Subscribe to Updates
Get the latest creative news from FooBar about art, design and business.
- ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
- ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
- ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
- ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
- ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
- ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
- ಜೂಜಾಟ: 12 ಮಂದಿ ಆರೋಪಿಗಳ ಬಂಧನ
Author: admin
ವಿಶ್ವ ಯೋಗ ದಿನಾಚರಣೆ ಪ್ರಯುಕ್ತ 400ಕ್ಕೂ ಹೆಚ್ಚು ಯೋಗಾಪಟುಗಳಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಯೋಗಾಭ್ಯಾಸ ನಡೆಯಿತು. ಈ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಇಂಟರ್ನ್ಯಾಷನಲ್ ನ್ಯಾಚುರೋಪತಿ ಆರ್ಗನೈಸೇಶನ್ ಮಂಜುನಾಥ್ ನೇತೃತ್ವದಲ್ಲಿ ಯೋಗಾಭ್ಯಾಸ ನಡೆಯಿತು. ಮಾನವೀಯತೆಗಾಗಿ ಯೋಗ ಎಂಬ ಶೀರ್ಷಿಕೆಯಡಿ ಯೋಗಾಭ್ಯಾಸ ಮಾಡಲಾಯಿತು. ಪತಾಂಜಲಿ ಯೋಗ ಶಿಕ್ಷಣ ಸಮಿತಿ ನೇತೃತ್ವ ವಹಿಸಿತ್ತು. ನಗರ ಶಾಸಕ ಜ್ಯೋತಿಗಣೇಶ್ ಮತ್ತು ಹಲವು ಸಂಸ್ಥೆಗಳಾದ ಆರೋಗ್ಯ ಭಾರತಿ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ರಾಷ್ಟ್ರೀಯ ಮಾನವ ಪರಿಸರ ರಕ್ಷಣಾ ಪಡೆ ಪಟುಗಳು ಹಾಗೂ ನಗರದ ವೃದ್ಧರು, ವಿದ್ಯಾರ್ಥಿಗಳು, ಮಕ್ಕಳು ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಕಲ್ಪತರು ನಾಡು ತುಮಕೂರಿನ ಪಾರಂಪರಿಕ ತಾಣ ಆಲದ ಮರದ ಪಾರ್ಕ್ನಲ್ಲಿ ಅಮೋಘ ಟಿವಿ, ಫಿಟ್ ಲೋನಿಕ್ ಸಹಯೋಗದಲ್ಲಿ ಪ್ರೆಸ್ ಕ್ಲಬ್ ತುಮಕೂರು ವತಿಯಿಂದ ಯೋಗಾ ಡೇ ಆಚರಿಸಲಾಯಿತು. ಶಾಸಕ ಜ್ಯೋತಿಗಣೇಶ್, ತುಮಕೂರು ತಹಶೀಲ್ದಾರ್ ಮೋಹನ್ ಕುಮಾರ್, ಪಾಲಿಕೆ ಸದಸ್ಯೆ ಗಿರಿಜಾ ದನಿಯಾಕುಮಾರ್ ಸೇರಿದಂತೆ ಹಲವು ಗಣ್ಯರು ಯೋಗಾ ಡೇನಲ್ಲಿ ಭಾಗವಹಿಸಿದ್ದರು. ಪ್ರೆಸ್ಕ್ಲಬ್ ತುಮಕೂರಿನ ಉಪಾಧ್ಯಕ್ಷರಾದ ಶ್ರೀನಿವಾಸ್, ಸಹ ಕಾರ್ಯದರ್ಶಿ ಸತೀಶ್, ನಿರ್ದೇಶಕರಾದ ದಾದಾಫೀರ್ ಸೇರಿದಂತೆ ಪದಾಧಿಕಾರಿಗಳು ಹಾಗೂ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು, ನಾಗರಿಕರು, ಯೋಗಾಪಟುಗಳು ಯೋಗಾಭ್ಯಾಸ ಮಾಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಜ್ಯೋತಿಗಣೇಶ್, ಯೋಗ ದಿನದ ಪ್ರಾಮುಖ್ಯತೆ ತಿಳಿಸಿದರಲ್ಲದೆ, ಆಲದಮರದ ಪಾರ್ಕ್ ಅನ್ನು ಪ್ರೆಸ್ ಕ್ಲಬ್ ಅವರಿಗೆ ನೀಡಿದ ನಂತರ ಉತ್ತಮ ಕಾರ್ಯಗಳು ನಡೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಜಿಲ್ಲೆ ವಿವಿಧೆಡೆಯಲ್ಲಿ ಇಂದು ವಿಶ್ವ ಯೋಗ ದಿನಾಚರಣೆ ನಡೆಸಲಾಯಿತು. ನಗರದ ಹೈಸ್ಕೂಲ್ ಫೀಲ್ಡ್ ನಲ್ಲಿ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದ್ದು, 400ಕ್ಕೂ ಹೆಚ್ಚು ಯೋಗಾಪಟುಗಳು ಅಭ್ಯಾಸ ನಡೆಸಿದರು. ಕಾರ್ಯಕ್ರಮದಲ್ಲಿ ಶಾಸಕ ಜ್ಯೋತಿಗಣೇಶ್ ಭಾಗಿಯಾದರು. ಮಾನವೀಯತೆಗಾಗಿ ಯೋಗ ಎಂಬ ಶೀರ್ಷಿಕೆಯಡಿ ಯೋಗಾಭ್ಯಾಸ ನಡೆಸಲಾಯಿತು. ಪತಾಂಜಲಿ ಯೋಗ ಶಿಕ್ಷಣ ಸಮಿತಿ ನೇತೃತ್ವದಲ್ಲಿ ಯೋಗಾಭ್ಯಾಸ ನೆರವೇರಿತು. ಆರೋಗ್ಯ ಭಾರತಿ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ರಾಷ್ಟ್ರೀಯ ಮಾನವ ಪರಿಸರ ರಕ್ಷಣಾ ಪಡೆ ಪಟುಗಳು ಭಾಗಿಯಾದರು. ಇಂಟರ್ನ್ಯಾಷನಲ್ ನ್ಯಾಚುರೋಪತಿ ಆರ್ಗನೈಸೇಶನ್ ಮಂಜುನಾಥ್ ನೇತೃತ್ವದಲ್ಲಿ ಯೋಗಭ್ಯಾಸ ನಡೆಯಿತು. ನಗರದ ವೃದ್ಧರು, ವಿದ್ಯಾರ್ಥಿಗಳು, ಪುಟ್ಟ ಪುಟ್ಟ ಮಕ್ಕಳಿಂದ ಯೋಗಾಭ್ಯಾಸ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದಲ್ಲಿನ ಸಂತೇಪೇಟೆಯಲ್ಲಿರುವ ವಿನಾಯಕ ರೋಟರಿ ಆಯಿಲ್ ಮಿಲ್ ಮೂವತ್ತು ನಲವತ್ತು ವರ್ಷಗಳಿಂದ ನಡೆಸುತ್ತಿದ್ದರೂ, ಯಾವುದೇ ಪರವಾನಿಗೆ ಪಡೆಯದೇ ನಡೆಸಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಜೊತೆಗೆ ಇಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಸುರಕ್ಷತೆಗೆ ಯಾವುದೇ ಕ್ರಮಕೈಗೊಳ್ಳಲಾಗುತ್ತಿಲ್ಲ. ಇದರಿಂದಾಗಿ ಕಾರ್ಮಿಕರು ಅಪಾಯಕ್ಕೆ ಸಿಲುಕುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕೆಲ ದಿನಗಳ ಹಿಂದೆ ಇದೇ ಆಯಿಲ್ ಮಿಲ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡು ಬರುತ್ತಿದ್ದ ಲಕ್ಷ್ಮಕ್ಕ ನವರು ಕೆಲಸ ಮಾಡಿಕೊಂಡು ಬರುತ್ತಿದ್ದ ಮಹಿಳೆಯು ಆಯಿಲ್ ಮಿಲ್ ನ ಮಿಷನ್ ನ ಯಂತ್ರಕ್ಕೆ ಲಕ್ಷ್ಮಕ್ಕ ನವರ ಕೈ ಸಿಕ್ಕಿಕೊಂಡು ಕೈ ತುಂಡಾಗಿದ್ದು, ಘಟನೆಗೆ ಸಂಬಂಧ ಪಟ್ಟಂತೆ ಲಕ್ಷ್ಮಕ್ಕರವರು, ಈ ಅಪಘಾತಕ್ಕೆ ಆಯಿಲ್ ಮಿಲ್ ನ ಮಾಲಿಕನ ನಿರ್ಲಕ್ಷ್ಯತನವೇ ಕಾರಣ ಎಂದು ಹಿರಿಯೂರು ನಗರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದು, ಐ ಪಿ ಸಿ ಸೆಕ್ಸನ್ 287 ಮತ್ತು ಐ ಪಿ ಸಿ ಸೆಕ್ಸನ್ 338 ರಂತೆ ಹಿರಿಯೂರು ನಗರ ಪೋಲಿಸ್…
ಕೊರಟಗೆರೆ: ತಾಲ್ಲೂಕಿನ ಮತ್ತೋರ್ವ ಭ್ರಷ್ಟ ಅಧಿಕಾರಿಕಾರಿ ಎಸಿಬಿ ಬಲೆಗೆ ಬಿದ್ದಿದ್ದು, ದಿನದಿಂದ ದಿನಕ್ಕೆ ಕೊರಟಗೆರೆ ಕ್ಷೇತ್ರದಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಆಡಳಿತ ವೈಫಲ್ಯವೇ ಕಾರಣ ಎಂದು ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ಆಕ್ರೋಶ ಹೊರ ಹಾಕಿದ್ದಾರೆ. ಈ ಬಗ್ಗೆ ಮಾತನಾಡಿದ ಜೆಟ್ಟಿ ಅಗ್ರಹಾರ ನಾಗರಾಜು, ಜಿಲ್ಲೆಯಾದ್ಯಂತ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಅರಕೆರೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶ್ರೀಧರ್ ಎಸಿಬಿ ಬಲೆಗೆ ಬಿದ್ದು ಕೆಲವೇ ದಿನಗಳಲ್ಲಿ ಕೊರಟಗೆರೆ ತಾಲ್ಲೂಕು ಚನ್ನರಾಯನದುರ್ಗ ಹೋಬಳಿ ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ PDO ಶ್ರೀರಂಗಯ್ಯ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದಾನೆ. ಸೋಮಶೇಖರ್ ಎಂಬುವ ವ್ಯಕ್ತಿ ತನ್ನ ಕುಟುಂಬದ ಹೆಸರಿನಲ್ಲಿ ಇದ್ದ ಖಾತೆ ಬದಲಾವಣೆ ಮಾಡಿ ಈ ಸ್ವತ್ತು ಮಾಡಿಸಿಕೊಳ್ಳಲು ಪಂಚಾಯಿತಿ ಭೇಟಿ ನೀಡಿ ಅಭಿವೃದ್ಧಿ ಅಧಿಕಾರಿ ಶ್ರೀರಂಗಯ್ಯ ಅವರನ್ನು ಸಂಪರ್ಕಿಸಿದಾಗ 6,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಇದಲ್ಲದೇ 3,500 ಮುಂಗಡವಾಗಿ ಪಡೆದು 2,500 ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಈ ವೇಳೆ …
ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಯಶಸ್ವಿಗಾಗಿ ಸಹಕರಿಸಿದ ತುಮಕೂರು ಜಿಲ್ಲಾಡಳಿತ ಮತ್ತು ತುರುವೇಕೆರೆ ತಾಲೂಕು ಆಡಳಿತ ಸೇರಿದಂತೆ, ಫಲಾನುಭವಿಗಳಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಶಾಸಕ ಮಸಾಲ ಜಯರಾಮ್ ರವರು ಪಟ್ಟಣದಲ್ಲಿ ತಾಲೂಕಿನ ಜನತೆಯ ಪರವಾಗಿ ಕೃತಜ್ಞತೆಗಳನ್ನು ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಹಳ ಅರ್ಥಪೂರ್ಣವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಧಿಕ ಮಳೆಯಾದರೂ ಕಾರ್ಯಕ್ರಮವು ಯಶಸ್ವಿಯಾಗಿ ಮೂಡಿಬಂದಿದೆ. 5,331ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಲಾಗಿದೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಹಲವು ರೀತಿಯ ಸಮಸ್ಯೆಗಳ ಕುರಿತು 2,000 ಹೆಚ್ಚು ಅರ್ಜಿಗಳು ನೋಂದಣಿಯಾಗಿವೆ. ಅದರಲ್ಲಿ ವಿಶೇಷವೆಂದರೆ ಮಂಡ್ಯ, ಹಾಸನ ಜಿಲ್ಲೆ ಸೇರಿದಂತೆ ತುಮಕೂರು ಜಿಲ್ಲೆಯ ಹಲವಾರು ತಾಲೂಕುಗಳಿಗೂ ಸಂಬಂಧಪಟ್ಟಂತೆ 200ಕ್ಕೂಹೆಚ್ಚು ಅರ್ಜಿಗಳು ನೀಡಿದ್ದಾರೆ. ತುರ್ತಾಗಿ ಅರ್ಜಿಗಳ ಸಮಸ್ಯೆಯನ್ನು ಬಗೆಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಕಂದಾಯ ಸಚಿವರಾದ ಆರ್.ಅಶೋಕ್ ರವರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರಗನ್ನು ನೀಡಿದರು. ಕಾರ್ಯಕ್ರಮದಲ್ಲಿ…
ಪಾವಗಡ: ರಾಜನಹಳ್ಳಿ ವಾಲ್ಮೀಕಿ ಶ್ರೀಗಳು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮೀಸಲಾತಿಗಾಗಿ 130 ದಿನಗಳಿಂದ ನಿರಂತರ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ಅವರನ್ನು ಬೆಂಬಲಿಸಿ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಜಾರಿಗೊಳಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸಲು ಸಿಎಂಗೆ ಮನವಿ ಮಾಡಿದ್ದು, ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿದ್ದರೆ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಸಂಘ-ಸಂಸ್ಥೆಗಳ ಮುಖಂಡರಾದ ಡಿ.ಜೆ .ಎಸ್. ನಾರಾಯಣಪ್ಪ, ಚಲವಾದಿ ಮುಖಂಡ ಕನುಮಪ್ಪ, ಡಿ.ಎಸ್.ಎಸ್. ಜಿಲ್ಲಾ ಸಂಚಾಲಕ ಸಿ. ಕೆ. ತಿಪ್ಪೇಸ್ವಾಮಿ, ತಾಲೂಕು ಸಂಚಾಲಕ…
