ ಕಟ್ಟಡ ಕಾರ್ಮಿಕರಿಗೆ ದೊರೆಯದ ರೀತಿಯಲ್ಲಿ ಮಧ್ಯವರ್ತಿಗಳ ಕಾಟ ಹೆಚ್ಚುತ್ತಿದ್ದರೂ ಸಹ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಶಿವಕುಮಾರ್ ಆರೋಪಿಸಿದರು. ಸುಪ್ರಿಂ ಕೋರ್ಟ್ ಆದೇಶದಂತೆ ನಿಗದಿಪಡಿಸಿರುವಂತಹ ಕಟ್ಟಡ ಕಾರ್ಮಿಕರ ಕಲ್ಯಾಣಕ್ಕೆಂದೇ ಇರುವಂತಹ ಸೆಸ್ ಹಣವನ್ನು ಅವರಿಗಾಗಿಯೇ ಬಳಸಬೇಕು ಎಂಬ ನಿರ್ದೇಶನವಿದ್ದರೂ ಸಮೇತ ಇದ್ಯಾವುದಕ್ಕೂ ಸಹ ಮನ್ನಣೆ ಕೊಡದ ಸರ್ಕಾರ…
ಮಧುಗಿರಿ: ಭಾರತೀಯ ಜನತಾ ಪಾರ್ಟಿ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ನಿಯುಕ್ತಿಗೊಂಡಿರುವ ಬಿ.ಕೆ.ಮಂಜುನಾಥ್ ರವರು ಮಧುಗಿರಿ ನಗರದ ಗ್ರಾಮದೇವತೆ ಶ್ರೀ ದಂಡಿನ ಮಾರಮ್ಮ ದೇವಿಗೆ ಪೂಜಿ ಸಲ್ಲಿಸಿ, ನಗರದ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ನಂತರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವ ದೃಷ್ಟಿಯಿಂದ ಎರಡು ವಿಭಾಗಗಳನ್ನಾಗಿ ಮಾಡಲಾಗಿದೆ. ಶಿರಾ ಕ್ಷೇತ್ರದಲ್ಲಿ ನಮ್ಮ ಪಕ್ಷ ಮೊದಲ ಬಾರಿಗೆ ರಾಜೇಶ್ ಗೌಡ ರವರ ಆಯ್ಕೆಯಿಂದಾಗಿ ಬಿಜೆಪಿ ಪಕ್ಷವು ಖಾತೆ ತೆರೆದಿದೆ. ಮೋದಿಯವರು ,ಯಡಿಯೂರಪ್ಪ ಮತ್ತು ಬೊಮ್ಮಾಯಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದು ಅವರಿಗೆ ಶಕ್ತಿ ತುಂಬಬೇಕಿದೆ ಎಂದರು. ಇತ್ತೀಚಿಗೆ ಸಂಸದರಾದ ಜಿ.ಎಸ್. ಬಸವರಾಜು ರವರು ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿಯವರ ಬಗ್ಗೆ ಮಾತನಾಡಿದ್ದು ಸಂಸದರಿಗೆ ಕಾಂಗ್ರೆಸ್ ಪಕ್ಷದಂತೆ ವಯಸ್ಸಾಗಿ ಅರಳು-ಮರಲಾಗಿದೆ. ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ಇವರಿಬ್ಬರಲ್ಲಿ ಇರುವ ಅಸಮಾಧಾನವನ್ನು ಸರಿಪಡಿಸಲಾಗುವುದು. ಹಿಂದುಳಿದ ವರ್ಗಕ್ಕೆ ಸೇರಿದ ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಪಕ್ಷವು ಗುರುತಿಸಿದ್ದು, ಜ್ವಬ್ದಾರಿಯುತ ಸ್ಥಾನವನ್ನು ನೀಡಿ ಗೌರವಿಸಿದೆ ಕಾರ್ಯಕರ್ತರು…
