Subscribe to Updates
Get the latest creative news from FooBar about art, design and business.
- ತಿಪಟೂರು | ಸರಿಯಾಗಿ ಕಾರ್ಯನಿರ್ವಹಿಸದ ಸಂಚಾರ ಸಿಗ್ನಲ್ ಗಳು: ವಾಹನ ಚಾಲಕರಿಂದ ಆಕ್ರೋಶ
- ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್
- ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ
- ತುಮಕೂರು | ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣಕ್ಕೆ ತಡೆಯಾಜ್ಞೆ
- ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
- ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
- ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
- ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
Author: admin
ತುಮಕೂರು: ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಕೊಳೆಗೇರಿ ಪ್ರದೇಶ ನಿವಾಸಿಗಳ ಪುನರ್ವಸತಿ ಯೋಜನೆಯಡಿಯಲ್ಲಿ ಮಾರಿಯಮ್ಮನಗರದಲ್ಲಿ ನಿರ್ಮಿಸಿರುವ ವಸತಿ ಸಂಕೀರ್ಣವನ್ನು ಉದ್ಘಾಟಿಸಲಾಯಿತು. ಇದೇ ವೇಳೆ ಸ್ಮಾರ್ಟ್ ಸಿಟಿ ಲಿಮಿಟೆಡ್ ಗೆ ಒಳಪಡುವ ಮತ್ತೊಂದು ಕಟ್ಟಡವಾದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ನಿರ್ಮಿಸಿರುವ ನೂತನ ಸಭಾಂಗಣ, ಪ್ರಯೋಗಾಲಯ ಹಾಗೂ ಗ್ರಂಥಾಲಯ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ನಿರ್ಮಿಸಿರುವ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಸಣ್ಣ ನೀರಾವರಿ ಸಚಿವ ಜಿ.ಸಿ.ಮಾಧುಸ್ವಾಮಿ ಉದ್ಘಾಟನೆ ನೆರವೇರಿಸಿದರು. ಈ ವೇಳೆ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು ಭೈರತಿ, ಲೋಕಸಭಾ ಸದಸ್ಯ ಜಿ.ಎಸ್.ಬಸವರಾಜು, ಶಾಸಕರಾದ ಬಿ.ಬಿ.ಜ್ಯೋತಿಗಣೇಶ್ ಮೊದಲಾದವರು ಭಾಗವಹಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: “ಈ ನನ್ನ ಮಗ ನಮ್ಮ ಮಂತ್ರಿ ಹೆಂಗೆ ಗೊತ್ತಾ ದಕ್ಷಿಣ ಕೋರಿಯಾದ ಕಿಂಗ್ ಪಿನ್ ಇದಾನಲ್ಲ ಆ ರೀತಿ. ಹಾಳು ಮಾಡಿಬಿಟ್ಟಿದ್ದಾನೆ ನಮ್ಮ ಜಿಲ್ಲೆಯನ್ನ, ಮಾತು ಎತ್ತಿದ್ರೆ ಹೊಡಿ ಬಡಿ ಕಡಿ ಅಂತಾನೆ” ಎಂದು ಸಚಿವ ಮಾಧುಸ್ವಾಮಿ ವಿರುದ್ಧ ಸ್ವಪಕ್ಷದವರೇ ಮಾತನಾಡಿರುವ ಘಟನೆ ನಡೆದಿದೆ. ತುಮಕೂರಿನಲ್ಲಿ ಕರೆದಿದ್ದ ಸುದ್ದಿಗೋಷ್ಠಿ ಆರಂಭದಲ್ಲಿ ಸಂಸದ ಜಿ ಎಸ್ ಬಸವರಾಜ್ ಮತ್ತು ಸಚಿವ ಭೈರತಿ ಬಸವರಾಜ್ ಗುಸುಗುಸು ಮಾತನಾಡಿದ್ದು, ಸಚಿವ ಮಾಧುಸ್ವಾಮಿ ಅವರ ಕಾರ್ಯವೈಖರಿ ಬಗ್ಗೆ ಪರಸ್ಪರ ಟೀಕೆ ಮಾಡುತ್ತಾ ಹೋಗುತ್ತಾರೆ. ಆ ಬಳಿಕ ಸುಮ್ಮನಿರು ಆ ಮೇಲೆ ಮಾತನಾಡೋಣ ಎನ್ನುತ್ತಾ ಪತ್ರಿಕಾಗೋಷ್ಠಿ ನಡೆಸಲು ಮುಂದಾಗಿದ್ದಾರೆ. ಇವರಿಬ್ಬರೂ ಕಾನೂನು ಸಚಿವ ಮಾಧುಸ್ವಾಮಿ ಬಗ್ಗೆ ಹಾಗೂ ಅವರು ಜಿಲ್ಲೆಯಲ್ಲಿ ಮಾಡುತ್ತಿರುವ ಕೆಲಸ, ತಮಗೆ ಯಾವ ರೀತಿ ತೊಂದರೆಯಾಗುತ್ತಿದೆ ಎಂದು ಹೇಳುತ್ತಿರುವುದು ಸ್ಪಷ್ಟವಾಗಿದೆ. ಜಿಲ್ಲೆಯ ಬಿಜೆಪಿ ನಾಯಕರ ಮಧ್ಯೆ ಎಲ್ಲವೂ ಸರಿಯಿಲ್ಲ, ಒಗ್ಗಟ್ಟು ಇಲ್ಲ ಎಂಬುದನ್ನು ಇದು ತೋರಿಸುತ್ತದೆ. ತುಮಕೂರಿನಲ್ಲಿ ಸ್ಮಾರ್ಟ್ ಸಿಟಿ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿತ್ತು.…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ರೋಟರಿ ಸಂಸ್ಥೆಗಳು ಸಾರ್ವಜನಿಕರಿಗೆ ಆರೋಗ್ಯ, ಶಿಕ್ಷಣ, ಸಮಾಜಸೇವೆ ಸೇರಿದಂತೆ ಹಲವಾರು ಉತ್ತಮ ಸೇವೆಗಳನ್ನು ನೀಡುವುದರ ಜೊತೆಗೆ ಯುದ್ಧದ ಸಂದರ್ಭದಲ್ಲಿ ಸಹ ನಮ್ಮ ಸೈನಿಕರಿಗೆ ಗಾಯಾಳುಗಳಿಗೆ ತುರ್ತು ಸೇವೆ ಸೇರಿದಂತೆ ಹಲವಾರು ಉಪಯುಕ್ತ ಸಹಾಯಗಳನ್ನು ಮಾಡು ವಂತಹ ಸಂಸ್ಥೆಯಾಗಿದೆ, ಇವರ ಸೇವೆ ಇದೇ ರೀತಿ ಮುಂದುವರೆಯಲಿ ಎಂಬುದಾಗಿ ನಗರಸಭೆ ಅಧ್ಯಕ್ಷರಾದ ಶಂಷುನ್ನೀಸಾ ಅವರು ತಿಳಿಸಿದರು. ಹಿರಿಯೂರು ನಗರದ ರೋಟರಿ ಸಭಾಭವನದಲ್ಲಿ ಬುಧವಾರ ಮಧ್ಯಾಹ್ನ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರೋಟರಿ ಸಂಸ್ಥೆ ಹಾಗೂ ಇನ್ಹರ್ ವ್ಹೀಲ್ ಕ್ಲಬ್ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರಕಾರ್ಮಿಕರಿಗೆ ಉಚಿತ ಹೈಜನ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಹಿರಿಯೂರು ನಗರಸಭೆ ಅಧ್ಯಕ್ಷೆ ಶಂಶುನ್ನಿಸಾ ಅವರು ಮಾತನಾಡಿದರು. ರೋಟರಿ ಸಂಸ್ಥೆ ಜಿಲ್ಲಾ ಗೌರ್ನರ್ ವಿ.