Subscribe to Updates
Get the latest creative news from FooBar about art, design and business.
- ಸೌಜನ್ಯ ಅತ್ಯಾಚಾರ–ಕೊಲೆ ಪ್ರಕರಣಕ್ಕೆ ಮರುಜೀವ: ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ ಎಸ್ ಐಟಿ (SIT) ರಚನೆ!
- ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ
- ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ
- 2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ
- ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ
- ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ
- 100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ
- ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!
Author: admin
ಮಧುಗಿರಿ:ಮದುವೆಯಾಗಿ ಏಂಟು ವರ್ಷಗಳು ಕಳೆದರೂ ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆಮನನೊಂದು ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಮಧುಗಿರಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಧುಗಿರಿ ತಾಲೂಕಿನ ಕಸಬಾ ಬಸವನಹಳ್ಳಿಯ ವಾಸಿ ಚೌಡಪ್ಪ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿಯು ಬುಧವಾರ ಬೆಳಿಗ್ಗೆ ಚಹಾ ಸೇವಿಸಿ ಜಮೀನಿನ ಬಳಿ ಹೋಗಿ ಬರುವುದಾಗಿ ಹೋದವನು ತನ್ನ ಜಮೀನಿನ ಮಾವಿನ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿದ್ದು, ಮರಣೊತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚೆನ್ನೈ, ತಮಿಳು ನಾಡಿನಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಸರಣಿ ಮುಂದುವರೆದಿದ್ದು ಕಳೆದ ರಾತ್ರಿ ಶಿವಕಾಶಿಯಲ್ಲಿ ಪ್ರಥಮ ಪಿ ಯು ಸಿ ತರಗತಿಯ ವಿದ್ಯಾರ್ಥಿನಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿಯ ಕುಟುಂಬದ ಪ್ರಕಾರ ಆಕೆಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ.ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಆದರೂ ಈಕೆಯ ಸಾವಿನ ಬಗ್ಗೆ ಹಲವಾರು ಅನುಮಾನಗಳು ಸೃಷ್ಟಿಯಾಗಿವೆ. ಕಳೆದ ಒಂದು ವಾರದಲ್ಲಿ ಸುಮಾರು 4 ವಿದ್ಯಾರ್ಥಿನಿಗಳು ಆತ್ಮಹತ್ಯೆಗೆ ಶರಣಾಗಿದ್ದು ತಮಿಳುನಾಡು ಸರ್ಕಾರ ತೀವ್ರ ಇಕ್ಕಟ್ಟಿಗೆ ಸಿಲುಕಿದೆ. ಎಲ್ಲಾ ಪ್ರಕರಣಗಳನ್ನು ಸಿಐಡಿ ತನಿಖೆ ನಡೆಸುತ್ತಿದ್ದು, ವಿಚಾರಣೆ ಹಂತದಲ್ಲೆ ಇದ್ದು, ಪೋಷಕರು, ಸಂಬಂಧಿಕರು ಹಾಗೂ ಸಾರ್ವಜನಿಕರ ಆಕ್ರೋಶ ಹೆಚ್ಚಾಗುತ್ತಿದೆ. ತಮಿಳುನಾಡು ಮುಖ್ಯಮಂತ್ರಿ ಸ್ಟ್ಯಾಲಿನ್ ಅವರು ವಿದ್ಯಾರ್ಥಿಗಳಿಗೆ ತಾಳ್ಮೆ ಕಳೆದುಕೊಳ್ಳದಂತೆ ಮನವಿ ಮಾಡಿದ್ದಾರೆ. ಬಾಲಕಿಯರ ರಕ್ಷಣೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಭರವಸೆಯನ್ನು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy…
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದಲ್ಲಿ ನಡೆದಿರುವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಹತ್ಯೆಯನ್ನು ಖಂಡಿಸಿದ್ದಾರೆ. ಈ ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪೊಲೀಸರು ಪ್ರವೀಣ್ ನೆಟ್ಟಾರ್ ಹತ್ಯೆಗೆ ಕಾರಣರಾದ ತಕ್ಷಣ ಕೊಲೆಗಡುಕರನ್ನು ಬಂಧಿಸಬೇಕು ಎಂದಿದ್ದಾರೆ. ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು. ಕೊಲೆಗಡುಕರ ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದು ಸರ್ಕಾರವನ್ನ ಒತ್ತಾಯಿಸಿದ್ದಾರೆ. ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಕಳೆದ ನಾಲ್ಕೈದು ದಿನಗಳ ಅವಧಿಯಲ್ಲಿ ಮಸೂದ್ ಮತ್ತು ಪ್ರವೀಣ್ ಹತ್ಯೆಯಾಗಿದ್ದು ಅತ್ಯಂತ ನೋವಿನ ವಿಚಾರ. ಕೊಲೆಗಡುಕರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್ ಒತ್ತಾಯಿಸಿದ್ದಾರೆ. ಎಲ್ಲಾ ಜಾತಿ, ಮತ,ವರ್ಗದವರು ಒಂದಾಗಿ ಯಾರೇ ಸಮಾಜ ಘಾತುಕ ಶಕ್ತಿಗಳು, ಕೊಲೆ ಗಡುಕರು ಆಗಲಿ ಅವರ ವಿರುದ್ಧ ಹೋರಾಡಲು ಒಟ್ಟಾಗಬೇಕು ಮತ್ತು ಇಂತಹ ಕೃತ್ಯ ನಡೆಸಿದವರನ್ನು…
ಮಂಗಳೂರು: ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದ್ದು, ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮೃತ ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು. ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದನು. ಬೆಳ್ಳಾರೆ ಪೇಟೆಯಲ್ಲಿ ಇಂದು ತನ್ನ ಕೋಳಿ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರು ಮೃತದೇಹದ ಮರಣೋತ್ತರ ಪುತ್ತೂರಿನಲ್ಲಿ ನಡೆಸಲಾಗಿದ್ದು, ಮೃತದೇಹವನ್ನು ಪ್ರವೀಣ್ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಿಂದ ಪ್ರವೀಣ್ ಮೃತದೇಹವನ್ನು ಹುಟ್ಟೂರು ನೆಟ್ಟಾರು ಕಡೆಗೆ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಗುತ್ತಿದ್ದು, ಮೆರವಣಿಗೆಯಲ್ಲಿ…
ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ತುಂಬಿದ ಸಂದರ್ಭದಲ್ಲಿ ಸಾಧನಾ ಸಮಾವೇಶ ಜನೋತ್ಸವವಾಗಿ ಆಚರಿಸಲು ತೀರ್ಮಾನಿಸಿದೆ. ಆದರೆ ಇದು ಜನೋತ್ಸವವಲ್ಲ, ‘ಭ್ರಷ್ಟೋತ್ಸವ’ ಎಂದು ರಾಜ್ಯ ಕಾಂಗ್ರೆಸ್ ಘಟಕ ವ್ಯಂಗ್ಯ ಮಾಡಿದೆ. ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಈ ಸರ್ಕಾರ ಜನರಿಗೆ ದ್ರೋಹ ಎಸಗಿದೆ. ಭ್ರಷ್ಟಾಚಾರ ಮುಗಿಲುಮುಟ್ಟಿದೆ’ ಎಂದು ವಾಗ್ದಾಳಿ ನಡೆಸಿದರು. ‘ಬೊಮ್ಮಾಯಿ ಸರ್ಕಾರದ ಆಡಳಿತ ನೋಡಿ ಸಂಪೂರ್ಣ ಭ್ರಮನಿರಸನವಾಗಿದೆ. ಗುತ್ತಿಗೆದಾರರಿಗೆ ಶೇ.40ರಷ್ಟು ಲಂಚ ಕೊಡಬೇಕಾದ ಪರಿಸ್ಥಿತಿ ಬಂದಿರುವುದು ಇದೇ ಮೊದಲು. ಗುತ್ತಿಗೆದಾರ ಸಂತೋಷ್ ಪಾಟೀಲ ಈ ಲಂಚದ ಹಣ ನೀಡಲಾಗದೆ ಆತ್ಮಹತ್ಯೆ ಮಾಡಿಕೊಂಡರು. ಇದಕ್ಕೆ ಕಾರಣರಾದ ಮಂತ್ರಿ, ನಮ್ಮ ಹೋರಾಟಗಳಿಗೆ ಮಣಿದು ರಾಜೀನಾಮೆ ನೀಡಿದರೂ ಇದೀಗ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ’ ಎಂದು ಸಿದ್ದರಾಮಯ್ಯ ಟೀಕಿಸಿದರು. ರಾಜ್ಯ ಸರ್ಕಾರ ಕಾರ್ಯವೈಖರಿಯಿಂದಾಗಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಅಂಕಿಅಂಶಗಳ ಸಹಿತ ವಿವರಿಸಿದ…
ತಿಪಟೂರು: ಕಾಂಗ್ರೆಸ್ ಪಕ್ಷಕ್ಕೆ 130 ವರ್ಷಗಳ ಇತಿಹಾಸವಿದೆ. ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಾಗ ಬಿಜೆಪಿ ನಾಯಕರು ಎಲ್ಲಿದ್ದರು ಎಂದು ಮಾಜಿ ಶಾಸಕ ಕೆ ಷಡಕ್ಷರಿ ಪ್ರಶ್ನಿಸಿದರು. ನಗರದ ಸರ್ಕಾರಿ ನೌಕರರ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸ್ವಾತಂತ್ರ್ಯೋತ್ಸವದ 75ನೇ ಅಮೃತ ಮಹೋತ್ಸವ ಪ್ರಯುಕ್ತ ಆಗಸ್ಟ್ ಒಂದರಿಂದ ಏಳು ದಿನ ಓ ಹಮ್ಮಿಕೊಂಡಿರುವ ಪಾದಯಾತ್ರೆ ಉದ್ಘಾಟಿಸಿ ಮಾತನಾಡಿದ ಅವರು, ಈ ದೇಶದಲ್ಲಿರುವ ಅಂದಾಜು 18 ರಿಂದ 20 ಕೋಟಿ ಮುಸಲ್ಮಾನರ ಮತಗಳು ಬೇಕಿಲ್ಲ ಎಂದು ಹೇಳುವ ಮೂಲಕ ಹಿಂದೂ ಮತ ಪಡೆಯುವ ಗಿಮಿಕ್ ರಾಜಕಾರಣವನ್ನು ಬಿಜೆಪಿ ಮಾಡುತ್ತಿದೆ ಎಂದು ಇದೇ ವೇಳೆ ಅವರು ಟೀಕಿಸಿದರು. ಇನ್ನೂ ಪಕ್ಷದ ನಾಯಕತ್ವಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪಕ್ಷಕ್ಕೆ ಜೈಕಾರವಿರಲಿ ನಾಯಕರಿಗೆ ಬೇಡ ಎಂದು ಹೇಳಿದರು ಕಾಂಗ್ರೆಸ್ ಮುಖಂಡ ಲೋಕೇಶ್ವರ್ ಮಾತನಾಡಿ, ಚಡ್ಡಿ ಸುಡುವ ಮೂಲಕ ಕೇವಲ ಸಾಂಕೇತಿಕ ಪ್ರತಿಭಟನೆ ಮಾಡಿದ ಎನ್ ಎಸ್ ಯು ವಿದ್ಯಾರ್ಥಿಗಳು ದೇಶದ ಗಮನ ಸೆಳೆಯುವ ಕೆಲಸ ಮಾಡಿದ್ದಾರೆ. ಅವರನ್ನು ದೆಹಲಿಗೆ…