ಮಹಿಳೆಯೊಬ್ಬಳು ತನ್ನ ಮನೆಯಲ್ಲಿ ಸಾವನ್ನಪ್ಪಿದ ನಂತರ ಆಕೆ ಸಾಕಿದ್ದ 20 ಬೆಕ್ಕುಗಳು ಶವವನ್ನು ತಿಂದು ಹಾಕಿದ ಘಟನೆಯೊಂದು ರಷ್ಯಾದಲ್ಲಿ ನಡೆದಿದೆ. ಹಲವು ದಿನಗಳಿಂದ ನಾಪತ್ತೆಯಾಗಿದ್ದ ತನ್ನ ಸಹೋದ್ಯೋಗಿ ನಾಪತ್ತೆಯಾದ ಬಗ್ಗೆ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರವಾಣಿಯ ಮೂಲಕ ತಿಳಿಸಿದ್ದಾರೆ. ಆ ಬಳಿಕ ತನಿಖೆ ನಡೆಸಿದ ಪೊಲೀಸರು,ಮಹಿಳೆಯ ಮೃತದೇಹವನ್ನು ರಷ್ಯಾದ ನಗರವಾದ ಬಟಾಯ್ಸ್ಕ್ನಲ್ಲಿ ಕಂಡುಕೊಂಡಿದ್ದಾರೆ ಎಂದು ಸನ್ ವರದಿ ಮಾಡಿದೆ. ಆಕೆ ಕುಸಿದು ಬಿದ್ದು ಸಾವನ್ನಪ್ಪಿ, ಎರಡು ವಾರಗಳು ಕಳೆದಿವೆ ಎಂದು ನಂಬಲಾಗಿದೆ. ಮಹಿಳೆ ಬೆಕ್ಕನ್ನು ಮಾರಾಟ ಮಾಡುತ್ತಿದ್ದಳು. ಆಕೆ ತನ್ನದೇ ಆದ 20 ಬೆಕ್ಕುಗಳನ್ನು ಹೊಂದಿದ್ದಳು. ಆಕೆಯ ಸಾವಿನ ನಂತರ ಮಹಿಳೆಯ ಬೆಕ್ಕುಗಳನ್ನು ಆರೈಕೆ ಮಾಡಿದ ಪ್ರಾಣಿ ರಕ್ಷಣಾ ತಜ್ಞರು ಹೇಳಿದ ಪ್ರಕಾರ, ಬೆಕ್ಕುಗಳು ಎರಡು ವಾರಗಳ ಕಾಲ ಒಂಟಿಯಾಗಿದ್ದವು. ತಿನ್ನಲು ಏನೂ ಆಹಾರವಿಲ್ಲ. ಈ ವೇಳೆ ಹಸಿವು ತಡೆಯದೇ ಈ ರೀತಿಯ ಮಾಡಿವೆ ಎಂದಿದ್ದಾರೆ. ಕೆಲವು ಆರೋಗ್ಯಕರ ಬೆಕ್ಕುಗಳನ್ನು ಈಗ ಬೇರೆಯವರಿಗೆ ದತ್ತು ನೀಡಲಾಗಿದೆ. ಮೈನೆ ಕೂನ್ ತಳಿಯ ಬೆಕ್ಕುಗಳು ಅಮೆರಿಕದ…
ಸೇನಾ ನೇಮಕಾತಿಗೆ ಕೇಂದ್ರ ರೂಪಿಸಿರುವ ಅಗ್ನಿಪಥ್ ಯೋಜನೆ ವಿರೋಧಿಸಿ ಕರೆನೀಡಿದ್ದ ಬೆಳಗಾವಿ ಬಂದ್ ಸಂಪೂರ್ಣ ವಿಫಲವಾಗಿದೆ. ಯಾವುದೇ ಸಂಘಟನೆ ಬೆಳಗಾವಿ ಬಂದ್ಗೆ ಕರೆ ನೀಡಿರುವುದು ದೃಢಪಟ್ಟಿಲ್ಲ. ಆದರೂ ಇಂದು ಬಂದ್ ಆಚರಿಸಲಾಗುವುದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹರಿದಾಡಿದ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ವಹಿಸಿ ಬಿಗಿಕ್ರಮಗಳನ್ನು ಕೈಗೊಂಡಿದ್ದರು. ಬೆಳಗಾವಿಯಲ್ಲಿ ಜನಜೀವನ ಎಂದಿನಂತಿತ್ತು. ಶಾಲಾ – ಕಾಲೇಜುಗಳು, ಬ್ಯಾಂಕ್ಗಳು, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಸಂಚಾರಿ ವ್ಯವಸ್ಥೆ ಸುಗಮವಾಗಿತ್ತು. ವ್ಯಾಪಾರ, ವಹಿವಾಟು ಮಾಮೂಲಿನಂತಿತ್ತು. ಆದರೆ ಕೆಲವ್ಯಾಪಾರಿಗಳು ಸ್ವಯಂ ಪ್ರೇರಣೆಯಿಂದ ಅಂಗಡಿಗಳನ್ನು ಮುಚ್ಚಿದ್ದು ಕಂಡುಬಂತು. ಬೆಳಗಾವಿ ಬಂದ್ ಹಿನ್ನೆಲೆಯಲ್ಲಿ ಕ್ಷಿಪ್ರಕಾರ್ಯ ಪಡೆ, ನಗರ ಪೊಲೀಸರು ಪ್ರಮುಖ ವೃತ್ತಗಳಲ್ಲಿ ಆಯಕಟ್ಟಿನ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಿದ್ದರು. ಬೆಳಗಾವಿಯಲ್ಲೆ ಬಂದ್ ಅಥವಾ ಪ್ರತಿಭಟನೆ ಮಾಡುವ ಬಗ್ಗೆ ಯಾರೂ ಅನುಮತಿ ಪಡೆದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ವಿಷಯ ಹರಿದಾಡುತ್ತಿದೆ. ಅಗತ್ಯ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕೆಎಸ್ ಆರ್ ಪಿ ಹಾಗೂ ಕ್ಷಿಪ್ರಕಾರ್ಯ ಪಡೆಯ ಪಹರೆ ನಡೆದಿದೆ. ಬಸ್ ನಿಲ್ದಾಣ, ರೈಲು…
ಮಂಗಳೂರು ವಿಶ್ವವಿದ್ಯಾಲಯ ಅಧೀನದ ಹಂಪನಕಟ್ಟೆ ಕಾಲೇಜಿನಲ್ಲಿ ಹಿಜಾಬ್ ವಿವಾದ ಇನ್ನೂ ತಣ್ಣಗಾಗಿಲ್ಲ. ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿನಿಯರು ವರ್ಗಾವಣೆ ಪತ್ರ (ಟಿಸಿ) ಪಡೆಯಲು ಮುಂದಾಗಿರುವುದು ಬೆಳಕಿಗೆ ಬಂದಿದೆ. ಮಂಗಳೂರು ವಿ ವಿ ಕಾಲೇಜಿನಲ್ಲಿ ಇತ್ತೀಚೆಗೆ ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿ ನಿಯಮಾವಳಿಗಳನ್ನು ಮಾಡಲಾಗಿತ್ತು. ಆ ಬಳಿಕ ಮಂಗಳೂರು ವಿ ವಿ ಕಾಲೇಜಿನಲ್ಲಿ ಹಿಜಾಬ್ ವಿಚಾರದಲ್ಲಿ ಸಾಕಷ್ಟು ಪರ ವಿರೋಧ ಚರ್ಚೆಗಳು ನಡೆದಿದ್ದವು. ಮಂಗಳೂರು ವಿ ವಿ ಕಾಲೇಜಿನಲ್ಲಿ ೪೪ ಮುಸ್ಲಿಂ ವಿದ್ಯಾರ್ಥಿನಿಯರಿದ್ದು, ಇವರಲ್ಲಿ ೧೫ ಮಂದಿ ಹಿಜಾಬ್ ತೆಗೆದು ಕಾಲೇಜಿಗೆ ಬರಲು ನಿರಾಕರಿಸಿದ್ದರು.ವಿದ್ಯಾರ್ಥಿನಿಯರು ಬೇರೆ ಕಾಲೇಜಿಗೆ ತೆರಳುವುದಿದ್ದರೆ ಅವರಿಗೆ ಟಿಸಿ ನೀಡಲು ವ್ಯವಸ್ಥೆ ಮಾಡಲಾಗುವುದೆಂದು ಮಂಗಳೂರು ವಿವಿ ಕುಲಪತಿ ಸುಬ್ರಹ್ಮಣ್ಯ ಯಡಪಡಿತ್ತಾಯ ತಿಳಿಸಿದ್ದರು. ಮಂಗಳೂರು ವಿವಿಯ ಹಂಪನಕಟ್ಟೆ ಕಾಲೇಜಿನ ಐದು ವಿದ್ಯಾರ್ಥಿನಿಯರು ಟಿಸಿ ಪಡೆದು ಬೇರೆ ಕಾಲೇಜಿಗೆ ಹೋಗಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ಟಿಸಿ ಪಡೆಯಲು ಅಧಿಕೃತವಾಗಿ ಯಾರೂ ಅರ್ಜಿ ಸಲ್ಲಿಕೆ ಮಾಡಿಲ್ಲ: ಈ ಬಗ್ಗೆ…