ತಿರುಪತಿನಾಯ್ಡು ಅವರು ಮಾತನಾಡಿ, ರೋಟರಿ ಸಂಸ್ಥೆ ವತಿಯಿಂದ ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಸಮಾಜದ ಬಡವರಿಗೆ, ಅನಾಥರಿಗೆ, ನಿರ್ಗತಿಕರಿಗೆ, ಫುಟ್ ಮಾಸ್, ಸ್ಯಾನಿಟೈಸರ್…
ರಾಯಚೂರು: ನಗರದ ರೈಲ್ವೆ ನಿಲ್ದಾಣದ ಆವರಣದಲ್ಲಿ ನಿಲುಗಡೆ ಮಾಡಲಾಗಿದ್ದ ಶಾಲಾ ಓಮ್ನಿ ವ್ಯಾನ್ ಇದ್ದಕ್ಕಿದ್ದಂತೆ ಹೊತ್ತಿ ಉರಿದು ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಬುಧವಾರ ನಡೆಯಿತು. ದೇವದುರ್ಗ ತಾಲ್ಲೂಕು ಗೊಬ್ಬೂರ ಗ್ರಾಮದ ಖಾಸಗಿ ಶಾಲೆಯ ವ್ಯಾನ್ ಇದಾಗಿದ್ದು, ಬೆಂಕಿ ಅವಘಡದಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ವ್ಯಾನ್ ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿ ಚಾಲಕ ಹಾಗೂ ಕೆಲವು ಜನರು ನೀರು ಹಾಕಿ ನಂದಿಸಲು ಯತ್ನಿಸಿದ್ದಾರೆ. ರೈಲ್ವೆ ನಿಲ್ದಾಣದೊಳಗಿನಿಂದ ಮರಳು ಹಾಗೂ ಬೆಂಕಿನಂದಿಸುವ ಉಪಕರಣ ತಂದು ಹಾಕಲಾಗಿತ್ತು. ಆದರೂ ಇದ್ದಕ್ಕಿದ್ದಂತೆ ಬೆಂಕಿ ಕೆನ್ನಾಲಿಗೆ ಚಾಚಿ ವ್ಯಾನ್ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ವಾಹನವು ತಲುಪುವ ಮೊದಲೇ ವಾಹನ ಉರಿದುಹೋಗಿತ್ತು ಎಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಅತಿಥಿ ಉಪನ್ಯಾಸಕರ ಮುಷ್ಕರ ಸ್ಥಳಕ್ಕೆ ತುಮಕೂರು ನಗರದ ಶಾಸಕರಾದ ಜ್ಯೋತಿ ಗಣೇಶ್ ಅವರು ಆಗಮಿಸಿದ್ದರು, ಪ್ರತಿಭಟನಾಕಾರರ ಜೊತೆಗೆ ಮಾತನಾಡಿದರು. ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದು, ಸ್ಥಳಕ್ಕೆ ಆಗಮಿಸಿದ ಶಾಸಕರು, ಅತಿಥಿ ಶಿಕ್ಷಕರ ಸಮಸ್ಯೆಯ ಬಗ್ಗೆ ಅರಿವಿದೆ. ನಿಮಗೆ ಸರ್ಕಾರ ಒಳ್ಳೆಯದು ಮಾಡುವ ನಿರೀಕ್ಷೆ ಇದೆ. ಈ ವಿಚಾರದ ಬಗ್ಗೆ ಉನ್ನತ ಶಿಕ್ಷಣ ಸಚಿವರ ಜೊತೆಗೆ ಮಾತನಾಡುವುದಾಗಿ ಅವರು ಹೇಳಿದರು. ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಉನ್ನತ ಶಿಕ್ಷಣ ಉನ್ನತ ಶಿಕ್ಷಣ ಇಲಾಖೆಯ ಅಪರ ಕಾರ್ಯದರ್ಶಿಗಳೊಂದಿಗೆ ಕೂಡ ಚರ್ಚಿಸಿ, ಶೀಘ್ರ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳುವುದಾಗಿ ತಿಳಿಸಿದರು. ವರದಿ : ಸೌಮ್ಯ ಎಸ್.ಬಿ., ಸಿರಾ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸರಗೂರು: ದುಷ್ಟರ ಅಟ್ಟಹಾಸಕ್ಕೆ ಸುಮಾರು 20 ಸಾವಿರ ರೂಪಾಯಿ ಬೆಲೆ ಬಾಳುವ ಹುಲ್ಲಿನ ಮೇದ ಸುಟ್ಟು ಭಸ್ಮವಾದ ಘಟನೆ ತಾಲೂಕಿನ ಕೆ ಬೆಳತೂರು ಗ್ರಾಮದಲ್ಲಿ ನಡೆದಿದೆ. ಮಧ್ಯ ರಾತ್ರಿ ಸುಮಾರು 2 ಗಂಟೆ ವೇಳೆಗೆ ಯಾರೋ ಕಿಡಿಗೇಡಿಗಳು ಹುಲ್ಲಿನ ಮೇದಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಪರಿಣಾಮವಾಗಿ ರೈತ ಸಿದ್ದನಾಯಕ ಎಂಬವರಿಗೆ ತೀವ್ರ ನಷ್ಟವಾಗಿದ್ದು, ಇದೀಗ ಅವರು ಕಣ್ಣೀರು ಹಾಕುತ್ತಾ ಕುಳಿತುಕೊಳ್ಳುವಂತಾಗಿದೆ. ಘಟನೆಯಿಂದ ನೊಂದಿರುವ ಸಿದ್ದನಾಯಕ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಾ, ನಾನು ಒಬ್ಬ ಹುಟ್ಟಿನಿಂದಲೂ ವಿಶೇಷಚೇತನನಾಗಿದ್ದೇನೆ. ನಮಗೆ ಯಾವುದೇ ರೀತಿಯ ಸ್ವಂತ ಜಮೀನಾಗಲಿ, ಆಸ್ತಿಯಾಗಲಿ ಇಲ್ಲ. ಬೇರೆಯವರ ಜಮೀನಿನಲ್ಲಿ ಹುಳಿಮೆ ಮಾಡಿ ಬದುಕು ನಡೆಸುತ್ತಿದ್ದೇವೆ. ವಾರದ ಹಿಂದೆಯಷ್ಟೇ ಭತ್ತವನ್ನು ಹೊಕ್ಕಣೆ, ನಡೆಸಿ ಹುಲ್ಲನ್ನು ಸಂಗ್ರಹಿಸಲಾಗಿತ್ತು . ಆದರೆ ಇಂದು ಕೀಡಿಗೇಡಿಗಳು ಈ ರೀತಿಯ ಕೆಲಸ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿ ಕಣ್ಣೀರು ಹಾಕಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡಿದ ಕೆಲಸಗಾರರಿಗೆ ಇನ್ನೂ ಸಹ ಸಂಬಳ ನೀಡಿಲ್ಲ. ಈ ಹುಲ್ಲಿನ ಮೇದವನ್ನು ಮಾರಿ…
ರಾಜ್ಯಕ್ಕೆ ಮೂರನೇ ಅಲೆ ಈಗಾಗಲೇ ಬಂದಿದೆ. ಇದು ಮೂರನೇ ಅಲೆಯ ಪ್ರಾರಂಭದ ಹಂತ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಂಗಳೂರು ಸೇರಿದಂತೆ ದೆಹಲಿ, ಮಹಾರಾಷ್ಟ್ರದಲ್ಲೂ ಕೇಸ್ ಗಳು ಹೆಚ್ಚಾಗುತ್ತಿದ್ದು, ಬೆಂಗಳೂರಿಗೆ ವಿಶೇಷ ಕ್ರಮ ತೆಗೆದುಕೊಳ್ಳುವುದು ಅತ್ಯಂತ ಅವಶ್ಯಕ ಎಂದಿದ್ದಾರೆ.