ಬೆಂಗಳೂರು : ರಾಜ್ಯದ ಉಪ ನೋಂದಣಾಧಿಕಾರಿ ಕಚೇರಿಗಳ ನೌಕರರಿಗೆ ಗುರುತಿನ ಚೀಟಿಗಳನ್ನು ಕಡ್ಡಾಯಗೊಳಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಸಬ್-ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಗುರುತಿನ ಚೀಟಿಗಳನ್ನು ಕಡ್ಡಾಯಗೊಳಿಸಿ ನೋಂದಣಿ ಮಹಾನಿರೀಕ್ಷಕರು ಮತ್ತು ಮುದ್ರಾಂಕ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ’ ಎಂದು ತಿಳಿಸಿದ್ದಾರೆ. ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿನ ನ್ಯೂನತೆಗಳ ಬಗ್ಗೆ ಲೋಕಾಯುಕ್ತ ಪೊಲೀಸರು ವರದಿ ಸಲ್ಲಿಸಿದ್ದಾರೆ. ಅನಧಿಕೃತ ವ್ಯಕ್ತಿಗಳನ್ನು ಕಚೇರಿಗಳಿಂದ ಹೊರಗಿಡಲು ಗುರುತಿನ ಚೀಟಿಗಳನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೆ, ನಗದು ಘೋಷಣೆ ಮತ್ತು ಕಚೇರಿಯಿಂದ ಹೊರಬರುವಾಗ ಅಧಿಕಾರಿಗಳು ಮತ್ತು ಸಿಬ್ಬಂದಿಯ ದಾಖಲಿಸುವ ಬಗ್ಗೆ ನಿರ್ದೇಶನಗಳನ್ನು ನೀಡಲಾಗಿದೆ’ ಎಂದು ಅಶೋಕ ಹೇಳಿದರು. ವರದಿ: ಮುರುಳಿಧರನ್ ಆರ್ ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು:75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ತುಮಕೂರು ವತಿಯಿಂದ ಕಾಲೇಜು ಹಂತದ ಚಿತ್ರಕಲಾ ಸ್ಪರ್ಧೆ—2022 ಪೈಂಟಿಂಗ್ ಹಾಗೂ ಪೋಸ್ಟರ್ ವರ್ಣ ಚಿತ್ರ ರಚನಾ ಸ್ಪರ್ಧೆಯನ್ನು ಸೋಮವಾರ ಆಯೋಜಿಸಲಾಗಿತ್ತು. ತುಮಕೂರು ಜಿಲ್ಲಾ ಸ್ವಾತಂತ್ರ ಹೋರಾಟಗಾರರ ಸಂಘದ ಕಾರ್ಯದರ್ಶಿ ತು.ಮ.ಬಸವರಾಜು ಅವರು ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು, ತುಮಕೂರು ಜಿಲ್ಲೆಯಾದ್ಯಂತ ಹಲವಾರು ಗ್ರಾಮೀಣ ಭಾಗಗಳಲ್ಲೂ ಅನೇಕ ಸ್ವಾತಂತ್ರ್ಯ ಹೋರಾಟಗಾರರು ಇದ್ದರು. ಈಗ ಅವರಲ್ಲಿ ಬೆರಳೆಣಿಕೆಯಷ್ಟು ಜನರು ಮಾತ್ರ ಬದುಕಿದ್ದಾರೆ. ಅವರೆಲ್ಲರ ದೇಶಾಭಿಮಾನ, ತ್ಯಾಗ ಬಲಿದಾನಗಳನ್ನು ಹಾಗೂ ಅವರ ಜೀವನ ಚರಿತ್ರೆಗಳನ್ನು ಇಂದಿನ ಯುವ ಜನತೆಗೆ ಪರಿಚಯಿಸಬೇಕು. ಈ ಮೂಲಕ ಅವರ ಸೇವೆಗಳನ್ನು ಗೌರವಿಸಿ ಸ್ಮರಿಸುತ್ತಿರಬೇಕು. ಆಗ ಅವರ ಆತ್ಮಕ್ಕೆ ಸ್ವಲ್ಪವಾದರೂ ಸಮಾಧಾನ ನೀಡಿದಂತಾಗುತ್ತದೆ ಎಂದರು. ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರ್ಕಾರಿ ಚಿತ್ರಕಲಾ ಕಾಲೇಜು ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು, ನಮ್ಮತುಮಕೂರು ಮಾಧ್ಯಮದ ಪ್ರಧಾನ ಸಂಪಾದಕರಾದ ಜಿ.ಎಲ್.ನಟರಾಜು ಮಾತನಾಡಿ, ಈ ಕಾಲೇಜಿನ ಉಳಿವು ಮತ್ತು…