ಗುಬ್ಬಿ: ತಾಲ್ಲೂಕಿನ ಬಾನಿಹಟ್ಟಿ ಗ್ರಾಮದಲ್ಲಿ ರಾಗಿ ಕಣದಲ್ಲಿ ಸಂಗ್ರಹಿಸಿದ ರಾಗಿ ಬಣವೆಗೆ ಕೆಲ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಶುಕ್ರವಾರ ಜರುಗಿದೆ. ಬಾನಿಹಟ್ಟಿ ಗ್ರಾಮದ ರೈತರಾದ ನಾಗಣ್ಣ, ಬಲ್ಲಯ್ಯ, ಶಾರದಮ್ಮ ಎಂಬುವರು, ತಮ್ಮ ಜಮೀನಿನಲ್ಲಿ ಬೆಳೆಯಲಾಗಿದ್ದ ಸುಮಾರು 4 ಟ್ರಾಕ್ಟರ್ ರಾಗಿ ತೆನೆಯನ್ನು, ಕಣ ಮಾಡಲು ಸಂಗ್ರಹಿಸಿದ್ದ ಬಣವೆಗೆ ಬೆಂಕಿ ಹಚ್ಚಿದ್ದಾರೆ ಎಂದು ರೈತರು ಅಳಲನ್ನು ತೋಡಿಕೊಂಡಿದ್ದಾರೆ. ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಅಗ್ನಿ ನಂದಿಸುವ ಕಾರ್ಯಕ್ಕೆ ಮುಂದಾದರು ಆದರೆ, ಅಷ್ಟರಲ್ಲೇ ಭಾರೀ ಪ್ರಮಾಣದಲ್ಲಿ ಹಾನಿ ನಡೆದಿತ್ತು. ಗ್ರಾಮಸ್ಥರು ಕೊಡ ಗಳಲ್ಲಿ ನೀರು ತಂದು ಬೆಂಕಿ ನಂದಿಸಲು ಸಾಕಷ್ಟು ಪರದಾಟ ನಡೆಸಿದರೂ, ಯಾವುದೇ ಪ್ರಯೋಜನ ವಾಗಲಿಲ್ಲ. ಘಟನೆ ಸಂಬಂಧ ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ತುರುವೇಕೆರೆ ಕ್ಷೇತ್ರದ ಶಾಸಕ ಮಸಾಲೆ ಜಯರಾಂ ಭೇಟಿ ನೀಡಿ ಕುಟುಂಬಸ್ಥರಿಗೆ ಸಂತ್ವಾನ ಹೇಳಿ ಪರಿಹಾರ ನೀಡುವ ಭರವಸೆ ನೀಡಿದ್ದು, ಈ ಮೂರು ಕುಟುಂಬಕ್ಕೆ ಒಂದು ವರ್ಷಕ್ಕೆ…
ತುಮಕೂರು: ಛಲವಾದಿ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ದ 2022ನೇ ನೂತನ ವರ್ಷದ ಕ್ಯಾಲೆಂಡರ್ ನ್ನು ಮಾಜಿ ಸಚಿವರಾದ ಡಾ.H. C.ಮಹದೇವಪ್ಪನವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಸಹಕಾರಿಯ ಅಭಿವೃದ್ಧಿಗೆ ಷೇರುದಾರರು ಮತ್ತು ಆಡಳಿತ ಮಂಡಳಿ ಜೊತೆಯಾಗಿ ಸ್ಪಂದಿಸಿದಲ್ಲಿ ಸಹಕಾರಿ ಅಭಿವೃದ್ಧಿ ಹೊಂದಲು ಸಹಕಾರಿಯಾಗುತ್ತದೆ ಎಂದು ಸೌಹಾರ್ದ ಸಹಕಾರಿಗೆ ಶುಭ ಹಾರೈಸಿದರು . ಇದೇ ಸಂದರ್ಭದಲ್ಲಿ ನೆಲಮಂಗಲ ಕ್ಷೇತ್ರದ ಶಾಸಕರಾದ ಡಾ.ಶ್ರೀನಿವಾಸಮೂರ್ತಿ ರವರು ಮಾತನಾಡಿ, ಛಲವಾದಿ ಪತ್ತಿನ ಸೌಹಾರ್ದ ಸಹಕಾರಿಯು ಎರಡನೇ ವರ್ಷ ದಲ್ಲಿ ಮುನ್ನೆಡೆಯುತ್ತಿರುವ ಬ್ಯಾಂಕ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬ್ಯಾಂಕ್ ಅಭಿವೃದ್ಧಿಗೆ ಸಮುದಾಯ ಸಹಕಾರ ಪಡೆದು ಮುನ್ನೆಡೆಯಿರಿ ಎಂದು ಸಲಹೆ ನೀಡಿ ಶುಭ ಕೋರಿದರು . ಮಾಜಿ ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ತುಮಕೂರು ಛಲವಾದಿ ಪತ್ತಿನ ಸೌಹಾರ್ದ ಸಹಕಾರಿ ನಿ.ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ನಿರ್ದೇಶಕರು ಉಪಸ್ಥಿತರಿದ್ದರು . ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ತುಮಕೂರು: ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಪ್ರತಿಭಟನೆ ಕಳೆದ 11 ದಿನಗಳಿಂದ ತುಮಕೂರು ಜಿಲ್ಲಾಧಿಕಾರಿಯ ಕಛೇರಿ ಬಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅತಿಥಿ ಶಿಕ್ಷಕರ ಪ್ರತಿಭಟನೆಯ ವೇಳೆ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಅವರು ತುಮಕೂರು ಜಿಲ್ಲಾಧಿಕಾರಿ ಕಚೇರಿ ಬಳಿಗೆ ತೆರಳಿ, ಪ್ರತಿಭಟನಾಕಾರರ ಸಮಸ್ಯೆಯನ್ನು ಆಲಿಸಿದರು. ಇನ್ನೂ ಇದೇ ವೇಳೆ ಅತಿಥಿ ಶಿಕ್ಷಕರ ಹೋರಾಟಕ್ಕೆ ಬೆಂಬಲ ಘೋಷಿಸಿದ ಅವರು, ತಕ್ಷಣವೇ ಅತಿಥಿ ಶಿಕ್ಷಕರಿಗೆ ನ್ಯಾಯ ಒದಗಿಸಲು ಸರ್ಕಾರ ಮುಂದಾಗುವಂತೆ ಒತ್ತಾಯಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿತ್ರದುರ್ಗ: ತುಮಕೂರು- ಚಿತ್ರದುರ್ಗ- ದಾವಣಗೆರೆ ನೇರ ರೈಲ್ವೆ ಮಾರ್ಗದ ಕಾಮಗಾರಿಯನ್ನು ಮಾರ್ಚ್ ತಿಂಗಳಿನಲ್ಲಿ ಆರಂಭಿಸಲು ಗುರಿ ಹೊಂದಲಾಗಿದ್ದು, ಭೂಸ್ವಾಧೀನವಾದ ಎಲ್ಲ ರೈತರಿಗೆ ಫೆಬ್ರವರಿ 15ರೊಳಗೆ ಪರಿಹಾರ ಹಣ ಪಾವತಿಸಲು ಭೂಸ್ವಾಧೀನಾಧಿಕಾರಿ ಹಾಗೂ ಉಪವಿಭಾಗಾಧಿಕಾರಿಗೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸೂಚಿಸಿದರು. ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಸರ್ವೇ ಮಾಡಲಾದ ರೈಲ್ವೆ ಮಾರ್ಗದಲ್ಲಿ ಗುರಿತಿಸಲಾದ ಕಲ್ಲುಗಳನ್ನು ಕಿತ್ತು ಹಾಕಲಾಗಿದೆ. ಇದನ್ನು ಮುಂದಿನ ವಾರದಲ್ಲಿ ಸರ್ವೇ ಅಧಿಕಾರಿಗಳು, ರೈಲ್ವೆ ಇಂಜಿನಿಯರ್‌ಗಳು ಸೇರಿಕೊಂಡು ಬಾಂದ್‍ಗಲ್ಲುಗಳನ್ನು ಪುನರ್ ಸ್ಥಾಪಿಸಬೇಕು ಎಂದು ಸರ್ವೇ ಹಾಗೂ ರೈಲ್ವೆ ಇಂಜಿನಿಯರ್‌ಗಳಿಗೆ ಸಚಿವರು ಸೂಚಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಸದಸ್ಯತ್ವ ನೋಂದಣಿ ಹಾಗೂ ಮೇಕೆದಾಟು ಯೋಜನೆಯ ಪಾದಯಾತ್ರೆಯನ್ನು ಯಶಸ್ವಿಯಾಗೊಳಿಸುವ ಬಗ್ಗೆ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಕಾಂಗ್ರೆಸ್ ನಾಯಕ ಡಾ. ಜಿ.ಪರಮೇಶ್ವರ್ ರವರ ಅಧ್ಯಕ್ಷತೆಯಲ್ಲಿ ತುಮಕೂರು ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆ ಏರ್ಪಡಿಸಲಾಗಿತ್ತು. ಸಭೆಯಲ್ಲಿ ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕರಾದ ಕೆ.ಎನ್.ರಾಜಣ್ಣ, ಶಫಿ ಅಹಮದ್, ತಿಪಟೂರು ಕ್ಷೇತ್ರ ಮಾಜಿ ಶಾಸಕರು ನಮ್ಮ ನಾಯಕರಾದ ಕೆ.ಷಡಕ್ಷರಿ, ಲಕ್ಷ್ಮೀನಾರಾಯಣ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಬೆಮೆಲ್ ಕಾಂತರಾಜು, ಕೆಪಿಸಿಸಿ ವೀಕ್ಷಕರಾದ ಚೆಲುವರಾಜು, ರಾಕ್ ಮಂಜುನಾಥ್, ವೀಣಾ ಕಾಶಪ್ಪ, ಕೆಪಿಸಿಸಿ ಕಾರ್ಯದರ್ಶಿಗಳಾದ ದಿನೇಶ್ ಬಿ.ಎಸ್. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್ ರಾಮಕೃಷ್ಣ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಶಿ ಹುಲಿಕುಂಟೆ, ಹಿರಿಯ ಮುಖಂಡರಾದ ಚೌದ್ರಿ ರಂಗಪ್ಪ, ಪಾವಗಡ ವೆಂಕಟೇಶ್, ಸೋಮಶೇಖರ್, ಹೊನ್ನಗಿರಿಗೌಡ ಹಾಗೂ ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪ್ರಮುಖ ಮುಖಂಡರುಗಳು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಸರಗೂರು: ಆಲನಹಳ್ಳಿ ಹಾಡಿಯ ಕುರುಬ ಜನಾಂಗದವರಿಗೆ ಸರಿಯಾದ ಮಸಣ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ಮೃತದೇಹದ ಅಂತ್ಯಸಂಸ್ಕಾರಕ್ಕೂ ಪರದಾಡಿದ ಸ ಘಟನೆ ತಾಲ್ಲೂಕಿನ ಬಿ ಮಟಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಸುಮಾರು 30 ವರ್ಷಗಳಿಂದಲೂ ಮಸಣ ಮಾಲ ಇಲ್ಲದೇ ಇಲ್ಲಿನ ಜನರು ಶವ ಸಂಸ್ಕಾರಕ್ಕೂ ಪರದಾಡುವಂತಾಗಿದೆ. ಇದಲ್ಲದೇ ಇಲ್ಲಿಗೆ ಕನಿಷ್ಠ ರಸ್ತೆ ವ್ಯವಸ್ಥೆ ಇಲ್ಲ. ಇಲ್ಲಿನ ಜನರಿಗೆ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಗಳು ಕೂಡ ಇಲ್ಲದಂತಹ ಸ್ಥಿತಿ ಇಲ್ಲಿದೆ ಎಂದು ಹೇಳಲಾಗಿದೆ. ಈ ಸಂಬಂಧ ಮಾಹಿತಿ ನೀಡಿದ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಬೆಟ್ಟಸ್ವಾಮಿ ಕುರ್ಣೇಗಾಲ, 30-40 ವರ್ಷಗಳಿಂದ ಇಲ್ಲಿನ ಜನರಿಗೆ ಶವ ಸಂಸ್ಕಾರ ಮಾಡಲು ಜಾಗವಿಲ್ಲ. ತಿರುಗಾಡಲು ರಸ್ತೆಯ ಇಲ್ಲ. ಇವರ ತಾತ ಕಾಲದಿಂದಲ್ಲೂ ಕಾಡಿನಲ್ಲಿ ಶವ ಸಂಸ್ಕಾರ ಮಾಡಿದ್ದರು. ಆದರೆ ಈವಾಗ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಿನ ಜಾಗಕ್ಕೆ ತಂತಿಯನ್ನು ನಿರ್ಮಾಣ ಮಾಡಿಕೊಂಡು ಹಾಡಿಯ ಜನರಿಗೆ ತುಂಬಾ ತೊಂದರೆಯನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಕಾಡು ಕುರುಬ ಜನರಿಗೆ…