ಬೆಂಗಳೂರಿಗೆ ವಿಶೇಷ ಕ್ರಮ ತೆಗೆದುಕೊಳ್ಳುವುದು ಅತ್ಯಂತ ಅವಶ್ಯಕ ಎಂದಿದ್ದಾರೆ. ವೀಕೆಂಡ್ ಕರ್ಫ್ಯೂ: ದೇಶದಲ್ಲಿ ನೋಡ ನೋಡುತ್ತಿದ್ದಂತೆ ಕೊರೊನಾ ಮೂರನೇ ಅಲೆ ಅಬ್ಬರಿಸಲು ಶುರುಮಾಡಿದೆ. ದೆಹಲಿಯಲ್ಲಿ ಹೆಮ್ಮಾರಿ ಸೋಂಕು ಅಬ್ಬರಿಸುತ್ತಿದ್ದು, ದೆಹಲಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೆ ಮುಂದಾಗಿದೆ ಎಂದು ವರದಿಯಾಗಿದೆ. ದೆಹಲಿಯಲ್ಲಿ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಡೆಲ್ಲಿ ಸರ್ಕಾರ ವೀಕೆಂಡ್ ಕರ್ಫ್ಯೂ ಮೊರೆ ಹೋಗಿದೆ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಶನಿವಾರ ಕರ್ಫ್ಯೂ ಹೇರಿ, ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಮಾಡಲು ಕೇಜ್ರಿವಾಲ್ ಸರ್ಕಾರ ಚಿಂತನೆ ನಡೆಸಿದೆ. ಪಾದಯಾತ್ರೆ ನಿಲ್ಲಲ್ಲ: ನಾವು ಪಾದಯಾತ್ರೆ ಮಾಡಿದ್ರೆ ಮಾತ್ರ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಟಿ.ಟಿ.ರಸ್ತೆಯಲ್ಲಿರುವ ಹಿರಿಯೂರು ತಾಲ್ಲೂಕಿನ ಹೆಸರು ವಾಸಿಯಾದ ದಕ್ಷಿಣಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ಜಾತ್ರೆಯನ್ನು ಪ್ರತಿ ವರ್ಷದಂತೆ ಈ ವರ್ಷವು ಸಹ ನಡೆಸುವಂತೆ ಹಿರಿಯೂರು ನಗರದ ನಗರಸಭೆ ಕಾರ್ಯಾಲಯದ ನಗರಸಭೆ ಅಧ್ಯಕ್ಷೆ ಶಂಶುನ್ನಿಸಾ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ಹಿರಿಯೂರು ನಗರಸಭೆ ಅಧ್ಯಕ್ಷೆ ಶಂಶುನ್ನಿಸಾ, ಉಪಾಧ್ಯಕ್ಷರಾದ ಬಿ.ಎನ್. ಪ್ರಕಾಶ್ , ಪೌರಾಯುಕ್ತರಾದ ಡಿ.ಉಮೇಶ್ , ತಾಲ್ಲೂಕು ತಹಶೀಲ್ದಾರರಾದ ಶಿವಕುಮಾರ್ , ನಗರ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಶಿವಕುಮಾರ್ ವಿ., ಗ್ರಾಮ ಲೆಕ್ಕಾಧಿಕಾರಿಗಳಾದ ಮಾಯವರ್ , ಗಿರೀಶ್, ರಾಜು, ಮಂಜುನಾಥ್, ಉಪತಹಶೀಲ್ದಾರರಾದ ಮಂಜಪ್ಪ, ರಾಜಸ್ವ ನಿರೀಕ್ಷಕರಾದ ಗೋಪಿ, ಶಿವಮೂರ್ತಿ ಎನ್.