ಚಿತ್ರದುರ್ಗ: ಚಿತ್ರದುರ್ಗ ಗೊಲ್ಲಗಿರಿ ಮಠದ ಯಾದವಾನಂದಶ್ರೀಗಳು ಜಿಲ್ಲೆಯದಾದ್ಯಂತ ದಶಕಗಳಿಂದ ಎಸ್ಟಿ ಮೀಸಲಾತಿ ಹೋರಾಟ ನಡೆಸಿಕೊಂಡು ಬರುತ್ತಿರುವ ಕಾಡುಗೊಲ್ಲರ ಹೋರಾಟದ ನೇತೃತ್ವವಹಿಸಲಿ, ಇಲ್ಲವಾದರೆ ಮಠದ ಪೀಠತ್ಯಾಗ ಮಾಡಲು ಸಿದ್ಧರಾಗಿ ಎಂದು ಕಾಡುಗೊಲ್ಲ ಮುಖಂಡರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಕಾಡುಗೊಲ್ಲ ಒಳಪಂಗಡ ಮೀಸಲಾತಿ ಬೆಂಬಲವಿಲ್ಲ ಎಂಬ ಶ್ರೀಗಳ ಹೇಳಿಕೆಯನ್ನು ಖಂಡಿಸಿ, ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಕಾಡುಗೊಲ್ಲ ಮುಖಂಡರು ನಡೆಸಿದ ಸಭೆಯಲ್ಲಿ ಈ ಆಗ್ರಹ ಕೇಳಿ ಬಂದಿದೆ. ಕಾಡುಗೊಲ್ಲ ಸಮಾಜ ಒಂದು ಉಪಜಾತಿಯಲ್ಲ, ಪ್ರತ್ಯೇಕ ಅಸ್ಮಿತೆ ಹೊಂದಿರುವ ಜಾತಿಯಾಗಿದ್ದು, ನಾವು ಒಳಮೀಸಲಾತಿ ಕೇಳುತ್ತಿಲ್ಲ, ಕಾಡುಗೊಲ್ಲರೇ ಬೇರೆ, ಊರುಗೊಲ್ಲರೇ ಬೇರೆಯಾಗಿದ್ದು ನಮ್ಮ ಆಚರಣೆಗೂ ಅವರ ಆಚರಣೆಗಳಿಗೆ ಬಹಳ ವ್ಯತ್ಯಾಸವಿದೆ. ಇದನ್ನು ಸ್ವಾಮೀಜಿಯವರು ಅರ್ಥಮಾಡಿಕೊಳ್ಳಬೇಕು ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಮಧ್ಯ ಕರ್ನಾಟಕದಲ್ಲಿ ಕಾಡುಗೊಲ್ಲರು ಹೆಚ್ಚಾಗಿ ಇರುವುದರಿಂದ ಮುರುಘಾ ಶರಣರು ಜಾಗವನ್ನು ನೀಡಿ ಮಠ ಸ್ಥಾಪನೆಗೆ ಕೈಜೋಡಿಸಿದರು. ಕಾಡುಗೊಲ್ಲರು ದೇಣಿಗೆ ಸಂಗ್ರಹಿಸಿ ಯಾದವಾನಂದ ಸ್ವಾಮೀಜಿಗೆ…
ನೊಬೆಲ್ ಪ್ರಶಸ್ತಿ ವಿಜೇತ, ಪ್ರಸಿದ್ದ ಅರ್ಥಶಾಸ್ತ್ರಜ್ಞ ಅಮಾರ್ತ್ಯ ಸೇನ್ ಅವರಿಗೆ ಪಶ್ಚಿಮ ಬಂಗಾಳದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಬಂಗಾಬಿಭೂಷಣ’ ಘೋಷಣೆ ಮಾಡಲಾಗಿದೆ. ಆದರೆ ವಿವಿಧ ಕಾರಣಗಳಿಂದಾಗಿ ಪ್ರಶಸ್ತಿ ಸ್ವೀಕರಿಸದಿರಲು ಅಮಾರ್ತ್ಯ ಸೇನೆ ನಿರ್ಧರಿಸಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಸದ್ಯ ಕುಟುಂಬದ ಸದಸ್ಯರ ಜೊತೆ ಯೂರೋಪ್‌ನಲ್ಲಿ ಅಮಾರ್ತ್ಯ ಸೇನ್ ಇದ್ದಾರೆ ಎಂದು ಮೂಲಗಳು ತಿಳಿಸಿದ್ದು ಬಂಗಾಳ ಸರ್ಕಾರದ ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ. ಹಲವು ಪ್ರಶಸ್ತಿಗಳೊಂದಿಗೆ ಗೌರವಿಸಲ್ಪಡುವ ಅದೃಷ್ಟವನ್ನು ಹೊಂದಿದ್ದು. ‘ಬಂಗಾಬಿಭೂಷಣ’ ಪ್ರಶಸ್ತಿಯನ್ನು ಇತರರಿಗೆ ನೀಡಬೇಕೆಂದು ತಮದೆ ಬಯಸಿದ್ದಾರೆ ಎಂದು ಅಮಾರ್ತ್ಯ ಸೇನ್ ಅವರ ಪುತ್ರಿ ಅಂತರಾ ದೇವ್ ಸೇನ್ ತಿಳಿಸಿದ್ದಾರೆ. ಪ್ರಶಸ್ತಿ ಸ್ವೀಕಾರ ಮಾಡಬೇಕು ಎಂದು ಸರ್ಕಾರದ ಹಿರಿಯ ಅಧಿಕಾರಿಗಳು ಮನವಿ ಮಾಡಿದ ಸಂದರ್ಭದಲ್ಲಿ ತಾವು ಭಾರತದಲ್ಲಿ ಇರುವುದಿಲ್ಲ ಎಂದು ಸೇನ್ ಹೇಳಿದ್ದರು. ಇಂದು ಕೋಲ್ಕತ್ತಾದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಸಚಿವ ಪಾರ್ಥ ಚಟರ್ಜಿ ಬಂಧನದ ಹಿನ್ನೆಲೆಯಲ್ಲಿ ಟಿಎಂಸಿ ಸರ್ಕಾರ ನೀಡಿರುವ ಪ್ರಶಸ್ತಿ…