ಸಿ., ಹಾಗೂ ನಗರಸಭೆ ಸದಸ್ಯರುಗಳಾದ ಜಗದೀಶ್, ಸೊಸೈಟಿ ಸಣ್ಣಪ್ಪ , ದಿವು ಶಂಕರ್ , ಚಿಕ್ಕಲ್ಲಿನಾಯಕ, ಪತ್ರಕರ್ತರ ಸಂಘದ ಅಧ್ಯಕ್ಷ ರಾದ ಜಿ ಎಲ್ ಮೂರ್ತಿ, ಲಕ್ಷ್ಮಿಕಾಂತ್ ವೆಬ್, ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು. ವರದಿ:…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಿರಿಯೂರು ನಗರದಲ್ಲಿರುವ ಬಸವನಕಟ್ಡೆ ವಾಸಿ ಲಕ್ಷ್ಮಣಪ್ಪ ನವರ ಸೊಸೆಯಾದ 29 ವರ್ಷ ವಯಸ್ಸಿನ ವಿದ್ಯಾಶ್ರೀ ಕೋಂ ನಾಗರಾಜ ಅವರು ಕಾಣೆಯಾಗಿರುವ ಪ್ರಕರಣ ಹಿರಿಯೂರು ನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ . ವಿದ್ಯಾಶ್ರಿ ಅವರಿಗೂ ಲಕ್ಷ್ಮಣಪ್ಪ ನವರ ಮಗನಾದ ನಾಗರಾಜ , ನಿಗೂ ಹಿರಿಯರ ಸಮ್ಮಖದಲ್ಲಿ ವಿವಾಹವಾಗಿ ಇವರ ಸಂಸಾರವು ಸುಖಸಂಸಾರವಾಗಿದ್ದು , ಇವರಿಗೆ ಎಂಟು ವರ್ಷದ ಮಗನು ಸಹ ಇದ್ದು ಇಂತಹ ಸುಖ ಸಂಸಾರದಲ್ಲಿ ಕಳೆದಂತಹ ಎರಡು ವರ್ಷಗಳಿಂದ ಸಂಸಾರದಲ್ಲಿ ಗಂಡ – ಹೆಂಡ್ತಿರ ಮಧ್ಯೆ ಸಣ್ಣಪುಟ್ಟ ಗಲಾಟೆಗಳು, ಇಂದು ದೊಡ್ಡ ಹೆಮ್ಮರವಾಗಿ ಬೆಳೆದು ನಿಂತಿತ್ತು . ಹಲವಾರು ಭಾರಿ ಗಂಡ – ಹೆಂಡತಿ ಮಧ್ಯೆ ವಿರಾಸ ಉಂಟಾಗಿ ಹಿರಿಯರ ಸಮಕ್ಷಮದಲ್ಲಿ ಪಂಚಾಯತಿ ಮಾಡಿಸಿ ಹೊಂದಾಣಿಕೆ ಮಾಡಿಕೊಂಡು ಹೋಗುವಂತೆ ತಿಳಿಸಿದ್ದರು . ಸಹ ಸಮೇತ ಗಂಡ – ಹೆಂಡತಿ ಜಗಳಗಳು ದಿನಕ್ಕಿಂತ ದಿನ ಹೆಮ್ಮರವಾಗಿ ಬೆಳೆದು ನಿಂತಾಗಿದೆ . ಹೀಗಿರುವ ಸಂದರ್ಭದಲ್ಲಿ ದಿನಾಂಕ 29-12-2021…
ತಿಪಟೂರು: ತಾಲೂಕಿನ ವಿವೇಕಾನಂದ ಬಡಾವಣೆಯಲ್ಲಿ ಆಯೋಜನೆ ಮಾಡಲಾಗಿದ್ದ ಕಟ್ಟಡ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಟಿ ಶಾಂತಕುಮಾರ್ ಭಾಗವಹಿಸಿ ಕಾರ್ಮಿಕರ ಕುಂದುಕೊರತೆಗಳ ಬಗ್ಗೆ ಚರ್ಚಿಸಿ ದರು. ಕಾರ್ಮಿಕರಿಗೆ ಲೇಬರ್ ಕಾರ್ಡ್ ಮಾಡಿಸುವಲ್ಲಿ ಬ್ರೋಕರ್ ಗಳ ಹಾವಳಿ ಹಾಗೂ ಸರ್ಕಾರದಿಂದ ಸಿಗುವ ಸವಲತ್ತು ವಿಳಂಬಗಳ ಬಗ್ಗೆ ಮಾತನಾಡಿದ ಶಾಂತ ಕುಮಾರ್, ಇನ್ನು ಮುಂದೆ ಈ ರೀತಿಯಾಗದಂತೆ ಸರ್ಕಾರಕ್ಕೆ ಗಮನ ತರುತ್ತೇವೆ. ಎಲ್ಲಾ ಕಾರ್ಮಿಕರು ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸೊಪ್ಪು ಗಣೇಶ್ ಬಸವರಾಜ್ ಅಧ್ಯಕ್ಷರಾದ ಹನುಮಂತಪ್ಪ ಹೊನ್ನಪ್ಪ ಸೇರಿದಂತೆ ಪ್ರಮುಖ ಮುಖಂಡರು ಹಾಜರಿದ್ದರು ವರದಿ: ಮಂಜು ಗುರುಗದಹಳ್ಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy